Tag: ಆರೆಂಜ್ ಅಲರ್ಟ್

  • ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    – ನವರಾತ್ರಿಯ ದಾಂಡಿಯಾ ಸಂಭ್ರಮಕ್ಕೆ ಅಡ್ಡಿ ಸಾಧ್ಯತೆ

    ಮುಂಬೈ: ಮುಂಬೈ (Mumbai) ಸೇರಿದಂತೆ ಮಹಾರಾಷ್ಟ್ರದ (Maharashtra) ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.

    ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ  ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಶನಿವಾರ (ಸೆ.27) ಬೆಳಗ್ಗೆಯಿಂದಲೂ ಮುಂಬೈ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪಾಲ್ಘರ್, ಥಾಣೆ ಮತ್ತು ರಾಯಗಡ್‌ನಲ್ಲಿ ಸೋಮವಾರದವರೆಗೂ (ಸೆ.29) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಅಕ್ಟೋಬರ್ ಎರಡನೇ ವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಇನ್ನೂ ನವರಾತ್ರಿ ಹಿನ್ನೆಲೆ ಆಯೋಜಿಸಲಾಗಿದ್ದ ದಾಂಡಿಯಾ ನೈಟ್ ಫೆಸ್ಟಿವಲ್‌ಗೂ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಜೊತೆಗೆ ಸೆ.28ರಂದು ನಡೆಯಬೇಕಿದ್ದ ಮಹಾರಾಷ್ಟ್ರ ಲೋಕ ಸೇವಾ ಆಯೋಗದ ಕೆಲ ಪರೀಕ್ಷೆಗಳನ್ನು ಮುಂದೂಡಿ, ನ.9ರಂದು ನಡೆಸುವುದಾಗಿ ತಿಳಿಸಿದೆ.

    ಇನ್ನೂ ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯ ಹಿನ್ನೆಲೆ ಮೀನುಗಾರರು ಸಮುದ್ರ, ನದಿ, ಕೆರೆಗಳಿಗೆ ಇಳಿಯದಂತೆ ಸೂಚನೆ ನೀಡಿದೆ.ಇದನ್ನೂ  ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

     

  • ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

    ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

    ಬೆಂಗಳೂರು: ಇಂದು ಮೂರು ಜಿಲ್ಲೆಗೆ ರೆಡ್ ಅಲರ್ಟ್, ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

    ಬೆಳಗಾವಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಣೆಯಾಗಿದ್ದರೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಣೆಯಾಗಿದೆ.  ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ ಹಾಸನದ ಕೆಲವು ತಾಲೂಕಿನ, ಉಡುಪಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ರೆಡ್‌ ಅಲರ್ಟ್‌:
    ಇದು ಅತ್ಯುನ್ನತ ಮಟ್ಟದ ಎಚ್ಚರಿಕೆಯಾಗಿದ್ದು, ಜೀವ ಮತ್ತು ಆಸ್ತಿಗೆ ಗಮನಾರ್ಹ ಅಪಾಯವನ್ನುಂಟುಮಾಡುವ ಸಾಧ್ಯತೆ ಇರುತ್ತದೆ. ಅಪಾಯಗಳನ್ನು ತಗ್ಗಿಸಲು ಜನರು ಅಧಿಕಾರಿಗಳ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ರೆಡ್‌ ಅಲರ್ಟ್‌ ಘೋಷಣೆಯಾದರೆ 24 ಗಂಟೆಗಳ ಅವಧಿಯಲ್ಲಿ 204.5 ಮಿ.ಮೀ. ಮೀರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಬೆಳಗಾವಿಯಲ್ಲಿ 8 ಸೇತುವೆ ಜಲಾವೃತ

    ಆರೆಂಜ್‌ ಅಲರ್ಟ್‌:
    ರೆಡ್‌ ಅಲರ್ಟ್‌ನಲ್ಲಿ ಘೋಷಣೆಯಾದಷ್ಟು ಜಾಸ್ತಿ  ಅಪಾಯ ಆಗದೇ ಇದ್ದರೂ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಅಲರ್ಟ್‌ ಘೋಷಣೆಯಾದ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 115.6-204.4 ಮಿ.ಮೀ. ನಡುವೆ ಮಳೆಯಾಗುವ ಸಂಭವವಿದೆ.

    ಯೆಲ್ಲೂ ಅಲರ್ಟ್‌:
    ರೆಡ್‌ ಮತ್ತು ಆರೆಂಜ್‌ ಅಲರ್ಟ್‌ನಲ್ಲಿ ಆಗುವಷ್ಟು ಮಳೆ ಬೀಳದೇ ಇದ್ದರೂ ದೈನಂದಿನ ದಿನಚರಿಗಳಿಗೆ ಕೆಲವು ಅಡಚಣೆಗಳನ್ನು ಉಂಟು ಮಾಡಬಹುದು. ಮುಂದಿನ 24 ಗಂಟೆಯಲ್ಲಿ 64.5–115.5 ಮಿ.ಮೀ. ಮಳೆ ಬೀಳುವ ಸಾಧ್ಯತೆಯಿದೆ.

     

  • ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ

    ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ

    – ಮತ್ತಷ್ಟು ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

    ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ (Orange Alert) ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department) ಮೂನ್ಸೂಚನೆ ನೀಡಿದೆ.

    ಈಗಾಗಲೇ ಮಳೆಯಿಂದಾಗಿ ನಗರದ ಕೆಲವು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮುಂದಿನ ಕೆಲವು ಗಂಟೆಗಳ ಕಾಲ ರಾಷ್ಟ್ರರಾಜಧಾನಿಯ ಹೆಚ್ಚಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ (IMD) ತಿಳಿಸಿದೆ.ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಅಂಗಕ್ಕೆ ಬ್ಲೇಡ್ ಹಾಕಿ ಪಾರಾದ ನರ್ಸ್!

    ನಗರದ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡ ಕಾರಣ ವಾಹನ ಸವಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ಸೂಚಿಸಿದೆ. ಮೋಡ ಕವಿದ ವಾತಾವರಣವಿರುವ ಕಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

    ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಲ್ ದಾಖಲಾಗಿದೆ ಎಂದು ತಿಳಿಸಿದೆ.ಇದನ್ನೂ ಓದಿ: ನಾಗ್ಪುರ ಆಡಿ ಕಾರು ಅಪಘಾತ – ಬಾರ್‌ನಲ್ಲಿದ್ದ ಬಿಜೆಪಿ ಮುಖಂಡನ ಪುತ್ರನ ವೀಡಿಯೋ ಮಿಸ್ಸಿಂಗ್

    ದೆಹಲಿ ಸೇರಿದಂತೆ ಉತ್ತರಾಖಂಡ, ಉತ್ತರಪ್ರದೇಶದ ಪಶ್ಚಿಮ ಭಾಗ, ಪಶ್ಚಿಮ ಬಂಗಾಳ, ಮಿಜೋರಾಮ್ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

  • ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್

    ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್

    ಬೆಂಗಳೂರು: ಕರ್ನಾಟಕದ (Karnataka) ಅರ್ಧ ಭಾಗದಲ್ಲಿ ಮುಂಗಾರು (Mansoon) ಮಳೆ ಸಕ್ರಿಯಗೊಂಡಿದೆ. ಕರ್ನಾಟಕದ ಕರಾವಳಿ (Karavali) ಭಾಗದಲ್ಲಿ ಮಳೆ ಇನ್ನಷ್ಟು ತೀವ್ರಗೊಂಡಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ.

    ಅರಬ್ಬಿ ಸಮುದ್ರದಲ್ಲಿನ (Arabian Sea) ಹವಾಮಾನ ಬದಲಾವಣೆಗಳಿಂದಾಗಿ ಕರಾವಳಿ ಭಾಗದಲ್ಲಿ ಮುಂಗಾರು ಸುರಿಸುವ ಮೋಡಗಳು ಸಕ್ರಿಯಗೊಂಡಿವೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಈ ಮೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ (Orange Alert) ನೀಡಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ವಿದ್ಯುತ್ ಬಿಲ್ ಹಿಂಬಾಕಿ ಇದ್ದರೂ ಸಿಗಲಿದೆ ಗೃಹಜ್ಯೋತಿ ಪ್ರಯೋಜನ

    ದಕ್ಷಿಣ ಒಳನಾಡಿನ ಭಾಗದ ಜಿಲ್ಲೆಗಳಲ್ಲೂ ಸಹ ಧಾರಾಕಾರ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ತುಮಕೂರು ಜಿಲ್ಲೆಗಳ ಹಲವೆಡೆ ಭಾರೀ ಮಳೆ ಸಂಭವವಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣವಾಗಿ ಮಳೆ ಬರುವ ಮುನ್ಸೂಚನೆ ಇದೆ. ಮೂರು ದಿನಗಳ ನಂತರ ಅಂದರೆ ಜುಲೈ 5 ಮತ್ತು 6ರಂದು ಬೆಳಗಾವಿ, ಧಾರವಾಢ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಮೋದಿ ಸರ್ಕಾರದ ಆಡಳಿತ ಯಂತ್ರ ಬಳಸಿಕೊಳ್ತಿದ್ದಾರೆ: ರಾಷ್ಟ್ರಪತಿಗೆ ದಿನೇಶ್ ಗುಂಡೂರಾವ್ ಪತ್ರ

    ಬೆಂಗಳೂರಿಗೆ (Bengaluru) ಯಾವುದೇ ಅಲರ್ಟ್ ನೀಡಿಲ್ಲ. ಆದರೆ ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಇಂದು ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯೋ ಸಾಮರ್ಥ್ಯ ನಮ್ಮಲ್ಲಿದೆ: ಜೋಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರಾವಳಿಯಲ್ಲಿ 4 ದಿನ ಆರೆಂಜ್ ಅಲರ್ಟ್ – ಹೊಸಕೋಟೆ, ಸಂಪಾಜೆಯಲ್ಲಿ ಭಾರೀ ಮಳೆ

    ಕರಾವಳಿಯಲ್ಲಿ 4 ದಿನ ಆರೆಂಜ್ ಅಲರ್ಟ್ – ಹೊಸಕೋಟೆ, ಸಂಪಾಜೆಯಲ್ಲಿ ಭಾರೀ ಮಳೆ

    ಬೆಂಗಳೂರು: ಮುಂದಿನ 5 ದಿನವೂ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಭಾಗಕ್ಕೆ ಇಂದು ಯೆಲ್ಲೋ ಅಲರ್ಟ್ ಇದ್ದು, ನಾಳೆಯಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ನಾಳೆಯಿಂದ 4 ದಿನಗಳ ಕಾಲ ಬಹುತೇಕ ಕಡೆ ಮಳೆ ಸುರಿಯುವ ಸಾಧ್ಯತೆ ಇದ್ದು, ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 5ನೇ ದಿನ ಬೀದರ್ ಜಿಲ್ಲೆಗೆ ಮಾತ್ರ ಆರೆಂಜ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್

    ದಕ್ಷಿಣ ಒಳನಾಡಿನ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇದ್ದು, ನಾಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಗುಡುಗು ಮಿಂಚು ಸಹಿತ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಹಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: 5G ಹರಾಜು ಮುಕ್ತಾಯ – 1.5 ಲಕ್ಷ ಕೋಟಿ ತಲುಪಿದ ಒಟ್ಟು ಬಿಡ್ ಮೊತ್ತ

    RAIN IN BENGALURU

    ಕಳೆದ 24 ಗಂಟೆಯಲ್ಲಿ ಉತ್ತರ ಒಳನಾಡಿನ 1 ಕಡೆ ಹಾಗೂ ದಕ್ಷಿಣ ಒಳನಾಡಿನ 5 ಕಡೆ ಭಾರೀ ಮಳೆ ದಾಖಲಾಗಿದೆ. ಉತ್ತರ ಒಳನಾಡಿನ ಗದಗ ಜಿಲ್ಲೆಯಲ್ಲಿ 7 ಸೆ.ಮೀ, ದಕ್ಷಿಣ ಒಳನಾಡಿನ ಹೊಸಕೋಟೆ, ಸಂಪಾಜೆಯಲ್ಲಿ 11 ಸೆ.ಮೀ, ಭಾಗಮಂಡಲ 9 ಸೆ.ಮೀ, ನಾಪೋಕ್ಲುವಿನಲ್ಲಿ 8 ಸೆ.ಮೀ, ಮೂಡಬಾಗಿಲು 7 ಸೆ.ಮೀ ಮಳೆ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಉಡುಪಿಯಲ್ಲಿ ಮುಂಗಾರು ಮತ್ತೆ ಚುರುಕು- ಇಂದು ಎಲ್ಲೋ, ಇನ್ನೆರಡು ದಿನ ಆರೆಂಜ್ ಅಲರ್ಟ್

    ಉಡುಪಿಯಲ್ಲಿ ಮುಂಗಾರು ಮತ್ತೆ ಚುರುಕು- ಇಂದು ಎಲ್ಲೋ, ಇನ್ನೆರಡು ದಿನ ಆರೆಂಜ್ ಅಲರ್ಟ್

    ಉಡುಪಿ: ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಇಂದು ಚುರುಕುಗೊಂಡಿದೆ. ಮುಂಜಾನೆಯಿಂದ ಉಡುಪಿ ಜಿಲ್ಲೆಯಾದ್ಯಂತ ಅಲ್ಲಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

    ಜಿಲ್ಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾಪು ಕುಂದಾಪುರದಲ್ಲಿ ಧಾರಾಕಾರ ಮಳೆ ಸುರಿದಿದೆ. ನಗರ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ಓಡಾಟಕ್ಕೆ ವ್ಯತ್ಯಯವಾಗಿದೆ. ಪ್ರಮುಖ ರಸ್ತೆಗಳಲ್ಲಿ ಸ್ಲೋ ಮೂವಿಂಗ್ ಟ್ರಾಫಿಕ್ ಕಾಣಿಸಿಕೊಂಡಿತು. ಜಿಟಿಜಿಟಿ ಮಳೆಗೆ ವಾಹನ ಸವಾರರು ಪರದಾಡಬೇಕಾಯಿತು.

    ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಶುಕ್ರವಾರ ಮತ್ತು ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಪ್ರತಿ ದಿನ ಸುಮಾರು 100 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಮೋಡಮುಸುಕಿದ ವಾತಾವರಣ ಮುಂದುವರಿದಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳ ಮಟ್ಟ ವಿಪರೀತ ಏರಿಕೆಯಾಗುತ್ತಿದೆ. ಸಮುದ್ರ ಮತ್ತು ನದಿ ತೀರದ ಜನಕ್ಕೆ ಉಡುಪಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

    ರಾಯಚೂರಲ್ಲಿ ಪ್ರವಾಹ ಭೀತಿ
    ಕೃಷ್ಣಾ ಹಾಗೂ ಭೀಮಾನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಾಯಚೂರು ಜಿಲ್ಲೆಗೆ ಪ್ರವಾಹ ಭೀತಿ ಎದುರಾಗಿದೆ. ನಾರಾಯಣಪುರ ಜಲಾಶಯದಿಂದ 1.28 ಲಕ್ಷ ಕ್ಯೂಸೆಕ್ಸ್ ಹಾಗೂ ಸೊನ್ನೆ ಬ್ಯಾರೇಜ್‍ನಿಂದ 13 ಸಾವಿರ ಕ್ಯೂಸೆಕ್ಸ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ.

    ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಾಧ್ಯತೆ ಹಿನ್ನೆಲೆ ಲಿಂಗಸುಗೂರು, ದೇವದುರ್ಗ, ರಾಯಚೂರು ತಾಲೂಕಿನ ನದಿ ಪಾತ್ರದ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ. ನದಿ ಪಾತ್ರಕ್ಕೆ ತೆರಳದಂತೆ, ತೆಪ್ಪ ಬಳಸದಂತೆ ಗ್ರಾಮಗಳಲ್ಲಿ ಡಂಗೂರ ಸಾರಲಾಗುತ್ತಿದೆ. ತುರ್ತು ಪರಿಹಾರ ಕ್ರಮಕ್ಕಾಗಿ ನೋಡಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಪರಿಹಾರ ಕೇಂದ್ರ ಸ್ಥಾಪನೆಗೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

  • ಮುಂಬೈನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

    ಮುಂಬೈನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

    ಮುಂಬೈ: ಮುಂಬೈನಲ್ಲಿ ಕಳೆದ ರಾತ್ರಿಯಿಂದ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆ ಹಲವು ಪ್ರದೇಶಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

    ಮುಂಬೈ, ಥಾಣೆ, ಪಾಲ್ಘರ್ ಮತ್ತು ರಾಯಗಢ್‍ದಲ್ಲಿ ಬಿಡುವಿಲ್ಲದೇ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಐಎಂಡಿಯ ಪ್ರಾದೇಶಿಕ ಹವಮಾನ ಕೇಂದ್ರವು ಮುಂಬೈನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ.

    ಬುಧವಾರ ಅತೀ ಹೆಚ್ಚು ಮಳೆಯಾಗಿದ್ದರು ರಸ್ತೆ ಮತ್ತು ರೈಲು ಸಂಚಾರಕ್ಕೆ ಮಳೆಯಿಂದಾಗಿ ಯಾವುದೇ ತೊಂದರೆಯುಂಟಾಗಿಲ್ಲ. ಭಾನುವಾರ ಮತ್ತು ಸೋಮವಾರ ಹೆಚ್ಚಾಗಿ ಸುರಿದ ಮಳೆ, ಬುಧವಾರ ಮಧ್ಯಾಹ್ನ ಕೊಂಚ ಕಡಿಮೆಯಾಗಿತ್ತು. ಆದರೆ ಮತ್ತೆ ರಾತ್ರಿ ಇಡೀ ಮಳೆ ಧಾರಕಾರವಾಗಿ ಸುರಿದಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

    ಗುಜರಾತ್‍ನ ಕರಾವಳಿಯಿಂದ ಕರ್ನಾಟಕದ ತೀರದವರೆಗೂ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿಯೂ ಮುಂಬೈನಲ್ಲಿ ಕೆಲವು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ, ಬೆಟ್ಟಗಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿಂದು ರೈತರ ಪ್ರತಿಭಟನೆ – ಗಡಿಯಲ್ಲಿ ಬಿಗಿ ಭದ್ರತೆ

  • ಮನೆಗುರುಳಿದ ಮರ- ಪಾರಾದ ಉಡುಪಿ ವೆಂಕಟರಮಣ ಐತಾಳ್ ಅನುಭವ ಭಯಾನಕ

    ಮನೆಗುರುಳಿದ ಮರ- ಪಾರಾದ ಉಡುಪಿ ವೆಂಕಟರಮಣ ಐತಾಳ್ ಅನುಭವ ಭಯಾನಕ

    ಉಡುಪಿ: ಜಿಲ್ಲೆಯಲ್ಲಿ ಕಳೆದ ಏಳು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಜಿಲ್ಲೆಯಾದ್ಯಂತ ಅಲ್ಲಲ್ಲಿ ಮರಗಳು ಉರುಳಿ ಬೀಳುತ್ತಿದೆ.

    ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದೆ. ಕಳೆದ ಐದು ದಿನಗಳಿಂದ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ರಾತ್ರಿ-ಹಗಲು ನಿರಂತರ ಮಳೆ ಸುರಿಯುತ್ತಿದೆ. ಭಾರೀ ಮಳೆಗೆ ಭೂಮಿ ತೇವಗೊಂಡು ಬೃಹತ್ ಮರಗಳು ಧರೆಗೆ ಉರುಳುತ್ತಿವೆ.

    ಕಾಪು ತಾಲೂಕಿನ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಮುಂಭಾಗದಲ್ಲಿದ್ದ 150 ವರ್ಷಗಳ ಹಿಂದಿನ ಮರ ಕಳೆದ ರಾತ್ರಿ ಧಾರಾಶಾಹಿಯಾಗಿದೆ. ದೇವಸ್ಥಾನದ ಮುಂಭಾಗದಲ್ಲಿದ್ದ ಕೆ. ವೆಂಕಟರಮಣ ಶೆಣೈ ಎಂಬವರ ಮನೆಯ ಮೇಲೆ ಹಾಳೆ ಮರ ಉರುಳಿದೆ. ರಾತ್ರಿ ಸುಮಾ 8ಗಂಟೆಗೆ ವಿಪರೀತ ಗಾಳಿ ಮಳೆ ಸುರಿದಿದ್ದು, ಈ ಸಂದರ್ಭ ಮರ ಬಿದ್ದಿದೆ. ಮನೆಯ ಒಳಗೆ ನಾನು ಮತ್ತು ನನ್ನ ಹೆಂಡತಿ ಇದ್ದೆವು. ಗಾಳಿ ಮಳೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಸಂದರ್ಭ ಭಾರೀ ದೊಡ್ಡ ಶಬ್ದ ಕೇಳಿಸಿತು. ನಮ್ಮ ಮನೆಯ ಚಾವಡಿಯ ಮೇಲೆ ಮರದ ಗೆಲ್ಲು ಬಿದ್ದಿದೆ. ಇದನ್ನೂ ಓದಿ: ಉಡುಪಿಯ ಕ್ರೆಡಿಲ್ ಎಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ – ಮಹತ್ವದ ದಾಖಲೆ ವಶಕ್ಕೆ

    ಟೆರೇಸ್ ಮನೆ ಆಗಿರುವ ಕಾರಣ ನಾವು ಬಚಾವ್ ಆಗಿದ್ದೇವೆ. ಹಂಚಿನ ಮನೆಯಾಗಿದ್ದರೆ ಬಹಳ ಕಷ್ಟ ಇತ್ತು. ಮನೆ ಮುಂದಿಯೇ ವಿದ್ಯುತ್ ತಂತಿ ಬಿದ್ದಿದ್ದು ಭಯ ಹುಟ್ಟಿಸುತ್ತಿದೆ. ಬೆಳಗ್ಗೆ ಮೆಸ್ಕಾಂ ಅಧಿಕಾರಿಗಳು, ಪಂಚಾಯತ್ ಅಧಿಕಾರಿಗಳು, ಸಾರ್ವಜನಿಕರು ಕೆಲಸ ಮಾಡುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಆಗುತ್ತಿದ್ದ ಅಪಾಯದಿಂದ ನಾವು ಪಾರಾಗಿದ್ದೇನೆ. ದೇವರೇ ನಮ್ಮನ್ನು ರಕ್ಷಿಸಿದ್ದು ಎಂದು ಮನೆಯ ಮಾಲೀಕ ಕೆ.ವೆಂಕಟರಮಣ ಶೆಣೈ ಹೇಳಿದರು.

  • ಉಡುಪಿಯಲ್ಲಿ ಮುಂದುವರಿದ ಮುಂಗಾರು ಮಳೆ- ಐದು ದಿನ ಆರೆಂಜ್ ಅಲರ್ಟ್

    ಉಡುಪಿಯಲ್ಲಿ ಮುಂದುವರಿದ ಮುಂಗಾರು ಮಳೆ- ಐದು ದಿನ ಆರೆಂಜ್ ಅಲರ್ಟ್

    ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಮುಂಗಾರು ಮಳೆ ಸುರಿಯುತ್ತಿದೆ. ಮುಂದಿನ ಐದು ದಿನ ಜಿಲ್ಲೆಗೆ ಆರೆಂಜ್ ಅಲರ್ಟ್ ವಿಸ್ತರಣೆ ಮಾಡಿ ರಾಜ್ಯ ಹವಾಮಾನ ಇಲಾಖೆ ಆದೇಶ ಹೊರಡಿಸಿದೆ.

    ಎರಡು ದಿನ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, 40-50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ನಾಡದೋಣಿ ಮೀನುಗಾರಿಕೆ ನಡೆಸದಂತೆ ಸೂಚನೆ ನೀಡಲಾಗಿದ್ದು, ನದಿ, ಸಮುದ್ರ ಪಾತ್ರದ ಜನ ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾಡಳಿತ ಸೂಚನೆ ನೀಡಿದೆ.

    ಜೂನ್ ತಿಂಗಳಲ್ಲಿ ಮುಂಗಾರು ಮಳೆ ನಿಗದಿತ ಪ್ರಮಾಣದಲ್ಲಿ ಸುರಿದಿಲ್ಲ. ಜುಲೈನಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿತ್ತು. ರೋಮನ ಇಲಾಖೆ ಸೂಚನೆಯಂತೆ ಜುಲೈ ಮೊದಲ ವಾರದಲ್ಲಿ ಭಾರಿ ಮಳೆ ಆರಂಭವಾಗಿದೆ.

    ಕಳೆದ 10 ದಿನಗಳಿಂದ ಮುಂಗಾರುಮಳೆ ಕ್ಷೀಣಿಸಿರುವ ಕಾರಣ ಬೇಸಾಯಗಾರರು ಆತಂಕಕ್ಕೊಳಗಾಗಿದ್ದರು. ಬಿತ್ತನೆ ಮಾಡಿದವರು ನಾಟಿ ಪೂರೈಸಿದವರು ಗದ್ದೆ ಒಣಗಬಹುದು ಎಂಬ ಚಿಂತೆಯಲ್ಲಿದ್ದರು. ಸೂಕ್ತ ಕಾಲದಲ್ಲಿ ಮುಂಗಾರುಮಳೆ ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವುದರಿಂದ ಕೃಷಿಕರ ರೈತರ ಆತಂಕ ದೂರಾಗಿದೆ.

  • ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

    ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಹಲವೆಡೆ ವರುಣನ ಆರ್ಭಟ ಮುಂದುವರಿದೆ. ಜೊತೆಗೆ ರಾಜಧಾನಿ ಬೆಂಗಳೂರಿನಲ್ಲಿಯೂ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ನಿನ್ನೆ ಹಾಗೂ ಇಂದು ಉತ್ತಮ ಮಳೆಯಾಗಿದ್ದು, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 22 ಸೆಂ.ಮೀ. ಮಳೆಯಾಗಿದೆ. ಬೆಳಗಾವಿಯ ನಿಪ್ಪಾಣಿಯಲ್ಲಿ 14 ಸೆಂಟಿ ಮೀಟರ್ ಮಳೆಯಾಗಿದೆ. ಉತ್ತರ ಕನ್ನಡದ ಮಂಚಿಗೆರೆಯಲ್ಲಿ 11 ಸೆಂ.ಮೀ. ಮಳೆ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ 12 ಸೆಂ.ಮೀ. ಮಳೆಯಾಗಿದೆ. ಜೂನ್ 17ರಿಂದ 21ರವರೆಗೆ ವ್ಯಾಪಕ ಮಳೆ ಸಾಧ್ಯತೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗಿದ್ದು, ಜೂನ್ 17, 18 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಹಾಗೂ ಜೂನ್ 19, 20ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆ ಜೂನ್ 17ರಂದು ಆರೆಂಜ್ ಅಲರ್ಟ್ ಹಾಗೂ ಜೂನ್ 18ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿಯಲ್ಲಿ ಯೆಲ್ಲೋ ಅಲರ್ಟ್, 3 ಜಿಲ್ಲೆಗಳಲ್ಲಿ ಜೂನ್ 17, 18ರಂದು ಯೆಲ್ಲೋ ಅಲರ್ಟ್‍ನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಜೊತೆಗೆ ಬೆಂಗಳೂರಲ್ಲಿಯೂ ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆಯೆಂದು ತಿಳಿಸಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮುಂಗಾರು ಚುರುಕು- ಜೋಗಕ್ಕೆ ಜೀವದ ಕಳೆ