Tag: ಆರೆಂಜ್ ಅಲರ್ಟ್

  • ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ- ಒಂದು ವಾರ ಆರೆಂಜ್ ಅಲರ್ಟ್ ಘೋಷಣೆ

    ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ- ಒಂದು ವಾರ ಆರೆಂಜ್ ಅಲರ್ಟ್ ಘೋಷಣೆ

    – ಬೆಂಗಳೂರಲ್ಲಿ ಎರಡು ದಿನ ಹೆಚ್ಚು ಮಳೆ ಸಾಧ್ಯತೆ
    – ಇಂದಿನಿಂದ ರಾಜ್ಯಾದ್ಯಂತ ಭಾರೀ ಮಳೆ

    ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ಕರಾವಳೆಯ ಕೆಲ ಜಿಲ್ಲಗಳಲ್ಲಿ ಮಳೆಯ ಅಬ್ಬರ ಶುರುವಾಗಿದೆ.

    ಜೂನ್ 12 ರಿಂದ ಒಂದು ವಾರದ ಕಾಲ ಗುಡುಗುಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಇಂದಿನಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆ ಮೋಡ ಕವಿದ ವಾತಾವರಣವಿರುತ್ತದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಜೂನ್ 12 ರಿಂದ 16ರ ವರೆಗೆ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಗದಗ, ಕೋಲಾರ, ಕೊಪ್ಪಳ, ದಾವಣಗೆರೆ ಹಾಗೂ ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ನೈಋತ್ಯ ಮುಂಗಾರು ಚುರುಕು- ಉಡುಪಿಯಲ್ಲಿ ಗಾಳಿ ಮಳೆ

    ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರತೀ 24 ತಾಸುಗಳಲ್ಲಿ ಜಿಲ್ಲೆಯಲ್ಲಿ 64 ರಿಂದ 115 ಮಿ.ಮೀ. ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದರಂತೆ ಉಡುಪಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ.

    ತಾಸಿಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಕಾಪು, ಬ್ರಹ್ಮಾವರ, ಬೈಂದೂರು, ಹೆಬ್ರಿ, ಉಡುಪಿ ಎಲ್ಲಾ ತಾಲೂಕುಗಳಲ್ಲಿಯೂ ವ್ಯಾಪಕ ಮಳೆ ಸುರಿಯುತ್ತಿದೆ. ಇದರಿಂದ ಭತ್ತದ ಬೇಸಾಯ ಆರಂಭಿಸಲು ಕಾದಿದ್ದ ಕೃಷಿಕರಿಗೆ ಅನುಕೂಲವಾಗಿದೆ.

  • ಕೊಡಗಿನಲ್ಲಿ ಭಾರೀ ಮಳೆ ನಿರೀಕ್ಷೆ- ಆರೆಂಜ್ ಅಲರ್ಟ್ ಘೋಷಣೆ

    ಕೊಡಗಿನಲ್ಲಿ ಭಾರೀ ಮಳೆ ನಿರೀಕ್ಷೆ- ಆರೆಂಜ್ ಅಲರ್ಟ್ ಘೋಷಣೆ

    ಮಡಿಕೇರಿ: ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಕೊಡಗು ಜಿಲ್ಲೆಯಲ್ಲಿ ಮತ್ತೆ ಚುರುಕುಗೊಂಡಿದೆ. ಜಿಲ್ಲೆಯಲ್ಲಿ ಇಂದಿನಿಂದ ಸೆಪ್ಟೆಂಬರ್ 13ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. 115 ಮಿ.ಮೀ ನಿಂದ 204.4 ಮಿ.ಮೀ ವರೆಗೂ ಮಳೆ ಸುರಿಯುವ ಸಾಧ್ಯತೆ ಇದೆ.

    ಭಾರತೀಯ ಹವಾಮಾನ ಇಲಾಖೆ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಧ್ಯಾಹ್ನದಿಂದಲೇ ಕೊಡಗಿನಲ್ಲಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಹವಾಮಾನ ಇಲಾಖೆ ಆಗಿಂದಾಗ್ಗೆ ಬಿಡುಗಡೆ ಮಾಡುವ ಮುನ್ಸೂಚನೆಗಳನ್ನು ಗಮನಿಸಿ ಎಚ್ಚರವಹಿಸುವಂತೆ ತಿಳಿಸಿದೆ.

    ಈಗಾಗಲೇ ಆಗಸ್ಟ್ 5 ರಿಂದ ಕೊಡಗು ಜಿಲ್ಲೆಯಲ್ಲಿ ಎದುರಾಗಿದ್ದ ಭೀಕರ ಭೂಕುಸಿತ ಮತ್ತು ಪ್ರವಾಹದಿಂದ ಜನರಿಗೆ ಇನ್ನು ಆತಂಕ ದೂರವಾಗಿಲ್ಲ. ಇದರ ನಡುವೆಯೇ ಜಿಲ್ಲೆಯಲ್ಲಿ ಮತ್ತೆ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಮಾಡಿರುವುದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.

  • ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಒಂದು ಕಡೆ ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದ್ದು, ಅತ್ತ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದೆ. ಪುಣೆ, ಸತಾರಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20ರವರೆಗೂ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.

    ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂಗಳಿಂದಲೂ ಅಪಾರ ಪ್ರಮಾಣದಲ್ಲಿ ನೀರನ್ನ ಹೊರಬಿಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ನವಿಲು ತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿ ಮನೆ, ಅಂಗಡಿಗಳು ಜಲಾವೃತಗೊಂಡಿವೆ. ಎಂಕೆ ಹುಬ್ಬಳ್ಳಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಮಂಡೋಳಿ ರಸ್ತೆಯಲ್ಲಿ ಪ್ರವಾಹದಲ್ಲಿ ಸಿಲುಕಿ ಒದ್ದಾಡ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ವಡಗಾವಿ, ಓಂನಗರ, ಶಾಹು ನಗರ, ಮಚ್ಷೆ, ಮಾರಿಹಾಳ ಹಳ್ಳಗಳು ತುಂಬಿ ಹರಿಯುತ್ತಿವೆ. ಮಾರಿಹಾಳದಲ್ಲಿ ರಸ್ತೆಯ ಬದಿಯಲ್ಲಿ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ರಸ್ತೆ ಬಂದ್ ಆಗಿದೆ.

    ನವಿಲುತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಮಲಪ್ರಭಾ ನದಿ ತಟದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿಲಾಗಿದೆ. ಕ್ಷೇತ್ರದ ಶಾಸಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಕೆ ರಾಜೇಂದ್ರಗೆ ದೂರವಾಣಿ ಕರೆ ಮಾಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

    ಗೋವನಕೊಪ್ಪ-ಕೊಣ್ಣೂರು ಮಾರ್ಗದ ಹಳೆ ರಸ್ತೆ ಸೇತುವೆ ಜಲಾವೃತಗೊಂಡಿದೆ. ಸ್ಥಳಕ್ಕೆ ಎಸ್‍ಪಿ ಲೋಕೇಶ್ ಜಗಲಾಸರ್, ಎಸಿ ಗಂಗಪ್ಪ, ಬಾದಾಮಿ ತಹಸೀಲ್ದಾರ ಸುಹಾಸ ಇಂಗಳೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿಡಕಲ್ ಡ್ಯಾಂನಿಂದ 33 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿರುವ ಕಾರಣ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಮುಧೋಳ ತಾಲೂಕಿನ ಮಾಚಕನೂರಲ್ಲಿರುವ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

    ತುಂಗಾಭದ್ರಾ ಜಲಾಶಯದ ಕ್ರಸ್ಟ್ ಗೇಟ್‍ನಿಂದ 4,539 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಹಾಲ್ನೊರೆಯಂತೆ ಉಕ್ಕುತ್ತಿರುವ ನೀರು ಬಣ್ಣದ ಬೆಳಕಿನಲ್ಲಿ ಚಿತ್ತಾರ ಮೂಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿರುವ ಜಲಾಶಯದ ಭರ್ತಿಗೆ ಅರ್ಧ ಅಡಿಯಷ್ಟೇ ಬಾಕಿ ಇದ್ದು, 1632 ಅಡಿಯಷ್ಟು ನೀರು ಸಂಗ್ರಹಗೊಂಡಿದೆ.

    ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂನಿಂದ 2 ಲಕ್ಷ 37 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗ್ತಿದೆ. ಹೀಗಾಗಿ ರಾಯಚೂರಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಧಾರವಾಡ ತಾಲೂಕಿನ ಹೊಸೆಟ್ಟಿಯಲ್ಲಿ ಗ್ರಾಮಕ್ಕೆ ಕೆರೆ ನೀರು ನುಗ್ಗಿದೆ. ವಿಜಯಪುರ ಜಿಲ್ಲೆಯಲ್ಲೂ ಮಳೆ ಆಗಗುತ್ತಿದೆ. ಕಲಬುರಗಿ ಜಿಲ್ಲೆಯ ಸೊನ್ನ ಬ್ಯಾರೆಜ್‍ನಿಂದ ಭೀಮ ನದಿಗೆ 40 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಗದಗ ಜಿಲ್ಲೆಯಲ್ಲೂ ಪ್ರವಾಹ ಭೀತಿ ಉಂಟಾಗಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಲ್ಲೂ ಮಳೆ ಆಗ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಲ್ಲೂ ಮೂರು ದಿನ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

  • ಕೊಡಗಿನಲ್ಲಿ ಧಾರಾಕಾರ ಮಳೆ –  ಯೆಲ್ಲೊ, ಆರೆಂಜ್ ಅಲರ್ಟ್ ಘೋಷಣೆ

    ಕೊಡಗಿನಲ್ಲಿ ಧಾರಾಕಾರ ಮಳೆ – ಯೆಲ್ಲೊ, ಆರೆಂಜ್ ಅಲರ್ಟ್ ಘೋಷಣೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದುವರೆಗೂ ಸಾಧಾರಣವಾಗಿ ಬರುತ್ತಿದ್ದ ಮಳೆ ಇಂದು ಮಧ್ಯಾಹ್ನದ ಬಳಿಕ ಧಾರಾಕಾರವಾಗಿ ಸುರಿಯಲಾರಂಭಿಸಿದೆ.

    ತಲಕಾವೇರಿ, ಭಾಗಮಂಡಲ, ಬ್ರಹ್ಮಗಿರಿ ತಪ್ಪಲು, ನಾಪೋಕ್ಲು, ಮಡಿಕೇರಿ ಮತ್ತು ಮಾದಾಪುರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮತ್ತೊಂದೆಡೆ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಸೋಮವಾರ 64 ಮಿಲಿ ಮೀಟರ್‌ನಿಂದ 115 ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಮಂಗಳವಾರ ಅದರ ತೀವ್ರತೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು, 115 ಮಿಲಿ ಮೀಟರ್‌ನಿಂದ 204 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಈ ಮಾಹಿತಿಯ ಆಧಾರದಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಂಗಳವಾರ ಬೆಳಗ್ಗೆ 6 ಗಂಟೆಯವರೆಗೆ ಯೆಲ್ಲೊ ಅಲರ್ಟ್ ಮತ್ತು ಮಂಗಳವಾರ ಬೆಳಗ್ಗೆ 6 ರಿಂದ ಬುಧವಾರ ಬೆಳಗ್ಗೆ 6 ಗಂಟೆವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಸಮಯದಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

  • ಉಡುಪಿಯಲ್ಲಿ ಭಾರೀ ಮಳೆಯ ಮುನ್ಸೂಚನೆ – ಹೈ ಅಲರ್ಟ್

    ಉಡುಪಿಯಲ್ಲಿ ಭಾರೀ ಮಳೆಯ ಮುನ್ಸೂಚನೆ – ಹೈ ಅಲರ್ಟ್

    -ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ

    ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಐದರವರೆಗೆ ಉಡುಪಿಯಲ್ಲಿ ಧಾರಾಕಾರ ಮಳೆ ಸಾಧ್ಯತೆ ಇದೆ.

    ಜುಲೈ ನಾಲ್ಕಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 24 ಗಂಟೆಯ ಉಡುಪಿ ಮಳೆ ವರದಿ ಬಿಡುಗಡೆ ಮಾಡಿರುವ ಇಲಾಖೆ, ಉಡುಪಿಯಲ್ಲಿ 34 ಮಿಲಿ ಮೀಟರ್, ಕುಂದಾಪುರದಲ್ಲಿ 17 ಮಿಲಿ ಮೀಟರ್, ಕಾರ್ಕಳ ತಾಲೂಕಿನಲ್ಲಿ 24 ಮಿಲಿ ಮೀಟರ್ ಮಳೆ ಬಿದ್ದಿದೆ. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆ ಆರಂಭವಾಗಿದೆ.

    ಕಳೆದ ರಾತ್ರಿಯೂ ಧಾರಾಕಾರ ಮಳೆಯಾಗಿದ್ದು, ಒಂದು ವಾರ ಮಳೆ ಮುಂದುವರಿಯಲಿದೆ. ಉಡುಪಿ ಜಿಲ್ಲೆಯ ಬಡಾನಿಡಿಯೂರು ಗ್ರಾಮದಲ್ಲಿ 85 ಮಿಲಿಮೀಟರ್, ತೆಂಕ ನಿಡಿಯೂರುನಲ್ಲಿ 62 ಮಿಲಿಮೀಟರ್, ಬ್ರಹ್ಮಾವರದ ಹಂದಾಡಿ, ಹಾವಂಜೆ 48 ಮಿಲಿಮೀಟರ್, ಅಂಬಲ್ಪಾಡಿ 46 ಮಿಲಿಮೀಟರ್ ಮಳೆಯಾಗಿದೆ. ನಾವುಂದ ಗ್ರಾಮದಲ್ಲಿ ಜಿಲ್ಲೆಯಲ್ಲೇ ಅತೀ ಕಡಿಮೆ ಐದು ಮಿಲಿಮೀಟರ್ ಮಳೆಯಾಗಿದೆ.

  • ಧಾರಾಕಾರವಾಗಿ ಸುರಿಯಲಿದೆ ಜೇಷ್ಠಮಳೆ- ಉಡುಪಿಯಲ್ಲಿ 4 ದಿನ ಯೆಲ್ಲೋ-ಆರೆಂಜ್ ಅಲರ್ಟ್

    ಧಾರಾಕಾರವಾಗಿ ಸುರಿಯಲಿದೆ ಜೇಷ್ಠಮಳೆ- ಉಡುಪಿಯಲ್ಲಿ 4 ದಿನ ಯೆಲ್ಲೋ-ಆರೆಂಜ್ ಅಲರ್ಟ್

    ಉಡುಪಿ: ಜಿಲ್ಲೆಯಾದ್ಯಂತ ಇಂದು ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ.

    ಹವಾಮಾನ ಇಲಾಖೆಯು ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುತ್ತದೆ ಎಂದು ಮುನ್ಸೂಚನೆ ಕೊಟ್ಟಿತ್ತು. ಎರಡು ದಿನ ಸುಮಾರು ಎಪ್ಪತ್ತು ಮಿಲಿಮೀಟರ್ ಮತ್ತು ಎರಡು ದಿನ 120 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ. ಎರಡು ದಿನವನ್ನು ಯೆಲ್ಲೋ ಎಂದು ಮತ್ತೆರಡು ದಿನವನ್ನು ಆರೆಂಜ್ ಅಲರ್ಟ್ ಎಂದು ಹವಾಮಾನ ಇಲಾಖೆ ಗೊತ್ತು ಮಾಡಿದೆ. ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುವವರಿಗೆ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.

    ಕಡಲ ತೀರ ಪ್ರದೇಶದಲ್ಲಿ ಭಾರೀ ಗಾಳಿ ಮಳೆ ಸುರಿದಿದೆ. ಉಡುಪಿಯಲ್ಲಿ ನಾಲ್ಕು ದಿನಗಳ ಕಾಲ ಸುಮಾರು 400 ಮಿಲಿಮೀಟರ್ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ನದಿಗಳಲ್ಲಿ ನಾಡದೋಣಿ ಮೀನುಗಾರಿಕೆ ಮಾಡುವವರು ಕೂಡ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಉಲ್ಲೇಖಿಸಲಾಗಿದೆ.

    ಜಿಲ್ಲೆಯ ಎಲ್ಲ ಬಂದರುಗಳಿಗೆ ಮೀನುಗಾರಿಕಾ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಆಗಲಿದ್ದು, ನದಿ ತೀರದ ಜನ ಎಚ್ಚರಿಕೆಯಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸಮುದ್ರ ತೀರಕ್ಕೆ ಹೋಗಬಾರದು. ನದಿ ತೀರಕ್ಕೆ ಸಾರ್ವಜನಿಕರು, ಮಕ್ಕಳು ತೆರಳಬಾರದು ಎಂದು ಖಡಕ್ ಸೂಚನೆ ಕೊಡಲಾಗಿದೆ.

  • ದ.ಕ. ಜಿಲ್ಲೆಯಲ್ಲಿ ಇಂದು ಯಲ್ಲೋ ಅಲರ್ಟ್

    ದ.ಕ. ಜಿಲ್ಲೆಯಲ್ಲಿ ಇಂದು ಯಲ್ಲೋ ಅಲರ್ಟ್

    – 13, 14 ರಂದು ಆರೆಂಜ್ ಅಲರ್ಟ್

    ಮಂಗಳೂರು: ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶನಿವಾರ (13) ಮತ್ತು ಭಾನುವಾರ (14) ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.

    ಹವಾಮಾನ ಇಲಾಖೆ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿಕೊಂಡಿದೆ. ಅಲ್ಲದೇ ತುರ್ತು ಸೇವೆಗೆ 1077 ಸಂಖ್ಯೆಗೆ ಕರೆ ಮಾಡುವಂತೆ ಸೂಚನೆ ನೀಡಿದೆ.

    ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

  • ವಾಯುಭಾರ ಕುಸಿತ ಹಿನ್ನೆಲೆ ಕೊಡಗಿನಲ್ಲಿ ಆರೆಂಜ್ ಅಲರ್ಟ್

    ವಾಯುಭಾರ ಕುಸಿತ ಹಿನ್ನೆಲೆ ಕೊಡಗಿನಲ್ಲಿ ಆರೆಂಜ್ ಅಲರ್ಟ್

    ಮಡಿಕೇರಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆಗಳು ಇರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

    ಪೂರ್ವ ಹಾಗೂ ಮಧ್ಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿದಿದ್ದು, ಪರಿಣಾಮ ಮೇ 31 ಹಾಗೂ ಜೂನ್ 1 ರವರೆಗೆ ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಚದುರಿದಂತೆ ಹಾಗೂ ಗಾಳಿ ಸಹಿತ 115.60 ಮಿ.ಮೀ ನಿಂದ 204.4 ಮಿ.ಮೀಟರ್ ನಷ್ಟು ವ್ಯಾಪಕ ಭಾರೀ ಮಳೆ ಆಗುವ ಸಾಧ್ಯತೆಗಳು ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಿದೆ.

    ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದು, ಪ್ರವಾಹಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದರೆ ಜಿಲ್ಲಾಡಳಿತದ 08272-221077 ತುರ್ತು ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಮನವಿ ಮಾಡಿದ್ದಾರೆ.

    ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆ ಮುಂದುವರೆಯುಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಜೂನ್ 4ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

  • ಇಂದಿನಿಂದ ಗುಡುಗು ಮಿಂಚಿನೊಂದಿಗೆ ಮೂರು ದಿನ ಮಳೆಯಬ್ಬರ

    ಇಂದಿನಿಂದ ಗುಡುಗು ಮಿಂಚಿನೊಂದಿಗೆ ಮೂರು ದಿನ ಮಳೆಯಬ್ಬರ

    ಬೆಂಗಳೂರು: ರಾಜ್ಯದಲ್ಲಿ ಮಳೆಯಬ್ಬರ ಇನ್ನೂ ಕಮ್ಮಿ ಆಗಿಲ್ಲ. ಮುಂದಿನ ಮೂರು ದಿನಗಳ ಕಾಲಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

    ಅದರಲ್ಲೂ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 115 ರಿಂದ 204 ಮಿಲಿಮೀಟರ್ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ.

    ಈ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ 65 ರಿಂದ 114 ಮಿ.ಮೀಟರ್ ಮಳೆ ಆಗುವ ನಿರೀಕ್ಷೆ ಇದೆ. ಇಂದಿನಿಂದ ಮುಂದಿನ ಅಕ್ಟೋಬರ್ 23ರ ಬುಧವಾರದವರೆಗೆ ಮುನ್ನೆಚ್ಚರಿಕೆ ಜಾರಿಯಲ್ಲಿರಲಿದೆ. ರಾತ್ರಿಯಿಡೀ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ ಸುರಿದಿದೆ.

  • ಲಿಂಗನಮಕ್ಕಿ ಜಲಾಶಯದಿಂದ 19 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ- ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ

    ಲಿಂಗನಮಕ್ಕಿ ಜಲಾಶಯದಿಂದ 19 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ- ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ

    ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಸಹ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.

    ಮಲೆನಾಡಿನ ಭಾಗದಲ್ಲಿ ಮಳೆ ಹೆಚ್ಚಾದ ಕಾರಣ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸಹ ಹೆಚ್ಚಾಗಿದ್ದು, 9 ಕ್ರಸ್ಟ್ ಗೇಟ್ ಗಳ ಮೂಲಕ ಸುಮಾರು 19 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇತ್ತ ಜಲಾಶಯದ ಪಾತ್ರದಲ್ಲಿ ಮಳೆ ಹೆಚ್ಚಾದ ಪರಿಣಾಮ ಜೋಗ ಜಲಪಾತ ಕಂಗೊಳಿಸುತ್ತಿದ್ದು, ಜೋಗದ ಸೊಬಗು ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.

    ಇತ್ತ ಕೊಡಗು ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಆತಂಕ ಮೂಡಿದ್ದು, ಅ.20 ರಿಂದ 23 ವರೆಗೆ ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಸುಮಾರು 204 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 5 ದಿನಗಳ ಕಾಲ ಪ್ರವಾಸಿಗರು, ಜಿಲ್ಲೆಯ ಜನರು ಎಚ್ಚರದಿಂದ ಇರುವಂತೆ ಸೂಚನೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ 5 ದಿನ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರಕ್ಕೆ ಕೊಪ್ಪಳದ ಹಿರೇಹಳ್ಳ ಜಲಾಶಯ ತುಂಬಿದ್ದು, 3 ಕ್ರಸ್ಟ್ ಗೇಟ್ ಮೂಲಕ ಹಳ್ಳಕ್ಕೆ ನೀರು ಬಿಡಲಾಗಿದೆ. ಪರಿಣಾಮ ಕೋಳೂರಿನ ಬ್ರಿಡ್ಜ್ ಕಮ್ ಬ್ಯಾರೇಜ್‍ನ ತಡೆಗೋಡೆ ಕುಸಿಯುತ್ತಿದೆ. ಇಂಡಿ ತಾಲೂಕಿನ ತಾಂಬಾ-ಕೆಂಗನಾಳ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಾಯಚೂರಿನ ತುರ್ವಿಹಾಳದಲ್ಲಿ ಕಾಲೇಜಿಗೆ ನೀರುನುಗ್ಗಿದ್ದು, ಬಾಗಲಕೋಟೆಯ ಇಳಕಲ್‍ನಲ್ಲಿ ಹೊಲಗದ್ದೆಗಳು ಜಲಾವೃತವಾಗಿವೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿ ಹಳ್ಳಕೊಳ್ಳಗಳು ತುಂಬಿ ಹರಿದಿದೆ.