Tag: ಆರೋಗ್ಯ ಕಾರ್ಯಕರ್ತರು

  • ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಘೋರ, ಜಾಮೀನು ರಹಿತ ಅಪರಾಧ – ಹೈಕೋರ್ಟ್

    ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಘೋರ, ಜಾಮೀನು ರಹಿತ ಅಪರಾಧ – ಹೈಕೋರ್ಟ್

    ತಿರುವನಂತಪುರಂ: ದೈಹಿಕವಾಗಿ ಯಾವುದೇ ರೀತಿಯಿಂದ ಹಲ್ಲೆ ನಡೆಸದಿದ್ದರೂ ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅದು ಘೋರ ಹಾಗೂ ಜಾಮೀನು ರಹಿತ ಅಪರಾಧವಾಗುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ.

    ಹಲ್ಲೆ ನಡೆಸದೇ ಇದ್ದರೂ ಕೇರಳ ಆರೋಗ್ಯ ಸೇವಾ ಸಿಬ್ಬಂದಿ ಮತ್ತು ಆರೋಗ್ಯ ಸೇವಾ ಸಂಸ್ಥೆಗಳ (ಹಿಂಸಾಚಾರ ಮತ್ತು ಆಸ್ತಿ ಹಾನಿ ತಡೆ) ಕಾಯ್ದೆ ಅಡಿಯಲ್ಲಿ ಗಂಭೀರ ಜಾಮೀನು ರಹಿತ ಅಪರಾಧವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಯುವತಿ ಸ್ನೇಹಿತೆಯಾದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ – ಹೈಕೋರ್ಟ್

    ಸಾಂದರ್ಭಿಕ ಚಿತ್ರ

    ವೈದ್ಯೆಯೊಬ್ಬರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆರೋಪಿಯೊಬ್ಬ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರಿದ್ದ ಏಕ ಸದಸ್ಯ ಪೀಠವು ಈ ಆದೇಶ ನೀಡಿದ್ದು ಅರ್ಜಿದಾರರಿಗೆ ಜಾಮೀನು ನಿರಾಕರಿಸಿದೆ. ಆರೋಗ್ಯ ಸೇವೆ ಒದಗಿಸುವವರ ವಿರುದ್ಧದ ಎಲ್ಲಾ ರೀತಿಯ ಹಿಂಸಾಚಾರ ತಡೆಯುವುದು ಶಾಸನದ ಉದ್ದೇಶವಾಗಿದೆ ಎಂದು ಒತ್ತಿ ಹೇಳಿದೆ. ಇದನ್ನೂ ಓದಿ: ಪ್ರವಾದಿಗಾಗಿ ಒಂದು ಕೊಲೆ ಮಾಡೋಕಾಗಲ್ವೆ? – ಉದಯಪುರ ಹತ್ಯೆಯ ಮಾಸ್ಟರ್‌ಮೈಂಡ್ ವೀಡಿಯೋ ವೈರಲ್

    ಸಾಂದರ್ಭಿಕ ಚಿತ್ರ

    ಕಾಯ್ದೆಯಲ್ಲಿರುವ ಹಿಂಸೆ ಪದಕ್ಕೆ ಸಾಕಷ್ಟು ವ್ಯಾಪಕತೆ ಇದೆ. ಕಾಯ್ದೆ ರೂಪಿಸಿರುವ ಶಾಸಕಾಂಗದ ಉದ್ದೇಶ ನಿಸ್ಸಂದೇಹವಾಗಿ ಆರೋಗ್ಯ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗೆ ಯಾವುದೇ ಬೆದರಿಕೆ ಅಥವಾ ಅಡ್ಡಿ ಉಂಟು ಮಾಡುವುದನ್ನು ತಡೆಯಬೇಕು ಎಂಬುದಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

    ಆರೋಪಿ ವಿರುದ್ಧ IPC ಸೆಕ್ಷನ್ 341 (ಅಕ್ರಮ ಪ್ರತಿಬಂಧಕ್ಕಾಗಿ ದಂಡನೆ), ಸೆಕ್ಷನ್ 353 (ಸಾರ್ವಜನಿಕ ಸೇವಕರ ಕರ್ತವ್ಯವನ್ನು ತಡೆಯಲು ಹಲ್ಲೆ ಮಾಡುವುದು), ಸೆಕ್ಷನ್ 506 (ಕ್ರಿಮಿನಲ್ ಅಪರಾಧಕ್ಕಾಗಿ ದಂಡನೆ) ಹಾಗೂ ಸೆಕ್ಷನ್ 3 ಮತ್ತು 4(1) ಆರೋಗ್ಯ ಆರೈಕೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    ಅರ್ಜಿದಾರರ ಪರ ವಕೀಲ ಆರ್.ಶ್ರೀಹರಿ ವಾದ ಮಂಡಿಸಿದರು. ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎ.ನೌಶಾದ್ ಪ್ರತಿವಾದಿಯಾಗಿದ್ದರು.

    Live Tv

  • ಲಸಿಕೆ ಪ್ರಮಾಣ ಹೆಚ್ಚಳ – ಯಾದಗಿರಿ ಜಿಲ್ಲಾಡಳಿತದ ಪ್ಲ್ಯಾನ್ ಯಶಸ್ವಿಯಾಗಿದ್ದು ಹೇಗೆ?

    ಲಸಿಕೆ ಪ್ರಮಾಣ ಹೆಚ್ಚಳ – ಯಾದಗಿರಿ ಜಿಲ್ಲಾಡಳಿತದ ಪ್ಲ್ಯಾನ್ ಯಶಸ್ವಿಯಾಗಿದ್ದು ಹೇಗೆ?

    ಯಾದಗಿರಿ: ಒಂದು ತಿಂಗಳ ಹಿಂದೆ ಯಾದಗಿರಿಯಲ್ಲಿ ಶೇ.38 ರಷ್ಟಿದ್ದ ವ್ಯಾಕ್ಸಿನೇಷನ್, ಇಂದು ಶೇ.85 ರಷ್ಟಾಗಿದ್ದು, ಜನರಲ್ಲಿನ ಮೂಢನಂಬಿಕೆ ಹೋಗಲಾಡಿಸುವಲ್ಲಿ ಜಿಲ್ಲಾಡಳಿತ ಯಶಸ್ಸು ಕಂಡಿದೆ.

    ಲಸಿಕೆ ನೀಡಲು ಮನೆಗೆ ತೆರಳಿದ ಅಧಿಕಾರಿಗಳ ಮೇಲೆ ದರ್ಪ, ಲಸಿಕೆ ಬಗ್ಗೆ ಮೂಢನಂಬಿಕೆ ಹೀಗೆ ತಮ್ಮ ಅಜ್ಞಾನದಿಂದ ಲಸಿಕೆ ಬಗ್ಗೆ ಯಾದಗಿರಿ ಜನ ಒಂದು ರೀತಿಯ ಅಭಿಪ್ರಾಯಕ್ಕೆ ಒಳಗಾಗಿದ್ದರು, ಇದನ್ನು ಚಾಲೆಂಜ್ ಆಗಿ ತೆಗೆದುಕೊಂಡ ಯಾದಗಿರಿ ಜಿಲ್ಲಾಡಳಿತ ಒಂದು ತಿಂಗಳಲ್ಲಿ ವ್ಯಾಕ್ಸಿನ್ ಚಿತ್ರಣವನ್ನೇ ಬದಲಾಯಿಸಿದೆ. ಇದನ್ನೂ ಓದಿ: ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ

    ಒಂದು ತಿಂಗಳ ಹಿಂದೆ ಯಾದಗಿರಿ ವ್ಯಾಕ್ಸಿನೇಷನ್ ಶೇ.38ರಷ್ಟಿತ್ತು. ಆದರೆ ಇಂದು ಶೇ.85ರಷ್ಟು ವ್ಯಾಕ್ಸಿನೇಷನ್ ಮಾಡುವ ಮೂಲಕ ಜಿಲ್ಲಾಡಳಿತ ಸಾಧನೆ ಮಾಡಿದೆ. ಲಸಿಕೆ ಬಗ್ಗೆ ಜನರಲ್ಲಿರುವ ಮೂಢನಂಬಿಕೆಯಿಂದಾಗಿ ಜಿಲ್ಲಾಡಳಿತ ಹೈರಾಣಾಗಿತ್ತು. ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಮತ್ತು ಡಿಎಚ್‍ಓ ಇಂದುಮತಿ ಪಾಟೀಲ್ ಮಾಡಿದ ಮಾಸ್ಟರ್ ಪ್ಲ್ಯಾನ್ ವರ್ಕೌಟ್ ಆಗಿದೆ.

    ಏನು ಪ್ಲ್ಯಾನ್ ಮಾಡಿತ್ತು?: ವಾರದಲ್ಲಿ ಒಂದು ದಿನ ಬೃಹತ್ ಲಸಿಕಾ ಶಿಬಿರವನ್ನು ಹಮ್ಮಿಕೊಂಡು ಮನೆ ಮನೆಗೆ ಹೋಗಿ ಲಸಿಕೆ ಹಾಕುವುದು. ಲಸಿಕಾ ಎಕ್ಸ್‌ಪ್ರೆಸ್ ಕಾರು, ಬೀದಿ ನಾಟಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು. ಹೀಗೆ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ವಿಶೇಷ ಪ್ಲಾನ್ ಯಾದಗಿರಿಯಲ್ಲಿ ಸಕ್ಸಸ್ ಆಗಿದೆ.  ಇದನ್ನೂ ಓದಿ: ಹಿಂದಿ ಹೇರಿಕೆ- ಭೂತ ದಹಿಸಿ ವಾಟಳ್ ಪ್ರತಿಭಟನೆ

    ಇದರಿಂದಾಗಿ ಜಿಲ್ಲೆಯಲ್ಲಿ ಶೇ.85 ರಷ್ಟು ಜನರಿಗೆ ಮೊದಲನೇ ಡೋಸ್ ಸಂಪೂರ್ಣಗೊಂಡಿದೆ. ಜಿಲ್ಲಾಡಳಿತದ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಶೇ.100 ರಷ್ಟು ವ್ಯಾಕ್ಸಿನೇಷನ್ ಮಾಡುವ ವಿಶ್ವಾಸವನ್ನು ಜಿಲ್ಲಾಡಳಿತ ವ್ಯಕ್ತಪಡಿಸಿದೆ.

  • ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು

    ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು

    ನವದೆಹಲಿ: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಆಗಲಿದೆ.

    ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಇಲ್ಲಿಯವರೆಗಿದ್ದ 6 ತಿಂಗಳ ಶಿಕ್ಷೆಯ ಪ್ರಮಾಣವನ್ನು 7 ವರ್ಷಕ್ಕೆ ಏರಿಸಿದೆ. ದೇಶದ ಹಲವೆಡೆ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

    ಈ ವಾರದಲ್ಲಿ ಬೆಂಗಳೂರಿನ ಪಾದರಾಯನಪುರ, ಮೈಸೂರಿನಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. ಕಳೆದ ವಾರ ಉತ್ತರ ಪ್ರದೇಶದಲ್ಲೂ ಹಲ್ಲೆ ನಡೆದಿತ್ತು. ಈಗ ಈ ಕೃತ್ಯಗಳಿಗೆ ಕಡಿವಾಣ ಹಾಕಲು ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಿದೆ.