Tag: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

  • ಒಂದು ವಾರದಲ್ಲಿ ದೇಶದಲ್ಲಿ 752 ಮಂದಿಗೆ ಕೊರೊನಾ ಸೋಂಕು – ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

    ಒಂದು ವಾರದಲ್ಲಿ ದೇಶದಲ್ಲಿ 752 ಮಂದಿಗೆ ಕೊರೊನಾ ಸೋಂಕು – ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

    ನವದೆಹಲಿ: ಕಳೆದ ಒಂದು ವಾರದಲ್ಲಿ ದೇಶದಲ್ಲಿ 752 ಹೊಸ ಕೋವಿಡ್-19 (Covid-19) ಪ್ರಕರಣಗಳು ವರದಿಯಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,000ಕ್ಕೆ ಏರಿದೆ. ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಅತಿ ಹೆಚ್ಚು ಹೊಸ ಸೋಂಕು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Ministry of Health and Family Welfare) ಹೇಳಿದೆ.

    ಕೇರಳದಲ್ಲಿ 335 ಹೊಸ ಸೋಂಕುಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 430ಕ್ಕೆ ಏರಿದೆ. ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಕ್ರಮವಾಗಿ 153 ಮತ್ತು 99 ಹೊಸ ಪ್ರಕರಣಗಳು ದಾಖಲಾಗಿವೆ. ಸೋಮವಾರ ಬೆಳಗ್ಗೆ ಸರ್ಕಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು ಕ್ರಮವಾಗಿ 209 ಮತ್ತು 104ರಷ್ಟಿವೆ. ಇದನ್ನೂ ಓದಿ: ಸದ್ಯದಲ್ಲೇ ರಾಜನಾಥ್ ಭೇಟಿ, ಡಿಫೆನ್ಸ್ ಕಾರಿಡಾರ್‌ಗೆ ಪಟ್ಟು: ಎಂಬಿಪಿ

    ಗುಜರಾತ್‌ನಲ್ಲಿ 83 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 47, ಉತ್ತರ ಪ್ರದೇಶದಲ್ಲಿ 15 ಮತ್ತು ಪಶ್ಚಿಮ ಬಂಗಾಳದಲ್ಲಿ 12 ಪ್ರಕರಣಗಳು ವರದಿಯಾಗಿವೆ. ಕೇಂದ್ರ ಸರ್ಕಾರಿ ಸಂಸ್ಥೆ ಇಂಡಿಯನ್ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂನ (ಇನ್ಸಾಕಾಗ್) ಇತ್ತೀಚಿನ ಮಾಹಿತಿಯ ಪ್ರಕಾರ, ಹೊಸ ಕೊರೊನಾ ಸೋಂಕುಗಳ ಹೆಚ್ಚಳದ ನಡುವೆ ಎರಡು ಹೊಸ ರೂಪಾಂತರಗಳ ಪ್ರಕರಣಗಳು ವರದಿಯಾಗಿದೆ. ಇದನ್ನೂ ಓದಿ: ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್ ಖರ್ಗೆ

    ಬಂಗಾಳದಲ್ಲಿ ಮತ್ತೆ ನಾಲ್ಕು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರಕರಣಗಳಲ್ಲಿ ಹೆಚ್ಚಿನವು ಕೋಲ್ಕತ್ತಾ ಮತ್ತು ಅದರ ಉಪನಗರಗಳಿಂದ ವರದಿಯಾಗಿವೆ. ಇದನ್ನೂ ಓದಿ: ಮಾಡಾಳ್ ಜೈಲಿಗೆ ಹೋದಾಗ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ: ಬಿವೈವಿ ವಿರುದ್ಧ ಎಂಬಿಪಿ ಕಿಡಿ

    ಬಿಹಾರದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ವರದಿಯಾಗಿದೆ. ಪಾಟ್ನಾದ 31 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗೆ ಇತ್ತೀಚೆಗೆ ರಾಜ್ಯದಿಂದ ಹೊರಗೆ ಪ್ರಯಾಣ ಮಾಡಿದ ಇತಿಹಾಸವಿಲ್ಲ. ಇದನ್ನೂ ಓದಿ: ಮಂಡ್ಯ | ಬೈಕ್ ಅಡ್ಡಗಟ್ಟಿದ ಪೊಲೀಸ್ರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು

  • ಎನ್‍ಹೆಚ್‍ಎಮ್ ಒಳಗುತ್ತಿಗೆ ನೌಕರರ ಪ್ರತಿಭಟನೆ – ಎಸ್ಮಾ ಜಾರಿ ಮಾಡಿದ ಆರೋಗ್ಯ ಇಲಾಖೆ

    ಎನ್‍ಹೆಚ್‍ಎಮ್ ಒಳಗುತ್ತಿಗೆ ನೌಕರರ ಪ್ರತಿಭಟನೆ – ಎಸ್ಮಾ ಜಾರಿ ಮಾಡಿದ ಆರೋಗ್ಯ ಇಲಾಖೆ

    ಬೆಂಗಳೂರು: ಪ್ರತಿಭಟನಾ ನಿರತ ಎನ್‍ಹೆಚ್‍ಎಮ್ (NHM) ಒಳಗುತ್ತಿಗೆ ನೌಕರರಿಗೆ ಆರೋಗ್ಯ ಇಲಾಖೆ (Department of Health and Family Welfare Services) ಎಸ್ಮಾ (ESMA) ಜಾರಿಗೊಳಿಸಿದೆ. ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಇಲ್ಲವೇ ಇಲಾಖೆ ನೌಕರರು ಕಾನೂನಾತ್ಮಕ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.

    ಆರೋಗ್ಯ ಇಲಾಖೆ ಸಿಬ್ಬಂದಿ ಒಂದು ತಿಂಗಳನಿಂದ ಪ್ರತಿಭಟನೆ ಮುಂದುವರೆಸಿರುವುದು ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿದೆ. ಮಾರ್ಚ್ 16 ರಂದು ನೀಡಿದ ಎಚ್ಚರಿಕೆಯನ್ನು ಮೀರಿ ಮೀರಿ ಪ್ರತಿಭಟನೆಯನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಎಸ್ಮಾ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ – ಎಫ್‌ಐಆರ್ ದಾಖಲು

    ಮಣಿಪುರ ರಾಜ್ಯವನ್ನು ಹೊರತುಪಡಿಸಿ, ಒಡಿಸ್ಸಾ, ಪಂಜಾಬ್, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ರಾಜಸ್ಥಾನ ಇತರೆ ರಾಜ್ಯಗಳಲ್ಲಿ ಎನ್‍ಹೆಚ್‍ಎಂ ಒಳಗುತ್ತಿಗೆ ನೌಕರರನ್ನ ಖಾಯಂಗೊಳಿಸಲಾಗಿದೆ. ಹೀಗಾಗಿ ಕರ್ನಾಟಕದಲ್ಲೂ (Karnataka) ನಮ್ಮನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮವು 2005 ರಿಂದ ಜಾರಿಯಲ್ಲಿದ್ದು ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರವಾಗಿದೆ. ಇದು ಮಿಷನ್ ಮೋಡ್ ಪ್ರಾಜೆಕ್ಟ್ ಆಗಿರುವುದರಿಂದ ನಿಗದಿಪಡಿಸಿದ ಉದ್ದೇಶ ಹಾಗೂ ಗುರಿಗಳು ಸಫಲವಾದ ನಂತರ ಕಾರ್ಯಕ್ರಮ ಮುಕ್ತಾಯಗೊಳ್ಳುವುದರ ಬಗ್ಗೆ ಕೇಂದ್ರ ಸರ್ಕಾರವು ತಿರ್ಮಾನಿಸುತ್ತದೆ.

    ಈ ಯೋಜನೆಯಲ್ಲಿ ಸುಮಾರು 53 ಕಾರ್ಯಕ್ರಮಗಳು ರಾಜ್ಯದಲ್ಲಿ ವಿವಿಧ ಹಂತದಲ್ಲಿ ಜಾರಿಯಲ್ಲಿರುತ್ತವೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಒಳಗುತ್ತಿಗೆ ಆಧಾರದ ಮೇಲೆ 26,943 ಮತ್ತು 3,631 ಹೊರಗುತ್ತಿಗೆ ಒಟ್ಟು 30,574 ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೌಕರರ ಪ್ರಮುಖ ಬೇಡಿಕೆಯಂದ ಸಂಬಳವನ್ನು ಏರಿಸಲಾಗಿದ್ದು, ಮಾರ್ಚ್ 4 ರಂದು ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಳಿದ ಬೇಡಿಕೆಗಳ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಆಶ್ವಾಸನೆ ನೀಡಿದ್ದಾರೆ.

    ಏನಿದು ಎಸ್ಮಾ?
    ಎಸ್ಮಾ ಎಂದರೆ (Essential Services Maintenance Act), ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ. ಸರ್ಕಾರಿ ನೌಕರನನ್ನು ನಿಯಂತ್ರಣ ಮಾಡುವ ಕಾಯ್ದೆ 1968 ರಿಂದ ಜಾಲ್ತಿಯಲ್ಲಿದ್ದು, ಕರ್ನಾಟಕದಲ್ಲಿ ಎಸ್ಮಾ ಕುರಿತು 1994ರಲ್ಲಿ ಕಾನೂನಿನ ಮೊದಲ ರೂಪುರೇಷೆ ತಯಾರಾಯಿತು. 2013ರ ಜೂನ್ ನಿಂದ ರಾಜ್ಯದಲ್ಲಿ ಕಾನೂನಾಗಿ ಮಾರ್ಪಾಡಾಯಿತು. ನಂತರ 2015 ರಲ್ಲಿ ಸರ್ಕಾರ ಕೆಲ ತಿದ್ದುಪಡಿ ಮಾಡಿದೆ.

    ಪರಿಣಾಮ ಏನು?
    ಎಸ್ಮಾ ಎಂದರೆ ಕಡ್ಡಾಯ ಕೆಲಸ. ಸಂವಿಧಾನದಲ್ಲಿ ತಿಳಿಸಿರುವಂತೆ, 7ರಲ್ಲಿನ 2ನೇ ಪಟ್ಟಿಯಲ್ಲಿರುವ ಸಾರ್ವಜನಿಕ ಸುವ್ಯವಸ್ಥೆ ಮತ್ತು ಪೊಲೀಸ್ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ ಆರು ತಿಂಗಳು ಜೈಲು ವಾಸ ಶಿಕ್ಷೆಯನ್ನು ನೀಡುವ ಸಾಧ್ಯತೆಯೂ ಇರುತ್ತದೆ ಎಂಬ ಉಲ್ಲೇಖವಿದೆ. ಎಸ್ಮಾ ಜಾರಿಯಲ್ಲಿದ್ದ ಮೇಲೆ ಅದನ್ನು ಧಿಕ್ಕರಿಸಿ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಈ ಕಾರಣಕ್ಕೆ ರಾಜ್ಯ ಸರ್ಕಾರಗಳು ಉದ್ಯೋಗಿಗಳು ಹಠ ಮುಂದುವರಿಸಿದರೆ ಕೊನೆಯ ಅಸ್ತ್ರವಾಗಿ ಎಸ್ಮಾ ಜಾರಿಗೊಳಿಸುತ್ತದೆ. ಇದನ್ನೂ ಓದಿ: ಈಕ್ವೆಡಾರ್‌ನಲ್ಲಿ 6.8 ತೀವ್ರತೆಯ ಭಾರೀ ಭೂಕಂಪ – 14 ಜನ ಬಲಿ

  • 23 ಏಮ್ಸ್‌ಗಳಿಗೆ ಸ್ವಾತಂತ್ರ್ಯ ಹೋರಾಟಗಾರರು, ಸ್ಥಳೀಯ ನಾಯಕರ ಹೆಸರಿಡಿ – ಕೇಂದ್ರಕ್ಕೆ ಪ್ರಸ್ತಾವ

    23 ಏಮ್ಸ್‌ಗಳಿಗೆ ಸ್ವಾತಂತ್ರ್ಯ ಹೋರಾಟಗಾರರು, ಸ್ಥಳೀಯ ನಾಯಕರ ಹೆಸರಿಡಿ – ಕೇಂದ್ರಕ್ಕೆ ಪ್ರಸ್ತಾವ

    ನವದೆಹಲಿ: ರಾಷ್ಟ್ರ ರಾಜಧಾನಿ ಸೇರಿದಂತೆ ವಿವಿಧೆಡೆ ಇರುವ ಏಮ್ಸ್ಗಳಿಗೆ ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ಘಟನೆಗಳು, ಆಯಾ ಪ್ರದೇಶದ ಸ್ಮಾರಕಗಳು ಅಥವಾ ಸ್ಥಳೀಯ ನಾಯಕರ ಹೆಸರನ್ನು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.

    ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಲಹೆಯ ಮೇರೆಗೆ 23 ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)ಗಳು ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ಸ್ಮಾರಕಗಳು, ಸ್ಥಳೀಯ ನಾಯಕರ ಹೆಸರುಗಳ ಪಟ್ಟಿಯನ್ನು ಸಲ್ಲಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಸೇರಿ 8 ಆರೋಪಿಗಳ ವಿರುದ್ಧ ಸಿಬಿಐ ಲುಕ್‌ಔಟ್ ನೋಟಿಸ್

    ಏಮ್ಸ್‌ಗಳು ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ವೈ) ಅಡಿ ಕಾರ್ಯನಿರ್ವಹಿಸುತ್ತಿವೆ. ಕೆಲವು ಸಾಮಾನ್ಯ ಹೆಸರು ಹಾಗೂ ಅವುಗಳ ತಾಣದಿಂದ ಮಾತ್ರ ಗುರುತಿಸಲ್ಪಟ್ಟಿವೆ. ಆದ್ದರಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ, ಭಾಗಶಃ ಕಾರ್ಯಾಚರಣೆ ಅಥವಾ ನಿರ್ಮಾಣ ಹಂತದಲ್ಲಿರುವ ಎಲ್ಲಾ 23 ಏಮ್ಸ್‌ಗಳಿಗೆ ನಿರ್ದಿಷ್ಟ ಹೆಸರು ನೀಡುವ ಪ್ರಸ್ತಾವವನ್ನು ಕೇಂದ್ರ ಆರೋಗ್ಯ ಸಚಿವಾಲಯ ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಹುಡುಗರನ್ನು ಹೊರಗೆ ಹಾಕಬೇಕು: ಸೋನು ಶ್ರೀನಿವಾಸ್ ಗೌಡ

    ಈ ನಿಟ್ಟಿನಲ್ಲಿ ಸಂಸ್ಥೆ ಇರುವ ಪ್ರದೇಶದ ಸ್ಥಳೀಯ ನಾಯಕರು, ಸ್ವಾತಂತ್ರ‍್ಯ ಹೋರಾಟಗಾರರು ಮತ್ತು ಪ್ರದೇಶದ ಪ್ರಮುಖ ಐತಿಹಾಸಿಕ ಘಟನೆಗಳು ಅಥವಾ ಸ್ಮಾರಕಗಳು ಸೇರಿದಂತೆ ವಿವಿಧ ಏಮ್ಸ್‌ಗಳಿಗೆ ನಿರ್ದಿಷ್ಟ ಹೆಸರಿಡಲು ಸಲಹೆಗಳನ್ನು ಕೋರಲಾಗಿದೆ ಎಂದು ಅಧಿಕಾರಿಯೊಬ್ಬರು ವಿವರಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • 24 ಗಂಟೆಗಳಲ್ಲಿ ದೇಶದ ದಾಖಲೆಯ 15,968 ಮಂದಿಗೆ ಕೊರೊನಾ- 465 ಜನ ಬಲಿ

    24 ಗಂಟೆಗಳಲ್ಲಿ ದೇಶದ ದಾಖಲೆಯ 15,968 ಮಂದಿಗೆ ಕೊರೊನಾ- 465 ಜನ ಬಲಿ

    – 4.50 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

    ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ದೇಶದ ದಾಖಲೆಯ 15,968 ಮಂದಿಗೆ ಕೊರೊನಾವೈರಸ್ ಪಾಸಿಟಿವ್ ವರದಿಯಾಗಿದೆ.

    ಆರು ತಿಂಗಳ ಹಿಂದೆ ಚೀನಾದ ವುಹಾನ್‍ನಿಂದ ಶುರುವಾದ ಮಾರಣಾಂತಿಕ ಕೋವಿಡ್-19 ವೈರಸ್‍ಗೆ ಇನ್ನೂ ಔಷಧಿ ಸಿಕ್ಕಿಲ್ಲ. ಹೀಗಾಗಿ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆ ಕಾಣುತ್ತಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇಂದಿನ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ 15,968 ಮಂದಿಗೆ ಸೋಂಕು ದೃಢವಾಗಿದ್ದು, 465 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 4.50 ಲಕ್ಷ ಗಡಿ ದಾಟಿದೆ.

    ದೇಶದಲ್ಲಿ ಈವರೆಗೆ ಒಟ್ಟು 4,56,183 ಮಂದಿಗೆ ಸೋಂಕು ಪತ್ತೆಯಾಗಿದೆ. ಈ ಪೈಕಿ 1,83,022 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 2,58,685 ಜನ ಗುಣಮುಖರಾಗಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ 14,476 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

    ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ ನಾಲ್ಕು ಹಂತದ ಲಾಕ್‍ಡೌನ್ ನಂತರ ಅನ್‍ಲಾಕ್ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಮತ್ತೆ ಲಾಕ್‍ಡೌನ್ ಆಗುವ ಲಕ್ಷಣಗಳಿಲ್ಲ ಎನ್ನಲಾಗುತ್ತಿದೆ.

    ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಐಬಿಎಂಆರ್) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರು, ಕಳೆದ ತಿಂಗಳು ಜೂನ್-ಜುಲೈನಲ್ಲಿ ಏಕಾಏಕಿ ಭಾರತ ಉತ್ತುಂಗಕ್ಕೇರಲಿದೆ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಪ್ರಕರಣಗಳ ಏರಿಕೆಯನ್ನು ಗಮನಿಸಿದರೆ ದೇಶದಲ್ಲಿ ಆಗಸ್ಟ್-ಸೆಪ್ಟೆಂಬರ್ ನಲ್ಲಿ ಮತ್ತಷ್ಟು ಜನರಿಗೆ ಸೋಂಕು ಹರಡುವ ಆತಂಕ ಸೃಷ್ಟಿಯಾಗಿದೆ.

  • ಕೊರೊನಾ ಅಪಾಯಕಾರಿ ರಾಜ್ಯಗಳಿಂದ ಬಂದವರಿಗೆ ಸ್ವಂತ ಖರ್ಚಿನಲ್ಲೇ ಕೋವಿಡ್ ಟೆಸ್ಟ್

    ಕೊರೊನಾ ಅಪಾಯಕಾರಿ ರಾಜ್ಯಗಳಿಂದ ಬಂದವರಿಗೆ ಸ್ವಂತ ಖರ್ಚಿನಲ್ಲೇ ಕೋವಿಡ್ ಟೆಸ್ಟ್

    ಬೆಂಗಳೂರು: ಕೊರೊನಾ ಅಪಾಯಕಾರಿ ರಾಜ್ಯದಿಂದ ವಿಮಾನ, ರೈಲಿನಲ್ಲಿ ಬಂದವರಿಗೆ ಇನ್ನುಮುಂದೆ ಸ್ವಂತ ಖರ್ಚಿನಲ್ಲಿ ಕೋವಿಡ್-19 ಟೆಸ್ಟ್‍ಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

    ಈ ಕುರಿತು ಪ್ರಕಟಣೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇದುವರೆಗೂ ಸರ್ಕಾರದ ವತಿಯಿಂದ ಗಂಟಲು ದ್ರವ ಸಂಗ್ರಹಿಸಿ ಉಚಿತ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ ಈಗ ಪ್ರತಿಯೊಬ್ಬರು ಪರೀಕ್ಷೆಗೆ 650 ರೂಪಾಯಿ ನೀಡಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಒಂದೇ ದಿನ ಅತೀ ಹೆಚ್ಚು 248 ಮಂದಿಗೆ ಕೊರೊನಾ- 2,781ಕ್ಕೆ ಏರಿದ ಸೋಂಕಿತರ ಸಂಖ್ಯೆ

    ಪ್ರಕಟಣೆಯಲ್ಲಿ ಏನಿದೆ?:
    ಕೋವಿಡ್-19 ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಗೊಳಿಸುವ ವಿಷಯದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಮತ್ತು ಉಳಿದ ಎಲ್ಲಾ ಜಿಲ್ಲೆಗಳ ಸಾಮರ್ಥ್ಯದಲ್ಲಿ ಪರಿಮಿತಿ ಇರುತ್ತದೆ. ಕೋವಿಡ್-19ರ ಸಂಕಷ್ಟದಲ್ಲಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರೆಲ್ಲರನ್ನು ಹೋಟೆಲ್/ವಸತಿ ಗೃಹಗಳಲ್ಲಿ 7 ದಿನಗಳ ಕಾಲ ಕ್ವಾರಂಟೈನ್‍ಗೆ ಒಳಪಡಿಸಲು ಸಾಧ್ಯವಾಗುವುದಿಲ್ಲ. ಕಾರಣವೇನೆಂದರೆ ಹೋಟೆಲ್/ ವಸತಿ ವಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅನೇಕ ಪೂರ್ವ ಮತ್ತು ಈಶಾನ್ಯ ರಾಜ್ಯಗಳ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಹಿಂದಿರುಗಿರುತ್ತಾರೆ.

    ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಒಳಪಡುವ ಕೆಲವು ವಿಶಿಷ್ಟ ಗುಂಪಿನ ಪ್ರಯಾಣಿಕರ ಗಂಟಲು ದ್ರವವನ್ನು ಮಾತ್ರ ಲ್ಯಾಬ್ ಪರೀಕ್ಷೆ ಮಾಡುವ ನಿರ್ಣಯವನ್ನು ರಾಜ್ಯ ಕೈಗೊಂಡಿದೆ. ಈ ಮೂಲಕ ಕೋವಿಡ್ ಶಂಕಿತರನ್ನು ಶೀಘ್ರಗತಿಯಲ್ಲಿ ಪರೀಕ್ಷೆ ಮಾಡಲು ಖಾಸಗಿ ಪ್ರಯೋಗಾಲಯಗಳ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅನುಕೂಲವಾಗುತ್ತದೆ.

    ಇತ್ತೀಚೆಗೆ ಅವರೊಂದಿಗೆ ನಡೆಸಿದ ವಿಮಾನ ಮತ್ತು ರೈಲುಗಳ ಮುಖಾಂತರ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರ ಗಂಟಲು ಮಾದರಿಗಳನ್ನು ಸಂಗ್ರಹಿಸಿ ಪ್ರಸಕ್ತ ರಾಜ್ಯ ಸರ್ಕಾರದ ಪರೀಕ್ಷಾ ನಿಯಮದಂತೆ ಕೋವಿಡ್-19 ಆರ್‌ಟಿ- ಪಿಸಿಆರ್ ಪರೀಕ್ಷೆ ನಡೆಸಿ 24 ಗಂಟೆಯ ಒಳಗಾಗಿ ಫಲಿತಾಂಶ ನೀಡುವ ಸಾಮರ್ಥ್ಯ ಮತ್ತು ಸನ್ನದ್ದತೆ ಕುರಿತು ಖಾಸಗಿ ಪ್ರಯೋಗಾಲಗಳೊಂದಿಗೆ ಚರ್ಚೆ ನಡೆಸಲಾಗಿರುತ್ತದೆ. ಪ್ರಯೋಗಾಲಯ ಪರೀಕ್ಷೆಗಳ ಕುರಿತು ಆರೋಗ್ಯ ಇಲಾಖೆಯ ಪ್ರಸ್ತಾವನೆಯನ್ನು ಸದರಿ ಖಾಸಗಿ ಲ್ಯಾಬ್‍ಗಳಿಗೆ ಒಪ್ಪಿರುತ್ತಾರೆ.

    ಗಂಟಲು, ರಕ್ತದ ಮಾದರಿಗಳನ್ನು ಪೊಲಿಂಗ್ ವಿಧಾನದಲ್ಲಿ ಪರೀಕ್ಷಿಸಲು (ಐಸಿಎಂಆರ್ ಮಾರ್ಗಸೂಚಿಯಂತೆ 1 ಪೊಲ್‍ನಲ್ಲಿ 5 ಮಾದರಿಗಳು ಇರತಕ್ಕದ್ದು) ಪರೀಕ್ಷೆ ಶುಲ್ಕವಾಗಿ ಪ್ರತಿ ಯಾತ್ರಿಕರಿಂದ, ಫಲಿತಾಂಶ ಪಾಸಿಟಿವ್ ಇರಲಿ ಅಥವಾ ನೆಗೆಟಿವ್ ಇರಲಿತಲಾ 650 ರೂ. ನಂತೆ ಶುಲ್ಕವನ್ನು ಖಾಸಗಿ ಲ್ಯಾಬ್‍ಗಳು ಪಡೆಯತಕ್ಕದ್ದು.