Tag: ಆರೋಗ್ಯ ಸಚಿವ ಶ್ರೀರಾಮುಲು

  • ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು

    ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು

    ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸಚಿವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

    ಟ್ವೀಟ್: ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.

    ಕೊರೊನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ.

    ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

  • ಆರೋಗ್ಯ ಸಚಿವರ ಕ್ಷೇತ್ರದಲ್ಲೇ ವೈದ್ಯರ ಕೊರತೆ – ಅನಸ್ತೇಶಿಯಾ ವೈದ್ಯರಿಲ್ಲದೇ ಗರ್ಭಿಣಿ ಸಾವು

    ಆರೋಗ್ಯ ಸಚಿವರ ಕ್ಷೇತ್ರದಲ್ಲೇ ವೈದ್ಯರ ಕೊರತೆ – ಅನಸ್ತೇಶಿಯಾ ವೈದ್ಯರಿಲ್ಲದೇ ಗರ್ಭಿಣಿ ಸಾವು

    ಚಿತ್ರದುರ್ಗ: ಆರೋಗ್ಯ ಸಚಿವ ಶ್ರೀರಾಮುಲು ಅವರ ಸ್ವಕ್ಷೇತ್ರದಲ್ಲೇ ವೈದ್ಯರ ಕೊರತೆಯಿಂದ ಆಸ್ಪತ್ರೆಗಳು ನರಳುತ್ತಿದ್ದು, ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಅನಸ್ತೇಶಿಯಾ ವೈದ್ಯರಿಲ್ಲದೇ ಗರ್ಭಿಣಿ ಸಾವನ್ನಪ್ಪಿ ಸಾವನ್ನಪ್ಪಿದ್ದಾರೆ.

    ಮೊಳಕಾಲ್ಮೂರು ತಾಲೂಕಿನ ಮುಸ್ಟಲದುಮ್ಮಿ ಗ್ರಾಮದ ಕವಿತಾ(30) ಮೃತಪಟ್ಟ ಗರ್ಭಿಣಿ. ಹೆರಿಗಾಗಿ ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ಇಂದು ಬೆಳಗ್ಗೆ ಕೊನೆ ಗಳಿಗೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹೀಗಾಗಿ ಮೊಳಕಾಲ್ಮೂರು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ವಿರುದ್ಧ ನಿರ್ಲಕ್ಷ ಆರೋಪ ಕೇಳಿ ಬಂದಿದೆ.

    ಇಂದು ಶ್ರೀರಾಮಲು ಕೆಲಸ ಸಂಬಂಧ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು ಜನರು ಈ ಗರ್ಭಿಣಿ ಸಾವನ್ನಪ್ಪಿದ ವಿಚಾರವನ್ನು ಪ್ರಸ್ತಾಪ ಮಾಡಿ ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ.