Tag: ಆರೋಗ್ಯ ಸಚಿವ ಸುಧಾಕರ್

  • ರಾಜ್ಯದಲ್ಲಿಂದು 11,698 ಮಂದಿಗೆ ಕೊರೊನಾ – ಬೆಂಗಳೂರಲ್ಲಿ ಒಂದೇ ದಿನ 146 ಓಮಿಕ್ರಾನ್‌ ಪ್ರಕರಣ ದೃಢ

    ರಾಜ್ಯದಲ್ಲಿಂದು 11,698 ಮಂದಿಗೆ ಕೊರೊನಾ – ಬೆಂಗಳೂರಲ್ಲಿ ಒಂದೇ ದಿನ 146 ಓಮಿಕ್ರಾನ್‌ ಪ್ರಕರಣ ದೃಢ

    ಬೆಂಗಳೂರು: ರಾಜ್ಯದಲ್ಲಿ ಇಂದು 11,698 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಅಲ್ಲದೇ ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 146 ಹೊಸ ಓಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.

    ಆರೋಗ್ಯ ಇಲಾಖೆ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 4 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಂದಿನಿಂದ ಬೂಸ್ಟರ್ ಡೋಸ್ – ಯಾರು ಪಡೆಯಬಹುದು? ಅರ್ಹತೆ ಏನು?

    ರಾಜ್ಯಾದ್ಯಂತ ಇಂದು 1,148 ಸೋಂಕಿತರು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 60,148 ಸಕ್ರಿಯ ಪ್ರಕರಣಗಳಿವೆ. ಇಂದು ಕೋವಿಡ್‌ ಪಾಸಿಟಿವಿಟಿ ದರ ಶೇ.7.77ಕ್ಕೆ ಏರಿದೆ.

    ರಾಜ್ಯದಲ್ಲಿ ಓಮಿಕ್ರಾನ್‌ ಪ್ರಕರಣಗಳ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌, ಬೆಂಗಳೂರಿನಲ್ಲಿ ಇಂದು 146 ಹೊಸ ಓಮಿಕ್ರಾನ್‌ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಒಟ್ಟು ಓಮಿಕ್ರಾನ್‌ ಪೀಡಿತರ ಸಂಖ್ಯೆ 479ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೊರೊನಾ ಪಾಸಿಟಿವ್

    ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 7, ಬಳ್ಳಾರಿ 93, ಬೆಳಗಾವಿ 129, ಬೆಂಗಳೂರು ಗ್ರಾಮಾಂತರ 143, ಬೆಂಗಳೂರು ನಗರ 9221, ಬೀದರ್ 37, ಚಾಮರಾಜನಗರ 40, ಚಿಕ್ಕಬಳ್ಳಾಪುರ 53, ಚಿಕ್ಕಮಗಳೂರು 43, ಚಿತ್ರದುರ್ಗ 27, ದಕ್ಷಿಣ ಕನ್ನಡ 176, ದಾವಣಗೆರೆ 22, ಧಾರವಾಡ 144, ಗದಗ 16, ಹಾಸನ 171, ಹಾವೇರಿ 0, ಕಲಬುರಗಿ 88, ಕೊಡಗು 23, ಕೋಲಾರ 65, ಕೊಪ್ಪಳ 7, ಮಂಡ್ಯ 306, ಮೈಸೂರು 309, ರಾಯಚೂರು 4, ರಾಮನಗರ 8, ಶಿವಮೊಗ್ಗ 75, ತುಮಕೂರು 139, ಉಡುಪಿ 219, ಉತ್ತರ ಕನ್ನಡ 100, ವಿಜಯಪುರ 28 ಹಾಗೂ ಯಾದಗಿರಿಯಲ್ಲಿ 5 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

  • ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ: ಸುಧಾಕರ್‌

    ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ: ಸುಧಾಕರ್‌

    ಬೆಂಗಳೂರು: ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಪಡೆದವರಿಗೆ ಗ್ರೀನ್‌ ಪಾಸ್‌ ಅಥವಾ ಯೂನಿವರ್ಸಲ್‌ ಪಾಸ್‌ ಕೊಡುವ ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಡೋಸ್‌ ಲಸಿಕೆ ಪಡೆದವರಿಗೆ ಗ್ರೀನ್‌ ಪಾಸ್‌, ಯೂನಿವರ್ಸಲ್‌ ಪಾಸ್‌ ಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬಸ್‌ಗಳಲ್ಲಿ ಪ್ರಯಾಣ ಅಥವಾ ಹೋಟೆಲ್‌, ರೆಸ್ಟೋರೆಂಟ್‌ ಪ್ರವೇಶ ಹಾಗೂ ಇತರೆ ಅನುಮತಿಗಳಿಗಾಗಿ ಈ ಪಾಸ್‌ಗಳು ಮುಖ್ಯವಾಗಲಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿದೇಶಗಳಿಂದ ವಾಪಸ್ಸಾಗುವ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್‌ ಕಡ್ಡಾಯ

    ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ. ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯ ಕುರಿತು ಸಭೆ ಮಾಡಲಾಗಿದೆ. ಕಳೆದ ಎರಡು ಅಲೆಗಳ ವೇಳೆ ಅನುಭವ ಪಡೆದ ಅಧಿಕಾರಿಗಳು ಈ ಬಾರಿ ಯಾವುದೇ ಲೋಪ ಆಗದಂತೆ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ.

    ವಿಶ್ವ ಆರೋಗ್ಯ ಸಂಸ್ಥೆ, ಓಮಿಕ್ರಾನ್ ವಿಶ್ವದಲ್ಲಿ ಅತೀ ವೇಗವಾಗಿ ಹರಡುವ ಪ್ರಭೇದ ಎಂದು ತಿಳಿಸಿದೆ. ಡೆಲ್ಟಾ ಪ್ರಭೇದದ ರೋಗ ತೀವ್ರತೆ ಹೆಚ್ಚು, ಒಮಿಕ್ರಾನ್ ತೀವ್ರತೆ ಕಡಿಮೆ. ಎರಡು ಡೋಸ್ ಲಸಿಕೆ ಪಡೆದರೆ ಒಮಿಕ್ರಾನ್‌ನಿಂದ ತೀವ್ರತರಹ ವ್ಯಾಧಿ ಉಲ್ಬಣವಾಗುವುದಿಲ್ಲ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸೆಲ್ಫ್ ಕೋವಿಡ್ ಟೆಸ್ಟಿಂಗ್ ಮಾಡಿಕೊಳ್ಳುವವರಿಗೆ ಮಾರ್ಗಸೂಚಿ ನೀಡಬೇಕು: ಡಾ.ವಿಶಾಲ್ ರಾವ್

    ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರೋಗ ಲಕ್ಷಣ ಇರುವವರನ್ನು ಮಾತ್ರ ಪರೀಕ್ಷೆ ಮಾಡಿದರೆ ಸಾಕು. ಆದರೆ ಕರ್ನಾಟಕ ಸರ್ಕಾರ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರ ಪರೀಕ್ಷೆ ಕೂಡ ನಡೆಸಲಿದೆ. 2 ಡೋಸ್ ಲಸಿಕೆ ತೆಗೆದುಕೊಂಡವರಿಗೆ ಗ್ರೀನ್ ಪಾಸ್ ಅಥವಾ ಯೂನಿವರ್ಸಲ್ ಪಾಸ್ ಕೊಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಪ್ರತಿದಿನ ಸಂಜೆ 5 ಗಂಟೆಗೆ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಮನೆಯಲ್ಲಿ ಮೂರು ಪ್ರಕರಣ ಕಂಡು ಬಂದರೆ, ಮೈಕ್ರೋ ಕಂಟೈನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಪಾದಯಾತ್ರೆ ಕೈಬಿಡಿ
    ಮೇಕೆದಾಟು ಪಾದಯಾತ್ರೆಗೆ ನಾವು ವಿರೋಧ ಮಾಡುತ್ತಿಲ್ಲ. ಆದರೆ ಹಿಂದೆ ಆಡಳಿತ ನಡೆಸಿದವರು, ಮುಖ್ಯಮಂತ್ರಿಯಾಗಿದ್ದವರು ಹಾಗೂ ಅಪಾರ ಅನುಭವ ಇರುವವರು ಈ ಬಗ್ಗೆ ಆಲೋಚಿಸಲಿ. ಪ್ರತಿಭಟನೆಗಳು ಪ್ರಜಾಪ್ರಭುತ್ವದ ಭಾಗವಾಗಿದೆ. ಪಾದಯಾತ್ರೆಯನ್ನು ಸ್ವಲ್ಪ ದಿನ ಮುಂದಕ್ಕೆ ಹಾಕಿ. ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಡುವುದು ಕೇವಲ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಸಚಿವ ಡಾ. ಸುಧಾಕರ್ ಧರ್ಮಸ್ಥಳಕ್ಕೆ ಭೇಟಿ

    ಸಚಿವ ಡಾ. ಸುಧಾಕರ್ ಧರ್ಮಸ್ಥಳಕ್ಕೆ ಭೇಟಿ

    ಉಜಿರೆ: ಆರೋಗ್ಯ ಸಚಿವಡಾ. ಸುಧಾಕರ್ ಸಕುಟುಂಬಿಕರಾಗಿ ಗುರುವಾರ ಧರ್ಮಸ್ಥಳಕ್ಕೆ ಬಂದು ಮಂಜುನಾಥ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.

    ಕೊರೋನಾ ಹತೋಟಿಯಲ್ಲಿದೆ: ರಾಜ್ಯದಲ್ಲಿ ಕೊರೋನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೋನಾ ಸಂಪೂರ್ಣ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ಸಲಹೆ ನೀಡಿದರು.

    ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅವರ ಹತ್ತಿರದ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದರು. ಸಚಿವರ ಪತ್ನಿ ಡಾ.ಪ್ರೀತಿ, ಹಾಗೂ ಮಕ್ಕಳಾದ ಸಮನ್ಯು, ಪ್ರದ್ಯುನ್ ಮತ್ತು ಸಾನ್ವಿ ಇದ್ದರು.