Tag: ಆರೋಗ್ಯ ಸೇವೆ

  • ಯಶಸ್ವಿನಿ ಯೋಜನೆಗೆ ಭಾರೀ ಸ್ಪಂದನೆ – ಜನವರಿಯಲ್ಲಿ 1 ಸಾವಿರಕ್ಕೂ ಅಧಿಕ ಸದಸ್ಯರಿಗೆ ಚಿಕಿತ್ಸೆ

    ಯಶಸ್ವಿನಿ ಯೋಜನೆಗೆ ಭಾರೀ ಸ್ಪಂದನೆ – ಜನವರಿಯಲ್ಲಿ 1 ಸಾವಿರಕ್ಕೂ ಅಧಿಕ ಸದಸ್ಯರಿಗೆ ಚಿಕಿತ್ಸೆ

    ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ (Yeshasvini Scheme) ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು 1 ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದಾರೆ. ಈ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ಟಿ ಸೋಮಶೇಖರ್ (ST Somashekhar) ಅವರು ತಿಳಿಸಿದ್ದಾರೆ.

    ಯಶಸ್ವಿನಿ ಯೋಜನೆ ಕುರಿತು ಮಾತನಾಡಿದ ಸಚಿವರು, ಜನವರಿ ಅಂತ್ಯದವರೆಗೆ 30 ಲಕ್ಷ ಸದಸ್ಯರ ಗುರಿಗೆ ಎದುರಾಗಿ 33.10 ಲಕ್ಷ ಸದಸ್ಯರನ್ನು ನೋಂದಾಯಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

    ಸದಸ್ಯರ ನೋಂದಣಿ ಕಾರ್ಯ ಮುಂದುವರಿಯುತ್ತಿರುವುದರ ಜೊತೆಗೆ 27 ಜಿಲ್ಲೆಗಳಲ್ಲಿನ 127 ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಜನವರಿ ಒಂದೇ ತಿಂಗಳಲ್ಲಿ 1,000ಕ್ಕೂ ಹೆಚ್ಚು ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಯಶಸ್ವಿನಿ ಯೋಜನೆಯಡಿ ಇದುವರೆಗೂ ರಾಜ್ಯಾದ್ಯಂತ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ 474 ನೆಟ್‌ವರ್ಕ್ ಆಸ್ಪತ್ರೆಗಳು ಟ್ರಸ್ಟ್‌ನಲ್ಲಿ ನೋಂದಾಯಿಸಿಕೊಂಡಿವೆ. ಜನವರಿ 1ರಿಂದಲೇ ಫಲಾನುಭವಿಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

     

    ಹೃದಯ ಸಂಬಂಧಿ ಕಾಯಿಲೆ, ಕಿವಿ, ಮೂಗು, ಗಂಟಲು ವ್ಯಾದಿಗಳು, ನರ, ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಇತ್ಯಾದಿ ರೋಗಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದಸ್ಯರು ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಹಾಜರುಪಡಿಸಿ 1,650 ಚಿಕಿತ್ಸೆಗಳನ್ನು ನಗದುರಹಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ: ಬೊಮ್ಮಾಯಿ

    ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿಂದಿನ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ದರ ಹೆಚ್ಚಿದ್ದಲ್ಲಿ ಆ ದರವನ್ನು ಅಥವಾ ಪ್ರಸ್ತುತ ಯೋಜನೆಗೆ ಪರಿಗಣಿಸಿರುವ ಆಯುಷ್ಮಾನ್ ಭಾರತ ಚಿಕಿತ್ಸೆ ದರಗಳು ಹೆಚ್ಚಿದ್ದಲ್ಲಿ ಅವುಗಳನ್ನು ಪರಿಗಣಿಸಲು ಆದೇಶವಾಗಿರುತ್ತದೆ. ಅಂದರೆ ಯಾವ ಯೋಜನೆಯಲ್ಲಿ ಹೆಚ್ಚಿನ ದರ ಇರುತ್ತದೆಯೋ ಆ ದರವನ್ನು ಪರಿಗಣಿಸಿ ಆಸ್ಪತ್ರೆಗಳ ಬಿಲ್‌ಗಳನ್ನು ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.

    ನೆಟ್‌ವರ್ಕ್ ಆಸ್ಪತ್ರೆಗಳು ಬಿಲ್ಲುಗಳು ಸಲ್ಲಿಸಿದ 1 ತಿಂಗಳೊಳಗೆ ಅವುಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ಕಂತಿನ ಬಿಲ್ ಅನ್ನು ಫೆಬ್ರವರಿ 15ರೊಳಗೆ ಪಾವತಿ ಮಾಡಲು ಉದ್ದೇಶಿಸಲಾಗಿದೆ. ತದನಂತರ ಮುಂದಿನ ಬಿಲ್‌ಗಳನ್ನು ಪ್ರತಿ ತಿಂಗಳು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಫೆ. 13 ರಿಂದ ಬೆಂಗ್ಳೂರಲ್ಲಿ ಏರ್ ಶೋ – LCA Tejas ಪ್ರಮುಖ ಆಕರ್ಷಣೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಂಬುಲೆನ್ಸ್ ಸೇವೆಗೆ ಹೊಸ ರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಆಡಳಿತಾತ್ಮಕ ಅನುಮೋದನೆ: ಡಾ.ಕೆ.ಸುಧಾಕರ್

    ಅಂಬುಲೆನ್ಸ್ ಸೇವೆಗೆ ಹೊಸ ರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಆಡಳಿತಾತ್ಮಕ ಅನುಮೋದನೆ: ಡಾ.ಕೆ.ಸುಧಾಕರ್

    – ನೂತನ ತಂತ್ರಜ್ಞಾನಗಳ ಮೂಲಕ ಅಂಬುಲೆನ್ಸ್ ಸೇವೆಯ ಪುನಶ್ಚೇತನ

    ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ – 108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ!

    ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನುಗುಣವಾಗಿ ಅಂಬುಲೆನ್ಸ್ ಸೇವೆಯನ್ನು ಉನ್ನತೀಕರಿಸುವ ಅಗತ್ಯತೆ ಕಂಡುಬಂದಿದೆ. ಹೀಗಾಗಿ ಹೊಸ ಮಾದರಿಯ ಅಂಬುಲೆನ್ಸ್ ಸೇವೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆ, ಹೊಸ ಸುಧಾರಣಾ ಕ್ರಮಗಳನ್ನು ಅಂಬುಲೆನ್ಸ್ ಸೇವೆಯಲ್ಲಿ ತರುವ ಉದ್ದೇಶವನ್ನು ಸರ್ಕಾರ ಹೊಂದಿದೆ. ರೋಗಿಯ ಜೀವ ಉಳಿಸಲು ಗೋಲ್ಡನ್ ಅವರ್ ತುಂಬಾ ಮಹತ್ವದ್ದಾಗಿರುತ್ತದೆ. ಈ ಅವಧಿಯಲ್ಲಿ ವ್ಯಕ್ತಿಗೆ ಸರಿಯಾದ ಚಿಕಿತ್ಸೆ ನೀಡಿದರೆ ಆತನ/ಆಕೆಯ ಜೀವ ಉಳಿಯುತ್ತದೆ. ಇಂತಹ ಸೇವೆಯನ್ನು ಸಕಾಲಕ್ಕೆ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿಯೇ ಅಂಬುಲೆನ್ಸ್ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಸರ್ಕಾರ ಮುನ್ನುಡಿ ಬರೆದಿದೆ. ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

    ಸರ್ಕಾರ ಆರೋಗ್ಯ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಆರೋಗ್ಯ ವಲಯವನ್ನು ಎಲ್ಲಾ ಆಯಾಮಗಳಿಂದ ಅಭಿವೃದ್ಧಿಪಡಿಸುವ ಮಹತ್ವಕಾಂಕ್ಷೆ ಹೊಂದಿದೆ. ಈ ಹಿನ್ನೆಲೆಯಲ್ಲಿ, ತುರ್ತು ಆರೋಗ್ಯ ಸೇವೆಗೆ ಹೆಚ್ಚು ಆದ್ಯತೆ ನೀಡಿದ್ದು, ಈಗಾಗಲೇ ತಜ್ಞರ ಸಲಹಾ ಸಮಿತಿ ಹಾಗೂ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆಗಳನ್ನು ನಡೆಸಿತ್ತು. ಆ ಬಳಿಕ ಹೊಸ ತಂತ್ರಜ್ಞಾನದ ಬಳಕೆ ಮತ್ತು ಅಂಬುಲೆನ್ಸ್ ಆಧುನಿಕರಣಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

    ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಪ್ರಕಾರ, ಒಂದು ಲಕ್ಷ ಜನಸಂಖ್ಯೆಗೆ ಒಂದು ಬೇಸಿಕ್ ಲೈಫ್ ಸಪೋರ್ಟ್ (ಬಿ.ಎಲ್.ಎಸ್.) ಅಂಬುಲೆನ್ಸ್ ಮತ್ತು ಪ್ರತಿ 5 ಲಕ್ಷ ಜನಸಂಖ್ಯೆಗೆ ಒಂದು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ( ಎ.ಎಲ್.ಎಸ್) ಆಂಬ್ಯುಲೆನ್ಸ್ ಇರಬೇಕು. ಒಂದು ಆಂಬ್ಯುಲೆನ್ಸ್ 24 ಗಂಟೆಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಪ್ರಕರಣಗಳನ್ನು ನಿರ್ವಹಣೆ ಮಾಡಿದರೆ ಮತ್ತು 120 ಕಿ.ಮೀ. ಗಿಂತ ಹೆಚ್ಚು ದೂರ ಕ್ರಮಿಸಿದರೆ, ಅಂತಹ ಕಡೆ ಮತ್ತೊಂದು ಅಂಬುಲೆನ್ಸ್ ಒದಗಿಸಬೇಕಾಗುತ್ತದೆ. ಈ ಮಾರ್ಗಸೂಚಿಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರುವ ಮಹತ್ವಕಾಂಕ್ಷೆ ಸರ್ಕಾರಕ್ಕಿದೆ. ಹೀಗಾಗಿ ಅಂಬ್ಯುಲೆನ್ಸ್ ಸಂಖ್ಯೆಯನ್ನು ಪ್ರಸ್ತುತದ 710 ರಿಂದ 750 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಪೈಕಿ, 40% ಎ.ಎಲ್.ಎಸ್ ಮತ್ತು 60% ಬಿ.ಎಲ್.ಎಸ್.ಆಗಿರಲಿವೆ. ಸರ್ಕಾರ ಹೊಸದಾಗಿ 380 ಅಂಬುಲೆನ್ಸ್ ಗಳನ್ನು ಖರೀದಿ ಮಾಡಲಿದೆ. ಈ ಪೈಕಿ, 340 ಅಂಬುಲೆನ್ಸ್‌ಗಳ ಹಳೆಯ ಅಂಬುಲೆನ್ಸ್‌ಗಳ ಬದಲಿಯಾಗಿ ಬರಲಿವೆ. ಉಳಿದ 40 ಹೊಸ ಅಂಬುಲೆನ್ಸ್‌ಗಳಾಗಿರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    ಕರೆ ಕೇಂದ್ರದ ಉನ್ನತೀಕರಣ: ಅಂಬುಲೆನ್ಸ್ ಸೇವೆಯಲ್ಲಿ ಕರೆ ಕೇಂದ್ರ ಅಥವಾ ಕಮಾಂಡ್ ಸೆಂಟರ್ ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಹಾಗೂ ಅಂಬುಲೆನ್ಸ್ ಸಿಬ್ಬಂದಿ ನಡುವೆ ಸೇತುವೆಯಂತೆ ಕೆಲಸ ಮಾಡುವ ಈ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕಾಲ್ ಸೆಂಟರ್‍ನ ಸೀಟುಗಳ ಸಂಖ್ಯೆಯನ್ನು 54 ರಿಂದ 75 ಕ್ಕೆ ಏರಿಸಲಾಗುತ್ತದೆ. ಈ ಕಮಾಂಡ್ ಸೆಂಟರ್, ಅಂಬುಲೆನ್ಸ್ ನ ಜಿಪಿಎಸ್ ಟ್ರ್ಯಾಕಿಂಗ್, ಸಿಬ್ಬಂದಿಯ ಬಯೋಮೆಟ್ರಿಕ್ ಹಾಜರಾತಿ, ಅಂಬುಲೆನ್ಸ್ ಸೇವೆಯ ಲೈವ್ ಸ್ಟ್ರೀಮಿಂಗ್, ಆನ್ ಲೈನ್ ಮಾನವ ಸಂಪನ್ಮೂಲ ನಿರ್ವಹಣೆ, ರೋಗಿಗಳ ಆರೈಕೆಯ ಎಲೆಕ್ಟ್ರಾನಿಕ್ ದಾಖಲೆಗಳ ನಿರ್ವಹಣೆ, ಅಹವಾಲು ಸ್ವೀಕಾರ ಮೊದಲಾದ ಹೊಸ ಸೌಲಭ್ಯ ಹೊಂದಲಿದೆ.

    ಹಿಂದೆ ಅಂಬುಲೆನ್ಸ್ ನಿರ್ವಹಣೆ ಮಾಡುವ ಏಜೆನ್ಸಿಯನ್ನು ದರದ ಆಧಾರದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಈಗ ದರ ಹಾಗೂ ಗುಣಮಟ್ಟದ ಕಾರ್ಯನಿರ್ವಹಣೆಯನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗಿದೆ. ಯಾವುದೇ ಸರ್ಕಾರಕ್ಕೆ 6 ವರ್ಷಗಳ ಕಾಲ 100 ಸೀಟುಗಳ ಕಾಲ್ ಸೆಂಟರ್ ಸೇವೆ ಒದಗಿಸಿರುವುದು, ಯಾವುದೇ ಸರ್ಕಾರಕ್ಕೆ 500 ಅಂಬುಲೆನ್ಸ್ ಗಳ ಸೇವೆ ನೀಡಿರುವುದು ಸೇರಿದಂತೆ ಹಲವು ನಿಗದಿತ ಷರತ್ತುಗಳನ್ನು ಹೊಸ ಟೆಂಡರ್ ನಲ್ಲಿ ವಿಧಿಸಲಾಗುತ್ತಿದೆ. ಅಲ್ಲದೆ, ಸೇವೆ ನೀಡುವ ಏಜೆನ್ಸಿಯವರು, ತಂತ್ರಜ್ಞಾನವನ್ನು ಬಳಸಿ ಆಸ್ಪತ್ರೆಗಳನ್ನು ಮ್ಯಾಪ್ ಮಾಡಿರಬೇಕು. ಅಂಬುಲೆನ್ಸ್ ಸೇವೆ ನೀಡುವಾಗ ಅತಿ ಸಮೀಪದ ಆಸ್ಪತ್ರೆಯು ಸ್ವಯಂಚಾಲಿತವಾಗಿ ಆಯ್ಕೆಯಾಗುವಂತಹ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ಷರತ್ತು ವಿಧಿಸಲಾಗುತ್ತದೆ. ಇದರಿಂದ ಸೇವೆಯ ಗುಣಮಟ್ಟದಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.