Tag: ಆರೋಪಿ ದರ್ಶನ್‌

  • ಜೈಲಲ್ಲಿ ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು

    ಜೈಲಲ್ಲಿ ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು

    – ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ
    -ಹಣೆಬರಹದಲ್ಲಿ ಇದ್ದಂಗೆ ಆಗುತ್ತೆ, ಜೈಲಿಗೆ ಬರಬೇಡ ಎಂದು ಪತ್ನಿಗೆ ಹೇಳಿದ ದರ್ಶನ್‌

    ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ (Renukaswamy Case) ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿತರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.

    ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ. ಹಾಸಿಗೆ, ದಿಂಬು ಇಲ್ಲದೇ ಪರದಾಡುವಂತಾಗಿದ್ದು, ಜೈಲಧಿಕಾರಿಗಳ ಮುಂದೆ ಅಂಗಲಾಚಿದರೂ ಕೂಡ ಏನು ಲಾಭವಿಲ್ಲ. ಇನ್ನೂ ಕೂರಲು ಖುರ್ಚಿಯೂ ಇಲ್ಲದೇ ಒದ್ದಾಡುವಂತಾಗಿದೆ. ಜೊತೆಗೆ ದೇಹಕ್ಕೆ ಆಕ್ಟಿವಿಟಿಯಿಲ್ಲದೆ ಕಷ್ಟವಾಗುತ್ತಿದೆ ಎಂದು ವಿಜಯಲಕ್ಷ್ಮಿ ಮುಂದೆ ಸಂಕಷ್ಟ ತೋಡಿಕೊಂಡಿದ್ದಾರೆ.ಇದನ್ನೂ ಓದಿ: ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

    ಇತ್ತ ಪತ್ನಿ ವಿಜಯಲಕ್ಷ್ಮಿ ಜೈಲಿಗೆ ಬರಲು ಕಷ್ಟ ಎದುರಿಸುವಂತಾಗಿದೆ. ಜೈಲಿಗೆ ಬಂದು ಗಂಟೆಗಟ್ಟಲೇ ಕಾದು ಬಳಿಕ ದರ್ಶನ್ ಭೇಟಿಯಾಗಬೇಕು. ಹೀಗಾಗಿ ನಟ ದರ್ಶನ್ ನಮ್ಮ ಹಣೆಬರಹ ಇರೋಹಂಗೆ ಆಗುತ್ತೆ. ನೀನು ಇನ್ಮುಂದೆ ಜೈಲಿಗೆ ಬರಬೇಡ ಎಂದು ಹೇಳಿಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ ಜೈಲಲ್ಲಿ ದರ್ಶನ್ ಕೂಡ ಕಷ್ಟ ಅನುಭವಿಸುತ್ತಿದ್ದು, ಇದನ್ನು ಕಂಡು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

    ಇನ್ನೂ ಪ್ರಕರಣದ ಸಹ ಆರೋಪಿಗಳು ಕೂಡ ದರ್ಶನ್ ವಿರುದ್ಧ ಮುನಿಸಿಕೊಂಡಿದ್ದಾರೆ. ದರ್ಶನ್ ಮಾತು, ಸ್ನೇಹ ಅಷ್ಟಕಷ್ಟೇ ಎನ್ನುತ್ತಿದ್ದಾರೆ.

    ಸುಪ್ರೀಂಕೋರ್ಟ್ ಆದೇಶದ ಬಳಿಕ ಮತ್ತೆ ಜೈಲುಪಾಲಾಗಿರುವ ಡಿ-ಗ್ಯಾಂಗ್‌ನ ಆರೋಪಿಗಳು ಪರದಾಡುವಂತಾಗಿದೆ. ಯಾವುದೇ ರಾಜಾತಿಥ್ಯ ನೀಡುವಂತಿಲ್ಲ. ಸಾಮಾನ್ಯ ಖೈದಿಗಳಂತೆ ಸೌಲಭ್ಯ ನೀಡಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿತ್ತು.ಇದನ್ನೂ ಓದಿ: Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

     

     

  • ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

    ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

    ಬೆಂಗಳೂರು: ಕೋರ್ಟ್ ಆದೇಶದ ಬಳಿಕವೂ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕೋರ್ಟ್ ಸೆ.19ಕ್ಕೆ ಕಾಯ್ದಿರಿಸಿದೆ.

    ಇಂದು (ಸೆ.17) 57ನೇ ಸಿಸಿಹೆಚ್ ಕೋರ್ಟ್ ಕೊಲೆ ಆರೋಪಿ ದರ್ಶನ್ ಪರ ವಕೀಲರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದರು. ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ದರ್ಶನ್‌ಗೆ ನೀಡಿರುವ ಸೌಲಭ್ಯಗಳ ಕುರಿತ ವರದಿಯನ್ನು ಸರ್ಕಾರದ ಪರ ವಕೀಲ ಸಚಿನ್ ಸಲ್ಲಿಕೆ ಮಾಡಿದರು. ಈ ವೇಳೆ ದರ್ಶನ್ ಪರ ವಕೀಲ ಸುನೀಲ್ ವಾದ ಆರಂಭಿಸಿ, ಕೋರ್ಟ್ ಆದೇಶ ಮಾಡಿದರೂ ಕೂಡ ಲಘುವಾಗಿ ಪರಿಗಣಿಸಿದೆ. ಯಾವುದೇ ಸೌಲಭ್ಯಗಳನ್ನು ನೀಡಿಲ್ಲ. ವಿಡಿಯೋ ಕಾಲ್‌ಗೆ ಅವಕಾಶ ನೀಡಲಾಗಿದೆ. ಫೋನ್ ಮಾಡಲು ಕೂಡ ಅವಕಾಶ ನೀಡಲಾಗಿದೆ. ಕಂಬಳಿ, ಚಾಪೆ, ನೀಡಿದ್ದಾರೆ ಅಂತ ಉಲ್ಲೇಖ ಮಾಡಿದ್ದಾರೆ. ಆದರೆ, ನಾವು ಕೇಳಿದ್ದನ್ನು ಕೊಡುತ್ತಿಲ್ಲ. ಕ್ವಾರಂಟೈನ್ ಸೆಲ್ ಅಲ್ಲಿ ಒಂದು ತಿಂಗಳಿಂದ ಇರಿಸಿದ್ದಾರೆ. ಪಾಕಿಸ್ತಾನದ ಆರೋಪಿಗಳಿಗೂ ಕೇರಂ ಗೇಮ್ ಆಡೋಕೆ ಬಿಟ್ಟಿದ್ದಾರೆ. ನಮ್ಮ ಆರೋಪಿಗೆ ಅದನ್ನ ಕೊಡದೆ ಹಿಂಸೆ ನೀಡುತ್ತಿದ್ದಾರೆ ಎಂದರು.ಇದನ್ನೂ ಓದಿ: ಟ್ರೋಲ್‌ ಮಾಡಿದ ಕಿಡಿಗೇಡಿಗಳಿಗೆ ಮಾರ್ಮಿಕ ಉತ್ತರ ನೀಡಿದ ವಿಜಯಲಕ್ಷ್ಮಿ

    ಸರ್ಕಾರದ ಪರ ವಕೀಲ ಸಚಿನ್ ಪ್ರತಿವಾದ ಮಾಡಿ, ಜೈಲ್ ಮ್ಯಾನುಯಲ್ ಹೊರತುಪಡಿಸಿ ಹೆಚ್ಚಿನ ಸೌಲಭ್ಯ ಕೊಟ್ಟಿಲ್ಲ. ಕಂಬಳಿ, ಬ್ಲಾಂಕೇಟ್, ಲೋಟ, ತಟ್ಟೆ ನೀಡಲಾಗಿದೆ. ಬೆಳಗ್ಗೆ 1 ಗಂಟೆ ಹಾಗೂ ಸಂಜೆ 1 ಗಂಟೆ ವಾಕಿಂಗ್‌ಗೆ ಅವಕಾಶ ಮಾಡಿಕೊಡಲಾಗಿದೆ. ಮ್ಯಾನ್ಯುಯಲ್ ಪ್ರಕಾರವೇ ಎಲ್ಲವನ್ನೂ ನೀಡಲಾಗ್ತಿದೆ. ಅದನ್ನು ಹೊರತುಪಡಿಸಿ ಹೆಚ್ಚಿನ ಸೌಲಭ್ಯ ಕೊಟ್ಟಿಲ್ಲ. ಕ್ವಾರಂಟೈನ್ ಅನ್ನೋದು ಇಲ್ಲ ಈಗ ಎಂದು ಹೇಳಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಸೆ.19ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

  • ಜೈಲಿನಲ್ಲಿರೋ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಪ್ರೊಡ್ಯೂಸರ್‌ಗೆ ಬೆದರಿಕೆ ಕೇಸ್‌ಗೆ ಮರುಜೀವ

    ಜೈಲಿನಲ್ಲಿರೋ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಪ್ರೊಡ್ಯೂಸರ್‌ಗೆ ಬೆದರಿಕೆ ಕೇಸ್‌ಗೆ ಮರುಜೀವ

    ಬೆಂಗಳೂರು: ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ (Ballary Central Jail) ಆರೋಪಿ ದರ್ಶನ್‌ಗೆ (Actor Darshan) ಇದೀಗ ಇನ್ನೊಂದು ಸಂಕಷ್ಟ ಎದುರಾಗಿದೆ. ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿದ್ದರೂ ಆಪತ್ತು ತಪ್ಪದಂತೆ ಆಗಿದೆ.ಇದನ್ನೂ ಓದಿ: ಇಸ್ರೇಲ್‌, ಜಗತ್ತಿಗೆ ಇದು ಒಳ್ಳೆಯ ದಿನ: ಹಮಾಸ್‌ ಮುಖ್ಯಸ್ಥನ ಹತ್ಯೆಗೆ ಅಮೆರಿಕ ಸಂತಸ

    ಈ ಹಿಂದೆ `ಭಗವಾನ್ ಶ್ರೀ ಕೃಷ್ಣಾ’ ಎಂಬ ಭರತ್ ನಿರ್ಮಾಣದ ಸಿನಿಮಾದಲ್ಲಿ ಧೃವನ್ ನಾಯಕನಾಗಿ ನಟಿಸುತ್ತಿದ್ದ. 2020ರಲ್ಲಿ ನಿರ್ಮಾಪಕ ಭರತ್ (Producer Bharath) ಸಿನಿಮಾದ ಶೂಟಿಂಗ್ ಶುರು ಮಾಡಿದ್ದ. ಆದರೆ ಕೋವಿಡ್ ಕಾರಣದಿಂದಾಗಿ ಅರ್ಧಕ್ಕೆ ಸಿನಿಮಾ ನಿಂತುಹೋಗಿತ್ತು. ಈ ವಿಚಾರವಾಗಿ ನಟ ಧೃವನ್, ದರ್ಶನ್ ಬಳಿ ಹೋಗಿದ್ದ. ಈ ವೇಳೆ ದರ್ಶನ್‌ನಿಂದ ಭರತ್‌ಗೆ ಕರೆ ಮಾಡಿಸಿದ್ದ. ಆಗ ದರ್ಶನ್ `ನೀನೆ ಇರೋದಿಲ್ಲ’ ಎಂದು ಭರತ್‌ಗೆ ಬೆದರಿಕೆ ಹಾಕಿದ್ದರು.

    ಕೆಂಗೇರಿ ಪೊಲೀಸ್ ಠಾಣೆಯಲ್ಲಿ (Kengeri Police Station) ಸಿನಿಮಾ ವಿಚಾರವಾಗಿ ಧೃವನ್, ನಟ ದರ್ಶನ್ ಬಳಿ ಹೋಗಿ ಬೆದರಿಕೆ ಹಾಕಿಸಿದ್ದಾನೆ ಎಂದು ನಿರ್ಮಾಪಕ ಭರತ್ ದೂರು ದಾಖಲಿಸಿದ್ದರು. 2022ರ ಆ.5 ರಂದು ಧೃವನ್ ಮೇಲೆ ಎನ್‌ಸಿಆರ್ ದಾಖಲಾಗಿತ್ತು. ಆ ವೇಳೆ ಬೆದರಿಕೆ ಹಾಕಿದ್ದ ವಿಚಾರವಾಗಿ ದರ್ಶನ್ ವಿರುದ್ಧ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೆ ದರ್ಶನ್ ಮತ್ತು ಧೃವನ್ ಮೇಲೆ ಕೆಂಗೇರಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಹಾಗೂ ನೋಟಿಸ್ ಕೂಡ ಕೊಟ್ಟಿರಲಿಲ್ಲ.

    ಇದೀಗ ಬೆದರಿಕೆ ಕೇಸ್ ಅಡಿಯಲ್ಲಿ ಆರೋಪಿ ಧೃವನ್ ಅಲಿಯಾಸ್ ಸೂರಜ್ ಕುಮಾರ್, ನಟ ದರ್ಶನ್, ದರ್ಶನ್ ಮ್ಯಾನೇಜರ್ ನಾಗರಾಜ್ ವಿರುದ್ಧ ಮತ್ತೆ ಎನ್‌ಸಿಆರ್ (Non-Cognizable Report) ದಾಖಲಾಗಿದೆ. ಜೈಲಿನಲ್ಲಿದ್ದರೂ ದರ್ಶನ್ ಪರದಾಡುವಂತಹ ಸ್ಥಿತಿ ಎದುರಾಗಿದೆ.ಇದನ್ನೂ ಓದಿ: ರತನ್ ಟಾಟಾ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧಾರ