Tag: ಆರೋಪಿ

  • ಕುಟುಂಬ ಬಲಿಪಡೆದು ದೀಪಾವಳಿ ಆಚರಿಸಿದ ಆರೋಪಿ ಪ್ರವೀಣ್

    ಕುಟುಂಬ ಬಲಿಪಡೆದು ದೀಪಾವಳಿ ಆಚರಿಸಿದ ಆರೋಪಿ ಪ್ರವೀಣ್

    ಉಡುಪಿ: ಒಂದೇ ಕುಟುಂಬದ (Family) ನಾಲ್ವರ ಬರ್ಬರ ಹತ್ಯೆ ಪ್ರಕರಣ ವಿಚಾರಣೆ ನಡೆಯುತ್ತಿದೆ. ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೆಲ ಆತಂಕಕಾರಿ ವಿಚಾರಗಳು ಬೆಳಕಿಗೆ ಬರುತ್ತಿದೆ. ದೀಪಾವಳಿ (Deepavali) ಹಬ್ಬದ ಮುಂಜಾನೆ ಈ ಕೃತ್ಯ ನಡೆದಿದ್ದು, ಘಟನೆಯ ಬಳಿಕ ಆರೋಪಿ ಪ್ರವೀಣ್ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ದೀಪಾವಳಿ ಆಚರಿಸಿದ್ದಾನೆ.

    ಉಡುಪಿ (Udupi) ಜಿಲ್ಲೆ ಹಿಂದೆಂದೂ ಕಂಡರಿಯದ ಬರ್ಬರ ಕೃತ್ಯಕ್ಕೆ ಕಳೆದ ಭಾನುವಾರ ಸಾಕ್ಷಿಯಾಗಿತ್ತು. ಘಟನೆ ನಡೆದು ಮೂರನೇ ದಿನಕ್ಕೆ ಪೊಲೀಸರು ಆರೋಪಿಯ ಹೆಡೆಮುರಿ ಕಟ್ಟಿದ್ದರು. ನ್ಯಾಯಾಲಯದ ಮೂಲಕ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಸಾಕಷ್ಟು ಮಾಹಿತಿಗಳು ಸಿಗುತ್ತಿದೆ. ಭಾನುವಾರ ಬೆಳಗ್ಗೆ 9:30 ರಿಂದ 10 ಗಂಟೆಯ ನಡುವೆ ದುಷ್ಕೃತ್ಯ ಎಸಗಿದ ಆರೋಪಿ, ಎರಡು ಬೈಕ್, ಆಟೋರಿಕ್ಷಾ, ಬಸ್ ಮೂಲಕ ಉಡುಪಿ ಜಿಲ್ಲೆಯಿಂದ ಕಾಲ್ಕಿತ್ತಿದ್ದಾನೆ. ಇದನ್ನೂ ಓದಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

    ಕುಟುಂಬ ಬಲಿ ಪಡೆದ ಬಳಿಕ ಮಹಾರಾಷ್ಟ್ರ (Maharashtra) ಮೂಲದ ಪ್ರವೀಣ್ ಅರುಣ್ ಚೌಗಲೆ ಮುಖಕ್ಕೆ ಮಾಸ್ಕ್ ಹಾಕಿ, ಬಟ್ಟೆ ಬದಲಿಸಿಕೊಂಡು ಮನೆ ಸೇರಿದ್ದಾನೆ. ಮನೆಯಿಂದ ಒಬ್ಬನೇ ಹೊರಗೆ ಬಂದು ಕೈಗೆ ಆಗಿದ್ದ ಗಾಯಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾನೆ. ನಾಲ್ವರಿಗೆ ಚಾಕು ಇರಿತ ಮಾಡುವ ಸಂದರ್ಭದಲ್ಲಿ ಆರೋಪಿಯ ಕೈ ಬೆರಳುಗಳು ಗಾಯಗೊಂಡಿದ್ದವು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಪ್ರವೀಣ್ ಚೌಗಲೆ ಕುಟುಂಬದವರನ್ನು ಕರೆದುಕೊಂಡು ಹೊರಗೆ ಹೋಗಿದ್ದಾನೆ. ಮರುದಿನ ಅಂದರೆ ಸೋಮವಾರ ತನ್ನ ಕಾರಿನಲ್ಲಿ ಮಂಗಳೂರಿನಿಂದ ಹೊರಟು ಬೆಳಗಾವಿಗೆ ತಲುಪಿದ್ದಾನೆ. ಮೂರು ದಿನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ ಆರೋಪಿ ಬೆಳಗಾವಿ ತಲುಪಿದ ನಂತರ ಫೋನನ್ನು ಆನ್ ಮಾಡಿದ್ದಾನೆ. ಆ ಹೊತ್ತಿಗಾಗಲೇ ಪೊಲೀಸರಿಗೆ ಆರೋಪಿಯ ಬಗ್ಗೆ ಸುಳಿವು ಸಿಕ್ಕಿತ್ತು. ಬೆಳಗಾವಿ ಕುಡುಚಿ ಪೊಲೀಸರ ಸಹಾಯ ಪಡೆದು ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ

    ಘಟನೆ ನಡೆದ ದಿನ ಮತ್ತು ಮುಂದಿನ ಎರಡು ದಿನ ಆತನ ಚಲನವಲನಗಳ ಬಗ್ಗೆ ಆರೋಪಿ ಮಾಹಿತಿ ನೀಡಿದ್ದಾನೆ. ನಾಲ್ವರ ಹತ್ಯೆಗೈದರೂ ಏನೂ ಸಂಶಯ ಬಾರದ ರೀತಿಯಲ್ಲಿ ಆರೋಪಿ ಪ್ರವೀಣ್ ಕುಟುಂಬ, ಸಂಬಂಧಿಕರು, ಆಪ್ತರ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾನೆ. ಜೊತೆಗಿದ್ದ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ನಡೆದುಕೊಂಡಿದ್ದಾನೆ. ಉಡುಪಿಯಲ್ಲಿ ಮೃಗೀಯ ವರ್ತನೆ ತೋರಿದಾತ ಏನೂ ನಡೆಯದಂತೆ ನಡೆದುಕೊಂಡಿರುವುದಾಗಿ ತಾನೇ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಫ್ಯಾಶನ್ ಬಳೆ ತೊಟ್ಟಿದ್ದಕ್ಕೆ ಪತ್ನಿಗೆ ಬೆಲ್ಟ್‌ನಲ್ಲಿ ಥಳಿಸಿದ ಪತಿ!

  • ತಾನೇ ಕೊಲೆ ಮಾಡಿರುವುದಾಗಿ ತಪೊಪ್ಪಿಕೊಂಡ ಪ್ರವೀಣ್ – ಕೊಲೆಗೆ ಮೂರು ಕಾರಣ ಎಂದ ಆರೋಪಿ

    ತಾನೇ ಕೊಲೆ ಮಾಡಿರುವುದಾಗಿ ತಪೊಪ್ಪಿಕೊಂಡ ಪ್ರವೀಣ್ – ಕೊಲೆಗೆ ಮೂರು ಕಾರಣ ಎಂದ ಆರೋಪಿ

    ಉಡುಪಿ: ಉಡುಪಿಯಲ್ಲಿ (Udupi) ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಉಡುಪಿ ಎಸ್‌ಪಿ ಡಾ.ಅರುಣ್ ಕೆ (Arun K) ಹೇಳಿಕೆ ನೀಡಿದ್ದಾರೆ.

    ಪ್ರಕರಣದ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಪ್ರವೀಣ್ ಚೌಗಲೆ ಕೊಲೆಯನ್ನು ಒಪ್ಪಿಕೊಂಡಿದ್ದಾರೆ. ಕೊಲೆಗೆ ಕಾರಣವನ್ನು ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾನೆ. ಅವನ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು. ತಪ್ಪಿಸಿಕೊಳ್ಳಲು ಎಲ್ಲರನ್ನೂ ಕೊಲೆ ಮಾಡಿದ್ದಾನೆ. ಕೊಲೆ ಸಾಕ್ಷಿ ನಾಶ ಮಾಡಲು ಮೂವರ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆ ಮಾಡಲು ಮೂರು ನಾಲ್ಕು ಕಾರಣ ಇರುವ ಸಾಧ್ಯತೆಗಳಿವೆ. ತನಿಖೆಯಿಂದ ಸಂಪೂರ್ಣ ಮಾಹಿತಿ ಸಿಗಲಿದೆ ಎಂದರು. ಇದನ್ನೂ ಓದಿ: ಕೆಇಎ ಪರೀಕ್ಷೆಯಲ್ಲಿ ಹಿಜಬ್ ಧರಿಸಲು ಅವಕಾಶ – ಸರ್ಕಾರದ ನಡೆಗೆ ಭಾರೀ ಆಕ್ರೋಶ

    ಅಯ್ನಾಝ್ ಮತ್ತು ಪ್ರವೀಣ್ ಇಬ್ಬರು ಸಹೋದ್ಯೋಗಿಗಳಾಗಿದ್ದರು. ಆರೋಪಿ ಪ್ರವೀಣ್ ಚೌಗಲೆಗೆ ಬೇರೆ ಯುವತಿ ಜೊತೆ ಮದುವೆಯಾಗಿತ್ತು. ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ಕೋರ್ಟ್ಗೆ ಇವತ್ತೇ ಹಾಜರು ಮಾಡುತ್ತೇವೆ. ಕುಟುಂಬ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಕೊಲೆಗೆ ಕಾರಣ ಏನು ಎಂಬುದು ಪ್ರಮುಖ. ಅಯ್ನಾಝ್ ಮತ್ತು ಪ್ರವೀಣ್ ಚೌಗಲೆ ನಡುವಿನ ಸಂಬಂಧಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸೋಮಶೇಖರ್ ನಮಗೆ ಬಹಳ ವಿಶೇಷ, ನಾವಿಬ್ರು ಸ್ನೇಹಿತರು: ಜಿ ಪರಮೇಶ್ವರ್

  • ಮಾಲ್‌ನಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆ – ಆರೋಪಿ ಕೋರ್ಟ್‌ಗೆ ಶರಣು

    ಮಾಲ್‌ನಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆ – ಆರೋಪಿ ಕೋರ್ಟ್‌ಗೆ ಶರಣು

    ಬೆಂಗಳೂರು: ಪ್ರತಿಷ್ಠಿತ ಮಾಲ್‌ವೊಂದರಲ್ಲಿ (Mall) ವ್ಯಕ್ತಿಯೋರ್ವ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ವತ: ಕೋರ್ಟ್ (Court) ಮುಂದೆ ಸರೆಂಡರ್ (Surrender) ಆಗಿದ್ದಾನೆ.

    ಅಶ್ವಥ್ ನಾರಾಯಣ್ (60) ನ್ಯಾಯಾಲಯದ ಮುಂದೆ ಶರಣಾದ ಆರೋಪಿ. ಈತ ಬೆಂಗಳೂರಿನ (Bengaluru) ಮಾಲ್‌ವೊಂದರಲ್ಲಿ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದು, ಯಶವಂತ್ ಎಂಬವರು ಅದನ್ನು ವಿಡಿಯೋ ಮಾಡಿದ್ದರು. ವಿಡಿಯೋ ಆಧಾರದ ಮೇಲೆ ಪೊಲೀಸರು ಆರೋಪಿಯ ಗುರುತನ್ನು ಪತ್ತೆಹಚ್ಚಿದ್ದರು. ಐಪಿಸಿ ಸೆಕ್ಷನ್ 354 ಎ, 294, 509 ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ಹಾಸನ ಕಾಲೇಜಿನ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

    ಘಟನೆಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇಂದು ಆರೋಪಿ ಅಶ್ವಥ್ ನಾರಾಯಣ್ ಎಸಿಎಂಎಂ 2ರ ನ್ಯಾಯಾಧೀಶರ ಮುಂದೆ ಸರೆಂಡರ್ ಆಗಿದ್ದು, ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿ ಪರ ಹಿರಿಯ ವಕೀಲ ಕೆಎನ್ ಶಶಿಧರ್ ವಾದ ಮಂಡಿಸಿದರು. ಇದನ್ನೂ ಓದಿ: ನಡೆದುಕೊಂಡು ಹೋಗ್ತಿದ್ದ ಇಬ್ಬರ ಮೇಲೆ ಹರಿದ ಬೈಕ್- ಸವಾರ, ಪಾದಾಚಾರಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಲೆ ಗಗನಕ್ಕೇರಿರೋ ಟೊಮೆಟೋ, ಮೆಣಸಿನಕಾಯಿ ಕಾಯ್ತಿದ್ದ ವ್ಯಕ್ತಿಗೆ ಚಾಕು ಇರಿತ

    ಬೆಲೆ ಗಗನಕ್ಕೇರಿರೋ ಟೊಮೆಟೋ, ಮೆಣಸಿನಕಾಯಿ ಕಾಯ್ತಿದ್ದ ವ್ಯಕ್ತಿಗೆ ಚಾಕು ಇರಿತ

    ರಾಯಚೂರು: ಟೊಮೆಟೋ (Tomato), ಮೆಣಸಿನಕಾಯಿ ಬೆಲೆ ಗಗನಕ್ಕೇರಿರುವುದರಿಂದ ದನು ಕಾವಲು ಕಾಯ್ತಿದ್ದ ವ್ಯಕ್ತಿಗೆ ಚಾಕು ಇರಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

    ಗಾಯಗೊಂಡವನನ್ನು ರಫಿ ಎಂದು ಗುರುತಿಸಲಾಗಿದ್ದು, ಈತನಿಗೆ ಅಬ್ದುಲ್ ರೌಫ್ ಚಾಕು ಇರಿದಿದ್ದಾನೆ. ಜಿಲ್ಲೆಯ ಮಾನ್ವಿ ಪಟ್ಟಣದ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಕಾವಲಿಗೆ ರಾತ್ರಿವೇಳೆ ಮಲಗಿದ್ದ ವ್ಯಕ್ತಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಘಟನೆ ನಡೆದಿದೆ.

    ಮಾರುಕಟ್ಟೆಯಲ್ಲಿ ಟೊಮೆಟೋ, ಮೆಣಸಿನಕಾಯಿ ಬೆಲೆ ಗಗನಕ್ಕೇರಿರುವುದರಿಂದ ತರಕಾರಿ ಕಾಯಲು ರಫಿ ತಳ್ಳುವ ಬಂಡಿಯಲ್ಲೇ ಮಲಗಿದ್ದ. ಈ ವೇಳೆ ಅಲ್ಲಿಗೆ ಬೀಡಿ ಕೇಳುವ ನೆಪದಲ್ಲಿ ಬಂದ ಅಬ್ದುಲ್ ರೌಫ್ ಮಲಗಿದ್ದ ರಫಿಯನ್ನ ಎಬ್ಬಿಸಿದ್ದಾನೆ. ಬೀಡಿ ಕೊಡದ ಹಿನ್ನೆಲೆ ಮೊಬೈಲ್ ಕೇಳಿದ್ದಾನೆ, ಮೊಬೈಲ್ ಸಹ ಕೊಡದ ಹಿನ್ನೆಲೆ ಮದ್ಯಪಾನದ ಅಮಲಿನಲ್ಲಿ ಕುತ್ತಿಗೆ ಭಾಗಕ್ಕೆ ಚಾಕು ಹಾಕಿ ಸ್ಥಳದಿಂದ ಓಡಿಹೋಗಿದ್ದ. ಇದನ್ನೂ ಓದಿ: 4 ದಿನಗಳ ಅಂತರದಲ್ಲಿ 2ನೇ ಪ್ರಕರಣ ಬಯಲಿಗೆ – ಗರ್ಭಿಣಿ, ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಣೆ

    ಗಾಯಾಳು ರಫಿಗೆ ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾನೆ. ಚಾಕು ಇರಿತದ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ (Manvi Police Station) ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮದುವೆ – ಖತರ್ನಾಕ್‌ ಕಿಲಾಡಿ ಅರೆಸ್ಟ್‌

    ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮದುವೆ – ಖತರ್ನಾಕ್‌ ಕಿಲಾಡಿ ಅರೆಸ್ಟ್‌

    ಮೈಸೂರು: ವಿಧವೆಯರು, ಅವಿವಾಹಿತರಿಗೆ ಆನ್‌ಲೈನ್‌ನಲ್ಲಿ (Online Matrimony) ಗಾಳ ಹಾಕಿ ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮಹಿಳೆಯರ ಜೊತೆ ಮದುವೆಯಾಗಿ, ಹಣ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್ ಕಿಲಾಡಿಯನ್ನ ಮೈಸೂರಿನ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಬಂಧಿತ ಆರೋಪಿ. ಬಂಧಿತನಿಂದ 2 ಲಕ್ಷ ನಗದು, 2 ಕಾರ್, ಒಂದು ಬ್ರೇಸ್‌ಲೈಟ್‌, ಒಂದು ಉಂಗುರ, 2 ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್‌ಗಳನ್ನ ವಶ ಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಅಶ್ಲೀಲ ವೀಡಿಯೋ ಕಳಿಸಿ ಪಾಕಿಸ್ತಾನಿ ಏಜೆಂಟ್‌ನನ್ನ ಫ್ರೆಂಡ್‌ ಮಾಡ್ಕೊಂಡಿದ್ದ DRDO ವಿಜ್ಞಾನಿ!

    ಮಹೇಶ್‌ ಸಿಕ್ಕಿಬಿದ್ದದ್ದು ಹೇಗೆ?
    ಆರೋಪಿ ಮಹೇಶ್‌ ಮೈಸೂರಿನ ನಿವಾಸಿ ಹೇಮಲತಾ ಎಂಬವರಿಗೆ ತಾನು ಡಾಕ್ಟರ್ ಎಂದು ಹೇಳಿಕೊಂಡು ಮೋಸ ಮಾಡಿದ್ದ. ಆನ್‌ಲೈನ್‌ ಮ್ಯಾಟ್ರೋಮೊನಿ ವೇದಿಕೆಯಲ್ಲಿ ಪರಿಚಯಿಸಿಕೊಂಡು ನಂಬಿಸಿ ವಿಶಾಖಪಟ್ಟಣದಲ್ಲಿ ಮದುವೆ ಮಾಡಿಕೊಂಡಿದ್ದ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿದ್ದ ವೇಳೆ ಮತಪೆಟ್ಟಿಗೆಯನ್ನೇ ಹೊತ್ತೊಯ್ದ ಯುವಕ

    ಕ್ಲಿನಿಕ್ ತೆರೆಯಬೇಕೆಂದು 70 ಲಕ್ಷ ಸಾಲ ಕೊಡಿಸುವಂತೆ ಮಹೇಶ್ ಹೇಮಲತಗೆ ಒತ್ತಾಯ ಹೇರಿದ್ದ, ಸಾಲ ಕೊಡಿಸಲು ಹೇಮಲತಾ ಹಿಂದೇಟು ಹಾಕಿದ್ದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ 15 ಲಕ್ಷ ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಹೇಮಲತಾ ಮೈಸೂರಿನ ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದರು.

    ದೂರು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿ ಮಹೇಶ್ ಹೆಡೆಮುರಿ ಕಟ್ಟಿ ವಿಚಾರಣೆಗೆ ಒಳಪಡಿಸಿದ್ದಾಗ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದು ಹೇಳಿಕೊಂಡು ಮೋಸ ಮಾಡಿರೋದು ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 15 ಮಹಿಳೆಯರಿಗೆ ದೋಖಾ ಮಾಡಿರುವುದು ತನಿಖೆ ವೇಳೆ ಬಯಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಣ್ಣೆ ಏಟಲ್ಲಿ ಭಂಡ ಧೈರ್ಯದಿಂದ ಮೂರು ದಶಕದ ಹಿಂದಿನ ಕೊಲೆ ರಹಸ್ಯ ಬಾಯ್ಬಿಟ್ಟ!

    ಎಣ್ಣೆ ಏಟಲ್ಲಿ ಭಂಡ ಧೈರ್ಯದಿಂದ ಮೂರು ದಶಕದ ಹಿಂದಿನ ಕೊಲೆ ರಹಸ್ಯ ಬಾಯ್ಬಿಟ್ಟ!

    ಮುಂಬೈ: ವ್ಯಕ್ತಿಯೊಬ್ಬ ಎಣ್ಣೆ (Alcohol) ಏಟಲ್ಲಿ ತಾನು ಮೂರು ದಶಕಗಳ ಹಿಂದೆ ಮಾಡಿದ ಜೋಡಿ ಕೊಲೆ ಹಾಗೂ ಸುಲಿಗೆ ಕುರಿತು ಬಾಯ್ಬಿಟ್ಟ ಅಚ್ಚರಿಯ ಪ್ರಸಂಗವೊಂದು ಮುಂಬೈನಲ್ಲಿ ನಡೆದಿದೆ.

    ವ್ಯಕ್ತಿಯನ್ನು ಅವಿನಾಶ್ ಪವಾರ್(49) ಎಂದು ಗುರುತಿಸಲಾಗಿದೆ. ಸದ್ಯ ಈತನನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು (Mumbai Crime Branch Police) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಕುಡಿದ ಮತ್ತಲ್ಲಿ ಸತ್ಯ ಕಕ್ಕಿದ!: ಸ್ನೇಹಿತರ ಜೊತೆ ಪಾರ್ಟಿ ಮಾಡುವ ವೇಳೆ ಅವಿನಾಶ್ ಕಂಠಪೂರ್ತಿ ಕುಡಿದಿದ್ದನು. ತಾನು ಪೊಲೀಸರ ಕೈಗೆ ಸಿಕ್ಕಿ ಬೀಳುವುದಿಲ್ಲ ಎಂಬ ಭಂಡ ಧೈರ್ಯದ ಮೇಲೆ 30 ವರ್ಷಗಳ ಹಿಂದೆ ಮಾಡಿದ್ದ ತಾನು ಜೋಡಿ ಕೊಲೆ ಹಾಗೂ ಸುಲಿಗೆಯ ಬಗ್ಗೆ ಹೇಳಿಕೊಂಡಿದ್ದಾನೆ. ಇದನ್ನು ಕೇಳಿಸಿಕೊಂಡ ಆಪ್ತನೋರ್ವ ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿ ದಯಾ ನಾಯಕ್ ಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಅವಿನಾಶ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ಪ್ರಕರಣದ ಕುರಿತು ಮುಂಬೈ ಕ್ರೈಂ ಬ್ರಾಂಚ್ ಡಿಸಿಪಿ ರಾಜ್ ತಿಲಕ್ ರೋಶನ್ ಪ್ರತಿಕ್ರಿಯಿಸಿ, ಬಂಧಿತ ಆರೋಪಿ 30 ವರ್ಷಗಳ ಹಿಂದೆ ಕೊಲೆಯಾದ ದಂಪತಿ ಮನೆಯ ಸ್ವಲ್ಪ ದೂರದಲ್ಲಿ ಅಂಗಡಿ ನಡೆಸುತ್ತಿದ್ದನು. ದಂಪತಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿ ತನ್ನ ಹೆಸರನ್ನು ಕೂಡ ಬದಲಾಯಿಸಿಕೊಂಡಿದ್ದನು. ಇದೀಗ ಕುಡಿದ ಮತ್ತಿನಲ್ಲಿ ಆತ ಕೊಲೆ ಹಾಗೂ ಸುಲಿಗೆ ಮಾಡಿದ ವಿಚಾರವನ್ನು ಬಾಯ್ಬಿಟ್ಟಿದ್ದಾನೆ. ಈ ಬಗ್ಗೆ ನಮಗೆ ಅವನ ಆಪ್ತರು ತಿಳಿಸಿದರು. ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದರು. ಇದನ್ನೂ ಓದಿ: ಹೆಡ್‍ಕಾನ್ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

    ದಂಪತಿ ಕೊಲೆ: 1993ರ ಅಕ್ಟೋಬರ್ ತಿಂಗಳಲ್ಲಿ ಪುಣೆಯ ಲೋನಾವಾಲಾದಲ್ಲಿರುವ ಮನೆಯೊಂದರಲ್ಲಿ ಅವಿನಾಶ್ ಪವಾರ್ ಹಾಗೂ ಆತನ ಇಬ್ಬರು ಸ್ನೇಹಿತರು ಕಳ್ಳತನ ಮಾಡುವ ಸಂದರ್ಭದಲ್ಲಿ ದಂಪತಿಯನ್ನು ಕೊಲೆ ಮಾಡಿದ್ದರು. ಬಳಿಕ ಪೊಲೀಸರು ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಅವಿನಾಶ್ ಮಾತ್ರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿದ್ದ. ಕೆಲ ವರ್ಷಗಳ ಬಳಿಕ ಮಹಾರಾಷ್ಟ್ರದ ಔರಂಗಬಾದ್‍ಗೆ ಮರಳಿದ ಈತ, ಅಮಿತ್ ಪವಾರ್ ಎಂಬ ಹೆಸರಲ್ಲಿ ಚಾಲನಾ ಪರವಾನಗಿಯನ್ನು ಪಡೆದನು. ನಂತರ ಮಹಾರಾಷ್ಟ್ರದಲ್ಲಿ ನಗರದಿಂದ ನಗರಕ್ಕೆ ವಲಸೆ ಹೋಗುತ್ತಾ ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ ಬಂದು ನೆಲೆಸಿದ್ದನು.

  • ಬೆಂಗ್ಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – 24 ಯುವತಿಯರ ರಕ್ಷಣೆ, 9 ಮಂದಿ ಅರೆಸ್ಟ್

    ಬೆಂಗ್ಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – 24 ಯುವತಿಯರ ರಕ್ಷಣೆ, 9 ಮಂದಿ ಅರೆಸ್ಟ್

    ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ. 24 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಮಂದಿಯನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.

    ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ (Jnanabharathi Police Station) ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

    ಆರೋಪಿಗಳು (Accused) ಕೆಲಸ ಕೊಡಿಸುವ ನೆಪದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಯುವತಿಯರನ್ನ ಕರೆತಂದು ಅಪಾರ್ಟ್ಮೆಂಟ್ ನಲ್ಲಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಇದನ್ನೂ ಓದಿ: ಮದ್ವೆಯಾಗಿ ಮುಚ್ಚಿಟ್ಟಿದ್ದರು – ಡೆಡ್ಲಿ ಮರ್ಡರ್ ತನಿಖೆ ವೇಳೆ ಸ್ಫೋಟಕ ರಹಸ್ಯ ಬಯಲು

    ಈ ಕುರಿತು ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. 
  • ಕೊಲೆ ಆರೋಪಿಗಳ ಜಮೀನಿಗೆ ನುಗ್ಗಿದ ಬುಲ್ಡೋಜರ್ – ಬೆಳೆಗಳು ನೆಲಸಮ

    ಕೊಲೆ ಆರೋಪಿಗಳ ಜಮೀನಿಗೆ ನುಗ್ಗಿದ ಬುಲ್ಡೋಜರ್ – ಬೆಳೆಗಳು ನೆಲಸಮ

    ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಮತ್ತೆ ಬುಲ್ಡೋಜರ್ (Bulldozer) ಸದ್ದು ಮಾಡಿದ್ದು, ಕೊಲೆ ಆರೋಪಿಗಳಿಗೆ ಸೇರಿದ್ದ ಬೆಳೆದ ಬೆಳೆಗಳನ್ನು ನೆಲಸಮ ಮಾಡಲಾಗಿದೆ.

    ಜಹರ್ ಸಿಂಗ್, ಉಮೈದ್ ಸಿಂಗ್, ಮಖನ್ ಸಿಂಗ್, ಅರ್ಜುನ್ ಸಿಂಗ್ 2 ವಾರಗಳ ಹಿಂದೆ ನಡೆದ ಕೊಲೆಯಲ್ಲಿ ಮುಖ್ಯ ಆರೋಪಿಗಳಾಗಿದ್ದರು. ಈ ಆರೋಪಿಗಳು (Accused) ದಾಮೋಹ್ ಜಿಲ್ಲೆಯಲ್ಲಿ ಇಬ್ಬರು ವೃದ್ಧರಾದ ಬದ್ರಿ ಶುಕ್ಲಾ (68) ಹಾಗೂ ಆತನ ಸಹೋದರ ರಾಮ್‍ಸೇವಕ್ ಶುಕ್ಲಾ (65) ಅವರನ್ನು ಭೂವಿವಾದಕ್ಕೆ ಸಂಬಂಧಿಸಿ ಗುಂಡಿಕ್ಕಿ ಕೊಲೆ ಮಾಡಿದ್ದರು.

    2021ರಲ್ಲಿ ಬದ್ರಿ ಶುಕ್ಲಾ ಹಾಗೂ ರಾಮ್‍ಸೇವಕ್ 3 ಎಕರೆ ಜಮೀನನ್ನು (Land) ಖರೀದಿಸಿದ್ದರು. ಅಂದಿನಿಂದ ಜಹರ್ ಸಿಂಗ್, ಉಮೈದ್ ಸಿಂಗ್, ಮಖನ್ ಸಿಂಗ್, ಅರ್ಜುನ್ ಸಿಂಗ್‍ನೊಂದಿಗೆ ವಿವಾದ ನಡೆಯುತ್ತಿತ್ತು. ಫೆ. 28ರಂದು ಶುಕ್ಲಾರನ್ನು ಸಿಂಗ್‌ನ ಗುಂಪು ಮನೆಗೆ ಬಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ನಿಮ್ಮ ಪಾಡಿಗೆ ನೀವಿರಿ, ನಮ್ಮ ಪಾಡಿಗೆ ನಾವಿರ್ತೀವಿ: ದಳಪತಿ ವಿರುದ್ಧ ಗುಡುಗಿದ ಶಿವಲಿಂಗೇಗೌಡ

    ಪ್ರಕರಣದ ತನಿಖೆ ನಡೆಸಿದ ಸ್ಥಳೀಯ ಪೊಲೀಸರು ಬುಲ್ಡೋಜರ್ ಅನ್ನು ತಂದು ಸಿಂಗ್‌ಗೆ ಜಮೀನಿನಲ್ಲಿದ್ದ ಬೆಳೆಗಳನ್ನು ನೆಲಸಮ ಮಾಡಿದ್ದಾರೆ. ಜೊತೆಗೆ ಸಿಂಗ್ ಕುಟುಂಬಸ್ಥರು ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಅತ್ಯಾಚಾರಗೈದು ಬಾಲಕಿಯ ಕೊಲೆ- ಕಾಮುಕನಿಗೆ ಗಲ್ಲುಶಿಕ್ಷೆ

  • ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು

    ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು

    ಲಕ್ನೋ: ಬಿಎಸ್‌ಪಿ ನಾಯಕ ರಾಜು ಪಾಲ್ (Raju Pla) ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ (Umesh Pal) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಾರದ ಹಿಂದೆ ಉತ್ತರ ಪ್ರದೇಶದ ಪೊಲೀಸರು (Uttar Pradesh Police) ಆರೋಪಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದರು. ಇದೀಗ ಪೊಲೀಸರು ಮತ್ತೆ ಎನ್‌ಕೌಂಟರ್ (Encounter) ನಡೆಸಿದ್ದು, ಘಟನೆಯಲ್ಲಿ ಮತ್ತೊಬ್ಬ ಆರೋಪಿ ಸಾವನ್ನಪ್ಪಿದ್ದಾನೆ.

    ಉಮೇಶ್ ಪಾಲ್ ಮೇಲೆ ಮೊದಲು ಗುಂಡಿನ ದಾಳಿ ನಡೆಸಿದ್ದ ಅತೀಕ್ ಅಹ್ಮದ್ ಗ್ಯಾಂಗ್‌ನ ಶೂಟರ್ ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿ ಮೇಲೆ ಉತ್ತರ ಪ್ರದೇಶದ ಪೊಲೀಸರು ಭಾನುವಾರ ಪ್ರಯಾಗ್‌ರಾಜ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಆರೋಪಿ ಸಾವನ್ನಪ್ಪಿದ್ದಾನೆ.

    ವರದಿಗಳ ಪ್ರಕಾರ, ಆರೋಪಿ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ನಗರದ ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆತ ಅಲ್ಲಿ ಸಾವನ್ನಪ್ಪಿದ್ದಾನೆ.

    ಘಟನೆಯೇನು?: 2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಕಳೆದ ತಿಂಗಳು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಇದನ್ನೂ ಓದಿ: ಡೆಲಿವರಿಯಾದ ತಕ್ಷಣ ಹೆಣ್ಣು ಶಿಶುವನ್ನು ಕೊಂದ 15ರ ಬಾಲಕಿ

    ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ಇವರಿಬ್ಬರೂ ಸದ್ಯ ಜೈಲಿನಲ್ಲಿದ್ದಾರೆ.

    ಕಳೆದ ವಾರ ಉತ್ತರ ಪ್ರದೇಶದ ಪೊಲೀಸರು ಪ್ರಕರಣದ ಒಬ್ಬ ಆರೋಪಿಯನ್ನು ಗುಂಡಿಕ್ಕಿ ಕೊಂದ ಬಳಿಕ ತನ್ನ ಮೇಲೂ ಎನ್‌ಕೌಂಟರ್ ನಡೆಸಬಹುದು ಎಂದು ಭೀತಿ ವ್ಯಕ್ತಪಡಿಸಿದ್ದ ಅಶ್ರಫ್ ಜೈಲಿನಲ್ಲಿದ್ದುಕೊಂಡೇ ತನ್ನನ್ನು ದಯವಿಟ್ಟು ಜೈಲಿನಿಂದ ಹೊರಗೆ ಕಳುಹಿಸಬೇಡಿ ಎಂದು ಕೋರ್ಟ್‌ಗೆ ಮನವಿ ಸಲ್ಲಿಸಿದ್ದ. ಇದನ್ನೂ ಓದಿ: ದೇವಸ್ಥಾನ ಪ್ರವೇಶ ವಿಚಾರಕ್ಕೆ ಹಲ್ಲೆ- ಕಲ್ಲು ತೂರಾಟ, ಬೈಕ್ ಜಖಂ, 30 ಮಂದಿ ವಿರುದ್ಧ ದೂರು

  • ಧರ್ಮನಿಂದನೆ ಆರೋಪ – ಪಾಕ್ ವ್ಯಕ್ತಿಯನ್ನು ಜೈಲಿನಿಂದ ಎಳೆದೊಯ್ದು ಹತೈಗೈದ ಜನ

    ಧರ್ಮನಿಂದನೆ ಆರೋಪ – ಪಾಕ್ ವ್ಯಕ್ತಿಯನ್ನು ಜೈಲಿನಿಂದ ಎಳೆದೊಯ್ದು ಹತೈಗೈದ ಜನ

    ಇಸ್ಲಾಮಾಬಾದ್: ಧರ್ಮನಿಂದನೆಯ (Blasphemy) ಆರೋಪದಡಿ ಪೊಲೀಸರ ಬಂಧನದಲ್ಲಿದ್ದ ವ್ಯಕ್ತಿಯನ್ನು ಜನಸಮೂಹವೊಂದು ಠಾಣೆಗೆ ನುಗ್ಗಿ, ಆತನನ್ನು ಎಳೆತಂದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಶನಿವಾರ ಪಾಕಿಸ್ತಾನದಲ್ಲಿ (Pakistan) ನಡೆದಿದೆ.

    ಘಟನೆ ನಂಕಾನಾ ಸಾಹಿಬ್ ನಗರದಲ್ಲಿ ನಡೆದಿದೆ. ಮೊಹಮ್ಮದ್ ವಾರಿಸ್ (20) ಮುಸ್ಲಿಮರ ಪವಿತ್ರ ಗ್ರಂಥವಾದ ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾಗಿ ಆರೋಪಿಸಲಾಗಿದ್ದು, ಈ ಹಿನ್ನೆಲೆ ಆತನನ್ನು ಪೊಲೀಸರು ಬಂಧಿಸಿದ್ದರು. ಆದರೆ ಘಟನೆಯಿಂದ ಕೆಂಡಾಮಂಡಲವಾಗಿದ್ದ ಜನರು ಪೊಲೀಸ್ ಠಾಣೆಗೆ ನುಗ್ಗಿ, ಆರೋಪಿ (Accused) ವ್ಯಕ್ತಿಯನ್ನು ಹೊರಗೆಳೆದುಕೊಂಡು ಬಂದಿದ್ದಾರೆ. ಬಳಿಕ ಆತನನ್ನು ಹೊಡೆದು ಬರ್ಬರವಾಗಿ ಕೊಂದಿದ್ದಾರೆ. ನಂತರ ಆತನ ದೇಹಕ್ಕೆ ಬೆಂಕಿ ಹಚ್ಚುವ ಪ್ರಯತ್ನವನ್ನೂ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಠಾಣೆಯಲ್ಲಿ ಬೆರಳೆಣಿಕೆಯಷ್ಟು ಅಧಿಕಾರಿಗಳು ಇದ್ದಿದ್ದರಿಂದ ಜನಸಮೂಹವನ್ನು ಆರಂಭದಲ್ಲಿ ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ವ್ಯಕ್ತಿಯ ಹತ್ಯೆಯಾದ ಬಳಿಕ ಆತನ ಶವವನ್ನು ಜನರು ಸುಡಲು ಮುಂದಾದಾಗ ಅಧಿಕಾರಿಗಳು ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ಪಾಕಿಸ್ತಾನದಲ್ಲಿ ಧರ್ಮನಿಂದನೆಯನ್ನು ಅಪರಾಧ ಎಂದು ಪರಿಗಣಿಸಲಾಗುತ್ತಿದ್ದು, ಆರೋಪಿಗೆ ಮರಣದಂಡನೆಯನ್ನೂ ವಿಧಿಸುವ ಸಾಧ್ಯತೆಯಿರುತ್ತದೆ. ಇಂತಹ ಆರೋಪವುಳ್ಳ ವ್ಯಕ್ತಿಗಳನ್ನು ಸಾರ್ವಜನಿಕವಾಗಿ ಸಾಯಿಸಿರುವಂತಹ ಹಲವು ನಿದರ್ಶನಗಳಿವೆ. 2021ರಲ್ಲಿ ಬಟ್ಟೆ ಫ್ಯಾಕ್ಟರಿಯ ಮ್ಯಾನೆಜರ್ ಆಗಿದ್ದ ಶ್ರೀಲಂಕಾದ ಪ್ರಜೆಯೊಬ್ಬರು ಧರ್ಮನಿಂದನೆಯ ಆರೋಪ ಹೊತ್ತಿದ್ದ ಹಿನ್ನೆಲೆ ಅವರನ್ನು ಜನಸಮೂಹ ಹತ್ಯೆ ನಡೆಸಿತ್ತು. ಇದನ್ನೂ ಓದಿ: SSLC ಪೂರ್ವಸಿದ್ಧತಾ ಪರೀಕ್ಷೆಗೂ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕು – ಶಿಕ್ಷಣ ಇಲಾಖೆಯಿಂದ ಹೊಸ ನಿಯಮ

    ಈ ಘಟನೆಯ ಬಳಿಕ ಪಾಕಿಸ್ತಾನ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಧರ್ಮನಿಂದನೆಯ ಆರೋಪ ಹೊತ್ತಿರುವ ವ್ಯಕ್ತಿಗಳ ಹತ್ಯೆಗಳನ್ನು ತಡೆಯಲು ಅಲ್ಲಿನ ಆಡಳಿತ ಹೆಚ್ಚಿನ ಪ್ರಯತ್ನ ಮಾಡುತ್ತಿಲ್ಲ ಎಂದು ಅಂತಾರಾಷ್ಟ್ರೀಯ ಹಕ್ಕುಗಳ ಗುಂಪು ಹಿಂದಿನಿಂದಲೂ ಆರೋಪಿಸಿದೆ. ಇದನ್ನೂ ಓದಿ: ನಾನು ಚಾಕೊಲೇಟ್‌ ಖರೀದಿಸದಿದ್ದರೂ ಪರ್ವಾಗಿಲ್ಲ..: ಕೂಡಿಟ್ಟಿದ್ದ ಹಣವನ್ನು ಟರ್ಕಿ ಭೂಕಂಪ ಸಂತ್ರಸ್ತರಿಗೆ ನೀಡಿದ 9ರ ಬಾಲಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k