Tag: ಆರ್

  • ಕಾಂಗ್ರೆಸ್‌ನ ಎಲ್ಲಾ ಶಾಸಕರನ್ನು ಮಂತ್ರಿ ಮಾಡೋಕೆ ಆಗಲ್ಲ- ಆರ್.ವಿ.ದೇಶಪಾಂಡೆ

    ಕಾಂಗ್ರೆಸ್‌ನ ಎಲ್ಲಾ ಶಾಸಕರನ್ನು ಮಂತ್ರಿ ಮಾಡೋಕೆ ಆಗಲ್ಲ- ಆರ್.ವಿ.ದೇಶಪಾಂಡೆ

    ಬೆಂಗಳೂರು: ಕಾಂಗ್ರೆಸ್‌ನ (Congress) ಎಲ್ಲಾ ಶಾಸಕರಿಗೆ ಮಂತ್ರಿಯಾಗುವ ಅರ್ಹತೆಗಳು ಇವೆ. ಆದರೆ ಎಲ್ಲರನ್ನೂ ಮಂತ್ರಿ ಮಾಡೋಕೆ ಆಗುವುದಿಲ್ಲ ಎಂದು ಮಾಜಿ ಸಚಿವ ಆರ್.ವಿ ದೇಶಪಾಂಡೆ (RV Deshpande) ಪರೋಕ್ಷವಾಗಿ ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅರ್ಧನಾರೇಶ್ವರರನ್ನ ಹುಡುಕಿಕೊಳ್ಳಲಿ: ಹರಿಪ್ರಸಾದ್

    ಶಾಸಕರ ಜೊತೆ ಸುರ್ಜೇವಾಲಾ ಸಭೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇವತ್ತು ಸುರ್ಜೇವಾಲಾ ಅವರನ್ನು ಭೇಟಿ ಮಾಡುತ್ತೇನೆ. ಏನು ಚರ್ಚೆ ಮಾಡಲ್ಲ, ಯಾವುದೇ ವಿಚಾರ ಚರ್ಚೆ ಮಾಡಲ್ಲ. ಅವರು ಆರಾಮಾಗಿದ್ದಾರೆ, ನಾವು ಆರಾಮವಾಗಿದ್ದೇವೆ ಎಂದು ಹೇಳುತ್ತೇನೆ ಎಂದರು.

    ನೀವು ಸಚಿವ ಸ್ಥಾನ ಕೇಳ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರೂ ಸಚಿವರು ಆಗಲು ಸಾಧ್ಯನಾ? 224 ಸದಸ್ಯರಿದ್ದಾರೆ. 30 ರಿಂದ 35 ಜನರು ಸಚಿವರಾಗಬಹುದು. ಮಂತ್ರಿ ಆಗಬೇಕು ಎಂಬ ಆಸೆ ಇದ್ರೆ ತಪ್ಪಿಲ್ಲ. ಅರ್ಹತೆ ಎಲ್ಲರಿಗೂ ಇದೆ, ಆದರೆ ಎಲ್ಲರೂ ಆಗಲು ಸಾಧ್ಯವಿಲ್ಲ. ಸುರ್ಜೇವಾಲಾ ನನ್ನನ್ನು ಕರೆದಿದ್ದಾರೆ. ಏನು ಹೇಳುತ್ತಾರೆ ಗೊತ್ತಿಲ್ಲ. ಏನಾದರೂ ಇದ್ದರೆ ಕಿವಿಯಲ್ಲಿ ಹೇಳಬಹುದು ಅದು ಗೊತ್ತಿಲ್ಲ ಎಂದು ಹಾಸ್ಯ ಮಾಡಿದರು.ಇದನ್ನೂ ಓದಿ: ರಾಜಮೌಳಿ ಸಿನಿಮಾ ರಿಜೆಕ್ಟ್ ಮಾಡಿದ ನಟ ವಿಕ್ರಂ – ಕಾರಣ ಏನ್ ಗೊತ್ತಾ?

  • ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ – ಆರ್.ಅಶೋಕ್ ವಾಗ್ದಾಳಿ

    ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ – ಆರ್.ಅಶೋಕ್ ವಾಗ್ದಾಳಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ 40% ಕಮೀಷನ್ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಯವರಿಂದ ಸಿದ್ದರಾಮಯ್ಯ ಸಾಕ್ಷಿ ಕೇಳ್ತಾರೆ, ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ, ಡಿಕೆಶಿ, ಅಂಬಿಕಾಪತಿ ಈ ಸುಳ್ಳಿನ ಮಹಲ್ ಕಟ್ಟಿದ್ದರು ಅದು ಈಗ ಕುಸಿದು ಬಿದ್ದಿದೆ. ರಾಜ್ಯದ ಜನತೆಗೆ ಸುಳ್ಳು ಹೇಳಿ, ತಾವು ಸುಳ್ಳುರಾಮಯ್ಯ ಎಂದು ಖುದ್ದು ಸಿಎಂ ಸಾಬೀತು ಪಡಿಸಿದ್ದಾರೆ. ತಪ್ಪು ಮಾಡಿಲ್ಲ ಎಂದು ಸೈಟು ವಾಪಸ್ ಕೊಟ್ಟರು. ಈಗ ಅವರು ಮಾಡಿದ 40% ಕಮೀಷನ್ ಆರೋಪವೂ ಸುಳ್ಳಾಗಿದೆ. ಇನ್ಮುಂದೆ ಸಿದ್ದರಾಮಯ್ಯ ತಮ್ಮ ಹೆಸರನ್ನು ಸುಳ್ಳು ರಾಮಯ್ಯ ಎಂದು ಬದಲಾಯಿಸಿಕೊಳ್ಳಲಿ ಎಂದರು.ಇದನ್ನೂ ಓದಿ: ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ಮಾತಾಡಿದ್ದು ಸರಿಯಲ್ಲ- ಪ್ರಿಯಾಂಕ್ ಖರ್ಗೆ

    ನಾನು ಇವತ್ತಿಗೆ ಪ್ರತಿಪಕ್ಷ ನಾಯಕನಾಗಿ ಒಂದು ವರ್ಷವಾಗಿದೆ. ಹಾಗೇ ಇದೇ ಹೊತ್ತಿನಲ್ಲಿ ನಮ್ಮ ಸರ್ಕಾರದ ಮೇಲಿನ 40% ಕಮೀಷನ್ ಆರೋಪ ಸುಳ್ಳು ಎನ್ನುವುದು ಸಾಬೀತಾಗಿದೆ. ಕಮೀಷನ್ ಆರೋಪ ಮಾಡಿರುವುದು ಕಾಂಗ್ರೆಸ್‌ನ ಟೂಲ್‌ಕಿಟ್‌ನ ಭಾಗವಾಗಿದೆ. ಇದುವರೆಗೆ 40% ಕಮೀಷನ್ ಆರೋಪಕ್ಕೆ ಕಾಂಗೆಸ್‌ನವರು ದಾಖಲೆ ಕೊಟ್ಟಿಲ್ಲ. ಆಧಾರರಹಿತ, ಸುಳ್ಳು ಆರೋಪ ಮಾಡಿದ್ದರು. ನಮ್ಮ ಮೇಲಿನ ಆರೋಪ ಸುಳ್ಳು ಎಂದು ಲೋಕಾಯುಕ್ತ ತನಿಖೆಯಿಂದಲೇ ಗೊತ್ತಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರ 60% ಕಮೀಷನ್ ಸರ್ಕಾರ ಆಗಿದೆ ಎಂದು ಕಿಡಿಕಾರಿದ್ದಾರೆ.

    ವಾಲ್ಮೀಕಿ ಹಗರಣ ವಿಚಾರ:
    ವಾಲ್ಮೀಕಿ ಹಗರಣದಲ್ಲಿ ಸಾಕ್ಷಿ ಸಿಕ್ಕಿದೆ. ಇಡಿ ಇದನ್ನು ಅನುಮೋದನೆ ಮಾಡಿದೆ. ಬಳ್ಳಾರಿಯಲ್ಲಿ ಯಾರ್ಯಾರಿಗೆ ಹಣ ಹೋಗಿದೆ ಎಂದು ರಿಪೋರ್ಟ್ ಬಂದಿದೆ. ಸಿದ್ದರಾಮಯ್ಯ ತಮ್ಮ ಜೀವನ ತೆರೆದ ಪುಸ್ತಕ ಎಂದಿದ್ದಾರೆ. ತೆರೆದ ಪುಸ್ತಕ ನಾವು ನೋಡಿದರೆ ಕಪ್ಪು ಚುಕ್ಕೆ ಇಡುವುದಕ್ಕೆ ಜಾಗನೇ ಇಲ್ಲ. ಸಿದ್ದರಾಮಯ್ಯ ಅವರ ಕುಟುಂಬ ಲೂಟಿ ಮಾಡುತ್ತಿದೆ. ದಿನ ಒಬ್ಬೊಬ್ಬ ಮಂತ್ರಿ ದರೋಡೆಯ ಪುಸ್ತಕ ತೆರೆಯುತ್ತಿದ್ದಾರೆ. ರಾಜ್ಯದಲ್ಲಿ ಕನ್ನ ಹಾಕುವ ಮಂತ್ರಿಗಳು ಇದ್ದಾರೆ. ನನ್ನ ಮುಟ್ಟಿ ನೋಡಿ, ಕೇಸ್ ಹಾಕಿ ನೋಡಿ, ಸಿಎಂ ಪದವಿಯಿಂದ ಇಳಿಯುವುದಿಲ್ಲ ಎಂದು ಅವರ ಹೈಕಮಾಂಡ್‌ಗೆ ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಅಂದ ಮೇಲೆ ಯಾಕೆ ಹೀಗೆ ಹೇಳುತ್ತೀರಾ? 14 ಸೈಟ್‌ಗಳನ್ನು ಯಾಕೆ ವಾಪಸ್ಸು ಕೊಟ್ಟಿದೀರಿ? ಏಕವಚನದಲ್ಲಿ ಮಾತನಾಡುತ್ತಾರೆ, ಕೇಳಿದರೆ ಹಳ್ಳಿಯಿಂದ ಬಂದವನು ಎನ್ನುತ್ತಾರೆ. ನಾನು ಸೈಟ್ ವಾಪಸ್ಸು ಮಾಡಿಲ್ಲ. ನನ್ನ ಹೆಂಡ್ತಿ ನನಗೆ ಗೊತ್ತಿಲ್ಲದೇ ಕೊಟ್ಟಿದ್ದಾರೆ ಎಂದರು. ಅವರು ಅಹಿಂದ ನಾಯಕರಾಗಿಲ್ಲ ಈಗ ಅವರು ಅಲ್ಪಸಂಖ್ಯಾತರ ಚಾಂಪಿಯನ್ ಆಗಿದ್ದಾರೆ. ಮುಸ್ಲಿಮರ ಹೀರೋ ಆಗಲು ಹೊರಟಿದ್ದಾರೆ ಎಂದು ಹೇಳಿದರು.

    ಬೆಳಗಾವಿ ಅಧಿವೇಶನ ಕರೆಯಲು ಸರ್ಕಾರ ಹೆದರುತ್ತಿದ್ದಾರೆ. ಸಾಕಷ್ಟು ಭ್ರಷ್ಟಾಚಾರ ಮಾಡಿ ಈಗ ಅಧಿವೇಶನ ಕರೆಯಲೂ ಹೆದರುತ್ತಿದ್ದಾರೆ. ಅದಕ್ಕೆ ಅಧಿವೇಶನದ ದಿನಾಂಕ ಸಹ ಪ್ರಕಟ ಮಾಡಲು ಹಿಂಜರಿಯುತ್ತಿದ್ದಾರೆ. ಅಧಿವೇಶನದಲ್ಲಿ ಸರ್ಕಾರದ ಎಲ್ಲ ಲೋಪಗಳ ಬಗ್ಗೆ ಚರ್ಚೆ, ಹೋರಾಟ ಮಾಡುತ್ತೇವೆ. ಈ ಸರ್ಕಾರ ಕಾಣೆಯಾಗಿದೆ, ಕೇವಲ ಗುರುವಾರ ಸಂಪುಟ ಸಭೆಯಲ್ಲಿ ಎಲ್ಲರೂ ಕಾಣಿಸಿಕೊಳುತ್ತಾರೆ. ಇದೊಂದು ಗುರುವಾರ ವೀರರ ಸರ್ಕಾರ. ಗುರುವಾರ ಬಳಿಕ ಎಲ್ಲರೂ ನಾಪತ್ತೆಯಾಗಿ ಹೋಗುತ್ತಾರೆ. ಇದು ಗುರುವಾರದ ಸರ್ಕಾರ. ಕ್ಯಾಬಿನೆಟ್ ದಿನ ಮಾತ್ರ ಈ ಸರ್ಕಾರ ಎದ್ದಿರುತ್ತದೆ. ಬಾಕಿ ದಿನ ಮಲಗಿರುತ್ತದೆ. ಅಬಕಾರಿ ಸಚಿವ ಒಂದೇ ದಿನ 18 ಕೋಟಿ ರೂ. ಲೂಟಿ ಹೊಡೆದು ಮಹಾರಾಷ್ಟ್ರಕ್ಕೆ ಕಳಿಸಿದ್ದಾರೆ. ಕಾಂಗ್ರೆಸ್ ಸಚಿವರು ಸಂಪುಟ ಸಭೆ ಮಾಡುವುದು ಸರ್ಕಾರದ ಬೊಕ್ಕಸಕ್ಕೆ ಹಣ ತರುವುದು ಹೇಗೆ ಎಂಬ ಕಾರಣಕ್ಕಲ್ಲ. ಹೇಗೆ ಲೂಟಿ ಮಾಡಬೇಕು? ಎಷ್ಟು ಕಮಿಷನ್ ತರಬಹುದು? ಎಂದು ಸಭೆ ಮಾಡುತ್ತಾರೆ ಎಂದು ಆರೋಪಿಸಿದರು.

    ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾವಣೆ ವಿಚಾರ: 
    ಬಿಪಿಎಲ್ ಕಾರ್ಡುಗಳನ್ನು (BPL Card) ಸರ್ಕಾರ ರದ್ದು ಮಾಡುತ್ತಿದೆ. ಎಪಿಎಲ್‌ಗೆ ಈಗಾಗಲೇ ಒಂದು ಲಕ್ಷ ಕಾರ್ಡ್‌ಗಳನ್ನು ಪರಿವರ್ತನೆ ಮಾಡಿದ್ದಾರೆ. ಇದು ಸರ್ಕಾರದ ಆರನೇ ಗ್ಯಾರಂಟಿಯಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದೇ ಈ ಕೆಲಸ ಮಾಡುತ್ತಿದ್ದಾರೆ. ಉಚಿತ ಗ್ಯಾರಂಟಿಗಳಲ್ಲಿ ಪ್ರತೀ ವರ್ಷ 10% ಕಡಿತ ಮಾಡಲು ಅಧಿಕಾರಿಗಳಿಗೆ ಸರ್ಕಾರ ಟಾರ್ಗೆಟ್ ಕೊಟ್ಟಿದೆ. ಉಚಿತ ಗ್ಯಾರಂಟಿ ಕೊಡಲಾಗದೇ ಸರ್ಕಾರ ಆರ್ಥಿಕ ಹೊರೆಯಲ್ಲಿದೆ. ಹಣ ಹೊಂದಿಸಲು ಸರ್ಕಾರಕ್ಕೆ ಆಗುತ್ತಿಲ್ಲ. ಅದಕ್ಕಾಗಿ ಬಿಪಿಎಲ್ ಕಾರ್ಡ್‌ಗೆ ಕತ್ತರಿ ಹಾಕುವ ಮೂಲಕ ಕಾರ್ಡ್ಗಳನ್ನು ರದ್ದು ಮಾಡಿ, ಎಪಿಎಲ್‌ಗೆ (APL Card) ಪರಿವರ್ತನೆ ಮಾಡುತ್ತಿದ್ದಾರೆ ಎಂದರು.ಇದನ್ನೂ ಓದಿ: ವಕ್ಫ್ ಪ್ರಕರಣದಲ್ಲಿ ಶಾಂತಿ ಕದಡಲು ಬಿಡಲ್ಲ: ಪರಮೇಶ್ವರ್ ಎಚ್ಚರಿಕೆ

  • ಹಿರಿಯ ನಟಿ ಆರ್. ಸುಬ್ಬಲಕ್ಷ್ಮಿ ನಿಧನ

    ಹಿರಿಯ ನಟಿ ಆರ್. ಸುಬ್ಬಲಕ್ಷ್ಮಿ ನಿಧನ

    ಖ್ಯಾತ ಹಿರಿಯ ನಟಿ ಮತ್ತು ಸಂಗೀತ ಕ್ಷೇತ್ರದಲ್ಲೂ ಸಾಕಷ್ಟು ಹೆಸರು ಮಾಡಿರುವ ಮಲೆಯಾಳಂನ (Malayalam) ಆರ್.ಸುಬ್ಬಲಕ್ಷ್ಮಿ (R.Subbalakshmi) ನಿಧನರಾಗಿದ್ದಾರೆ (Passed away). 87ರ ವಯಸ್ಸಿನ ಈ ಹಿರಿ ಜೀವ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸಿನಮಾ ರಂಗದಲ್ಲಿ ಮಾತ್ರವಲ್ಲ, ಚಿತ್ರಕಲೆ ಮತ್ತು ಸಂಗೀತ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಸುಬ್ಬಲಕ್ಷ್ಮಿ.

    ಮಲಯಾಳಂನ ಅನೇಕ ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿದ್ದ ಸುಬ್ಬಲಕ್ಷ್ಮಿ ಅವರು, ಇತ್ತೀಚಿನ ದಿನಗಳಲ್ಲಿ ಅಜ್ಜಿ ಪಾತ್ರಕ್ಕೆ ಫಿಕ್ಸ್ ಆಗಿದ್ದರು. ಸಾಕಷ್ಟು ಚಿತ್ರಗಳಲ್ಲಿ ಅಜ್ಜಿಯಾಗಿಯೇ ಫೇಮಸ್ ಆದವರು. ಪಾಂಡಿಪ್ಪ, ನಂದನಂ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು.

     

    ನಟಿಯ ನಿಧನಕ್ಕೆ ನಟರು ಮಾತ್ರವಲ್ಲ, ಕೇರಳದ ಮುಖ್ಯಮಂತ್ರಿಗಳು ಕೂಡ ಸಂತಾಪ ಸೂಚಿಸಿದ್ದಾರೆ. ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ.

  • ‘ಆಸ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ

    ‘ಆಸ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ

    ವಿಶ್ವದ ಪ್ರತಿಷ್ಠಿತ ಪ್ರಶಸ್ತಿ ಆಸ್ಕರ್ ಗೆ (Oscar) ದಿನಗಣನೆ ಶುರುವಾಗಿದೆ. ಹಲವಾರು ಕಾರಣಗಳಿಂದಾಗಿ ಈ ಬಾರಿ ಆಸ್ಕರ್ ವೇದಿಕೆ ಕಲರ್ ಫುಲ್ ಆಗಿರುತ್ತದೆ. ಭಾರತದ ಹೆಸರಾಂತ ನಟರಾದ ರಾಮ್ ಚರಣ್ (Ram Charan) ಮತ್ತು ಜ್ಯೂನಿಯರ್ ಎನ್.ಟಿ.ಆರ್ (Jr.NTR) ‘ನಾಟು ನಾಟು’ ಹಾಡಿಗೆ ವೇದಿಕೆಯ ಮೇಲೆ ಹೆಜ್ಜೆ ಹಾಕುತ್ತಿದ್ದರೆ, ಈ ಬಾರಿಯ ಆಸ್ಕರ್ ಕಾರ್ಯಕ್ರಮದ ನಿರೂಪಣೆಯ ಹೊಣೆಯನ್ನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಹೊರಲಿದ್ದಾರೆ.

    ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮೌನ ಮುರಿದ ಕನ್ನಡದ `ಗಿಲ್ಲಿ’ ನಟಿ ರಾಕುಲ್

    ಇದೇ ಮಾರ್ಚ್ 12ರಂದು (ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13) ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

    ಈ ಬಾರಿ ಆಸ್ಕರ್ ವೇದಿಕೆಯ ಮೇಲೆ ನಿರಂತರವಾಗಿ ದೀಪಿಕಾ ಕಾಣಿಸಿಕೊಂಡರೆ, ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಲೈವ್ ಆಗಿ ಡ್ಯಾನ್ಸ್ ಮಾಡಲಿದ್ದಾರೆ. ಅಲ್ಲದೇ, ಅದೇ ವೇದಿಕೆಯಲ್ಲೇ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲಾ ಭೈರವ ಹಾಡಲಿದ್ದಾರೆ. ಭಾರತದಿಂದ ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಕೂಡ ಪ್ರಶಸ್ತಿಯ ರೇಸ್ ನಲ್ಲಿದೆ.

  • 100 ಎಕರೆ ಪ್ರದೇಶದಲ್ಲಿ ಆರ್.ಆರ್.ಆರ್  ಕನ್ನಡ ಪ್ರಿರಿಲೀಸ್ ಇವೆಂಟ್ : ಯಾರೆಲ್ಲ ಬರ್ತಾರೆ ಗೊತ್ತಾ?

    100 ಎಕರೆ ಪ್ರದೇಶದಲ್ಲಿ ಆರ್.ಆರ್.ಆರ್ ಕನ್ನಡ ಪ್ರಿರಿಲೀಸ್ ಇವೆಂಟ್ : ಯಾರೆಲ್ಲ ಬರ್ತಾರೆ ಗೊತ್ತಾ?

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಕನ್ನಡ ಇವೆಂಟ್ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ. ಮಾರ್ಚ್ 19ರಂದು ನಡೆಯಲಿರುವ ಈ ಇವೆಂಟ್ ಗಾಗಿ 100 ಎಕರೆ ಪ್ರದೇಶ ಸಿದ್ಧಗೊಳ್ಳುತ್ತಿದೆ. 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಲಿರುವ ಈ ಕಾರ್ಯಕ್ರಮದಲ್ಲಿ ತೆಲುಗು, ತಮಿಳು ಮತ್ತು ಕನ್ನಡದ ಸ್ಟಾರ್ ನಟರು ಭಾಗಿಯಾಗುತ್ತಿರುವುದು ವಿಶೇಷ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!

    ಈ ಇವೆಂಟ್ ಅನ್ನು ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸಲು ಚಿತ್ರತಂಡ ನಿರ್ಧರಿಸಿದ್ದು, ಪುನೀತ್ ನೆನಪಿನಲ್ಲಿ ಹಲವು ಕಾರ್ಯಕ್ರಮಗಳು ಕೂಡ ನಡೆಯುತ್ತವೆ. ಇದರ ನೇತೃತ್ವವನ್ನು ಶಿವರಾಜ್ ಕುಮಾರ್ ಅವರಿಗೆ ವಹಿಸಲಾಗಿದೆಯಂತೆ.  ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?

    ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಮಾತ್ರವಲ್ಲ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಾಗಿ ಎಲ್ಲ ರೀತಿಯ ಭದ್ರತೆಯನ್ನೂ ಮಾಡಿಕೊಳ್ಳಲಾಗುತ್ತಿದೆಯಂತೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್, ಜ್ಯೂನಿಯರ್ ಎನ್.ಟಿ.ಆರ್, ಆಲಿಯಾ ಭಟ್, ಅಜಯ್ ದೇವಗನ್,  ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಸೇರಿದಂತೆ ಚಿತ್ರತಂಡದ ಬಹುತೇಕ ಸದಸ್ಯರು ಕೂಡ ಅಂದು ಭಾಗಿಯಾಗಲಿದ್ದಾರೆ. ಮನರಂಜನೆ ಕಾರ್ಯಕ್ರಮ ಮತ್ತು ಚಿತ್ರತಂಡದೊಂದಿಗೆ ಸಂವಾದ ಕೂಡ ಈ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.

  • ಆರ್ ಅಶೋಕ್, ಕೆ ಮಂಜು, ಉಪೇಂದ್ರ ಜೊತೆ ಡ್ರಗ್ ಡೀಲರ್ ರಾಹುಲ್

    ಆರ್ ಅಶೋಕ್, ಕೆ ಮಂಜು, ಉಪೇಂದ್ರ ಜೊತೆ ಡ್ರಗ್ ಡೀಲರ್ ರಾಹುಲ್

    – ಹಲವು ಸೆಲೆಬ್ರಿಟಿಗಳ ಜೊತೆ ಇತ್ತು ರಾಹುಲ್‍ಗೆ ನಂಟು

    ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಡ್ರಗ್ ಡೀಲರ್ ರಾಹುಲ್ ಜೊತೆ ಕಂದಾಯ ಸಚಿವರಾದ ಆರ್ ಅಶೋಕ್ ಇರುವ ಫೋಟೋ ಪಬ್ಲಿಕ್ ಟಿವಿಗೆ ದೊರಕಿದೆ.

    ಡ್ರಗ್ ಪ್ರಕರಣದಲ್ಲಿ ನಟಿ ಸಂಜನಾ ಆಪ್ತನಾಗಿದ್ದ ರಾಹುಲ್ ನನ್ನು ಸಿಸಿಬಿ ಪೊಲೀಸರು ಸೆಪ್ಟಂಬರ್ 3ರಂದು ಬಂಧಿಸಿದ್ದರು. ಈ ಪ್ರಕರಣ ಈಗ ಬಗೆದಷ್ಟು ಬಯಲಾಗುತ್ತಿದ್ದು, ರಾಹುಲ್ ಶ್ರೀಮಂತ ಲೋಕ ಅನಾವರಣಕೊಂಡಿದೆ. ಸ್ಯಾಂಡಲ್‍ವುಡ್‍ನ ಬಹುತೇಕ ನಟ-ನಟಿಯರ ಜೊತೆಗೆ ರಾಹುಲ್‍ಗೆ ನಂಟಿರುವುದು ಬಟಾಬಯಲಾಗಿದೆ. ಇದನ್ನು ಓದಿ: ರಾಗಿಣಿ ಡ್ರಗ್ಸ್ ಸೇವಿಸಿರೋದಕ್ಕೆ ‘ಬಿಗ್’ ಸಾಕ್ಷ್ಯ – ಆರೋಪಿ ರವಿಶಂಕರ್ ತಪ್ಪೊಪ್ಪಿಗೆ

    ವೀಕೆಂಡ್‍ಗಳಲ್ಲಿ ಪಾರ್ಟಿ ಆಯೋಜನೆ ಮಾಡುತ್ತಿದ್ದ ರಾಹುಲ್, ಸ್ಯಾಂಡಲ್‍ವುಡ್‍ನ ಎಲ್ಲ ತಾರೆಯರನ್ನು ಆಹ್ವಾನ ಮಾಡುತ್ತಿದ್ದ. ಈತನ ಜೊತೆ ನಟ ಉಪೇಂದ್ರ ಮತ್ತು ಕ್ರಿಕೆಟಿಗ ಮತ್ತು ನಟ ಶ್ರೀಶಾಂತ್, ಶ್ರೀನಗರ ಕಿಟ್ಟಿ, ನಿರ್ಮಾಪಕ ಕೆ.ಮಂಜು, ರಘು ಮುಖರ್ಜಿ, ಸಂಗೀತ ನಿರ್ದೇಶಕ ಗುರುಕಿರಣ್, ನಟಿಯರಾದ ಐಂದ್ರಿತಾ ರೇ, ಪ್ರಿಯಾಂಕ ಉಪೇಂದ್ರ, ಹರ್ಷಿಕಾ ಪೂಣಚ್ಚ, ಸಂಜನಾ ಗಲ್ರಾನಿ, ನಿವೃತ್ತ ಐಜಿ ಬಿಎನ್‍ಎಸ್ ರೆಡ್ಡಿಯವರ ಜೊತೆಯೂ ರಾಹುಲ್ ಫೋಟೋ ತೆಗೆಸಿಕೊಂಡಿದ್ದಾರೆ.

    ಇದೇ ವೇಳೆ ನಿರ್ಮಾಪಕ ಕೆ. ಮಂಜು ಅವರು ರಾಹುಲ್‍ಗೆ ಕೈತುತ್ತು ತಿನ್ನಿಸುತ್ತಿರುವ ಫೋಟೋ ವೈರಲ್ ಆಗಿದ್ದು, ಇದರ ಬಗ್ಗೆ ಪಬ್ಲಿಕ್ ಟಿವಿಯ ಜೊತೆ ಮಾತನಾಡಿರುವ ಕೆ.ಮಂಜು ಅವರು, ಆತ ನನಗೆ ಬಹಳ ವರ್ಷದಿಂದ ಪರಿಚಯ. ಆತ ನನ್ನ ಗೆಳೆಯರೊಬ್ಬರ ಆಫೀಸ್‍ನಲ್ಲಿ ಪರಿಚಯವಾಗಿದ್ದ. ಬಹಳ ಒಳ್ಳೆಯ ಹುಡುಗ, ಒಂದು ಪಾರ್ಟಿಗೆ ಹೋದಾಗ ಆತನ ಬಳಿ ಒಂದು ಫೋಟೋ ತೆಗೆಸಿಕೊಂಡಿದ್ದೆ ಎಂದು ಹೇಳಿದ್ದಾರೆ.

    ಇದರ ಜೊತೆಗೆ ರಾಹುಲ್ ಶ್ರೀಲಂಕಾದ ಕ್ಯಾಸಿನೋವೊಂದಕ್ಕೆ ಇಲ್ಲಿಂದ ಸೆಲೆಬ್ರಿಟಿಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ರಾಹುಲ್ ಜೊತೆಗೆ ಸಚಿವ ಆರ್ ಅಶೋಕ್ ಅವರ ಫೋಟೋ ಕೂಡ ವೈರಲ್ ಆಗಿದ್ದು, ಈ ಫೋಟೋದಲ್ಲಿ ರಾಹುಲ್‍ಗೆ ಅಶೋಕ್ ಕೇಕ್ ತಿನ್ನಿಸುತ್ತಿದ್ದಾರೆ. ಇನ್ನು ರ್ಯಾಪರ್ ಚಂದನ್ ಶೆಟ್ಟಿ, ನಟಿ ಕಾರಣ್ಯ ರಾವ್ ಅವರ ಜೊತೆ ಕೂಡ ರಾಹುಲ್ ಫೋಟೋ ಕ್ಲಿಕಿಸಿಕೊಂಡಿದ್ದಾನೆ. ಇದನ್ನು ಓದಿ: ಖನ್ನಾ ಪೂಲ್ ಪಾರ್ಟಿಯಲ್ಲಿ ಮತ್ಸ್ಯಕನ್ಯೆಯಂತೆ ಈಜಿದ್ದ ಸಂಜನಾ

    ಈ ಹಿಂದೆ ರಾಹುಲ್ ಬಗ್ಗೆ ಮಾತನಾಡಿದ್ದ ನಟಿ ಸಂಜನಾ, ರಾಹುಲ್ ತುಂಬಾ ಒಳ್ಳೆಯ ಹುಡುಗ, ಅವನು ರಿಯಲ್ ಎಸ್ಟೇಟ್ ಮಾಡುತ್ತಾನೆ. ಜೇಕರ್ಬ್ ವರ್ಗಿಸ್ ನಿರ್ದೇಶನದ ಚಂಬಲ್ ಸಿನಿಮಾದಲ್ಲಿ ರಾಹುಲ್ ಸಣ್ಣ ಪಾತ್ರ ಮಾಡಿದ್ದಾನೆ. ರಾಹುಲ್‍ನನ್ನು ನಾನು ರಾಖೀ ಭಾಯ್ ಅಂತಾನೇ ಕರೆಯುತ್ತೇನೆ. ನಾವು ತುಂಬಾ ಕ್ಲೋಸ್ ಫ್ರೆಂಡ್ ಅವನು ನನ್ನ ರಾಖೀ ಅಣ್ಣ. ರಾಹುಲ್ ಆದಷ್ಟು ಬೇಗ ಈ ಎಲ್ಲಾ ಸಮಸ್ಯೆಗಳಿಂದ ಹೊರಗಡೆ ಬರುತ್ತಾನೆ ಎಂದು ಸಂಜನಾ ತಿಳಿಸಿದ್ದರು.

  • ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟ ಸರ್ಕಾರ

    ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟ ಸರ್ಕಾರ

    – ಚಿತ್ರೀಕರಣ ಹೊರತುಪಡಿಸಿ ಎಲ್ಲಾ ಕೆಲಸ ಮಾಡಬಹುದು

    ಬೆಂಗಳೂರು: ಇತ್ತೀಚೆಗಷ್ಟೆ ಧಾರಾವಾಹಿಗಳ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದ್ದ ಸರ್ಕಾರ ಇದೀಗ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ.

    ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಮಾತ್ರ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ಸರ್ಕಾರ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಶೂಟಿಂಗ್ ಬೇಡ ಬದಲಿಗೆ ಪೋಸ್ಟ್ ಪ್ರೊಡಕ್ಷನ್, ಪ್ರೀ ಪ್ರೊಡಕ್ಷನ್ ಕೆಲಸಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಎಡಿಟಿಂಗ್, ಮಿಕ್ಸಿಂಗ್, ಗ್ರಾಫಿಕ್ಸ್ ಈ ರೀತಿಯ ಕೆಲಸ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

    ಚಿತ್ರೀಕರಣ ಹೊರತುಪಡಿಸಿ ಎಲ್ಲಾ ಕೆಲಸಗಳನ್ನ ಮಾಡಬಹುದು. ಇವತ್ತಿನಿಂದಲೇ ಕೆಲಸ ಮಾಡಬಹುದು. 80 ಸಿನಿಮಾಗಳು ರಿಲೀಸ್ ಹಂತದಲ್ಲಿದೆ. ಹೀಗಾಗಿ ಸಿನಿಮಾ ಒಳಾಂಗಣ ಕೆಲಸಗಳಿಗೆ ಅವಕಾಶ ನೀಡಲಾಗಿದೆ. 10 ಜನರೊಳಗೆ ಅಂತರ ಕಾಪಾಡಿಕೊಳ್ಳಬೇಕು. ಜೊತೆಗೆ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿರಬೇಕು ಎಂದು ಎಚ್ಚರಿಕೆ ನೀಡಿದರು.

    ಕಳೆದ 4 ದಿನಗಳ ಹಿಂದೆ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಸಿನಿಮಾ ಒಳಾಂಗಣ ಕೆಲಸಗಳ ಅನುಮತಿ ಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ನಂತರ ಅಶೋಕ್ ಎರಡು ದಿನಗಳ ಹಿಂದೆ ಸಿಎಂ ಯಡಿಯೂರಪ್ಪ ಅವರಿಗೆ ಈ ಬಗ್ಗೆ ತಿಳಿಸಿದ್ದರು.

    ಸಿನಿಮಾ ಒಳಾಂಗಣ ಚಟುವಟಿಕೆಗಳಿಗೆ ಸರ್ಕಾರ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕ ಸಂಘ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್, ನಿರ್ಮಾಪಕ ಕೆ.ಮಂಜು ಮತ್ತು ವಾಣಿಜ್ಯ ಮಂಡಳಿ ಸಿಬ್ಬಂದಿ ಇತರರು ಕಂದಾಯ ಸಚಿವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ್ದಾರೆ.

  • ಓರ್ವ ಹೆಣ್ಣಿನ ವಿರುದ್ಧ ಕೌರವ ಸೇನೆ ಒಂದಾಗಿದೆ- ಆರ್.ಅಶೋಕ್ ಗುಟುರು

    ಓರ್ವ ಹೆಣ್ಣಿನ ವಿರುದ್ಧ ಕೌರವ ಸೇನೆ ಒಂದಾಗಿದೆ- ಆರ್.ಅಶೋಕ್ ಗುಟುರು

    – ಕಳ್ಳೆತ್ತು, ಕುಂಟೆತ್ತು, ಜೋಡೆತ್ತುಗಳಿಂದ ಯುದ್ಧ

    ಮಂಗಳೂರು: ಓರ್ವ ಹೆಣ್ಣಿನ ವಿರುದ್ಧ ಕಾರವ ಸೇನೆ ಒಂದಾಗಿ ಯುದ್ಧ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಮೈತ್ರಿ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನ ಬೆಳಗ್ಗೆ ಕಳ್ಳೆತ್ತು, ಕುಂಟೆತ್ತು ಮತ್ತು ಜೋಡೆತ್ತುಗಳಿಂದ ಯುದ್ಧ ನಡೆಯುತ್ತದೆ ಎಂಬ ಸುದ್ದಿ ಇರುತ್ತದೆ. ಕರ್ನಾಟಕದ ಚುನಾವಣೆ ಹೈವೋಲ್ಟೇಜ್ ರೀತಿ ನಡೆಯುತ್ತಿದೆ. ಅದು ಓರ್ವ ಹೆಣ್ಣು ಅದರಲ್ಲೂ ಅಂಬರೀಶ್ ಅವರ ಪತ್ನಿ ಸುಮಲತಾ ಒಂಟಿಯಾಗಿದ್ದಾರೆ. ಅವರ ವಿರುದ್ಧ ಈ ಕೌರವ ತಂಡ ಯುದ್ಧ ಮಾಡುತ್ತಿದೆ ಎಂದರು.

    ಮಾಜಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಮೂವರು ಮಂತ್ರಿಗಳು, ಎಂಟು ಜನ ಶಾಸಕರು ಇಷ್ಟು ಜನ ಓರ್ವ ಹೆಣ್ಣು ಮಗಳ ಮೇಲೆ ಯುದ್ಧ ಸಾರಿದೆ. ನನ್ನ ಪ್ರಕಾರ ಕೊನೆಗೆ ಸತ್ಯಮೇವ ಜಯತೆ ಎಂಬಂತೆ ಸುಮಲತಾ ಅವರು ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರೂ ಮೋದಿ ಜಪ ಮಾಡುತ್ತಿದ್ದಾರೆ. ಹಾಸನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲೂ ಮೋದಿಗೆ ಜೈಕಾರ ಹೇಳಿದ್ದಾರೆ. ಹೀಗಾಗಿ ಮೋದಿ ಹೆಸರು ಸರ್ವವ್ಯಾಪಿ ಆಗಿರುವುದು ಕಂಡುಬಂದಿದೆ. ಮಂಡ್ಯದಲ್ಲಿ ಸೋಲುವ ಭೀತಿ ಮೈತ್ರಿ ಪಕ್ಷಗಳಲ್ಲಿದೆ. ಜಿಟಿ ದೇವೇಗೌಡ ಮಂಡ್ಯ ಸೋಲನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಮೈತ್ರಿ ಸರ್ಕಾರ ರಾಜ್ಯದ ಜನರಿಗೆ ದ್ರೋಹ ಬಗೆದಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ.

    ಕುಮಾರಸ್ವಾಮಿಗೆ ಮಾತಿನಲ್ಲಿ ಹಿಡಿತವಿಲ್ಲದಾಗಿದ್ದು, ಸೋಲಿನ ಭಯ ತುಂಬಾನೇ ಕಾಡುತ್ತಿದೆ. ದುಡ್ಡು ಚೆಲ್ಲಿ ಚುನಾವಣೆ ಗೆಲ್ಲುವ ತಂತ್ರವನ್ನು ಸರ್ಕಾರ ರೂಪಿಸುತ್ತಿದೆ. ದೇವೇಗೌಡರು 15 ವರ್ಷಗಳಿಂದ ಕೊನೆ ಚುನಾವಣೆ ಅನ್ನುತ್ತಲೇ ಇದ್ದಾರೆ. ಈ ಬಾರಿಯೂ ಕಾಂಗ್ರೆಸ್ಸಿನವರ ಬಯಕೆಯಂತೆ ಕೊನೆ ಚುನಾವಣೆ ಅನ್ನುತ್ತಿದ್ದಾರೆ. ಈ ಬಾರಿ ಮೋದಿ ಸುಂಟರ ಗಾಳಿಯಿಂದಾಗಿ ಬಿಜೆಪಿ 22 ಸೀಟು ಗೆಲ್ಲಲಿದೆ ಎಂದಿದ್ದಾರೆ.