Tag: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲಿಸಿದ ಸಿದ್ದರಾಮಯ್ಯ

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲಿಸಿದ ಸಿದ್ದರಾಮಯ್ಯ

    – ಸಿಎಂ ಆದ ಬಳಿಕ ಮಂಡ್ಯಗೆ ಮೊದಲ ಭೇಟಿ; ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ

    ಮಂಡ್ಯ: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ (Siddaramaiah) ಅವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru Mysuru Expressway) ಪರಿಶೀಲನೆ ನಡೆಸಿದರು. ಅಲ್ಲದೇ ಸ್ಪೀಡ್ ಡಿಟೆಕ್ಟರ್‌ಗೆ (Speed Detector) ಚಾಲನೆ ನೀಡಿದರು.

    ವಾಹನಗಳ ವೇಗವನ್ನ ಸೆರೆಹಿಡಿಯಲು (ಕ್ಯಾಪ್ಚರ್ ಮಾಡಲು) ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ (Mandya) ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.

    ಇದಕ್ಕೂ ಮುನ್ನ, ಸಿಎಂ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್ ಹೂವಿನ ಹಾರ ಹಾಕಿ, ಹೂಗುಚ್ಛ ನೀಡಿ ಅವರನ್ನ ಸ್ವಾಗತಿಸಲಾಯಿತು. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ

    ಎಕ್ಸ್‌ಪ್ರೆಸ್‌ವೇನಲ್ಲಿ ಎಐ ಕ್ಯಾಮೆರಾ:
    ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಎಕ್ಸ್‌ಪ್ರೆಸ್‌ವೇನಲ್ಲಿ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೋಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನ ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್‌ನಿಂದ RTO ಸಂಪರ್ಕ ಪಡೆದು ಸಾವಾರರ ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರಲಿದೆ. ಇದನ್ನೂ ಓದಿ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ.ರವಿಗೆ ಕೊಕ್ – ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

    ಈ ಸಂಬಂಧ ಟ್ವೀಟ್ ಮಾಡಿದ್ದ ಅಲೋಕ್ ಕುಮಾರ್, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನ ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ಅಪಘಾತಗಳು ಮತ್ತು ಸಾವುನೋವುಗಳ ಸಂಖ್ಯೆಗಳನ್ನು ಕಡಿಮೆ ಮಾಡಲು ಈ ಉಪಕ್ರಮಗಳು ಸಹಾಯ ಮಾಡುತ್ತವೆ ಎಂದು ಭಾವಿಸುತ್ತೇವೆ. ಭಾರತದ ರಸ್ತೆಯಲ್ಲಿ ಅತಿವೇಗವೇ ಪ್ರಮುಖ ಕೊಲೆಗಾರ ಎಂದು ನಿನ್ನೆ ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ

    ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ

    ಬೆಂಗಳೂರು: ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru Mysuru Expressway) ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಮೊರೆ ಹೊಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ.

    ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Eexpressway) ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ (Automatic Number Plate Recognition – ANPR) ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರಲಿದೆ.  ಇದನ್ನೂ ಓದಿ: ರಾಹುಲ್‌ಗೆ ಮೊಣಕಾಲು ನೋವು – ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ

    ಈ ಸಂಬಂಧ ಟ್ವೀಟ್‌ ಮಾಡಿರುವ ಅಲೋಕ್‌ ಕುಮಾರ್‌, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ಅಪಘಾತಗಳು ಮತ್ತು ಸಾವುನೋವುಗಳ ಸಂಖ್ಯೆಗಳನ್ನು ಕಡಿಮೆ ಮಾಡಲು ಈ ಉಪಕ್ರಮಗಳು ಸಹಾಯ ಮಾಡುತ್ತವೆ ಎಂದು ಭಾವಿಸುತ್ತೇವೆ. ಭಾರತದ ರಸ್ತೆಯಲ್ಲಿ ಅತಿವೇಗವೇ ಪ್ರಮುಖ ಕೊಲೆಗಾರ ಎಂದು ಹೇಳಿದ್ದಾರೆ.

    ಅಪಘಾತ ಇಳಿಕೆ:
    ಎಕ್ಸ್‌ಪ್ರೆಸ್‌ವೇ ಸಾವಿನ ಹೆದ್ದಾರಿ ಎಂಬ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ವಾಹನಗಳ ವೇಗದ ಮೇಲೆ ಕಣ್ಣಿಡುವ ಇಂಟರ್‌ಸೆಪ್ಟರ್‌ಗಳನ್ನು ಹೆದ್ದಾರಿಯಲ್ಲಿ ನಿಯೋಜಿಸುವ ಮೂಲಕ ಅಪಘಾತಗಳನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದರು. ಇದು ಫಲ ನೀಡಿದ್ದು, ಜುಲೈ ತಿಂಗಳಿನಲ್ಲಿ ಕೇವಲ 27 ಅವಘಡಗಳು ಸಂಭವಿಸಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಇಳಿದಿದೆ.

    ಎಕ್ಸ್‌ಪ್ರೆಸ್‌ವೇನಲ್ಲಿ ವೇಗದ ಮಿತಿಯನ್ನು ಗಂಟೆಗೆ 100 ಕಿ.ಮೀ ನಿಗದಿ ಪಡಿಸಲಾಗಿದೆ. ಅಷ್ಟೇ ಅಲ್ಲದೇ ರೆಡಾರ್ ಗನ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ವೇಗ ಮಿತಿ ದಾಟಿದರೆ 1000 ರೂ. ದಂಡ ಹಾಗೂ ಡಿಎಲ್ ರದ್ದುಪಡಿಸುವ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆಯ ಫೋಟೋ ಹಾಗೂ ನೋಟಿಸ್ ನೀಡಿ ದಂಡ ವಸೂಲಿ ಮಾಡಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಐ ಬಗ್ಗೆ ಹೇಳೋ ಆಧುನಿಕ ತಂತ್ರಜ್ಞಾನಕ್ಕಿಂತ ಕುಂಡಲಿ ಮೇಲು: ಹೆಗಡೆ

    ಎಐ ಬಗ್ಗೆ ಹೇಳೋ ಆಧುನಿಕ ತಂತ್ರಜ್ಞಾನಕ್ಕಿಂತ ಕುಂಡಲಿ ಮೇಲು: ಹೆಗಡೆ

    ಹುಬ್ಬಳ್ಳಿ: ಕಂಪ್ಯೂಟರ್ ಸಹಾಯದಿಂದ ನಮ್ಮ ಕೃತಕ ಬುದ್ಧಿಮತ್ತೆ(ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಬಗ್ಗೆ ಹೇಳುವ ಆಧುನಿಕ ತಂತ್ರಜ್ಞಾನಕ್ಕಿಂತ ನಮ್ಮ ಹಿರಿಯರು ಬರೆಯುತ್ತಿದ್ದ ಕುಂಡಲಿಗಳೇ ಮೇಲು ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

    ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಆಯೋಜನೆ ಮಾಡಿದ್ದ ಇ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಐ ಬಳಸಿ ನಮ್ಮ ಸಂಪೂರ್ಣ ಮಾಹಿತಿಯನ್ನು ಕ್ರೋಢಿಕರಿಸಿ ಕೊಟ್ಟರೆ ಅದನ್ನು ಆಧುನಿಕ ತಂತ್ರಜ್ಞಾನ ಎಂದು ಒಪ್ಪಿಕೊಳ್ಳುತ್ತೇವೆ. ಆದರೆ, ಕೇವಲ ಜನ್ಮದಿನಾಂಕ, ಸಮಯ ಕೊಟ್ಟರೆ ಸಾಕು, ಆ ವ್ಯಕ್ತಿಯನ್ನೂ ನೋಡದೆ ವ್ಯಕ್ತಿತ್ವ, ಬಣ್ಣ, ನಿಲುವು, ಅವನ ಆರೋಗ್ಯ ಮತ್ತು ಅವನು ಎಂದು ಸಾಯುತ್ತಾನೆ ಎಂಬುದನ್ನು ನಮ್ಮ ಕುಂಡಲಿ ಹೇಳುತ್ತದೆ ಎಂದು ತಿಳಿಸಿದರು.

    ಕುಂಡಲಿ ಹೇಳಿದ್ದನ್ನು ನಾವು ಒಪ್ಪುವುದಿಲ್ಲ. ಯಾಕೆಂದರೆ ನಮಗೆ ಹಿತ್ತಲ ಗಿಡ ಮದ್ದಲ್ಲ. ನಾವು ನಮ್ಮ ಭಾಷೆಯಲ್ಲಿ ಹೇಳಿದರೆ ಅದಕ್ಕೆ ಬೆಲೆ ಇಲ್ಲ. ಆದರೆ ಅವರ ಭಾಷೆಯಲ್ಲಿ ಹೇಳಿದರೆ ಹೊಸ ಆವಿಷ್ಕಾರ ಎಂದು ಹೇಳುತ್ತೇವೆ ಎಂದು ಅಭಿಪ್ರಾಯಪಟ್ಟರು.

    ಅಧ್ಯಾತ್ಮ ತಳಹದಿಯಲ್ಲಿ ಜಗತ್ತಿಗೆ ನಾವು ಶೂನ್ಯ ಕೊಟ್ಟಿದ್ದೇವೆ. ಭಾರತ ಜಗತ್ತಿಗೆ ಶೂನ್ಯವನ್ನು ಕೊಡುಗೆಯಾಗಿ ಕೊಡದೇ ಇದ್ದರೆ, ಜಗತ್ತಿನಲ್ಲಿ ಈ ರೀತಿಯ ತಾಂತ್ರಿಕ ಆವಿಷ್ಕಾರಗಳು ನಡೆಯುತ್ತಿರಲಿಲ್ಲ. ನಾನು ಹೇಳುತ್ತಿಲ್ಲ, ವಿಜ್ಞಾನಿ ಐನ್ ಸ್ಟೈನ್ ಹೇಳಿರುವ ಮಾತು. ಆದರೆ ಈ ಮಾತನ್ನು ಅನಂತಕುಮಾರ ಹೆಗಡೆ ಹೇಳಿದ್ದರೆ ಚಡ್ಡಿ ಹಾಕಿಕೊಂಡು ಹೇಳಿದ ಎಂದು ಎಡಬಿಡಂಗಿಗಳು ಹೇಳುತ್ತಾರೆ ವ್ಯಂಗ್ಯವಾಡಿದರು.

    ಈ ವೇಳೆ, ನಮ್ಮ ಇತ್ತೀಚಿನ ಕವಿಗಳು ಕನಸಲ್ಲಿ ಕಂಡದನ್ನು ಬೆಳಗಿನಲ್ಲಿ ಶಬ್ದಗಳಲ್ಲಿ ಜೋಡಿಸಿದ ಹಾಗೆ ಬರೆಯುತ್ತಾರೆ. ಅದಕ್ಕೆ ಯಾವುದೇ ಅರ್ಥ, ಛಂದಸ್ಸು, ಅಲಂಕಾರ ಇರುವುದಿಲ್ಲ ಎಂದು ಹೇಳಿ ತನ್ನನ್ನು ಟೀಕಿಸುವ ಸಾಹಿತಿಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.