Tag: ಆರ್ಥಿಕ ಸಂಕಷ್ಟ

  • ಭಾರತ ಮಿಸೈಲ್‌ ದಾಳಿಗೆ ಪಾಕ್‌ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ

    ಭಾರತ ಮಿಸೈಲ್‌ ದಾಳಿಗೆ ಪಾಕ್‌ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ

    – ಬ್ಯಾಂಕ್‌ಗಳಲ್ಲಿ ಹಣ ಖಾಲಿ, ಎಟಿಎಂ ಮಿತಿ 3,000 ರೂ.ಗೆ ಇಳಿಕೆ

    ಇಸ್ಲಾಮಾಬಾದ್‌: ‌ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಭಾರತ (India) ದಿಟ್ಟ ಉತ್ತರ ನೀಡಿದೆ. ಭಾರತದ ಮಿಲಿಟರಿ ದಾಳಿಗೆ ತತ್ತರಿಸಿರುವ ಪಾಕ್‌ (Pakistan) ಇದೀಗ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ.

    ಭಾರತದ ನಡೆಸಿದ ಮಿಸೈಲ್‌ ದಾಳಿಯಿಂದ ಪಾಕಿಸ್ತಾನದ ವಾಯುನೆಲೆ (Naval Base) ಸೇರಿದಂತೆ ಪಾಕ್‌ನ ಮೂಲಭೂತ ಸೌಕರ್ಯಗಳು ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, ಆರ್ಥಿಕ ನಷ್ಟಕ್ಕೆ ತುತ್ತಾಗಿದೆ. ಹೀಗಾಗಿ ಇಸ್ಲಾಮಾಬಾದ್‌ (Islamabad) ಶುಕ್ರವಾರ ತುರ್ತು ಸಾಲ ನೀಡುವಂತೆ ವಿಶ್ವಬ್ಯಾಂಕ್‌ (World Bank) ಸೇರಿದಂತೆ ತನ್ನ ಅಂತರರಾಷ್ಟ್ರೀಯ ಪಾಲುದಾರರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಜಮ್ಮುವಿನಲ್ಲಿ ಅಮಾಯಕರನ್ನ ಟಾರ್ಗೆಟ್‌ ಮಾಡಿದ ʻಪಾಪಿಸ್ತಾನʼ – 10,000 ಮಂದಿ ಸ್ಥಳಾಂತರ?

    ತನ್ನ ಎಕ್ಸ್‌ ಖಾತೆಯಲ್ಲಿ ಅಧಿಕೃತ ಸಂದೇಶ ಹಂಚಿಕೊಂಡಿರುವ ಪಾಕಿಸ್ತಾನ ಸರ್ಕಾರವು, ಶತ್ರುಗಳಿಂದ ಉಂಟಾದ ಭಾರೀ ನಷ್ಟದ ನಂತರ ಪಾಕಿಸ್ತಾನ ಸರ್ಕಾರ ಅಂತಾರಾಷ್ಟ್ರೀಯ ಪಾಲುದಾರರಿಗೆ ಹೆಚ್ಚಿನ ಸಾಲಕ್ಕಾಗಿ ಮನವಿ ಮಾಡುತ್ತಿದೆ. ಹೆಚ್ಚುತ್ತಿರುವ ಯುದ್ಧ ಮತ್ತು ಷೇರು ಕುಸಿತದ ಮಧ್ಯೆ, ಆರ್ಥಿಕ ದುಸ್ತರ ಕಡಿಮೆ ಮಾಡಲು ಸಹಾಯ ಮಾಡುವಂತೆ ಪಾಲುದಾರರನ್ನು ಒತ್ತಾಯಿಸುತ್ತೇವೆ. ರಾಷ್ಟ್ರವು ದೃಢವಾಗಿರಲು ಮನವಿ ಮಾಡುತ್ತಿದೆ ಎಂದು ಬರೆದುಕೊಂಡಿದೆ. ಇದನ್ನೂ ಓದಿ: Video | ಪ್ರತೀಕಾರ ಸಮರ – ರಾತ್ರಿಯಿಡೀ ವಾರ್‌ರೂಂನಲ್ಲಿದ್ದು ಕ್ಷಣಕ್ಷಣದ ಮಾಹಿತಿ ಪಡೆದ ಮೋದಿ

    ಎಟಿಎಂಗಳಲ್ಲಿ ಹಣ ಡ್ರಾ ಮಿತಿ ಇಳಿಕೆ:
    ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಮಾಸ್ಟರ್‌ ಸ್ಟ್ರೋಕ್‌ ಕೊಟ್ಟಿದೆ. ಪಾಕ್‌ನ 16 ಕಡೆ ಭಾರತದ ದಾಳಿಯಿಂದ ಮೂಲ ಸೌಕರ್ಯಗಳು ನಷ್ಟವಾಗಿದೆ. ಹಲವೆಡೆ ಬ್ಯಾಂಕ್‌ಗಳಲ್ಲೂ ಹಣ ಖಾಲಿಯಾಗಿದ್ದು, ಎಟಿಎಂಗಳಲ್ಲಿ ಹಣದ ಡ್ರಾ ಮಿತಿಯನ್ನು 3 ಸಾವಿರ ಪಾಕಿಸ್ತಾನಿ ರೂಪಾಯಿಗೆ ಇಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಬಿಎಸ್‌ಎಫ್‌ ಯೋಧರ ಭರ್ಜರಿ ಬೇಟೆ – ಸಾಂಬಾದಲ್ಲಿ 7 ಮಂದಿ ಜೈಶ್‌ ಉಗ್ರರ ಹತ್ಯೆ

  • ಕಾಂಗ್ರೆಸ್‌ಗೆ ಕೊಡುವ ಒಂದೊಂದು ಮತ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ: ಬಿಎಸ್‌ವೈ ಕಿಡಿ

    ಕಾಂಗ್ರೆಸ್‌ಗೆ ಕೊಡುವ ಒಂದೊಂದು ಮತ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ: ಬಿಎಸ್‌ವೈ ಕಿಡಿ

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಕಾಂಗ್ರೆಸ್ ಪಕ್ಷಕ್ಕೆ ಕೊಡುವ ಒಂದೊಂದು ಮತವೂ ಆರ್ಥಿಕ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ ಆಗುತ್ತೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಕಿಡಿ ಕಾರಿದ್ದಾರೆ.

    ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ (BJP Office) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಡೆಯುತ್ತಿದೆ ಅನ್ನೋದನ್ನ ಕಾಂಗ್ರೆಸ್ ನಾಯಕರು ಮರೆತುಹೋಗಿದ್ದಾರೆ ಅನ್ನಿಸ್ತಿದೆ. ರಾಹುಲ್ (Rahul Gandhi) ನಾಯಕತ್ವ ವಿಫಲವಾಗಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ವಿಶ್ವಾಸ ಇಲ್ಲ, ಹಾಗಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ. ಆದ್ರೆ ನಾವು ಮೋದಿ ಅವರ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ಸಿದ್ದರಾಮಯ್ಯ ಸರ್ಕಾರ ಕಳೆದ 10 ತಿಂಗಳಲ್ಲಿ ಎಷ್ಟು ಉದ್ಯೋಗ ಸೃಷ್ಟಿ ಮಾಡಿದೆ ಹೇಳಲಿ? ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್ ಎಕ್ಸ್ ಖಾತೆಯಲ್ಲಿ ಮಾತ್ರ ಉದ್ಯೋಗ ಸೃಷ್ಟಿ ಆಗ್ತಿದೆ ಅಷ್ಟೇ. ಒಂದೇ ಒಂದು ಉದ್ಯೋಗ ಕೊಟ್ಟಿಲ್ಲ ಎಂದು ಕಿಡಿ ಕಾರಿದ್ದಾರೆ.

    ಮೋದಿ ಅವರಿಗೆ 2 ಕೋಟಿ ಉದ್ಯೋಗ ಎಲ್ಲಿ ಎಂದು ಕೇಳ್ತಿದ್ದಾರೆ? ದೇಶದಲ್ಲಿ 7 ಕೋಟಿ ಹೊಸ ಉದ್ಯೋಗ ಭವಿಷ್ಯ ನಿಧಿ ಅಡಿ ಸೃಷ್ಟಿ ಆಗಿದೆ. ಹೆಚ್‌ಎಎಲ್ ಮುಚ್ಚಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದ್ರೆ ಅಲ್ಲಿ 84,000 ಕೋಟಿ ಕೆಲಸ ಆಗಿದೆ. ಈಗ 54,000 ಕೋಟಿ ರೂ. ವೆಚ್ಚದ ಕೆಲಸ ಅಲ್ಲಿ ನಡೆಯುತ್ತಿದೆ. ಈಗ ರಾಹುಲ್ ಗಾಂಧಿ ಕ್ಷಮೆ ಕೇಳ್ತಾರಾ? ಅಥವಾ ಡಿಕೆಶಿ ಅವರಿಂದ ಕ್ಷಮೆ ಕೇಳಿಸುತ್ತಾರಾ? ಎಂದು ಪ್ರಶ್ನೆ ಮಾಡಿದ್ದಾರೆ.

    ಕಾಂಗ್ರೆಸ್ ದಿವಾಳಿ ಸರ್ಕಾರ:
    ಕಾಂಗ್ರೆಸ್ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರದಿಂದ ಕೊಡಬೇಕಿರುವ ಹಣ ರೈತರಿಗೆ ಕೊಟ್ಟಿಲ್ಲ. ಇದು ದಿವಾಳಿಯಾಗಿರುವ ಸರ್ಕಾರ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೊಡುವ ಮತ ಆರ್ಥಿಕ ದಿವಾಳಿತನಕ್ಕೆ ಕೊಡುವ ಮತ, ಕಾಂಗ್ರೆಸ್ ಗೆ ಕೊಡುವ ಮತ ಭ್ರಷ್ಟಾಚಾರಕ್ಕೆ ಕೊಡುವ ಮತ, ಕಾಂಗ್ರೆಸ್‌ಗೆ ಕೊಡುವ ಮತ ದೇಶದ ಅಭದ್ರತೆಗೆ ನೀಡುವ ಮತ ಆಗುತ್ತೆ ಅಂದು ಆಕ್ರೋಶ ಹೊರಹಾಕಿದ್ದಾರೆ.

    ಇದೇ ವೇಳೆ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ ಬಿಎಸ್‌ವೈ, ಒಕ್ಕಲಿಗ ಸಿಎಂ ತೆಗೆದವರು ಯಾರೆಂದು ಸ್ವಾಮೀಜಿ ಅವರ ಹತ್ರ ಹೋಗಿ ಅವರೇ ಕೇಳಲಿ, ಅವರೇ ಹೇಳಲಿ. ಡಿ.ಕೆ.ಶಿವಕುಮಾರ್ ಇಂತದ್ದನ್ನ ಬಿಟ್ಟು ಬೇರೆನೂ ಹೇಳಲು ಸಾಧ್ಯ? ಒಕ್ಕಲಿಗ ಸಮುದಾಯ ಒಗ್ಗಟ್ಟಾಗಿದ್ದಾರೆ, ನಮ್ಮ ಜೊತೆ ಇದ್ದಾರೆ ಎಂದು ತಿಳಿಸಿದ್ದಾರೆ.

    28 ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ:
    ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ಸುಳ್ಳು ಆಶ್ವಾಸನೆಯಿಂದ ಅಭಿವೃದ್ಧಿ ಕುಂಠಿತವಾಗಿದೆ. ಬಿಜೆಪಿ 400ಕ್ಕೂ ಹೆಚ್ಚು ಸೀಟು ಗೆದ್ದು, ರಾಜ್ಯದಲ್ಲಿ 28 ಕ್ಷೇತ್ರ ಗೆದ್ದು ಸಂಸದರನ್ನ ದೆಹಲಿಗೆ ಕರೆದುಕೊಂಡು ಹೋಗ್ತೀನಿ ಎಂದು ಸವಾಲ್ ಹಾಕಿದ್ದಾರೆ.

  • ಇಂಗ್ಲೆಂಡ್‍ನ ಅತೀ ದೊಡ್ಡ ನಗರಕ್ಕೆ ಆರ್ಥಿಕ ಸಂಕಷ್ಟ – ತುರ್ತು ಪರಿಸ್ಥಿತಿ ಘೋಷಣೆ

    ಇಂಗ್ಲೆಂಡ್‍ನ ಅತೀ ದೊಡ್ಡ ನಗರಕ್ಕೆ ಆರ್ಥಿಕ ಸಂಕಷ್ಟ – ತುರ್ತು ಪರಿಸ್ಥಿತಿ ಘೋಷಣೆ

    ಲಂಡನ್: ಇಂಗ್ಲೆಂಡ್‍ನ (England) ಎರಡನೇ ಅತಿ ದೊಡ್ಡ ನಗರ ಬರ್ಮಿಂಗ್ಹ್ಯಾಮ್ (Birmingham) ಆರ್ಥಿಕ ತುರ್ತು ಪರಿಸ್ಥಿತಿ (Financial Emergency) ಘೋಷಿಸಿಕೊಂಡಿದೆ. 1988ರ ಸ್ಥಳೀಯ ಸರ್ಕಾರದ ಹಣಕಾಸು ಕಾಯಿದೆ ಅಡಿಯಲ್ಲಿ ಸೆಕ್ಷನ್ 114 ಸೂಚನೆಯನ್ನು ನೀಡಲಾಗಿದೆ. ಇದು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ವೆಚ್ಚವನ್ನು ನಿರ್ಬಂಧಿಸುತ್ತದೆ.

    ಅಲ್ಲಿನ ಸ್ಥಳೀಯ ಆಡಳಿತ ತನ್ನ ಬಜೆಟ್ ಸಮತೋಲನಗೊಳಿಸಲು ಸಾಧ್ಯವಿಲ್ಲ ಎಂದು ಒಪ್ಪಿಕೊಂಡಿದೆ. ಈ ಮೂಲಕ ಸರ್ಕಾರವನ್ನು ದೂಷಿಸಿದೆ. 2010 ರಿಂದ ಸರ್ಕಾರಗಳ ನೀತಿಯಿಂದ ಈ ಸಮಸ್ಯೆ ಎದುರಾಗಿದೆ. ಬಜೆಟ್‍ನಲ್ಲಿ 1.25 ಶತಕೋಟಿ ಡಾಲರ್ ಕಡಿತಗೊಳಿಸಿರುವುದು ಇಂದಿನ ಸಮಸ್ಯೆಗೆ ಮೂಲ ಕಾರಣ ಎಂದು ಸ್ಥಳೀಯ ಆಡಳಿತ ಹೇಳಿಕೊಂಡಿದೆ. ಇದನ್ನೂ ಓದಿ: ಮಳೆ ಕೊರತೆ ನಡುವೆಯೂ ತಮಿಳುನಾಡಿಗೆ ನೀರು- ಸುಪ್ರೀಂಕೋರ್ಟ್‍ನಲ್ಲಿಂದು ಮಹತ್ವದ ವಿಚಾರಣೆ

    ಜನರ ಆದಾಯ ಹಾಗೂ ವೆಚ್ಚಗಳಿಗೆ ಸರಿ ಹೊಂದಿಕೆ ಆಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಗತ್ಯ ಸೇವೆಗಳ ವೆಚ್ಚವು ಭಾರೀ ದುಬಾರಿಯಾಗಿದೆ. ಇದು ಆರ್ಥಿಕ ವ್ಯವಸ್ಥೆಯಲ್ಲಿ ಅಲ್ಲೋಲ ಕಲ್ಲೋಲಗಳಿಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಸರಿಯಾದ ಕ್ರಮವಾಗಿದೆ ಎಂದು ಕಾರ್ಮಿಕ ಮುಖಂಡರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

    ಅಗತ್ಯ ಸೇವೆಗಳಿಗೆ ಸರ್ಕಾರದ ನಿಧಿ ಕಡಿತದಿಂದ, ಹೆಚ್ಚುತ್ತಿರುವ ಇಂಧನ ದರ ಮತ್ತು ವೇತನ ಬೇಡಿಕೆಗಳು ಸಹ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ. ಇದೇ ರೀತಿಯಾಗಿ ದಕ್ಷಿಣ ಲಂಡನ್‍ನಲ್ಲಿರುವ ಕ್ರೊಯ್ಡಾನ್ ಕೌನ್ಸಿಲ್ ಸಹ ಕಳೆದ ವರ್ಷ ನವೆಂಬರ್‌ನಲ್ಲಿ ಹಾಗೂ ಲಂಡನ್‍ನ ಪೂರ್ವದ ಎಸೆಕ್ಸ್‌ನಲ್ಲಿರುವ ಥುರಾಕ್ ಕೌನ್ಸಿಲ್ ಡಿಸೆಂಬರ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿಕೊಂಡಿದ್ದವು.

    ಕೌನ್ಸಿಲರ್‌ಗಳು ಸೆಕ್ಷನ್ 114 ಸೂಚನೆಯನ್ನು ನೀಡಿದ 21 ದಿನಗಳೊಳಗೆ ಸಭೆ ಸೇರಬೇಕು. ಅಲ್ಲದೇ ಖರ್ಚು ಕಡಿಮೆ ಮಾಡಲು ಅಗತ್ಯವಾದ ಬಜೆಟ್‍ನ್ನು ಮಂಡಿಸಬೇಕು. ಇದನ್ನೂ ಓದಿ: ದೇಶಕ್ಕೆ ಭಾರತ ಎಂಬ ಹೆಸರೇಕೆ ಬಂತು? ಇಂಡಿಯಾ ಹೆಸರು ಹೇಗೆ ಬಂತು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಾತ್ರೆ ಉತ್ಸವ ನಂಬಿರುವ ನಮಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಆರಿಫ್

    ಜಾತ್ರೆ ಉತ್ಸವ ನಂಬಿರುವ ನಮಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಆರಿಫ್

    ಉಡುಪಿ: ಹಿಂದೂ ಧರ್ಮೀಯರಿಗೆ ನಾವು ಚಿಕ್ಕಂದಿನಿಂದಲೂ ಗೌರವ ಕೊಡುತ್ತಾ ಬಂದಿದ್ದೇವೆ‌. ಈಗಲೂ ಅವರ ಜೊತೆಗೆ ನಾವು ಬಹಳ ಅನ್ಯೋನ್ಯವಾಗಿ ಇದ್ದೇವೆ. ಬೀದಿ ಬದಿ ವ್ಯಾಪಾರಿಗಳಿಗೆ ಜಾತ್ರೆ-ಉತ್ಸವಗಳಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಉಡುಪಿ ಜಿಲ್ಲಾ ಜಾತ್ರೆ ಮತ್ತು ಬೀದಿ ಬದಿ ವ್ಯಾಪಾರಿಗಳ ಸಂಘ ವಿನಂತಿ ಮಾಡಿದೆ.

    ಹಿಜಬ್ ಕುರಿತಾದ ತೀರ್ಪನ್ನು ಉಡುಪಿಯ ಮುಸಲ್ಮಾನ ಸಮುದಾಯ ಒಂದು ದಿನ ವ್ಯಾಪಾರ ವಹಿವಾಟು ಮತ್ತು ತಮ್ಮ ಎಲ್ಲಾ ಚಟುವಟಿಕೆ ಬಂದ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಇದರಿಂದ ಆಕ್ರೋಶಗೊಂಡ ಹಿಂದೂ ಸಮಾಜ, ಮುಸಲ್ಮಾನ ವ್ಯಾಪಾರಿಗಳು ಹಿಂದೂ ಧರ್ಮೀಯರ ಧಾರ್ಮಿಕ ಕೇಂದ್ರಗಳಲ್ಲಿ ಉತ್ಸವ ಜಾತ್ರೆ ಹಬ್ಬ-ಹರಿದಿನಗಳಲ್ಲಿ ದೇವಸ್ಥಾನ ಮತ್ತು ದೇವಸ್ಥಾನದ ವ್ಯಾಪ್ತಿಯಲ್ಲಿ ವ್ಯಾಪಾರ-ವಹಿವಾಟು ಮಾಡಬಾರದು ಎಂಬ ಹೋರಾಟ ಮಾಡಿದೆ. ಧಾರ್ಮಿಕ ಕೇಂದ್ರಗಳಿಗೆ ಈ ಕುರಿತಾದ ಪತ್ರಗಳನ್ನು ಕೊಡುತ್ತಿದೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದೆ.

    ಈ ಬಗ್ಗೆ ಮಾತನಾಡಿದ ಜಾತ್ರೆ, ಬೀದಿ ಬದಿ ವ್ಯಾಪಾರಿ ಸಂಘದ ಪ್ರಧಾನ ಕಾರ್ಯದರ್ಶಿ ಆರಿಫ್, ಜಾತ್ರೆ ಮತ್ತು ಬೀದಿಬದಿ ವ್ಯಾಪಾರದಲ್ಲಿ 1500ಕ್ಕೂ ಹೆಚ್ಚು ಜನ ನಾವು ಇದ್ದೇವೆ. ಸುಮಾರು 630 ಕುಟುಂಬ ಬೀದಿ ಬದಿ ವ್ಯಾಪಾರ ಮತ್ತು ಜಾತ್ರೆಯ ವ್ಯಾಪಾರದಿಂದ ಜೀವನ ಸಾಗಿಸುತ್ತಿದೆ. ಹಿಜಬ್ ತೀರ್ಪು ನಂತರ ಅಂಗಡಿಗಳನ್ನು ಬಂದ್ ಮಾಡಲು ಕರೆ ಕೊಟ್ಟಿದ್ದರು.

    ಮುಸಲ್ಮಾನ ಮುಖಂಡರು ಸಂಘಟನೆಗಳಿಂದ ಬಂದ್ ಮಾಡಬೇಕು ಎಂಬ ಸೂಚನೆ ಬಂದಿತ್ತು. ನಾವು ಜಾತ್ರೆ ಮತ್ತು ಬೀದಿಬದಿ ವ್ಯಾಪಾರಸ್ಥರು ಯಾವುದೇ ಬಂದ್ ಗೆ ಬೆಂಬಲ ವ್ಯಕ್ತ ಪಡಿಸಿಲ್ಲ. ಜಾತ್ರೆ, ಉತ್ಸವ- ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾವು ನಮ್ಮ ವ್ಯಾಪಾರವನ್ನು ಅಂದೂ ಮುಂದುವರಿಸಿದ್ದೆವು. ಒಂದು ದಿನ ಇದ್ಧ ಬಂದಿಗೆ ನಾವು ಬೆಂಬಲಿಸಿರಲಿಲ್ಲ. ನಾವು ವ್ಯಾಪಾರ ಮಾಡಿದ್ದೆವು ಎಂದರು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಪ್ರದರ್ಶನ: ರಾಜಸ್ಥಾನದ ಕೋಟಾದಲ್ಲಿ 144 ಸೆಕ್ಷನ್ ಜಾರಿ

    ಸಾಂಕ್ರಾಮಿಕ ಕೊರೋನ ಬಂದನಂತರ ನಮ್ಮ ಜಾತ್ರೆಗಳಲ್ಲಿ ವ್ಯಾಪಾರ ಮಾಡುವವರ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಈಗ ಈ ತರದ ಮುಸಲ್ಮಾನ ವ್ಯಾಪಾರಿಗಳು ಜಾತ್ರೆಗಳಿಗೆ ಬರಬಾರದು ಎಂಬ ನಿರ್ಬಂಧ ನಮ್ಮನ್ನ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತದೆ. ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ ಎಂದು ಸಂಘದ ಪರವಾಗಿ ಆರಿಫ್ ವಿನಂತಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ ಬಳಿಕ ಪಾಕ್ ಪ್ರಧಾನಿ ಆಗ್ತಾರಾ ಶೆಹಬಾಜ್ ಷರೀಫ್?

  • ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ

    ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ

    ಕೊಲಂಬೊ: ಶ್ರೀಲಂಕಾದಲ್ಲಿ ಮುದ್ರಣ ಕಾಗದಕ್ಕೆ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ನಡೆಯಬೇಕಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

    ಎಲ್ಲ ಅಂದುಕೊಂಡಂತೆಯೇ ಆಗಿದ್ದರೆ ದೇಶಾದ್ಯಂತ ಸುಮಾರು 45 ಲಕ್ಷ ಮಂದಿ ಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಆದರೆ ಹಾಗಾಗಲಿಲ್ಲ. ದೇಶದಲ್ಲಿ ಪೇಪರ್ ಕೊರತೆ ಕಂಡುಬಂದಿದ್ದರಿಂದ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಪರೀಕ್ಷೆಗೆ ಗೈರಾದ್ರೆ ಅಲ್ಲಿಗೇ ಮುಗೀತು, ಅವಕಾಶ ನೀಡಲ್ಲ: ಬಿ.ಸಿ.ನಾಗೇಶ್

    ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಜಗತ್ತಿಗೆ ಗೊತ್ತಿದೆ. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂಪಾಯಿ ನೆರವನ್ನು ಶ್ರೀಲಂಕಾಗೆ ನೀಡುವುದಾಗಿ ಘೋಷಿಸಿತ್ತು. 1948ರಲ್ಲಿ ಸ್ವಾತಂತ್ರ್ಯ ಗಿಟ್ಟಿಸಿಕೊಂಡ ನಂತರ ಇದೇ ಮೊದಲ ಬಾರಿ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಹೀಗಾಗಿ ಪರಿಸ್ಥಿತಿ ಹದಗೆಡುತ್ತಿದ್ದು, ಅಗತ್ಯ ವಸ್ತೈಗಳಿಗೂ ಭಾರೀ ಕೊರತೆ ಉಂಟಾಗಿದೆ. ಇದರ ಬೆನ್ನಲ್ಲೇ ಈ ಮುಗ್ಗಟ್ಟು ಪರೀಕ್ಷೆಯ ಮೆಲೂ ಪರಿಣಾಮ ಸೃಷ್ಟಿಸಿದೆ.

    ಶ್ರೀಲಂಕಾದಲ್ಲಿ ವಿದೇಶಿ ವಿನಿಮಯದ ಕೊರತೆ ಉಂಟಾಗಿದ್ದು, ಸರ್ಕಾರದ ಬಳಿ ಮುದ್ರಣ ಕಾಗದ ಹಾಗೂ ಶಾಯಿಯನ್ನು ಖರೀದಿಸುವಷ್ಟೂ ಹಣವಿಲ್ಲ. ಹೀಗಾಗಿ ಇಂದು ನಡೆಯಬೇಕಾಗಿದ್ದ ಪರೀಕ್ಷೆಗಳು ಅನಿರ್ದಿಷ್ಟ ಅವರೀಗೆ ಮುಂದೂಡಲಾಗಿದೆ. ಇದರಿಂದ ಸುಮಾರು 30 ಲಕ್ಷ ಮಕ್ಕಳ ಭವಿಷ್ಯದ ಮೇಲೆ ತೂಗುಕತ್ತಿ ನೇತಾಡುತ್ತಿದೆ. ಇದನ್ನೂ ಓದಿ: ಪರ್ವತಕ್ಕೆ ಅಪ್ಪಳಿಸಿದ 133 ಪ್ರಯಾಣಿಕರಿದ್ದ ಚೀನಾ ವಿಮಾನ – ಹೊತ್ತಿ ಉರಿದ ಅರಣ್ಯ ಪ್ರದೇಶ

    ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ನೆರವಿಗಾಗಿ ವಿಶ್ವ ಬ್ಯಾಂಕ್ ಅನ್ನೂ ಸಂಪರ್ಕಿಸಿದ್ದಾರೆ. ಈ ಬಗ್ಗೆ ವಿಶ್ವ ಬ್ಯಾಂಕ್ ಇದುವರೆಗೂ ಏನನ್ನೂ ಹೇಳಿಲ್ಲ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವಾಗ ಕೈಗೊಳ್ಳಲಾಗುವುದು ಎಂಬುದರ ಬಗ್ಗೆ ಸರ್ಕಾರ ಇನ್ನೂ ಖಚಿತವಾಗಿ ಹೇಳಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

  • ಅಸಹಾಯಕ ಯುವತಿಯರೇ ಇವರ ಟಾರ್ಗೆಟ್ – ಕೆಲಸಕ್ಕೆ ಕರೆದು ಸೆಕ್ಸ್ ದಂಧೆಗೆ ಬಳಕೆ!

    ಅಸಹಾಯಕ ಯುವತಿಯರೇ ಇವರ ಟಾರ್ಗೆಟ್ – ಕೆಲಸಕ್ಕೆ ಕರೆದು ಸೆಕ್ಸ್ ದಂಧೆಗೆ ಬಳಕೆ!

    ಪಾಟ್ನಾ: ಕೆಲಸ ಹುಡುಕುತ್ತಿದ್ದ ಅಮಾಯಕ ಯುವತಿಯರನ್ನ ಬಳಸಿಕೊಂಡು ಸೆಕ್ಸ್ ದಂಧೆ ನಡೆಸುತ್ತಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ, ಆರಕ್ಕೂ ಹೆಚ್ಚು ಜನರನ್ನ ಬಂಧಿಸಿದ್ದಾರೆ. ಬಿಹಾರದ ಸಮಸ್ತಿಪುರದ ಸಿದ್ಧಿ ವಿನಾಯಕ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು.

    ವೇಶ್ಯಾವಾಟಿಕೆಯ ಸೂಚನೆ ಸಿಗುತ್ತಿದ್ದಂತೆ ಟ್ರೈನಿ ಐಪಿಎಸ್ ಹಿಮಾಂಶು ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಹೋಟೆಲ್ ನ ವಿವಿಧ ಕೋಣೆಗಳಿಂದ ಮೂರು ಜೋಡಿಗಳನ್ನ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಹೋಟೆಲ್ ಮಾಲೀಕನ ಪುತ್ರ ಮತ್ತು ಓರ್ವ ಕೆಲಸಗಾರನನ್ನು ಬಂಧಿಸಿದ್ದಾರೆ.

    ಕೆಲಸ ಮತ್ತು ಹಣದ ಅವಶ್ಯಕತೆ ಇರೋ ಯುವತಿಯರನ್ನ ಟಾರ್ಗೆಟ್ ಮಾಡಿ ಅವರನ್ನ ವೇಶ್ಯಾವಾಟಿಕೆ ಬಳಸಿಕೊಳ್ಳುತ್ತಿದ್ದರು. ಕೆಲಸದ ಆಮೀಷ ಒಡ್ಡಿ ಬಲವಂತವಾಗಿ ಸೆಕ್ಸ್ ಕೂಪಕ್ಕೆ ತಳ್ಳುತ್ತಿದ್ದರು. ಪೊಲೀಸರು ಯುವತಿಯರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

    ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರು ವಿವಾಹಿತೆಯರು, ಓರ್ವ ಯುವತಿ ಮತ್ತು ಗ್ರಾಹಕರಿಬ್ಬರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ದಂಧೆಯ ಕಿಂಗ್ ಪಿನ್ ಎಸ್ಕೇಪ್ ಆಗಿದ್ದಾನೆ. ಉತ್ತರ ಪ್ರದೇಶದ ಆಗ್ರಾ ರಕಾಬಂಗಾಜ್‍ನಲ್ಲಿರುವ ಆರ್.ಬಿ.ರೆಸಿಡೆನ್ಸಿ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ದೂರುಗಳು ಬಂದಿದ್ದವು.

    ಆಗ್ರಾದ ಹೋಟೆಲ್ ಮೇಲೆ ದಾಳಿ: ಆಗ್ರಾದ ಹೋಟೆಲ್ ಮೇಲೆ ದಾಳಿ ನಡೆಸಿದಾಗ ವಿವಿಧ ಕೋಣೆಗಳಲ್ಲಿದ್ದ ಒಟ್ಟು ಏಳು ಜನರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರ ದಾಳಿಯಾಗುತ್ತಲೇ ಭಯಗೊಂಡ ಯುವತಿ ಗೋಳು ಅಂತ ಕಣ್ಣೀರಿಟ್ಟಿದ್ದಾಳೆ. ಎಲ್ಲರನ್ನ ಠಾಣೆಗೆ ಕರೆ ತಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆಯರು ಫಿರೋಜಾಬಾದ್, ಧನೌಲಿ, ಮಲ್ಪುರಾ ನಿವಾಸಿಗಳೆಂದು ತಿಳಿದು ಬಂದಿದೆ. ಹೋಟೆಲ್ ಹೊರಗೆ ನಿಲ್ಲುತ್ತಿದ್ದ ವ್ಯಕ್ತಿ ಗಂಟೆಗೆ 600 ರೂ.ಯಂತೆ ಕೋಣೆಗಳನ್ನ ಬಾಡಿಗೆ ನೀಡುತ್ತಿದ್ದನು. ಇನ್ನು ಹೋಟೆಲ್ ನಲ್ಲಿದ್ದ ಮಹಿಳೆಯರು ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದ್ದರು.

    ವೇಶ್ಯಾವಾಟಿಕೆ ಸಿಲುಕಿರುವ ಮಹಿಳೆಯರಿಗೆ ಗಂಡ, ಮಕ್ಕಳು ಇವೆ. ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಕೊರೊನಾ ವೇಳೆ ಕೆಲಸ ಕಳೆದುಕೊಂಡಿದ್ದರು. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದ ಇವರು ದೇಹ ವ್ಯಾಪಾರಕ್ಕೆ ಮುಂದಾಗಿದ್ದರು. ಆದ್ರೆ ಇವರ ಈ ಕೆಲಸ ಕುಟುಂಬಸ್ಥರಿಗೆ ಹೇಳಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಹೇಶ್ ಕುಮಾರ್ ಹೇಳಿದ್ದಾರೆ. ಇದೇ ಪ್ರಕರಣದಲ್ಲಿ ಸಿಲುಕಿರುವ ಯುವತಿ ತನ್ನ ಹೆಸರು ಮತ್ತು ವಿಳಾಸ ಹೇಳಿಲ್ಲ. ಗೆಳೆಯನ ಜೊತೆ ಬಂದಿದ್ದೆ ಎಂದು ಕಣ್ಣೀರು ಹಾಕುತ್ತಿದ್ದಾಳೆ. ಆದ್ರೆ ರೂಮ್ ಬುಕ್ ಮಾಡಿದ್ಯಾಕೆ ಎಂಬ ಪ್ರಶ್ನೆಗೆ ಯುವತಿ ಉತ್ತರಿಸುತ್ತಿಲ್ಲ. ಬಂಧಿತ ಯುವಕರು ಮಲ್ಪುರಾದವರು ಎಂದು ವರದಿಯಾಗಿದೆ.

  • ಉದ್ಯೋಗವಿಲ್ಲದೇ ದಿನಗೂಲಿ ಕುರಿಗಾಯಿಯಾದ ಉಪನ್ಯಾಸಕ

    ಉದ್ಯೋಗವಿಲ್ಲದೇ ದಿನಗೂಲಿ ಕುರಿಗಾಯಿಯಾದ ಉಪನ್ಯಾಸಕ

    ರಾಯಚೂರು: ಕೊರೊನಾ ಹಿನ್ನೆಲೆಯಲ್ಲಿ ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಜಿಲ್ಲೆಯ ಅತಿಥಿ ಉಪನ್ಯಾಸಕರೊಬ್ಬರು ದಿನಗೂಲಿ ಕುರಿಗಾಯಿಯಾಗಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರೂ ಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ.

    ಕಳೆದ 9 ವರ್ಷಗಳಿಂದ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ದೇವದುರ್ಗ ತಾಲೂಕಿನ ಹುಲಿಗುಡ್ಡ ಗ್ರಾಮದ ವೀರನಗೌಡ ವೇತನವಿಲ್ಲದೇ ಸಂಕಷ್ಟಕ್ಕೆ ಒಳಗಾಗಿ ಕುರಿ ಮೇಯಿಸುತ್ತಿದ್ದಾರೆ. ಎಂಎ, ಬಿಎಡ್ ಪದವೀಧರ ವೀರನಗೌಡ ಸರ್ಕಾರಿ ಪದವಿ ಕಾಲೇಜು ಮಸ್ಕಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.

    ಇಬ್ಬರು ಮಕ್ಕಳಿರುವ, ಕೂಡು ಕುಟುಂಬದ ವೀರನಗೌಡ ಸಿಇಟಿ ಹಾಗೂ ಕೆಸೆಟ್ ಸಹ ಮಾಡಿಕೊಂಡಿದ್ದಾರೆ. ಕಳೆದ ಆರೇಳು ತಿಂಗಳಿಂದ ವೇತನ ಇಲ್ಲದೇ ಆರ್ಥಿಕ ಸಂಕಷ್ಟದಲ್ಲಿರುವ ವೀರನಗೌಡ ಆರ್ಥಿಕ ಸಂಕಷ್ಟ ನಿಭಾಯಿಸಲು ಕಾಡು, ಮೇಡು ಅಲೆದು ಕುರಿ ಕಾಯುತ್ತಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಕಡೆ ಗಮನಹರಿಸಬೇಕು ಅಂತ ವೀರನಗೌಡ ಮನವಿ ಮಾಡಿದ್ದಾರೆ.

  • ಪತ್ನಿ, ಮಕ್ಕಳಿಬ್ಬರನ್ನ ಕೊಂದು ಉದ್ಯಮಿ ಆತ್ಮಹತ್ಯೆ

    ಪತ್ನಿ, ಮಕ್ಕಳಿಬ್ಬರನ್ನ ಕೊಂದು ಉದ್ಯಮಿ ಆತ್ಮಹತ್ಯೆ

    – ಉದ್ಯಮಿ ಮನೆಯಲ್ಲಿ ಡೆತ್‍ನೋಟ್ ಪತ್ತೆ
    – ಡೆತ್ ನೋಟ್‍ನಲ್ಲಿ 9 ಜನರ ಹೆಸರು

    ಚಂಡೀಗಢ: ಉದ್ಯಮಿಯೋರ್ವ ಪತ್ನಿ ಮತ್ತು ಮುದ್ದಾದ ಇಬ್ಬರು ಮಕ್ಕಳನ್ನು ಕೊಂದು, ಕೊನೆಗೆ ತಾನು ಶೂಟ್ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಪಂಜಾಬ್ ರಾಜ್ಯದ ಬಟಿಂಡಾದಲ್ಲಿ ನಡೆದಿದೆ. ಉದ್ಯಮಿ ಮನೆಯಲ್ಲಿ ಪೊಲೀಸರಿಗೆ ಡೆತ್ ನೋಟ್ ಲಭ್ಯವಾಗಿದೆ.

    ಉದ್ಯಮಿ ದೇವಿಂದರ್ ಗರ್ಗ್ (41), ಪತ್ನಿ ಮೀನಾ (38), ಪುತ್ರ ಆರೂಷ್ (14) ಮತ್ತು ಪುತ್ರಿ ಮುಸ್ಕಾನ್ (10) ಮೃತರು. ಆರ್ಥಿಕ ಸಂಕಷ್ಟ ಹಿನ್ನೆಲೆ ಈ ನಿರ್ಧಾರಕ್ಕೆ ಬಂದಿರೋದಾಗಿ ದೇವಿಂದರ್ ಡೆತ್ ನೋಟ್ ನಲ್ಲಿ ಬರೆದಿದ್ದು, ಪತ್ರದಲ್ಲಿ ಸಾಲ ಪಡೆದ 9 ಜನರ ಹೆಸರುಗಳಿವೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟ- ಪತ್ನಿ, ಮಕ್ಕಳಿಬ್ಬರನ್ನು ಕೆರೆಗೆ ತಳ್ಳಿ ಪತಿ ಎಸ್ಕೇಪ್

    ದೇವಿಂದರ್ ಬಟಿಂಡಾ ಗ್ರೀನ್ ಸಿಟಿ ಕಾಲೋನಿ ಕೋಟಿ ನಂಬರ್ 284ರಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಖಾಸಗಿ ಕಂಪನಿ ಮೂಲಕ ವ್ಯವಹಾರ ನಡೆಸುತ್ತಿದ್ದ ದೇವಿಂದರ್ ಲಾಕ್‍ಡೌನ್ ಹೊಡೆತದಿಂದ ಚೇತರಿಸಿಕೊಂಡಿರಲಿಲ್ಲ. ಲಾಕ್‍ಡೌನ್ ವೇಳೆ ಎಲ್ಲ ವ್ಯವಹಾರಗಳು ಸ್ಥಗಿತಗೊಂಡಿದ್ದರಿಂದ ದೇವಿಂದರ್ ಕೋಟಿ ಸಾಲದ ಸುಳಿಯಲ್ಲಿ ಸಿಲುಕಿದ್ದರು. ಸಾಲದ ಒತ್ತಡದಲ್ಲಿದ್ದ ದೇವಿಂದರ್ ಇಂದು ಮಧ್ಯಾಹ್ನ ಸುಮಾರು 4 ಗಂಟೆಗೆ ತಮ್ಮ ಬಳಿಯಲ್ಲಿದ್ದ ಲೈಸನ್ಸ್ ಗನ್ ನಿಂದ ಮಕ್ಕಳು ಮತ್ತು ಪತ್ನಿಗೆ ಶೂಟ್ ಮಾಡಿದ್ದಾರೆ. ನಂತರ ಅದೇ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟ – ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡ ಅಮ್ಮ, ಮಗ

    ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಎಸ್‍ಎಸ್‍ಪಿ ಭೂಪಿಂದರ್ ಸಿಂಗ್ ತಮ್ಮ ತಂಡದೊಂದಿಗೆ ತೆರಳಿದ್ದಾರೆ. ನಾಲ್ಕು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿಟಿ ಸಿವಿಲ್ ಆಸ್ಪತ್ರೆಗೆ ರವಾನಿಸಿದ್ದು, ಮನೆಯಲ್ಲಿ ಸಿಕ್ಕ ಡೆತ್ ನೋಟ್, ಗನ್ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕೊರೊನಾ ಆರ್ಥಿಕ ಸಂಕಷ್ಟ- ಉಡುಪಿಯಲ್ಲಿ ಮೂವರು ಆತ್ಮಹತ್ಯೆ

    ಮೃತ ದೇವಿಂದರ್ ಬಿಟ್‍ಕಾಯಿನ್ ಕಂಪನಿಯ ವ್ಯವಹಾರಗಳನ್ನ ಮಾಡುತ್ತಿದ್ದರು. ಕಂಪನಿಯಲ್ಲಿ ಸುಮಾರು 15 ಕೋಟಿಗೂ ಅಧಿಕ ಬಂಡವಾಳ ಹೂಡಿಕೆ ಮಾಡಿದ್ದರು. ಆದ್ರೆ ಸಾಲ ಮರುಪಾವತಿಸುವಲ್ಲಿ ಅಸಮರ್ಥರಾಗಿದ್ದರು. ಡೆತ್ ನೋಟ್ ನಲ್ಲಿ ತಮಗೆ ಸಾಲ ನೀಡಿದ 9 ಜನರ ಹೆಸರು ಬರೆದಿದ್ದು, ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂದು ದೇವಿಂದರ್ ಪತ್ರದಲ್ಲಿ ಬರೆದಿದ್ದಾರೆ ಎಂದು ಭೂಪಿಂದರ್ ಸಿಂಗ್ ಹೇಳಿದ್ದಾರೆ.

  • ಕೊರೊನಾಗೆ ಔಷಧಿ ಅಂತ ತನ್ನ ಕುಟುಂಬದವರಿಗೆ ವಿಷ ನೀಡಿದ

    ಕೊರೊನಾಗೆ ಔಷಧಿ ಅಂತ ತನ್ನ ಕುಟುಂಬದವರಿಗೆ ವಿಷ ನೀಡಿದ

    – ಪತ್ನಿ ಮೂವರು ಮಕ್ಕಳಿಗೆ ನೀಡಿ, ತಾನೂ ಕುಡಿದ

    ರಾಯ್ಪುರ: ವ್ಯಕ್ತಿಯೊಬ್ಬ ತೀವ್ರ ಆರ್ಥಿಕ ಸಮಸ್ಯೆಯಿಂದಾಗಿ ಕೊರೊನಾಗಾಗಿ ಔಷಧಿ ಎಂದು ಸುಳ್ಳು ಹೇಳಿ ತನ್ನದೇ ಕುಟುಂಬದ ಐವರಿಗೆ ವಿಷ ನೀಡಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ.

    ಖರೋರಾ ಗ್ರಾಮದ ನಿವಾಸಿ ನಾರಾಯಣ್ ದೇವಾಂಗನ್ ಎಂಬಾತ ತನ್ನ ಕುಟುಂಬಸ್ಥರಿಗೆ ವಿಷ ನೀಡಿ ಕೊಲೆ ಮಾಡಲು ಯತ್ನಿಸಿದ್ದಾನೆ. ಇದೀಗ ಐವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ವಿಷ ಸೇವಿಸಿದವರನ್ನು ಪತ್ನಿ ದಾಮಿನಿ (30), ಇಬ್ಬರು ಹೆಣ್ಣು ಮಕ್ಕಳಾದ ಪ್ರಿಯಾ (11) ಮತ್ತು ಗಾಯತ್ರಿ (10) ಹಾಗೂ ಮಗ ಕುಲೇಶ್ವರ (7) ಎಂದು ಗುರುತಿಸಲಾಗಿದೆ. ಇವರಿಗೆಲ್ಲಾ ಕೋವಿಡ್ -19 ಸೋಂಕನ್ನು ಎದುರಿಸಲು ಪರಿಣಾಮಕಾರಿ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸುಳ್ಳು ಹೇಳಿ ವಿಷ ಕುಡಿಸಿದ್ದಾನೆ. ನಾರಾಯಣ್ ದಿವಾಂಗನ್ ತನ್ನ ಕುಟುಂಬದ ಎಲ್ಲರಿಗೂ ವಿಷ ನೀಡಿದ ನಂತರ ತಾನೂ ಅದೇ ವಿಷವನ್ನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೊರೊನಾ ಹಿನ್ನೆಲೆ ಕಳೆದ ಐದು ತಿಂಗಳುಗಳಿಂದ ಕೆಲಸ ಇಲ್ಲದೆ ಕುಟುಂಬ ನಿರ್ವಹಣೆಗೆ ಹಣವೂ ಇಲ್ಲದೆ ಪರದಾಡುತ್ತಿದ್ದನು. ಕೆಲವು ತಿಂಗಳ ಹಿಂದೆ ತನ್ನ ಕೃಷಿ ಭೂಮಿಯನ್ನು ಸಹ ಮಾರಾಟ ಮಾಡಿದ್ದನು. ಆದರೆ ವಿಪರೀತ ಸಾಲ ಮಾಡಿಕೊಂಡಿದ್ದನು. ಇದಲ್ಲದೇ ಆತ ಕುಡಿತದ ದಾಸನಾಗಿದ್ದನು ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

    ದೇವಾಂಗನ್ ಕೊರೊನಾ ಸೋಂಕು ನಿವಾರಣೆಗೆ ಔಷಧಿ ತಂದಿದ್ದೇನೆ ಎಂದು ಪಾನೀಯದೊಳಗೆ ಮಿಕ್ಸ್ ಮಾಡಿ ಕೊಟ್ಟಿದ್ದಾನೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ವಿಷ ಸೇವಿಸಿ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ

    ವಿಷ ಸೇವಿಸಿ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ

    -ಅಪಾರ್ಟ್‍ಮೆಂಟ್‍ನಲ್ಲಿ ಐವರ ಶವ ಪತ್ತೆ
    -ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬ

    ಭೋಪಾಲ್: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ದಾಹೋಡ್ ನಲ್ಲಿ ನಡೆದಿದೆ. ದಾಹೋಡ್ ನಗರದ ಸುಜೈ ಬಾಗ್ ರಸ್ತೆಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ಕುಟುಂಬ ವಾಸವಾಗಿತ್ತು.

    ಸೈಫಿ ದುಧಿಯಾವಾಲಾ ಕುಟುಂಬದ ಶವಗಳು ಪತ್ತೆಯಾಗಿವೆ. ಸೈಫಿ ಪ್ಲಾಸ್ಟಿಕ್ ಡಿಸ್‍ಪೋಸಲ್ ವ್ಯವಹಾರ ಮಾಡಿಕೊಂಡಿದ್ದರು. ಕೆಲ ವರ್ಷಗಳ ಹಿಂದೆ ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಗ್ರಾಮದಿಂದ ಬಂದ ಕುಟುಂಬ ದಾಹೋಡ್ ನಲ್ಲಿ ವಾಸವಾಗಿತ್ತು. ಡೋರ್ ಬೆಲ್ ಮತ್ತು ಫೋನ್ ಮಾಡಿದಾಗ ಕುಟುಂಬಸ್ಥರು ಮನೆಯಿಂದ ಹೊರ ಬಾರದ ಹಿನ್ನೆಲೆ ನೆರೆಹೊರೆಯವರು ಶುಕ್ರವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಪೊಲೀಸರು ಬಾಗಿಲು ತೆರೆದು ನೋಡಿದಾಗ ಕೋಣೆಯೊಂದರಲ್ಲಿ ಮೂವರು ಹೆಣ್ಣು ಮಕ್ಕಳು ಮತ್ತು ಮಹಿಳೆ ಶವ, ಕಿಚನ್ ಬಳಿ ವ್ಯಕ್ತಿಯ ಶವ ಕಾಣಿಸಿದೆ. ಕಿಚನ್ ಸಿಂಕ್ ಬಳಿ ಕುಟುಂಬಸ್ಥರು ಸೇವನೆ ಮಾಡಿದ್ದಾರೆ ಎನ್ನಲಾದ ಕೆಮಿಕಲ್ ಬಾಟಲ್ ಪತ್ತೆಯಾಗಿದೆ. ಪೊಲೀಸರು ಕೆಮಿಕಲ್ ಬಾಟಲ್ ವಶಕ್ಕೆ ಪಡೆದು ಫಾರೆನಿಸಿಕ್ ಲ್ಯಾಬ್ ಗೆ ಕಳುಹಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ದುಧಿಯಾವಾಲಾ ಲಾಕ್‍ಡೌನ್ ಆದಾಗಿನಿಂದ ಆರ್ಥಿಕ ಸಂಕಷ್ಟದಲ್ಲಿದ್ದರು. ಹಲವರ ಬಳಿ ಸಾಲಕ್ಕಾಗಿ ಅಲೆದಾಡುತ್ತಿದ್ದರು. ದುಧಿಯಾವಾಲ ಸೋದರ ಸಹ ಎರಡು ವರ್ಷಗಳ ಹಿಂದೆ ಸಾಲ ಮರು ಪಾವತಿಸಲಾಗದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಮೃತರ ಕುಟುಂಬಸ್ಥರು ಹೇಳಿದ್ದಾರೆ.

    ಪ್ರಾಥಮಿಕ ತನಿಖೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಕುಟುಂಬಸ್ಥರು ರಾಸಾಯನಿಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋದು ತಿಳಿದು ಬಂದಿದೆ. ವೈದ್ಯರು ಸಹ ವಿಷ ಸೇವನೆಯಿಂದ ಸಾವು ಆಗಿರೋದನ್ನ ಖಚಿತಪಡಿಸಿದ್ದಾರೆ. ಮರೋಣತ್ತರ ಪರೀಕ್ಷೆ ಬಳಿಕ ಶವಗಳನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಎಸ್‍ಪಿ ಹಿತೇಶ್ ಜಾಯ್ಸರ ತಿಳಿಸಿದ್ದಾರೆ.