ನವದೆಹಲಿ: Paytm FASTag ಬಳಕೆದಾರರು ಮಾರ್ಚ್ 15 ರೊಳಗೆ ಇತರೆ ಬ್ಯಾಂಕ್‌ಗಳ FASTagಗೆ ಬದಲಾಯಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲಹೆಯನ್ನು ನೀಡಿದೆ. ತಡೆರಹಿತ ಪ್ರಯಾಣಕ್ಕೆ ಮತ್ತು ಟೋಲ್ ಪ್ಲಾಜಾಗಳಲ್ಲಿ ಅನಾನುಕೂಲತೆಯನ್ನು ತಪ್ಪಿಸಲು ಫಾಸ್ಟ್ ಟ್ಯಾಗ್ ಬದಲಿಸಲು ಮನವಿ ಮಾಡಿದೆ.
Paytm ಬ್ಯಾಕಿಂಗ್ ವ್ಯವಸ್ಥೆಗೆ ಆರ್‌ಬಿಐ ತಡೆ ನೀಡಿರುವ ಹಿನ್ನಲೆ Paytm FASTag ಬಳಕೆದಾರರಿಗೆ ಮಾರ್ಚ್ 15 ನಂತರ ಬ್ಯಾಲೆನ್ಸ್ ರೀಚಾರ್ಜ್ ಮಾಡಲು ಅಥವಾ ಟಾಪ್-ಅಪ್ ಮಾಡಲು ಸಾಧ್ಯವಾಗುವುದಿಲ್ಲ. ಆದಾಗ್ಯೂ ಅಸ್ತಿತ್ವದಲ್ಲಿರುವ ಬ್ಯಾಲೆನ್ಸ್ ಬಳಸಬಹುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ. ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಒಂದೇ ದಿನ ಕರಗಿತು ಹೂಡಿಕಾದರರ 14 ಲಕ್ಷ ಕೋಟಿ ಸಂಪತ್ತು
Paytm FASTag ಗೆ ಸಂಬಂಧಿಸಿದ ಯಾವುದೇ ಹೆಚ್ಚಿನ ಪ್ರಶ್ನೆಗಳು ಅಥವಾ ಸಹಾಯಕ್ಕಾಗಿ, ಬಳಕೆದಾರರು ತಮ್ಮ ಬ್ಯಾಂಕ್‌ಗಳನ್ನು ಸಂಪರ್ಕಿಸಬಹುದು ಅಥವಾ IHMCL ವೆಬ್‌ಸೈಟ್‌ನಲ್ಲಿ ಒದಗಿಸಲಾದ FAQ ಗಳನ್ನು ಉಲ್ಲೇಖಿಸಬಹುದು. ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣದ ಅನುಭವವನ್ನು ಖಚಿತಪಡಿಸಿಕೊಳ್ಳಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ NHAI ಎಲ್ಲಾ Paytm FASTag ಬಳಕೆದಾರರಿಗೆ ಸೂಚಿಸಿದೆ. ಇದನ್ನೂ ಓದಿ: ಮೈಸೂರಿನಿಂದ ಯದುವೀರ್, ಬೆಂಗಳೂರು ಉತ್ತರದಿಂದ ಕರಂದ್ಲಾಜೆ – ಯಾರಿಗೆ ಎಲ್ಲಿ ಟಿಕೆಟ್?
ನವದೆಹಲಿ: ಪೇಟಿಯಂ ವ್ಯಾಲೆಟ್ (Paytm Wallet) ಸೇವೆಯನ್ನು ತಾನು ಖರೀದಿ ಸಂಬಂಧ ಯಾವುದೇ ಮಾತುಕತೆ ನಡೆದಿಲ್ಲ ಎಂದು ಜಿಯೋ ಫೈನಾನ್ಸ್ (Jio Finance) ಅಧಿಕೃತವಾಗಿ ತಿಳಿಸಿದೆ.
ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ (RBI) ಹಲವು ನಿರ್ಬಂಧ ವಿಧಿಸಿದ ಬಳಿಕ ಪೇಟಿಎಂ ಸಾಕಷ್ಟು ನಷ್ಟಕ್ಕೆ ಸಿಲುಕಿಕೊಂಡಿದೆ. ಈ ಬೆನ್ನಲ್ಲೇ ಮುಕೇಶ್ ಅಂಬಾನಿ (Mukesh Ambani) ನೇತೃತ್ವದ ಜಿಯೋ ಫೈನಾನ್ಸ್ ಪೇಟಿಯಂ ವ್ಯಾಲೆಟ್ ಸೇವೆಯನ್ನು ಖರೀದಿಸಲಿದೆ ಎಂದು ವರದಿಯಾಗಿತ್ತು.
ಈ ವರದಿಯ ಬೆನ್ನಲ್ಲೇ ಬಾಂಬೆ ಷೇರು ಮಾರುಕಟ್ಟೆಗೆ (BSE) ಜಿಯೋ ಫೈನಾನ್ಸಿಯಲ್ ಸರ್ವಿಸ್ ಲಿಮಿಟೆಡ್(JFSL) ತಾನು ಪೇಟಿಎಂ ವ್ಯಾಲೆಟ್ ಖರೀದಿಸುವುದಿಲ್ಲ ಎಂದು ತಿಳಿಸಿದೆ. ಖರೀದಿ ವಿಚಾರ ಕೇವಲ ಊಹಾತ್ಮಕ ಸುದ್ದಿಯಾಗಿದೆ. ಈ ವಿಷಯದಲ್ಲಿ ಯಾವುದೇ ಮಾತುಕತೆ ನಡೆಸಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇವೆ ಎಂದು ತಡರಾತ್ರಿ ಜಿಯೋ ಫೈನಾನ್ಸ್ ಫೈಲಿಂಗ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿ ದಾಟುತ್ತೆ.. ಬಿಜೆಪಿಗೆ 370 ಸೀಟು ಬರುತ್ತೆ: ಮೋದಿ ಭವಿಷ್ಯ
ಮಾಧ್ಯಮಗಳಲ್ಲಿ ಖರೀದಿ ವರದಿ ಪ್ರಕಟವಾಗುತ್ತಿದ್ದಂತೆ ಸೋಮವಾರ ಜಿಯೋ ಫೈನಾನ್ಸ್ ಷೇರಿನ ಬೆಲೆ 35.30 ರೂ. (13.91%) ಏರಿಕೆಯಾಗಿ 289.05 ರೂ. ತಲುಪಿತ್ತು.
ವ್ಯಾಲೆಟ್ ಖರೀದಿಗೆ ಸಂಬಂಧಿಸಿದಂತೆ ಪೇಟಿಯಂ ಮಾತೃ ಸಂಸ್ಥೆಯಾದ 97 ಕಮ್ಯುನಿಕೇಶನ್ ಸಂಸ್ಥೆ ಹಾಗೂ ರಿಲಯನ್ಸ್ ಮತ್ತು ಖಾಸಗಿ ಬ್ಯಾಂಕ್ ಹೆಚ್‌ಡಿಎಫ್‌ಸಿ ಜೊತೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.
ಕಳೆದ 3 ದಿನಗಳಲ್ಲಿ ಪೇಟಿಯಂನ ಮೌಲ್ಯ 42%ರಷ್ಟು ಕುಸಿತ ಕಂಡಿದ್ದು, 20 ಸಾವಿರ ಕೋಟಿ ನಷ್ಟ ಉಂಟುಮಾಡಿದೆ. ಕಳೆದ ಅಕ್ಟೋಬರ್‌ನಲ್ಲಿ ಪೇಟಿಎಂ ಒಂದು ಷೇರಿನ ಬೆಲೆ 998 ರೂ. ಏರಿತ್ತು. ಆದರೆ ಫೆ.5ರ ವೇಳೆ ಒಂದು ಷೇರಿನ ಮೌಲ್ಯ 438.50 ರೂ.ಗೆ ಕುಸಿದಿದೆ.
ನವದೆಹಲಿ: ನಿವೃತ್ತ ರಿಸರ್ವ್ ಬ್ಯಾಂಕ್ ಗವರ್ನರ್ (RBI) ಜನರಲ್ ರಘುರಾಮ್ ರಾಜನ್ (Raghuram Rajan) ರಾಜ್ಯಸಭೆಗೆ ಮಹಾರಾಷ್ಟ್ರದಿಂದ (Maharashtra) ಆಯ್ಕೆ ಆಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಜನವರಿ 31 ರಂದು ರಾಜನ್ ಅವರು ಶಿವಸೇನೆ(ಯುಬಿಟಿ) ಬಣದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಅವರ ಮಂಬೈ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ.
ಕಾಂಗ್ರೆಸ್ ರಘುರಾಮ್ ರಾಜನ್ ಅವರನ್ನು ರಾಜ್ಯಸಭೆಗೆ ಕಳುಹಿಸಲು ಮುಂದಾಗಿದೆ. ಇದರ ಭಾಗವಾಗಿ ಬೆಂಬಲ ಕೇಳಲು ರಾಜನ್ ಉದ್ಧವ್ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತದೆ.
ಮಹಾರಾಷ್ಟ್ರದಿಂದ ಒಟ್ಟು 6 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿ 3 ಸ್ಥಾನಗಳನ್ನು ಗೆಲ್ಲಲಿದೆ. ರಾಜ್ಯಸಭೆಗೆ ಆಯ್ಕೆಯಾಗಲು ಓರ್ವ ಅಭ್ಯರ್ಥಿಗೆ ಕನಿಷ್ಠ 42 ಮತಗಳ ಅಗತ್ಯವಿದೆ. ಪ್ರಸ್ತುತ ಕಾಂಗ್ರೆಸ್ 45 ಶಾಸಕರನ್ನು ಹೊಂದಿದೆ.
ರಘುರಾಮ್ ರಾಜನ್ ಅವರು ಯುಪಿಎ ಅವಧಿಯಲ್ಲಿ ಆರ್‌ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದರು. 2013 ರಲ್ಲಿ ಅಧಿಕಾರ ಸ್ವೀಕರಿಸಿದ್ದ ಅವರು 2016ರಲ್ಲಿ ನಿವೃತ್ತರಾಗಿದ್ದರು.
ಬೆಂಗಳೂರು: ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ (Violation of Rules) ಹಿನ್ನೆಲೆ ಪೇಟಿಎಂಗೆ (Paytm) ಆರ್‌ಬಿಐ (RBI) ನೋಟಿಸ್ ನೀಡಿದ್ದು, ಪೇಟಿಎಂ ಹೊಸ ಡೆಪಾಸಿಟ್ ಪಡೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ ಹೇರಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ. ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ನೋಟಿಸ್ (Notice) ನೀಡಲಾಗಿದೆ. ಇದನ್ನೂ ಓದಿ: ಆಳವಾದ ಕಂದಕಕ್ಕೆ ಉರುಳಿದ ಕ್ಯಾಬ್ – 7 ಮಂದಿ ದುರ್ಮರಣ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್‌ಗೆ (RBI) ಬೆದರಿಕೆ ಇಮೇಲ್ (Threat Email) ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ (Mumbai) ಕ್ರೈಂ ಬ್ರಾಂಚ್ ಮೂವರನ್ನು ವಶಕ್ಕೆ ಪಡೆದಿದೆ.
ಬೆದರಿಕೆ ಇಮೇಲ್‌ಗಳ ಹಿಂದಿನ ಉದ್ದೇಶವನ್ನು ಕಂಡುಹಿಡಿಯುವ ಸಲುವಾಗಿ ಪೊಲೀಸರು ವಶಕ್ಕೆ ಪಡೆದವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಇಮೇಲ್‌ಗಳನ್ನು ಕಳುಹಿಸಲು ಬಳಸುವ ಸಾಧನವನ್ನು ಸಹ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: 39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?
ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಬಂದಿರುವ ಬೆದರಿಕೆ ಇಮೇಲ್‌ನಲ್ಲಿ ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಕಚೇರಿಗಳ ಜೊತೆಗೆ ಅದರ ಕಚೇರಿ ಮೇಲೆ ದಾಳಿ ನಡೆಸಲಾಗುವುದು ಎಂದು ಬೆದರಿಕೆಯೊಡ್ಡಲಾಗಿತ್ತು. ಮುಂಬೈನ ವಿವಿಧ ಸ್ಥಳಗಳಲ್ಲಿ 11 ಬಾಂಬ್‌ಗಳನ್ನು ಇರಿಸಲಾಗಿದೆ ಮತ್ತು ಸೀತಾರಾಮನ್ ಮತ್ತು ಶಕ್ತಿಕಾಂತ್ ದಾಸ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡದಿದ್ದರೆ ಬುಧವಾರ ಮಧ್ಯಾಹ್ನ 1:30 ರಿಂದ ಒಂದರ ನಂತರ ಒಂದರಂತೆ ಬಾಂಬ್ ಸ್ಫೋಟಿಸಲಾಗುವುದು ಎಂದು ಬೆದರಿಕೆ ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಜ.14 ರಿಂದ ‘ಭಾರತ ನ್ಯಾಯ ಯಾತ್ರಾ’ – ಮಣಿಪುರದಿಂದ ಮುಂಬೈಗೆ ರಾಹುಲ್ ಗಾಂಧಿ ಪಡೆ ಯಾತ್ರೆ
ಬೆದರಿಕೆ ಮೇಲ್ ಕಳುಹಿಸಿದವರು ‘ಖಿಲಾಫತ್ ಇಂಡಿಯಾ’ ಎಂಬ ಬಳಕೆದಾರ ಹೆಸರನ್ನು ಹೊಂದಿದ್ದರು ಮತ್ತು ಆರ್‌ಬಿಐ ಜೊತೆಗೆ ಕೆಲವು ಖಾಸಗಿ ವಲಯದ ಬ್ಯಾಂಕ್‌ಗಳು ಅತಿದೊಡ್ಡ ಹಗರಣದಲ್ಲಿ ಭಾಗಿಯಾಗಿವೆ ಎಂದು ಆರೋಪಿಸಿದ್ದಾರೆ. ಮಾತ್ರವಲ್ಲದೇ ತಮ್ಮ ಹಕ್ಕುಗಳನ್ನು ಬೆಂಬಲಿಸಲು ಘನ ಪುರಾವೆಗಳನ್ನು ಹೊಂದಿದ್ದಾರೆ ಎಂದು ಇಮೇಲ್‌ನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ರಾಹುಲ್ ಗಾಂಧಿ ಕಟು ಟೀಕೆ
ಈ ಬಗ್ಗೆ ತನಿಖೆ ನಡೆಸಲು ಇಮೇಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿದ್ದೇವೆ. ಆದರೆ ಏನೂ ಕಂಡುಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಮುಂಬೈನ ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಇಮೇಲ್ ತನಿಖೆಗಾಗಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ
ಭೋಪಾಲ್: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡೇ ವಾರಗಳಲ್ಲಿ ಮೋಹನ್ ಯಾದವ್ (Mohan Yadav) ಸರ್ಕಾರ ಬಿಜೆಪಿ ನೀಡಿದ್ದ ಉಚಿತ ಭರವಸೆಗಳನ್ನ ಈಡೇರಿಸಲು ಆರ್‌ಬಿಐ ಮೊರೆ ಹೋಗಿದೆ. ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ (RBI) 2,000 ಕೋಟಿ ರೂ. ಸಾಲ ಕೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಮಧ್ಯಪ್ರದೇಶ ವಿಧಾನಸಭೆ (Madhya Pradesh) ಚುನಾವಣೆಗೂ ಮುನ್ನ 96 ಪುಟಗಳ `ಸಂಕಲ್ಪ ಪತ್ರ’ ಹೆಸರಿನ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಬಿಜೆಪಿ (BJP) ನೀಡಿದ ಉಚಿತ ಭರವಸೆಗಳನ್ನು ಈಡೇರಿಲು ನೂತನ ಸಿಎಂ ಆರ್‌ಬಿಐ ಮೊರೆ ಹೋಗಿದ್ದಾರೆ. ಹಿಂದಿನ ಸಿಎಂ ಚೌಹಾಣ್ ನೇತೃತ್ವದ ಸರ್ಕಾರದಿಂದ 4 ಲಕ್ಷ ಕೋಟಿ ರೂ. ಸಾಲದ ಹೊರೆ ಹೊತ್ತಿದ್ದ ನೂತನ ಸರ್ಕಾರ ಮತ್ತೆ ಸಾಲಕ್ಕಾಗಿ ಆರ್‌ಬಿಐ ಮೊರೆ ಹೋಗಿದೆ.
ಈ ಕುರಿತು ಮಾತನಾಡಿರುವ ಮೋಹನ್ ಯಾದವ್, ರಾಜ್ಯ ಸರ್ಕಾರದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಹಣದ ಕೊರತೆಯಿಂದ ಕಲ್ಯಾಣ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳು ಮುಂದುವರಿಯುತ್ತವೆ ಎಂದು ಭರವಸೆ ನೀಡಿದ್ದಾರೆ.
ಮಧ್ಯಪ್ರದೇಶ ಸರ್ಕಾರದ ಬೆಳವಣಿಗಳ ಬಗ್ಗೆ ಪ್ರತಿಪಕ್ಷಗಳು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಮಾತನಾಡಿ, ಮಧ್ಯಪ್ರದೇಶದ ಪ್ರತಿಯೊಬ್ಬ ಪ್ರಜೆಯೂ ಈಗ ಸಾಲದಲ್ಲಿದ್ದಾನೆ. ಹುಟ್ಟುವ ಪ್ರತಿ ಮಗು ಈಗ 40,000 ರೂ. ಸಾಲದಲ್ಲಿದೆ. ಬಿಜೆಪಿಯು ಮಧ್ಯಪ್ರದೇಶವನ್ನು ನಿರಂತರವಾಗಿ ದಿವಾಳಿಯತ್ತ ತಳ್ಳುತ್ತಿದೆ. ಇದೆಲ್ಲವು ಅವರಿಗೆ ಯಾವಾಗ ಅರ್ಥವಾಗುತ್ತದೆ? ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೆ, ಆದಾಯ ಗಳಿಸುವ ಮೂಲವನ್ನು ಹುಡುಕುತ್ತಿತ್ತು ಎಂದು ಟೀಕಿಸಿದ್ದಾರೆ.
ಬಿಜೆಪಿ ನೀಡಿದ್ದ ಭರವಸೆಗಳೇನು?
ಲಾಡ್ಲಿ ಬಹ್ನಾ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 450 ರೂ.ಗೆ ಎಲ್‌ಪಿಜಿ ಸಿಲಿಂಡರ್. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 12 ಸಾವಿರ ರೂ. ಹಣಕಾಸು ನೆರವು. ಮುಂದಿನ 5 ವರ್ಷಗಳವರೆಗೆ ಜನರಿಗೆ ಉಚಿತವಾಗಿ ಪಡಿತರ ವಿತರಣೆ. ರೈತರಿಂದ ಕ್ವಿಂಟಾಲ್‌ಗೆ 2,700 ರೂ.ಗೆ ಗೋಧಿ, 3,100 ರೂ.ಗೆ ಭತ್ತ ಖರೀದಿ. ಪ್ರತಿಯೊಬ್ಬರಿಗೂ 12ನೇ ತರಗತಿವರೆಗೆ ಉಚಿತ ಶಿಕ್ಷಣ. ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿವರೆಗೆ ಬಡ ಕುಟುಂಬದ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ. ಪ್ರತಿ ಬಾಲಕಿಗೆ 2 ಲಕ್ಷ ರೂ. (ಬಾಲಕಿಗೆ 21 ವರ್ಷವಾದ ಬಳಿಕ ಪಾವತಿ) ಹಣಕಾಸು ನೆರವು. 6 ಹೊಸ ಎಕ್ಸ್‌ಪ್ರೆಸ್‌ವೇ ನಿರ್ಮಾಣ. ಬಡವರಿಗೆ ಉಚಿತವಾಗಿ ಸುಸಜ್ಜಿತ ಮನೆಗಳನ್ನ ನಿರ್ಮಿಸುವುದಾಗಿ ಬಿಜೆಪಿ ಭರವಸೆಗಳನ್ನ ಘೋಷಣೆ ಮಾಡಿತ್ತು. ಇದನ್ನೂ ಓದಿ: ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್ ಅಧಿಕಾರಿ ಬಲಿ
ನವದೆಹಲಿ: ಆನ್‌ಲೈನ್ ಪಾವತಿ ಕಷ್ಟ, ಗ್ರಾಮೀಣ ಭಾಗದಲ್ಲಿ ಯುಪಿಐ ಪಾವತಿ ಸಾಧ್ಯವೇ ಇಲ್ಲ ಎಂದು ಹೇಳುತ್ತಿದ್ದ ಮಂದಿಗೆ ಭಾರತ ಜನ ತಿರುಗೇಟು ನೀಡಿದ್ದಾರೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಡಿಜಿಟಲ್ ಪಾವತಿಗಳಲ್ಲಿ ಗಣನೀಯ ಏರಿಕೆಯಾಗಿದ್ದು, ಕೇವಲ 5 ವರ್ಷದಲ್ಲಿ ವಹಿವಾಟು 92 ಕೋಟಿಯಿಂದ 8,375 ಕೋಟಿಗೆ ಏರಿಕೆಯಾಗಿದೆ ಎಂದು ಸರ್ಕಾರ ತಿಳಿಸಿದೆ.
ಲೋಕಸಭೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ, ಯುಪಿಐ ಪಾವತಿಗಳ ಗಣನೀಯ ವಿಸ್ತರಣೆಯಿಂದಾಗಿ ಕಳೆದ ಆರ್ಥಿಕ ವರ್ಷದಲ್ಲಿ ಚಲಾವಣೆಯಲ್ಲಿರುವ ಬ್ಯಾಂಕ್ ನೋಟುಗಳ ಬೆಳವಣಿಗೆಯನ್ನು 7.8%ಕ್ಕೆ ಇಳಿಸಲು ಸಹಾಯ ಮಾಡಿದೆ ಎಂದು ತಿಳಿಸಿದೆ.
ಈ ಬಗ್ಗೆ ಲೋಕಸಭೆಗೆ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೆ ಕರದ್ ಲಿಖಿತ ಉತ್ತರ ನೀಡಿದ್ದಾರೆ. ಯುಪಿಐ ವಹಿವಾಟುಗಳು ಗಣನೀಯ ಬೆಳವಣಿಗೆಯನ್ನು ಕಂಡಿದೆ. ಆರ್ಥಿಕ ವರ್ಷ 2017-18ರಲ್ಲಿ 92 ಕೋಟಿ ಇದ್ದರೆ 2022-23 ಆರ್ಥಿಕ ವರ್ಷದಲ್ಲಿ ವಹಿವಾಟು 8,375 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸಂಯುಕ್ತ ವಾರ್ಷಿಕ ಬೆಳವಣಿಗೆಯ ದರ (CAGR) 147% ಕ್ಕೆ ಏರಿಕೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಡಿಸೆಂಬರ್ 11 ರವರೆಗೆ ಯುಪಿಐ 8,572 ಕೋಟಿ ವಹಿವಾಟುಗಳನ್ನು ಸಾಧಿಸಿದೆ. ಡಿಜಿಟಲ್ ಪಾವತಿ ವಹಿವಾಟುಗಳ ಒಟ್ಟಾರೆ ವಿಸ್ತರಣೆಗೆ ಯುಪಿಐ ಪ್ರಾಥಮಿಕ ಚಾಲಕವಾಗಿ ಹೊರಹೊಮ್ಮಿದೆ. ಆರ್ಥಿಕ ವರ್ಷ 2022-23 ರಲ್ಲಿ ಅಂತಹ ವಹಿವಾಟುಗಳಲ್ಲಿ 62% ಒಳಗೊಂಡಿದೆ. ಇದಲ್ಲದೇ ಚಲಾವಣೆಯಲ್ಲಿರುವ ಬ್ಯಾಂಕ್ ನೋಟುಗಳ ಮೌಲ್ಯದಲ್ಲಿ ವರ್ಷದಿಂದ ವರ್ಷಕ್ಕೆ ಬೆಳವಣಿಗೆಯು ಆರ್ಥಿಕ ವರ್ಷ 2021-22 ರಲ್ಲಿ 9.9% ರಿಂದ ಆರ್ಥಿಕ ವರ್ಷ 2022-23 ರಲ್ಲಿ 7.8% ಕ್ಕೆ ಇಳಿದಿದೆ.
2016 ರಲ್ಲಿ ಪ್ರಾರಂಭವಾದ ಯುಪಿಐ ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಡಿಯಲ್ಲಿ ನಿಯಂತ್ರಿತ ಘಟಕವಾದ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಿMದ (NPCI) ರಚಿಸಲಾದ ತ್ವರಿತ ಪಾವತಿ ವ್ಯವಸ್ಥೆಯಾಗಿದೆ. ತಕ್ಷಣದ ಪಾವತಿ ಸೇವೆಯ ಮೂಲಸೌಕರ್ಯವನ್ನು ಹತೋಟಿಯಲ್ಲಿಟ್ಟುಕೊಂಡು, ಯಾವುದೇ 2 ಬ್ಯಾಂಕ್ ಖಾತೆಗಳ ನಡುವೆ ತಕ್ಷಣ ಹಣ ವರ್ಗಾವಣೆಯನ್ನು ಯುಪಿಐ ಸುಗಮಗೊಳಿಸುತ್ತದೆ. ಇದನ್ನೂ ಓದಿ: ಸ್ವಂತ ಮನೆಯಲ್ಲಿ ಪಿಜಿ ಮಾದರಿ ವಾಸ ಮಾಡ್ತಿದ್ದ ಮನೋರಂಜನ್
ನವದೆಹಲಿ: 9760 ಕೋಟಿ ರೂ. ಮುಖಬೆಲೆಯ 2000 ರೂ. ನೋಟುಗಳನ್ನು (2000 RS Notes) ಬ್ಯಾಂಕ್‍ಗಳಲ್ಲಿ ವಿನಿಮಯ ಮಾಡಿಕೊಂಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಹೇಳಿದೆ.
ಈ ವರ್ಷ ಮೇ.19 ರಂದು 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಘೋಷಿಸಿತ್ತು. ಈ ಸಮಯದಲ್ಲಿ ಚಲಾವಣೆಯಲ್ಲಿದ್ದ ನೋಟುಗಳ ಮೊತ್ತ 3.56 ಲಕ್ಷ ರೂ. ಕೋಟಿಗಳಷ್ಟಿತ್ತು. ಅಲ್ಲದೇ ನವೆಂಬರ್ 30ರ ವೇಳೆಗೆ ಚಲಾವಣೆಯಲ್ಲಿದ್ದ ಮೌಲ್ಯ 9760 ಕೋಟಿ ರೂ. ಗಳಿಗೆ ಕುಸಿದಿದೆ. ಈ ಮೂಲಕ 97.26% ರಷ್ಟು 2000 ರೂ. ಮುಖಬೆಲೆಯ ನೋಟ್‍ಗಳು ಠೇವಣೆಯಾಗಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನ ತುಷ್ಠೀಕರಣ ಪರಿಣಾಮ ಮುಸ್ಲಿಮರಿಗೆ ನಮ್ಮದೇ ರಾಜ್ಯ ಎನ್ನುವ ಭ್ರಮೆ: ಮುತಾಲಿಕ್
ದೇಶಾದ್ಯಂತ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ 2000 ರೂ. ನೋಟುಗಳನ್ನು ಠೇವಣಿ ಇಡಲು ಅಥವಾ ಬದಲಾಯಿಸಲು ಆರ್‌ಬಿಐ ಜನಸಾಮಾನ್ಯರಿಗೆ ಅವಕಾಶ ನೀಡಿತ್ತು. ಇದರ ಆರಂಭಿಕ ಗಡುವು ಈ ವರ್ಷ ಸೆ.30 ಆಗಿತ್ತು, ನಂತರ ಅದನ್ನು ಅ.7ಕ್ಕೆ ವಿಸ್ತರಿಸಲಾಗಿತ್ತು. ಆರ್‌ಬಿಐನ 19 ಕಚೇರಿಗಳಲ್ಲಿ ನೋಟುಗಳನ್ನು ಬದಲಾಯಿಸುವ ಸೌಲಭ್ಯ ಈಗಲೂ ಇದೆ.
ಭಾರತದಲ್ಲಿನ ತಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು, 2000 ರೂ. ನೋಟ್‍ಗಳನ್ನು ದೇಶದ ಯಾವುದೇ ಅಂಚೆ ಕಚೇರಿಯಿಂದ (Post Office) ಆರ್‌ಬಿಐ ಕಚೇರಿಗೆ ಕಳಿಸಲು ಅವಕಾಶ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ತಂಗಿಯ ಮೇಲಿನ ಸೇಡಿಗೆ ಆಕೆಯ ಮಗುವನ್ನೇ ಕೊಲೆಗೈದು ಜೈಲು ಪಾಲಾದ ಅಕ್ಕ
ನವದೆಹಲಿ: ಅಕ್ಟೋಬರ್ 7 ರವರೆಗೆ 2,000 ರೂ. ನೋಟುಗಳನ್ನು (Rs. 2000 Note) ಬದಲಾಯಿಸಿಕೊಳ್ಳಲು ಮತ್ತು ಠೇವಣಿ ಇಡಲು ಕೊನೆಯ ದಿನಾಂಕವನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ವಿಸ್ತರಿಸಿದೆ.
2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ 4 ತಿಂಗಳ ಗಡುವು ನಿನ್ನೆಗೆ (ಸೆಪ್ಟೆಂಬರ್ 30) ಮುಕ್ತಾಯಗೊಂಡಿತ್ತು. ಇದೀಗ ಪರಿಶೀಲನೆಯ ಆಧಾರದ ಮೇಲೆ 2,000 ರೂ. ನೋಟುಗಳನ್ನು ಠೇವಣಿ ಇಡಲು ಅಥವಾ ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಲು ಇದೇ ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ ಎಂದು ಆರ್‌ಬಿಐ ಶನಿವಾರ ತಿಳಿಸಿದೆ.
ಅಕ್ಟೋಬರ್ 8 ರಿಂದ ಜಾರಿಗೆ ಬರುವಂತೆ ಬ್ಯಾಂಕ್ ಶಾಖೆಗಳಲ್ಲಿ 2,000 ರೂ. ನೋಟುಗಳ ಠೇವಣಿ ಅಥವಾ ವಿನಿಮಯವನ್ನು ನಿಲ್ಲಿಸಲಾಗುತ್ತದೆ. ಆದರೂ 2,000 ರೂ. ನೋಟುಗಳು ಅಕ್ಟೋಬರ್ 7ರ ನಂತರವೂ ಕಾನೂನುಬದ್ಧವಾಗಿ ಮುಂದುವರಿಯುತ್ತದೆ. ಆದರೆ ಅವುಗಳನ್ನು ಆರ್‌ಬಿಐ ಕಚೇರಿಗಳಲ್ಲಿ ಮಾತ್ರ ವಿನಿಮಯ ಮಾಡಿಕೊಳ್ಳಬಹುದು ಎಂದು ತಿಳಿಸಿದೆ. ಇದನ್ನೂ ಓದಿ: 10 ಸಾವಿರ ಕೋಟಿ ಮೀಸಲು – ಮುಸ್ಲಿಂ ಮುಖಂಡರನ್ನು ಸೆಳೆಯಲು ಕಾಂಗ್ರೆಸ್‌ನಿಂದ ಭರಪೂರ ಅನುದಾನದ ಭರವಸೆ
ಮೇ 19ರಂದು ಆರ್‌ಬಿಐ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ನೋಟುಗಳನ್ನು ಬದಲಾಯಿಸಿಕೊಳ್ಳಲು ಹಾಗೂ ಠೇವಣಿ ಇಡಲು ಸಾರ್ವಜನಿಕರಿಗೆ ಸಾಕಷ್ಟು ಸಮಯ ಒದಗಿಸಲು ಸೆಪ್ಟೆಂಬರ್ 30 ರವರೆಗೆ ಕಾಲಾವಕಾಶ ನೀಡಿತ್ತು.
ಮೇ 19ರಿಂದ ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ಸುಮಾರು 95% ರಷ್ಟು ನೋಟುಗಳು ಬ್ಯಾಂಕ್‌ಗೆ ಮರಳಿ ಬಂದಿದೆ. ಎಂದರೆ ಚಲಾವಣೆಯಲ್ಲಿದ್ದ 3.56 ಲಕ್ಷ ಕೋಟಿ ನೋಟುಗಳ ಪೈಕಿ ಸುಮಾರು 3.42 ಲಕ್ಷ ಕೋಟಿ ನೋಟುಗಳನ್ನು ಮರಳಿ ಪಡೆಯಲಾಗಿದೆ. ಇದೀಗ ಕೇವಲ 1.14 ಲಕ್ಷ ಕೋಟಿ ನೋಟುಗಳು ಮಾತ್ರವೇ ಬಾಕಿ ಉಳಿದಿವೆ ಎಂದು ಆರ್‌ಬಿಐ ಮಾಹಿತಿ ನೀಡಿದೆ. ಇದನ್ನೂ ಓದಿ: ನೀರು ಹರಿಸಲು ಸಾಧ್ಯವಿಲ್ಲ; CWMA, ಸುಪ್ರೀಂಗೆ ಸರ್ಕಾರದಿಂದ ಮರುಪರಿಶೀಲನಾ ಅರ್ಜಿ ಸಲ್ಲಿಕೆ
ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳ ಅಮಾನ್ಯೀಕರಣವನ್ನು ಆರ್‌ಬಿಐ (Reserve Bank of India) ಘೋಷಿಸಿದ ನಾಲ್ಕು ತಿಂಗಳ ಬಳಿಕ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಅವಧಿ ಇಂದು ಕೊನೆಯಾಗಿದೆ. ಈ ಮೂಲಕ ಅ.1 ರಿಂದ ಅಂದರೆ ನಾಳೆಯಿಂದ 2000 ರೂ. ನೋಟುಗಳು ಮೌಲ್ಯವನ್ನು ಕಳೆದುಕೊಳ್ಳಲಿವೆ.
ಈ ನೋಟುಗಳು ಮಾನ್ಯವಾಗಿ ಮುಂದುವರಿದರೂ ಸಹ ಅವುಗಳನ್ನು ಮಾರುಕಟ್ಟೆ ವಹಿವಾಟುಗಳಲ್ಲಿ ಸ್ವೀಕರಿಸಲಾಗುವುದಿಲ್ಲ. ಅಲ್ಲದೇ ಬ್ಯಾಂಕುಗಳು ಬದಲಾಯಿಸುವುದಿಲ್ಲ. ಒಂದು ವೇಳೆ ಈಗಲೂ 2000 ರೂ. ನೋಟುಗಳು ನಿಮ್ಮ ಬಳಿ ಇದ್ದರೆ ನೋಟುಗಳನ್ನು ಸ್ಥಳೀಯ ಆರ್‌ಬಿಐ (RBI) ಉಪ ಕಚೇರಿಗಳಿಂದ ಮಾತ್ರ ಬದಲಾಯಿಸಬಹುದಾಗಿದೆ. ಇದನ್ನೂ ಓದಿ: 84 ಬ್ಯಾಂಕ್ ಅಕೌಂಟ್, 854 ಕೋಟಿ ವಹಿವಾಟು – ಬೃಹತ್ ಸೈಬರ್ ಕ್ರೈಂ ಜಾಲ ಬೆಳಕಿಗೆ
2000 ರೂ. ಮುಖಬೆಲೆಯ ನೋಟುಗಳನ್ನು ನವೆಂಬರ್ 2016 ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆ 1934ರ ಸೆಕ್ಷನ್ 24 (1) ಅಡಿಯಲ್ಲಿ ಪರಿಚಯಿಸಲಾಗಿತ್ತು. ಅದಕ್ಕೂ ಮೊದಲು ಚಲಾವಣೆಯಲ್ಲಿದ್ದ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಈ ನೋಟನ್ನು ಬಿಡುಗಡೆ ಮಾಡಲಾಗಿತ್ತು.