Tag: ಆರ್ಮ್‌ಸ್ಟ್ರಾಂಗ್‌

  • ಬಿಎಸ್‌ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ- 8 ಮಂದಿ ಪೊಲೀಸ್‌ ವಶಕ್ಕೆ

    ಬಿಎಸ್‌ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ- 8 ಮಂದಿ ಪೊಲೀಸ್‌ ವಶಕ್ಕೆ

    ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ (Armstrong) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಬಗ್ಗೆ ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್ ಐಪಿಎಸ್ ಖಚಿತಪಡಿಸಿದ್ದು, ಹತ್ಯೆಯ ಹಿಂದಿನ ಉದ್ದೇಶವನ್ನು ತಿಳಿಯಲು ವಶಕ್ಕೆ ಪಡೆದುಕೊಂಡವರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

    ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಬೈಕಿನಲ್ಲಿ ಬಂದ ಆರು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯ ಬಳಿಕ ಆರ್ಮ್‌ಸ್ಟ್ರಾಂಗ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಆರ್ಮ್‌ಸ್ಟ್ರಾಂಗ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ತಮಿಳುನಾಡಿನ ಬಿಎಸ್‌ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ!

    ಪ್ರಕರಣ ಸಂಬಂಧ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು. ರಾಜ್ಯದಲ್ಲಿ ಅದರ ಪ್ರಸ್ತುತತೆಗಾಗಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.

  • ತಮಿಳುನಾಡಿನ ಬಿಎಸ್‌ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ!

    ತಮಿಳುನಾಡಿನ ಬಿಎಸ್‌ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ!

    ಚೆನ್ನೈ: ದುಷ್ಕರ್ಮಿಗಳ ಗ್ಯಾಂಗ್‌ವೊಂದು ತಮಿಳುನಾಡಿನ (Tamil Nadu) ಬಿಎಸ್‌ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆಗೈದಿರುವ ಘಟನೆ ನಡೆದಿದೆ.

    ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಚೆನ್ನೈ ಪೆರಂಬೂರಿನಲ್ಲಿರುವ (Chennai’s Perambur) ಆರ್ಮ್‌ಸ್ಟ್ರಾಂಗ್ ಅವರ ನಿವಾಸದ ಬಳಿಯೇ ಘಟನೆ ನಡೆದಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಸಿಸಿಐ ಬಳಿಕ ಮಹಾರಾಷ್ಟ್ರ ಸರ್ಕಾರದಿಂದಲೂ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ ಗಿ‌ಫ್ಟ್‌!

    6 ಮಂದಿ ದುಷ್ಕರ್ಮಿಗಳ ಗ್ಯಾಂಗ್‌ನಿಂದ ಹತ್ಯೆ ನಡೆದಿದೆ. ಚೆನ್ನೈನ ಸೆಂಬಿಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಹತ್ಯೆ ನಡೆದಿದ್ದು ಹೇಗೆ?
    ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಸೆಂಬಿಯಂನ ಜನನಿಬಿಡ ಪ್ರದೇಶದಲ್ಲಿ ಆರ್ಮ್‌ಸ್ಟ್ರಾಂಗ್ ತಮ್ಮ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಮೂರು ಬೈಕ್‌ಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದಿದ್ದ 6 ಜನರ ಗ್ಯಾಂಗ್‌ ಏಕಾಏಕಿ ಅವರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಜನರು ಅವರ ರಕ್ಷಣೆಗೆ ಮುಂದಾಗುವಷ್ಟರಲ್ಲೇ ಗ್ಯಾಂಗ್‌, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್‌ ಆಗಿದೆ. ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನ ಕುಟುಂಬಸ್ಥರು ಕೂಡಲೇ ಥೌಸಂಡ್ ಲೈಟ್‌ನ ಗ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

    ಬಳಿಕ ಪುಲಿಯನ್‌ತೋಪ್ ಉಪ ಪೊಲೀಸ್ ಆಯುಕ್ತ ಐ ಈಶ್ವರನ್ ಮತ್ತು ಸಹಾಯಕ ಪೊಲೀಸ್ ಆಯುಕ್ತ ಪ್ರವೀಣ್ ಕುಮಾರ್ ಹತ್ಯೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಸೆಂಬಿಯಂ ಪೊಲೀಸ್ ಇನ್ಸ್‌ಪೆಕ್ಟರ್ ಚಿರಂಜೀವಿ ನೇತೃತ್ವದಲ್ಲಿ ವಿಶೇಷ ತಂಡವನ್ನು ನಿಯೋಜಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಸೇನಾ ಮುಂಡನ ಮೇಲೆ ನಾಲ್ವರು ನಿಹಾಂಗ್‌ಗಳಿಂದ ಮಾರಣಾಂತಿಕ ಹಲ್ಲೆ  

    ವೃತ್ತಿಯಲ್ಲಿ ವಕೀಲರಾಗಿದ್ದ ಆರ್ಮ್‌ಸ್ಟ್ರಾಂಗ್ 2006ರಲ್ಲಿ ನಗರ ವಾರ್ಡ್‌ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. 2007ರಲ್ಲಿ ಅವರನ್ನು ಬಿಎಸ್‌ಪಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿತು. ಅಂದಿನಿಂದ ಆರ್ಮ್‌ಸ್ಟ್ರಾಂಗ್‌ ದಲಿತರು ಮತ್ತು ಅಳಿವಿನಂಚಿನಲ್ಲಿರುವ ಸಮುದಾಯಗಳ ಪರ ಹೋರಾಟ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.