Tag: ಆರ್ ಆರ್ ನಗರ

  • ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಪೊಲೀಸ್ ಮುಂದೆ ದರ್ಶನ್ ಹೇಳಿದ್ದೇನು?

    ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಪೊಲೀಸ್ ಮುಂದೆ ದರ್ಶನ್ ಹೇಳಿದ್ದೇನು?

    ಮ್ಮ ಮನೆಯ ನಾಯಿಯು (Dog) ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ (Darshan) ವಿಚಾರಣೆಗೆ ಹಾಜರಾದರು. ಪೊಲೀಸ್ ಕೇಳಿದ ಹಲವಾರು ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ‘ಘಟನೆ ನಡೆದಾಗ ನಾನು ಗುಜರಾತ್ ನಲ್ಲಿ ಶೂಟಿಂಗ್ ನಲ್ಲಿದ್ದೆ. ಹುಡುಗರಿಗೆ ಕರೆಕ್ಟಾಗಿ ನೋಡಿಕೊಳ್ಳುವಂತೆ ಹೇಳಿದ್ದೆ. ಕೇರ್ ಟೇಕರ್ ಗೆ ಸರಿಯಾಗಿ ನೋಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದೆ’ ಎಂದು ತಿಳಿಸಿದ್ದಾರೆ.

    ‘ಸೆಲೆಬ್ರಿಟಿಗಳ ಮನೆ ಬಳಿ ಸಾಕಷ್ಟು ಜನ ಬರ್ತಿರ್ತಾರೆ. ಹೀಗಾಗಿ ಅಕ್ಕಪಕ್ಕದ ಮನೆಗಳ ನಿವಾಸಿಗಳಿಗೆ ತೊಂದರೆಯಾಗುತ್ತೆ . ಯಾರೆ ಬಂದ್ರೂ ವಿಚಾರಿಸುವಂತೆ ನೋಡಿಕೊಳ್ಳುವಂತೆ ಹೇಳಿರುತ್ತೇನೆ. ಈ ಹಿನ್ನೆಲೆಯಲ್ಲಿ ಕಾರ್ ಪಾರ್ಕಿಂಗ್ ವಿಚಾರವಾಗಿ ಕೇಳಿದ್ದಾರೆ. ಎಚ್ಚರಿಕೆ ವಹಿಸಬೇಕಿತ್ತು ಅಂತಾ ಹುಡುಗರಿಗೆ ಹೇಳಿದ್ದೇನೆ. ಅಮಿತಾ ಜಿಂದಾಲ್ ಅವರಿಗೆ ಈ ರೀತಿಯಾದಾಗ ಅವರ ಆಸ್ಪತ್ರೆ ವೆಚ್ಚ ಭರಿಸುವಂತೆ ಹೇಳಿದ್ದೇನೆ. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇನೆ’ ಎಂದು ಮಾತುಗಳನ್ನು ದರ್ಶನ್ ದಾಖಲಿಸಿದ್ದಾರೆ.

    ಘಟನೆ ನಡೆದ ದಿನದಂದು ಸಿಸಿಟಿವಿ ವರ್ಕ್ ಆಗ್ತಿರಲಿಲ್ಲ. ಘಟನೆ ಆದ ಬಳಿಕ ಸಿಸಿಟಿವಿ ಮೈಂಟೇನ್ ಮಾಡುವಂತೆ ಹೇಳಿದ್ದೀನಿ ಎಂದೂ ಪೊಲೀಸರಿಗೆ ದರ್ಶನ್ ತಿಳಿಸಿದ್ದಾರೆ. ಸದ್ಯಕ್ಕೆ ಸಿಸಿಟಿವಿ ಫೂಟೇಜ್ ನೀಡುವಂತೆ ಪೊಲೀಸರು ತಿಳಿಸಿದ್ದು, ಸಿಸಿಟಿವಿ ಫೂಟೇಜ್ ಪಡೆದು ಮುಂದೆ ಚಾರ್ಜ್ ಶೀಟ್ ಹಾಕಲಿದ್ದಾರೆ ಎನ್ನುವ ಮಾಹಿತಿ ಇದೆ.

    ಏನಿದು ಪ್ರಕರಣ?

    ಹಿಂದೆ ದರ್ಶನ್ ವಿರುದ್ಧ ಆರ್ಆರ್ ನಗರದ (RR Nagar) ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289 ಅಡಿ ನಾಯಿ (Dog) ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

    ಬಗ್ಗೆ ಸ್ವತಃ ದೂರುದಾರರಾದ ಅಮಿತಾ ಜಿಂದಾಲ್ (Amita) ಪ್ರತಿಕ್ರಿಯೆ ನೀಡಿದ್ದರು. ಆರ್ಆರ್ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದೆ. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ಕಾರನ್ನು ಪಾರ್ಕ್ ಮಾಡಿದ್ದು, ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವು. ದರ್ಶನ್ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಕೇಳಿದೆ, ಆಗ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದು ಸಿಬ್ಬಂದಿ ಹೇಳಿದ್ದರು ಎಂದು ಅಮಿತಾ ಮಾತನಾಡಿದ್ದರು.

    ಮಾತಿನ ಚಕಮಕಿಯ ಬಳಿಕ ನಾಯಿಗಳು ತನ್ನ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಡಿದು ಗಾಯಗೊಳಿಸಿವೆ. ಅವರ ಸಿಬ್ಬಂದಿ ನಾಯಿಗೆ ಇಂಜೆಕ್ಷನ್ ಆಗಿದೆ ಹೋಗಿ ಎಂದು ಕಳುಹಿಸಿಬಿಟ್ರು. ಸ್ನೇಹಿತರ ಮಗನ ಸಹಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಆರ್ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ದೂರು ನೀಡಿದ್ದೇನೆ ಎಂದು ಅವರು ವಿವರಿಸಿದ್ದರು.

     

    ಸಿಬ್ಬಂದಿಯನ್ನ ಮೊದಲ ಆರೋಪಿ, ದರ್ಶನ್ರನ್ನು ಎರಡನೇ ಆರೋಪಿಯನ್ನಾಗಿಸಿ ಪ್ರಕರಣ ದಾಖಲಾಗಿತ್ತು. ದರ್ಶನ್ ಅವರು ಯಾವುದೇ ಕರೆ ಮಾಡಿಲ್ಲ ಮತ್ತು ಭೇಟಿ ಮಾಡಲಿಲ್ಲ. ಯಾರೋ ವ್ಯಕ್ತಿಯೊಬ್ಬರು ಆಸ್ಪತ್ರೆಯ ಖರ್ಚು ಭರಿಸೋದಾಗಿ ತಿಳಿಸಿದ್ದರು. ಅವರು ಯಾರು ಎಂದು ತಿಳಿದು ಬಂದಿಲ್ಲ. ಪೊಲೀಸರು ನಮಗೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಸ್ ದಾಖಲಾಗಿದೆ, ತನಿಖೆ ನಡೆಯಲಿ ಎಂದು ಗಾಯಗೊಂಡ ಮಹಿಳೆ ಅಮಿತಾ ತಿಳಿಸಿದ್ದರು. ಈಗ ನೋಟಿಸ್ ನೀಡುವ ಮೂಲಕ ಪೊಲೀಸರು ತನಿಖೆಗೆ ಇಳಿದಿದ್ದಾರೆ.

  • ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ದರ್ಶನ್

    ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ದರ್ಶನ್

    ಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ (Darshan) ಆರ್.ಆರ್.ನಗರ (RR Nagar) ಪೊಲೀಸ್‍ ಠಾಣೆಯಲ್ಲಿ ವಿಚಾರಣೆಗಾಗಿ (Enquiry) ಹಾಜರಾಗಲಿದ್ದಾರೆ.  ಇಂದು ಬೆಳಗ್ಗೆ 11.30 ಕ್ಕೆ ಸ್ಟೇಷನ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲಿದ್ದಾರೆ ದರ್ಶನ್. ಮೂರು ದಿನದ ಒಳಗೆ ವಿಚಾರಣೆಗೆ ಬರಬೇಕೆಂದು ಪೊಲೀಸ್ ರು ನೋಟೀಸ್ ಕೊಟ್ಟಿದ್ದರು. ಸಿಸಿಟಿವಿ ಫೂಟೇಜ್ ಜೊತೆ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸೂಚಿಸಲಾಗಿತ್ತು.

    ಏನಿದು ಪ್ರಕರಣ?

    ಈ ಹಿಂದೆ ದರ್ಶನ್ ವಿರುದ್ಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ (Dog) ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

    ಈ ಬಗ್ಗೆ ಸ್ವತಃ ದೂರುದಾರರಾದ ಅಮಿತಾ ಜಿಂದಾಲ್ (Amita) ಪ್ರತಿಕ್ರಿಯೆ ನೀಡಿದ್ದರು. ಆರ್‌ಆರ್ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದೆ. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ಕಾರನ್ನು ಪಾರ್ಕ್ ಮಾಡಿದ್ದು, ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವು. ದರ್ಶನ್‌ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಕೇಳಿದೆ, ಆಗ ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದು ಸಿಬ್ಬಂದಿ ಹೇಳಿದ್ದರು ಎಂದು ಅಮಿತಾ ಮಾತನಾಡಿದ್ದರು.

    ಮಾತಿನ ಚಕಮಕಿಯ ಬಳಿಕ ನಾಯಿಗಳು ತನ್ನ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಡಿದು ಗಾಯಗೊಳಿಸಿವೆ. ಅವರ ಸಿಬ್ಬಂದಿ ನಾಯಿಗೆ ಇಂಜೆಕ್ಷನ್ ಆಗಿದೆ ಹೋಗಿ ಎಂದು ಕಳುಹಿಸಿಬಿಟ್ರು. ಸ್ನೇಹಿತರ ಮಗನ ಸಹಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಆರ್‌ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ದೂರು ನೀಡಿದ್ದೇನೆ ಎಂದು ಅವರು ವಿವರಿಸಿದ್ದರು.

     

    ಸಿಬ್ಬಂದಿಯನ್ನ ಮೊದಲ ಆರೋಪಿ, ದರ್ಶನ್‌ರನ್ನು ಎರಡನೇ ಆರೋಪಿಯನ್ನಾಗಿಸಿ ಪ್ರಕರಣ ದಾಖಲಾಗಿತ್ತು. ದರ್ಶನ್ ಅವರು ಯಾವುದೇ ಕರೆ ಮಾಡಿಲ್ಲ ಮತ್ತು ಭೇಟಿ ಮಾಡಲಿಲ್ಲ. ಯಾರೋ ವ್ಯಕ್ತಿಯೊಬ್ಬರು ಆಸ್ಪತ್ರೆಯ ಖರ್ಚು ಭರಿಸೋದಾಗಿ ತಿಳಿಸಿದ್ದರು. ಅವರು ಯಾರು ಎಂದು ತಿಳಿದು ಬಂದಿಲ್ಲ. ಪೊಲೀಸರು ನಮಗೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಸ್ ದಾಖಲಾಗಿದೆ, ತನಿಖೆ ನಡೆಯಲಿ ಎಂದು ಗಾಯಗೊಂಡ ಮಹಿಳೆ ಅಮಿತಾ ತಿಳಿಸಿದ್ದರು. ಈಗ ನೋಟಿಸ್ ನೀಡುವ ಮೂಲಕ ಪೊಲೀಸರು ತನಿಖೆಗೆ ಇಳಿದಿದ್ದಾರೆ.

  • ಆರ್.ಆರ್ ನಗರದ ಅನುದಾನಕ್ಕೆ ಕೊಕ್ಕೆ- ಮುನಿರತ್ನ ಉಪವಾಸ ಸತ್ಯಾಗ್ರಹ

    ಆರ್.ಆರ್ ನಗರದ ಅನುದಾನಕ್ಕೆ ಕೊಕ್ಕೆ- ಮುನಿರತ್ನ ಉಪವಾಸ ಸತ್ಯಾಗ್ರಹ

    ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಟಾರ್ಗೆಟ್ ಪಾಲಿಟಿಕ್ಸ್ ವಿರುದ್ಧ ಆರ್.ಆರ್ ನಗರ ಶಾಸಕ ಮುನಿರತ್ನ (Muniratna) ಸಿಡಿದೆದ್ದಿದ್ದಾರೆ.

    ಬಸವರಾಜ್ ಬೊಮ್ಮಾಯಿ (Basavaraj Bommai) ಸರ್ಕಾರದಲ್ಲಿ ಕೊಟ್ಟಿದ್ದ ಅನುದಾನ ವಾಪಸ್ ಪಡೆದ ಸರ್ಕಾರದ ನಡೆ ಖಂಡಿಸಿ ಖಂಡಿಸಿ ಮುನಿರತ್ನ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಇಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಎಚ್‍ಡಿ ರೇವಣ್ಣ ಆಪ್ತನ ಮೇಲೆ ಡೆಡ್ಲಿ ಅಟ್ಯಾಕ್!

    ಅಲ್ಲದೇ ಆರ್.ಆರ್ ನಗರ ಕ್ಷೇತ್ರದ 126 ಕೋಟಿ ಅನುದಾನ ವಾಪಸ್‍ಗೆ ಮುನಿರತ್ನ ಆಗ್ರಹಿಸಲಿದ್ದಾರೆ. ಮುನಿರತ್ನ ಹೋರಾಟಕ್ಕೆ ನಗರ ಬಿಜೆಪಿ ಶಾಸಕರ ಬೆಂಬಲವೂ ಇದೆ. ಇದು ಕಾಂಗ್ರೆಸ್ – ಬಿಜೆಪಿ ನಡುವಿನ ಅನುದಾನ ವಾರ್‍ಗೆ ಮತ್ತೊಂದು ಟ್ವಿಸ್ಟ್ ಕೊಟ್ಟಿದೆ. ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸಿಕ್ಕಿದ್ದ 126 ಕೋಟಿ ಅನುದಾನ ವಾಪಸ್ ಹಿಂದೆ ಡಿಸಿಎಂ ಡಿಕೆಶಿ ನೇರ ಹಸ್ತಕ್ಷೇಪ ಆರೋಪಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ: ಮುನಿರತ್ನ

    ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ: ಮುನಿರತ್ನ

    ಬೆಂಗಳೂರು: ವಾರ್ಡ್ ನಂ.160 ರಾಜರಾಜೇಶ್ವರಿ ನಗರದಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬೆಂಗಳೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ನಡುವೆ ರಾಜಕಾಲುವೆಗಳ ಒತ್ತುವರಿ ಮಾಡಿಕೊಂಡಿರುವುದರಿಂದಾಗಿ ಮಳೆ ಬಂದಾಗ ಈ ಸಮಸ್ಯೆ ಆಗಿದೆ. ಈ ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ. ನಾನು ನನ್ನ ಮತದಾರರಿಗೆ ಭರವಸೆ ಕೊಡ್ತೀನಿ ಎಂದು ಸಚಿವ ಮುನಿರತ್ನ ಹೇಳಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಳೆ ಜಾಸ್ತಿಯಾದಾಗ ತಗ್ಗು ಪ್ರದೇಶಗಳಿಗೆ ನೀರು ಬರುತ್ತೆ. ಭೌಗೋಳಿಕವಾಗಿ ಜಾಗ ಕೂಡ ಹಾಗೇ ಇದೆ. 1,015 ಮನೆಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ. ರಾಜಕಾಲುವೆ ನೀರನ್ನು ಹೊರಗಡೆಗೆ ತಿರುಗಿಸಬೇಕು ಅದೇ ಈ ಸಮಸ್ಯೆಗೆ ಪರಿಹಾರ. ಕೆಲವೊಂದು ಕಡೆ ರಾಜಕಾಲುವೆ ನೀರು ಒಂದೇ ಕಡೆ ನಿಲ್ಲುತ್ತದೆ. ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರೋರನ್ನು ಪಟ್ಟಿ ಮಾಡಲಾಗಿದೆ. ಈಗಾಗಲೇ ಸಾಕಷ್ಟು ತೆರವು ಮಾಡಿದ್ದೇವೆ. ಮಿಕ್ಕಿದನ್ನು ಕೂಡಲೇ ತೆರವು ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಗುರುವಾರ ಮಹತ್ವದ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸಭೆ – ಸಿಎಂ ದೆಹಲಿಗೆ

    ಈಗಾಗಲೇ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ಗಮನಹರಿಸಿದ್ದಾರೆ. ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರುವುದು ಈ ಸಮಸ್ಯೆಗೆ ಪ್ರಮುಖ ಕಾರಣ. ರಾಜಕಾಲುವೆ ಒತ್ತುವರಿ ಮಾಡಿ ಜಾಗ ಮಾರಾಟವಾದಾಗ ಖರೀದಿದಾರರು ಈ ಬಗ್ಗೆ ಗಮನ ಹರಿಸುವುದಿಲ್ಲ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಆಗದಂತೆ ಜನಪ್ರತಿನಿಧಿಗಳು ಗಮನಹರಿಸಬೇಕಾದ ಅನಿವಾರ್ಯತೆ ಇದೆ ಎಂದರು. ಇದನ್ನೂ ಓದಿ: ಗಮನಿಸಿ, ಮುಂದಿನ 5 ದಿನಗಳ ಕಾಲ ಬೆಂಗ್ಳೂರಲ್ಲಿ ಭಾರೀ ಮಳೆ

  • ಕರ್ನಾಟಕಕ್ಕೆ ಧನ್ಯವಾದಗಳು – ಕನ್ನಡದಲ್ಲಿಯೇ ಅಮಿತ್ ಶಾ ಟ್ವೀಟ್

    ಕರ್ನಾಟಕಕ್ಕೆ ಧನ್ಯವಾದಗಳು – ಕನ್ನಡದಲ್ಲಿಯೇ ಅಮಿತ್ ಶಾ ಟ್ವೀಟ್

    ನವದೆಹಲಿ: ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿದ ಕರ್ನಾಟಕದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

    ಅಮಿತ್ ಶಾ ಟ್ವೀಟ್: ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ಚುನಾವಣೆ ಕಣದಲ್ಲಿದ್ದ ಮುನಿರತ್ನ 1,25,990 ಮತ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. 67,877 ಮತ ಪಡೆದಿದ್ದಾರೆ. ಇನ್ನು ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ಗೌಡ 76,564 ಮತ ಪಡೆದು ಐತಿಹಾಸಿಕ ದಾಖಲೆ ಬರೆದಿದ್ದಾರೆ.

  • ಬಿಜೆಪಿ ಗೆಲುವನ್ನ ವ್ಯಾಖ್ಯಾನಿಸಿದ ಹೆಚ್‍ಡಿಕೆ

    ಬಿಜೆಪಿ ಗೆಲುವನ್ನ ವ್ಯಾಖ್ಯಾನಿಸಿದ ಹೆಚ್‍ಡಿಕೆ

    ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

    ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ. ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: 2 ಕ್ಷೇತ್ರದಲ್ಲಿ ನಮ್ಮನ್ನು ಗೆಲ್ಲಿಸುವ ಮೂಲಕ ಜನರು ರಾಜ್ಯ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ: ಸಿಎಂ

    ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ಕಾರ್ಯಕರ್ತರಿಗೆ ಉತ್ಸಾಹ ತುಂಬಿದ್ದಾರೆ. ಇದನ್ನೂ ಓದಿ: ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

  • ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

    ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

    ಬೆಂಗಳೂರು: ಅಭ್ಯರ್ಥಿಯ ಆಯ್ಕೆಯ ವಿಳಂಬವಾಗಿದ್ದರಿಂದ ಆರ್.ಆರ್.ನಗರದ ಸೋಲಿಗೆ ಕಾರಣ ಇರಬಹುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡೂ ಸೋಲುಗಳು ಕುರಿತು ಸಾಲು ಸಾಲು ಟ್ವೀಟ್ ಮೂಲಕ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ.

    ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು. ಇದನ್ನೂ ಓದಿ: ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ. ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

    ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂದಿದ್ದಾರೆ. ಇದನ್ನೂ ಓದಿ: ಇದು ಬಿಎಸ್‍ವೈ ಸರ್ಕಾರದ ಜನಪರ ಕಾರ್ಯಗಳಿಗೆ ಜನ ನೀಡಿದ ಬೆಂಬಲ – ಸುಧಾಕರ್ ಬಣ್ಣನೆ

    ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು ಎಂದು ಬೇಸರದ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

    ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?

  • ಕಾಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ – ಬಿಜೆಪಿ

    ಕಾಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ – ಬಿಜೆಪಿ

    ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರತ್ನ ಜಯಗಳಿಸಿದ ಬೆನ್ನಲ್ಲೇ ಬಿಜೆಪಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕಾಲೆಳೆದಿದೆ.

    ಪ್ರಚಾರದ ಸಮಯದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಲೆಯೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆಇಂದು ತಿರುಗೇಟು ನೀಡಿದ ಬಿಜೆಪಿ, ಅಯ್ಯೋ ಸಿದ್ದರಾಮಯ್ಯನವರೇ ಆರ್. ಆರ್ ನಗರದಲ್ಲಿ ಕಾಂಗ್ರೆಸ್ಸ್ ಪಕ್ಷವೇ ಇಲ್ಲವಲ್ಲ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕವಾಗಿ ವಂಗ್ಯವಾಡಿದೆ.

    ಟ್ವೀಟ್‍ನಲ್ಲಿ ಏನಿದೆ?
    ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ ಇಲ್ಲ
    ಮತದಾರ: ಅಯ್ಯೋ ಸಿದ್ದರಾಮಯ್ಯನವರೇ ಇಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷವೇ ಇಲ್ಲವಲ್ಲ

     

    ಬಿಜೆಪಿ ಈ ರೀತಿ ಬರೆಯುವುದರ ಜೊತೆಗೆ ಕಾಂಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

    ಆರ್.ಆರ್. ನಗರ ಮತ ಎಣಿಕೆ ಮುಕ್ತಾಯಗೊಂಡಿದ್ದು, ಮುನಿರತ್ನ ಅವರು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಕಳೆದ ಚುನಾವಣೆಗಿಂತ ಎರಡು ಪಟ್ಟು ಮತ ಪಡೆದು ಗೆಲುವು ಕಂಡಿದ್ದಾರೆ.

    ಮುನಿರತ್ನ 1,25,734 ಮತಗಳನ್ನು ಪಡೆದರೆ ಕುಸುಮಾ 67,798 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಕೇಶವಮೂರ್ತಿ 10,251 ಮತಗಳನ್ನು ಪಡೆದಿದ್ದಾರೆ.

     

  • ಬೈಎಲೆಕ್ಷನ್ ಕದನ ಕುತೂಹಲಕ್ಕೆ ಇಂದು ತೆರೆ- ಆರ್.ಆರ್ ನಗರದಲ್ಲಿ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ

    ಬೈಎಲೆಕ್ಷನ್ ಕದನ ಕುತೂಹಲಕ್ಕೆ ಇಂದು ತೆರೆ- ಆರ್.ಆರ್ ನಗರದಲ್ಲಿ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ

    ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಮತಎಣಿಕೆಗೆ ಸಿದ್ಧತೆ ಮುಕ್ತಾಯವಾಗಿದೆ. ಬಿಬಿಎಂಪಿ, ಪೊಲೀಸ್ ಇಲಾಖೆಯ ಭದ್ರತೆಯಲ್ಲಿ ಮತಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರತಿಷ್ಠೆಯ ಅಖಾಡ, ಘಟಾನುಘಟಿಗಳೇ ಕಣಕ್ಕಿಳಿದು ಸವಾಲಿಗೆ ಸವಾಲೆಸೆದು ರಂಗೇರಿದ್ದ ರಣಕಣ ರಾಜರಾಜೇಶ್ವರಿ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ರಾಜರಾಜೇಶ್ವರಿ ಯಾರಿಗೆ ಒಲಿಯಲಿದ್ದಾಳೆ ಅನ್ನೋದು ಮಧ್ಯಾಹ್ನದ ವೇಳೆಗೆ ಕ್ಲೀಯರ್ ಪಿಕ್ಚರ್ ಸಿಗಲಿದೆ.

    ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿರುವ ಕ್ಷೇತ್ರದಲ್ಲಿ ಗೆಲುವಿನ ಕುದುರೆ ಏರುವವರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈಗಾಗಲೇ ರಾಜರಾಜೇಶ್ವರಿ ನಗರ ಉಪಚುನಾವಣೆಯ ಮತಎಣಿಕೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಬಿಜೆಪಿಯ ಮುನಿರತ್ನ, ಕಾಂಗ್ರೆಸ್ಸಿನ ಕುಸುಮಾ ಹಾಗೂ ಜೆಡಿಎಸ್‍ನ ಕೃಷ್ಣಮೂರ್ತಿ ಸೇರಿದಂತೆ 16 ಹುರಿಯಾಳುಗಳ ಭವಿಷ್ಯ ಮಧ್ಯಾಹ್ನದೊಳಗೆ ಪ್ರಕಟವಾಗಲಿದೆ.

    ಹಲಗೆವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತಎಣಿಕೆ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೂ ಇಡೀ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮದ್ಯ ಮಾರಾಟಕ್ಕೂ ನಿರ್ಬಂಧ ಹಾಕಲಾಗಿದೆ. ಪೊಲೀಸರ ಹದ್ದಿನ ಕಣ್ಣಿನಲ್ಲಿ ಮತ ಎಣಿಕೆ ನಡೆಯಲಿದೆ.

     ಆರ್.ಆರ್.ನಗರ ಮತ ಎಣಿಕೆಗೆ ಕ್ಷಣಗಣನೆ: 
    ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ಸೇರಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2,09,828 ಮತ ಚಲಾವಣೆ, ಒಟ್ಟು ಶೇ.45.48ರಷ್ಟು ಮತದಾನವಾಗಿದೆ. 412 ಅಂಚೆ ಹಾಗೂ 04 ಇಟಿಪಿಬಿಎಸ್ ಮತ ಚಲಾವಣೆ ಆಗಿದೆ. ಮೊದಲು ಬೆಳಗ್ಗೆ 8 ಗಂಟೆಗೆ ಅಂಚೆ ಮತ ಎಣಿಕೆ ಹಾಗೂ ಇಟಿಪಿಬಿಎಸ್ ಮತಎಣಿಕೆ ಆರಂಭವಾಗಲಿದೆ. ಅಂಚೆ ಮತ ಎಣಿಕೆ ಬಳಿಕ ಇವಿಎಂ ಮತಎಣಿಕೆ ಶುರುವಾಗಲಿದೆ. ಆರ್.ಆರ್.ನಗರದಲ್ಲಿ ಒಟ್ಟು 25 ಸುತ್ತುಗಳಲ್ಲಿ ಮತಎಣಿಕೆ ನಡೆಯಲಿದೆ. ಒಟ್ಟು 678 ಮತಗಟ್ಟೆಗಳಿದ್ದು ಪ್ರತಿ ಸುತ್ತಿನಲ್ಲಿ 28 ಟೇಬಲ್‍ಗಳಲ್ಲಿ ಮತಎಣಿಕೆ ನಡೆಯಲಿದ್ದು, ಒಂದು ಕೊಠಡಿಯಲ್ಲಿ 7 ಎಣಿಕಾ ಟೇಬಲ್‍ಗಳಂತೆ ಒಟ್ಟು 4 ಕೊಠಡಿಯಲ್ಲಿ 28 ಎಣಿಕಾ ಟೇಬಲ್ ವ್ಯವಸ್ಥೆ ಮಾಡಲಾಗಿದೆ.

    ಪ್ರತಿ ಟೇಬಲ್‍ಗೆ ಮೂವರು ಅಧಿಕಾರಿ, ಸಿಬ್ಬಂದಿಯ ನೇಮಕ ಮಾಡಲಾಗಿದೆ. ಮತಎಣಿಕೆ ಕಾರ್ಯಕ್ಕೆ 250 ಸಿಬ್ಬಂದಿ ನೇಮಕ ಮಾಡಲಾಗಿದ್ದು, ಸಿಬ್ಬಂದಿಗೆ 2 ಹಂತದ ತರಬೇತಿ ನೀಡಲಾಗಿದೆ. ಗುರುತಿನ ಚೀಟಿ ಹೊಂದಿರುವವರಿಗಷ್ಟೇ ಪ್ರವೇಶಕ್ಕೆ ಅವಕಾಶ. ಚುನಾವಣೆ ಸಿಬ್ಬಂದಿಗೆ ಮೊಬೈಲ್ ನಿಷೇಧ ಮಾಡಲಾಗಿದ್ದು, ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸ್ ಕಡ್ಡಾಯ ಎಂದು ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

    ವಿಜಯೋತ್ಸವ, ಪಟಾಕಿ ಹಚ್ಚಂಗಿಲ್ಲ:
    ಮತ ಎಣಿಕೆ ಕಾರ್ಯ ಪೊಲೀಸ್ ಭದ್ರತೆಯಲ್ಲಿ ನಡೆಯಲಿದೆ. ಗೆದ್ದ ಅಭ್ಯರ್ಥಿಗಳ ಪರವಾಗಿ ಮತ ಎಣಿಕೆ ಕೇಂದ್ರದ ಬಳಿ ಸಂಭ್ರಮಾಚರಣೆಗೆ ಮತ್ತು ಪಟಾಕಿ ಸಿಡಿಸಲು ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನುರೀತ್ಯ ಕ್ರಮದ ಎಚ್ಚರಿಕೆ ನೀಡಲಾಗಿದೆ. ಇನ್ನು ಎಣಿಕೆ ಕೇಂದ್ರದ ಮುಂಭಾಗದಲ್ಲಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮತಎಣಿಕೆ ಕೇಂದ್ರ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಪೊಲೀಸ್ ಸರ್ಪಗಾವಲು ಹಾಕಿದ್ದಾರೆ.

    ಒಟ್ಟಿನಲ್ಲಿ ಹೈವೋಲ್ಟೇಜ್ ಕ್ಷೇತ್ರದ ಮತ ಎಣಿಕೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. ಮಧ್ಯಾಹ್ನ 1 ಗಂಟೆ ಒಳಗೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಎಂಬುದು ಕುತೂಹಲ ಮೂಡಿಸಿದೆ.

  • ಬೈ ಎಲೆಕ್ಷನ್ ರಿಸಲ್ಟ್- ಆರ್.ಆರ್. ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ

    ಬೈ ಎಲೆಕ್ಷನ್ ರಿಸಲ್ಟ್- ಆರ್.ಆರ್. ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ

    – ವಿಜಯೋತ್ಸವ, ಮೆರವಣಿಗೆ ನಡೆಸುವಂತಿಲ್ಲ

    ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಮತ ಎಣಿಕೆಗೆ ಸಿದ್ಧತೆ ಮುಕ್ತಾಯವಾಗಿದೆ. ಬಿಬಿಎಂಪಿ, ಪೊಲೀಸ್ ಇಲಾಖೆಯ ಭದ್ರತೆಯಲ್ಲಿ ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರತಿಷ್ಠೆಯ ಕಣವಾಗಿರೋ ರಾಜರಾಜೇಶ್ವರಿ ನಗರ ಉಪ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಬಿಜೆಪಿಯ ಮುನಿರತ್ನ, ಕಾಂಗ್ರೆಸ್‍ನ ಕುಸುಮಾ ಹಾಗೂ ಜೆಡಿಎಸ್‍ನ ಕೃಷ್ಣಮೂರ್ತಿ ಭವಿಷ್ಯ ನಾಳೆ ಪ್ರಕಟವಾಗಲಿದೆ.

    ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಪೊಲೀಸ್ ಸರ್ಪಗಾವಲಿನಲ್ಲಿ ಮತ ಎಣಿಕೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೂ ಇಡೀ ಕ್ಷೇತ್ರ ವ್ಯಾಪಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮದ್ಯ ಮಾರಾಟಕ್ಕೂ ನಿರ್ಬಂಧ ಹಾಕಲಾಗಿದೆ. ಪೊಲೀಸರ ಹದ್ದಿನ ಕಣ್ಣಿನಲ್ಲಿ ಮತ ಎಣಿಕೆ ನಡೆಯಲಿದೆ.

    ಆರ್.ಆರ್.ನಗರದಲ್ಲಿ 25 ಸುತ್ತು ಮತ ಎಣಿಕೆ: ಆರ್.ಆರ್.ನಗರ ಮಿನಿ ಕದನದಲ್ಲಿ ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ಸೇರಿ ಕಣದಲ್ಲಿ ಒಟ್ಟು 16 ಅಭ್ಯರ್ಥಿಗಳು ಇದ್ದಾರೆ. ಕ್ಷೇತ್ರದಲ್ಲಿ 412 ಅಂಚೆ ಹಾಗೂ 04 ಇಟಿಪಿಬಿಎಸ್ ಸೇರಿದಂತೆ 2,09,828 ಮತ ಚಲಾವಣೆ ಆಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದ್ದು, ಮೊದಲು ಅಂಚೆ ಹಾಗೂ ಇಟಿಪಿಬಿಎಸ್ ಮತಗಳನ್ನ ಎಣಿಕೆ ಹಾಕಲಾಗುವುದು. ಇವಿಎಂ ಮತ ಎಣಿಕೆ ಬೆಳಗ್ಗೆ 8.30 ಕ್ಕೆ ಪ್ರಾರಂಭವಾಗಲಿದೆ. ಒಟ್ಟು 25 ಸುತ್ತು ಮತ ಎಣಿಕೆ ಇರಲಿದೆ.

    ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ಪ್ರತಿ ಸುತ್ತಿನಲ್ಲಿ 28 ಟೇಬಲ್ ಗಳಲ್ಲಿ ಮತ ಎಣಿಕೆ ನಡೆಯಲಿದೆ. ಒಂದು ಕೊಠಡಿಯಲ್ಲಿ 7 ಎಣಿಕಾ ಟೇಬಲ್ ಗಳಂತೆ ಒಟ್ಟು 4 ಕೊಠಡಿಯಲ್ಲಿ 28 ಎಣಿಕಾ ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‍ಗೆ 3 ಸಹಾಯಕ ಚುನಾವಣೆ ಅಧಿಕಾರಿಗಳ ನೇಮಕ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕೆ 250 ಸಿಬ್ಬಂದಿ ನೇಮಕ ಮಾಡಲಾಗಿದ್ದು, 2 ಹಂತದ ತರಬೇತಿ ನೀಡಲಾಗಿದೆ. ಚುನಾವಣೆ ಸಿಬ್ಬಂದಿಗೆ ನಾಳೆ ಮೊಬೈಲ್ ನಿಷೇಧ ಮಾಡಲಾಗಿದೆ. ಮಾಧ್ಯಮಗಳಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಚುನಾವಣೆ ಸಿಬ್ಬಂದಿ ಸೇರಿದಂತೆ ಎಣಿಕೆ ಕೇಂದ್ರದ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು, ಸ್ಯಾನಿಟೈಸ್ ವ್ಯವಸ್ಥೆ ಮಾಡಲಾಗಿದೆ.

    ಪೊಲೀಸ್ ಸರ್ಪಗಾವಲು: ಮತ ಎಣಿಕೆ ಕಾರ್ಯ ಪೊಲೀಸ್ ಭದ್ರತೆಯಲ್ಲಿ ನಡೆಯಲಿದೆ. ಮತ ಎಣಿಕೆ ಕೇಂದ್ರ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಪೊಲೀಸ್ ಸರ್ಪಗಾವಲು ಹಾಕಿದ್ದು, ಸುಮಾರು 1,800 ಪೊಲೀಸರ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಒಟ್ಟು 4 ಹಂತದ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಎರಡೂ ಕಡೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧವಿದ್ದು, ಚುನಾವಣಾ ಆಯೋಗದಿಂದ ಪಾಸ್ ಪಡೆದವರಿಗೆ ಮಾತ್ರ ಒಳಗೆ ಅವಕಾಶ ನೀಡಲಾಗುತ್ತದೆ.

    ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 3 ಜನ ಡಿಸಿಪಿ, ಎಸಿಪಿ ಸೇರಿ 900 ಜನ ಪೊಲೀಸರ ನಿಯೋಜನೆ ಮಾಡಲಾಗಿದೆ. 36 ಕೆ.ಎಸ್.ಆರ್.ಪಿ/ಸಿ.ಎ.ಆರ್ ಫೋರ್ಸ್, ಒಂದು ಅಗ್ನಿಶಾಮಕ ದಳ, ಒಂದು ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿದೆ. ಕೋವಿಡ್ ಇರುವ ಕಾರಣ ಮತ ಎಣಿಕೆ ಕೇಂದ್ರದ ಬಳಿ ಹೆಚ್ಚು ಜನ ಸೇರುವಂತಿಲ್ಲ. ಮತ ಕೇಂದ್ರದ ಬಳಿ ಸಂಭ್ರಮಾಚರಣೆ, ಪಟಾಕಿ ಹಚ್ಚುವ ಹಾಗಿಲ್ಲ. ಮತ ಎಣಿಕೆ ಕೇಂದ್ರದ ರಸ್ತೆ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಇರುವುದಿಲ್ಲ. ವಾಹನ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

    ಹೈವೋಲ್ಟೇಜ್ ಮತ ಎಣಿಕೆ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ ಮಧ್ಯಾಹ್ನ 1 ಗಂಟೆ ಒಳಗೆ ವಿಜಯಲಕ್ಷ್ಮಿ ಯಾರಿಗೆ ಅನ್ನೋದು ತಿಳಿಯಲಿದ್ದು, ಶಾಂತಿಯುತ ಮತ ಎಣಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.