Tag: ಆರ್ ಆರ್ ನಗರ

  • RR ನಗರ ಕ್ಷೇತ್ರಕ್ಕಿಂದು ಚುನಾವಣೆ- ಪೊಲಿಟಿಕಲ್ ದೋಸ್ತಿ ಜೆಡಿಎಸ್-ಕಾಂಗ್ರೆಸ್‍ಗೆ ಮೊದಲ ಅಗ್ನಿ ಪರೀಕ್ಷೆ

    RR ನಗರ ಕ್ಷೇತ್ರಕ್ಕಿಂದು ಚುನಾವಣೆ- ಪೊಲಿಟಿಕಲ್ ದೋಸ್ತಿ ಜೆಡಿಎಸ್-ಕಾಂಗ್ರೆಸ್‍ಗೆ ಮೊದಲ ಅಗ್ನಿ ಪರೀಕ್ಷೆ

    ಬೆಂಗಳೂರು: ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಈ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿನಗರದಲ್ಲಿ ಇವತ್ತು ಮತದಾನ ನಡೆಯುತ್ತಿದೆ. ಅಪಾರ್ಟ್ ಮೆಂಟ್‍ನಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರದ ಚುನಾವಣೆಯನ್ನು ಮುಂದೂಡಲಾಗಿತ್ತು.

    ಕ್ಷೇತ್ರವನ್ನು ಗೆದ್ದು ಸದಸ್ಯ ಬಲವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಹಪಹಪಿಸುತ್ತಿದ್ರೆ, ಮತ್ತೊಂದು ಕಡೆ ಮೈತ್ರಿಕೂಟದ ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರತ್ಯೇಕವಾಗಿ ಕಣಕ್ಕಿಳಿದಿವೆ. ಇಂದು ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ. ಆರ್ ಆರ್ ನಗರದಲ್ಲಿ 4 ಲಕ್ಷದ 71 ಸಾವಿರದ 459 ಮತದಾರರಿದ್ದು, ಒಟ್ಟು 421 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

    ಬಿಜೆಪಿ ಪರ ಮುನಿರಾಜು ಕಣಕ್ಕೆ ಇಳಿದಿದ್ರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ ಕಣಕ್ಕೆ ಇಳಿದಿದ್ದಾರೆ. ಇನ್ನು ಜೆಡಿಎಸ್‍ನಿಂದ ನಟಿ ಅಮೂಲ್ಯ ಮಾವ ಜಿ.ಎಚ್.ರಾಮಚಂದ್ರ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ನಡುವೆ ಬಿಜೆಪಿ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಆರ್.ಆರ್.ನಗರದಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

  • ಜೆಡಿಎಸ್‍ಗೆ ಉದಾರ, ತ್ಯಾಗದಿಂದ ಬೆಂಬಲ ಕೊಟ್ಟಿದ್ದೇವೆ- ಡಿ.ಕೆ ಶಿವಕುಮಾರ್

    ಜೆಡಿಎಸ್‍ಗೆ ಉದಾರ, ತ್ಯಾಗದಿಂದ ಬೆಂಬಲ ಕೊಟ್ಟಿದ್ದೇವೆ- ಡಿ.ಕೆ ಶಿವಕುಮಾರ್

    ಬೆಂಗಳೂರು: ಎಲ್ಲಾ ಜ್ಯಾತ್ಯಾತೀತ ಜನತಾ ದಳದ ಕಾರ್ಯಕರ್ತರಿಗೆ ತ್ಯಾಗದಿಂದ ಬೆಂಬಲ ಕೊಟ್ಟಿದ್ದೇವೆ ಅಂತ ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಸದಾಶಿವನಗರದಲ್ಲಿ ಆರ್ ಆರ್ ನಗರ ಅಭ್ಯರ್ಥಿ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜೆಡಿಎಸ್ ನವರಿಗೆ ಬಹಳ ಗೌರವದಿಂದ ಹೇಳಿದ್ದೇವೆ. ಬಿಜೆಪಿ ದೂರ ಇಡೋಕೆ ಒಳ್ಳೆಯ ಅವಕಾಶ ಅಂತಾ ಹೇಳಿದ್ದೇವೆ ಅಂದ್ರು.

    ನಾವು ಬಹಳ ಉದಾರದಿಂದ ದೊಡ್ಡ ತ್ಯಾಗದಿಂದ ಜೆಡಿಎಸ್ ಗೆ ಸಹಾಯ ಮಾಡಿದ್ದೇವೆ. ಅದಕ್ಕಾಗಿ ನಮ್ಮ ಸಿಟ್ಟಿಂಗ್ ಅಭ್ಯರ್ಥಿ ಗೆಲುವಿಗೆ ಸಹಾಯ ಮಾಡಿ ಅಂತಾ ಕೇಳಿದ್ದೇವೆ. ದೆಹಲಿಗೆ ಹೋಗೋ ವಿಚಾರ ಇನ್ನೂ ಇಲ್ಲ. ಆರ್ ಆರ್ ನಗರ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು ಅಂತ ಹೇಳಿದ್ರು.

    ನಿನ್ನೆಯಷ್ಟೆ ಬಹುಮತ ಗೆದ್ದ ಸರ್ಕಾರಕ್ಕೆ ಸಚಿವ ಸಂಪುಟ ವಿಸ್ತರಣೆ ಸವಾಲಾಗಿ ಪರಿಣಮಿಸಿದೆ. ಸಂಪುಟದಲ್ಲಿ ಸಿಎಂ ಸ್ಥಾನ ಸೇರಿ 12 ಸ್ಥಾನಗಳು ಜೆಡಿಎಸ್‍ಗೆ, ಉಪ ಮುಖ್ಯಮಂತ್ರಿ ಸೇರಿ 22 ಸ್ಥಾನಗಳು ಕಾಂಗ್ರೆಸ್ಸಿಗೆ ಹಂಚಿಕೆಯಾಗಿವೆ. ಆದ್ರೆ, ಉಭಯ ಪಕ್ಷಗಳಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ದೊಡ್ಡ ಪಟ್ಟಿ ಇದೆ. ಹೀಗಾಗಿ ಜೆಡಿಎಸ್ ಒಂದು, ಕಾಂಗ್ರೆಸ್ 3 ಸಚಿವ ಸ್ಥಾನಗಳನ್ನು ಖಾಲಿ ಉಳಿಸಿಕೊಳ್ಳುವ ಚಿಂತನೆಯಲ್ಲಿವೆ.

    ಲೋಕೋಪಯೋಗಿ, ಕಂದಾಯ, ಹಣಕಾಸು, ಜಲ ಸಂಪನ್ಮೂಲ, ಇಂಧನ, ಕೈಗಾರಿಕೆ, ಬೆಂಗಳೂರು ಅಭಿವೃದ್ಧಿ ಈ 5 ಖಾತೆಗಳ ಪೈಕಿ ಐದನ್ನು ತಮಗೆ ಬಿಟ್ಟು ಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಉಪ ಸಭಾಧ್ಯಕ್ಷ ಸ್ಥಾನ ಜೆಡಿಎಸ್‍ಗೆ ಹಂಚಿಕೆಯಾಗಿದ್ದು, ಸಕಲೇಶಪುರ ಶಾಸಕ ಎಚ್.ಕೆ. ಕುಮಾರಸ್ವಾಮಿ ಉಪಸಭಾಧ್ಯಕ್ಷರಾಗುವ ಸಾಧ್ಯತೆ ಇದೆ.

  • ರಾಶಿ ರಾಶಿ ವೋಟರ್ ಐಡಿ ಪತ್ತೆ ಪ್ರಕರಣ – ಆರ್ ಆರ್ ನಗರ ಚುನಾವಣೆ ಮುಂದೂಡಿಕೆ

    ರಾಶಿ ರಾಶಿ ವೋಟರ್ ಐಡಿ ಪತ್ತೆ ಪ್ರಕರಣ – ಆರ್ ಆರ್ ನಗರ ಚುನಾವಣೆ ಮುಂದೂಡಿಕೆ

    ಬೆಂಗಳೂರು: ಮತದಾನಕ್ಕೆ ಕೆಲವೇ ಗಂಟೆಗಳು ಇರುವಾಗ ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದೆ. ಒಂದೇ ಕಡೆ ರಾಶಿ ರಾಶಿ ವೋಟರ್ ಐಡಿ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ರಾಜರಾಜೇಶ್ವರಿ ನಗರ ವಿಧಾನಸಭೆ ಚುನಾವಣೆಯನ್ನು ಮುಂದೂಡಿದೆ.

    ನಾಳೆ ಬದಲು ಮೇ 28ಕ್ಕೆ ಆರ್ ಆರ್ ನಗರ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಮೇ 31 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೃಹತ್ ಮತಚೀಟಿ ಹಗರಣ ಸ್ಫೋಟ – ರಾಜಕಾರಣದಲ್ಲಿ ಮಿಡ್‍ನೈಟ್ ಹೈಡ್ರಾಮ

    ಮೇ 8ರಂದು ಜಾಲಹಳ್ಳಿ ಬಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ 9,800ಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾಗಿತ್ತು. ಈ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡಿತ್ತು. ಚುನಾವಣಾ ಆಯೋಗದ ಮೊರೆ ಕೂಡ ಹೋಗಿದ್ವು. ಕೇಂದ್ರ ಚುನಾವಣಾ ಆಯೋಗ, ಉಪ ಆಯುಕ್ತರನ್ನು ಬೆಂಗಳೂರಿಗೆ ಕಳುಹಿಸಿ ತನಿಖೆ ಮಾಡಿಸಿತ್ತು. ಇದನ್ನೂ ಓದಿ: ನನ್ನ ವಿರುದ್ಧ ಮುನಿರಾಜು, ಕೈ ಮಹಿಳಾ ಕಾರ್ಪೋರೇಟರ್ ಷಡ್ಯಂತ್ರ: ಮುನಿರತ್ನ

  • ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಎಚ್‍ಡಿಡಿ ನಿವಾಸದ ಮುಂದೆ ಪ್ರತಿಭಟನೆ

    ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಎಚ್‍ಡಿಡಿ ನಿವಾಸದ ಮುಂದೆ ಪ್ರತಿಭಟನೆ

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ್ರ ನಿವಾಸದ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

    ಆರ್.ಆರ್.ನಗರ ಕ್ಷೇತ್ರ ಉಳಿಸಲು ಪ್ರಜ್ವಲ್‍ಗೆ ಟಿಕೆಟ್ ಕೊಡಿ ಎಂದು ಒತ್ತಾಯ ಮಾಡಿದ್ದಾರೆ. ಈ ವಿಚಾರದಲ್ಲಿ ಸ್ವಲ್ಪ ಗೊಂದಲಗಳಿವೆ ಹಾಗಾಗಿ ಈ ವಿಷಯದ ಹೆಚ್ಚಿಗೆ ಮಾತನಾಡಲ್ಲ ಅಂತಾ ದೇವೇಗೌಡ್ರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಈ ವಿಷಯವನ್ನು ಬೀದಿಗೆ ತರಬೇಡಿ ಎಂದು ಪ್ರತಿಭಟನಾಕಾರರಿಗೆ ಮನವಿ ಮಾಡಿದ್ದಾರೆ. ಈ ವಿಷಯವನ್ನು ಬೀದಿಗೆ ತರುವಂತೆ ಮಾಡಿದ್ದೇ ನೀವು, ಅಭ್ಯರ್ಥಿ ವಿಚಾರದಲ್ಲಿರುವ ಸಮಸ್ಯೆ ಬಗೆಹರಿಸಿ. ದೇವೇಗೌಡರು, ಕುಮಾರಸ್ವಾಮಿ ಅವರ ಮನವೊಲಿಸಿ ಎಂದು ಬೆಂಬಲಿಗರು ಆಗ್ರಹಿಸಿದ್ದಾರೆ.

    ಮೊದಲ ಪಟ್ಟಿಯಲ್ಲಿ 35 ವರ್ಷದ ಒಳಗಿನ ವ್ಯಕ್ತಿಗೆ ಟಿಕೆಟ್ ನೀಡಿಲ್ಲ. ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಲೇಬೇಕು. ಆರ್ ಆರ್ ನಗರದಲ್ಲಿ ಏಪ್ರಿಲ್ 13ರಂದು ನಡೆಯಲಿರುವ ಸಮಾವೇಶದಲ್ಲಿ ಪ್ರಜ್ವಲ್ ಹೆಸರನ್ನು ಘೋಷಿಸುವಂತೆ ಮಾಡಲು ಶರವಣ ಅವರಿಗೆ ಬೆಂಬಲಿಗರು ಆಗ್ರಹಿಸಿದರು. ಕುಟುಂಬದೊಳಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಶರವಣ ತಿಳಿಸಿದ್ದಾರೆ.

    ಆರ್ ಆರ್ ನಗರದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಬೇಕು ಅನ್ನುವುದು ನಮ್ಮ ಆಗ್ರಹ. ಈಗಾಗಲೇ ದೇವೇಗೌಡರಿಗೆ ಮನವಿಯನ್ನು ಸಲ್ಲಿಸಿದ್ದೇವೆ. ಈ ಬಗ್ಗೆ ಕುಮಾರಸ್ವಾಮಿ ಅವರ ಜೊತೆ ಚರ್ಚಿಸುವುದಾಗಿ ಅಂತಾ ದೇವೇಗೌಡರು ಹೇಳಿದ್ದಾರೆ. ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಸೋಲಿಸಲು ಸಮರ್ಥ ಅಭ್ಯರ್ಥಿಯನ್ನು ಹಾಕಬೇಕಿದೆ. ಒಂದು ವೇಳೆ ಡಮ್ಮಿ ಅಭ್ಯರ್ಥಿಯ ಹೆಸರನ್ನು ಸೂಚಿಸಿದ್ದಲ್ಲಿ, ದೇವೇಗೌಡ ಅಪ್ಪಾಜಿಯ ಆಶೀರ್ವಾದ ಪಡೆದು ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಜೆಡಿಎಸ್ ಮುಖಂಡ ನಾರಾಯಣ ಸ್ವಾಮಿ ಹೇಳಿದ್ದಾರೆ.

    ದೇವೇಗೌಡರ ಮನೆ ಎದುರು ಪ್ರತಿಭಟನೆ ನಡೆದಿದ್ದು, ಎಚ್‍ಡಿಡಿ ಅವರ ಕಾರನ್ನು ಪ್ರತಿಭಟನಾಕಾರರು ತಡೆದಿದ್ದಾರೆ. ಪ್ರತಿಭಟನಾಕಾರರನ್ನು ಬಲವಂತವಾಗಿ ಪೊಲೀಸರು ತೆರವುಗೊಳಿಸಿದ ನಂತರ ಮನೆಯಿಂದ ದೇವೇಗೌಡ್ರು ಜೆಪಿ ಭವನಕ್ಕೆ ತೆರಳಿದ್ದಾರೆ. ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡು ಬಂದಿದ್ದು, ರಾಜ್ಯದ ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆಯಿಂದ 15 ಕ್ಕೂ ಹೆಚ್ಚು ಬಸ್‍ಗಳಲ್ಲಿ ಪ್ರಜ್ವಲ್ ಬೆಂಬಲಿಗರು ನಗರಕ್ಕೆ ಆಗಮಿಸಲಿದ್ದಾರೆ ಅಂತಾ ಹೇಳಲಾಗುತ್ತಿದೆ.

  • ಆರ್‍ಆರ್‍ ನಗರದಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಭಸ್ಮ

    ಆರ್‍ಆರ್‍ ನಗರದಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಭಸ್ಮ

    ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೆಂಚನಹಳ್ಳಿಯಲ್ಲಿರುವ ಹಳೇ ಪ್ಲಾಸ್ಟಿಕ್‍ ನ ಸಂಸ್ಕರಣ ಘಟಕದಲ್ಲಿ ಭಾನುವಾರ ರಾತ್ರಿ 12 ಗಂಟೆಗೆ ದಿಢೀರ್ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಸುಟ್ಟು ಭಸ್ಮವಾಗಿದೆ.

    ಇದು ದೇವು ಎಂಬುವವರಿಗೆ ಸೇರಿದ ಗೋದಾಮು ಆಗಿದ್ದು, ಸ್ಥಳಕ್ಕೆ 8 ಆಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು. ಕುಡಿತದ ಅಮಲಿನಲ್ಲಿ ಯಾರೋ ಗೋದಾಮಿಗೆ ಬೆಂಕಿ ಹಚ್ಚಿದ್ದಾರೆಂದು ಎಂದು ಶಂಕಿಸಲಾಗಿದೆ. ಬೆಂಕಿ ಅನಾಹುತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಈ ಸಂಬಂಧ ಕೆಂಗೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

    https://www.youtube.com/watch?v=moctcEHg1KM&feature=youtu.be