Tag: ಆರ್ ಟಿಓ

  • ಸಾರಿಗೆ ಇಲಾಖೆ ನಿರ್ಲಕ್ಷ್ಯ – ಪ್ರತಿದಿನ ಲಕ್ಷಗಟ್ಟಲೇ ಆದಾಯ ನಷ್ಟ

    ಸಾರಿಗೆ ಇಲಾಖೆ ನಿರ್ಲಕ್ಷ್ಯ – ಪ್ರತಿದಿನ ಲಕ್ಷಗಟ್ಟಲೇ ಆದಾಯ ನಷ್ಟ

    ಕಾರವಾರ: ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಾಹನಗಳು ತೆರಳಬೇಕಿದ್ದರೆ ಆಯಾ ರಾಜ್ಯದ ರಸ್ತೆ ತೆರಿಗೆಯನ್ನು ಗಡಿ ಭಾಗದಲ್ಲಿ ಕಡ್ಡಾಯವಾಗಿ ಕಟ್ಟಲೇಬೇಕು. ಆದರೆ ಕಾರವಾರ ಗಡಿಭಾಗದಲ್ಲಿ ಇದು ಫಾಲೋ ಆಗುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಬರಬೇಕಾದ ಲಕ್ಷಗಟ್ಟಲೇ ರಸ್ತೆ ತೆರಿಗೆ ವಂಚನೆಯಾಗುತ್ತಿದೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಬಳಿ ಕರ್ನಾಟಕ ಸರ್ಕಾರವು ತೆರಿಗೆ ವಸೂಲಿ, ಅನಧಿಕೃತ ಸಾಗಾಟಗಳ ತಡೆಗಾಗಿ ಅರಣ್ಯ ಇಲಾಖೆ, ಭೂ ಮತ್ತು ಗಣಿವಿಜ್ಞಾನ ಇಲಾಖೆ, ಪೊಲೀಸ್ ಹೀಗೆ ಹಲವು ಚೆಕ್‍ಪೋಸ್ಟ್ ಗಳನ್ನು ನಿರ್ಮಿಸಿದೆ. ಆದರೆ ರಸ್ತೆ ತೆರಿಗೆ ವಸೂಲಿಗಾಗಿ ಆರ್.ಟಿ.ಓ ಕಚೇರಿ ಮಾತ್ರ ಯಾವುದೇ ಕೇಂದ್ರವನ್ನು ತೆರೆದಿಲ್ಲ. ಇದರಿಂದ ಗೋವಾ ರಾಜ್ಯದಿಂದ ಬರುವ ವಾಣಿಜ್ಯ ಪ್ರವಾಸಿ ವಾಹನಗಳು ಪರ್ಮಿಟ್ ತೆಗೆದುಕೊಳ್ಳದೇ ತೆರಿಗೆ ವಂಚಿಸಿ ಕರ್ನಾಟಕ್ಕೆ ಪ್ರವೇಶ ಪಡೆಯುತ್ತಿದೆ. ಇಲ್ಲಿನ ಇಲಾಖೆ ಅಧಿಕಾರಿಗಳ ವರ್ತನೆಯಿಂದ ಕರ್ನಾಟಕ ಸರ್ಕಾರಕ್ಕೆ ಬರಬೇಕಾದ ಆದಾಯ ಕೈತಪ್ಪಿ ಹೋಗುತ್ತಿದೆ.

    ಕರ್ನಾಟಕದಿಂದ ಗೋವಾ ಗಡಿಗೆ ಯಾವುದೇ ವಾಣಿಜ್ಯ ವಾಹನಗಳು ತೆರಳಿದರೆ ತಪ್ಪದೇ ಪರ್ಮಿಟ್ ತೆಗೆದುಕೊಂಡು ಹಣ ಕಟ್ಟಬೇಕು. ಇಲ್ಲದಿದ್ದರೆ ಅಲ್ಲಿನ ಸರ್ಕಾರ ಪರ್ಮಿಟ್ ಇಲ್ಲದ ವಾಹನಗಳಿಗೆ ಐದರಿಂದ ನಲವತ್ತು ಸಾವಿರದವರೆಗೆ ದಂಡ ವಿಧಿಸುತ್ತದೆ. ಕರ್ನಾಟಕದಲ್ಲಿಯೂ ಇದೇ ನಿಯಮಗಳು ಜಾರಿಯಲ್ಲಿದೆ. ಹೊರ ರಾಜ್ಯದಿಂದ ಆಗಮಿಸುವ ಬಸ್‍ಗಳಿಗೆ ಸೀಟಿನ ಲೆಕ್ಕದಲ್ಲಿ ಪರ್ಮಿಟ್ ಪಡೆದು ಹಣ ಕಟ್ಟಬೇಕು, ಗೋವಾದ ಗಡಿಯಲ್ಲಿಯೇ ಆರ್.ಟಿ.ಓ ಕಚೇರಿ ಇದ್ದು, ದಿನದ 24 ಗಂಟೆ ತೆರೆದಿರುತ್ತದೆ. ಹೀಗಾಗಿ ಯಾರೂ ಕೂಡ ವಂಚಿಸಿ ಹೋಗಲು ಸಾಧ್ಯವಿಲ್ಲ. ಕರ್ನಾಟಕದ ಗಡಿಯಲ್ಲಿ ಆರ್.ಟಿ.ಓ ಕಚೇರಿಯಾಗಲಿ, ಸಿಬ್ಬಂದಿಯಾಗಲಿ ಇರದೇ ಇರುವುದರಿಂದ ತೆರಿಗೆ ಹಣ ವಂಚಿಸಿ ಹಲವರು ರಾಜ್ಯವನ್ನು ಪ್ರವೇಶಿಸುತ್ತಿದ್ದಾರೆ.

    ಉತ್ತರ ಕನ್ನಡ ಪ್ರವಾಸಿ ತಾಣವಾಗಿರುವುದರಿಂದ ಪ್ರತಿ ದಿನ ಗೋವಾ, ಮಹಾರಾಷ್ಟ ಸೇರಿ ಹಲವು ರಾಜ್ಯಗಳಿಂದ ನೂರಾರು ಬಾಡಿಗೆ ವಾಹನಗಳು ಆಗಮಿಸುತ್ತವೆ. ಬಹುತೇಕ ವಾಹನಗಳು ಪರ್ಮಿಟ್ ಪಡೆಯದೇ ರಾಜ್ಯ ಸರ್ಕಾರಕ್ಕೆ ತೆರಿಗೆ ವಂಚಿಸುತ್ತಿವೆ. ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಎಚ್ಚೆತ್ತು ಹೊರರಾಜ್ಯದ ವಾಹನ ಸವಾರರಿಂದ ಆಗುತ್ತಿರುವ ತೆರಿಗೆ ವಂಚನೆಯನ್ನು ತಪ್ಪಿಸಿಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಪ್ಪಳದಲ್ಲಿ ಎಗ್ಗಿಲ್ಲದೇ ಸಾಗುತ್ತಿದೆ ಆರ್ ಟಿಓ ಅಧಿಕಾರಿಗಳ ಹಗಲು ದರೋಡೆ!

    ಕೊಪ್ಪಳದಲ್ಲಿ ಎಗ್ಗಿಲ್ಲದೇ ಸಾಗುತ್ತಿದೆ ಆರ್ ಟಿಓ ಅಧಿಕಾರಿಗಳ ಹಗಲು ದರೋಡೆ!

    ಕೊಪ್ಪಳ: ಕೂಕನಪಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಪಾಸಣೆ ನೆಪದಲ್ಲಿ ಆರ್ ಟಿಓ ಅಧಿಕಾರಿಗಳು ಹಗಲು ದರೋಡೆ ನಡೆಸುತ್ತಿದ್ದಾರೆ.

    ಕೊಪ್ಪಳ ತಾಲೂಕಿನ ಕೂಕನಪಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಆರ್ ಟಿಒ ಅಧಿಕಾರಿಗಳು ತಪಾಸಣೆ ನೆಪದಲ್ಲಿ ಲೂಟಿ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಗಂಭೀರವಾಗಿ ಕೇಳಿಬರುತ್ತಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಪ್ರತಿಯೊಂದು ಲಾರಿಗಳನ್ನು ನಿಲ್ಲಿಸಿ ದಾಖಲಾತಿ ತಪಾಸಣೆ ನೆಪದಲ್ಲಿ ಚಾಲಕರಿಂದ ರಾಜಾರೋಷವಾಗಿ ಹಣ ಲೂಟಿ ಮಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿವೆ.

    ಆರ್ ಟಿಓ ಅಧಿಕಾರಿಗಳು ಎಲ್ಲಾ ದಾಖಲೆ ಸರಿ ಇದ್ದರೂ ಪ್ರತಿಯೊಬ್ಬ ಚಾಲಕ ಹಣ ಕೊಟ್ಟು ಹೋಗಬೇಕು ಎಂಬ ಅಲಿಖಿತ ನಿಯಮ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಹಣ ಕೊಡುವುದಕ್ಕೆ ನಿರಾಕರಿಸುವ ಲಾರಿ ಚಾಲಕರ ವಿರುದ್ಧ ಇಲ್ಲ ಸಲ್ಲದ ಪ್ರಕರಣ ದಾಖಲಿಸಿ ತೊಂದರೆ ನೀಡುತ್ತಿದ್ದಾರೆ ಎನ್ನಲಾಗಿದೆ.

  • ಮದ್ವೆ ಇತರೆ ಕೆಲಸಗಳಿಗೆ ಹೊರಟ್ಟಿದ್ದ 20 ಕ್ರೂಸರ್ ವಶಕ್ಕೆ ಪಡೆದ RTO ಅಧಿಕಾರಿಗಳು!

    ಮದ್ವೆ ಇತರೆ ಕೆಲಸಗಳಿಗೆ ಹೊರಟ್ಟಿದ್ದ 20 ಕ್ರೂಸರ್ ವಶಕ್ಕೆ ಪಡೆದ RTO ಅಧಿಕಾರಿಗಳು!

    ಬಾಗಲಕೋಟೆ: ಮದುವೆ ಹಾಗು ಇತರೆ ಶುಭ ಸಮಾರಂಭಗಳಿಗೆ ತೆರಳುತ್ತಿದ್ದ ಖಾಸಗಿ ವಾಹನಗಳನ್ನು ಆರ್ ಟಿಓ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.

    ಜಿಲ್ಲೆಯ ಜಮಖಂಡಿ ಆರ್ ಟಿಓ ಅಧಿಕಾರಿಗಳು ಮದುವೆ ಹಾಗು ಇನ್ನಿತರ ಶುಭ ಸಮಾರಂಭಗಳಿಗೆ ತೆರಳುತ್ತಿದ್ದ 20 ಕ್ರೂಸರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ವಾಹನಗಳನ್ನು ವಶಪಡಿಸಿಕೊಂಡ ಬಳಿಕ ಪೊಲೀಸ್ ಠಾಣೆಯ ಮುಂದೆ ಮಹಿಳೆಯರು ಸೇರಿದಂತೆ 150 ಜನರು ಎರಡು ಗಂಟೆಗಳ ಕಾಲ ನಿಲ್ಲುವಂತಾಯ್ತು.

    ಕೊನೆಗೆ ಅಧಿಕಾರಿಗಳು ವಾಹನಗಳು ಚುನಾವಣೆ ಉದ್ದೇಶಕ್ಕಾಗಿ ಬಳಕೆ ಆಗ್ತಿಲ್ಲ ಎಂಬುದನ್ನು ಖಚಿತ ಪಡಿಸಿಕೊಂಡ ಬಳಿಕ ಕಳುಹಿಸಲಾಯ್ತು. ಆದ್ರೆ ಅಧಿಕಾರಿಗಳು ನಮ್ಮ ವಾಹನಗಳನ್ನು ವಶಪಡಿಸಿಕೊಂಡಿದ್ದರಿಂದ ತಲುಪಬೇಕಿದ್ದ ಸ್ಥಳಕ್ಕೆ ತಡವಾಗಿದೆ ಅಂತಾ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ರು.