Tag: ಆರ್ ಟಿಪಿಸಿಆರ್

  • ಕೇರಳದಿಂದ ಪ್ರಯಾಣಿಕರಿಗೆ RTPCR ವರದಿ ಕಡ್ಡಾಯ – ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ

    ಕೇರಳದಿಂದ ಪ್ರಯಾಣಿಕರಿಗೆ RTPCR ವರದಿ ಕಡ್ಡಾಯ – ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ

    ನವದೆಹಲಿ: ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ RTPCR ವರದಿ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ ಆದೇಶದ ವಿರುದ್ಧ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

    ಕೇರಳ ಮೂಲದ ವಕೀಲ ಆರ್ ಎಸ್ ಜೆನಾ ರಿಂದ ಅರ್ಜಿ ಸಲ್ಲಿಸಿದ್ದು ಆದೇಶ ವಾಪಸ್ ಪಡೆಯಲು ಸೂಚಿಸುವಂತೆ ಅರ್ಜಿಯಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಕರ್ನಾಟಕ ಪ್ರವೇಶಕ್ಕೆ 72 ಗಂಟೆಗಳ ಒಳಗಿನ RTPCR ವರದಿ ಕಡ್ಡಾಯ ಮಾಡಿರುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

    ಆರ್‍ಟಿಪಿಸಿಆರ್ ವರದಿ ಕಡ್ಡಾಯದಿಂದ ಗಡಿಯಲ್ಲಿ ಶಿಕ್ಷಣ, ವ್ಯಾಪಾರ, ಉದ್ಯೋಗಗಳು, ವೈದ್ಯಕೀಯ ಚಿಕಿತ್ಸೆ ಮತ್ತು ಇತರ ಕಾರಣಗಳಿಗಾಗಿ ಪ್ರತಿದಿನ ಕರ್ನಾಟಕಕ್ಕೆ ಭೇಟಿ ನೀಡುವ ಜನರಿಗೆ ತೊಂದರೆಯಾಗಲಿದೆ. ಮತ್ತು ಗಡಿಗಳಲ್ಲಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್, ಸಿಗರೇಟ್, ಸೆಕ್ಸ್‌ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್

    ಮಂಜೇಶ್ವರಂ ಕ್ಷೇತ್ರದ ಜನರು ಮಂಗಳೂರಿನ ಮೇಲೆ ಅವಲಂಬಿಸಿರುವ ಬಗ್ಗೆಯೂ ಮಾಹಿತಿ ನೀಡಿರುವ ವಕೀಲರು, ಮಂಗಳೂರಿನ ಮೇಲೆ ಮಂಜೇಶ್ವರದ ಜನರು ಸಂಪೂರ್ಣ ಅವಲಂಬಿಸಿದ್ದು ನಿತ್ಯ ಸಾವಿರಾರು ಜನರು ಸಂಚಾರ ಮಾಡ್ತಾರೆ. ಅವರೆಲ್ಲರೂ ಪ್ರತಿದಿನ ವರದಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಜುಲೈ 31 ರಂದು ಮಂಗಳೂರು ಡಿಸಿ ಹೊರಡಿಸಿರುವ ಆದೇಶ ವಾಪಸ್ ಪಡೆಯುವಂತೆ ಸೂಚಿಸಲು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

    ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದಲ್ಲೂ ಸೋಂಕು ಹೆಚ್ಚಾಗುವ ಭೀತಿಯಿಂದ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಜನರು ಆರ್‍ಟಿಪಿಸಿಆರ್ ವರದಿ ಕಡ್ಡಾಯವಾಗಿ ತರುವಂತೆ ಸೂಚಿಸಿ ಜುಲೈ 31 ರಂದು ಆದೇಶ ಮಾಡಲಾಗಿತ್ತು. ಈ ಆದೇಶ ಪ್ರಶ್ನಿಸಿ ಕೇರಳ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಆದರೆ ವಿಚಾರಣೆ ನಡೆಸಿದ ಹೈಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರದ ಸುತ್ತೊಲೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ, ಅದು ನಮ್ಮ ವ್ಯಾಪ್ತಿಯಲ್ಲಿಲ್ಲ ಎಂದು ಹೇಳಿ ಅರ್ಜಿ ವಜಾ ಮಾಡಿತ್ತು. ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ.

  • ಕೊನೆಗೂ ಎಚ್ಚೆತ್ತ ದ.ಕ ಜಿಲ್ಲಾಡಳಿತ- ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಕೊನೆಗೂ ಎಚ್ಚೆತ್ತ ದ.ಕ ಜಿಲ್ಲಾಡಳಿತ- ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಮಂಗಳೂರು: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ.

    ಗಡಿಯಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಯು.ಟಿ.ಖಾದರ್

    ಗಡಿ ದಾಟಿ ಬರುವ ಕೇರಳದವರು ಆರ್ ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನೆಗೆಟಿವ್ ರಿಪೋರ್ಟ್ ತರದವರಿಗೆ ಗಡಿಯಲ್ಲೇ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ಮೆಡಿಕಲ್ ಅಗತ್ಯಕ್ಕೆ ಮಂಗಳೂರಿಗೆ ಬರೋರು ಆಸ್ಪತ್ರೆಗಳಲ್ಲಿ ಟೆಸ್ಟ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.