– 36 ಗೇಟ್‌ಗಳಿಂದ ನಾರಾಯಣಪುರ ಡ್ಯಾಂಗೆ 2.50 ಲಕ್ಷ ಕ್ಯೂಸೆಕ್ ರಿಲೀಸ್
ವಿಜಯಪುರ: ಮಹಾರಾಷ್ಟ್ರದಲ್ಲಿ ಮಳೆಯಬ್ಬರ ಜೋರಾಗಿರುವ ಹಿನ್ನೆಲೆ ಕೃಷ್ಣಾ ನದಿ (Krishna River) ಅಪಾಯಮಟ್ಟ ಮೀರಿ ಹರಿಯುತ್ತಿದೆ.
ಧಾರಾಕಾರ ಮಳೆಯಾದ ಹಿನ್ನೆಲೆ ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿಯಲ್ಲಿರುವ ಆಲಮಟ್ಟಿ ಜಲಾಶಯಕ್ಕೆ (Alamatti Dam) ಒಳಹರಿವು ಹೆಚ್ಚಾಗಿದ್ದು, 2,45,000 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ 26 ಗೇಟ್‌ಗಳ ಮೂಲಕ ನಾರಾಯಣಪುರ ಜಲಾಶಯಕ್ಕೆ (Narayanapur Dam) 2,50,000 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.ಇದನ್ನೂ ಓದಿ: ಆ.25 ರಿಂದ ಅಮೆರಿಕಗೆ ಅಂಚೆ ಸೇವೆ ಸ್ಥಗಿತಗೊಳಿಸಿದ ಭಾರತ
ಇನ್ನೂ ನಾರಾಯಣಪುರ ಜಲಾಶಯದಿಂದಲೂ (Narayanapur Dam) ಭಾರೀ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರನ್ನ ಹರಿಬಿಡಲಾಗುತ್ತಿದ್ದು, ರಾಯಚೂರಿನ ದೇವದುರ್ಗದ ಐತಿಹಾಸಿಕ ಕೊಪ್ಪರ ಲಕ್ಷ್ಮೀ ನರಸಿಂಹ ದೇವಾಲಯ ಸಂಪೂರ್ಣ ಜಲಾವೃತವಾಗಿದೆ.
ನೂರಾರು ವರ್ಷಗಳ ಇತಿಹಾಸವಿರುವ ಲಕ್ಷ್ಮೀ ನರಸಿಂಹ ದೇವಾಲಯ ಸುತ್ತಲೂ ನೀರು ಆವರಿಸಿದೆ. ದೇವಾಲಯ ಬಳಿ ರಭಸವಾಗಿ ನೀರು ಹರಿಯುತ್ತಿದ್ದು, ಭಕ್ತರು ದೇವಾಲಯ ಬಳಿ ಸುಳಿಯದಂತಾಗಿದೆ. ಅರ್ಚಕರು ಪೂಜೆ ಮಾಡಲು ಹರಸಾಹಸ ಪಡುತ್ತಿದ್ದಾರೆ. ಕೃಷ್ಣಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದರೆ ದೇವಾಲಯ ಮುಳುಗಡೆಯಾಗಲಿದೆ. ಈಗಾಗಲೇ ದೇವದುರ್ಗ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ.ಇದನ್ನೂ ಓದಿ: ಶ್ರೀಲಂಕಾದ ಬೀಚ್‌ನಲ್ಲಿ ಗೋಲ್ಡ್ ಫಿಶ್‌ನಂತೆ ಕಂಗೊಳಿಸಿದ ಸೋನು!
ವಿಜಯಪುರ: ಮಹಾರಾಷ್ಟದಲ್ಲಿ (Maharashtra) ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿ (Krishna river) ಮೈದುಂಬಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) 80 ಸಾವಿರ ಕ್ಯುಸೆಕ್ ಒಳಹರಿವು ಹೆಚ್ಚಾಗಿದೆ.ಇದನ್ನೂ ಓದಿ: ಮಹಿಳೆಗೆ ಕಾರುಡಿಕ್ಕಿ ಹೊಡೆದಿದ್ದಕ್ಕೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್
ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಳೆದ ನಾಲ್ಕು ದಿನದ ಹಿಂದೆ ಕೇವಲ 15 ಸಾವಿರ ಕ್ಯುಸೆಕ್ ಇದ್ದ ಒಳಹರಿವು, ಇದೀಗ 80 ಸಾವಿರ ದಾಡಿದೆ. ಸದ್ಯ ಜಲಾಶಯದಿಂದ 58,799 ಕ್ಯುಸೆಕ್ ಹೊರಹರಿವಿದೆ.
ಬೆಂಗಳೂರು: ಮಹಾರಾಷ್ಟ್ರ (Maharashtra) ಸಿಎಂ ಆಲಮಟ್ಟಿ ಜಲಾಶಯದ (Almatti Dam) ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ಆಲಮಟ್ಟಿ ಸಂಪೂರ್ಣ ಕೃಷ್ಣಾ ಜಲಾನಯನ ಪ್ರದೇಶದ ಒಂದು ಪ್ರಮುಖ ನೀರು ಸಂಗ್ರಹ ಮತ್ತು ವಿತರಣೆಯ ವಾಟರ್ ಗ್ರಿಡ್ ಆಗಿದೆ. ಉತ್ತರ ಕರ್ನಾಟಕದ ಜೀವನದಿಗೆ ಹೃದಯ ಭಾಗವಾಗಿದೆ. ಆಲಮಟ್ಟಿ ಎತ್ತರದ ಬಗ್ಗೆ ಕರ್ನಾಟಕದ ಮೂಲ ಕೃಷ್ಣಾ ಜಲಾನಯನ ಯೋಜನೆಯಲ್ಲಿ ಅಳವಡಿಸಿದೆ. ಮತ್ತು ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ಕೊಟ್ಟಿದೆ. ಅದರ ಪ್ರಕಾರ 524.25 ಮೀಟರ್ ಎಂಬುದು ಮೂಲ ಯೋಜನೆಯಲ್ಲಿ ಇದ್ದು ತದ ನಂತರ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ತಕರಾರು ಆದಮೇಲೆ ಕೆಡಬ್ಲುಡಿಟಿ 1 (ಕೃಷ್ಣಾ ವಾಟರ್ ಡಿಸ್ಪ್ಯೂಟ್ ಟ್ರಿಬ್ಯುನಲ್), ನೀರನ್ನು ಉಪಯೋಗ ಮಾಡಲು 519.6 ಮೀಟರ್‌ಗೆ ಸೀಮಿತಗೊಳಿಸಿ ಉಪಯೋಗಿಸಲು ಸುಪ್ರೀಂ ಕೋರ್ಟ್ ಕೂಡ ಒಪ್ಪಿದೆ. ಸ್ಕಿಂ ಬಿಯಲ್ಲಿ ಕೆಡಬ್ಲುಡಿಟಿ 2, ( ಕೃಷ್ಣಾ ವಾಟರ್ ಡಿಸ್ಪ್ಯೂಟ್ ಟ್ರಿಬ್ಯುನಲ್ 2)ನಲ್ಲಿ ನಮಗೆ ನೀರು ಹಂಚಿಕೆಯಾಗಿರುವ 173 ಟಿಎಂಸಿಯನ್ನು 519 ರಿಂದ 524 ರಲ್ಲಿ ಪಡೆದುಕೊಳ್ಳಬಹುದೆಂದು ಕೆಡಬ್ಲುಡಿಟಿ 2 ಅಂತಿಮ ಟ್ರಿಬ್ಯುನಲ್ ಆದೇಶದಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಡಿಕೆಶಿ ತೆಲಂಗಾಣಕ್ಕೆ ನೀರು ಬಿಟ್ಟಿದ್ದಾರೆ: ಆರ್.ಅಶೋಕ್ ಕಿಡಿ
ಕೆಡಬ್ಲ್ಯುಡಿ ಟ್ರಿಬ್ಯುನಲ್ ಸ್ವತಂತ್ರವಾಗಿ ಹೈಡ್ರಾಲಾಜಿಕಲ್ ಸ್ಟಡಿ ಮಾಡಿಸಿ 524 ಮೀಟರ್‌ಗೆ ಏರಿಸಿದರೂ ಕೂಡ ಕೊಲ್ಲಾಪುರ ಸಾಂಗ್ಲಿ ಅಷ್ಟೇ ಅಲ್ಲದೇ ಮಹಾರಾಷ್ಟ್ರದ ಯಾವುದೇ ಭಾಗ ಮುಳುಗಡೆಯಾವುದಿಲ್ಲ ಎಂದು ಅಂತಿಮವಾಗಿ ಟ್ರಿಬ್ಯುನಲ್ ತೀರ್ಪು ಕೊಟ್ಟಾಗಿದೆ. ಇದನ್ನು ಮಹಾರಾಷ್ಟ್ರ ಎಲ್ಲಿಯೂ ಕೂಡ ಕಾನೂನಾತ್ಮಕವಾಗಿ ಪ್ರಶ್ನಿಸಿಲ್ಲ. ಅಲ್ಲದೇ ಕೆಡಬ್ಲುಡಿಟಿ 2 ನೊಟಿಫಿಕೇಶನ್ ಮಾಡಬೇಕೆಂದು ಕರ್ನಾಟಕಕ್ಕಿಂತ ಮೊದಲೇ ಸುಪ್ರೀಂ ಕೊರ್ಟ್‌ಗೆ ಮಹಾರಾಷ್ಟ್ರ ಹೋಗಿದೆ. 2005 ರಲ್ಲಿ ಪ್ರವಾಹ ಆದಾಗ ಅದು ಆಲಮಟ್ಟಿ ಹಿನ್ನೀರಿನಿಂದ ಆಗಿಲ್ಲ ಎಂದು ಅವತ್ತಿನ ಕೇಂದ್ರ ಜಲ ಆಯೋಗ ಕೂಡ ತೀರ್ಪು ನೀಡಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆಲಮಟ್ಟಿ ಡ್ಯಾಂ ನಿರ್ಮಾಣ ಆಗುವ ಮುಂಚೆಯೇ 1960-70 ರ ದಶಕದಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಸಾಂಗ್ಲಿಯಲ್ಲಿ ಪ್ರವಾಹ ಆಗಿರುವುದು ಗಮನಾರ್ಹ ಎಂದು ತಿಳಿಸಿದ್ದಾರೆ.
ಇಷ್ಟೆಲ್ಲಾ ಪ್ರಕ್ರಿಯೆ ಆದ ಮೇಲೆ ಈಗ ಮತ್ತೆ ಆಲಮಟ್ಟಿ ಎತ್ತರದ ಬಗ್ಗೆ ಮಹಾರಾಷ್ಟ್ರ ಸಿಎಂ ತಕರಾರು ತೆಗೆದಿರುವುದು ಅಸಮಂಜಸ ಮತ್ತು ಅಲ್ಲಿಯ ಎರಡು ಜಿಲ್ಲೆಯ ರಾಜಕೀಯ ಒತ್ತಡಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಈ ನಿಲುವು ತೆಗೆದುಕೊಳ್ಳಲು ಸಾದ್ಯವಿದೆ. ಹೀಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಂಪೂರ್ಣ ಸತ್ಯವನ್ನು ತಿಳಿಸಬೇಕು. ಅಲ್ಲದೆ ರಾಜ್ಯ ಸರ್ಕಾರ ಪುನರ್ ವಸತಿ ಮತ್ತು ಪುನರ್ ನಿರ್ಮಾಣ (ಆರ್ ಆಂಡ್ ಆರ್) ಕೆಲಸ ತ್ವರಿತಗತಿಯಲ್ಲಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ 173 ಟಿಎಂಸಿ ನಮ್ಮ ನೀರಿನ ಹಕ್ಕನ್ನು ನಾವೇ ಗಂಡಾಂತರಕ್ಕೆ ನೂಕಿದಂತೆ ಆಗುತ್ತದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಬೆರೆಸದೆ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲ ಕೇಂದ್ರ ಸರ್ಕಾರವೂ ಕೂಡ ನಡೆದಿರುವ ಎಲ್ಲ ಘಟನಾವಳಿಗಳನ್ನು, ಆದೇಶಗಳನ್ನು ಪರಿಸಿಲಿಸಿ ಕರ್ನಾಟಕದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ ಹೋರಾಟದಲ್ಲಿ ಪ್ರತಿಧ್ವನಿಸಿದ ಪ್ರತ್ಯೇಕ ರಾಜ್ಯದ ಕೂಗು
– ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದಂತೆ 5,300 ಕೋಟಿ ಅನುದಾನ ಬಿಡುಗಡೆಗೆ ಒತ್ತಾಯ
ನವದೆಹಲಿ: ಆಲಮಟ್ಟಿ ಅಣೆಕಟ್ಟು (Almatti Reservoir) ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ (Krishna River) ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಹೇಳಿದರು.
ಮುಖ್ಯಮಂತ್ರಿಗಳಾದ ಶ್ರೀ @siddaramaiah, ಕೇಂದ್ರ ಸಚಿವರಾದ @VSOMANNA_BJP, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರ ಜೊತೆಯಾಗಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ @CRPaatil ಅವರೊಂದಿಗೆ ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನಡೆಸಿದ ಸಭೆಯ ಪ್ರಮುಖಾಂಶಗಳು. pic.twitter.com/EwALtCIWbC
ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ (CR Paatil) ಅವರನ್ನು ರಾಜ್ಯಖಾತೆ ಸಚಿವರಾದ ಸೋಮಣ್ಣ ಅವರ ಜೊತೆ ಭೇಟಿ ಮಾಡಲಾಗಿತ್ತು. ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಮತ್ತು ನಮಗೆ ಎಷ್ಟು ನೀರು ಸಿಗಬೇಕು ಹಾಗೂ ಅಣೆಕಟ್ಟು ಎಷ್ಟು ಎತ್ತರ ಮಾಡಬೇಕು ಎಂದು ಹಿಂದೆಯೇ ತೀರ್ಮಾನವಾಗಿದೆ. 524 ಅಡಿ ಎತ್ತರಕ್ಕೆ ಎಷ್ಟು ಭೂಮಿ ಬೇಕಾಬಹುದು ಎಂದು ಅಂದಾಜಿಸಿ ಭೂಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕೆಲಸವನ್ನು ಬೇಗ ಮುಗಿಸುವ ಬದ್ಧತೆ ನಮ್ಮ ಸರ್ಕಾರಕ್ಕಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಬಗ್ಗೆಯೂ ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ಪಾಸ್ ಆಗಿರೋದು ಇತಿಹಾಸದಲ್ಲಿ ಕೆಟ್ಟ ದಿನ- ಬೋಸರಾಜು
ಭದ್ರಾ ಮೇಲ್ದಂಡೆ ವಿಚಾರವಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಕೇಂದ್ರದ ಕ್ಯಾಬಿನೆಟ್ ಮುಂದೆ ಈ ವಿಚಾರ ತೆಗೆದುಕೊಡು ಹೋಗಲಾಗಿದೆ ಎಂದು ಹೇಳಿದ್ದಾರೆ. ಮೇಕೆದಾಟು (Mekedatu Project) ವಿಚಾರದಲ್ಲಿ 15 ದಿನಗಳಲ್ಲಿ ಸುಪ್ರೀಂ ಕೋರ್ಟ್ ಕರ್ನಾಟಕದ ವಾದ ಆಲಿಸುವುದಾಗಿ ಹೇಳಿತ್ತು. ಆದರೆ ದಿನಾಂಕ ನಿಗದಿ ಮಾಡಿಲ್ಲ. ತಮಿಳುನಾಡಿನವರು ರಾಜಕೀಯವಾಗಿ ಸಹಕಾರ ನೀಡುವುದಿಲ್ಲ ಎನ್ನುವುದು ನಮಗೆ ಅರಿವಿದೆ. ಅವರು ಸಣ್ಣಪುಟ್ಟ ಅಣೆಕಟ್ಟುಗಳನ್ನು ಅವರ ವಲಯದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ನಾವು ತೊಂದರೆ ಕೊಡಲು ಹೋಗುವುದಿಲ್ಲ. ಈ ವಿಚಾರವನ್ನೂ ಸಚಿವರ ಗಮನಕ್ಕೆ ತರಲಾಗಿದೆ ಎಂದು ವಿವರಿಸಿದರು.
ಕಳಸಾ ಬಂಡೂರಿ ಕಾಮಗಾರಿಗೆ ಟೆಂಡರ್
ಕಳಸಾ ಬಂಡೂರಿ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಗದಿರುವ ಬಗ್ಗೆ ಗಮನಕ್ಕೆ ತರಲಾಗಿದೆ. ಈಗಾಗಲೇ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಅರಣ್ಯ ಸಚಿವರನ್ನೂ ಸಹ ಭೇಟಿ ಮಾಡಲಾಗಿತ್ತು. ಎತ್ತಿನಹೊಳೆ ಕಾಮಗಾರಿ ಕುಡಿಯುವ ನೀರಿನ ಯೋಜನೆಯಾದ ಕಾರಣ ಒಂದಷ್ಟು ಅನುದಾನ ನೀಡಬೇಕು ಎಂದು ಮನವಿ ಮಾಡಲಾಗಿದೆ. ಜೊತೆಗೆ ಅರಣ್ಯ ಭೂಮಿ ಬಳಕೆ, ಬದಲಿ ಭೂಮಿ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರ ಡಿಪಿಆರ್ ಅನ್ನು ನೋಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಕಾವೇರಿ, ಕೃಷ್ಣಾ, ಗೋದಾವರಿ ನದಿ ಜೋಡಣೆ ಸಂಬಂಧ ನಮ್ಮ ರಾಜ್ಯದ ವಾದವನ್ನು ನಾನು ಹಾಗೂ ಮುಖ್ಯಮಂತ್ರಿಯವರು ಸಲ್ಲಿಸಿದ್ದೇವೆ. ಇದರ ಬಗ್ಗೆ ಧನಾತ್ಮಕವಾಗಿ ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಭೇಟಿ ಫಲದಾಯಕವಾಗಿದೆ ಎನ್ನುವುದು ಸಂತಸದ ವಿಚಾರ. ಕೃಷ್ಣಾ ನ್ಯಾಯಾಧೀಕರಣ ವಿಚಾರ ಸುಪ್ರೀಂ ಕೋರ್ಟಿನಲ್ಲಿ ತಡೆಯಾಜ್ಞೆ ಇರುವ ಬಗ್ಗೆ ಕೇಳಿದಾಗ, ಶೆಡ್ಯೂಲ್ 524ಕ್ಕೆ ಸೇರಿದ ವಿಚಾರವಾದ ಕಾರಣ ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ಆಂತರಿಕ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಇದರ ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು.
ಕಾಲುವೆ ನೀರು ಬಿಡುವಂತೆ ಕೋರ್ಟ್ ಆದೇಶದ ಬಗ್ಗೆ ಕೇಳಿದಾಗ, ಕಾಲುವೆಗಳಿಗೆ ಕೃಷ್ಣ ನದಿ ನೀರನ್ನು ಏಕಾಏಕಿ ಬಿಡಲು ಆಗುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಾಲಯ ಕೂಡ ಆದೇಶ ನೀಡಲು ಬರುವುದಿಲ್ಲ. ಏಕ ಸದಸ್ಯ ಪೀಠ ನೀರು ಬಿಡುವಂತೆ ಹೇಳಿತ್ತು. ದ್ವಿಸದಸ್ಯ ಪೀಠ ಆದೇಶಕ್ಕೆ ತಡೆ ನೀಡಿದೆ. ಕಾಲುವೆಗಳಿಗೆ ನೀರು ಬಿಡುವ ಬಗ್ಗೆ ನಾನೇ ತಾಂತ್ರಿಕ ವರದಿ ತರಿಸಿ ಕೊಳ್ಳುವವನಿದ್ದೆ. ಯಾದಗಿರಿ ಸೇರಿದಂತೆ ಆ ಭಾಗದ ಶಾಸಕರು ರೈತರ 2ನೇ ಬೆಳೆಗೆ ನೀರು ಬಿಡುವಂತೆ ಮನವಿ ಮಾಡಿದ್ದರು. ಈ ಮಧ್ಯೆ ಯಾರೋ ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂದು ತಿಳಿಸಿದರು.
ರೈತರ ಪಾಲಿನ ನೀರು ಬಿಡುತ್ತೇವೆ
ಕಾಲುವೆಗೆ ನೀರುಬಿಟ್ಟ ಸಮಯದಲ್ಲಿ ಮಧ್ಯದಲ್ಲಿಯೇ ಪಂಪ್ ಗಳನ್ನು ಬಿಟ್ಟು ನೀರು ಎತ್ತಲಾಗುತ್ತದೆ. ಇದಕ್ಕೆಲ್ಲಾ ಅವಕಾಶ ನೀಡಬಾರದು ಎಂದು ಹೇಳಲಾಗಿದೆ. ರೈತರ ಪಾಲಿನ ನೀರು ನಾವು ನೀಡುತ್ತೇವೆ. ಆದರೆ ಕಾಲುವೆಯ ಕೊನೇ ಭಾಗಕ್ಕೆ ನೀರು ತಲುಪಬೇಕಲ್ಲವೇ? ಇದು ಆಗದೇ ಮಧ್ಯದಲ್ಲಿಯೇ ನೀರು ಎಳೆಯಲಾಗುತ್ತಿದೆ. ಹಾಗಾಗಿ ಕಾಲುವೆಯಿಂದ ನೀರು ಎತ್ತುವುದನ್ನು ತಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿದ್ಯುತ್ ಸಂಪರ್ಕಗಳನ್ನು ತಪ್ಪಿಸಿ ಹಗಲು ಹಾಗೂ ರಾತ್ರಿ ವೇಳೆ ನೀರನ್ನು ರಕ್ಷಣೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ರೈತರು 2ನೇ ಬೆಳೆ ಹಾಕಿಕೊಂಡಿದ್ದಾರೆ. ಆದರೆ ಕುಡಿಯುವ ನೀರು ನಮ್ಮ ಮೊದಲ ಆದ್ಯತೆ ಎಂದು ಹೇಳಿದರು.
ನಿರುದ್ಯೋಗಿಗಳಿಗೆ ಪರಿಷತ್ ಸ್ಥಾನ ಕೊಟ್ಟಂತೆ ಆಗಬಾರದು
ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ಕೇಳಿದಾಗ, ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ ಬಗ್ಗೆ ಮುಖ್ಯಮಂತ್ರಿಗಳು ನಾನು ಹೈಕಮಾಂಡ್ ಬಳಿ ಮಾತನಾಡಿದ್ದೇವೆ. ಹೈಕಮಾಂಡ್ ಇಬ್ಬರನ್ನು ಸಂಪರ್ಕಿಸುತ್ತದೆ ಎಂದು ಮಾಹಿತಿ ನೀಡಿದರು.
ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಬಗ್ಗೆ ಪ್ರತಿ ಬಾರಿ ದೆಹಲಿಗೆ ಬಂದಾಗಲೂ ಚರ್ಚೆ ಮಾಡುವ ಬಗ್ಗೆ ಕೇಳಿದಾಗ, ಇದು ಮೋದಿ ಅವರ ನಾಯಕತ್ವದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಬಿಟ್ಟ ವಿಚಾರ. ನಿರ್ಮಲಾ ಸೀತಾರಾಮನ್ ಅವರು ಭದ್ರಾ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು. ನಾವು ಗುತ್ತಿಗೆದಾರರಿಗೆ ಹಣ ನೀಡಬೇಕಿದೆ ಎಂದು ತಿಳಿಸಿದರು.
ಇದೇ ವೇಳೆ ಮೇಕೆದಾಟು ಬಗ್ಗೆ ಕೆಲಸಗಳೇ ನಡೆಯುತ್ತಿಲ್ಲ ಎಂದು ಕೇಳಿದಾಗ, ಈಗಾಗಲೇ ರಾಜ್ಯದಲ್ಲಿ ಕಚೇರಿಯನ್ನೂ ತೆರೆಯಲಾಗಿದೆ. ಸ್ಥಳ ಗುರುತಿಸುವಿಕೆ ಸೇರಿದಂತೆ ಅನೇಕ ಕೆಲಸಗಳು ನಡೆಯುತ್ತಿದೆ. ದೆಹಲಿಯಲ್ಲೂ ಈ ಬಗ್ಗೆ ಕೆಲಸ ಪ್ರಾರಂಭ ಮಾಡಲಾಗುವುದು ಎಂದರು. ಇದನ್ನೂ ಓದಿ: ಚಿಕ್ಕಮಗಳೂರು: ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಬಹಿಷ್ಕಾರ – 6,000 ರೂ. ದಂಡ!
ಬಿಜೆಪಿಗಿಂತ ಕಡಿಮೆ ಬೆಲೆ ಏರಿಕೆ ಮಾಡಿದ್ದೇವೆ
ಬೆಲೆಏರಿಕೆ ವಿರುದ್ಧ ಬಿಜೆಪಿಯವರಿಂದ ಸಿಎಂ ಮನೆ ಮುತ್ತಿಗೆ ಬಗ್ಗೆ ಕೇಳಿದಾಗ, ಬಿಜೆಪಿಯವರ ಕಾಲದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆಯ ಬೆಲೆ ಏರಿಕೆಯಾದಾಗ ಏಕೆ ಮನೆ ಮುತ್ತಿಗೆ ಮಾಡಿಕೊಳ್ಳಲಿಲ್ಲ? ನಾವು 100 ನಾಟ್ ಔಟ್ ಎನ್ನುವ ಹೋರಾಟ ಮಾಡಿದ್ದೆವು. ಕಬ್ಬಿಣ, ಉಕ್ಕು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಎಲ್ಲವೂ ಹೆಚ್ಚಾಯಿತು. ಕಸದ ಸಂಗ್ರಹ ಶುಲ್ಕಕ್ಕೆ ಆದೇಶ ನೀಡಿದವರೇ ಬಿಜೆಪಿಯವರು. ನಾನು ಅವರು ಮಾಡಿದ ಬೆಲೆಗಿಂತ ಕಡಿಮೆ ಮಾಡಿದ್ದೇನೆ. ದೊಡ್ಡದಾಗಿ ಹಾಕಬೇಕಾಗಿತ್ತು. ಹಳೆಯದನ್ನು ಬಿಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಹಾಗೂ ನೀವು ವರಿಷ್ಠರನ್ನು ಭೇಟಿಯಾಗುತ್ತಾ ಇದ್ದೀರಿ. ಸಚಿವರ ದಂಡು ಸಹ ದೆಹಲಿಯಲ್ಲಿದೆ. ಸರ್ಕಾರದಲ್ಲಿ ಬದಲಾವಣೆಯಾಗಲಿದೆಯೇ ಎಂದು ಕೇಳಿದಾಗ, ಪಕ್ಷದ ನಾಯಕರನ್ನು ನಾವು ಭೇಟಿಯಾಗುವುದು ಸಾಮಾನ್ಯ. ನಾನು ವೇಣುಗೋಪಾಲ್ ಹಾಗೂ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕ ಭವನದಲ್ಲಿಯೇ ಭೇಟಿ ಮಾಡಲಾಯಿತು ಎಂದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಶ್ನಿಸಿದಾಗ, ಪಕ್ಷ ಹೇಗೆ ಹೇಳುತ್ತದೆಯೋ ಆ ರೀತಿ ಮುನ್ನಡೆಯುವುದು. ಐದು ವರ್ಷ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕೆ ಒಳ್ಳೆಯದಾಗುವುದು ಮುಖ್ಯ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಮಾರ್ಮಿಕವಾಗಿ ನುಡಿದರು.
ಕಳೆದ ಹಲವಾರು ದಿನಗಳಿಂದ ಸೋನಿಯಾ ಗಾಂಧಿ ಅವರನ್ನು ಶಿವಕುಮಾರ್ ಅವರು ಭೇಟಿಯಾಗಿಲ್ಲ. ಭೇಟಿಯಾದರೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ನಿಶ್ಚಿತ ಎನ್ನುವ ಮಾತುಗಳ ಬಗ್ಗೆ ಕೇಳಿದಾಗ, ಭೇಟಿಯಾಗಿಲ್ಲ ಎಂದು ಹೇಳಿದವರು ಯಾರು? ಸಾಕ್ಷಿಗೆ ಫೋಟೊಗಳನ್ನು ತೋರಿಸಲೇ ಎಂದಾಗ ಅಧಿಕೃತವಾಗಿ ಫೋಟೊಗಳು ದೊರೆತಿಲ್ಲ ಎಂದು ಮರುಪ್ರಶ್ನಿಸಿದಾಗ, ನಿಮಗೆ ಏಕೆ ತೋರಿಸಬೇಕು? ನನಗೆ ಬೇಕಾಗಿದ್ದು ಬಿಡುಗಡೆ ಮಾಡಲಾಗುವುದು, ಬೇಡದ್ದು ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಈಗ ಬೇಕಿದೆ ಹನುಮನ ಶ್ರೀರಕ್ಷೆ – ನಿತ್ಯ ಹನುಮಾನ್ ಚಾಲಿಸ ಪಠಿಸುತ್ತಿರೋ ಪ್ರಜ್ವಲ್ ರೇವಣ್ಣ
ಡಿಎಂಕೆ ಜೊತೆ ರಾಜಕೀಯ ಉದ್ದೇಶದ ಮೈತ್ರಿ
ನೀವು ಡಿಎಂಕೆ ಜೊತೆ ಉತ್ತಮ ಸಖ್ಯ ಹೊಂದಿದ್ದೀರಿ ಎನ್ನುವ ಬಗ್ಗೆ ಕೇಳಿದಾಗ, ಇದು ಕೇವಲ ರಾಜಕೀಯ ಉದ್ದೇಶದ ಮೈತ್ರಿ. ಒಟ್ಟಿಗೆ ಕೆಲಸ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು. ಬಳಿಕ ತಮಿಳುನಾಡಿಗೆ ಶಿವಕುಮಾರ್ ಅವರು ಹೆಚ್ಚು ಭೇಟಿ ನೀಡುತ್ತಿದ್ದಾರೆ. ಇದರಿಂದ ನೀರಿನ ಸಮಸ್ಯೆ ಬಗೆಹರಿಯಲಿದೆಯೇ? ಎಂಬ ಬಿಜೆಪಿಯವರ ಹೇಳಿಕೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ. ಅವರ ರಕ್ಷಣೆ ಅವರು ನೋಡಿಕೊಳ್ಳುತ್ತಾರೆ. ನಮ್ಮ ರಾಜ್ಯದ ಹಿತವನ್ನು ನಾವು ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ನಿಯೋಗಕ್ಕೆ ಸಂಸದ ತುಕಾರಾಂ ನೇಮಕ
ಸಂಸತ್ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧದ ಹೋರಾಟದ ಬೆಳವಣಿಗೆಯ ಬಗ್ಗೆ ಕೇಳಿದಾಗ, ಕ್ಷೇತ್ರ ಮರುವಿಂಗಡಣೆ ಹೋರಾಟದ ನಿಯೋಗಕ್ಕೆ ಹೈಕಮಾಂಡ್ ಸೂಚನೆಯಂತೆ ನಮ್ಮ ಕರ್ನಾಟಕದಿಂದ ಸಂಸದರಾದ ತುಕಾರಾಂ ಅವರನ್ನು ನೇಮಿಸಲಾಗಿದೆ ಎಂದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಜುಲೈಯೊಳಗೆ ಹಳದಿ ಮಾರ್ಗ ಸಂಚಾರಕ್ಕೆ ಮುಕ್ತ
ವಕ್ಫ್ ತಿದ್ದುಪಡಿ ಮಸೂದೆಗೆ ಜೆಡಿಎಸ್, ಟಿಡಿಪಿ, ಚಂದ್ರಬಾಬು ನಾಯ್ಡು, ದೇವೇಗೌಡರು ಬೆಂಬಲ ನೀಡಿರುವ ಬಗ್ಗೆ ಕೇಳಿದಾಗ, ಎನ್‌ಡಿಎ ಮೈತ್ರಿಯಲ್ಲಿ ಇರುವ ಕಾರಣ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಸಂಪುಟ ಪುನಾರಚನೆ ಬಗ್ಗೆ ಕೇಳಿದಾಗ, ಇದರ ಬಗ್ಗೆ ಮುಖ್ಯಮಂತ್ರಿಯವರನ್ನು ಕೇಳಬೇಕು ಎಂದರು. ಇನ್ನೂ ಬಿಜೆಪಿ ಕಾರ್ಯಕರ್ತ ಪೊನ್ನಣ್ಣ ಅವರ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೇಳಿದಾಗ, ಇದರ ಬಗ್ಗೆ ಮಾಹಿತಿಯಿಲ್ಲ, ತಿಳಿದುಕೊಂಡು ಹೇಳುತ್ತೇನೆ ಎಂದರು.
– ಗುಜರಾತ್‌ಗೆ ಈಗ ಚಂಡಮಾರುತ ಭೀತಿ
– ಬಾಗಲಕೋಟೆ, ರಾಯಚೂರಿಗೆ ಪ್ರವಾಹ ಭೀತಿ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಭಾರೀ ಮಳೆ (Heavy Rain In Maharashtra) ಕಾರಣ ಬೆಳಗಾವಿ ಭಾಗದ ನದಿಗಳೆಲ್ಲಾ ಉಕ್ಕಿಹರಿಯುತ್ತಿವೆ. ಈ ಬೆನ್ನಲ್ಲೇ ಆಲಮಟ್ಟಿ ಜಲಾಶಯದಿಂದ ಇನ್ನೂ ಹೆಚ್ಚಿನ ನೀರನ್ನು ಬಿಡುವಂತೆ ಮಹಾರಾಷ್ಟ್ರ ನೀರಾವರಿ ಇಲಾಖೆ ಮನವಿ ಮಾಡಿದೆ.
ನಿರಂತರ ಮಳೆ ಹಿನ್ನೆಲೆ ಬಾಗಲಕೋಟೆ, ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಯಾದಗಿರಿಯ ಗುರುಸಣಗಿ ಬ್ಯಾರೇಜ್‌ನಿಂದ ಭೀಮಾನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದ ಭೀಮಾತೀರದ ವೀರಾಂಜನೇಯ, ಕಂಗಳೇಶ್ವರ ದೇವಾಲಯಗಳು ಮುಳುಗಡೆ ಆಗಿವೆ.
ಅತ್ತ, ಪ್ರವಾಹದಿಂದ (Gujarat floods) ತತ್ತರಿಸಿರುವ ಗುಜರಾತ್‌ಗೆ ಈಗ ಚಂಡಮಾರುತ ಭೀತಿ ಎದುರಾಗಿದೆ. ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ತಿರುವ ಚಂಡಮಾರುತ ಮುಂದಿನ 12 ಗಂಟೆಯಲ್ಲಿ ಕಛ್ ತೀರಕ್ಕೆ ಅಪ್ಪಳಿಸುವ ಸಂಭವ ಇದೆ. ಹೀಗಾಗಿ ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಿ: ಪ್ರಿಯಾಂಕ್ ಖರ್ಗೆ
– ವಾರದೊಳಗೆ ಜಲಾಶಯ ಭರ್ತಿ ಸಾಧ್ಯತೆ
– ಆಲಮಟ್ಟಿ ಜಲಾಶಯದ 14 ಗೇಟ್ ಓಪನ್
ಬಳ್ಳಾರಿ: ಮಲೆನಾಡು ಅಚ್ಚುಕಟ್ಟು ಪ್ರದೇಶದಲ್ಲಿ ನಿರಂತರ ಮಳೆ (Heavy Rain) ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಎರಡು ದಿನಗಳಿಂದ ಪ್ರತಿನಿತ್ಯ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬರ್ತಿದೆ.
ಗುರುವಾರವು (ಜು.18) ಸಹ 7 ಟಿಎಂಸಿ, ಶುಕ್ರವಾರ (ಇಂದು) 9 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದೇ ರೀತಿ ನೀರು ಹರಿದುಬಂದರೆ ಒಂದೇ ವಾರದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಆಲಮಟ್ಟಿ ಜಲಾಶಯದ 14 ಗೇಟ್ ಓಪನ್:
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ (Almatti Dam) ಭರಪೂರ ನೀರು ಹರಿದು ಬರ್ತಿದೆ. ಪ್ರತಿನಿತ್ಯ ಸಾವಿರಾರು ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನಾರಾಯಣಪುರ ಜಲಾಶಯಕ್ಕೂ ನೀರು ಹರಿಬಿಡಲಾಗುತ್ತಿದೆ.
ವಿಜಯಪುರ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.
ಶುಕ್ರವಾರದಿಂದ (ಜೂ.8) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ (Krishna River) ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಇದನ್ನೂ ಓದಿ: Exclusive: ಮುಂದಿನ ತಿಂಗಳಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ – ಅರ್ಜಿ ಸಲ್ಲಿಕೆ ಯಾವಾಗಾ, ಹೇಗೆ?
ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ:
ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.
ಕರಾವಳಿಯಲ್ಲಿ ಮುಂದಿನ 15 ದಿನ ಮಳೆ:
ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: NCP ನಾಯಕ ಪ್ರಫುಲ್ ಪಟೇಲ್‌ಗೆ ಬಿಗ್ ರಿಲೀಫ್ – 180 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಇಡಿ ಆದೇಶ ರದ್ದು!
ವಿಜಯಪುರ: ವಿಜಯಪುರದಲ್ಲಿ (Vijayapura) ಉತ್ತಮ ಮಳೆಯಾಗದಿದ್ದರೂ ಮಹಾರಾಷ್ಟ್ರದಲ್ಲಿ ಮಳೆರಾಯ ಅಬ್ಬರಿಸಿದ್ದರಿಂದ ಕೃಷ್ಣಾ ನದಿ ತುಂಬಿ ಆಲಮಟ್ಟಿ ಜಲಾಶಯ (Almatti Dam) ಆಗಸ್ಟ್ ಮೊದಲ ವಾರದಲ್ಲೇ ತುಂಬಿದೆ. ಆದರೆ ಈವರೆಗೂ ಸಿಎಂ ಬಾಗಿನ ಅರ್ಪಿಸಲು ಬಂದಿಲ್ಲ. ಸರ್ಕಾರ ಮೈಸೂರು ಭಾಗಕ್ಕೊಂದು, ಉತ್ತರ ಕರ್ನಾಟಕ ಭಾಗಕ್ಕೊಂದು ನೀತಿ ಅನುಸರಿಸುತ್ತಿದ್ದಾರೆ ಎಂದು ಜಿಲ್ಲೆಯ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಒರೆಸುವ ಕೆಲಸ ಮಾಡುತ್ತಿದೆ. ಇದನ್ನು ಬಿಟ್ಟು ಈ ಕೂಡಲೆ ಸಿಎಂ ಸಿದ್ದರಾಮಯ್ಯ (Siddaramaiah) ಬಂದು ಅವಳಿ ಜಿಲ್ಲೆಗಳ ಜೀವನದಿ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ. ಅಲ್ಲದೆ ಸಿಎಂ ಇದಕ್ಕೆ ಹಿಂದೇಟು ಹಾಕಿದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಲಕ್ಷ್ಮಿಯರಿಗೆ ದೇಗುಲದಲ್ಲಿ ಸಿಗಲಿದೆ ಸ್ಪೆಷಲ್ ಗಿಫ್ಟ್
ಬೆಂಗಳೂರು/ಬಾಗಲಕೋಟೆ: ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಮತ್ತು ವಿತರಣಾ ಕಾಲುವೆಗಳ ಜಾಲದ ಆಧುನೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಆಧುನೀಕರಣ ಕಾಮಗಾರಿಯ ವಿವರವಾದ ಯೋಜನಾ ವರದಿಗೆ 75.41 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಗೆ ಡಿ.20ರಂದೇ ಆಡಳಿತಾತ್ಮಕ ಅನುಮೋದನೆ ನೀಡಿದೆ. ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ 0.00 ರಿಂದ 68.24 ಕಿ.ಮೀ. ವರೆಗಿನ (ಹಾಳಾಗಿರುವ ಆಯ್ದ ಭಾಗಗಳ) ಹಾಗೂ ವಿತರಣಾ ಕಾಲುವೆಗಳ ಸಂರಚನೆ ಒಳಗೊಂಡ ಆಧುನೀಕರಣ ಕಾಮಗಾರಿಯ 112.48 ಕೋಟಿ ರೂ. ಅಂದಾಜು ಮೊತ್ತದ (2016-17ನೇ ಸಾಲಿನ ದರಪಟ್ಟಿ ಅನ್ವಯ) ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ಕೂಡ ಸಿಕ್ಕಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‍ನದ್ದು ದೇಶದಲ್ಲಿ ಹಾರದ ಬಾವುಟ: ಆರ್. ಅಶೋಕ್ ವ್ಯಂಗ್ಯ
ಇದಕ್ಕೆ ಸಂಬಂಧಿಸಿದಂತೆ ಆಧುನೀಕರಣದ ಪ್ಯಾಕೇಜ್ ಕಾಮಗಾರಿಯನ್ನು ಟೆಂಡರ್ ಆಧಾರದ ಮೇಲೆ ಗುತ್ತಿಗೆ ವಹಿಸಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಅದಾದ ನಂತರ 0.00 ರಿಂದ 68.24 ಕಿ.ಮೀ. ವರೆಗಿನ (ಆಯ್ದ ಭಾಗಗಳ) ವಿತರಣಾ ಕಾಲುವೆಗಳ ಆಧುನೀಕರಣದ ಕಾಮಗಾರಿಗಳನ್ನು 3 ಪ್ಯಾಕೇಜ್‌ಗಳಲ್ಲಿ ಗುತ್ತಿಗೆ ವಹಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಮುದ್ದೇಬಿಹಾಳ ಮತಕ್ಷೇತ್ರದ ಜನಪ್ರತಿನಿಧಿಗಳು ಆಲಮಟ್ಟಿ ಎಡದಂಡೆ ಕಾಲುವೆಯ ಸುಮಾರು 30 ಕಿ.ಮೀ. ಆಧುನೀಕರಣ ಕಾಮಗಾರಿಯನ್ನು ತೆಗೆದುಕೊಂಡಿದ್ದು, ಇನ್ನುಳಿದ 56 ಕಿ.ಮೀ. ಕಾಲುವೆಯ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮನವಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟಕ್ಕೆ ಈ ಕಾಲುವೆ ಜಾಲದ ಆಧುನಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಕೋರಲಾಗಿತ್ತು. ಆಲಮಟ್ಟಿ ಎಡದಂಡೆ ಕಾಲುವೆಯ ಜಾಲದ ಆಧುನೀಕರಣ ಕಾಮಗಾರಿಯ ಪ್ರಸ್ತಾವನೆಯಿಂದ ಕಾಲುವೆ ಜಾಲದಲ್ಲಿ ಸಮರ್ಪಕ ನೀರು ನಿಯಂತ್ರಣ ಹಾಗೂ ನಿರ್ವಹಣೆ ಸಾಧ್ಯವಾಗುವುದರಿಂದ ನಿಗದಿತ ಅಚ್ಚುಕಟ್ಟು ಕ್ಷೇತ್ರಕ್ಕೆ ಮತ್ತು ಕಾಲುವೆ ಜಾಲದ ಕೊನೆ ಅಂಚಿನ ಭಾಗಕ್ಕೆ ಸಮರ್ಪಕವಾಗಿ ನೀರು ಪೂರೈಸಲು ಸಾಧ್ಯವಾಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೈಜಾಕ್ ಮಾಡೋದಕ್ಕೆ ಮೇಕೆದಾಟು ಯೋಜನೆಯನ್ನು ಹೆಚ್‌ಡಿಕೆ ಮಾಡಿದ್ರಾ: ಸಿದ್ದರಾಮಯ್ಯ ತಿರುಗೇಟು
ವಿಜಯಪುರ/ಮಂಡ್ಯ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಕಡಿಮೆ ಆದ ಹಿನ್ನೆಲೆ ವಿಜಯಪುರದ ಆಲಮಟ್ಟಿ ಜಲಾಯಕ್ಕೆ ಒಳಹರಿವು ಕಡಿಮೆ ಆಗಿದೆ. ಸದ್ಯ ಒಳಹರಿವು 1,80,000 ಕ್ಯೂಸೆಕ್ ದಾಖಲಾಗಿದ್ದು, 1,80,000 ಕ್ಯೂಸೆಕ್ ನೀರನ್ನ ನಾರಾಯಣಪುರ ಜಲಾಶಯಕ್ಕೆ ಬಿಡಲಾಗುತ್ತಿದೆ.
ಇನ್ನು ಗರಿಷ್ಠ 123 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 92.59 ಟಿಎಂಸಿ ನೀರು ಸಂಗ್ರಹವಾಗಿದೆ. ಭಾನುವಾರ 2 ಲಕ್ಷ ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದು ಬರುತ್ತಿತ್ತು. ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಇಂದು ಒಳಹರಿವು ಕಡಿಮೆ ಆದ ಹಿನ್ನೆಲೆ ಆತಂಕ ಕಡಿಮೆ ಆಗಿದೆ.
ಕೆಆರ್‍ಎಸ್ ನಿಂದ 74 ಸಾವಿರ ಕ್ಯೂಸೆಕ್‍ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಸಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮ ಪ್ರವಾಹದ ಆತಂಕದಲ್ಲಿ ಇವೆ. ಈಗಾಗಾಲೇ ರಂಗನತಿಟ್ಟಿನಲ್ಲಿ ಇರುವ ಬಹುತೇಕ ದ್ವೀಪಗಳು ನೀರಿನಲ್ಲಿ ಮುಳುಗಡೆಯಾಗಿವೆ. ಪಕ್ಷಿಗಳು ಆತಂಕದಿಂದ ಮರದ ಮೇಲ್ಭಾಗದಲ್ಲಿ ಇವೆ. ನೀರು ರಂಗನತಿಟ್ಟಿನ ಬೋಟಿಂಗ್‍ವರೆಗೂ ಬಂದಿದೆ.
ಕೆಆರ್‍ಎಸ್ ಡ್ಯಾಂ ನ ನೀರಿನ ಮಟ್ಟ 119.47 ಅಡಿಗಳಿದ್ದು, ಒಳಹರಿವು-77,950 ಕ್ಯೂಸೆಕ್ ಮತ್ತು ಹೊರ ಹರಿವು-74,560 ಕ್ಯೂಸೆಕ್ ಇದೆ. ಡ್ಯಾಂ ನ ಗರಿಷ್ಠ ಮಟ್ಟ 124.80 ಅಡಿ ಇದೆ.