Tag: ಆಳ್ವಾಸ್ ಕಾಲೇಜ್

  • ಆಳ್ವಾಸ್ ಕಾಲೇಜಿನಲ್ಲಿ ಬೆಂಗ್ಳೂರು ವಿದ್ಯಾರ್ಥಿನಿ ಆತ್ಮಹತ್ಯೆ

    ಆಳ್ವಾಸ್ ಕಾಲೇಜಿನಲ್ಲಿ ಬೆಂಗ್ಳೂರು ವಿದ್ಯಾರ್ಥಿನಿ ಆತ್ಮಹತ್ಯೆ

    ಮಂಗಳೂರು: ಮೂಡಬಿದಿರೆಯ ಪ್ರಸಿದ್ಧ ಆಳ್ವಾಸ್ ಕಾಲೇಜಿನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಬೆಂಗಳೂರಿನ ಆನೆಕಲ್ ನಿವಾಸಿ ವಿನುತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿನುತಾ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ವಿನುತಾ ಇಂದು ಬೆಳಗ್ಗೆ ಕಾಲೇಜಿಗೆ ಹೋಗದೆ ಹಾಸ್ಟೆಲಿನಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಳಿಕ ಆಕೆಯ ಸ್ನೇಹಿತರು ಹಾಸ್ಟೆಲಿಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

    ಈ ಬಗ್ಗೆ ಮಾಹಿತಿ ತಿಳಿದು ಮಂಗಳೂರಿನ ಮೂಡಬಿದಿರೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎನ್ನುವುದು ತಿಳಿದು ಬಂದಿಲ್ಲ. ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಹಿಂದೆ ಇದೇ ಕಾಲೇಜಿನಲ್ಲಿ ಓದುತ್ತಿದ್ದ ಕಾವ್ಯಾ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸುದ್ದಿ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv