Tag: ಆಶಾ ಕಾರ್ಯಕರ್ತರು

  • ಸ್ಫೋಟಕ ರಹಸ್ಯ ಬಯಲು – ಆಂಧ್ರದಲ್ಲಿ ಕರ್ನಾಟಕ ತಾಯಂದಿರಿಂದ ಹೆಣ್ಣು ಭ್ರೂಣ ಹತ್ಯೆ

    ಸ್ಫೋಟಕ ರಹಸ್ಯ ಬಯಲು – ಆಂಧ್ರದಲ್ಲಿ ಕರ್ನಾಟಕ ತಾಯಂದಿರಿಂದ ಹೆಣ್ಣು ಭ್ರೂಣ ಹತ್ಯೆ

    – 17 ವರ್ಷಗಳಿಂದ ಸಕ್ರಿಯವಾಗಿದ್ದ ಜಾಲ
    – ಆಂಧ್ರದ ಆಶಾ ಕಾರ್ಯಕರ್ತೆಯೇ ಇದರ ಕಿಂಗ್‌ಪಿನ್‌

    ಬೆಂಗಳೂರು: ಹೆಣ್ಣನ್ನು ಅತಿ ಹೆಚ್ಚು ಗೌರವಿಸುವ ಪುಣ್ಯ ನಾಡು ನಮ್ಮದು ಅಂತಲೇ ಹೆಮ್ಮೆಯಿಂದ ಬೆನ್ನುತಟ್ಟಿಕೊಳ್ಳುತ್ತೇವೆ. ಶತಮಾನಗಳ ಇತಿಹಾಸ, ಪುರಾಣ ಕಥನ, ಮಿಥ್ಯೆಗಳಲ್ಲೂ ಸಹ ಇದನ್ನು ಗುರುತಿಸುತ್ತೇವೆ. ಹೆಣ್ಣು ಮಕ್ಕಳ ಶಿಕ್ಷಣ, ಪೌಷ್ಟಿಕತೆ, ಆರೋಗ್ಯ ಮತ್ತು ಜೀವನೋಪಾಯದ ಮಾರ್ಗಗಳನ್ನು ಹಸನುಗೊಳಿಸಲು ನೂರಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ʻಬೇಟಿ ಬಚಾವೋ ಬೇಟಿ ಪಢಾವೋʼ ಕೂಡ ಒಂದು. ಹೀಗಿದ್ದೂ ಹೆಣ್ಣುಮಕ್ಕಳ ಭ್ರೂಣ ಹತ್ಯೆ (Foeticide) ಮತ್ತೊಂದೆಡೆ ಅವ್ಯಾಹತವಾಗಿ ನಡೆಯುತ್ತಿದೆ. ಗಂಡು ಮಗುವಿನ ಮೇಲಿನ ಆದ್ಯತೆ, ಹೆಣ್ಣುಮಕ್ಕಳ ಕುರಿತಾದ ತಾರತಮ್ಯ, ಸಾಮಾಜಿಕ ಕಟ್ಟುಪಾಡು, ಶಿಕ್ಷಣದ ಕೊರತೆಯಂತಹ ಕಾರಣಗಳಿಂದ ತಾಯಿ ಗರ್ಭದಲ್ಲಿರುವ ಹೆಣ್ಣು ಭ್ರೂಣವನ್ನ ಅಕ್ರಮವಾಗಿ ಲಿಂಗ ಪರೀಕ್ಷೆ ನಡೆಸಿ ಕೊಲ್ಲಲಾಗುತ್ತಿದೆ.

    ಕೆಲ ದಿನಗಳ ಹಿಂದಷ್ಟೇ ಮಂಡ್ಯದಲ್ಲಿ ಅಕ್ರಮವಾಗಿ ಭ್ರೂಣಹತ್ಯೆ ಮಾಡುತ್ತಿದ್ದ ಜಾಲವೊಂದು ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಇದೀಗ ಹೊಸ ಅವತಾರದಲ್ಲಿ ಭ್ರೂಣ ಹತ್ಯೆ ವ್ಯವಸ್ಥಿತವಾಗಿ ನಡೆಯುತ್ತಿದ್ದದ್ದು ಕಂಡುಬಂದಿದೆ. ಕರ್ನಾಟಕದ ಕೆಲವು ಮಹಿಳೆಯರು (Karnataka Womens) ನೆರೆಯ ರಾಜ್ಯದಲ್ಲಿ ಭ್ರೂಣ ಹತ್ಯೆ ಮಾಡಿಸಿಕೊಳ್ಳುತ್ತಿದ್ದದ್ದು ಆರೋಗ್ಯ ಇಲಾಖೆ (Health Department) ಅಧಿಕಾರಿಗಳ ಕುಟುಕು ಕಾರ್ಯಾಚರಣೆ ವೇಳೆ ಬಟಾ ಬಯಲಾಗಿದೆ.

    ಹೌದು. ಕರ್ನಾಟಕದ ಕೆಲ ತಾಯಂದಿರು ನೆರೆಯ ಆಂಧ್ರ ಪ್ರದೇಶದಲ್ಲಿ ಭ್ರೂಣ ಹತ್ಯೆ ಮಾಡಿಸಿಕೊಳ್ಳುತ್ತಿದ್ದ ಘೋರ ಕೃತ್ಯ ಆರೋಗ್ಯ ಇಲಾಖೆ ಕಾರ್ಯಚರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಿಚ್ಛೇದಿತೆಗೆ ಮದುವೆ ಆಗೋದಾಗಿ ನಂಬಿಸಿ ವಂಚನೆ ಆರೋಪ – ಬೆಂಗಳೂರಿನ ಕ್ರಿಕೆಟ್‌ ಕೋಚ್‌ ವಿರುದ್ಧ ಎಫ್‌ಐಆರ್‌

    ಏನಿದು ಘಟನೆ?
    30 ವರ್ಷದ ಮಹಿಳೆಯೊಬ್ಬರು ಮಳವಳ್ಳಿಯಲ್ಲಿ ಬಂಡೂರು ಬಸವಗುಡಿ ದೇವಸ್ಥಾನವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಆಕೆ 5 ತಿಂಗಳ ಗರ್ಭಿಣಿಯಾಗಿದ್ದಾಳೆ ಎಂಬುದು ಆಶಾ ಕಾರ್ಯಕರ್ತೆಯರ ಗಮನಕ್ಕೆ ಬಂದಿತ್ತು. ತಕ್ಷಣ ವೈದ್ಯಕೀಯ ಸಿಬ್ಬಂದಿ ಮೂಲಕ ಆಕೆಯ ವಿಚಾರಣೆ ನಡೆಸಲಾಯಿತು. ಬಳಿಕ ಏಜೆಂಟ್‌ ಮೂಲಕ ಆಕೆಯ ಭ್ರೂಣ ಲಿಂಗ ಪತ್ತೆ ಮಾಡಿದಾಗ ಹೆಣ್ಣು ಅಂತಾ ಗೊತ್ತಾಯಿತು. ಈಗಾಗಲೇ ಮೂರು ಹೆಣ್ಣು ಮಕ್ಕಳು ಹೊಂದಿದ್ದ ಕಾರಣ ಹೆಣ್ಣು ಮಗುವಿಗೆ ದಂಪತಿ ಕೂಡ ನಿರಾಕರಿಸಿದ್ದರಂತೆ.

    ಈ ಬಗ್ಗೆ ಖಚಿತ ಮಾಹಿತಿ ಪಡೆದ ಆರೋಗ್ಯ ಇಲಾಖೆ ಅಧಿಕಾರಿಗಳು ತಕ್ಷಣ ಅಲರ್ಟ್‌ ಆಗಿದ್ದಾರೆ. ಆಂಧ್ರ ಪ್ರದೇಶದ ಆಯುಕ್ತರಿಗೆ ಮಾಹಿತಿಯನ್ನೂ ನೀಡಿದ್ದಾರೆ. ನಂತ್ರ ಸೆ.21ರಂದು ಜಂಟಿಯಾಗಿ ಕರ್ನೂಲ್‌ನಲ್ಲಿರುವ ಭಾಷಾ ನರ್ಸಿಂಗ್ ಹೋಂಗೆ ವಿಸಿಟ್ ಮಾಡಿ ಸ್ಟಿಂಗ್‌ ಆಪರೇಷನ್‌ ನಡೆಸಿ ಜಾಲವನ್ನು ಪತ್ತೆಹಚ್ಚಿದ್ದಾರೆ. ಈ ಆಸ್ಪತ್ರೆ ಬಳ್ಳಾರಿ, ರಾಯಚೂರು, ವಿಜಯನಗರ, ಗಡಿ ಭಾಗಕ್ಕೂ ಹತ್ತಿರವಿದೆ. ಕಾರ್ಯಾಚರಣೆ ಬಳಿಕ ಎಲ್ಲಾ ಪುರಾವೆಗಳನ್ನು ಆಂಧ್ರದ ನೋಡಲ್ ಅಧಿಕಾರಿಗೆ ರವಾನಿಸಿದ್ದಾರೆ. ಇದನ್ನೂ ಓದಿ: ಪ್ರೀತಿಗೆ ಮನೆಯವರ ವಿರೋಧ – ಪ್ರೇಮಿಗಳಿಬ್ಬರು ಆತ್ಮಹತ್ಯೆ ಯತ್ನ; ಯುವತಿ ಸಾವು, ಯುವಕ ಪಾರು 

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಮಳವಳ್ಳಿಯ ಈ ದಂಪತಿಗೆ ಭ್ರೂಣ ಕೊಲ್ಲಲು 20 ಸಾವಿರ ರೂ.ಗೆ ಬೇಡಿಕೆ ಇಡಲಾಗಿತ್ತು. ಆದ್ರೆ ಇದಕ್ಕೆ ಒಪ್ಪದ ದಂಪತಿ ವಾಪಸ್‌ ಆಗಿದ್ರು. ಬಳಿಕ ವೈದ್ಯಕೀಯ ಸಿಬ್ಬಂದಿ ಜೊತೆ ಮಾತುಕತೆ ನಡೆಸುವಾಗ ಈ ಬಗ್ಗೆ ಬಾಯ್ಬಿಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಆರೋಗ್ಯ ಇಲಾಖೆ ಈ ದಂಪತಿಗಳನ್ನೇ ಮುಂದಿಟ್ಟುಕೊಂಡು ಸ್ಟಿಂಗ್‌ ಆಪರೇಷನ್‌ ನಡೆಸಿತು. ಸದ್ಯ ಜಾಲವನ್ನು ಪತ್ತೆಹಚ್ಚಿದ ಆರೋಗ್ಯ ಇಲಾಖೆ ಆಂಧ್ರ ಪ್ರದೇಶದ ಭಾಷ ನರ್ಸಿಂಗ್ ಹೋಂಗೆ ಬೀಗ ಜಡಿದಿದೆ. ಇದನ್ನೂ ಓದಿ: ಮೋದಿ ರಾಷ್ಟ್ರಧ್ವಜ ಹಾರಿಸೋದನ್ನ ತಡೆಯಲು ಬಹುಮಾನ ಘೋಷಿಸಿದ್ದ ಪನ್ನುನ್ ವಿರುದ್ಧ ಕೇಸ್

    ಕಾರ್ಯಾಚರಣೆ ಬಗ್ಗೆ ಡಾ. ವಿವೇಕ್ ಹೇಳಿದ್ದೇನು?
    ಸ್ಟಿಂಗ್‌ ಆಪರೇಷನ್‌ ಬಳಿಕ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ವೈದ್ಯಕೀಯ ಕಾಯ್ದೆ ಉಪನಿರ್ದೇಶಕರಾದ ಡಾ. ವಿವೇಕ್ ದೊರೈ, ಆಂಧ್ರದ ಆಶಾ ಕಾರ್ಯಕರ್ತೆಯೇ ಇದ್ರ ಕಿಂಗ್‌ಪಿನ್‌. 17 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.‌ ಭಾಷಾ ನರ್ಸಿಂಗ್‌ ಹೋಮ್‌ 50 ಹಾಸಿಗೆಗಳ ಆಸ್ಪತ್ರೆಯಾಗಿದ್ದು, ನಾವು ರೇಡ್‌ಗೆ ಹೋದ ತಕ್ಷಣ ಡಾಕ್ಟರ್‌ ಸ್ಪಾಟ್‌ನಿಂದ ಓಡಿ ಹೋಗಿದ್ದಾನೆ ಎಂದು ತಿಳಿಸಿದ್ದಾರೆ.

    ಅಲ್ಲದೇ ಅಲ್ಲಿನ ಅಲ್ಲಿನ ನೋಡಲ್ ಅಧಿಕಾರಿಗೆ, ಏಜೆಂಟ್‌ಗಳಿಗೆ ಹಣ ನೀಡಿದ್ದು, ಎಲ್ಲ ಸಾಕ್ಷ್ಯವನ್ನು ನಮ್ಮ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಹ್ಯಾಂಡೋವರ್ ಮಾಡ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

  • ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ

    ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ

    ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ (ASHA workers) 10 ಸಾವಿರ ರೂ. ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಇಂದಿನಿಂದ ರಾಜ್ಯವ್ಯಾಪಿ ಹೋರಾಟ ಆರಂಭಿಸಿದೆ.

    ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿಯೂ ಆಶಾ ಕಾರ್ಯಕರ್ತೆಯರು ʻಮುಖ್ಯಮಂತ್ರಿಗಳೇ, ನಿಮ್ಮ ಮಾತು ಉಳಿಸಿರಿʼ ಎಂಬ ಘೋಷಣೆಯೊಂದಿಗೆ ಇಂದಿನಿಂದ ರಾಜ್ಯವ್ಯಾಪಿ ಹೋರಾಟ ಶುರು ಮಾಡಿದ್ದಾರೆ. ಆಗಸ್ಟ್‌ 14ರ ವರೆಗೂ ಹೋರಾಟ ಮುಂದುವರಿಯಲಿದೆ. ಮಳೆ, ಚಳಿಯನ್ನೂ ಲೆಕ್ಕಿಸದೇ, ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದಿದ್ದಾರೆ.

    ಈ ವರ್ಷದ ಮೊದಲಿನಲ್ಲಿ ಮುಖ್ಯಮಂತ್ರಿಗಳು ಅವರ ಬೇಡಿಕೆಗಳನ್ನು ಒಪ್ಪಿಕೊಂಡು, 2025ರ ಏಪ್ರಿಲ್‌ನಿಂದಲೇ 10,000 ರೂ. ಗೌರವಧನ ನೀಡುವುದಾಗಿ ಘೋಷಿಸಿದ್ದರು. ಆದ್ರೆ, ಇದುವರೆಗೆ ಸರ್ಕಾರ ಘೋಷಣೆಯನ್ನ ಜಾರಿಗೊಳಿಸದ ಹಿನ್ನೆಲೆ ಆಶಾ ಕಾರ್ಯಕರ್ತೆಯರು ಹೋರಾಟಕ್ಕಿಳಿದಿದ್ದಾರೆ. ಈ ನಡುವೆ ಕಾರ್ಯಕ್ರಮ ನಿರ್ದೇಶಕ ಪ್ರಭುಗೌಡ ಅವರು ಎನ್‌ಎಚ್‌ಎಮ್ ಪರವಾಗಿ ಆಶಾ ಕಾರ್ಯಕರ್ತೆಯರ ಬೇಡಿಕೆ ಪತ್ರವನ್ನು ಸ್ವೀಕರಿಸಿ, ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಉತ್ತರ ನೀಡುವುದಾಗಿ ತಿಳಿಸಿದ್ದಾರೆ.

    ಮೈಸೂರು, ಗದಗ, ದಾವಣಗೆರೆ, ಚಿತ್ರದುರ್ಗ, ಕಾರವಾರ ಮತ್ತು ವಿಜಯಪುರ ಮುಂತಾದ ಮಳೆಯಾದ ಪ್ರದೇಶಗಳಲ್ಲಿಯೂ ಆಶಾ ಕಾರ್ಯಕರ್ತೆಯರು ಧರಣಿ ಮುಂದುವರಿಸಿದ್ದಾರೆ.

    ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?
    * 2025ರ ಏಪ್ರಿಲ್‌ನಿಂದ ರಾಜ್ಯ ಸರ್ಕಾರದ ಗೌರವಧನ ಹಾಗೂ ಕೇಂದ್ರ ಸರ್ಕಾರದ ಪ್ರೋತ್ಸಾಹಧನವನ್ನು ಒಳಗೊಂಡಂತೆ 10,000 ರೂ. ನೀಡಬೇಕು.
    * ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಇತರ ಯೋಜನಾ ಕಾರ್ಮಿಕರಿಗೆ ನೀಡಿದಂತೆ, ಆಶಾ ಕಾರ್ಯಕರ್ತೆಯರಿಗೂ 1,000 ರೂ. ಹೆಚ್ಚಳ ನೀಡಬೇಕು.
    * ‘ರೇಷನಲೈಸೇಶನ್’ ಎಂಬ ಹೆಸರಿನಲ್ಲಿ ಯಾರನ್ನೂ ಕೆಲಸದಿಂದ ತೆಗೆದು ಹಾಕಬಾರದು.
    * ಕಾರ್ಯಕ್ಷಮತೆ ಆಧಾರಿತ ಮೌಲ್ಯಮಾಪನ ನೀತಿಯನ್ನು ಹಿಂತೆಗೆದುಕೊಳ್ಳಬೇಕು.
    * ಆಶಾ ಫೆಸಿಲಿಟೇಟರ್ ವ್ಯವಸ್ಥೆಯನ್ನು ಮುಂದುವರಿಸಿ, ಅವರಿಗೆ ಸೂಕ್ತ ವೇತನ ನೀಡಬೇಕು.
    * ನಗರ/ಪಟ್ಟಣಗಳ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಜೀವನಾವಶ್ಯಕ ವೆಚ್ಚಕ್ಕೆ ಅನುಗುಣವಾಗಿ 2,000 ರೂ. ಹೆಚ್ಚಿಸಬೇಕು.
    * ನಿವೃತ್ತರಾದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಒಮ್ಮೆ ನಿವೃತ್ತಿ ಭತ್ಯೆ ನೀಡಬೇಕು.
    * 2025ರ ಜೂನ್–ಜುಲೈನಲ್ಲಿ ಕೇಂದ್ರ ಸರ್ಕಾರ ನೀಡಿದ ಹೆಚ್ಚುವರಿ ಮೊತ್ತವನ್ನು ರಾಜ್ಯದಲ್ಲಿ ಜಾರಿಗೆ ತರಬೇಕು.

  • ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸಾಧ್ಯವಿಲ್ಲ – ದಿನೇಶ್ ಗುಂಡೂರಾವ್

    ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸಾಧ್ಯವಿಲ್ಲ – ದಿನೇಶ್ ಗುಂಡೂರಾವ್

    ಬೆಂಗಳೂರು: ಆಶಾ ಕಾರ್ಯಕರ್ತೆಯರ ಸಂಬಳ (Asha Worker Salary) ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ JDSನ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದರು. ಆಶಾ ಕಾರ್ಯಕರ್ತೆಯರ ಸಂಬಳ ಜಾಸ್ತಿ ಮಾಡಬೇಕು. ಅವರಿಗೂ ಪಿಂಚಣಿ ಕೊಡಬೇಕು. ಹೊಸ ಸ್ಮಾರ್ಟ್‌ಫೋನ್‌ಗಳನ್ನ ನೀಡಬೇಕು ಅಂತಾ ಆಗ್ರಹಿಸಿದರು. ಇದನ್ನೂ ಓದಿ: ಎಲ್ಲಾ ಜೈನ ಮುನಿಗಳಿಗೂ ರಕ್ಷಣೆ ಕೊಡಬೇಕು: ಸುನಿಲ್ ಕುಮಾರ್ ಒತ್ತಾಯ

    ಇದಕ್ಕೆ ಉತ್ತರ ನೀಡಿದ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ರಾಜ್ಯ ಸರ್ಕಾರದಿಂದ ಈಗಾಗಲೇ 5 ಸಾವಿರ ಗೌರವ ಧನ ನೀಡಲಾಗ್ತಿದೆ‌. ಕೇಂದ್ರದಿಂದ 5-8 ಸಾವಿರ ಗೌರವ ಧನ ಸಿಗುತ್ತಿದೆ. ಒಟ್ಟಾರೆ 10-13 ಸಾವಿರ ಗೌರವ ಧನ ಸಿಗುತ್ತಿದೆ‌. ಸದ್ಯ ಅವರ ಗೌರವ ಧನ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ವೇತನ ಹೆಚ್ಚಳ: ಪ್ರಿಯಾಂಕಾ ಗಾಂಧಿ ಹೊಸ ಗ್ಯಾರಂಟಿ ಘೋಷಣೆ

    ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ವ್ಯವಸ್ಥೆ ಸಾಧ್ಯವಿಲ್ಲ. ಅವರು ಸರ್ಕಾರಿ ಉದ್ಯೋಗಿಗಳು ಆಗಿದ್ದರೆ ಸಿಗುತ್ತಿತ್ತು. ಆದ್ರೆ ನಿಯಮದ ಪ್ರಕಾರ ಅವರಿಗೆ ಪಿಂಚಣಿ ಕೊಡಲು ಸಾಧ್ಯವಿಲ್ಲ. ಆಶಾ ಕಾರ್ಯಕರ್ತೆಯರು ಗ್ಯಾರಂಟಿ ಯೋಜನೆಗೆ ಅರ್ಜಿ ಹಾಕಬಹುದು. ಸರ್ಕಾರದ ಅದಕ್ಕೆ ಅವಕಾಶ ಕೊಟ್ಟಿದೆ. ಹೀಗಾಗಿ ಪರೋಕ್ಷವಾಗಿ ಅವರಿಗೆ ಅನುಕೂಲ ಆಗಿದೆ. ಸದ್ಯ ಗೌರವ ಧನ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಸ್ಮಾರ್ಟ್ ಫೋನ್ ಕೊಡೋ ಬಗ್ಗೆ ಚಿಂತನೆ ಮಾಡ್ತೀವಿ ಅಂತಾ ತಿಳಿಸಿದರು.

    ಪ್ರಿಯಾಂಕಾ ಗಾಂಧಿ ಹೇಳಿದ್ದೇನು?
    2023ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಬೆಳಗಾವಿಯ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ. ವರೆಗೆ ವೇತನ ಹೆಚ್ಚಿಸಲಾಗುವುದು. ಜೊತೆಗೆ ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋವಿಡ್‌ ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ

    ಕೋವಿಡ್‌ ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ

    ಬೆಂಗಳೂರು:  ಎರಡನೇ ಸುತ್ತಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆಯು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬಿಬಿಎಂಪಿ ಹೊರತುಪಡಿಸಿ 10,34,184 ಜನರಿಗೆ ಲಸಿಕೆ ನೀಡಿದ್ದು, ನೂರಕ್ಕೆ ನೂರರಷ್ಟು ಗುರಿ ಸಾಧಿಸಿದ ಜಿಲ್ಲೆಯಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕಂದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಮೊದಲ ಸುತ್ತಿನಲ್ಲಿ 13,26,255 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ.129 ಸಾಧನೆಯಾಗಿದೆ. ಇಡೀ ರಾಜ್ಯದಲ್ಲಿ ಗುರಿ ಮೀರಿ ಸಾಧನೆಗೈದ ಏಕೈಕ ಜಿಲ್ಲೆಯಾಗಿದೆ ಎಂದರು. ಇದನ್ನೂ ಓದಿ: ಮತಾಂತರ ಕಾಯ್ದೆ ವಿಧಾನಸಭೆಯಲ್ಲಿ ಪಾಸ್: ಕಟೀಲ್ ಸ್ವಾಗತ

    ಆರೋಗ್ಯ ಇಲಾಖೆಯ ವೈದ್ಯರು-ಸಿಬ್ಬಂದಿ, ಜಿಲ್ಲಾ ಪಂಚಾಯತ್, ಆಶಾ ಕಾರ್ಯಕರ್ತೆಯರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ಪ್ರತಿ ಗ್ರಾಮ ಪಂಚಾಯಿತಿಗಳ ಮನೆ ಮನೆಗೆ ಹೋಗಿ ಲಸಿಕೆ ಹಾಕಿಸಿದ ಕಾರಣ ಈ ಯಶಸ್ಸು ಸಾಧಿಸಲು ಸಾಧ್ಯವಾಗಿದೆಯೆಂದು ತಿಳಿಸಿದ್ದಾರೆ. ಇದನ್ನೂ ಓದಿ:  ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ

    ಹೊಸ ವರ್ಷದ ಹೊಸ್ತಿಲಲ್ಲಿರುವ ನಾವುಗಳು ಸಂಭ್ರಮ ಆಚರಿಸಲು ಮುಂದಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಎರಡು ಡೋಸ್ ಮುಗಿದಿದೆಯೆಂದು ಮೈಮರೆಯದೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

  • ಆಶಾ ಕಾರ್ಯಕರ್ತೆಯರಿಗೆ ಬಾಗಿನ, ಚಿನ್ನದ ಮೂಗುತಿ ಗಿಫ್ಟ್ ಕೊಟ್ಟ ಯುವಕ

    ಆಶಾ ಕಾರ್ಯಕರ್ತೆಯರಿಗೆ ಬಾಗಿನ, ಚಿನ್ನದ ಮೂಗುತಿ ಗಿಫ್ಟ್ ಕೊಟ್ಟ ಯುವಕ

    ಚಿಕ್ಕಬಳ್ಳಾಪುರ: ಹಗಲು, ರಾತ್ರಿ ಕೊರೊನಾ ಸಂಕಷ್ಟ ಕಾಲದಲ್ಲಿ ಕಷ್ಟಪಟ್ಟು ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಯುವಕನೊರ್ವ ಚಿನ್ನದ ಉಡುಗೊರೆ ನೀಡಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚನಬಲೆ ಗ್ರಾಮದ ಸದಾಶಿವ್ ಆಶಾಕಾರ್ಯಕತೆಯರಿಗೆ ಬಾಗಿನ ಅರ್ಪಿಸಿ ಚಿನ್ನದ ಮೂಗುತಿಯನ್ನ ಉಡುಗೊರೆಯಾಗಿ ನೀಡಿದ್ದಾರೆ. ದಿಬ್ಬೂರು ಪ್ರಾಥಮಿಕ ಅರೋಗ್ಯ ಕೇಂದ್ರ ವ್ಯಾಪ್ತಿಯ 24 ಮಂದಿ ಆಶಾ ಕಾರ್ಯಕರ್ತೆಯರಿಗೆ ಚಿನ್ನದ ಮೂಗುತಿ, ಸೀರೆ, ಬಳೆ ಅರಿಶಿನ-ಕುಂಕುಮ ಹಾಗೂ ದಿನಸಿ ಪದಾರ್ಥಗಳ ಕಿಟ್ ನೀಡಿ ಗೌರವಿಸುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ.

    ನಾನು ಆರ್ಥಿಕವಾಗಿ ತುಂಬಾ ಸಿರಿವಂತ, ಸ್ಥಿತಿವಂತನಲ್ಲದಿದ್ರೂ ಕೊರೊನಾ ಸಂಕಷ್ಟದ ಸಮಯದಲ್ಲಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್​​ಗೆ ಗೌರವ ಸಲ್ಲಿಸುವುದು ನಮ್ಮ ಹೊಣೆ, ಜವಾಬ್ದಾರಿ ಕರ್ತವ್ಯ ಹೀಗಾಗಿ ತನ್ನ ಕೈಲಾದ ಸೇವೆಯನ್ನ  ಮಾಡುತ್ತಿದ್ದೆನೆ. ಈ ಹಿಂದೆ ಸಹ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಬಸ್ ಪಾಸ್ ಕೊಡುತ್ತಿದ್ದೆ. ಕೊರೊನಾ ಬಂದ ನಂತರ ಕಳೆದ ಬಾರಿ ಪುಡ್ ಕಿಟ್ ಕೊಟ್ಟಿದ್ದೆ, ಈ ಬಾರಿ ಬಾಗಿನ ಅರ್ಪಿಸುತ್ತಿದ್ದೇನೆ ಅಂತ ಹೇಳಿದ್ದಾರೆ.

  • ಸಾರ್ವಜನಿಕರಿಗೆ ಕೊರೊನಾ ವ್ಯಾಕ್ಸಿನ್ – ಮಾಹಿತಿ ನೀಡಲು ಜನ ಹಿಂದೇಟು

    ಸಾರ್ವಜನಿಕರಿಗೆ ಕೊರೊನಾ ವ್ಯಾಕ್ಸಿನ್ – ಮಾಹಿತಿ ನೀಡಲು ಜನ ಹಿಂದೇಟು

    – ಮಾಹಿತಿ ಸಿಗದೇ ಆಶಾ, ಹೆಲ್ತ್ ವರ್ಕರ್ಸ್ ಪರದಾಟ

    ಬೆಂಗಳೂರು: ಎರಡನೇ ಅಲೆ ಆತಂಕದ ಮಧ್ಯೆ ಸಾರ್ವಜನಿಕರಿಗೆ ವ್ಯಾಕ್ಸಿನ್ ವಿತರಿಸಲು ಸಿದ್ಧತೆ ನಡೆದಿದೆ. ಹೈ ರಿಸ್ಕ್ ಕೇಸ್ ಮತ್ತೆ 50 ವರ್ಷ ಮೇಲ್ಪಟ್ಟವರ ಪಟ್ಟಿ ಸಿದ್ಧತೆಗೆ ಆರೋಗ್ಯ ಇಲಾಖೆ ಹರಸಾಹಸ ಪಡ್ತಿದೆ. ಮನೆ ಮನೆ ಸರ್ವೇ ವೇಳೆ ವ್ಯಾಕ್ಸಿನ್ ಡೇಟಾ ಎಂಟ್ರಿಗೆ ಸಾರ್ವಜನಿಕರು ಮಾಹಿತಿ ಕೊಡಲು ಹಿಂದೇಟು ಹಾಕುತ್ತಿದ್ದು, ಮಾಹಿತಿ ಸಿಗದೇ ಆಶಾ ಕಾರ್ಯಕರ್ತೆಯರು ಆರೋಗ್ಯಾಧಿಕಾರಿಗಳ ಪರದಾಟ ಪಬ್ಲಿಕ್ ರಿಯಾಲಿಟಿ ಚೆಕ್ ನಲ್ಲಿ ಬಯಲಾಗಿದೆ.

    ಮಾರ್ಚ್ 1 ರಿಂದ ಸಾರ್ವಜನಿಕರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲು ಆರೋಗ್ಯ ಇಲಾಖೆ ಸಜ್ಜಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮತ್ತು ನಾನಾ ಕಾಯಿಲೆಗಳಿಂದ ಬಳಲುತ್ತಾ ಇರೋ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ನಿರ್ಧಾರ ಮಾಡಿದ್ದಾರೆ. ಆದರೆ ರಾಜ್ಯದಲ್ಲಿ ಹೈರಿಸ್ಕ್ ಜನ, 50 ವರ್ಷ ಮೇಲ್ಪಟ್ಟವರು ಮತ್ತು ಬಹು ಕಾಯಿಲೆಯಿಂದ ಬಳಲುತ್ತಾ ಇರೋರು ಎಷ್ಟು ಜನ ಇದ್ದಾರೆ? ಎಷ್ಟು ವ್ಯಾಕ್ಸಿನ್ ಕೊಡಬೇಕು? ಫಲಾನುಭವಿಗಳು ಎಷ್ಟು ಆಗ್ತಾರೆ ಅಂತಾ ತಿಳಿಯಲು ಸರ್ಕಾರ ಸರ್ವೇ ನಡೆಸುತ್ತಿದೆ. ಈ ಸರ್ವೇಯನ್ನ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಮತ್ತು ಸ್ವಯಂ ಸೇವಕರು ನಡೆಸುತ್ತಿದ್ದಾರೆ. ಆದರೆ ಈ ಸರ್ವೇ ವೇಳೆ ಸಾರ್ವಜನಿಕರು ಸರಿಯಾಗಿ ನೀಡುತ್ತಿಲ್ಲ. ಸ್ವತಃ ಪಬ್ಲಿಕ್ ಟಿವಿ ಆರೋಗ್ಯ ಸಿಬ್ಬಂದಿ ಜೊತೆ ಸರ್ವೇಗೆ ಇಳಿದಾಗ ಅಲ್ಲಿನ ರಿಯಾಲಿಟಿ ಬಯಲಾಗಿದೆ.

    ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಜೊತೆ ಸರ್ಬೇಗೆ ಪಬ್ಲಿಕ್ ಟಿವಿ ಇಳಿಯಿತು. ಪ್ಯಾಲೇಸ್ ಗುಟ್ಟಹಳ್ಳಿಯ ಜಟಕಾಸ್ಟಾಂಡ್ ವಸತಿ ಗೃಹದ ಸಂಕೀರ್ಣದ ಬಳಿ ಸರ್ವೇಗೆ ಇಳಿದಾಗ ಅಲ್ಲಿನ ಮನೆ ಅವರು ಸ್ಪಂದಿಸಿದ್ರು. ಆರೋಗ್ಯ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ರು. ವ್ಯಾಕ್ಸಿನ್ ತೆಗೆದುಕೊಳ್ಳೋದು ಉತ್ತಮ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದರು.

    ಬಾಂಧವ್ಯ ನಗರದಲ್ಲಿ ಸರ್ವೆಗೆ ಅಂತಾ ಒಂದು ಮನೆಗೆ ತೆರಳಿದೆವು. ಅಲ್ಲಿನ ನಿವಾಸಿ ನಿಮಗೆ ಎಷ್ಟು ವಯಸ್ಸು ಅಂದರೆ ಒಂದು ಬಾರಿ 49 ವರ್ಷ ಅಂತಾರೆ. ಒಂದು ಬಾರಿ 51 ವರ್ಷ ಅಂತಾರೆ. ಮನೆಯಲ್ಲಿಯೇ ಇದ್ದು ಆಧಾರ್ ಕಾರ್ಡ್ ವೋಟರ್ ಐಡಿ ಕೇಳಿದ್ರೆ ಇಲ್ಲ ಅಂತಾರೆ. ವ್ಯಾಕ್ಸಿನ್ ಮಾತ್ರ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಾರೆ. ಕೆಲವರು ನಾವು ಆರೋಗ್ಯವಾಗಿದ್ದು, ಲಸಿಕೆ ಬೇಡ ಅಂತ ಹೇಳುತ್ತಾರೆ.

    ಪಬ್ಲಿಕ್ ಟಿವಿ ದಿವಾನರ ಪಾಳ್ಯದಲ್ಲೂ ಈ ಬಗ್ಗೆ ರಿಯಾಲಿಟಿ ಚೆಕ್ ನಡೆಸಿತ್ತು. ದಿವಾನರ ಪಾಳ್ಯದಲ್ಲಿ ಮತ್ತಿಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತರು, ಮನೆ ಮನೆಗೆ ಹೋಗಿ ಸರ್ವೇ ನಡೆಸಿದರು. ಆದರೆ ವಾರ್ಡ್ ನ ಮನೆ ಮನೆಗೆ ಹೋದಾಗ ಅಲ್ಲಿಯ ಬಹುತೇಕ ನಿವಾಸಿಗಳು ಆರೋಗ್ಯ ಸಿಬ್ಬಂದಿಗಳಿಗೆ ಸ್ಪಂದಿಸಲಿಲ್ಲ. ಇದರಿಂದ ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಅಧಿಕಾರಿಗಳು ಹೈರಾಣಾದರು.

  • 42 ಸಾವಿರ ಆಶಾ ಕಾರ್ಯಕರ್ತೆಯರು ರಾಜೀನಾಮೆ ವಾರ್ನಿಂಗ್

    42 ಸಾವಿರ ಆಶಾ ಕಾರ್ಯಕರ್ತೆಯರು ರಾಜೀನಾಮೆ ವಾರ್ನಿಂಗ್

    ಬೆಂಗಳೂರು: ಮಹಾಮಾರಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ಕಳೆದ ದಿನ ಬರೋಬ್ಬರಿ 1,267 ಮಂದಿಗೆ ಸೋಂಕು ದೃಢವಾಗಿದೆ. ಈ ಕೊರೊನಾ ಸಮಯದಲ್ಲೇ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಹೋರಾಟ ಮಾಡಲು ಮುಂದಾಗಿದ್ದಾರೆ.

    ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮನವಿ ಪತ್ರ ನೀಡುವ ಹೋರಾಟ ಮಾಡಲು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮತ್ತು AIUTUC (ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್) ವತಿಯಿಂದ ಹೋರಾಟ ಮಾಡಲಿದ್ದು, ತಮ್ಮ ಬೇಡಿಕೆಗಳನ್ನ ಇಡೇರಿಸದಿದ್ದರೆ 42 ಸಾವಿರ ಆಶಾ ಕಾರ್ಯಕರ್ತೆಯರು ಸಾಮೂಹಿಕ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ.

    ಇದೇ ತಿಂಗಳು 30ಕ್ಕೆ ಅಂದರೆ ಮಂಗಳವಾರವೇ ರಾಜ್ಯಾದ್ಯಂತ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡುವ ಮೂಲಕ ಹೋರಾಟ ಮಾಡಲಿದ್ದಾರೆ. ನಂತರ ಜುಲೈ 10ರೊಳಗೆ ಬೇಡಿಕೆ ಇಡೇರದಿದ್ದರೆ ರಾಜ್ಯಾದ್ಯಂತ ಕಾರ್ಯಕರ್ತೆಯರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ.

    ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳು:
    1) 12 ಸಾವಿರ ವೇತನವನ್ನ ನಿಗದಿ ಮಾಡಬೇಕು
    2) ಈ ಹಿಂದಿನ ಬಾಕಿ ವೇತನವನ್ನ ನೀಡಬೇಕು
    3) ಸರ್ವೆ, ಹೆರಿಗೆ ಹೀಗೆ ಇನ್ನಿತರ ಕೆಲಸಗಳಿಗೆ ಹೆಚ್ಚುವರಿ ಹಣ ನೀಡಲಾಗುತ್ತಿತ್ತು. ಇದನ್ನ ಇಗ ನಿಲ್ಲಿಸಲಾಗಿದೆ. ಈ ವೇತನವನ್ನೂ ನೀಡಬೇಕು
    4) ಕೊರೊನಾ ಟೈಮಲ್ಲಿ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ನೀಡಬೇಕು. ಹೀಗೆ ಕೆಲ ಬೇಡಿಕೆಗಳನ್ನ ಇಡೇರಿಸುವಂತೆ ಒತ್ತಾಯ

    ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಹೀಗಾಗಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಆಶಾ ಕಾರ್ಯಕರ್ತೆರು ಹೋರಾಟ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಆಶಾ ಕಾರ್ಯಕರ್ತೆರು ಸರ್ಕಾರಕ್ಕೆ ಸಾಮೂಹಿಕ ರಾಜೀನಾಮೆಯ ವಾರ್ನಿಂಗ್ ನೀಡಿದ್ದಾರೆ.

  • ಕೊಡಗಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ

    ಕೊಡಗಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ

    ಮಡಿಕೇರಿ: ಕೊರೊನಾ ವಿರುದ್ಧದ ಸಮರ ಸೈನಿಕರೆಂದು ಹೆಸರಾಗಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಲು ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಾಪೋಕ್ಲುವಿನಲ್ಲಿ ನಡೆದಿದೆ.

    ಆಶಾ ಕಾರ್ಯಕರ್ತೆ ಲತಾ ಮತ್ತು ಕಿರಿಯ ಆರೋಗ್ಯ ಸಹಾಯಕಿ ಜಲಜಾಕ್ಷಿ ಅವರು, ಮಾಹಿತಿ ಪಡೆಯಲೆಂದು ನಾಪೋಕ್ಲು ಬಳಿಯ ನಿವೃತ್ತ ಯೋಧ ಬೋಪಯ್ಯ ಮನೆಗೆ ತೆರಳಿದ ಸಂದರ್ಭ ಘಟನೆ ನಡೆದಿದ್ದು, ಆಶಾ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆಗೆ ಮುಂದಾಗಿದ್ದಾರೆ. ಈ ಸಂಬಂಧ ಆಶಾ ಕಾರ್ಯಕರ್ತರು ಗ್ರಾಮದ ಬೋಪಯ್ಯ ಎಂಬುವವರ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಕೊರೊನಾ ಸಂಬಂಧಿತ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಅವಿರತ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಮುಂದಾದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ನಾಪೋಕ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಂಗನವಾಡಿ, ಆಶಾ ಕಾರ್ಯಕರ್ತರು, ನರ್ಸ್‍ಗಳು ನಿಜವಾದ ದೇಶ ಭಕ್ತರು: ರಾಹುಲ್ ಗಾಂಧಿ

    ಅಂಗನವಾಡಿ, ಆಶಾ ಕಾರ್ಯಕರ್ತರು, ನರ್ಸ್‍ಗಳು ನಿಜವಾದ ದೇಶ ಭಕ್ತರು: ರಾಹುಲ್ ಗಾಂಧಿ

    ನವದೆಹಲಿ: ದೇಶವನ್ನು ಕಾಡುತ್ತಿರುವ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ನರ್ಸ್‍ಗಳು ನಿಜವಾದ ದೇಶ ಭಕ್ತರು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ದೇಶ ಸಂಕಷ್ಟದಲ್ಲಿ ಇರುವಾಗ ನಿಸ್ವಾರ್ಥದಿಂದ ದುಡಿಯುವುದೇ ನಿಜವಾದ ದೇಶಭಕ್ತಿ. ಈ ಕಷ್ಟಕರ ಸಮಯದಲ್ಲೂ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರು, ನರ್ಸ್‍ಗಳು, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶಭಕ್ತರು. ಇವರು ಮುಖ್ಯವಾಹಿನಿಯಿಂದ ದೂರವುಳಿದು ಸಾರ್ವಜನಿಕ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.

    ಕೊರೊನಾ ವೈರಸ್ ಮೇಲಿರುವ ಭಯ ಹಾಗೂ ತಪ್ಪು, ಸುಳ್ಳಿ ಮಾಹಿತಿಗಳು ವೈರಸ್‍ಗಿಂತ ಅಪಾಯಕಾರಿಯಾಗಿದೆ. ಈ ಪರಿಸ್ಥಿತಿಯಲ್ಲಿ ಸಮುದಾಯ ಕಾರ್ಯಕರ್ತರು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ದೇಶಕ್ಕಾಗಿ ಜನರ ಹಿತಕ್ಕಾಗಿ ದುಡಿಯುತ್ತಿದ್ದಾರೆ ಎಂದರು.

    ದೇಶವಾಸಿಗಳಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ. ಈ ಕೊರೊನಾ ವೈರಸ್ ಬಿಕ್ಕಟ್ಟಿಗೆ ಮುಕ್ತಿ ಸಿಕ್ಕ ಬಳಿಕ ಆಶಾ ಕಾರ್ಯಕರ್ತರು, ನರ್ಸ್‍ಗಳು, ಅಂಗನವಾಡಿ ಕಾರ್ಯಕರ್ತರ ಅಪೂರ್ವ ಕೊಡುಗೆಯನ್ನು ಗುರುತಿಸಿ, ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ವಿಶ್ವಾಸವನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದರು.