Tag: ಆಶಾ ಪಟೇಲ್

  • ಬಿಜೆಪಿ ಶಾಸಕಿ ಆಶಾ ಪಟೇಲ್ ಡೆಂಗ್ಯೂಗೆ ಬಲಿ

    ಬಿಜೆಪಿ ಶಾಸಕಿ ಆಶಾ ಪಟೇಲ್ ಡೆಂಗ್ಯೂಗೆ ಬಲಿ

    ಅಹಮದಾಬಾದ್: ಡೆಂಗ್ಯೂಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‍ನ ಬಿಜೆಪಿ ಶಾಸಕಿ ಆಶಾ ಪಟೇಲ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ.

    ಮೆಹ್ಸಾನಾ ಜಿಲ್ಲೆಯ ಉಂಜಾ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದ ಆಶಾ ಪಟೇಲ್ ಕಳೆದರಡು ದಿನಗಳ ಹಿಂದೆ ಡೆಂಗ್ಯೂನಿಂದ ಬಳಲುತ್ತಿದ್ದರು. ಅವರನ್ನು ಅಹಮದಾಬಾದ್‍ನ ಝೈಡಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಶಾ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ನಿತಿನ್‌ ಪಟೇಲ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಭಾರತ ಯುದ್ಧವನ್ನೂ ಗೆಲ್ಲಲಿದೆ: ರಾಜನಾಥ್ ಸಿಂಗ್

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿತಿನ್ ಪಟೇಲ್ ಡೆಂಗ್ಯೂನಿಂದ ಬಳಲುತ್ತಿದ್ದ ಆಶಾ ಪಟೇಲ್ ಅವರನ್ನು ಚಿಕಿತ್ಸೆಗಾಗಿ ಅಹಮದಾಬಾದ್‍ನ ಝೈಡಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಂಡವು ಡೆಂಗ್ಯೂನಿಂದ ಬಳಲುತ್ತಿದ್ದ ಆಶಾ ಅವರಿಗೆ ಹೆಚ್ಚಿನ ನಿಗಾ ವಹಿಸಿ ಚಿಕಿತ್ಸೆ ಕೊಟ್ಟರೂ ಅವರ ಪ್ರಯತ್ನ ಫಲಿಸಲಿಲ್ಲ ಆಶಾ ಪಟೇಲ್ ಇಂದು ನಮ್ಮೊಂದಿಗಿಲ್ಲ ಎಂದರು. ಇದನ್ನೂ ಓದಿ: ಇಸ್ರೇಲ್ ಪ್ರಧಾನಿಗೆ ಭಗವದ್ಗೀತೆ ಗಿಫ್ಟ್ ಕೊಟ್ಟ ಐರಾವತ ನಟಿ

    ಆಶಾ ಪಟೇಲ್ 2017ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದರು. ಆ ಬಳಿಕ 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆಶಾ ಪಟೇಲ್ ನಿಧನಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯಪಾಲ ಆಚಾರ್ಯ ದೇವವ್ರತ್ ಸಂತಾಪ ಸೂಚಿಸಿದ್ದಾರೆ.