Tag: ಆಶ್ಲೇಷ ಬಲಿ

  • ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

    ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

    ಹಿಂದೂ ಧರ್ಮದಲ್ಲಿ ದೇವರಂತೆ ನಾಗದೇವರನ್ನೂ ಪೂಜಿಸಲಾಗುತ್ತದೆ. ಜಾತಕದಲ್ಲಿ ನಾಗದೋಷ, ಕುಟುಂಬದಲ್ಲಿ ಸಮಸ್ಯೆ, ನಾಗರ ಹಾವನ್ನು ಹತ್ಯೆ.. ಇತ್ಯಾದಿ ಕಾರಣಕ್ಕೆ ಆಶ್ಲೇಷ ಬಲಿ ಸೇವೆಯನ್ನು ಭಕ್ತರು ಮಾಡುತ್ತಾರೆ. ಸಾಧಾರಣವಾಗಿ ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಕ್ಷೇತ್ರದಲ್ಲಿ ಹೆಚ್ಚಾಗಿ ಆಶ್ಲೇಷ ಬಲಿ (Ashlesha Bali ಸೇವೆಯನ್ನು ಮಾಡುತ್ತಾರೆ. ಒಂದು ವೇಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಸಾಧ್ಯವಾಗದೇ ಇದ್ದವರು ಸಮೀಪದ ಸುಬ್ರಹ್ಮಣ್ಯ ದೇವಸ್ಥಾನ ಅಥವಾ ನಾಗನ ಕಟ್ಟೆಗಳಲ್ಲೂ ಆಶ್ಲೇಷ ಬಲಿ ಸೇವೆ ಮಾಡುತ್ತಾರೆ. 

     

    ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?
    ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ ಎಂದು ತಿಳಿಯಬೇಕಾದರೆ ಪುರಾಣ ಕಥೆಗೆ ಹೋಗಬೇಕಾಗುತ್ತದೆ. ಕದ್ರು ಮತ್ತು ವಿನತೆ ಇಬ್ಬರೂ ಕಶ್ಯಪ ಮಹರ್ಷಿಗಳ ಪತ್ನಿಯರು. ಅವರು ಮಕ್ಕಳನ್ನು ಪಡೆಯಲು ಬಯಸಿದಾಗ, ಕದ್ರು ಸಾವಿರ ನಾಗಗಳಿಗೆ ಜನ್ಮ ನೀಡಿದರೆ, ವಿನತೆ ಇಬ್ಬರು ಮಕ್ಕಳಾದ ಅರುಣ ಮತ್ತು ಗರುಡನಿಗೆ ಜನ್ಮ ನೀಡುತ್ತಾಳೆ.

    ಒಂದು ದಿನ ಉಚ್ಚೈಶ್ರವಸ್ ಎಂಬ ಕುದುರೆಯ ಬಾಲದ ಬಣ್ಣದ ಬಗ್ಗೆ ಕದ್ರು ಮತ್ತು ವಿನತೆಯರ ನಡುವೆ ಪಣ ಏರ್ಪಡುತ್ತದೆ. ಕದ್ರು ಬಾಲ ಕಪ್ಪು ಎಂದು ವಾದಿಸಿದರೆ, ವಿನತೆ ಬಾಲ ಬಿಳಿ ಎಂದು ಹೇಳುತ್ತಾಳೆ. ಕದ್ರು ತನ್ನ ನಾಗಪುತ್ರರನ್ನು ಕುದುರೆಯ ಬಾಲಕ್ಕೆ ಅಂಟಿಕೊಂಡು ಕಪ್ಪಾಗಿ ಕಾಣುವಂತೆ ಮಾಡುತ್ತಾಳೆ, ಇದರಿಂದ ವಿನತೆ ಸೋತು ಗುಲಾಮಳಾಗುತ್ತಾಳೆ. ಕದ್ರು ವಿನತೆಯನ್ನು ತನ್ನ ಗುಲಾಮೆಯನ್ನಾಗಿ ನಡೆಸಿಕೊಳ್ಳುತ್ತಾಳೆ. ತಾಯಿಯನ್ನು ಗುಲಾಮೆಯನ್ನಾಗಿ ನಡೆಸಿದ್ದಕ್ಕೆ ಸಿಟ್ಟಾದ ಗರುಡ ನಾಗಪುತ್ರರನ್ನು ತಿನ್ನಲು ಮುಂದಾಗುತ್ತಾನೆ. ಈ ಸಂದರ್ಭದಲ್ಲಿ ಗರುಡನಿಂದ ಪಾರಾಗಲು ನಾಗಗಳು ಸುಬ್ರಹ್ಮಣ್ಯನ ಮೊರೆ ಹೋಗುತ್ತವೆ. ಸುಬ್ರಹ್ಮಣ್ಯ ನಾಗಗಳನ್ನು ರಕ್ಷಿಸುತ್ತಾನೆ. ಇದನ್ನೂ ಓದಿ: ನಾಗರ ಪಂಚಮಿಯಂದು ಹೀಗೆ ಮಾಡಿ – ಕಾಳ ಸರ್ಪದೋಷಕ್ಕೆ ಸಿಗುತ್ತೆ ಪರಿಹಾರ

    kukke subramanya

     

    ಸ್ಕಂದ ಪುರಾಣದ ಪ್ರಕಾರ ಒಮ್ಮೆ ಸುಬ್ರಹ್ಮಣ್ಯ ಬ್ರಹ್ಮನ ಮುಂದೆ ನಿನಗಿಂತ ನನಗೆ ಹೆಚ್ಚು ಜ್ಞಾನವಿದೆ ಎಂದು ಹೇಳಿ ಅಪಹಾಸ್ಯ ಮಾಡಿದ್ದ. ಈ ವಿಚಾರ ತಂದೆಯಾದ ಶಿವನಿಗೆ ತಿಳಿಯುತ್ತದೆ. ಸುಬ್ರಹ್ಮಣ್ಯನನ್ನು ಕರೆದು, ಸೃಷ್ಟಿಕರ್ತನನ್ನು ಅವಮಾನ ಮಾಡಿದ್ದಕ್ಕೆ ನಿನಗೆ ನೀನೇ ಶಿಕ್ಷಿ ವಿಧಿಸಬೇಕೆಂದು ಸೂಚಿಸುತ್ತಾನೆ. ತಂದೆಯ ಮಾತಿನಂತೆ ಸುಬ್ರಹ್ಮಣ್ಯ ಸರ್ಪದ ರೂಪವನ್ನು ತಾಳಿ ಹಲವು ವರ್ಷ ಬದುಕಿದ್ದ ಎಂಬ ಕಥೆಯೂ ಇದೆ.

    ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ?
    ವ್ಯಕ್ತಿಯ ಜಾತಕದಲ್ಲಿ ಕಾಳಸರ್ಪದೋಷ ಇರುವವರು ಮಾಡುತ್ತಾರೆ. ಹಿಂದೆ ತಿಳಿದೋ ಅಥವಾ ತಿಳಿಯದೆಯೋ ಸರ್ಪಗಳಿಗೆ ಹಾನಿ ಮಾಡಿದ್ದರೆ, ಅಂತಹ ದೋಷಗಳನ್ನು ಪರಿಹರಿಸಲು ಆಶ್ಲೇಷಾ ಪೂಜೆ ಮಾಡಲಾಗುತ್ತದೆ.

    ಅಷ್ಟೇ ಅಲ್ಲದೇ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ, ವಿವಾಹ, ಭೂ, ಜಲ, ಬೆಳೆ ಅಭಿವೃದ್ಧಿಗಾಗಿ ಈ ಸೇವೆಯನ್ನು ಮಾಡಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿದೆ. ಮನೆಯಲ್ಲಿ ಶಾಂತಿ ನೆಲೆಸಲು, ವಿವಾಹ ಸಮಸ್ಯೆಗಳು ನಿವಾರಣೆಯಾಗಲು ಮತ್ತು ಸಂತಾನ ಭಾಗ್ಯಕ್ಕಾಗಿ ಈ ಪೂಜೆ ಮಾಡಲಾಗುತ್ತದೆ.  ವಿಶೇಷವಾಗಿ ಆಶ್ಲೇಷ ನಕ್ಷತ್ರದಂದು ಈ ಪೂಜೆಯನ್ನು ಮಾಡುವುದರಿಂದ ಸರ್ಪ ದೋಷಗಳು ನಿವಾರಣೆಯಾಗುತ್ತವೆ ಮತ್ತು ಜೀವನದಲ್ಲಿ ಸುಖ-ಸಮೃದ್ಧಿ ಉಂಟಾಗುತ್ತದೆ ಎಂಬ ನಂಬಿಕೆಯಿದೆ.

  • ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅಣ್ಣಾಮಲೈ

    ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅಣ್ಣಾಮಲೈ

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Subramanya) ತಮಿಳುನಾಡು (Tamil Nadu) ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರ.

    ಕುಕ್ಕೆಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ (Ashlesha Bali Pooja) ನೆರವೇರಿಸಿ ಅಣ್ಣಾಮಲೈ ಬಳಿಕ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.  ಇದನ್ನೂ ಓದಿ: ಇಂದು ಸುರ್ಜೇವಾಲ ಜೊತೆ ಒನ್ ಟು ಒನ್ ಮೀಟಿಂಗ್‌ 8 ಶಾಸಕರಿಗೆ ಬುಲಾವ್‌

    ಭೇಟಿ ಬಳಿಕ ಮಾತನಾಡಿದ ಅವರು, ನಾನು ಕಳೆದ ಹತ್ತು ಹದಿನೈದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುತ್ತಿದ್ದೇಮೆ. ಆಶ್ಲೇಷ ನಕ್ಷತ್ರದ ಈ ಪುಣ್ಯದಿನದಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ತಮಿಳುನಾಡಿನ ಜನ, ಕರ್ನಾಟಕದ ಜನ ಹಾಗೂ ಇಡೀ ಭಾರತದ ಜನರು ಸುಖ ಶಾಂತಿ ನೆಮ್ಮದಿಯಾಗಿ ಇರಬೇಕು. ಎಲ್ಲಾ ಜನರಿಗೂ ಒಳ್ಳೆದಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮೊದಲ ಬಾರಿಗೆ ಜೂನ್ ತಿಂಗಳಲ್ಲಿ KRS ಭರ್ತಿ  ಇಂದು ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿದ್ದಾರೆ ಸಿಎಂ

    ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನ ಜವಾಬ್ದಾರಿಯ ಜೊತೆಗೆ ರಾಷ್ಟ್ರೀಯ ಮಟ್ಟದ ಹುದ್ದೆಯನ್ನು ನೀಡಲು ಬಿಜೆಪಿ ಮುಂದಾಗಿದೆ.

    ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿ, ತಮಿಳುನಾಡಿನಲ್ಲಿಯೂ ಅವರ ಕೆಲಸ ಮುಂದುವರಿಯುವುದು ಇದರ ಜೊತೆಗೆ ರಾಷ್ಟ್ರೀಯ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.