ಚಿಕ್ಕಬಳ್ಳಾಪುರ: ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿಗೆ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಎರಚಿ (Acid Attack) ಸೋದರ ಮಾವ ತಾನೂ ಬೆಂಕಿ ಹಚ್ಚಿಕೊಂಡ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮಂಚನಬಲೆ (Manchanabale) ಗ್ರಾಮದಲ್ಲಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ನಿವಾಸಿ ಸೋದರ ಮಾವ ಆನಂದ್ ಕುಮಾರ್ ಈ ಕೃತ್ಯವೆಸಗಿದ್ದಾನೆ. ಅದೃಷ್ಟವಶಾತ್ ಅನಾಹುತದಿಂದ ಯುವತಿ ಪಾರಾಗಿದ್ದಾಳೆ. ಯುವತಿಗೆ ಆ್ಯಸಿಡ್ ಎರಚಿದ ಬಳಿಕ ಆನಂದ್ ಆಕೆಯ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾನೆ. ಘಟನೆಯಲ್ಲಿ ಮಾವ ಆನಂದ್ ಕುಮಾರ್‌ಗೆ ತೀವ್ರ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಹರಿಯಾಣದ ರೈಲಿನಲ್ಲಿ ಗ್ಯಾಂಗ್ ರೇಪ್ - ಅತ್ಯಾಚಾರ ಬಳಿಕ ರೈಲ್ವೆ ಹಳಿಗಳ ಮೇಲೆ ಮಹಿಳೆ ಎಸೆದ ಪಾಪಿಗಳು
ಬೆಂಗಳೂರು: ಹಾಡಹಗಲೇ ಯುವಕನ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ (Bengaluru) ಕಾಮಾಕ್ಷಿಪಾಳ್ಯ (Kamakshipalya) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಾನುವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ಉತ್ತರ ಭಾರತ ಮೂಲದ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಅಟ್ಯಾಕ್ ಮಾಡಿದ್ದಾರೆ. ಘಟನೆಯಲ್ಲಿ ಯುವಕ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಬಾಲಾಜಿ ವೈನ್ ಸ್ಟೋರ್ ಬಳಿ ಘಟನೆ ನಡೆದಿದೆ. ಇದನ್ನೂ ಓದಿ: ಮಿಸ್ ಯೂನಿವರ್ಸ್ ಇಂಡಿಯಾ-2024 ಕಿರೀಟ ಗೆದ್ದ ಗುಜರಾತಿ ಸುಂದರಿ
ಈ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 24 ವರ್ಷದ ಯವತಿ ಮೇಲೆ ಆ್ಯಸಿಡ್ ಅಟ್ಯಾಕ್ ನಡೆದಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಭಗ್ನಪ್ರೇಮಿಯೇ ಈ ರೀತಿಯ ಪಾಪದ ಕೃತ್ಯ ಎಸಗಿದ್ದ. ಸುಂಕದ ಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ನಾಗೇಶ್ ಎಂಬಾತ ಆ್ಯಸಿಡ್ ಎರಚಿದ್ದ. ಇದನ್ನೂ ಓದಿ: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಯುವತಿ ನಾಗೇಶ್‌ನ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಯುವತಿ ಹಾಗೂ ನಾಗೇಶ್ ನಡುವೆ ಗಲಾಟೆ ನಡೆದಿತ್ತು. ಅದೇ ದ್ವೇಷದಿಂದ ಆಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಬಂದು ಆ್ಯಸಿಡ್ ಎರಚಿ, ಎಸ್ಕೇಪ್ ಆಗಿದ್ದ. ಈ ಬಗ್ಗೆ ದೂರು ದಾಖಲಿಸಿಕೊಂಡ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪ್ಯಾಲೆಸ್ತೀನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ – ಗಾಜಾ ಪರಿಸ್ಥಿತಿ ಬಗ್ಗೆ ಭಾರತ ಕಳವಳ
ಚಿಕ್ಕಮಗಳೂರು: ನಾಯಿ (Dog) ಬೊಗಳಿದ್ದಕ್ಕೆ ಮನೆ ಮಾಲೀಕನ ಮೇಲೆ ಆಸಿಡ್ ದಾಳಿ (Acid Attack) ನಡೆಸಿರುವ ಘಟನೆ ಜಿಲ್ಲೆಯ ಎನ್‌ಆರ್ ಪುರ (NR Pura) ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ.
ಜೇಮ್ಸ್ ಆಸಿಡ್ ದಾಳಿ ಮಾಡಿದ ಆರೋಪಿಯಾದರೆ, ಸುಂದರ್ ರಾಜ್ ಆಸಿಡ್ ದಾಳಿಗೊಳಗಾದ ವ್ಯಕ್ತಿ. ಜೇಮ್ಸ್ ಹಾಗೂ ಸುಂದರ್ ರಾಜ್ ಅಕ್ಕಪಕ್ಕದ ಮನೆಯವರು. ಹಲವು ದಿನಗಳಿಂದ ಇಬ್ಬರ ನಡುವೆ ಗಲಾಟೆಯಾಗಿ, ಮನಸ್ಥಾಪವಿತ್ತು.
ನಿನ್ನೆ ಸುಂದರ್ ರಾಜ್ ಮನೆಯ ಸಾಕು ನಾಯಿ ಬೊಗಳುತ್ತಿತ್ತು. ಈ ವೇಳೆ ಮನೆ ಮಾಲೀಕ ಸುಂದರ್ ರಾಜ್ ನಾಯಿಗೆ ಬೈದಿದ್ದಾರೆ. ಆಗ ಜೇಮ್ಸ್ ನಾಯಿಗೆ ಬೈದಂತೆ ನನಗೆ ಬೈಯುತ್ತಿದ್ದಾನೆ ಎಂದು ಜಗಳವಾಡಿದ್ದಾನೆ. ಇಬ್ಬರು ಜಗಳವಾಡುವಾಗ ಜೇಮ್ಸ್ ಏಕಾಏಕಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?
ಆಸಿಡ್ ದಾಳಿಗೆ ಸುಂದರ್ ರಾಜ್ ಮುಖ ಬಹುತೇಕ ಸುಟ್ಟಿದ್ದು ಎಡಗಣ್ಣಿಗೆ ಗಂಭೀರ ಗಾಯವಾಗಿದೆ. ಅರ್ಧ ಮುಖ ಸಂಪೂರ್ಣ ಸುಟ್ಟುಹೋಗಿದೆ. ಕೂಡಲೇ ಅವರನ್ನು ಎನ್‌ಆರ್ ಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದಲ್ಲಿ ವೈದ್ಯರು ಸುಂದರ್ ರಾಜ್ ಅವರ ಎಡಗಣ್ಣಿನ ಪದರ ಸಂಪೂರ್ಣ ಡ್ಯಾಮೇಜ್ ಆಗಿದೆ, ಕಣ್ಣಿನ ಪದರವನ್ನು ಬದಲಾಯಿಸಬೇಕೆಂದು ತಿಳಿಸಿದ್ದಾರೆ. ಕೂಲಿ ಮಾಡಿಕೊಂಡು ಬದುಕುತ್ತಿದ್ದ ಸುಂದರ್ ರಾಜ್ ಕುಟುಂಬ ಇದೀಗ ಚಿಕಿತ್ಸೆಯ ಹಣಕ್ಕಾಗಿ ಕಂಗಾಲಾಗಿದ್ದಾರೆ. ಆಸಿಡ್ ದಾಳಿ ಬಳಿಕ ಜೇಮ್ಸ್ ದಂಪತಿ ನಾಪತ್ತೆಯಾಗಿದ್ದಾರೆ. ಎನ್‌ಆರ್ ಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Rain Alert: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ
– ಆ್ಯಸಿಡ್ ದಾಳಿಗೊಳಗಾದ ಮಹಿಳಾ ಸಂತ್ರಸ್ತರಿಗೆ 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲಕ್ಕೆ ಅಸ್ತು
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ಮಹಿಳೆಯರಿಗೆ ಬಂಪರ್ ಉಡುಗೊರೆ ನೀಡಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ರಾಜ್ಯದಲ್ಲಿನ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಅವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು 2 ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ., ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುವುದು. ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಲಿದೆ ಎಂದು ಹೇಳಿದ್ದಾರೆ.
ಇದರೊಂದಿಗೆ ವಿಶೇಷಚೇತನರಿಗೆ ಆರ್ಥಿಕ ಸದೃಢತೆ ಒದಗಿಸಲು ಸಾಮಾಜಿಕವಾಗಿ ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನ 30 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಅಲ್ಲದೆ, ನೋಂದಣಿಯಾಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು. ಇದನ್ನೂ ಓದಿ: Karnataka Budget 2023: ಡಾ.ರಾಜ್ ಸ್ಮಾರಕದ ಬಳಿ ಸಿನಿ ವಸ್ತು ಸಂಗ್ರಹಾಲಯ
ಮಹಿಳಾ ಉದ್ಯಮಿಗಳು ಆತಿಥ್ಯ, ಆರೈಕೆ ಮತ್ತು ಪ್ರವಾಸೋದ್ಯಮದಂತಹ ಸೇವಾ ವಲಯದಲ್ಲಿ ಮಹಿಳೆಯರು ಹೆಚ್ಚಿನ ಅವಕಾಶ ಪಡೆಯುತ್ತಿದ್ದಾರೆ. ಆದ್ದರಿಂದ ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನ 2 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು. 2023-24ನೇ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನ 7 ಜಿಲ್ಲೆಗಳಲ್ಲಿ NGOಗಳ ಸಹಯೋಗದೊಂದಿಗೆ 2 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ
ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಯುವತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಿಡಿಗೇಡಿ ಯುವಕ ಆ್ಯಸಿಡ್ ದಾಳಿ ಮಾಡಿದ್ದಾನೆ. ಈ ಹಿನ್ನೆಲೆ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆ ಯುವತಿಯ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂತ್ರಸ್ತೆ ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 1 ಲಕ್ಷ ರೂ. ಸಹಾಯಹಸ್ತದ ಚೆಕ್ ಅನ್ನು ವಿಶೇಷ ಆಯುಕ್ತರಾದ ರಂಗಪ್ಪ ಮತ್ತು ಬಿಬಿಎಂಪಿ ನೌಕರರ ಭವನದ ಅಧ್ಯಕ್ಷರಾದ ಅಮೃತ್ ರಾಜ್ ಕುಟುಂಬಸ್ಥರಿಗೆ ಕೊಟ್ಟರು. ಈ ವೇಳೆ ಆಡಳಿತಾಧಿಕಾರಿಗಳ ಆಪ್ತ ಕಾರ್ಯದರ್ಶಿ ನಾರಾಯಣ್‍ಸ್ವಾಮಿ, ಕಂದಾಯ ಅಧಿಕಾರಿ ಉಮಾ ಹಾಗೂ ಸಂಘದ ಪದಾಧಿಕಾರಿಗಳಾದ ಎಸ್.ಜಿ.ಸುರೇಶ್, ಸಾಯಿಶಂಕರ್, ಕೆ.ಜಿ.ರವಿ, ಕೆ.ಮಂಜೇಗೌಡರು, ನರಸಿಂಹ ಅವರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಅವನನ್ನ ಪ್ಲೀಸ್ ಬಿಡಬೇಡಿ, ಅವನಿಗೆ ಶಿಕ್ಷೆಯಾಗಲೇ ಬೇಕು: ಪೊಲೀಸರನ್ನು ಬೇಡಿಕೊಂಡ ಆಸಿಡ್ ಸಂತ್ರಸ್ತೆ
ವಿಶೇಷ ಆಯುಕ್ತರಾದ ರಂಗಪ್ಪ ಅವರು ಈ ವೇಳೆ ಮಾತನಾಡಿದ್ದು, ಜನರ ಮೂಲಭೂತ ಸೌಲಭ್ಯ ಒದಗಿಸುವ ಜನಸ್ನೇಹಿ ಸಂಸ್ಥೆ ಬಿಬಿಎಂಪಿಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘವು ನೌಕರರ ಹಿತಾರಕ್ಷಣೆ ಜೊತೆಯಲ್ಲಿ ಜನರ ಸಂಕಷ್ಟಗಳಿಗೆ ನೆರವು ನೀಡುವ ಸಾಮಾಜಿಕ ಸೇವಾ ಸಂಘಟನೆಯಾಗಿ ರೂಪುಗೊಂಡಿದೆ. ಆ್ಯಸಿಡ್ ದಾಳಿಗೆ ಒಳಗಾದ ಯುವತಿಯ ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೀಡಲಾಗಿದೆ. ಸಂತ್ರತ್ತೆ ಯುವತಿ ಬೇಗನೆ ಗುಣಮುಖರಾಗಲಿ ಎಂಬ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಅಮೃತ್ ರಾಜ್ ಅವರು ಮಾತನಾಡಿದ್ದು, ಬೆಂಗಳೂರು ನಗರ ನಾಗರಿಕರ ದಿನನಿತ್ಯ ಬಿಬಿಎಂಪಿ ಜೊತೆಯಲ್ಲಿ ಒಡನಾಟವಿರುತ್ತದೆ. ನಮ್ಮ ಸಂಘವು ಜನರ ನೋವು, ಸಂಕಷ್ಟಗಳಿಗೆ ಸದಾ ತನ್ನ ಸಹಾಯ ಹಸ್ತ ನೀಡುತ್ತಾ ಬಂದಿದೆ. ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ದಿನಸಿ ಕಿಟ್ ಮತ್ತು ಮಾಸ್ಕ್, ಸ್ಯಾನಿಟೈಸರ್ ವಿತರಣೆ. ಕೊಡಗು, ಉತ್ತರಕರ್ನಾಟಕ ಪ್ರವಾಹದಿಂದ ನೊಂದ ಸಂಕಷ್ಟದಲ್ಲಿರುವ ಜನರಿಗೆ ಸಹಾಯಹಸ್ತ ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಿಮಗೆ ಹಿಂದಿ ಬರದಿದ್ದರೆ ಈ ದೇಶ ಬಿಟ್ಟು ಹೋಗಿ: ಸಂಜಯ್ ನಿಶಾದ್
ಧರ್ಮಸ್ಥಳದಲ್ಲಿ ನೀರಿನ ಅಭಾವ ಇದ್ದಾಗ 1 ಲಕ್ಷ ಲೀಟರ್ ನೀರು ನೀಡಲಾಯಿತು. ಬೆಂಗಳೂರಿನಲ್ಲಿ ಅಪಘಾತದಿಂದ ಮೃತ್ತಪಟ್ಟ ವ್ಯಕ್ತಿ ಕುಟುಂಬದವರಿಗೆ 1 ಲಕ್ಷ ರೂ. ಮತ್ತು ಹಲವಾರು ಕುಟುಂಬಗಳಿಗೆ ಆಸ್ಪತ್ರೆ ವೆಚ್ಚ, ಔಷಧಿ ಸಂಘದ ವತಿಯಿಂದ ಭರಿಸಲಾಗಿದೆ. ಆ್ಯಸಿಡ್ ದಾಳಿಗೆ ಒಳಗಾದ ಸಂತ್ರತ್ತೆ ಯುವತಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಮತ್ತು ಕುಟುಂಬದ ನಿರ್ವಹಣೆ 1 ಲಕ್ಷ ರೂಪಾಯಿಯನ್ನು ಸಂಘದ ವತಿಯಿಂದ ಸಹಾಯಹಸ್ತ ಮಾಡಲಾಗಿದೆ. ಇನ್ನು ಹೆಚ್ಚಿನ ಸಹಕಾರ ಬೇಕಾದಲ್ಲಿ ನೀಡುತ್ತೇವೆ ಎಂದು ಭರವಸೆ ಕೊಟ್ಟರು.
ಆನೇಕಲ್(ಬೆಂಗಳೂರು): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಮೇಲೆ ಆಸಿಡ್ ಎರಚಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ನಡೆದಿದೆ.
ಆಸಿಡ್ ದಾಳಿಗೆ ಒಳಗಾದವನನ್ನು ಜ್ಯೋತಪ್ಪ (51) ಎಂದು ಗುರುತಿಸಲಾಗಿದೆ. ಬೆಂಗಳೂರು ಹೊರವಲಯ ಹೆನ್ನಾಗರ ಬಳಿಯ ಹೊಸಹಳ್ಳಿ ಗ್ರಾಮದ ನಿವಾಸಿಯಾದ ಜ್ಯೋತಪ್ಪ ಸ್ಥಿತಿ ಸದ್ಯ ಚಿಂತಾನಜನಕವಾಗಿದೆ.
ಜ್ಯೋತಪ್ಪ ತಮ್ಮ ಸ್ಕೂಟಿಯಲ್ಲಿ ಸಂಜೆ 6 ಗಂಟೆಯ ಸುಮಾರಿಗೆ ಜಿಗಣಿಯಿಂದ ಹೊಸಹಳ್ಳಿ ಗ್ರಾಮದ ಕಡೆಗೆ ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಹೆನ್ನಾಗರ ಬಳಿ ಬರುತ್ತಿದ್ದಂತೆಯೇ ಜ್ಯೋತಪ್ಪ ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ನಂತರ ಆಸಿಡ್ ಹಾಗೂ ಪೆಟ್ರೋಲ್ ಸುರಿದು ಬೆಂಕಿಯನ್ನು ಹಚ್ಚಿ ಪರಾರಿಯಾಗಿದ್ದಾರೆ.
ಬೆಂಕಿ ಹೊತ್ತಿಕೊಂಡ ಬಳಿಕ ನರಳಾಡುತ್ತ ನೆರವಿಗಾಗಿ ಕಿರುಚಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜ್ಯೋತಪ್ಪನನ್ನು ರಕ್ಷಿಸಿ ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಿಂದ ದೇಹದ ಶೇ.60 ಭಾಗ ಸಂಪೂರ್ಣ ಸುಟ್ಟು ಹೋಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಸೂರ್ಯಸಿಟಿ ಪೊಲೀಸರು ಪರಿಶೀಲನೆ ನಡೆಸಿದ್ದು ಮಾಹಿತಿ ಕಲೆಹಾಕಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ಮಹಿಳಾ ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಆಸಿಡ್ ದಾಳಿ ನಡೆದಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಹಾವನೂರು ಲೇಔಟ್ ನಲ್ಲಿ ನಡೆದಿದೆ.
ತುಮಕೂರಿನ ಶಿರಸಿ ಮೂಲದ ಇಂದಿರಾಬಾಯಿ ಆಸಿಡ್ ದಾಳಿಗೆ ಒಳಗಾದ ಕಂಡಕ್ಟರ್. ಶಾಂತಿನಗದ ಡಿಪೋದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುವ ಇಂದಿರಾಬಾಯಿ, ಎಂದಿನಂತೆ ಬೆಳಗ್ಗೆ 5:30ರ ವೇಳೆಗೆ ಮನೆಯಿಂದ ಕೆಲಸಕ್ಕೆ ಹೊರಟ್ಟಿದ್ದರು. ಈ ವೇಳೆ ಮನೆಯಿಂದ ಕೇವಲ ನೂರು ಮೀಟರ್ ಮುಂದೆ ಹೋದಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಇಂದಿರಾಬಾಯಿ ಮೇಲೆ ಆಸಿಡ್ ಎರಚಿ ಎಸ್ಕೇಪ್ ಆಗಿದ್ದಾರೆ.
ಗಂಭೀರ ಸ್ವರೂಪದ ಗಾಯವಾದ ಹಿನ್ನೆಲೆಯಲ್ಲಿ ಇಂದಿರಾ ಅವರನ್ನು ಸಪ್ತಗಿರಿ ಆಸ್ಪತ್ರೆಗೆ ಚಿಕಿತ್ಸೆ ನಡೆಸಲಾಗಿದೆ. ಕಳೆದ ಆರು ತಿಂಗಳ ಹಿಂದೆ ಕೂಡ ಇಂದಿರಾಬಾಯಿ ಮೇಲೆ ದಾಳಿ ನಡೆದಿದ್ದು, ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು. ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ನಗರದಲ್ಲಿ ಹಾಡಹಗಲೇ ಯುವತಿಯ ಮೇಲೆ ಆಸಿಡ್ ದಾಳಿ ಮಾಡಲು ಯತ್ನಿಸಿರುವ ಘಟನೆ ಪೀಣ್ಯಾ 2ನೇ ಹಂತದ ಪ್ರದೇಶದಲ್ಲಿ ನಡೆದಿದೆ.
ಚಂದನ್ ಎಂಬ ಯುವಕ ಯುವತಿಯೊಬ್ಬಳ ಮೇಲೆ ಆಸಿಡ್ ದಾಳಿಯನ್ನು ಮಾಡಲು ಯತ್ನಿಸಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಚಂದನ್ ಹಲವು ದಿನಗಳಿಂದ ಯುವತಿಯೊಬ್ಬಳನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಅಲ್ಲದೇ ತನ್ನನ್ನು ಮದುವೆಯಾಗಲು ಒಪ್ಪದೇ ಇದ್ದರೆ ಆಸಿಡ್ ಹಾಕುವುದಾಗಿ ಬೆದರಿಕೆಯನ್ನು ಹಾಕಿದ್ದ. ಆದರೆ ಯುವತಿ ಚಂದನ್‍ನನ್ನು ಮದುವೆಯಾಗಲು ನಿರಾಕರಿಸಿದ್ದಳು.
ತನ್ನ ಕೋರಿಕೆಯನ್ನು ನಿರಾಕರಿಸಿದ ಕಾರಣ ಚಂದನ್ ಕೋಪಗೊಂಡು ಇಂದು ಏಕಾಏಕಿ ಯುವತಿಯ ಮೇಲೆ ಆಸಿಡ್ ನಿಂದ ದಾಳಿ ಮಾಡಲು ಯತ್ನಿಸಿದ್ದಾನೆ. ಆದರೆ ಸ್ಥಳದಲ್ಲಿದ್ದ ಸಾರ್ವಜನಿಕರು ಸಮಯ ಪ್ರಜ್ಞೆ ಪ್ರದರ್ಶಿಸಿ ಯುವತಿಯನ್ನು ರಕ್ಷಿಸಿದ್ದಾರೆ. ನಂತರ ಚಂದನ್‍ನನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಸಾರ್ವಜನಿಕರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಚಂದನ್‍ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ರಾಯಚೂರು: ಲಿಂಗಸುಗೂರಿನ ಜನತಾ ಕಾಲೋನಿಯಲ್ಲಿ ಮುಸುಕುಧಾರಿ ವೇಷದಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ.
ಲಿಂಗಸುಗೂರು ನಿವಾಸಿ ಶರ್ಮುದ್ದೀನ್ ಹಾಗೂ ಅವನ ಪತ್ನಿ ಮತ್ತು ಮಕ್ಕಳು ಬಂಧಿತ ಆರೋಪಿಗಳು. ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿ ನಾಲ್ಕು ಜನರಿಂದ ಈ ಕೃತ್ಯ ನಡೆದಿದೆ. ಆಸಿಡ್ ದಾಳಿಗೆ ಒಳಗಾದ ಮಹಿಳೆ ಶರಣಮ್ಮ ಮುಖ, ಕೈ-ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿವೆ. ಗಾಯಾಳುವನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರೆದಿದೆ.
ಶರ್ಮುದ್ದಿನ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ಕಾರಣಕ್ಕೆ ಶರ್ಮುದ್ದಿನ್ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತ ಪತ್ನಿ ಹಾಗು ಇಬ್ಬರು ಮಕ್ಕಳು ಭಾನುವಾರ ಬಹಿರ್ದೆಸೆಗೆ ತೆರಳಿದ ಮಹಿಳೆ ಮೇಲೆ ಹಲ್ಲೆ ಮಾಡಿ ಆಸಿಡ್ ಎರಚಿ ಪರಾರಿಯಾಗಿದ್ದರು.
ಘಟನೆ ಹಿನ್ನೆಲೆಯಲ್ಲಿ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.