Tag: ಆಸ್ಕರ್ ಫೆರ್ನಾಂಡೀಸ್

  • ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಟೀಲ್

    ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಟೀಲ್

    ಮಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

    ಆಸ್ಕರ್‍ ರನ್ನು ಕಂಡ ಬಳಿಕ ಕುಟುಂಬಿಕರ ಜೊತೆ ಮಾತನಾಡಿ ಧೈರ್ಯ ತುಂಬಿದ ನಳಿನ್ ಕುಮಾರ್ ಕಟೀಲ್ ಅವರು ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಆಸ್ಕರ್ ಒಬ್ಬ ಹಿರಿಯ ರಾಜಕೀಯ ಮುತ್ಸದ್ದಿ, ಸಜ್ಜನಿಕೆಯ ರಾಜಕಾರಣಕ್ಕೆ ಹೆಸರಾದವರು. ಆರೋಗ್ಯದಲ್ಲಿ ಕಂಡು ಬಂದ ಏರುಪೇರಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಧರ್ಮಸ್ಥಳದ ಪ್ರಸಾದ ನೀಡಿ ಆಸ್ಕರ್ ಫೆರ್ನಾಂಡಿಸ್ ಚೇತರಿಕೆಗೆ ಪ್ರಾರ್ಥಿಸಿದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

    ಆಸ್ಪತ್ರೆಗೆ ದಾಖಲಾದ ದಿನದಿಂದ ಇವತ್ತು ಅವರ ಆರೋಗ್ಯ ಸುಧಾರಿಸ್ತಾ ಇದೆ, ಶೀಘ್ರ ಗುಣಮುಖರಾಗಿ ಹೊರಗೆ ಬರಲಿ ಎಂದು ಪ್ರಾರ್ಥನೆ ಮಾಡುತ್ತೇವೆ. ರಾಜ್ಯಸಭೆಯಲ್ಲಿ ಅವರ ಮಾರ್ಗದರ್ಶನ ಇನ್ನಷ್ಟು ಕಾಲ ಸಿಗಲಿ ಎಂದು ಬೇಡಿಕೊಳ್ಳುತ್ತೇವೆ. ವೈದ್ಯರ ಜೊತೆಗೂ ಮಾತನಾಡಿದ್ದೇವೆ, ಅವರ ಆರೋಗ್ಯ ಸುಧಾರಿಸುತ್ತಾ ಇದೆ ಎಂದಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

  • ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ಸುಧಾರಿಸಲು ದೇವಸ್ಥಾನ, ಚರ್ಚ್, ಮಸೀದಿಯಲ್ಲಿ ಪ್ರಾರ್ಥನೆ

    ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ಸುಧಾರಿಸಲು ದೇವಸ್ಥಾನ, ಚರ್ಚ್, ಮಸೀದಿಯಲ್ಲಿ ಪ್ರಾರ್ಥನೆ

    ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

    ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಉದ್ಯಾವರ ಮಹಾಗಣಪತಿ ದೇವಸ್ಥಾನ ಸಹಿತವಾಗಿ ವಿವಿಧ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳಲ್ಲಿ ಪ್ರಾರ್ಥನೆ, ಹರಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಆಸ್ಕರ್ ಅವರು ಎಲ್ಲರ ಆಜಾತಶತ್ರು ಎಂದರು.

    ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮುನ್ನಡೆಸಿದ್ದಾರೆ. ಜಾತಿ, ಮತ, ಧರ್ಮ, ಪಕ್ಷ ಭೇಧ ಮರೆತು ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಪಕ್ಷ, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟಕ್ಕೆ ಇನ್ನೂ ಬೇಕಿದೆ. ಅವರಿಗಾಗಿ ಎಲ್ಲೆಡೆ ಪ್ರಾರ್ಥನೆ ನಡೆಯುತ್ತಿದೆ ಎಂದು ಹೇಳಿದರು. 2 ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಆಪ್ತರ ಅಭಿಮಾನಿಗಳು ಕಾಂಗ್ರೆಸ್ ನಾಯಕರು ದೇವರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಆಸ್ಕರ್ ಆರೋಗ್ಯಕ್ಕಾಗಿ ಅನಂತೇಶ್ವರ ದೇವರಿಗೆ ಪೂಜೆ – ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರಾರ್ಥನೆ

    ಜಿಲ್ಲಾ ಬಿಜೆಪಿ ಅಧ್ಯಕ್ಷ ಪೂಜಾರಿ ಸುರೇಶ್ ನಾಯಕ್ ಆಸ್ಕರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿಕೊಟ್ಟು ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ