Tag: ಆಸ್ತಿ ಜಪ್ತಿ

  • Bengaluru | ಬಿಡಿಎ ಭರ್ಜರಿ ಕಾರ್ಯಾಚರಣೆ – 8.20 ಕೋಟಿ ಮೌಲ್ಯದ ಆಸ್ತಿ ಜಪ್ತಿ

    Bengaluru | ಬಿಡಿಎ ಭರ್ಜರಿ ಕಾರ್ಯಾಚರಣೆ – 8.20 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಸಿದೆ. ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಜೆ.ಪಿ ನಗರದ 9ನೇ ಫೇಸ್, 2ನೇ ಬ್ಲಾಕ್‌ನಲ್ಲಿ 8.20 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

    ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ ಹೋಬಳಿ, ಆಲಹಳ್ಳಿ ಗ್ರಾಮದ ಸರ್ವೆ ನಂ. 84/1ರಲ್ಲಿನ ನಿವೇಶನ ಸಂಖ್ಯೆ 34, 73, 74, 114 ರಲ್ಲಿ ಅನಧಿಕೃ ನಿರ್ಮಾಣಗಳನ್ನು ತೆರವುಗೊಳಿಸಿ, 7340 ಚದರ ಅಡಿ ವಿಸ್ತೀರ್ಣದ ಸುಮಾರು 8.20 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಶಪಡಿಸಿಕೊಂಡಿದೆ. ಇದನ್ನೂ ಓದಿ: ಅವಧಿಗೂ ಮುನ್ನ ಅರ್ಧದಷ್ಟು ಭರ್ತಿಯಾದ ಟಿಬಿ ಡ್ಯಾಂ – ಜು.1ಕ್ಕೆ ಕಾಲುವೆಗೆ ನೀರು ಬಿಡುಗಡೆ ಸಾಧ್ಯತೆ

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ದಕ್ಷಿಣ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸ್ಥಳೀಯ ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಇದನ್ನೂ ಓದಿ:  ಸೈಬರ್‌ ಪೊಲೀಸರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್‌ – ಖರ್ತನಾಕ್‌ ಲೇಡಿ ಸೇರಿ 7 ಲಕ್ಷ ಸುಲಿಗೆ ಮಾಡಿದ್ದ ಐವರು ಅರೆಸ್ಟ್‌

  • ಮಲ್ಯ, ಮೋದಿ, ಚೋಕ್ಸಿಯ 18,170 ಕೋಟಿ ರೂ. ಆಸ್ತಿ ಜಪ್ತಿ

    ಮಲ್ಯ, ಮೋದಿ, ಚೋಕ್ಸಿಯ 18,170 ಕೋಟಿ ರೂ. ಆಸ್ತಿ ಜಪ್ತಿ

    ನವದೆಹಲಿ: ಬ್ಯಾಂಕುಗಳಿಗೆ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ.

    ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ 18,170 ಕೋಟಿ ರೂ. ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‍ಎ ಕಾಯ್ದೆ ಅಡಿ ಜಪ್ತಿ ಮಾಡಿದೆ.

    ಈ ಮೂಲಕ ಮೂವರಿಂದ ಬ್ಯಾಂಕ್‍ಗಳಿಗೆ ಆಗಿರುವ ನಷ್ಟದ ಶೇ.80ರಷ್ಟು ಮೊತ್ತವನ್ನು ಜಪ್ತಿ ಮಾಡಿದಂತಾಗಿದೆ. ಇದರಲ್ಲಿ 9,371 ಕೋಟಿ ರೂ.ಗಳನ್ನು ಬ್ಯಾಂಕ್ ಗಳಿಗೆ ಒಪ್ಪಿಸಲಾಗಿದೆ ಎಂದು ಇಡಿ ಟ್ವಿಟ್ಟರ್ ನಲ್ಲಿ ತಿಳಿಸಿದೆ. ಇದನ್ನೂ ಓದಿ: ಸ್ಫೋಟಕ ಬಳಸಿ ನೀರವ್ ಮೋದಿಯ 100 ಕೋಟಿ ಮೌಲ್ಯದ ಬಂಗಲೆ ಧ್ವಂಸ- ವಿಡಿಯೋ ನೋಡಿ

    ವಿಜಯ್ ಮಲ್ಯ ಹಾಗೂ ನೀರವ್ ಮೋದಿ, ಭಾರತದ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ದೇಶ ಬಿಟ್ಟು ಪರಾರಿಯಾಗಿ ಇದೀಗ ಲಂಡನ್‍ನಲ್ಲಿ ನೆಲೆಸಿದ್ದಾರೆ. ಇಬ್ಬರನ್ನು ದೇಶಕ್ಕೆ ಕರೆತರಲು ಭಾರತ ಸರ್ಕಾರ ಇಂಗ್ಲೆಂಡ್ ಕೋರ್ಟ್‍ನಲ್ಲಿ ಕಾನೂನು ಹೋರಾಟ ನಡೆಸುತ್ತಿದೆ. ಡೊಮಿನಿಕಾದಲ್ಲಿ ಸಿಕ್ಕಿ ಬಿದ್ದಿರುವ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿದೆ. ಡೊಮಿನಿಕಾ ಸರ್ಕಾರ ಚೋಕ್ಸಿಯನ್ನು ನಿಷೇಧಿತ ವಲಸಿಗ ಎಂದು ಘೋಷಿಸಿದ್ದು, ಭಾರತದ ಕಾನೂನು ಹೋರಾಟಕ್ಕೆ ಬಲ ಬಂದಿದೆ.

  • ಜನರಿಗೆ ಕೋಟ್ಯಂತರ ರೂ. ವಂಚನೆ- ಅಧಿಕಾರಿಗಳಿಂದ ಆಸ್ತಿ ಜಪ್ತಿ

    ಜನರಿಗೆ ಕೋಟ್ಯಂತರ ರೂ. ವಂಚನೆ- ಅಧಿಕಾರಿಗಳಿಂದ ಆಸ್ತಿ ಜಪ್ತಿ

    ಧಾರವಾಡ: ಅಧಿಕ ಬಡ್ಡಿ ನೀಡುವುದಾಗಿ ಜನರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ ಹರ್ಷಾ ಎಂಟಪ್ರ್ರೈಸಸ್ ಮಾಲೀಕರಾದ ಖಾಸನೀಸ್ ಸಹೋದರರಿಗೆ ಸೇರಿದ ಆಸ್ತಿಯನ್ನು ಧಾರವಾಡ ಉಪವಿಭಾಗದ ಅಧಿಕಾರಿಗಳ ನೇತೃತ್ವದಲ್ಲಿ ಜಪ್ತಿ ಮಾಡಲಾಯಿತು.

    ಹುಬ್ಬಳ್ಳಿಯ ಬೈರಿದೇವರಕೊಪ್ಪ ಬಳಿಯ 1 ಗುಂಟೆಯಲ್ಲಿರುವ ಪ್ಲಾಟ್ ಜಪ್ತಿ ಮಾಡಿದ್ದಾರೆ. ಧಾರವಾಡ ಉಪವಿಭಾಗ ಅಧಿಕಾರಿ ಮಹ್ಮದ್ ಜುಬೇರ್ ಹಾಗೂ ತಹಶೀಲ್ದಾರ್ ಶಶೀಧರ ಮಾಡ್ಯಾಳ ನೇತೃತ್ವದಲ್ಲಿ ಜಪ್ತಿ ಮಾಡಿದ್ದಾರೆ.

    ಕಲಘಟಗಿಯಲ್ಲಿ ಹರ್ಷಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಗಳನ್ನು ಖಾಸನೀಸ್ ಸಹೋದರರಾದ ಸತ್ಯಭೋದ ಖಾಸ್‍ನೀಸ್, ಸಂಜೀವ ಖಾಸನೀಸ್ ಹಾಗೂ ಶ್ರೀಕಾಂತ್ ಖಾಸ್‍ನೀಸ್ ಎಂಬವರು ವಂಚನೆ ಮಾಡಿದ್ದು, 2017 ರಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು.

    ಈ ಪ್ರಕರಣವನ್ನು ಸಿಐಡಿ ಸಂಸ್ಥೆಯಿಂದ ಕೂಡ ತನಿಖೆ ಕೈಗೊಳ್ಳಲಾಗಿತ್ತು. ಸಿಐಡಿ ವರದಿಯಲ್ಲಿ ಉಲ್ಲೇಖಿತ ಆಸ್ತಿಗಳನ್ನು ಜಪ್ತಿ ಮಾಡಲಾಗುತ್ತಿದ್ದು, ಹುಬ್ಬಳ್ಳಿ, ಕಲಘಟಗಿ, ಹಾಗೂ ಬಳ್ಳಾರಿಯಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿಕೊಳ್ಳಲಾಗಿದೆ.

  • ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಕೇಂದ್ರ ಸರ್ಕಾರದಿಂದ ಶಾಕ್!

    ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಕೇಂದ್ರ ಸರ್ಕಾರದಿಂದ ಶಾಕ್!

    – ಜಮಾತ್-ಇ-ಇಸ್ಲಾಂನ 70 ಪ್ರತ್ಯೇಕತಾವಾದಿಗಳ ಆಸ್ತಿ ಜಪ್ತಿ

    ನವದೆಹಲಿ: ಪುಲ್ವಾಮ ದಾಳಿ ಮಾಡಿದ ಭಯೋತ್ಪಾದಕರಿಗೆ ಹಣ ನೀಡಿರುವ ಆರೋಪದ ಮೇಲೆ ಕಾಶ್ಮೀರದ 70 ಪ್ರತ್ಯೇಕತಾವಾದಿಗಳ ಆಸ್ತಿಗಳನ್ನು ಕೇಂದ್ರ ಸರ್ಕಾರ ಜಪ್ತಿ ಮಾಡಿದೆ. ಅಲ್ಲದೆ ಉಗ್ರರಿಗೆ ಬೆಂಬಲಿಸುವ ಎಲ್ಲಾ ಪ್ರತ್ಯೇಕವಾದಿಗಳ ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

    ಹೌದು, ಫೆ. 14ರಂದು ನಡೆದ ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಗೆ ಈ ಪ್ರತ್ಯೇಕತಾವಾದಿಗಳು ಹಣ ನೀಡಿದ್ದರು. ಅಲ್ಲದೆ ಭಾರತದಲ್ಲೇ ಇದ್ದುಕೊಂಡು ಉಗ್ರರಿಗೆ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಹಣವನ್ನು ನೀಡಿ ಬೆಂಬಲಿಸುತ್ತಿದ್ದರು ಎಂಬ ಆರೋಪದ ಮೇಲೆ ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಸೆಕ್ಷನ್ 42 ಸಂಬಂಧಿಸಿದಂತೆ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ ಅಡಿಯಲ್ಲಿ ಈ ಆದೇಶವನ್ನು ಮಾಡಲಾಗಿದೆ. ದಿನಕ್ಕೊಂದು ಶಾಕ್ ನೀಡುತ್ತಿರುವ ಸರ್ಕಾರದ ನಡೆಗೆ ಪ್ರತ್ಯೇಕತಾವಾದಿಗಳು ಇದೀಗ ಕಂಗಾಲಾಗಿದ್ದಾರೆ.

    ಸೆಕ್ಷನ್ 42 ರ ಪ್ರಕಾರ, ಕೇಂದ್ರವು “ಸೆಕ್ಷನ್ 7, ಸೆಕ್ಷನ್ 8 ಈ ಎರಡು ಸೆಕ್ಷನ್ ಅಡಿಯಲ್ಲಿ ಬಳಸಿಕೊಳ್ಳಬಹುದಾದ ಎಲ್ಲಾ ಅಧಿಕಾರವನ್ನು ಪ್ರತಿನಿಧಿಸಬಹುದು”. ಸೆಕ್ಷನ್ 7ರಲ್ಲಿ ಕಾನೂನು ಬಾಹಿರ ಸಂಘದ ನಿಧಿ ಬಳಸುವುದನ್ನು ನಿಷೇಧಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡಲಾಗಿದೆ. ಹಾಗೆಯೇ ಸೆಕ್ಷನ್ 8ರ ಪ್ರಕಾರ ಕಾನೂನು ಬಾಹಿರ ಉದ್ದೇಶಕ್ಕಾಗಿ ಬಳಸಲಾಗುವ ಸ್ಥಳಗಳ ಮೇಲೆ ಕ್ರಮ ತೆಗೆದುಕೊಳ್ಳಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಂಘಟನೆ ನಿಷೇಧ:
    ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ನೆರವು ನೀಡಿ ಯುವಕರಲ್ಲಿ ದೇಶ ವಿರೋಧಿ ಭಾವನೆ ಬಿತ್ತುತ್ತಿರುವ ಆರೋಪದ ಮೇರೆಗೆ ಕೇಂದ್ರ ಸರ್ಕಾರ ಜಮಾತ್-ಇ-ಇಸ್ಲಾಮಿ (ಜೆಇಐ) ಸಂಘಟನೆಯನ್ನು ನಿಷೇಧ ಮಾಡಿದೆ. ಕಾನೂನು ಬಾಹಿರ ಚಟುವಟಿಕೆ ಕಾಯ್ದೆ 1967ರ ಸೆಕ್ಷನ್ 3ರ ಅಡಿಯಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿತ್ತು.

    ಮುಂದಿನ ಐದು ವರ್ಷಗಳ ಕಾಲ ಈ ಸಂಘಟನೆಯನ್ನು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶಾದ್ಯಂತ ನಿಷೇಧಿಸಲಾಗಿದ್ದು, ಸಂಘಟನೆಯು ಯಾವುದೇ ರೀತಿಯ ಬಹಿರಂಗ ಸಭೆ ಕಾರ್ಯಕ್ರಮ ನಡೆಸಿದರೂ ಅದು ಕಾನೂನು ಬಾಹಿರ ಎಂದು ಸೂಚಿಸಿದೆ. 1953ರಲ್ಲಿ ಬಂದ ಜೆಇಐ ಸಂಘಟನೆ ಕಾಶ್ಮೀರದಲ್ಲಿ ಪ್ರಮುಖ ಪ್ರತ್ಯೇಕತಾವಾದಿ ಸಂಘಟನೆಯಾಗಿತ್ತು. 1987ರವರೆಗೂ ಈ ಸಂಘಟನೆ ಕಾಶ್ಮೀರದ ಎಲ್ಲ ರೀತಿಯ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುತ್ತಿತ್ತು. ಅಲ್ಲದೆ ಕಾಶ್ಮೀರದ ಹುರಿಯತ್ ಮುಖಂಡ ಸೈಯ್ಯದ್ ಅಲಿ ಶಾ ಗಿಲಾನಿ ಕೂಡ ಈ ಹಿಂದೆ ಇದೇ ಸಂಘಟನೆ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. 1989ರಲ್ಲಿ ಮೊದಲ ಬಾರಿಗೆ ಉಗ್ರ ಸಂಘಟನೆಗಳೊಂದಿಗೆ ಕೈ ಜೋಡಿಸಿದ್ದ ಈ ಜೆಇಐ ಸಂಘಟನೆ ಚುನಾವಣೆಗಳಿಂದ ದೂರ ಉಳಿದಿತ್ತು. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತ್ಯೇಕತಾವಾದಿಗಳ ಪರ ಕಣಿವೆ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಜಯ್ ಮಲ್ಯಗೆ ಅರುಣ್ ಜೇಟ್ಲಿಯಿಂದ ಶಾಕ್!

    ನವದೆಹಲಿ: ಇಂದಿನ ಬಜೆಟ್‍ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್ಥಿಕ ಅಪರಾಧಿಗಳ ದಂಡನೆಗೆ ಕ್ರಮ ಕೈಗೊಳ್ಳುವ ಬಗ್ಗೆ ಘೋಷಸಿದ್ದು, ಸಾಲ ಮಾಡಿ ಕಾನೂನು ಕಣ್ತಪ್ಪಿಸಿ ದೇಶ ಬಿಟ್ಟು ಹೋದವರ ಆಸ್ತಿ ಪಾಸ್ತಿ ಜಪ್ತಿಗೆ ಸರ್ಕಾರ ಹೊಸ ಕಾನೂನು ತರಲಿದೆ ಎಂದು ಹೇಳಿದ್ದಾರೆ. ಇದರಿಂದ ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ವಿದೇಶಕ್ಕೆ ಹಾರಿರುವ ವಿಜಯ್ ಮಲ್ಯಗೆ ದೊಡ್ಡ ಶಾಕ್ ಸಿಕ್ಕಿದೆ.

    ವಿದೇಶದಲ್ಲಿರುವ ಮಲ್ಯರಿಂದ ಸಾಲ ಹಿಂಪಡೆಯಲು ಬ್ಯಾಂಕ್‍ಗಳು ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ಕಾನೂನಿನ ಕಣ್ತಪ್ಪಿಸಿ ಕೆಲವರು ದೇಶ ಬಿಟ್ಟು ಹೋಗಿರುವ ಉದಾಹರಣೆಗಳಿವೆ. ಹೀಗಾಗಿ ಸರ್ಕಾರ ಇಂತಹ ವ್ಯಕ್ತಿಗಳ ಆಸ್ತಿ ಜಪ್ತಿ ಮಾಡಲು ಕಾನೂನು ರೂಪಿಸಲಿದೆ ಎಂದು ಅರುಣ್ ಜೇಟ್ಲಿ ಬಜೆಟ್ ಮಂಡನೆ ವೇಳೆ ಹೇಳಿದ್ರು.

    ಉದ್ಯಮಿ ವಿಜಯ ಮಲ್ಯ ಕಳೆದ ವರ್ಷ ಮಾರ್ಚ್‍ನಲ್ಲಿ ವಿದೇಶಕ್ಕೆ ಹಾರಿದ್ರು. ಹಲವು ಬ್ಯಾಂಕ್‍ಗಳು ಮಲ್ಯಾರಿಂದ 9 ಸಾವಿರ ಕೋಟಿ ರೂ. ಆಸ್ತಿ ಹಿಂಪಡೆಯಲು ಸಾಕಷ್ಟು ಪ್ರಯತ್ನ ನಡೆಸಿದ್ದರೂ ಮಲ್ಯರನ್ನು ಭಾರತಕ್ಕೆ ಕರೆತರಲು ಸಾಧ್ಯವಾಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಮಲ್ಯ ಹಲವು ಬಾರಿ ನೋಟಿಸ್ ಕೂಡ ನೀಡಲಾಗಿದೆ.