Tag: ಆಸ್ತಿ ನೋಂದಣಿ

  • ಆಸ್ತಿ ನೋಂದಣಿ ಮಾರ್ಗಸೂಚಿ ದರ ಹೆಚ್ಚಳ – ಅಕ್ಟೋಬರ್‌ 1 ರಿಂದ ಜಾರಿ: ಕೃಷ್ಣಭೈರೇಗೌಡ

    ಆಸ್ತಿ ನೋಂದಣಿ ಮಾರ್ಗಸೂಚಿ ದರ ಹೆಚ್ಚಳ – ಅಕ್ಟೋಬರ್‌ 1 ರಿಂದ ಜಾರಿ: ಕೃಷ್ಣಭೈರೇಗೌಡ

    ಬೆಂಗಳೂರು: ಕಳೆದ 5 ವರ್ಷಗಳಿಂದ ಪರಿಷ್ಕರಣೆ ಆಗದೇ ಇದ್ದ ಆಸ್ತಿ ನೋಂದಣಿ ಮಾರ್ಗಸೂಚಿ ದರವನ್ನ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಅಕ್ಟೋಬರ್ 1 ರಿಂದಲೇ ಪರಿಷ್ಕೃತ ಮಾರ್ಗಸೂಚಿ ದರ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byregowda) ತಿಳಿಸಿದರು.

    ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದ ಮಾರ್ಗಸೂಚಿ ದರ ಹೆಚ್ಚಳ ಮಾಡಿರಲಿಲ್ಲ‌. ನಿಯಮದ ‌ಪ್ರಕಾರ ಪ್ರತಿ ವರ್ಷ ಮಾರ್ಗಸೂಚಿ ದರ ಹೆಚ್ಚಳ ಮಾಡಬೇಕು. ಹೀಗಾಗಿ ದರ ಹೆಚ್ವಳ ಮಾಡುತ್ತಿದ್ದೇವೆ. ಇಡೀ ರಾಜ್ಯಕ್ಕೆ ಒಂದೇ ರೀತಿಯಲ್ಲಿ ಮಾರ್ಗಸೂಚಿ ದರ ಹೆಚ್ಚಳ ಮಾಡುತ್ತಿಲ್ಲ. ಪ್ರದೇಶಗಳ ಅನುಗುಣವಾಗಿ ದರ ಹೆಚ್ಚಳ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ: ದಿನೇಶ್ ಗುಂಡೂರಾವ್

    ಎಲ್ಲಾ ಕಡೆ ಮಾರ್ಗಸೂಚಿ ದರ ಏರಿಕೆ ಆಗಲ್ಲ. ಕೆಲವು ಕಡೆ ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಳ ಇದ್ದರೆ ದರ ಪರಿಷ್ಕರಣೆ ಆಗಲ್ಲ. ಆದರೆ ಮಾರುಕಟ್ಟೆ ದರಕ್ಕಿಂತ ಬಹಳ ಕಡಿಮೆ ಮಾರ್ಗಸೂಚಿ ದರ ಇದ್ದರೆ ಅಲ್ಲಿ ದರ ಹೆಚ್ಚಳ ಆಗಲಿದೆ. ಹೈವೆ, ವಿಮಾನ ನಿಲ್ದಾಣ, ಐಟಿ-ಬಿಟಿ ಬಂದಿರೋ ಕಡೆಯೇ ಮಾರ್ಗಸೂಚಿ ದರ ಕಡಿಮೆ ಇದೆ. ಇಂತಹ ಕಡೆ ಮಾರ್ಗಸೂಚಿ ದರ ಹೆಚ್ಚಳ ಆಗಲಿದೆ ಎಂದು ತಿಳಿಸಿದರು.

    ಒಟ್ಟಾರೆಯಾಗಿ ಸರಾಸರಿ 25% ರಿಂದ 30% ಮಾರ್ಗಸೂಚಿ ದರ ಏರಿಕೆ ಆಗಲಿದೆ. ಈ ಬಗ್ಗೆ ಆಕ್ಷೇಪ ಇದ್ದರೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆ ಗಮನಿಸಿ ನಂತರ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಬರ್ಮುಡಾ, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ!

    ಮಾರ್ಗಸೂಚಿ ದರ ಏರಿಕೆಯಿಂದ ಒಂದಷ್ಟು ವ್ಯತ್ಯಾಸ ಆಗಬಹುದು. ಆದರೆ ಅದು ಎರಡು ತಿಂಗಳ ಬಳಿಕ ಸರಿ ಆಗಲಿದೆ. ಆಸ್ತಿ ‌ಮಾರಾಟದ ವೇಳೆ ಬ್ಲ್ಯಾಕ್ ಮನಿ ಬಳಕೆ ಆಗುತ್ತಿದೆ. ಇದೆಲ್ಲವನ್ನೂ ತಡೆಯಬೇಕು‌. ಹೀಗಾಗಿ‌ ಮಾರ್ಗಸೂಚಿ ದರ ಹೆಚ್ಚಳ ಮಾಡಲಾಗುತ್ತಿದೆ ಎಂದರಲ್ಲದೇ, ಮಾರ್ಗಸೂಚಿ ದರ ಹೆಚ್ಚಳದಿಂದ ಸರ್ಕಾರಕ್ಕೆ ವಾರ್ಷಿಕ 2.5 ಸಾವಿರ ಕೋಟಿ ಹೆಚ್ಚು ರಾಜಸ್ವ ಸಂಗ್ರಹ ಆಗಲಿದೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಸಮಸ್ಯೆಗಳು ಶೀಘ್ರ ಪರಿಹಾರ: ಆರ್. ಅಶೋಕ್

    ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಸಮಸ್ಯೆಗಳು ಶೀಘ್ರ ಪರಿಹಾರ: ಆರ್. ಅಶೋಕ್

    ಬೆಂಗಳೂರು: ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ಶೀಘ್ರವಾಗಿ ಸರಿಪಡಿಸಬೇಕು, ಸರ್ವರ್ ಮತ್ತು ಒಟಿಪಿ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯ ಸಮಯದಲ್ಲಿ ಸರ್ವರ್ ಮತ್ತು ಒಟಿಪಿಯಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿನ ಸಮಸ್ಯೆಗಳ ಬಗ್ಗೆ ವಿಸ್ತಾರವಾಗಿ ಚರ್ಚೆ ನಡೆಸಲಾಗಿದೆ.

    ಶಿವರಾಮ್ ಕಾರಂತ್ ಬಡಾವಣೆಯಲ್ಲಿನ ಸರ್ಕಾರಿ ಜಮೀನನ್ನು ಬಿಡಿಎಗೆ ಹಸ್ತಾಂತರಿಸುವ ಕುರಿತಂತೆ ಚರ್ಚೆ:
    ಶಿವರಾಮ್ ಕಾರಂತ್ ಬಡಾವಣೆಯ ಮಧ್ಯೆ ಇರುವ ಸುಮಾರು 400 ಎಕರೆಗೂ ಹೆಚ್ಚು ಸರ್ಕಾರಿ ಜಮೀನುಗಳನ್ನು ಬಿಡಿಎಗೆ ಹಸ್ತಾಂತರಿಸುವ ಕುರಿತಂತೆ ಚರ್ಚೆ ನಡೆಸಿ, ಅದಕ್ಕೆ ಸರಿಯಾದ ರಸ್ತೆ ಸಂಪರ್ಕ ಕಲ್ಪಿಸುವಂತೆ ಕಂದಾಯ ಸಚಿವ ಆರ್. ಅಶೋಕ್ ಆದೇಶ ನೀಡಿದರು. ಸರಿಯಾದ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಿದರೆ ಮಾತ್ರ ಬಡಾವಣೆಯ ಅಭಿವೃದ್ಧಿ ಸಾಧ್ಯ, ಆ ಕಾರಣಕ್ಕೆ ಶೀಘ್ರವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

    ಈ ಸಭೆಯಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಬಿಡಿಎ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಮನ್ ಸೆನ್ಸ್ ಇಲ್ಲವಾ? – ಬೆಂಬಲಿಗನ ತಲೆಗೆ ಡಿಕೆಶಿ ಏಟು