Tag: ಆಸ್ತಿ

  • ಹೆತ್ತ ತಾಯಿಯ ಕತ್ತು ಸೀಳಿ ಕೊಂದು, ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಗ

    ಹೆತ್ತ ತಾಯಿಯ ಕತ್ತು ಸೀಳಿ ಕೊಂದು, ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಗ

    ಮುಂಬೈ: ಆಸ್ತಿ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ 21 ವರ್ಷದ ಯುವಕನೊಬ್ಬ ತನ್ನ 46 ವರ್ಷದ ತಾಯಿಯ ಕತ್ತು ಸೀಳಿ ಹತ್ಯೆಗೈದು, ತಾನೂ ಕೂಡ ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.

    KILLING CRIME

    ಆರೋಪಿಯನ್ನು ಜಯೇಶ್ ಪಾಂಚಾಲ್ ಎಂದು ಗುರುತಿಸಲಾಗಿದ್ದು, ಮುಲುಂಡ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಹಳಿಗೆ ಹಾರಿ ಸಾಯಲು ಯತ್ನಿಸಿದ ಜಯೇಶ್ ಪಾಂಚಾಲ್‍ನನ್ನು ರೈಲ್ವೆ ಪೊಲೀಸ್ (GRP) ಅಧಿಕಾರಿಯೊಬ್ಬರು ರಕ್ಷಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ ಮನೆಗೆ ಬೆಂಕಿ, ವಾಹನಗಳು ಜಖಂ – ಹೊಸ ಸರ್ಕಾರ ರಚನೆಗೆ ಅಸ್ತು

    POLICE JEEP

    ವರ್ಧಮಾನ್ ನಗರದ ಹೌಸಿಂಗ್ ಸೊಸೈಟಿಯಲ್ಲಿದ್ದ ಜಯೇಶ್ ಪಾಂಚಾಲ್ ಅವರ ಫ್ಲಾಟ್‍ನ ಹೊರಗೆ ಆಗಿದ್ದ ರಕ್ತದ ಕಲೆಗಳನ್ನು ಕಂಡು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ನೋಡಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಗುಜರಾತಿ ಭಾಷೆಯಲ್ಲಿ ಬರೆದ ಚೀಟಿ ಹಾಗೂ ಚಾಕು ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿಯ ನಾವುಂದ ಗ್ರಾಮದಲ್ಲಿ ನೆರೆ – ಮನೆ ತೊರೆಯಲು ಜನರ ನಕಾರ, ಕಾಳಜಿ ಕೇಂದ್ರ ಖಾಲಿ

    ಬಳಿಕ ಪೊಲೀಸರು ಮೃತ ಮಹಿಳೆಯ ಪತಿಗೆ ಕರೆ ಮಾಡಿದ್ದು, ಈ ವೇಳೆ ಕೆಲವು ಆಸ್ತಿ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ ತಮ್ಮ ಮಗ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ. ಇದೀಗ ಸಣ್ಣ-ಪುಟ್ಟ ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆಂಡತಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತಿ – ಆಸ್ತಿಗಾಗಿ ಅತ್ತೆಗೂ ಕಾಟ

    ಹೆಂಡತಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತಿ – ಆಸ್ತಿಗಾಗಿ ಅತ್ತೆಗೂ ಕಾಟ

    ಬೆಂಗಳೂರು: ಈ ತಾಯಿ ಮಗನನ್ನು ಕಳೆದುಕೊಂಡು ಇಳಿವಯಸ್ಸಿನಲ್ಲೂ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸೊಸೆಯ ಕಾಟದಿಂದಾಗಿ ಬದುಕೇ ಬರಡಾಗಿದೆ. ಸೊಸೆ ಎಂದು ಬಂದ ಆ ಖತರ್ನಾಕ್ ಲೇಡಿ ಇಡೀ ಕುಟುಂಬದ ನೆಮ್ಮದಿಯನ್ನೇ ಬೀದಿ ಪಾಲು ಮಾಡಿದ್ದಾಳೆ.

    ಹೌದು ಈಕೆಯ ಹೆಸರು ರೇಣುಕಮ್ಮಾ. ವಯಸ್ಸು 60 ದಾಟಿದೆ. ಕೆಂಗೇರಿ ಬಳಿಯ ಸೂಲಿಕೆರೆಯಲ್ಲಿ ವಾಸವಾಗಿರುವ ಇವರ ಮಗ ಇತ್ತೀಚೆಗಷ್ಟೇ ಹೆಂಡತಿಯ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಲೂ ತನ್ನ ಕಂದನ ನೆನೆದು ಈ ಜೀವ ಕಣ್ಣೀರು ಹಾಕುತ್ತಿದೆ. ಇಡೀ ಬದುಕೇ ಈಗ ಅಲ್ಲೋಲಕಲ್ಲೋಲವಾಗಿದೆ.

    ಹೆಂಡತಿಯ ಕಾಟದಿಂದ ಬದುಕೇ ಸಾಕು ಎಂದು ಮಗ ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಸೊಸೆಯ ಕಾರಣದಿಂದ ಈ ಬಡ ಜೀವ ಹೆತ್ತ ಮಗುವನ್ನೂ ಕಳೆದುಕೊಂಡಿದೆ. ಬದುಕು ದುಸ್ತರವಾಗಿದೆ. ಇವರ ಮಗ ಮಂಜುನಾಥ್ ಜೂನ್ 1 ರಂದು ಮನನೊಂದು ಡೆತ್ ನೋಟ್ ಬರೆದಿಟ್ಟು ಪ್ರಾಣ ಚೆಲ್ಲಿದ್ದಾರೆ. ಇದಕ್ಕೆಲ್ಲಾ ಕಾರಣವಾಗಿದ್ದೆ ಸೊಸೆ ಅನಸೂಯ.

    ಈ ಅನಸೂಯ ಖತರ್ನಾಕ್ ಲೇಡಿ. ಮದುವೆಯಾಗಿ ಬಂದ ದಿನವೇ ದುಡ್ಡಿಗಾಗಿ ತನ್ನ ಅಸಲಿ ಮುಖವನ್ನು ಗಂಡ ಹಾಗೂ ಅತ್ತೆಗೆ ತೋರಿಸಿದ್ದಾಳೆ. ಮದುವೆಯ ದಿನದಂದೇ ಶುರುವಾದ ಕಲಹ ಸುಮಾರು 3-4 ವರ್ಷಗಳು ನಡೆದಿದೆ. ಕೊನೆಗೆ ಹೆಂಡತಿಯ ಹಿಂಸೆಗೆ ಡೆತ್ ನೋಟ್ ಬರೆದಿಟ್ಟು ಮಂಜುನಾಥ್ ಕೆರೆಗೆ ಹಾರಿ ಪ್ರಾಣಬಿಟ್ಟಿದ್ದಾರೆ. ಇವಳ ಕಾಟ ಎಂಥದ್ದು ಎಂದರೆ, ರೌಡಿಗಳನ್ನು ಮನೆಗೆ ಕರೆಸಿ, ಪ್ರತಿನಿತ್ಯ ಪತಿ ಮಂಜುನಾಥ್ ಹಾಗೂ ತಾಯಿ ರೇಣುಕಮ್ಮಗೆ ದುಡ್ಡು, ಜಮೀನು ಅಂತ ಕಿರುಕುಳ ಕೊಡಿಸುತ್ತಿದ್ದಳು. ಗಂಡ ಸತ್ತ ಬಳಿಕವೂ ಇದೀಗ ಅನಸೂಯ ತನ್ನ ಅತ್ತೆಗೆ ಆಸ್ತಿ ಕೊಡುವಂತೆ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಬೈಕ್ ಜಪ್ತಿ ಮಾಡಿ ವಿಮೆ ಮಾಡಿಸಿದ ಪೊಲೀಸರು – ಕಣ್ಣೀರಿಟ್ಟ ಸವಾರ

    ಜೂನ್ 1ರಂದು ಡೆತ್ ನೋಟ್ ಬರೆದಿಟ್ಟು ಕೆಂಗೇರಿ ಬಳಿಯ ರಾಮಸಂದ್ರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಂಜುನಾಥ್, ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ ಹೆಂಡತಿ ಅನಸೂಯಾ ಕಾರಣ ಎಂದು ಬರೆದಿದ್ದರು. ಅಲ್ಲದೆ ತನ್ನ ಆಸ್ತಿ, ಹಣ ಯಾವುದನ್ನೂ ಹೆಂಡತಿಗೆ ಕೊಡಬಾರದು, ತಾಯಿಗೆ ಕೊಡಬೇಕು ಎಂದು ಹೇಳಿದ್ದರು. ಮಂಜುನಾಥ್ ಜೊತೆಗಿನ ಖಾಸಗಿ ವೀಡಿಯೋ ಮುಂದಿಟ್ಟುಕೊಂಡು ಪುಡಿ ರೌಡಿಗಳ ಜೊತೆ ಸೇರಿ ಬ್ಲಾಕ್‌ಮೇಲ್ ಕೂಡ ಮಾಡುತ್ತಿದ್ದಳು. ಸೈಟು, ಆಸ್ತಿಯನ್ನೆಲ್ಲಾ ತನ್ನ ಹೆಸರಿಗೆ ಬರೆದುಕೊಡುವಂತೆ ಮದುವೆಯ ಮರುದಿನವೇ ಕಿರುಕುಳ ಕೊಟ್ಟಿದ್ದಳು. ಇದರಿಂದ ಮನನೊಂದು ಮಂಜುನಾಥ್ ಒಂದು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವ್ಯವಸ್ಥೆಯನ್ನು ಪ್ರಶ್ನಿಸಿದವರ ವಿರುದ್ಧ ಕೇಸ್ ಹಾಕುವುದು, ಬೆದರಿಸುವುದು ಮಾಡುತ್ತಿದ್ದಾರೆ: ಪ್ರಿಯಾಂಗ್ ವಿರುದ್ಧ ಮಣಿಕಂಠ್ ಕಿಡಿ

    ಈ ಹಿಂದೆ ಮಂಜುನಾಥ್ ಒಂದು ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದರು. ಬಳಿಕ ಅನಸೂಯಾಳನ್ನು ವರಿಸಿಕೊಂಡಿದ್ದರು. ಅನಸೂಯಾಳನ್ನು ಮದುವೆಯಾಗಿ ಕೆಲವೇ ವರ್ಷಕ್ಕೆ ಮನನೊಂದು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಜೈಲಿಗೂ ಹೋಗಿ ಬಂದಿದ್ದ ಮಂಜುನಾಥ್ ಎರಡನೇ ಪತ್ನಿ ಅನಸೂಯಾ, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮತ್ತೆ ಮೃತ ಮಂಜುನಾಥ್ ತಾಯಿ ರೇಣುಕಮ್ಮಾರನ್ನು ಟಾರ್ಗೆಟ್ ಮಾಡಿದ್ದಾಳೆ. ಮಂಜುನಾಥ್ ಆಸ್ತಿ, ಹಣ ಎಲ್ಲವನ್ನೂ ತನಗೆ ಕೊಡುವಂತೆ ಕಿರುಕುಳ ಕೊಡುತ್ತಿದ್ದಾಳೆ. ಯಾರ ಆಶ್ರಯವೂ ಇಲ್ಲದೆ ರೇಣುಕಮ್ಮಾ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಒಟ್ಟು ಆಸ್ತಿ 2300 ಕೋಟಿ: ಸಲ್ಲು ಅರಮನೆಯಲ್ಲಿ ಮಹಾರಾಣಿಯೇ ಇಲ್ಲ

    ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಒಟ್ಟು ಆಸ್ತಿ 2300 ಕೋಟಿ: ಸಲ್ಲು ಅರಮನೆಯಲ್ಲಿ ಮಹಾರಾಣಿಯೇ ಇಲ್ಲ

    ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಆಸ್ತಿಯ ಕುರಿತು ಇದೀಗ ಎಲ್ಲೆಡೆ ಚರ್ಚೆ ಶುರುವಾಗಿದೆ. ವಯಸ್ಸು ಐವತ್ತು ದಾಟಿದರೂ, ಇನ್ನೂ ಸಲ್ಲು ಮದುವೆ ಆಗಿಲ್ಲ. ಲಗ್ನ ಆಗುವುದಕ್ಕೆ ಮನಸ್ಸು ಮಾಡುತ್ತಿಲ್ಲ. ಮದುವೆ ವಿಚಾರ ಎತ್ತಿದರೆ, ಅಲ್ಲಿಂದ ತಪ್ಪಿಸಿಕೊಳ್ಳುತ್ತಾರಂತೆ ಸಲ್ಲುಭಾಯ್. ಹಾಗಾಗಿ ಇವರ ಆಸ್ತಿಗೆ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ : ಪ್ರಶಾಂತ್ ನೀಲ್ -ಜ್ಯೂ.ಎನ್‌ಟಿಆರ್ ವಿವಾಹ ವಾರ್ಷಿಕೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

    ಸಲ್ಮಾನ್ ಖಾನ್ ಅವರ ಒಟ್ಟು ಆಸ್ತಿ 2300 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ. ಅದು ವರ್ಷದಿಂದ ವರ್ಷಕ್ಕೆ ಏರುತ್ತಲೇ ಇರುತ್ತದೆ. ಅಲ್ಲದೇ ಬೆಲೆಬಾಳುವ ಕಾರುಗಳು, ಎಸ್ಟೇಟ್, ಬಹುಮಹಡಿ ಕಟ್ಟಡಗಳು, ಫಾರ್ಮ್ ಹೌಸ್, ವಿದೇಶದಲ್ಲೂ ಅವರು ಹಣ ತೊಡಗಿಸಿದ್ದಾರಂತೆ. ಹಾಗಾಗಿ ವರ್ಷದಿಂದ ವರ್ಷಕ್ಕೆ ನೂರಾರು ಕೋಟಿ ರೂಪಾಯಿ ಇವರ ಆಸ್ತಿಗೆ ಜಮಾ ಆಗುತ್ತಲೇ ಇದೆಯಂತೆ. ಇಷ್ಟೊಂದು ಹಣ ಇರುವಾಗ, ಸಲ್ಲು ಇನ್ನೂ ಯಾಕೆ ಮದುವೆ ಆಗಿಲ್ಲ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಇದನ್ನೂ ಓದಿ : ಯಶ್ ಮುಂದಿನ ಚಿತ್ರ ಯಾರ ಜೊತೆ? ಹೊರಬಿತ್ತು ಬಿಗ್ ನ್ಯೂಸ್

    ಈ ಹಿಂದೆ ಸಂದರ್ಶನೊಂದರಲ್ಲಿ ಸಲ್ಲು ಜಗಮೆಚ್ಚುವ ಮಾತುಗಳನ್ನು ಆಡಿದ್ದರು. ನಾನು ಮದುವೆಯಾದರೂ, ಆಗದೇ ಇದ್ದರೂ ಆಸ್ತಿಯ ಕೆಲವು ಭಾಗ ಜನಸೇವೆಗೆ ಮೀಸಲಿರುತ್ತದೆ. ಹಲವು ಟ್ರಸ್ಟ್ ಗಳಿಗೆ ಹಣ ಸಂದಾಯವಾಗುತ್ತದೆ. ಅದನ್ನು ಜನೋಪಯೋಗಿ ಕೆಲಸಕ್ಕೆ ಬಳಸಲಾಗುವುದು ಎಂದು ಹೇಳಿದ್ದರು. ಅಲ್ಲಿಯೂ ಅವರು ಮದುವೆ ವಿಚಾರವನ್ನು ಪ್ರಸ್ತಾಪ ಮಾಡಲಿಲ್ಲ. ಇದನ್ನೂ ಓದಿ : ಹಾಲಿವುಡ್‌ಗೆ ಹಾರಲಿದ್ದಾರೆ ಬಾಲಿವುಡ್ ರಾಧೆ ಆಲಿಯಾ ಭಟ್

    salman khan

    ಸಲ್ಲು ತಮ್ಮದೇ ಆದ ಪ್ರೊಡಕ್ಷನ್ ಹೌಸ್ ಹೊಂದಿದ್ದಾರೆ. ಆ ಮೂಲಕ ಸಾಕಷ್ಟು ಸಿನಿಮಾಗಳನ್ನು ಮಾಡಿದ್ದಾರೆ. ಇದೀಗ ಕಿಚ್ಚ ಸುದೀಪ್ ಅವರ ಜೊತೆ ಮತ್ತೊಂದು ಸಿನಿಮಾ ಮಾಡುವ ಮಾತಕತೆ ಕೂಡ ನಡೆದಿದೆ. ಈಗಾಗಲೇ ಸುದೀಪ್ ಅವರು ಸಲ್ಮಾನ್ ಅವರಿಗೆ ಕಥೆಯೊಂದನ್ನು ಹೇಳಿದ್ದಾರೆ ಎನ್ನುವ ಸುದ್ದಿ ಕೂಡ ಇದೆ.

  • ಆಸ್ತಿಗಾಗಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ

    ಆಸ್ತಿಗಾಗಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ

    ಧಾರವಾಡ: ಆಸ್ತಿಗಾಗಿ ಹೆತ್ತ ತಾಯಿಯನ್ನೆ ಕ್ರೂರಿ ಮಗನೊಬ್ಬ ಹತ್ಯೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಬೆನ್ನೂರು ಗ್ರಾಮದಲ್ಲಿ ನಡೆದಿದೆ.

    ಶಾಂತವ್ವ ಕಲ್ಲಪ್ಪ ಅಣ್ಣಿಗೇರಿ(65) ವೃದ್ಧೆಯೇ ಹತ್ಯೆಯಾದ ದುರ್ದೈವಿ. ಬಸವರಾಜ್ ಕಲ್ಲಪ್ಪ ಅಣ್ಣಿಗೇರಿ ತಾಯಿಯನ್ನೆ ಕೊಲೆ ಮಾಡಿದ ಮಗ. ಬಸವರಾಜ್ ಕ್ರೂರ ಕೃತ್ಯ ಸ್ಥಳೀಯರಿಗೆ ತಿಳಿದುಬಂದ ತಕ್ಷಣ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಈ ಪರಿಣಾಮ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸಿಐಡಿ ಕಚೇರಿಗೆ ಹೊಸಬಟ್ಟೆ ಸಮೇತ ಆಗಮಿಸಿದ ಆರೋಪಿ ಸದ್ದಾಂ ಫ್ಯಾಮಿಲಿ 

    ಕಾರಣವೇನು?
    ಬಸವರಾಜ್ ನಿತ್ಯವೂ ‘ಆಸ್ತಿಯನ್ನು ನನಗೆ ಕೊಡು’ ಎಂದು ಶಾಂತವ್ವನನ್ನು ಪೀಡಿಸಿ ಕಿರುಕುಳ ನೀಡುತ್ತಿದ್ದ. ಇದಕ್ಕೆ ಶಾಂತವ್ವ ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ ಸೋಮವಾರ(ಇಂದು) ಬಸವರಾಜ್ ಮತ್ತೆ ಆಸ್ತಿಗಾಗಿ ಪೀಡಿಸಿದ್ದು, ಶಾಂತವ್ವನನ್ನು ಹೊಡೆಯಲು ಮುಂದಾಗಿದ್ದಾನೆ. ಈ ವೇಳೆ ಅಲ್ಲೇ ಇದ್ದ ದೊಣ್ಣೆಯಿಂದ ಶಾಂತವ್ವನನ್ನು ಹೊಡೆದಿದ್ದಾನೆ. ಪರಿಣಾಮ ಆಕೆ ಮೃತಪಟ್ಟಿದ್ದಾಳೆ.

  • ಸುಲಿಗೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸೇರಿದ 7 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಸುಲಿಗೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸೇರಿದ 7 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಸುಕೇಶ್ ಚಂದ್ರಶೇಖರ್ ವಿರುದ್ಧದ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್ ತಾರೆ ಜಾಕ್ವೆಲಿನ್ ಫರ್ನಾಂಡೀಸ್ ಅವರ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಜಪ್ತಿ ಮಾಡಿದೆ. ಜಾಕ್ವೆಲಿನ್ ಕನ್ನಡದಲ್ಲೂ ನಟಿಸಿದ್ದು, ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರದಲ್ಲಿ  ನಟಿಸಿದ್ದಾರೆ. ಇನ್ನಷ್ಟೇ ಈ ಸಿನಿಮಾ ರಿಲೀಸ್ ಆಗಬೇಕಿದೆ.

    ಜಾಕ್ವೆಲಿನ್ ಹೆಸರಿನಲ್ಲಿ 7.12 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಠೇವಣಿಗಳನ್ನು ಲಗತ್ತಿಸಲಾದ ಆಸ್ತಿಗಳು ಸೇರಿವೆ ಎಂದು ಮೂಲಗಳು ತಿಳಿಸಿವೆ. ಜಾಕ್ವೆಲಿನ್ ಫೆರ್ನಾಂಡಿಸ್ ಸುಲಿಗೆ ಮಾಡಿದ ಹಣದ ಫಲಾನುಭವಿಯಾಗಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಸುಕೇಶ್ ಚಂದ್ರಶೇಖರ್ ಸುಲಿಗೆ ಮಾಡಿದ ಹಣವನ್ನು ಬಳಸಿಕೊಂಡು ಜಾಕ್ವೆಲಿನ್ ಫರ್ನಾಂಡೀಸ್‌ಗೆ 5.71 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ನೀಡಿದ್ದ ಎಂಬ ಪುರಾವೆಗಳು ಅಧಿಕಾರಿಗಳಿಗೆ ಸಿಕ್ಕಿವೆ. ಉಡುಗೊರೆಗಳ ಹೊರತಾಗಿ, ಅವನು ಜಾಕ್ವೆಲಿನ್ ಅವರ ಕುಟುಂಬ ಸದಸ್ಯರಿಗೆ 173,000 ಯುಎಸ್ ಡಾಲರ್ ಮತ್ತು ಸುಮಾರು 27,000 ಆಸ್ಟ್ರೇಲಿಯನ್ ಡಾಲರ್‌ಗಳನ್ನು ನೀಡಿದ್ದನು.

    ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಸುಕೇಶ್ ಚಂದ್ರಶೇಖರ್ ಜೊತೆಗಿನ ಸಂಪರ್ಕಕ್ಕಾಗಿ ಇಡಿ ಹಲವು ಬಾರಿ ಪ್ರಶ್ನಿಸಿತ್ತು. ಜಾಕ್ವೆಲಿನ್ ಸದ್ಯಕ್ಕೆ ಆರೋಪಿಯಲ್ಲ. ಆದರೆ ತನಿಖಾಧಿಕಾರಿಗಳು ಇನ್ನೂ ಜಾಕ್ವೆಲಿನ್‌ಗೆ ಕ್ಲೀನ್ ಚಿಟ್ ನೀಡಿಲ್ಲ. ಶ್ರೀಲಂಕಾ ಮೂಲದ ನಟಿಗೆ ದೇಶ ತೊರೆಯದಂತೆ ನಿಷೇಧ ಹೇರಲಾಗಿತ್ತು.

    ದೆಹಲಿಯ ಉದ್ಯಮಿಯೊಬ್ಬರ ಪತ್ನಿಯಿಂದ ಸ್ಪೂಫ್ ಕರೆಗಳ ಮೂಲಕ ಸುಕೇಶ್ ಚಂದ್ರಶೇಖರ್ 215 ಕೋಟಿ ಸುಲಿಗೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಸುಕೇಶ್ ದೆಹಲಿಯ ಜೈಲಿನಲ್ಲಿದ್ದಾಗ, ಪ್ರಧಾನಿ ಕಚೇರಿ, ಕಾನೂನು ಸಚಿವಾಲಯ ಮತ್ತು ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಸಂತ್ರಸ್ತ ಮಹಿಳೆಯಿಂದ ಹಣ ವಸೂಲಿ ಮಾಡಿದ್ದಾನೆ. ಸಂತ್ರಸ್ತೆಯ ಪತಿಗೆ ಜಾಮೀನು ದೊರಕಿಸಿಕೊಡುವುದಾಗಿ ಮತ್ತು ಅವರ ಔಷಧ ವ್ಯಾಪಾರವನ್ನು ನಡೆಸುವುದಾಗಿ ಸುಕೇಶ್ ದೂರವಾಣಿ ಕರೆಗಳಲ್ಲಿ ಹೇಳಿಕೊಂಡಿದ್ದನು.

    ರಾಜಕಾರಣಿ ಟಿಟಿವಿ ದಿನಕರನ್ ಒಳಗೊಂಡ ಐದು ವರ್ಷಗಳ ಹಿಂದಿನ ವಂಚನೆ ಪ್ರಕರಣದಲ್ಲಿ ಸುಕೇಶ್ ಕೂಡ ಭಾಗಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಇಡಿ ಅವರನ್ನು ಬಂಧಿಸಿತ್ತು.

  • ಕಪ್ಪು ಹಣ ಸಿಕ್ಕರೆ, ನನ್ನ ಸಂಪೂರ್ಣ ಆಸ್ತಿಯನ್ನು ಬಿಜೆಪಿಗೆ ದಾನ ಮಾಡುತ್ತೇನೆ : ಸಂಜಯ್ ರಾವತ್

    ಕಪ್ಪು ಹಣ ಸಿಕ್ಕರೆ, ನನ್ನ ಸಂಪೂರ್ಣ ಆಸ್ತಿಯನ್ನು ಬಿಜೆಪಿಗೆ ದಾನ ಮಾಡುತ್ತೇನೆ : ಸಂಜಯ್ ರಾವತ್

    – ನಾನು ನಿಜವಾದ ಶಿವ ಸೈನಿಕ
    – ಜೈಲಿಗೆ ಹಾಕಿದರೂ ನಾನು ಹೆದರುವುದಿಲ್ಲ

    ನವದೆಹಲಿ: ಶೂಟ್ ಮಾಡಿದರೂ, ಜೈಲಿಗೆ ಹಾಕಿದರೂ ನಾನು ಹೆದರುವುದಿಲ್ಲ ಎಂದು ಬಿಜೆಪಿ ವಿರುದ್ಧ ಶಿವಸೇನಾ ಸಂಸದ  ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಂಜಯ್ ರಾವತ್ ಮಾತನಾಡಿ, ಕೇಂದ್ರ ಸರ್ಕಾರದ ಏಜೆನ್ಸಿಗಳು ನನ್ನ ಎಲ್ಲಾ ಆಸ್ತಿಯನ್ನು ವಶಪಡಿಸಿಕೊಂಡರೂ, ನನ್ನ ಶೂಟ್ ಮಾಡಿದರೂ, ಜೈಲಿಗೆ ಕಳುಹಿಸಿದರೂ ನಾನು ಹೆದರುವುದಿಲ್ಲ. ನಾನು ನಿಜವಾದ ಶಿವ ಸೈನಿಕ. ನನಗೆ ಸಂಬಂಧಿಸಿದ 1 ರೂ. ಕಪ್ಪು ಹಣ ಸಿಕ್ಕರೂ ನನ್ನ ಸಂಪೂರ್ಣ ಆಸ್ತಿಯನ್ನು ಬಿಜೆಪಿಗೆ ದಾನ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದೂಗಳನ್ನು ಗುತ್ತಿಗೆ ಪಡೆಯಲು ಬಿಜೆಪಿಗೆ ಸಾಧ್ಯವಿಲ್ಲ: ಕೆ.ಎಂ.ಗಣೇಶ್

    ನನ್ನ ವಿರುದ್ಧ ಏನೇ ಷಡ್ಯಂತ್ರ ರೂಪಿಸಿದರೂ ನಾನು ಹೆದರುವುದಿಲ್ಲ. ಕೊನೆಗೂ ಸತ್ಯವೇ ಮೇಲುಗೈ ಸಾಧಿಸುತ್ತದೆ. ನಾನು ಯಾವುದಕ್ಕೂ ಹೆದರುವವನಲ್ಲ. ನನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವುದಷ್ಟೇ ಅಲ್ಲ, ನನ್ನನ್ನು ಗುಂಡಿಕ್ಕಿ ಅಥವಾ ಜೈಲಿಗೆ ಕಳುಹಿಸಿದರೂ ನಾನು ಭಯ ಪಡುವುದಿಲ್ಲ. ಎಲ್ಲರ ವಿರುದ್ಧ ಹೋರಾಡಿ ನಾನು ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದೂ ಉತ್ತರಾಧಿಕಾರ ಕಾಯ್ದೆಯಲ್ಲಿ ಲಿಂಗ ಪಕ್ಷಪಾತ ಇದೆಯೇ: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ಜಾರಿ ನಿರ್ದೇಶನಾಲಯ ಜಪ್ತಿ: ಸುಮಾರು ರೂ. 1,034 ಕೋಟಿ ರೂ. ಮೌಲ್ಯದ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಂಬಂಧಿಸಿದ ಕೆಲ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಇಂದು ಜಪ್ತಿ ಮಾಡಿದೆ. ಮಹಾರಾಷ್ಟ್ರದ ಅಲಿಬಾಗ್‍ನಲ್ಲಿರುವ 9 ಕೋಟಿ ರೂ. ಮೌಲ್ಯದ ಭೂಮಿ ಮತ್ತು ದಾದರ್ ಉಪನಗರದಲ್ಲಿರುವ 2 ಕೋಟಿ ರೂ. ಮೌಲ್ಯದ ಫ್ಲ್ಯಾಟ್ ಜಪ್ತಿ ಮಾಡಲಾಗಿದೆ.

  • ಚಂದ್ರನಲ್ಲಿನ ಜಾಗವನ್ನು ಪ್ರೇಯಸಿಗೆ ಉಡುಗೊರೆ ನೀಡಿದ ಗುಜರಾತ್ ಉದ್ಯಮಿ!

    ಚಂದ್ರನಲ್ಲಿನ ಜಾಗವನ್ನು ಪ್ರೇಯಸಿಗೆ ಉಡುಗೊರೆ ನೀಡಿದ ಗುಜರಾತ್ ಉದ್ಯಮಿ!

    ಗಾಂಧಿನಗರ: ಒಬ್ಬರನ್ನೊಬ್ಬರು ಪ್ರೀತಿಸುವ ಜೋಡಿಗಳು ತಮ್ಮ ಪ್ರೀತಿಯನ್ನು ಸಾಬೀತು ಪಡಿಸಲು ಏನೆಲ್ಲಾ ಕಸರತ್ತು ಮಾಡಲ್ಲ? ಇದೀಗ ಗುಜರಾತ್ ಮೂಲದ ಉದ್ಯಮಿಯೊಬ್ಬ ತನ್ನ ಗೆಳತಿಗೆ ಬೇಕೆಂದಾಗ ಕೈಗೂ ಎಟುಕದ ಉಡುಗೊರೆ ನೀಡಿ ಭಾರೀ ಸುದ್ದಿಯಾಗಿದ್ದಾರೆ.

    ಗುಜರಾತ್‌ನ ವಡೋದರಾ ಮೂಲದ ಉದ್ಯಮಿ ಮಯೂರ್ ಪಟೇಲ್ ತನ್ನನ್ನು ಮದುವೆಯಾಗಲಿರುವ ಹುಡುಗಿಗೆ ಚಂದ್ರನಲ್ಲಿನ 1 ಎಕರೆ ಜಾಗವನ್ನು ಉಡುಗೊರೆ ನೀಡಿ ಹುಬ್ಬೇರಿಸುವಂತೆ ಮಾಡಿದ್ದಾನೆ.

    ಹಿಂದಿನಿಂದಲೂ ಪ್ರೇಮಿಗಳು ರಾತ್ರಿ ಹೊತ್ತು ಆಕಾಶದಲ್ಲಿ ಕಾಣಿಸಿಕೊಳ್ಳುವ ಚಂದ್ರ-ನಕ್ಷತ್ರಗಳನ್ನು ಮುಟ್ಟುವ, ಅದನ್ನು ಹಿಡಿದು ತರುವಂತಹ ಮಕ್ಕಳಂತೆ ಕನಸು ಕಾಣುತ್ತಾರೆ. ಆದರೆ ಈ ಉದ್ಯಮಿ ತನ್ನ ಗೆಳತಿಗೆ ಚಂದ್ರನಲ್ಲಿನ ಜಾಗವನ್ನೇ ಬರೆದುಕೊಟ್ಟು ಜನರಿಗೆ ಅಚ್ಚರಿ ಮೂಡಿಸಿದ್ದಾನೆ. ಇದನ್ನೂ ಓದಿ: ಕಾಶ್ಮೀರ್ ಫೈಲ್ಸ್ ಡೌನ್ಲೋಡಿಂಗ್ ಲಿಂಕ್ ಕ್ಲಿಕ್ ಮಾಡಿದ್ರೆ ಬ್ಯಾಂಕ್ ಖಾತೆಗೆ ಕನ್ನ

    ಭೂಮಿಯನ್ನು ಹೊರತುಪಡಿಸಿ ಬಾಹ್ಯ ಗ್ರಹಗಳಲ್ಲಿ ಒಡೆತನವನ್ನು ಸಾಧಿಸುವುದು ನಿಷೇಧಿಸಲಾಗಿದೆ. ದಿ ಔಟರ್ ಸ್ಪೇಸ್ ಟ್ರೀಟಿ ಆಫ್ 1967 ಎಂಬ ಅಂತಾರಾಷ್ಟ್ರೀಯ ಒಪ್ಪಂದ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಯಾವುದೇ ಆಕಾಶಕಾಯದಲ್ಲಿ ಹಕ್ಕು ಪಡೆಯುವುದನ್ನು ನಿಷೇಧಿಸಿದೆ. ಗುಜರಾತ್‌ನ ಉದ್ಯಮಿ ತನ್ನ ಗೆಳತಿಗೆ ಬರೆದುಕೊಟ್ಟಿರುವ ಚಂದ್ರನ ಮೇಲಿನ ಆಸ್ತಿಯನ್ನು ಕೇವಲ ಡಿಜಿಟಲ್ ರೂಪದ ಆಸ್ತಿ ಎಂದು ಮಾತ್ರವೇ ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಇದನ್ನೂ ಓದಿ: 2023ರಲ್ಲಿ ಬರಲಿದೆ ಭಾರತದ ಮೊದಲ RRTS ರೈಲು

    ಉದ್ಯಮಿ ಮಯೂರ್ ಪಟೇಲ್ ತನ್ನ ಗೆಳತಿ ಹೇಮಾಲಿಯೊಂದಿಗೆ ಫೆಬ್ರವರಿ 27ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 2 ವರ್ಷ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಜೋಡಿಗಳು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರವೇ ಹಸೆಮಣೆಏರಲಿದ್ದಾರೆ.

  • ಆಸ್ತಿ ಆಸೆಗೆ ಅಣ್ಣನನ್ನು ಕೊಂದ ತಮ್ಮ

    ಆಸ್ತಿ ಆಸೆಗೆ ಅಣ್ಣನನ್ನು ಕೊಂದ ತಮ್ಮ

    ತಿರುವನಂತಪುರಂ: ಆಸ್ತಿ ವಿಚಾರವಾಗಿ ಅಣ್ಣ ತಮ್ಮ ಇಬ್ಬರು ಜಗಳವಾಡಿಕೊಂಡಿದ್ದಾರೆ. ಕೊನೆಗೆ ಆಸ್ತಿ ಆಸೆಗೆ ಬಿದ್ದ ತಮ್ಮ ಸಹೋದರನನ್ನೇ ಕೊಂದು ಹಾಕಿರುವ ಘಟನೆ ನಡೆದಿದೆ.

    ರಂಜು ಕುರಿಯನ್(55) ಮೃತ. ಜಾರ್ಜ್ ಕುರಿಯನ್ ಬಂಧಿತ ಆರೋಪಿಯಾಗಿದ್ದಾನೆ. ಈತ ಆಸ್ತಿಗಾಗಿ ಒಡಹುಟ್ಟಿದ ಅಣ್ಣನನ್ನು ಗುಂಡಿಕ್ಕಿ ಕೊಂದು ಹಾಕಿದ್ದಾನೆ. ಈ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ.

    ನಡೆದಿದ್ದೇನು?: ಜಾರ್ಜ್, ರಂಜು ಇಬ್ಬರು ಸಹೋದರರಾಗಿದ್ದಾರೆ. ಇಬ್ಬರು ಆಸ್ತಿ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದಾರೆ. ಜಾರ್ಜ್ ಕೋಪಗೊಂಡು ರಂದು ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡು ಹಾರಿಸುವುದನ್ನು ತಡೆಯಲು ಮುಂದಾಗಿದ್ದ ಸೋದರ ಮಾವ ಮ್ಯಾಥ್ಯೂ ಸ್ಕೇರಿಯಾ ಅವರಿಗೆ ಬುಲೆಟ್ ತಗುಲಿದೆ. ಇವರು ಕೊಟ್ಟಾಯಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜಾರ್ಜ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಅಜ್ಜಿ ತವರು ಉಕ್ರೇನ್‌ಗೆ 77.07 ಕೋಟಿ ನೆರವು ನೀಡಿದ ʼಟೈಟಾನಿಕ್‌ʼ ಹೀರೋ

    ಪೊಲೀಸರ ಪ್ರಕಾರ, ಆಸ್ತಿ ಮಾರಾಟಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಕೆಲವು ವಿವಾದಗಳಿದ್ದವು ಎಂದು ಶಂಕಿಸಲಾಗಿದೆ. ಹೆಚ್ಚಿನ ವಿವರಗಳು ವಿಚಾರಣೆ ಮತ್ತು ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಯಲಿದೆ. ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಜಾರ್ಜ್ ತನ್ನ ಸಹೋದರನ ಮೇಲೆ ಗುಂಡು ಹಾರಿಸುವುದನ್ನು ತಡೆಯಲು ಪ್ರಯತ್ನಿಸಿದಾಗ ಮ್ಯಾಥ್ಯೂ ಗಾಯಗೊಂಡಿದ್ದಾರೆ ಎಂದಿದ್ದಾರೆ.

  • ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಪಾಪಿ ಮಗ

    ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಪಾಪಿ ಮಗ

    ಲಕ್ನೋ: ಆಸ್ತಿ ವಿಚಾರಕ್ಕೆ ವೃದ್ಧ ತಂದೆಯ ಕತ್ತು ಹಿಸುಕಿ ಮಗನೇ ಹತ್ಯೆಗೈದು, ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಥುರಾದ ನರ್ಹೌಲಿಯಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಅಮೃತ್ ಲಾಲ್ (55) ಮಾಸ್ಟರ್ ಮೇಸ್ತ್ರಿ ಎಂದು ಗುರುತಿಸಲಾಗಿದೆ. ಸುಮಾರು 10-12 ದಿನಗಳ ಹಿಂದೆ ಅಮೃತ್ ಲಾಲ್ ಅವರ ಪತ್ನಿ ಆಶಾದೇವಿ ಅವರು ತಂದೆ-ಮಗ ಇಬ್ಬರನ್ನು ಮನೆಯಲ್ಲಿ ಬಿಟ್ಟು ತಂದೆಯ ಮನೆಗೆ ಹೋಗಿದ್ದರು. ತಂದೆಯೊಂದಿಗೆ ಏಕಾಂಗಿಯಾಗಿದ್ದ ವಿನೀತ್ ಅಮೃತ್ ಲಾಲ್‍ಗೆ ಮನೆ ಮಾರಾಟ ಮಾಡುವಂತೆ ಒತ್ತಡ ಹೇರಲು ಆರಂಭಿಸಿದ್ದಾರೆ. ಇದಕ್ಕೆ ಅಮೃತ್ ಲಾಲ್ ಅವರು ನಿರಾಕರಿಸಿ ವಿನೀತ್‍ಗೆ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ವಿನೀತ್ ತಂದೆಯ ಕತ್ತನ್ನು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಕಂಬಳಿಯಲ್ಲಿ ಸುತ್ತಿ ಸುಟ್ಟು ಹಾಕಿದ್ದಾನೆ. ಇದನ್ನೂ ಓದಿ: ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

    ಈ ಘಟನೆ ಕುರಿತಂತೆ ತನಿಖೆ ವೇಳೆ ಆಶಾದೇವಿ ಅವರು, ವಾಸಿಸುತ್ತಿದ್ದ ಮನೆಯನ್ನು ಮಾರಾಟ ಮಾಡಲು ವಿನೀತ್ ಬಯಸಿದ್ದ. ವಿನೀತ್ ಈಗಾಗಲೇ ತಮ್ಮ 100 ಚದರ ಮೀಟರ್‍ನಷ್ಟು ನಿವೇಶನವನ್ನು ಮಾರಾಟ ಮಾಡಿದ್ದಾನೆ. ಇದು ಕುಟುಂಬದಲ್ಲಿ ವಿವಾದಕ್ಕೆ ಕಾರಣವಾಗಿತ್ತು ಮತ್ತು ವಿನೀತ್ ಆಗಾಗ್ಗೆ ಮನೆಯನ್ನು ಮಾರಾಟ ಮಾಡಿ ತನಗೆ ಪಾಲು ನೀಡುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ನಾಲ್ಕು ವರ್ಷಗಳ ಹಿಂದೆ ಕಿರಿಯ ಮಗ ನೆಹನಾ ಆತ್ಮಹತ್ಯೆ ಮಾಡಿಕೊಂಡಿದ್ದು ಸಹ ಕುಟುಂಬದಲ್ಲಿ ಕಲಹ ಉಂಟಾಗಲು ಕಾರಣವಾಗಿತ್ತು ಎಂದು ಪೊಲೀರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್

  • ಮೂರನೇ ಪತ್ನಿಯಿಂದ ಪತಿಯ ಕೊಲೆ – ಹೆಂಡತಿ ಸೇರಿ ಮೂವರು ಅರೆಸ್ಟ್

    ಮೂರನೇ ಪತ್ನಿಯಿಂದ ಪತಿಯ ಕೊಲೆ – ಹೆಂಡತಿ ಸೇರಿ ಮೂವರು ಅರೆಸ್ಟ್

    ಬೆಳಗಾವಿ: ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

    ತಾಲೂಕಿನ ಬಸೂರ್ತೆ ಗ್ರಾಮದ ನಿವಾಸಿ ಗಜಾನನ ನಾಯಕ್ ಕೊಲೆಯಾದ ವ್ಯಕ್ತಿ. ಹತ್ಯೆ ಪ್ರಕರಣ ಸಂಬಂಧ ಮೃತನ ಪತ್ನಿ ವಿದ್ಯಾ ಪಾಟೀಲ್, ಆಕೆಯ ಪುತ್ರ ಹೃತಿಕ್ ಹಾಗೂ ಸ್ನೇಹಿತ ಪರಶುರಾಮ ಗೋಂದಳಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಹಿನ್ನೆಲೆ: ಫೆ.26ರ ಮಧ್ಯರಾತ್ರಿ ಮೂವರು ಆರೋಪಿಗಳು ಗಜಾನನ ನಾಯ್ಕನನ್ನು ಕತ್ತು ಕೊಯ್ದು ಕೊಲೆಗೈದಿದ್ದಾರೆ. ಗಜಾನನ ಅವರು ಈ ಹಿಂದೆ ಎರಡು ಮದುವೆಯಾಗಿದ್ದರು. ಆದರೆ ಇಬ್ಬರೂ ಪತ್ನಿಯರೂ ಆತನನನ್ನು ಬಿಟ್ಟು ಹೋಗಿದ್ದರು. ಬಳಿಕ ಎರಡನೇ ಪತ್ನಿಯ ಮಗನೊಂದಿಗೆ ಗಜಾನನ ಬೆಳಗುಂದಿಯಲ್ಲಿ ಬೇಕರಿ ನಡೆಸಿ ಜೀವನ ಸಾಗಿಸುತ್ತಿದ್ದರು. ಈ ವೇಳೆ ವಿಧವೆ ವಿದ್ಯಾ ಪಾಟೀಲ್ ಜೊತೆಗೆ ರಿಜಿಸ್ಟರ್ ಮ್ಯಾರೇಜ್ ಕೂಡ ಆಗಿದ್ದರು. ಬಳಿಕ ಈಕೆ ತನ್ನ ಇಬ್ಬರು ಮಕ್ಕಳ ಜೊತೆ ಗಜಾನನ ಜೊತೆಗೆ ವಾಸವಿದ್ದಳು. ಅಲ್ಲದೇ ಗಜಾನನ ಸಾಲ ಮಾಡಿ ಪತ್ನಿಗೆ ಮನೆ ಕಟ್ಟಿಸಿ ಕೊಟ್ಟಿದ್ದರಂತೆ. ಕಳೆದ ಮೂರು ವರ್ಷಗಳ ಹಿಂದೆ ವ್ಯವಹಾರದಲ್ಲಿ ನಷ್ಟವಾಗಿ ಬೇಕರಿ ಬಂದ್ ಮಾಡಿದ್ದರು.

    ಆರ್ಥಿಕ ನಷ್ಟ ಹಿನ್ನೆಲೆ ಮನೆ ಮಾರಾಟ ಮಾಡಲು ಗಜಾನನ ವಿದ್ಯಾ ಪಾಟೀಲ್‍ಗೆ ಒತ್ತಾಯಿಸುತ್ತಿದ್ದರಂತೆ. ಇಲ್ಲವಾದರೆ ತನ್ನ ಜೊತೆ ಮದುವೆಯಾದ ಬಗ್ಗೆ ಎಲ್ಲರಿಗೂ ತಿಳಿಸುವುದಾಗಿ ಬೆದರಿಕೆ ಹಾಕುತ್ತಿದ್ದರಂತೆ. ಹೀಗಾಗಿ ಗಜಾನನ ನಾಯಕ್ ಹತ್ಯೆಗೆ ವಿದ್ಯಾ ಪಾಟೀಲ್ ಸಂಚು ರೂಪಿಸಿದ್ದಳು ಎನ್ನಲಾಗುತ್ತಿದೆ.  ಇದನ್ನೂ ಓದಿ: ಶೌರ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಸೇನಾಧಿಕಾರಿಗೆ ಭರ್ಜರಿ ಸ್ವಾಗತ

    ಫೆ.26ರ ರಾತ್ರಿ ಮನೆಗೆ ಬರುತ್ತೇನೆ. ನಿನ್ನ ಮಗನನ್ನು ಊರಿಗೆ ಕಳುಹಿಸು ಎಂದು ವಿದ್ಯಾ ಗಜಾನನ ಅವರಿಗೆ ಕರೆ ಮಾಡಿ ತಿಳಿಸಿದ್ದಾಳೆ. ಅದರಂತೆ ಗಜಾನನ ಅವರು ಮಗನನ್ನು ಬಸೂರ್ತೆ ಗ್ರಾಮಕ್ಕೆ ಬಿಟ್ಟು ಬಂದಿದ್ದರು. ಅಂದು (ಫೆ.26) ರಾತ್ರಿ ಗಜಾನನ ನಾಯಕ್ ಮನೆಗೆ ಬಂದಿದ್ದ ವಿದ್ಯಾ ಪಾಟೀಲ್ ಪತಿಗೆ ಕಂಠಪೂರ್ತಿ ಮದ್ಯಪಾನ ಮಾಡಿಸಿದ್ದಾಳೆ.  ಇದನ್ನೂ ಓದಿ: ರಷ್ಯಾ ಯುದ್ಧ ಇಡೀ ಯೂರೋಪ್‌ ಭದ್ರತೆಗೆ ಪೆಟ್ಟು ನೀಡಿದೆ: ಬ್ರಿಟಿಷ್‌ ಪ್ರಧಾನಿ ಕಳವಳ

    ಬಳಿಕ ಪುತ್ರ ಹೃತಿಕ್ ತನ್ನ ಸ್ನೇಹಿತ ಪರಶುರಾಮ ಗೋಂದಳಿ ಜೊತೆಗೆ ಗಜಾನನ ಮನೆಗೆ ಮಧ್ಯರಾತ್ರಿ ಬಂದಿದ್ದಾನೆ. ಈ ವೇಳೆ ಹರಿತವಾದ ಆಯುಧದಿಂದ ಕತ್ತು ಸೀಳಿ ಗಜಾನನ ನಾಯ್ಕ್ ಹತ್ಯೆ ಮಾಡಿ, ಆತನ ಡೈರಿ, ಮೊಬೈಲ್ ಫೋನ್ ಜತೆ ಮೂವರು ಪರಾರಿಯಾಗಿದ್ದರು. ಮಾರನೇ ದಿನ ಗಜಾನನ ಮಗ ಅವಧೂತ್ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು. ವಿದ್ಯಾ ಪಾಟೀಲ್ ಮೇಲೆ ಅವಧೂತ್ ಸಂಶಯ ವ್ಯಕ್ತಪಡಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.