Tag: ಆಸ್ಪತ್ರೆಗೆ

  • CRPF ಸಹ ಸೈನಿಕರ ಮೇಲೆ ಗುಂಡಿನ ದಾಳಿ- ನಾಲ್ವರು ಬಲಿ, ಮೂವರಿಗೆ ಗಂಭೀರ ಗಾಯ

    CRPF ಸಹ ಸೈನಿಕರ ಮೇಲೆ ಗುಂಡಿನ ದಾಳಿ- ನಾಲ್ವರು ಬಲಿ, ಮೂವರಿಗೆ ಗಂಭೀರ ಗಾಯ

    ಚಂಢೀಗಡ: ಸಹೋದ್ಯೋಗಿ ಗುಂಡಿನ ದಾಳಿಗೆ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್​​ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.

    ರಾಜ್ಯ ರಾಜಧಾನಿ ರಾಯ್‍ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸುಕ್ಮಾ ಜಿಲ್ಲೆಯ ಮರೈಗುಡೆಮ್‍ನಲ್ಲಿರುವ ಲಿಂಗಂಪಲ್ಲಿಯ 50ನೇ ಬೆಟಾಲಿಯನ್‍ನ ಶಿಬಿರದಲ್ಲಿ ಸಿಆರ್‍ಪಿಎಫ್ ಯೋಧರ ನಡುವೆ ಘರ್ಷಣೆ ನಡೆದಿದ್ದು, ಈ ಘಟನೆ ಮುಂಜಾನೆ 3.30ರ ಸುಮಾರಿಗೆ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ. ಹೇಳಿದ್ದಾರೆ. ಇದನ್ನೂ ಓದಿ: ಸ್ವಿಗ್ಗಿ ಊಟ ತಂದು ಕೊಡದಕ್ಕೆ ಪಿಎಂ, ಸಿಎಂಗೆ ಪತ್ರ ಬರೆದ ಸಿನಿಮಾ ಸೂಪರ್ ಸ್ಟಾರ್

    ಯೋಧನೊಬ್ಬ ತನ್ನ ಸಹ ಸೈನಿಕರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಹೀಗಾಗಿ ಕೂಡಲೇ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಕ್ಕಿ, ಕತ್ರಿನಾ ಮದುವೆ ಸಿದ್ಧತೆ ಶುರು

  • ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುವಾಗ ಎದ್ದುಕುಳಿತ ವೃದ್ಧೆ

    ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುವಾಗ ಎದ್ದುಕುಳಿತ ವೃದ್ಧೆ

    ನವದೆಹಲಿ: ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗ ಕೊನೆ ಕ್ಷಣದಕಲ್ಲಿ ವೃದ್ಧೆ ಕಣ್ಣುಬಿಟ್ಟು ಕುಳಿತಿರುವ ಘಟನೆ ನಡೆದಿದೆ.

    ಶಾಕುಂತಲಾ(76) ಕೊರೊನಾದಿಂದ ಮೃತಪಟ್ಟಿದ್ದರು ಎಂದು‌ ವೈದ್ಯರು ತಿಳಿಸಿದ್ದರು. ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯ ಮುಧಲೆ ಗ್ರಾಮದ ನಿವಾಸಿಯಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

    ಶಾಕುಂತಲಾ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಬಾರಾಮತಿಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಶಾಕುಂತಲಾ ಪ್ರಜ್ಞೆತಪ್ಪಿದ್ದರು. ಆದರೆ ಇದನ್ನು ತಿಳಿಯದ ಕುಟುಂಬಸ್ಥರು ಶಾಕುಂತಲಾ ಸಾವನ್ನಪ್ಪಿದಳು ಎಂದು ಗ್ರಾಮದವರಿಗೆ ತಿಳಿಸಿದರು. ಅದರಂತೆ ಗ್ರಾಮದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ನಡೆಸಲು ಸೂಚಿಸಿದ್ದರು. ಅದರಂತೆ ಗ್ರಾಮಸ್ಥರು ತಯಾರಿ ಮಾಡಿಕೊಂಡಿದ್ದರು.

    ಆದರೆ ಶಕುಂತಲಾ ಏಕಾಏಕಿ ಕಣ್ಣು ಬಿಟ್ಟು ಎದ್ದು ಕುಳಿತು ಕಣ್ಣೀರು ಹಾಕಿದ್ದಾರೆ. ಕುಟುಂಬಸ್ಥರು ಶಕುಂತಲಾ ಎದ್ದು ಕುಳಿತಿರುವುದನ್ನು ಆಶ್ಚರ್ಯ ಪಟ್ಟಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

  • ಬೆಂಗ್ಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹನಟನ ಸಹಾಯಕ್ಕೆ ಬಂದ ಸಲ್ಲು

    ಬೆಂಗ್ಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹನಟನ ಸಹಾಯಕ್ಕೆ ಬಂದ ಸಲ್ಲು

    ಮುಂಬೈ: ಪ್ರಸ್ತುತ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಫರಾಜ್ ಖಾನ್‍ಗೆ ಸಲ್ಮಾನ್ ಖಾನ್ ಚಿಕಿತ್ಸಾ ವೆಚ್ಚ ಭರಿಸುವ ಮೂಲಕ ಸಹಾಯ ಮಾಡಿದ್ದಾರೆ.

    1998ರಲ್ಲಿ ಬಿಡುಗಡೆಯಾದ ಮೆಹಂದಿ ಎಂಬ ಚಿತ್ರದಲ್ಲಿ ನಟಿ ರಾಣಿ ಮುಖರ್ಜಿಯೊಂದಿಗೆ ಫರಾಜ್ ಖಾನ್ ಅಭಿನಯಿಸಿದ್ದರು. ಈ ಚಿತ್ರದ ಮೂಲಕ ಬಹಳ ಹೆಸರುವಾಸಿಯಾಗಿದ್ದರು. ಕಳೆದ ಒಂದು ವರ್ಷದಿಂದ ಫರಾಜ್ ಖಾನ್ ಹೃದಯಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಫರಾಜ್ ಖಾನ್ ಅವರ ಕುಟುಂಬ ನಟನ ಚಿಕಿತ್ಸೆ ವೆಚ್ಚವನ್ನು ಭರಿಸಲಾಗದೇ ಕಷ್ಟಪಡುತ್ತಿತ್ತು. ಇದನ್ನು ತಿಳಿದ ನಟಿ ಪೂಜಾ ಭಟ್ ಅವರು, ಅವರಿಗೆ ಸಹಾಯ ಮಾಡುವಂತೆ ಟ್ವೀಟ್ ಮಾಡಿದ್ದರು. ಅವರಿಗೆ ಹಣ ಡೊನೇಟ್ ಮಾಡುವ ವೆಬ್‍ಸೈಟಿನ ಲಿಂಕ್ ಹಂಚಿಕೊಂಡಿದ್ದ ಪೂಜಾ, ಧಯವಿಟ್ಟು ಸಹಾಯ ಮಾಡಿ. ಅದಷ್ಟು ಈ ಲಿಂಗ್ ಅನ್ನು ಶೇರ್ ಮಾಡಿ. ಯಾರದರೂ ಸಹಾಯ ಮಾಡಿದರೆ ನನ್ನ ಕೃತಜ್ಞತೆಗಳು ಎಂದು ಬರೆದುಕೊಂಡಿದ್ದರು.

    https://www.instagram.com/p/CGVIUl6nZeL/

    ಇದರ ಜೊತೆಗೆ ಸಾಮಾಜಿಕ ಜಾಲತಾಣದ ಮೂಲಕ ಅಣ್ಣನಿಗೆ ಸಹಾಯ ಮಾಡುವಂತೆ ಕೇಳಿಕೊಂಡಿರುವ ಫರಾಜ್ ಖಾನ್ ಸಹೋದರ ಪೋಷಕನಟ ಫಹಮಾನ್ ಖಾನ್, ನನ್ನ ಪ್ರೀತಿಯ ಅಣ್ಣ ಮತ್ತು ಒಳ್ಳೆಯ ನಟ ಇಂದು ಆಸ್ಪತ್ರೆಯಲ್ಲಿ ಸಾವು ಬದುಕಿ ಮಧ್ಯೆ ಹೋರಾಡುತ್ತಿದ್ದಾರೆ. ಹಲವಾರು ವರ್ಷ ನಟನೆ ಮತ್ತು ಕಲೆಗೆ ಸಾಕಷ್ಟು ಕೊಡುಗೆ ನೀಡಿದ ಫರಾಜ್ ಖಾನ್ ಅವರ ಉಳಿವಿಗಾಗಿ ನೀವು ಸಹಾಯ ಮಾಡಬೇಕಿದೆ ಎಂದು ಮನವಿ ಮಾಡಿದ್ದರು.

    ಇದನ್ನು ತಿಳಿದ ಸಲ್ಮಾನ್ ಖಾನ್ ಅವರು, ಆ ನಟನ ಚಿಕಿತ್ಸೆಗೆ ಆಗುವಷ್ಟು ಹಣವನ್ನು ನೀಡಿದ್ದಾರೆ. ಈ ವಿಚಾರ ತಿಳಿದು ಸಲ್ಮಾನ್ ಖಾನ್ ಅವರನ್ನು ಹೊಗಳಿರುವ ನಟಿ ಕಾಶ್ಮೇರಾ ಶಾ ಅವರು, ಫರಾಜ್ ಖಾನ್ ಅವರಿಗೆ ಸಹಾಯ ಮಾಡಿ ಚಿಕಿತ್ಸಾ ವೆಚ್ಚಾ ಭರಿಸಿದಕ್ಕೆ ಧನ್ಯವಾದಗಳು. ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯ ಹೋರಾಡುತ್ತಿರುವ ನಟನ ಬೆಂಬಲಿಕ್ಕೆ ಸಲ್ಮಾನ್ ಖಾನ್ ನಿಂತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

  • ‘ಅಪ್ಪ ನಾನು ವಿಷ ಸೇವಿಸಿದ್ದೇನೆ’- ತಂದೆಗೆ ಫೋನ್ ಮಾಡಿದ ಮಗಳು

    ‘ಅಪ್ಪ ನಾನು ವಿಷ ಸೇವಿಸಿದ್ದೇನೆ’- ತಂದೆಗೆ ಫೋನ್ ಮಾಡಿದ ಮಗಳು

    – ಯುವಕನ ಕಿರುಕುಳದಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
    – ಕಾಲೇಜಿಗೆ ರಜೆ ಇದ್ರೂ ಬಿಡದ ಆರೋಪಿ

    ಹೈದರಾಬಾದ್: ಯುವಕನ ಕಿರುಕುಳವನ್ನು ಸಹಿಸಲಾಗದೇ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ತಮ್ಮ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಅಮೀರ್‌ಪೇಟೆಯಲ್ಲಿ ನಡೆದಿದೆ.

    ಅಶ್ವಿನಿ (22) ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿನಿ. ಮೃತ ಅಶ್ವಿನಿ ಅಮೀರ್‌ಪೇಟೆಯ ಶ್ರೀನಿವಾಸ್‍ನಗರ ಕಾಲೋನಿಯ ಅನುರಾಗ್ ಅಪಾರ್ಟ್ ಮೆಂಟ್‍ನಲ್ಲಿ ವಾಸಿಸುತ್ತಿದ್ದಳು. ಈಕೆ ತಂದೆ ಕಂಡಕ್ಟರ್ ಆಗಿದ್ದು, ಇವರಿಗೆ ಮೂವರು ಮಕ್ಕಳಿದ್ದರು. ಮೃತ ಅಶ್ವಿನಿ ಹಿರಿಯ ಮಗಳಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದಳು.

    ಅದೇ ಪ್ರದೇಶದಲ್ಲಿ ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಎಂಬಾತ ಅಶ್ವಿನಿ ಕಾಲೇಜಿಗೆ ಹೋಗುವಾಗ ಮತ್ತು ಬರುವಾಗು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನು. ತನ್ನ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತೆ ಎಂದು ಈ ವಿಚಾರವನ್ನು ಪೋಷಕರಿಗೆ ಅಶ್ವಿನಿ ತಿಳಿಸಿರಲಿಲ್ಲ. ಇತ್ತ ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಾಲೇಜುಗಳು ಮುಚ್ಚಿದ್ದವು. ಹೀಗಾಗಿ ಅಶ್ವಿನಿ ಸುಮಾರು ಎರಡೂವರೆ ತಿಂಗಳಿನಿಂದ ಮನೆಯಲ್ಲಿದ್ದಳು.

    ಈ ವೇಳೆ ನವೀನ್ ವಿದ್ಯಾರ್ಥಿನಿಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು. ಇದರಿಂದ ನೊಂದ ಅಶ್ವಿನಿ ಓದುವುದಾಗಿ ಹೇಳಿ ರೂಮಿಗೆ ಹೋಗಿ ಬಾಗಿಲು ಲಾಕ್ ಮಾಡಿಕೊಂಡಿದ್ದಾಳೆ. ಸ್ವಲ್ಪ ಸಮುಯದ ನಂತರ ತನ್ನ ತಂದೆಗೆ ಫೋನ್ ಮಾಡಿ, ಅಪಾರ್ಟ್ ಮೆಂಟ್ ಬಳಿಯ ಟಯರ್ ಅಂಗಡಿಯಲ್ಲಿ ಕೆಲಸ ಮಾಡುವ ನವೀನ್ ಕೆಲವು ದಿನಗಳಿಂದ ನನಗೆ ಕಿರುಕುಳ ಕೊಡುತ್ತಿದ್ದಾನೆ. ಆತನ ಕಿರುಕುಳವನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ವಿಷ ಸೇವಿಸಿದ್ದೇನೆ ಅಪ್ಪ ಎಂದು ತಿಳಿಸಿದ್ದಾಳೆ.

    ತಕ್ಷಣ ಆಕೆಯ ತಂದೆ ಬಂದು ಬಾಗಿಲು ತೆರೆದು ನೋಡಿದ್ದಾರೆ. ಅಷ್ಟರಲ್ಲಿ ಅಶ್ವಿನಿ ವಿಷ ಸೇವಿಸಿದ್ದಳು. ನಂತರ ಅವಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿಯೇ ಅಶ್ವಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

    ಪೋಷಕರು ಆರೋಪಿ ನವೀನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ನವೀನ್‍ಗಾಗಿ ಹುಡುಕಾಟ ಶುರು ಮಾಡಿದ್ದಾರೆ.

  • ಸೀರಿಯಲ್‍ನಲ್ಲಿ ಪ್ರಮುಖ ಪಾತ್ರ ಸಿಕ್ಕಿಲ್ಲವೆಂದು ನಟಿ ಆತ್ಮಹತ್ಯೆ

    ಸೀರಿಯಲ್‍ನಲ್ಲಿ ಪ್ರಮುಖ ಪಾತ್ರ ಸಿಕ್ಕಿಲ್ಲವೆಂದು ನಟಿ ಆತ್ಮಹತ್ಯೆ

    – ವಿದ್ಯಾಭ್ಯಾಸ ಮುಂದುವರಿಸಲು ಹುಟ್ಟೂರಿನಿಂದ ಬಂದಿದ್ರು
    – ನೇಣು ಬಿಗಿದುಕೊಂಡು ಕಿರುತೆರೆ ನಟಿ ಸೂಸೈಡ್

    ಕೋಲ್ಕತ್ತಾ: ಸೀರಿಯಲ್‍ನಲ್ಲಿ ಪ್ರಮುಖ ಪಾತ್ರ ಸಿಕ್ಕಿಲ್ಲವೆಂದು ಬಂಗಾಳಿ ನಟಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬುರ್ದ್ವಾನ್‍ನಲ್ಲಿ ನಡೆದಿದೆ.

    ಸುಬರ್ನಾ ಜಾಶ್ (23) ಆತ್ಮಹತ್ಯೆ ಮಾಡಿಕೊಂಡ ನಟಿ. ಭಾನುವಾರ ರಾತ್ರಿ ಪೋಷಕರು ಸುಬರ್ನಾ ಜಾಶ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ನೋಡಿದ್ದಾರೆ. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿಯೇ ನಟಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ನಟಿಯ ದೇಹವನ್ನು ಸೋಮವಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಟಿ ಸುಬರ್ನಾ ಜಾಶ್ ಕೆಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದು, ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೊನೆಯ ಬಾರಿಗೆ ‘ಮಯೂರ್ ಪಾಂಖಿ’ ಧಾರಾವಾಹಿಯಲ್ಲಿ ನಾಯಕಿಯ ಸ್ನೇಹಿತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

    ಮೂಲತಃ ಬುರ್ದ್ವಾನ್‍ ಮೂಲದ ಸುಬರ್ನಾ ವಿದ್ಯಾಭ್ಯಾಸವನ್ನು ಮುಂದುವರಿಸಲು ಕೋಲ್ಕತ್ತಾಗೆ ಬಂದಿದ್ದರು. ಆದರೆ ಸುಬರ್ನಾ ಜಾಶ್‍ಗೆ ನಟಿಯಾಗಬೇಕೆಂಬ ಕನಸಿತ್ತು. ಕೊನೆಗೆ ತನ್ನ ವೃತ್ತಿಜೀವನಕ್ಕಾಗಿ ಕೋಲ್ಕತ್ತಾದಲ್ಲಿಯೇ ವಾಸಿಸುತ್ತಿದ್ದರು. ಅದರಂತೆಯೇ ಅನೇಕ ಆಡಿಷನ್‍ಗಳಿಗೆ ಹೋಗುತ್ತಿದ್ದರು. ನಂತರ ಕೆಲವು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಅವಕಾಶವನ್ನು ಸಹ ಪಡೆದಿದ್ದರು.

    ಧಾರಾವಾಹಿಯಲ್ಲಿ ಮುಖ್ಯಪಾತ್ರಗಳು ಸಿಗದೆ ಇದ್ದ ಕಾರಣ ಸುಬರ್ನಾ ಜಾಶ್ ಖಿನ್ನತೆಗೆ ಒಳಗಾಗಿದ್ದರು. ಅಲ್ಲದೇ ಕೆಲವು ದಿನಗಳ ಹಿಂದೆ ತನ್ನ ಹುಟ್ಟೂರಿಗೆ ವಾಪಸ್ ಹೋಗಿದ್ದರು ಎಂದು ವರದಿಯಾಗಿದೆ. ಆದರೆ ನಟಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಬರ್ನಾ ಜಾಶ್ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಕುಟುಂಬದವರು ತಿಳಿಸಿದ್ದಾರೆ.

    ಇತ್ತೀಚೆಗೆ ಮುಂಬೈ ಮೂಲದ ಕಿರುತೆರೆ ನಟಿ ಸೆಜಲ್ ಶರ್ಮಾ ಸಹ ಆತ್ಮಹತ್ಯೆಗೆ ಶರಣಾಗಿದ್ದರು.