ರಾಯಚೂರು: ಜಿಲ್ಲೆಯ ಮಾನ್ವಿ (Manvi) ಪಟ್ಟಣದ ಆಹಾರ ಪದಾರ್ಥ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು, 842 ಕೆ.ಜಿಯ ಕಲಬೆರಕೆ ವಸ್ತುಗಳನ್ನು (Adulterated Products) ವಶಪಡಿಸಿಕೊಂಡಿದ್ದಾರೆ.
ಮಾನ್ವಿಯ ಇಸ್ಲಾಂನಗರದ ಪ್ರತಿಷ್ಠಿತ ವ್ಯಾಪಾರಿಯೊಬ್ಬರ ಗೋದಾಮಿನಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಗೆ ರಾಸಾಯನಿಕ ಬಣ್ಣ ಬೆರೆಸಿ ಮಾರಾಟ ಮಾಡುವ ದಂಧೆ ನಡೆಯುತ್ತಿತ್ತು. ಖಾಲಿ ಜಾಗದಲ್ಲಿ ಬಣ್ಣ ಮಿಶ್ರಿತ ಬೇಳೆ, ಮಸಾಲಾ ಪದಾರ್ಥಗಳನ್ನು ಒಣಗಲು ಹಾಕಿದ್ದಾಗ ಸಾರ್ವಜನಿಕರು ಗಮನಿಸಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಖಚಿತ ಮಾಹಿತಿ ಆಹಾರ ಸುರಕ್ಷತಾಧಿಕಾರಿ ಗುರುರಾಜ್ ನೇತೃತ್ವದಲ್ಲಿ ದಾಳಿ ನಡೆಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ.ಇದನ್ನೂ ಓದಿ: 2 ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ರೂ ಡಿಕೆಶಿ ಭೇಟಿಗೆ ಅವಕಾಶ ನೀಡದ ರಾಹುಲ್!
ದಾಳಿ ವೇಳೆ 367 ಕೆಜಿ ಕಲಬೆರಕೆ ದನಿಯಾ ಕಾಳು, 152 ಕೆಜಿ ಕೆಂಪು ಮಿಶ್ರಿತ ಕಡ್ಲೆ, 220 ಕೆಜಿ ಹಳದಿ ಬಣ್ಣ ಮಿಶ್ರಿತ ಬೇಳೆ, ಪಪ್ಪಾಯಿ ಬೀಜ, ಚಕ್ಕೆ, ಕೊಬ್ಬರಿ ಪುಡಿ ಸೇರಿ ಒಟ್ಟು 842 ಕೆಜಿಯಷ್ಟು ಕಲಬೆರಕೆ ಆಹಾರ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ. ಇವುಗಳಲ್ಲಿ ಜೀವಮಾರಕ ರಾಸಾಯನಿಕ ಬಣ್ಣ ಬಳಕೆ ಮಾಡಿರುವುದು ತಿಳಿದುಬಂದಿದೆ.
ಸದ್ಯ ಜಪ್ತಿಯಾದ ಆಹಾರ ಪದಾರ್ಥಗಳನ್ನ ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ದಂಧೆಕೋರರು ಜಾತ್ರೆ, ಉತ್ಸವಗಳಿಗೆ ಕಲಬೆರಕೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುತ್ತಿದ್ದರು ಎನ್ನಲಾಗಿದ್ದು, ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.ಇದನ್ನೂ ಓದಿ: 24 ಗಂಟೆಯೊಳಗೆ ಭಟ್ಕಳ ಪಟ್ಟಣವನ್ನ ಸ್ಫೋಟಿಸುತ್ತೇವೆ – ಪೊಲೀಸ್ ಠಾಣೆಗೆ ಬೆದರಿಕೆ ಸಂದೇಶ
– ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು
– ಇವೇ ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿ ಅಂತಾ ಹೆಚ್‌ಡಿಕೆ ಟಾಂಗ್
ಬೆಂಗಳೂರು: ಬೆಲೆ ಏರಿಕೆ (Price Hike) ಪಟ್ಟಿ ನೋಡಿದ್ರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ 20 ರೂ. ಹೆಚ್ಚಿದರೆ, ಟೊಮ್ಯಾಟೋ ಬೆಲೆ 100 ರೂ. ತಲುಪಿದೆ. ಈ ಬೆಲೆ ಏರಿಕೆಯಿಂದಾಗಿ ಅತ್ತ ರೈತನಿಗೂ ಲಾಭ ಇಲ್ಲ, ಇತ್ತ ಗ್ರಾಹಕನಿಗೂ ಲಾಭವಿಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ. ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಸೊಪ್ಪು ತರಕಾರಿ ಸೇರಿದಂತೆ ಆಹಾರ ಪದಾರ್ಥಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯು ಜನ ಸಾಮ್ಯಾನರಿಗೆ ಶಾಕ್ ಕೊಟ್ಟಂತಾಗಿದೆ. ಈ ಕುರಿತು ಮಾಜಿ ಸಿಎಂ ಹೆಚ್‌ಡಿಕೆ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್‌ಡಿಕೆ ಟ್ವೀಟ್‌ನಲ್ಲಿ ಏನಿದೆ?
5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ.
ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ ₹20 ಏರಿದ್ದರೆ,ಕೆಜಿ ಟೊಮ್ಯಾಟೋ ಬೆಲೆ ₹100 ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ, ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ.4/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 26, 2023
ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ.
ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರ್ಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆಗಳ ಬಗ್ಗೆ, ಆಹಾರ ಪದಾರ್ಥಗಳ ದುಬಾರಿ ಬಗ್ಗೆ ಗಮನ ಹೋಗಲೇ ಇಲ್ಲ. ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ. ಇದನ್ನೂ ಓದಿ: ತರಕಾರಿ, ಹಣ್ಣುಗಳ ಬೆಲೆ ಏರಿಕೆ – ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?
ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ 20ರೂ. ಏರಿದ್ದರೆ,ಕೆಜಿ ಟೊಮ್ಯಾಟೋ ಬೆಲೆ 100 ರೂ. ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ, ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಕೊಟ್ಟ ಭರವಸೆಗಳ ಬಗ್ಗೆ ಉತ್ತರ ಹೇಳಲಿ? ಬೆಲೆಗಳ ಇಳಿಕೆಯ ಬಗ್ಗೆ ಹೇಳಿದ್ದೆಲ್ಲ ಎಲ್ಲಿ ಹೋಯಿತು? ಮತ ಪಡೆದ ಮೇಲೆ ಎಲ್ಲಾ ಮರೆತು ಹೋಯಿತಾ? 135 ಸೀಟು ಸಿಕ್ಕಿದ ಮೇಲೆ ಪ್ರಣಾಳಿಕೆ ಪುಸ್ತಕಕ್ಕೆ ಮೂವತ್ತೇ ದಿನದಲ್ಲಿ ಗೆದ್ದಲು ಹಿಡಿಯಿತಾ?
ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು
1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು!
2.ಗೃಹಜ್ಯೋತಿ ಈಗ ಸುಡುಜ್ಯೋತಿ!!
3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!!!
4.ಗೃಹಲಕ್ಷ್ಮಿಗೆ ಗ್ರಹಣ!!!!
5.ನಿದಿರೆಗೆ ಜಾರಿದೆ ಯುವನಿಧಿ!!!!
7/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 26, 2023
ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ?
ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು: ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು, ಗೃಹಜ್ಯೋತಿ ಈಗ ಸುಡುಜ್ಯೋತಿ, ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ, ಗೃಹಲಕ್ಷ್ಮಿಗೆ ಗ್ರಹಣ ಹಾಗೂ ನಿದ್ರೆಗೆ ಜಾರಿದೆ ಯುವನಿಧಿ ಇವು ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು. ಇದನ್ನೂ ಓದಿ: ಬೆಸ್ಕಾಂ ಎಡವಟ್ಟು, ಮೀಟರ್ ರಿಡೀಂಗ್‌ಗಿಂತ ಹೆಚ್ಚು ಬಿಲ್ – ಜನರ ಜೇಬಿಗೆ ಕತ್ತರಿ
ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ ಎಂದು ಎಚ್ಚರಿಸಿದ್ದಾರೆ.
ಲಂಡನ್: ಕಳೆದ ಎರಡು ವರ್ಷಗಳಿಂದಲೂ ಬ್ರಿಟಿಷ್ ಪ್ರಜೆಗಳು ಸ್ಥಿರವಾದ ಜೀವನ ನಡೆಸಲು ಆರ್ಥಿಕ ಬಿಕ್ಕಟ್ಟಿನ (UK Living Crisis) ಸಮಸ್ಯೆ ಎದುರಿಸುತ್ತಿದ್ದಾರೆ. ಇದರಿಂದ ಕುಟುಂಬದ ಅಗತ್ಯತೆಗಳನ್ನ ಪೂರೈಸಲು ಪರದಾಡುವಂತಾಗಿದ್ದು, ಯುವಜನರು ಕಳ್ಳತನಕ್ಕಿಳಿದಿದ್ದಾರೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸೂಪರ್ ಮಾರ್ಕೆಟ್‌ಗಳಲ್ಲಿ ಕೆಲವರು ಆಹಾರ ಸಾಮಗ್ರಿಗಳು, ಮಕ್ಕಳ ಔಷಧಿ, ಹಾಲು ಚೀಸ್‌ನಂತಹ ವಸ್ತುಗಳನ್ನ (Retail Consortium) ಕದ್ದಿರುವುದಾಗಿಯೂ ಒಪ್ಪಿಕೊಂಡಿದ್ದಾರೆ. ಆಹಾರ ಮತ್ತು ಇಂಧನ ವೆಚ್ಚ ದುಬಾರಿಯಾಗಿರುವುದರಿಂದ ಈ ಕೆಲಸಕ್ಕೆ ಯುವಜನರು ಮುಂದಾಗಿರುವುದು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇಮ್ರಾನ್ ಖಾನ್ ಅರೆಸ್ಟ್ – ಸೇನಾ ಕಚೇರಿ ಮೇಲೆ ಬೆಂಕಿ, ದೇಶಾದ್ಯಂತ ಇಂಟರ್‌ನೆಟ್ ಬಂದ್
ಆಲ್ಕೋಹಾಲ್ ಅಲ್ಲದ ಪಾನೀಯಾಗಳ ಬೆಲೆಯೇ ಶೇ.19.1 ರಷ್ಟು ಏರಿಕೆಯಾಗಿದೆ. ಕಳೆದ ಕೆಲ ವರ್ಷಗಳಲ್ಲಿ ಈ ಬೆಲೆ ಸಾಕಷ್ಟು ಹೆಚ್ಚಾಗಿದ್ದು, ಆಹಾರ ಪದಾರ್ಥಗಳ ಆಮದು ಪ್ರಮಾಣವೂ ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ.
ಆಮದು ನಿಂತುಹೋಗಿರುವ ಕಾರಣ ಅಡುಗೆ ಎಣ್ಣೆ (Cooking Oil), ತುಪ್ಪದ ಬೆಲೆಗಳು ಹೆಚ್ಚಾಗಿವೆ. ಕಸ್ಟಮ್ಸ್ ಗೋದಾಮಿನಲ್ಲಿ ಮೂರೂವರೆ ಲಕ್ಷ ಟನ್ ಅಡುಗೆ ಎಣ್ಣೆ ಸ್ಟಾಕ್ ಇದ್ದರೂ, ಅದನ್ನು ಮಾರುಕಟ್ಟೆಗೆ ತರಲು ಬ್ಯಾಂಕ್‌ಗಳು ಲೆಟರ್ ಆಫ್ ಕ್ರೆಡಿಟ್ಸ್, ರಿಟೈನಿಂಗ್ ಪತ್ರಗಳನ್ನು ಕ್ಲಿಯರ್ ಮಾಡ್ತಿಲ್ಲ. ಹೀಗಾಗಿ ಆಮದು ಉತ್ಪನ್ನಗಳ ಮೇಲೆ ಸರ್‌ಚಾರ್ಜ್ (ತೆರಿಗೆ ರೂಪದ ಸುಂಕ) ಮತ್ತು ಇತರೆ ವೆಚ್ಚಗಳು ಹೆಚ್ಚುತ್ತಿವೆ. ಇದನ್ನೂ ಓದಿ: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ
ಮತ್ತೊಂದೆಡೆ ಡಾಲರ್ (US Dollar) ಎದುರು ಪಾಕ್ ರೂಪಾಯಿ ಅಪಮೌಲ್ಯ ಮುಂದುವರಿದಿದೆ. ಸದ್ಯ ವಿನಿಮಯ ಮೌಲ್ಯ ಒಂದು ಡಾಲರ್‌ಗೆ ಪಾಕಿಸ್ತಾನದ 228 ರೂಪಾಯಿ ಇದೆ. ಖರ್ಚು ಸರಿದೂಗಿಸಲು ಅಮೆರಿಕದಲ್ಲಿರುವ ಹಳೆಯ ರಾಯಭಾರ ಕಚೇರಿಯನ್ನೇ ಪಾಕ್ ಸರ್ಕಾರ ಮಾರಾಟ ಮಾಡಿದೆ. ಚೀನಾ (China) ಮೇಲೆ ಅಧಿಕ ಅವಲಂಬನೆ ಮತ್ತು ದುರಾಡಳಿತವೇ ಪಾಕಿಸ್ತಾನದ ಇಂದಿನ ಸ್ಥಿತಿಗೆ ಕಾರಣ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ.
ಇತ್ತೀಚೆಗಷ್ಟೇ ಪಾಕಿಸ್ತಾನ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಹಲವು ಕ್ರಮ ಕೈಗೊಂಡಿತು. ಪಾಕಿಸ್ತಾನದ ಸರ್ಕಾರ ಇಂಧನ ಉಳಿಸಲು ಮಾರುಕಟ್ಟೆ, ಮಾಲ್, ಮದುವೆ ಹಾಲ್‌ಗಳನ್ನು ಶೀಘ್ರವೇ ಮುಚ್ಚುವುದಾಗಿ ಘೋಷಿಸಿತು. ಇಂಧನ ಉಳಿಸಲು ಹಾಗೂ ಇತರ ದೇಶಗಳಿಂದ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಈ ನಿರ್ಧಾರ ಮಾಡಲಾಗಿದೆ. ಈ ಕ್ರಮಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಸಚಿವರು ಅನುಮೋದನೆ ನೀಡಿದ್ದಾರೆ ಎಂದು ಸರ್ಕಾರ ಹೇಳಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಜುಲೈನಲ್ಲಿ ಶೇ. 6.71ರಷ್ಟಿದ್ದ ಭಾರತದ ಚಿಲ್ಲರೆ ಹಣದುಬ್ಬರವು(Retail Inflation) ಆಗಸ್ಟ್‌ನಲ್ಲಿ ಶೇ. 7ಕ್ಕೆ ಏರಿಕೆ ಕಂಡಿದೆ. ಮುಖ್ಯವಾಗಿ ಆಹಾರ ಪದಾರ್ಥಗಳ(Food items) ಬೆಲೆಯಲ್ಲಿ ಏರಿಕೆಯಾಗಿದೆ. ಸರ್ಕಾರದ ಅಂಕಿಅಂಶಗಳಿಂದ ತಿಳಿದುಬಂದಿದೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳು ಸಹ ಚಿಲ್ಲರೆ ಹಣದುಬ್ಬರ ಏರುಮುಖವಾಗಿತ್ತು, ಜೂನ್‍ನಲ್ಲಿ ಈ ದರವು ಶೇ. 7.01ಕ್ಕೆ ತಲುಪಿತ್ತು. ಸತತ 8ನೇ ತಿಂಗಳು ಈ ದರವು ಶೇ. 6ರಕ್ಕಿಂತಲೂ ಅಧಿಕ ಮಟ್ಟದಲ್ಲಿ ಮುಂದುವರಿದಿದೆ. ಭಾರತೀಯ ರಿಸರ್ವ್ ಬ್ಯಾಂಕ್(RBI) (ಆರ್‌ಬಿಐ) ಚಿಲ್ಲರೆ ಹಣದುಬ್ಬರಕ್ಕೆ ಶೇ.6ರ ಮಿತಿ ನಿಗದಿಪಡಿಸಿದೆ.
ಆಹಾರ ಪದಾರ್ಥಗಳ ಹಣದುಬ್ಬರ ದರವು ಆಗಸ್ಟ್‌ನಲ್ಲಿ (August) ಶೇ. 7.62ಕ್ಕೆ ಹೆಚ್ಚಳವಾಗಿದೆ. ಈ ದರವು ಜುಲೈನಲ್ಲಿ ಶೇ. 6.75ಕ್ಕೆ ಇಳಿಕೆಯಾಗಿತ್ತು. ಮಳೆ ಹಾಗೂ ಬೆಳೆ ಹಾನಿಯ ಕಾರಣಗಳಿಂದ ತರಕಾರಿ(Vegetables) ಬೆಲೆ ಏರಿಕೆ ಆಗಿದ್ದು, ತರಕಾರಿ ಹಣದುಬ್ಬರವು ಆಗಸ್ಟ್‌ನಲ್ಲಿ ಶೇ 13.23ಕ್ಕೆ ತಲುಪಿದೆ. ಇದನ್ನೂ ಓದಿ: ಆಟೋ ಚಾಲಕನ ಮನೆಯಲ್ಲಿ ಊಟ ಮಾಡಿದ ಕೇಜ್ರಿವಾಲ್ – ರಿಕ್ಷಾದಲ್ಲೇ ಪ್ರಯಾಣಿಸಿ ಸರಳತೆ ಮೆರೆದ್ರು
ವಾರ್ಷಿಕ ಆಧಾರದ ಮೇಲೆ ತರಕಾರಿಗಳು, ಸಾಂಬಾರ್ ಪದಾರ್ಥಗಳು, ಪಾದರಕ್ಷೆಗಳು ಮತ್ತು ‘ಇಂಧನ ಮತ್ತು ಲೈಟ್’ ಬೆಲೆ ಏರಿಕೆಯ ದರವು ಶೇಕಡಾ 10 ಕ್ಕಿಂತ ಹೆಚ್ಚಾಗಿದೆ. ಕಳೆದ ತಿಂಗಳಿನಲ್ಲಿ ಮೊಟ್ಟೆಯ(Egg) ಮೇಲೆ ಹಣದುಬ್ಬರ ಕಡಿತವಾಗಿರುವುದು ಕಂಡುಬಂದಿದೆ. ‘ಮಾಂಸ ಮತ್ತು ಮೀನು’ಗಳ(Meat-Fish) ದರ ಬಹುತೇಕ ಸಮತಟ್ಟಾಗಿದೆ.
ಸತತ ಮೂರು ತ್ರೈಮಾಸಿಕಗಳಲ್ಲಿ ಸರಾಸರಿ ಹಣದುಬ್ಬರವು ಶೇ. 2ರಿಂದ 6ರ ಮಿತಿಯನ್ನು ದಾಟಿದೆ. ಹಣದುಬ್ಬರ ನಿಯಂತ್ರಿಸುವ ನಿಟ್ಟಿನಲ್ಲಿ ಆರ್‌ಬಿಐ ಮತ್ತೆ ರೆಪೋ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ. ರೆಪೋ ದರ ಹೆಚ್ಚಳವಾದರೆ, ಗೃಹ ಸಾಲ,(Home Loan) ವಾಹನ ಸಾಲ (Vehicle Loan) ಸೇರಿದಂತೆ ವಿವಿಧ ಸಾಲಗಳ ಮೇಲಿನ ಬಡ್ಡಿ ದರಗಳನ್ನು(Interest Rate) ಬ್ಯಾಂಕ್‍ಗಳು ಮತ್ತೆ ಏರಿಕೆ ಮಾಡುತ್ತವೆ.
ಆಗಸ್ಟ್‌ನಲ್ಲಿ ನಗರ ಪ್ರದೇಶಗಳಿಗಿಂತಲೂ ಗ್ರಾಮೀಣ ಭಾಗಗಳಲ್ಲಿ ಹಣದುಬ್ಬರವು ತೀವ್ರ ಏರಿಕೆ ಕಂಡಿದ್ದು, ಗ್ರಾಮೀಣ ಭಾಗದ ಹಣದುಬ್ಬರವು ಹಿಂದಿನ ಶೇ.6.8ರಿಂದ ಶೇ.7.15ಕ್ಕೆ ಹೆಚ್ಚಳವಾಗಿದೆ. ನಗರದ ಹಣದುಬ್ಬರವು ಶೇ.6.72ರಷ್ಟಿದೆ. ಇದನ್ನೂ ಓದಿ: ಸಚಿವ ಆನಂದ್ ಸಿಂಗ್, ಕಾರ್ಪೊರೇಟರ್ ನಡುವೆ ರಾಜೀನಾಮೆ ಸಮರ
ಜುಲೈನಲ್ಲಿ ಭಾರತದ ಕೈಗಾರಿಕಾ ಉತ್ಪಾದನೆಯು ಶೇ. 2.4 ರಷ್ಟು ಏರಿಕೆಯಾಗಿದೆ. 2021ರ ಜುಲೈನಲ್ಲಿ ಐಐಪಿ ಶೇ.11.5% ರಷ್ಟು ಬೆಳೆದಿದೆ. ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ (ಎನ್‍ಎಸ್‍ಒ) ಬಿಡುಗಡೆ ಮಾಡಿದ ಕೈಗಾರಿಕಾ ಉತ್ಪಾದನೆಯ ಸೂಚ್ಯಂಕ (ಐಐಪಿ) ದತ್ತಾಂಶದ ಪ್ರಕಾರ, ಉತ್ಪಾದನಾ ವಲಯದಲ್ಲಿನ ಉತ್ಪಾದನೆಯು 2022ರ ಜುಲೈನಲ್ಲಿ ಶೇ. 3.2 ರಷ್ಟು ಮುಟ್ಟಿದೆ. ಏಪ್ರಿಲ್ 2020ರಲ್ಲಿ ಕೊರೊನಾ ವೈರಸ್(Corona Virus) ಸೋಂಕಿನಿಂದಾಗಿ ವಿಧಿಸಲಾಗಿದ್ದ ಲಾಕ್‍ಡೌನ್ (Lockdown) ಹಿನ್ನೆಲೆ ಆರ್ಥಿಕ ಚಟುವಟಿಕೆಗಳಲ್ಲಿನ ಕುಸಿತದಿಂದಾಗಿ ಕೈಗಾರಿಕಾ ಉತ್ಪಾದನೆಯು ಶೇ. 57.3 ರಷ್ಟು ಕುಸಿದಿದೆ.
ಜನಸಾಮಾನ್ಯರಿಗೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಜತೆಗೆ ಅಕ್ಕಿ ದರ ಹೆಚ್ಚಳದ ಶಾಕ್ ಕೂಡಾ ಸದ್ದಿಲ್ಲದೆ ತಟ್ಟಿದೆ. ಸಾಮಾನ್ಯವಾಗಿ ಕೆಜಿಗೆ 1 ಅಥವಾ 2 ರೂ. ಏರಿಕೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಕೇವಲ ಎರಡು ತಿಂಗಳಲ್ಲಿ ಕೆಜಿಗೆ 8-10 ರೂ.ವರೆಗೆ ಏರಿಕೆಯಾಗಿದೆ. ಜುಲೈ ಕೊನೆ ವಾರದಲ್ಲಿ ಇದ್ದ ಅಕ್ಕಿ ದರಕ್ಕೂ, ಈಗಿನ ದರಕ್ಕೂ ಸಾಕಷ್ಟು ವ್ಯತ್ಯಾಸವಿದ್ದು, ಅಸಹಜ ರೀತಿಯಲ್ಲಿ ಬೆಲೆ ಏರಿಕೆಯಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೊರೊನಾ ವೈರಸ್ ಯಾವ ರೀತಿಯ ಅವಂತಾರ ಸೃಷ್ಟಿಸಿದೆ ಎಂಬುದು ತಿಳಿದೇ ಇದೆ. ಬಡವರು ಕೊರೊನಾ ವೈರಸ್ ಹಾಗೂ ಲಾಕ್‍ಡೌನ್ ಸುಳಿಗೆ ಸಿಕ್ಕಿ ನಲುಗಿ ಹೋಗಿದ್ದಾರೆ. ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ಸರ್ಕಾರ ಎಷ್ಟೇ ಕ್ರಮ ಕೈಗೊಂಡರೂ ಹತೋಟಿಗೆ ಬರುತ್ತಿಲ್ಲ. ಇಂತಹ ಸಂದರ್ಭದಲ್ಲಿ ಹಲವು ನಟ, ನಟಿಯರು ಹಾಗೂ ಧನಿಕರು ಸಹಾಯಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಸಹ ನೆರವಾಗುತ್ತಿದ್ದಾರೆ.
ಸದಾ ಭಿಕ್ಷಾಟನೆ ಮಾಡಿಯೇ ಜೀವನ ಸಾಗಿದುತ್ತಿದ್ದ ಮಂಗಳಮುಖಿಯರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಅಲ್ಲದೆ ಲಾಕ್‍ಡೌನ್ ಸುಳಿಗೆ ಹಲವು ದಿನಗೂಲಿ ಕಾರ್ಮಿಕರು ಸಹ ಸಿಲುಕಿಕೊಂಡಿದ್ದಾರೆ. ಅಂತಹವರಿಗೆ ರಾಧಿಕಾ ಕುಮಾರಸ್ವಾಮಿಯವರು ಸಹಾಯ ಮಾಡಿದ್ದಾರೆ.
ಮಂಗಳಮುಖಿಯರು ಹಾಗೂ ಬಡವರನ್ನು ಹುಡುಕಿಕೊಂಡು ಹೋಗಿ ಅಕ್ಕಿ, ಬೇಳೆ ಸೇರಿದಂತೆ ವಿವಿಧ ರೀತಿಯ ಆಹಾರ ಸಾಮಗ್ರಿಗಳನ್ನು ದಾನ ಮಾಡುತ್ತಿದ್ದಾರೆ. ಈ ಮೂಲಕ ಅವರ ಕಷ್ಟಕ್ಕೆ ನೆರವಾಗುತ್ತಿದ್ದಾರೆ. ಸಹಾಯ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿವಿಧ ರೀತಿಯ ಆಹಾರ ಸಾಮಾಗ್ರಿಗಳನ್ನು ಸ್ವತಃ ಅವರೇ ಕೈಯಾರೇ ಹಂಚಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ವಿಡಿಯೋ ಪೋಸ್ಟ್ ಮಾಡಿರುವ ಅವರು, ನಾವೆಲ್ಲರೂ ಮಾನವರು, ಇಂತಹ ಸಮಯದಲ್ಲಿ ದುರ್ಬಲರಿಗೆ, ಅಗತ್ಯವಿರುವವರಿಗೆ ಸಹಾಯ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಭಾವಿಸುತ್ತೇನೆ. ಹೀಗಾಗಿ ಬೆಂಗಳೂರಿನಲ್ಲಿ ಅಗತ್ಯವಿರುವವರಿಗೆ ಸ್ವಯಂ ಪ್ರೇರಣೆಯಿಂದ ಆಹಾರ ಪದಾರ್ಥ ವಿತರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಅಂದಹಾಗೆ ನಟಿ ರಾಧಿಕಾ ಕುಮಾರಸ್ವಾಮಿಯವರು ಮಾಗಡಿ ರೋಡ್, ಕೆಂಗೇರಿ, ನಾಯಂಡಹಳ್ಳಿ ಮುಂತಾದ ಏರಿಯಾಗಳಲ್ಲಿ ದಿನಸಿ ವಿತರಿಸಿದ್ದು, 1200ಕ್ಕೂ ಹೆಚ್ಚು ಮನೆಗಳಿಗೆ ಹಂಚಿಕೆ ಮಾಡಿದ್ದಾರೆ. ವಿಶೇಷವಾಗಿ ಮಂಗಳ ಮುಖಿಯರಿಗೆ ರಾಧಿಕಾ, ದಿನಸಿ ಹಂಚಿದ್ದಾರೆ.
ಈಗಾಗಲೇ ಹಲವು ನಟ, ನಟಿಯರು ಸಹಾಯ ಮಾಡಿದ್ದು, ಪಿಎಂ ಕೇರ್ಸ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ಸಂದಾಯ ಮಾಡಿದ್ದಾರೆ. ಇನ್ನೂ ಕೆಲವರು ನೇರವಾಗಿ ಸಿನಿಮಾ ದಿನಗೂಲಿ ಕಾರ್ಮಿಕರು ಹಾಗೂ ಬಡವರ ಖಾತೆಗೆ ನೇರವಾಗಿ ಹಣ ಹಾಕಿದ್ದಾರೆ. ಇನ್ನೂ ಹಲವರು ಅಗತ್ಯ ಇರುವವರ ಮನೆಗಳಿಗೆ ಆಹಾರ ಪದಾರ್ಥ ಹಾಗೂ ಅಗತ್ಯ ವಸ್ತುಗಳನ್ನು ತಲುಪಿಸುತ್ತಿದ್ದಾರೆ. ಇದೆಲ್ಲದರ ಮಧ್ಯೆ ಇದೀಗ ರಾಧಿಕಾ ಕುಮಾರಸ್ವಾಮಿಯವರು ಸಹಾಯ ಮಾಡಿದ್ದಾರೆ.
ಬೆಂಗಳೂರು: ಆರೋಗ್ಯ ತುರ್ತು ಪರಿಸ್ಥಿತಿಯಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಇದರಿಂದಾಗಿ ಆಹಾರವಿಲ್ಲದೆ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ಕಾರ್ಮಿಕರು, ಬಡವರು, ನಿರ್ಗತಿಕರ ಕಷ್ಟ ಹೇಳತೀರದಾಗಿದೆ. ಹಲವರು ಸಹಾಯ ಮಾಡುತ್ತಿದ್ದರೂ ಸರಿಯಾಗಿ ತಲುಪುತ್ತಿಲ್ಲ. ಹಲವು ನಟರು ಕಾರ್ಮಿಕರಿಗೆ ಸಹಾಯ ಮಾಡುತ್ತಿದ್ದರೆ, ಇನ್ನೂ ಕೆಲವರು ತಮ್ಮ ಸುತ್ತಲಿನವರಿಗೆ ನೆರವು ನೀಡುತ್ತಿದ್ದಾರೆ. ಅದೇ ರೀತಿ ಕಾಮಿಡಿ ಕಿಂಗ್ ಸಾಧುಕೋಕಿಲ ಸಹ ತಮ್ಮ ಸುತ್ತಲಿನ ಜನರ ನೆರವಿಗೆ ನಿಂತಿದ್ದಾರೆ.
ಹಲವು ನಟ, ನಟಿಯರು ಪಿಎಂ ಕೇರ್ಸ್ ಹಾಗೂ ಸಿಎಂ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಧನ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು ಸಿನಿಮಾ ಕಾರ್ಮಿಕರ ಬಗ್ಗೆ ಒಲವು ತೋರಿದ್ದಾರೆ. ಹಲವು ನಟ, ನಟಿಯರು ಪ್ರಾಣಿಗಳ ಮೇಲೆ ಅಕ್ಕರೆ ತೋರಿಸುತ್ತಿದ್ದಾರೆ. ಅದೇ ರೀತಿ ಸಾಧು ಕೋಕಿಲಾ ತಮ್ಮ ನೆರೆ ಹೊರೆಯ ಜನರಿಗೆ ನೆರವು ನೀಡುತ್ತಿದ್ದಾರೆ. ಈ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ.
ಬಡವರಿಗೆ ಉಚಿತವಾಗಿ ಆಹಾರ ಪದಾರ್ಥಗಳನ್ನು ವಿತರಿಸಿದ್ದು, ತಾವು ವಾಸಿಸುವ ಹೊಸಕೆರೆ ಹಳ್ಳಿ ಸುತ್ತಮುತ್ತಲಿನ ಜನರಿಗೆ ಆಹಾರ ಸಾಮಗ್ರಿ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಲಂ ನಿವಾಸಿಗಳ ಮನೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿದಿದ್ದಾರೆ. ನಂತರ ಆಹಾರ ಪದಾರ್ಥಗಳನ್ನು ನೀಡಿದ್ದಾರೆ.
ಈ ವೇಳೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸಾಧುಕೋಕಿಲಾ, ನಾವು ಆಹಾರ ಪದಾರ್ಥಗಳನ್ನು ತಂದಿದ್ದೇವೆ. ಆದರೆ ಯಾರಿಗೆ ಕೊಡಬೇಕೆಂಬುದು ತಿಳಿಯುತ್ತಿಲ್ಲ. ನಿಜವಾಗಿಯೂ ಅಗತ್ಯವಿದ್ದವರಿಗೆ ನೀಡಿದರೆ ನಮಗೂ ಸಮಾಧಾನ, ಅವಿರಿಗೂ ಸಂತೃಪ್ತಿ ದೊರೆಯುತ್ತದೆ. ಹೀಗಾಗಿ ಅಗತ್ಯವಿರುವ ಜನರ ಪಟ್ಟಿಯನ್ನು ಸರ್ಕಾರ ಮಾಡಬೇಕು. ಸಹಾಯ ಮಾಡಲು ಬಂದವರನ್ನು ಅಲ್ಲಿಗೆ ಕಳುಹಿಸಬೇಕು. ಎಲ್ಲ ಮನೆಗಳ ಲಿಸ್ಟ್ ಮಾಡಿ ಯಾರಿಗೆ ಅವಶ್ಯಕತೆ ಇದೆ ಎನ್ನುವುನ್ನು ತಿಳಿಸಬೇಕು ಎಂದರು.
ಮಂತ್ರಿಗಳು, ಶಾಸಕರು ಅವರವರ ಕೆಲಸದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ ಅವರ ಏರಿಯಾದ ಬಗ್ಗೆ ತಿಳಿದುಕೊಂಡವರು ಕಾರ್ಪೋರೇಟರ್‍ಗಳು. ಅವರು ಕಾರ್ಯಕರ್ತರು ಹಾಗೂ ಇತರೆ ವಿಧಾನಗಳ ಮೂಲಕ ಇವರು ಬಡವರಿದ್ದಾರೆ, ಇವರಿಗೆ ಆಹಾರ ಪದಾರ್ಥಗಳ ಅವಶ್ಯಕತೆ ಇದೆ ಎಂಬುದರ ಪಟ್ಟಿ ನೀಡಿದರೆ, ಅಂತಹವರಿಗೆ ನಾವು ನೀಡಬಹುದು. ತುಂಬಾ ಜನ ಆಹಾರ ಹಾಗೂ ಆಹಾರ ಪದಾರ್ಥಗಳನ್ನು ತಂದಿದ್ದಾರೆ. ಆದರೆ ಅದನ್ನು ಯಾರಿಗೆ ಹಂಚಬೇಕೆಂದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎಲ್ಲ ಮನೆಗಳಿಗೆ ಸ್ಯಾನಿಟೈಸರ್ ಹಂಚುತ್ತೇವೆ ಎಂದರು. ಆದರೆ ಇನ್ನೂ ನೀಡಿಲ್ಲ. ಏನು ನಡೆಯುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಆದರೆ ಕಾರ್ಪೋರೇಟರ್ ಕೆಲಸ ಮಾಡುತ್ತಿಲ್ಲ. ಅಗತ್ಯ ವಸ್ತುಗಳನ್ನು ಕೊಳ್ಳಲು ಜನ ಹೊರಗಡೆ ಬರುತ್ತಿದ್ದಾರೆ. ಈ ವ್ಯವಸ್ಥೆಯನ್ನು ಸರಿ ಮಾಡಿದರೆ ಜನ ಹೊರಗಡೆ ಬರುವುದಿಲ್ಲ. ಅಲ್ಲದೆ ಕೊರೊನಾ ಪೀಡೆ ತೊಲಗಿಸಬೇಕಾದಲ್ಲಿ ನಮ್ಮ ಪಕ್ಕದ ಮನೆಯವರಿಗೆ ನಾವು ಸಹಾಯ ಮಾಡಿದರೆ ಸಾಕು. ಹೀಗಾಗಿ ಜನರೇ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂದು ಕರೆ ನೀಡಿದ್ದಾರೆ.
ಅಲ್ಲದೆ ಎಲ್ಲೆಂದರಲ್ಲಿ ರಾಸಾಯನಿಕ ಸಿಂಪಡಿಸುತ್ತಿದ್ದಾರೆ, ವಿದೇಶದಿಂದ ಬಂದವರೇ ಕೊರೊನಾ ತರುತ್ತಿದ್ದಾರೆ ಅವರು ನೆಲೆಸಿರುವ ಏರಿಯಾಗಳಲ್ಲಿ ಬಿಟ್ಟು, ಸ್ಲಂಗಳಲ್ಲಿ ರಾಸಾಯನಿಕ ಸಿಂಪಡಿಸುತ್ತಿದ್ದಾರೆ ಎಂದರು.
ಕೋಲಾರ: ವಸತಿ ಶಾಲೆಯಲ್ಲಿದ್ದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಾಂಶುಪಾಲರು ಗ್ರಾಮಸ್ಥರಿಗೆ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ರಾಜೇನಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಡರಾತ್ರಿ ನಡೆದಿದೆ.
ವಸತಿ ಶಾಲೆಯ ಪ್ರಾಂಶುಪಾಲರು ಅಕ್ರಮವಾಗಿ ಆಹಾರ ಪದಾರ್ಥಗಳನ್ನು ಸಾಗಿಸುತ್ತಿದ್ದರು. ಪದಾರ್ಥಗಳನ್ನು ಟೆಂಪೊಗೆ ಲೋಡ್ ಮಾಡಿ ಕಳಿಸುವ ವೇಳೆ ಪ್ರಾಂಶುಪಾಲ ಮಂಜುನಾಥ್ ಸೇರಿದಂತೆ ಇಬ್ಬರು ಗ್ರಾಮಸ್ಥರ ಕೈಗೆ ಸಾಕ್ಷಿ ಸಮೇತ ಸಿಕ್ಕಿ ಬಿದ್ದಿದ್ದಾರೆ. ಪ್ರಾಂಶುಪಾಲರು ಸೇರಿ ಮೂವರನ್ನು ಗ್ರಾಮಸ್ಥರು ಹಿಡಿದು ಕೂಡಿ ಹಾಕಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹಲವು ದಿನಗಳಿಂದ ವಿದ್ಯಾರ್ಥಿಗಳಿಗೆ ಬರುತ್ತಿದ್ದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬರುತ್ತಿತ್ತು. ಆದ್ರೆ ಶುಕ್ರವಾರ ತಡರಾತ್ರಿ ಖಚಿತ ಮಾಹಿತಿ ಮೇರೆಗೆ ವಸತಿ ಶಾಲೆ ಮೇಲೆ ಗ್ರಾಮಸ್ಥರು ದಾಳಿ ಮಾಡಿದಾಗ ಅಕ್ರಮ ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳನ್ನು ಮಾಸ್ತಿ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು.
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ಸರ್ಕಾರಿ ಶಾಲೆಗಳಿಗೆ ಬಿಸಿಯೂಟದ ಯೋಜನೆಗೆ ವಿತರಿಸಿದ ಆಹಾರ ಪದಾರ್ಥಗಳಲ್ಲಿ ಹುಳು ಪತ್ತೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆದಿದೆ.
ಎಚ್.ಡಿ.ಕೋಟೆ ಅಕ್ಷರ ದಾಸೋಹ ನಿರ್ದೇಶಕ ಸಿದ್ದರಾಜುರಿಂದ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆದಿದೆ. ಆಹಾರ ಪದಾರ್ಥಗಳಲ್ಲಿ ಹುಳ ಇರುವ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಬಂದ ನಂತರ ಶಾಲೆಗಳಿಗೆ ಭೇಟಿ ನೀಡಿದ ಅಕ್ಷರ ದಾಸೋಹ ನಿರ್ದೇಶಕ ಸಿದ್ದರಾಜು, ಶಾಲೆಯ ಶಿಕ್ಷಕರಿಗೆ ಬೆದರಿಸಿ ಇದು ಹಳೆಯ ದಾಸ್ತಾನು ಎಂದು ಸುಳ್ಳು ಹೇಳುವಂತೆ ಸೂಚಿಸಿದ್ದಾರೆ.
ನಾನು ನಿಮ್ಮ ಮೇಲಾಧಿಕಾರಿ ನಾನು ಹೇಳಿದಂತೆ ಕೇಳಿ ಎಂದು ತಾಕೀತು ಮಾಡಿ ಹುಳು ಇರುವುದು ನವೆಂಬರ್ ತಿಂಗಳ ಬೇಳೆ ಎಂದು ಬರೆದುಕೊಡುವಂತೆ ಒತ್ತಾಯಿಸಿ ಶಿಕ್ಷಕನಿಗೆ ಬೆದರಿಸಿ ಸಹಿ ಮಾಡಿಸಿಕೊಂಡಿದ್ದಾರೆ. ನಂತರ ಇದು ಹಳೆಯ ದಾಸ್ತಾನು ಎಂದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ.
ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿದ್ಯಾಂತಹ ಸುಮಾರು 304 ಶಾಲೆಯ ವಿದ್ಯಾರ್ಥಿಗಳು ಈ ಪರಿಸ್ಥಿತಿಯನ್ನು ಎದುರಿಸುತ್ತಿದ್ದರು. ಈ ಶಾಲೆಗಳಿಗೆ ಉತ್ತಮವಾದ ಆಹಾರ ಪದಾರ್ಥಗಳ ಪೂರೈಕೆ ಆಗುತ್ತಿಲ್ಲ. ಕಳೆದು ಎರಡು ತಿಂಗಳಿಂದ ಶಾಲೆಗಳಿಗೆ ಪೂರೈಕೆಯಾಗಿರುವ ತೊಗರಿಬೇಳೆ ಹಾಗೂ ಅಕ್ಕಿಯಲ್ಲಿ ಓಟ್ಟೆಹುಳುಗಳು ತುಂಬಿತ್ತು. ಬಿಸಿಯೂಟದ ಸಿಬ್ಬಂದಿ ಇವುಗಳನ್ನು ಎಷ್ಟೇ ಶುಚಿ ಮಾಡಿದ್ರೂ ತೆಗೆಯಲು ಸಾಧ್ಯವಾಗುತ್ತಿರಲಿಲ್ಲ. ಯಾವುದೇ ಪೋಷಕಾಂಶ ಸಿಗದ ಈ ಆಹಾರವನ್ನು ಮಕ್ಕಳು ತಿನ್ನಲು ಸಾಧ್ಯವಾಗದೇ ಎಸೆಯುತ್ತಿದ್ದರು.
ಈ ವಿಚಾರವನ್ನು ಅಕ್ಷರ ದಾಸೋಹದ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು, ಆಹಾರ ಇಲಾಖೆಯಿಂದ ಪೂರೈಕೆಯಾಗುತ್ತಿರುವ ಆಹಾರವೇ ಇದಾಗಿದ್ದು ನಾವೇನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದರು. ಇತ್ತ ಸಿಬ್ಬಂದಿ ಬೇರೆ ದಾರಿಯಿಲ್ಲ ಎಂಬಂತೆ ಇದೇ ಆಹಾರವನ್ನು ಮಧ್ಯಾಹ್ನ ಅಡುಗೆ ಮಾಡಿ ಮಕ್ಕಳಿಗೆ ನೀಡುತ್ತಿದ್ದರು. ಹಸಿದು ಬಂದ ಬಡ ಮಕ್ಕಳು ಕೂಡ ತಟ್ಟೆಯಲ್ಲಿ ಹುಳ ಕಂಡರೂ ಕಣ್ಮುಚ್ಚಿಕೊಂಡು ತಿನ್ನುತ್ತಿದ್ದರು.
ದಾವಣಗೆರೆ: ಅವಧಿ ಮುಗಿದ ಬೇಕರಿ ಐಟಂ ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಹಾಗೂ ಸಂಗ್ರಹಿಸಿಟ್ಟ ರಿಲಯನ್ಸ್ ಮಾರ್ಕೆಟ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಲಿಕೆಯ ಆರೋಗ್ಯ ಅಧಿಕಾರಿಗಳು, ದಾವಣಗೆರೆ ಜಿಲ್ಲೆಯಲ್ಲಿರುವ ರಿಲಯನ್ಸ್ ಮಾರ್ಕೆಟ್ ಮೇಲೆ ದಾಳಿ ನಡೆಸಿದ್ದು, ನಿಷೇಧಿತ ಪ್ಲಾಸ್ಟಿಕ್ ಕವರ್ ಹಾಗೂ ಎರಡು ಟನ್ ಗಳಷ್ಟು ಬೇಕರಿ ಐಟಂಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅವಧಿ ಮುಗಿದ ಕೂಲ್ ಡ್ರಿಂಕ್ಸ್ ಮಾರಾಟ ಮಾಡುತ್ತಿರುವುದನ್ನು ಕಂಡು ಸಾರ್ವಜನಿಕರು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಅಧಿಕಾರಿಗಳಿಗೆ ದೂರು ಸಹ ನೀಡಿದ್ದರು.
ದೂರಿನ ಮೆರಿಗೆ ಸೋಮವಾರ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದರು. ಇನ್ನು ರಿಲಯನ್ಸ್ ಮಾರ್ಕೆಟ್ ನ ಟ್ರೇಡ್ ಲೈಸನ್ಸ್ ಸಹ ಕಡಿಮೆ ತೆಗೆದುಕೊಂಡಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಅಲ್ಲದೇ ಅವಧಿ ಮುಗಿದ ಆಹಾರ ಪದಾರ್ಥಗಳ ಮೇಲಿನ ಲೇಬಲ್ ಕಿತ್ತು ಹಾಕಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪಗಳು ಕೇಳಿ ಬರುತ್ತಿವೆ.
ಆಹಾರ ಪದಾರ್ಥಗಳನ್ನು ಅವೈಜ್ಞಾನಿಕ ಮಾರಾಟ ಮಾಡುತ್ತಿದ್ದು ರಿಲಯನ್ಸ್ ಮಾರ್ಕೆಟ್ ಮೇಲೆ ದೂರು ದಾಖಲು ಮಾಡಿಕೊಂಡು ಪ್ರಧಾನ ಕಚೇರಿಗೆ ನೋಟಿಸ್ ಕಳುಹಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಆಹಾರ ಅಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.