Tag: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ – 2006

  • ಬೆಂಗ್ಳೂರಿಗೆ ಮಾರಾಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಸರ್ಕಾರದ ಕೈ ಸೇರಿದ ರಿಪೋರ್ಟ್

    ಬೆಂಗ್ಳೂರಿಗೆ ಮಾರಾಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಸರ್ಕಾರದ ಕೈ ಸೇರಿದ ರಿಪೋರ್ಟ್

    – ನಾಯಿ ಮಾಂಸ ದಂಧೆ ಆರೋಪ; ವರದಿಯಲ್ಲಿ ಏನಿದೆ?

    ಬೆಂಗಳೂರು: ನಾಯಿ ಮಾಂಸ (Dog Meat) ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದ ಅಧಿಕೃತ ರಿಪೋರ್ಟ್ ಸರ್ಕಾರದ ಕೈ ಸೇರಿದೆ. ಮಾಂಸ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (FSL) ಆಯುಕ್ತ ಕೆ ಶ್ರೀನಿವಾಸ್, ಆಹಾರ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ವರದಿ ಸಲ್ಲಿಸಿದ್ದಾರೆ.

    ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ಮಾರಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಆಹಾರ ಮತ್ತು ಗುಣಮಟ್ಟ ಆಯುಕ್ತಾಲಯ ವರದಿ ನೀಡಿದೆ. ಹೈದ್ರಾಬಾದ್ ಐಸಿಎಆರ್ ರಿಪೋರ್ಟ್ ಗುಣಮಟ್ಟ ಇಲಾಖೆ ಈ ವರದಿ ನೀಡಿದೆ. ಐಸಿಎಆರ್ ರಿಪೋರ್ಟ್‌ಲ್ಲಿ ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ವರದಿಯಾಗಿದೆ. ಸ್ಯಾಂಪಲ್ ಪರಿಶೀಲಿಸಿ ಐಸಿಎಆರ್ ವರದಿ ನೀಡಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಡಿಕೆಶಿ – ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ

    ಈ ಕುರಿತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಮಾತನಾಡಿ, ಕುರಿ ಮಾಂಸ ಎಂದು ವರದಿ ಬಂದಿದೆ. ಪ್ರಾಥಮಿಕ ಹಂತದಲ್ಲಿ 9 ಜನರಿಗೆ ಲೈಸೆನ್ಸ್ ಪಡೆದಿದ್ದರು ಎಂಬ ಹಿನ್ನೆಲೆ ನೋಟಿಸ್ ನೀಡಿ ವಿಚಾರಣೆ ಮಾಡಲಾಯಿತು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಲೈಸೆನ್ಸ್ ಇದೆ. ಹೀಗಾಗಿ ರಾಜಸ್ಥಾನದಿಂದ ಕುರಿ ತಂದು ಮಾರಾಟ ಮಾಡುತ್ತಿದ್ದರು. ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಕುಮಾರಸ್ವಾಮಿ ಕಿಡಿ

    ಇನ್ನು ನಾಯಿ ಮಾಂಸ ಎಂದು ವದಂತಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಅವರ ಮೇಲೆ ಕ್ರಮ ಕೈಗೊಳ್ಳುತ್ತದೆ. ನಾವು ಪೊಲೀಸರಿಗೆ ವರದಿ ನೀಡುತ್ತೇವೆ. ವದಂತಿ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದರು. ಇದನ್ನೂ ಓದಿ: Wayanad Landslide |ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ

  • 100 ಮಿಲಿ 500 ರೂ.ಗೆ ಸೇಲ್‌ – ತಾಯಿ ಎದೆಹಾಲು ಮಾರಾಟ ಮಾಡ್ತಿದ್ದ ಮಳಿಗೆಗೆ ಸೀಲ್‌!

    100 ಮಿಲಿ 500 ರೂ.ಗೆ ಸೇಲ್‌ – ತಾಯಿ ಎದೆಹಾಲು ಮಾರಾಟ ಮಾಡ್ತಿದ್ದ ಮಳಿಗೆಗೆ ಸೀಲ್‌!

    – ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ – 2006 ಏನು ಹೇಳುತ್ತದೆ?

    ಚೆನ್ನೈ: ವಾಣಿಜ್ಯ ಉದ್ದೇಶಗಳಿಗಾಗಿ ತಾಯಿಯ ಎದೆಹಾಲು ಮಾರಾಟ ಮಾಡುವುದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ – 2006ರ (FSS Act 2006) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಹೀಗಿದ್ದೂ ಚೆನ್ನೈನಲ್ಲಿ ತಾಯಿಯ ಎದೆಹಾಲು (Human Breast Milk) ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ.

    ಪ್ರತಿ 100 ಮಿಲಿ ತಾಯಿಯ ಎದೆಹಾಲನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದ ಮಳಿಗೆಯೊಂದನ್ನು ಚೆನ್ನೈನಲ್ಲಿ (Chennai) ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಸೀಲ್‌ ಮಾಡಿದ್ದು, ವೈಜ್ಞಾನಿಕ ತನಿಖೆಗಾಗಿ ಮಾದರಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ಮೊಬೈಲ್ ಕಳೆದಿದೆ, ಸಾಕ್ಷ್ಯ ನಾಶ ಮಾಡಿದ್ದಾರೆ ಅನ್ನೋದನ್ನ ಎಸ್ಐಟಿಯವರು ಹೇಳಿದ್ರೆ ಒಪ್ಪಿಕೊಳ್ತೇನೆ: ಪರಮೇಶ್ವರ್

    ತಾಯಂದಿರ ಎದೆಹಾಲನ್ನು ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ 10 ದಿನಗಳಿಂದ ತೀವ್ರ ನಿಗಾ ವಹಿಸಿದ್ದ ಅಧಿಕಾರಿಗಳು ಶುಕ್ರವಾರ (ಇಂದು) ಮಳಿಗೆ ಮೇಲೆ ದಾಳಿ ನಡೆಸಿದ್ದಾರೆ. ತಿರುವಳ್ಳೂರಿನ ಆಹಾರ ಸುರಕ್ಷತಾ ಇಲಾಖೆಯ ನಿಯೋಜಿತ ಅಧಿಕಾರಿ ಡಾ ಎಂ ಜಗದೀಶ್ ಚಂದ್ರ ಬೋಸ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ 100 ಮಿಲಿ ಬಾಟಲಿಗಳಲ್ಲಿ ಸಂಗ್ರಹಿಸಿದ್ದ ಮಾನವರ ಎದೆಹಾಲು ಹಾಗೂ ದಾನಿ ತಾಯಂದಿರಿಂದ ಪಡೆದ ಹಾಲನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

    ಹಾಲನ್ನು ಪ್ಯಾಕಿಂಗ್‌ ಮಾಡುವುದಕ್ಕೆ ಅವರು ಯಾವ ವಿಧಾನಗಳನ್ನು ಅನುಸರಿಸಿದ್ದಾರೋ ನಮಗೆ ತಿಳಿದಿಲ್ಲ. ಈ ಬಗ್ಗೆ ವೈಜ್ಞಾನಿಕವಾಗಿ ತನಿಖೆ ನಡೆಸಿ, ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಇದನ್ನೂ ಓದಿ: ದೇವರಲ್ಲಿ ನಂಬಿಕೆ ಇದ್ರೆ ಮನೆಯಲ್ಲೇ ಧ್ಯಾನ ಮಾಡಿ- ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

    ಹಾಲನ್ನು ಪಾಶ್ಚಾತ್ಯೀಕರಿಸಲು ಅವರು ಯಾವ ವಿಧಾನವನ್ನು ಅನುಸರಿಸಿದ್ದಾರೆ ಎಂಬುದು ನಮಗೆ ತಿಳಿದಿಲ್ಲ, ತನಿಖೆಯ ನಂತರ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

    ಸದ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅಡಿಯಲ್ಲಿ ತಾಯಿಯ ಎದೆಹಾಲು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನವಜಾತ ಶಿಶುಗಳಿಗೆ ತಾಯಿಯ ಎದೆಹಾಲು ಅಗತ್ಯವಿದ್ದರೆ, ಅದನ್ನು ಸಂಗ್ರಹಿಸಿ ವೈದ್ಯರ ಸಲಹೆ ಮತ್ತು ಮೇಲ್ವಿಚಾರಣೆ ಮೇರೆಗೆ ಶಿಶುಗಳಿಗೆ ನೀಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಶತ್ರು ಸಂಹಾರ ಯಾಗ ನಡೆದಿಲ್ಲ – ದೇವಸ್ಥಾನದ ಹೇಳಿಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಡಿಕೆಶಿ