Tag: ಇಂಡಿಕಾ ಕಾರು

  • ರಾಷ್ಟ್ರೀಯ ಹೆದ್ದಾರಿಯಲ್ಲೇ ಚಲಿಸುತ್ತಿದ್ದಾಗಲೇ ಇಂಡಿಕಾ ಕಾರಿನಲ್ಲಿ ಬೆಂಕಿ!

    ರಾಷ್ಟ್ರೀಯ ಹೆದ್ದಾರಿಯಲ್ಲೇ ಚಲಿಸುತ್ತಿದ್ದಾಗಲೇ ಇಂಡಿಕಾ ಕಾರಿನಲ್ಲಿ ಬೆಂಕಿ!

    ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಕಡೆ ಹೋಗುತ್ತಿದ್ದಾಗ ಇಂಡಿಕಾ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.

    ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಎಂಜಿನ್ ಹೀಟ್ ಆದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

    ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

  • ಬೆಳಗಾವಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಇಂಡಿಕಾ- ಚಾಲಕ ಅಪಾಯದಿಂದ ಪಾರು

    ಬೆಳಗಾವಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಇಂಡಿಕಾ- ಚಾಲಕ ಅಪಾಯದಿಂದ ಪಾರು

    ಬೆಳಗಾವಿ: ನಗರದ ಕೋಟೆ ಕೆರೆ ಬಳಿ ತಡರಾತ್ರಿ ಅಪಘಾತ ನಡೆದು ಇದ್ದಕ್ಕಿದ್ದಂತೆ ಇಂಡಿಕಾ ಕಾರು ಧಗಧಗನೇ ಹೊತ್ತಿ ಉರಿದಿರುವ ಘಟನೆ ನಡೆದಿದೆ.

    ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರೋದಕ್ಕೆ ಕಾರಣ ಏನು ಅನ್ನೋದರ ಬಗ್ಗೆ ಪೊಲೀಸರು ತನಿಖೆಯನ್ನು ಮಾಡ್ತಿದ್ದಾರೆ.

    ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    https://www.youtube.com/watch?v=GX66lDJfoa4&feature=youtu.be