ನವದೆಹಲಿ: ಚೆನ್ನೈನಿಂದ (Chennai) ಮುಂಬೈಗೆ (Mumbai) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (Indigo Flight) ಮತ್ತೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಬೆದರಿಕೆ ಬೆನ್ನಲ್ಲೇ ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಮುಂಬೈನಲ್ಲಿ ಇಳಿದ ನಂತರ ವಿಮಾನ ಸಿಬ್ಬಂದಿ ಪ್ರೊಟೋಕಾಲ್ ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕಗೊಳಿಸಲಾಯಿತು.
ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ವಿಮಾನವು ಪ್ರಸ್ತುತ ತಪಾಸಣೆಗೆ ಒಳಪಟ್ಟಿದೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ ಪ್ರದೇಶದಲ್ಲಿ ಹಿಂತಿರುಗಿಸಲಾಗುತ್ತದೆ ಎಂದು ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ
ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಎರಡನೇ ಘಟನೆಯಾಗಿದೆ. ಈ ಹಿಂದೆ ಮೇ 28 ರಂದು ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಿಮಾನಕ್ಕೆ ಇದೇ ರೀತಿಯ ಬೆದರಿಕೆ ಬಂದಿತ್ತು. ಬೆದರಿಕೆಯ ನಂತರ ವಿಮಾನದಲ್ಲಿದ್ದ ಪ್ರಯಾಣಿಕರನ್ನು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ನಿರ್ಗಮನದ ಮೂಲಕ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್ ಎಸ್‌ಐಟಿ ತನಿಖೆಗೆ – ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ತನಿಖಾ ತಂಡ
ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ಸ್ಥಳಾಂತರಿಸುವಿಕೆಯನ್ನು 90 ಸೆಕೆಂಡುಗಳಲ್ಲಿ ಪೂರ್ಣಗೊಳಿಸಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ತಮ್ಮ ಯಾವುದೇ ಸಾಮಾನುಗಳನ್ನು ತೆಗೆದುಕೊಂಡು ಹೋಗಬಾರದು. ದೆಹಲಿ ಘಟನೆಯಲ್ಲಿ ಸುರಕ್ಷತಾ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಇಂಡಿಗೋ ಇಬ್ಬರು ಪೈಲಟ್‌ಗಳು ಮತ್ತು ನಾಲ್ವರು ಕ್ಯಾಬಿನ್ ಸದಸ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಇದನ್ನೂ ಓದಿ: ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ – ಸಿಎಂ, ಡಿಸಿಎಂಗೆ ಜಾಮೀನು
ನವದೆಹಲಿ: ವಾರಣಾಸಿಗೆ (Varanasi) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲ ಪ್ರಯಾಣಿಕರನ್ನು ತುರ್ತು ದ್ವಾರದ ಮೂಲಕ ಇಳಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ಸ್ಪಷ್ಟತೆ ಇಲ್ಲ.
ಪ್ರಯಾಣಿಕರೊಬ್ಬರಿಗೆ ಉತ್ತರಿಸಿದ ಏರ್‌ಲೈನ್, ಈ ಅನುಭವಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ನಮ್ಮ ಪ್ರಯಾಣಿಕರ ಪ್ರಯಾಣದ ಯೋಜನೆಗಳಿಗೆ ಅಡ್ಡಿಪಡಿಸುವ ಉದ್ದೇಶ ಎಂದಿಗೂ ನಮ್ಮದಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ತಿಳಿಸಿದೆ.
ಬೆಂಗಳೂರು: ವ್ಯಕ್ತಿಯೊಬ್ಬ ವಿಮಾನದಲ್ಲಿ (Flifht) ತುರ್ತು ಬಾಗಿಲನ್ನು (Emergency Door) ತೆರೆದಿರುವ ಘಟನೆ ಭಾನುವಾರ ಇಂಡಿಗೋ (Indigo) ವಿಮಾನವೊಂದರಲ್ಲಿ ನಡೆದಿದೆ. ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಬಂಧಿಸಲಾಗಿದೆ.
ಶನಿವಾರ ರಾತ್ರಿ ನಾಗ್ಪುರದಿಂದ ಬ್ಯಾಂಕಾಕ್‌ಗೆ ಹೊರಟಿದ್ದ ಇಂಡಿಗೋ ವಿಮಾನ ಬೆಂಗಳೂರು (Bengaluru) ಮಾರ್ಗವಾಗಿ ತೆರಳುತ್ತಿತ್ತು. ಈ ವೇಳೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸ್ವಪ್ನಿಲ್ ಹೊಲೆ (36) ತನ್ನ ಸೀಟಿನ ಪಕ್ಕದಲ್ಲಿದ್ದ ತುರ್ತು ಬಾಗಿಲನ್ನು ಎಳೆದಿದ್ದಾನೆ.
ನಾಗ್ಪುರದಲ್ಲಿ ಸ್ವಪ್ನಿಲ್ ವಿಮಾನ ಹತ್ತಿದ್ದು, ಆ ವಿಮಾನ 10:15 ಗಂಟೆಗೆ ಟೇಕ್ ಆಫ್ ಆಗಬೇಕಿತ್ತು. ಈ ವೇಳೆ ಆತ ತುರ್ತು ಬಾಗಿಲನ್ನು ತೆರೆಯಲು ಪ್ರಯತ್ನಿಸಿದ್ದಾನೆ. ನಂತರ ವಿಮಾನ 11:55ಕ್ಕೆ ಬೆಂಗಳೂರು ತಲುಪಿದೆ. ತಕ್ಷಣ ಆತನನ್ನು ಬಂಧಿಸಿದ ವಿಮಾನಯಾನ ಸಿಬ್ಬಂದಿ ಕೆಐಎ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023 – ರಿಲೆಯಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡ ಭಾರತ
ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 336ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ನಿಯಮದ ಪ್ರಕಾರ, ಮಾನವನ ಜೀವ ಅಥವಾ ಇತರರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಯಾವುದೇ ಕಾರ್ಯವನ್ನು ದುಡುಕಿನ ಅಥವಾ ನಿರ್ಲಕ್ಷ್ಯದಿಂದ ಮಾಡಿದರೆ ಆತನಿಗೆ ಜೈಲು ಶಿಕ್ಷೆಯನ್ನು 3 ತಿಂಗಳ ವರೆಗೆ ವಿಸ್ತರಿಸಬಹುದು. ಜೊತೆಗೆ 250 ರೂ. ದಂಡ ವಿಧಿಸಬಹುದು. ಇದೀಗ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ 10 ರಂದು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈನಿಂದ ತಿರುಚಿರಾಪಳ್ಳಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬೋರ್ಡಿಂಗ್ ಸಮಯದಲ್ಲಿ ಆಕಸ್ಮಿಕವಾಗಿ ತುರ್ತು ಬಾಗಿಲನ್ನು ತೆರೆದಿದ್ದರು. ಈ ವಿಚಾರ ತೀವ್ರ ವಿವಾದಕ್ಕೆ ಕಾರಣವಾಯಿತು. ಆ ನಂತರ ಇಂತಹುದೇ ಹಲವು ಘಟನೆಗಳು ವರದಿಯಾಗಿವೆ. ಇದನ್ನೂ ಓದಿ: ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ
ಚೆನ್ನೈ: ಚಂದ್ರಯಾನ-3 (Chandrayaan-3) ಉಡಾವಣೆಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡುತ್ತಿತ್ತು. ಅಂತೆಯೇ ಈ ಉಪಗ್ರಹ ಹೊತ್ತ ಬಾಹ್ಯಾಕಾಶ ನೌಕೆ ಚಂದ್ರನತ್ತ ಸಾಗುತ್ತಿರುವ ಅದ್ಭುತ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದೆ.
ಹೌದು. ಚಂದ್ರಯಾನ-3 ಗಗನಕ್ಕೇರುತ್ತಿದ್ದಂತೆಯೇ ಚೆನ್ನೈ- ಢಾಕಾ (Chennai – Dhaka Plane) ಮಾರ್ಗದಲ್ಲಿ ಇಂಡಿಯಾ ವಿಮಾನ ಹೊರಟಿತ್ತು. ಈ ವೇಳೆ ಕಿಟಕಿ ಬದಿಯ ಸಿಟ್‍ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‍ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದರು. ಆಗ ಚಂದ್ರಯಾನ-3 ರಾಕೆಟ್ ಅತ್ಯಂತ ವೇಗವಾಗಿ ಹೋದ ದೃಶ್ಯ ಕೂಡ ಸೆರೆಯಾಯಿತು. ಇದನ್ನೂ ಓದಿ: Chandrayaan-3 ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ: ಇಸ್ರೋ
ಈ ವೀಡಿಯೋವನ್ನು ಇಸ್ರೋ ಮೆಟೀರಿಯಲ್ಸ್ ನಿವೃತ್ತ ನಿರ್ದೇಶಕ ಮತ್ತು ರಾಕೆಟ್ ತಯಾರಿಕಾ ತಜ್ಞ ಡಾ ಪಿ.ವಿ ವೆಂಕಟಕೃಷ್ಣನ್ (Dr P V Venkitakrishnan) ಅವರು ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ವೀಡಿಯೋಗೆ “ವಿಮಾನದಿಂದ ಚಂದ್ರಯಾನ 3 ಉಡಾವಣೆ” ಎಂಬ ಶೀರ್ಷಿಕೆ ನೀಡಿದ್ದಾರೆ. ಚೆನ್ನೈನಿಂದ ಢಾಕಾಗೆ ಟೇಕಾಫ್ ಆದ ಸ್ವಲ್ಪ ಸಮಯದ ನಂತರ, ಪೈಲಟ್ ಈ ಐತಿಹಾಸಿಕ ಘಟನೆಯನ್ನು ವೀಕ್ಷಿಸಿ ಎಂದು ಘೋಷಿಸಿರುವುದಾಗಿ ಅವರು ಬರೆದುಕೊಂಡಿದ್ದಾರೆ.
ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಅಪ್ಲೋಡ್ ಮಾಡಿದಾಗಿನಿಂದ ಲಕ್ಷಗಟ್ಟಲೆ ಮಂದಿ ವೀಕ್ಷಿಸಿದ್ದಾರೆ. ಅಲ್ಲದೆ ಲೆಕ್ಕವಿಲ್ಲದಷ್ಟು ಲೈಕ್‍ಗಳನ್ನು ಪಡೆದುಕೊಂಡಿದೆ. ಪ್ರಯಾಣಿಕರು ತಮ್ಮ ಮೊಬೈಲ್‍ನಲ್ಲಿ ಸೆರೆಹಿದಿರುವ ದೃಶ್ಯ ಕಂಡು ಜಾಲತಾಣಿಗರು ಮೂಕವಿಸ್ಮಿತರಾಗಿದ್ದಾರೆ.
ನವದೆಹಲಿ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ (IndiGo Flight) ದಲ್ಲಿ ಪ್ರಯಾಣಿಕರೊಬ್ಬರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಕರಾಚಿಗೆ ತನ್ನ ಪಥ ಬದಲಿಸಿದ್ದು, ತುರ್ತು ಭೂಸ್ಪರ್ಶ ಮಾಡುವ ಮೊದಲೇ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
Doha bound IndiGo flight diverted to Pakistan's Karachi due to a medical emergency onboard, says an airline official to ANI. pic.twitter.com/KuVJoIJmwm
ಇಂದು ಬೆಳಗ್ಗೆ ದೆಹಲಿಯಿಂದ ಇಂಡಿಗೋ ಏರ್ ಲೈನ್ ಸಂಸ್ಥೆಯ 6ಇ-1736 ವಿಮಾನವು ಪ್ರಯಾಣ ಬೆಳೆಸಿದೆ. ವಿಮಾನ ಜರ್ನಿ ಆರಂಭವಾದ ಕೆಲ ಕ್ಷಣಗಳಲ್ಲಿ, ಪ್ರಯಾಣಿಕ ನೈಜೀರಿಯಾ ಮೂಲದ ಅಬ್ದುಲ್ಲಾ (60)ಗೆ ತೀವ್ರ ಅಸ್ವಸ್ಥತೆ ಕಾಡಿದೆ. ಈ ವೇಳೆ ವಿಮಾನವು ಪಾಕಿಸ್ತಾನದ ಕಡೆಯಿಂದ ಹಾದು ಹೋಗುತ್ತಿತ್ತು.
ವಿಚಾರದ ತಿಳಿದ ಕೂಡಲೇ ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸಿದ ಪೈಲಟ್, ಅಬ್ದುಲ್ಲಾ ಅವರ ಪರಿಸ್ಥಿತಿಯನ್ನು ವಿವರಿಸಿ ತುರ್ತು ಭೂಸ್ಪರ್ಶನಕ್ಕಾಗಿ ಅನುಮತಿ ಕೋರಿದ್ದಾರೆ. ಇದನ್ನು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್ ಅನುಮೋದಿಸಿ, ತುರ್ತು ಭೂಸ್ಪರ್ಶ ಮಾಡಲು ಅನುಮತಿ ನೀಡಿದ್ದಾರೆ. ಇತ್ತ ಅದಾಗಲೇ ಅಬ್ದುಲ್ಲಾ ಅವರ ಪರಿಸ್ಥಿತಿ ತೀರಾ ಹದಗೆಟ್ಟಿದೆ. ವಿಮಾನವನ್ನು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Karachi International Airport) ದಲ್ಲಿ ಇಳಿಸುವ ಮುನ್ನವೇ ಅಬ್ದುಲ್ಲಾ ಅಸುನೀಗಿದ್ದಾರೆ. ಇದನ್ನೂ ಓದಿ: ಹೊಟ್ಟೆನೋವಿನಿಂದಾಗಿ ತೆಲಂಗಾಣದ ಸಿಎಂ ಕೆಸಿಆರ್ ಆಸ್ಪತ್ರೆ ದಾಖಲು
ಇಂಡಿಗೋ ಸಂಸ್ಥೆಯಿಂದ ಪ್ರಕಟಣೆ: ದೆಹಲಿಯಿಂದ ದೋಹಾಕ್ಕೆ ಪ್ರಯಾಣಿಸುತ್ತಿದ್ದ ನಮ್ಮ ಸಂಸ್ಥೆಯ ವಿಮಾನವು ಮಾರ್ಗ ಮಧ್ಯೆ ಪಾಕಿಸ್ತಾನದ ಕರಾಚಿ ಕಡೆಗೆ ಪ್ರಯಾಣ ಬೆಳೆಸಿತು. ಇದಕ್ಕೆ ವಿಮಾನದಲ್ಲಿದ್ದ ವ್ಯಕ್ತಿಯೊಬ್ಬರಿಗೆ ತುರ್ತು ವೈದ್ಯಕೀಯ ನೆರವು ಬೇಕಾಗಿದ್ದೇ ಕಾರಣ ಎಂದು ಹೇಳಿದ್ದಾರೆ. ಆದರೆ ದುರದೃಷ್ಟವಶಾತ್ ಆ ವ್ಯಕ್ತಿಯು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವುದಕ್ಕೂ ಮುನ್ನವೇ ಮೃತಪಟ್ಟಿದ್ದಾರೆ.
ತೀವ್ರ ಅಸ್ವಸ್ಥರಾಗಿದ್ದ ವ್ಯಕ್ತಿಯನ್ನು ನಮ್ಮ ಸತತ ಪ್ರಯತ್ನದ ನಡುವೆಯೂ ಉಳಿಸಿಕೊಳ್ಳಲಾಗದೇ ಹೋಗಿದ್ದು ನಮ್ಮ ದುರಾದೃಷ್ಟ. ಅವರ ಕುಟುಂಬದವರಿಗೆ ಹಾಗೂ ಅವರ ಸ್ನೇಹಿತರಿಗೆ ದುಃಖದಿಂದ ಬೇಗನೇ ಚೇತರಿಸಿಕೊಳ್ಳುವಂಥ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಹಾರೈಸುತ್ತೇವೆ ಎಂದಿದೆ.
ಮೊದಲ ದಿನವೇ ವಿಮಾನದ ಎಲ್ಲಾ ಸಿಟ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ. ಈ ಸೇವೆಯಿಂದ ಹುಬ್ಬಳ್ಳಿ, ಧಾರವಾಡ ಅವಳಿ ನಗರ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ವ್ಯಾಪಾರದ ದೃಷ್ಟಿಯಿಂದ ಸಾಕಷ್ಟು ಅನುಕೂಲವಾಗಲಿದೆ.
– ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಹಸಿರು ನಿಶಾನೆ
– ಮೊದಲ ಪ್ರಯಾಣದಲ್ಲಿ ಉತ್ತರ ಕರ್ನಾಟಕ ಭಾಷೆಯಲ್ಲೇ ಸಲಹೆ, ಸೂಚನೆ
ಹುಬ್ಬಳ್ಳಿ: ಬಹುನಿರೀಕ್ಷಿತ ದೆಹಲಿ-ಹುಬ್ಬಳ್ಳಿ (Hubballi), ಹುಬ್ಬಳ್ಳಿ-ದೆಹಲಿ (Delhi) ನಡುವೆ ನೇರ ವಿಮಾನಯಾನ ಸಂಪರ್ಕ ಇಂದಿನಿಂದ ಆರಂಭವಾಗಿದೆ. ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ.
ಈ ವಿಮಾನಯಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕ ಜನರ ಬಹುದಿನಗಳ ಕನಸೊಂದು ಈಡೇರಿದಂತಾಗಿದೆ. ಹುಬ್ಬಳ್ಳಿಯಿಂದ ರಾಷ್ಟ್ರ ರಾಜಧಾನಿಗೆ ನೇರ ಸಂಪರ್ಕ ದೊರೆತಿರುವುದು ನಗರದ ಪ್ರಗತಿಯ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಿದೆ. ಪ್ರತಿ ನಿತ್ಯ ಈ ಸೇವೆ ಲಭ್ಯವಿರುತ್ತದೆ. ಹುಬ್ಬಳಿಯ ಜನ ಕೇವಲ 2 ಗಂಟೆ 30 ನಿಮಿಷದಲ್ಲಿ ದೆಹಲಿಗೆ ಪ್ರಯಾಣಿಸಬಹುದಾಗಿದೆ. ಇದನ್ನೂ ಓದಿ: ಪ್ರತಾಪ್‌ಸಿಂಹನಿಗೆ ಬಸ್‌ನಿಲ್ದಾಣದ ಗುಂಬಜ್‌ಗಳೂ ಮುಸ್ಲಿಮರ ಮಸೀದಿಯೆಂತೆ ಕಾಣ್ತಿದೆ – ಸೇಠ್ ತಿರುಗೇಟು
ಇಂದು ಮೊದಲ ವಿಮಾನ ಹಾರಾಟದ ಸಮಯದಲ್ಲಿ ಇಂಡಿಗೋ ಸಂಸ್ಥೆಯ ಅಕ್ಷಯ ಪಾಟೀಲ್ ಅವರು ವಿಮಾನ ಹಾರಾಟಕ್ಕೆ ಮೊದಲು ಪ್ರಯಾಣಿಕರನ್ನುದ್ದೇಶಿಸಿ, ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲೇ ಮಾತನಾಡಿದ್ದು ವಿಶೇಷವಾಗಿತ್ತು.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೂ ವರ್ಚುವಲ್ ಮೂಲಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ದೆಹಲಿಯಲ್ಲಿ ವಿಮಾನ ಹಾರಾಟ ರದ್ದು ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನ 6E 2131 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋವೊಂದು ಕಾಣಿಸಿಕೊಂಡಿದೆ. ವೀಡಿಯೋದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಎಂಜಿನ್‌ನಲ್ಲಿ ದಟ್ಟವಾದ ಬೆಂಕಿಯ ಕಿಡಿ ಚಿಮ್ಮುತ್ತಿರುವುದು ಕಂಡುಬಂದಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಕೆಲವು ದಿನಗಳ ಹಿಂದೆ ರಾಂಚಿ ವಿಮಾನ ನಿಲ್ದಾಣದಲ್ಲಿ ವಿಕಲಚೇತನ ಬಾಲಕನನ್ನು ತಡೆದು, ವಿಮಾನದಲ್ಲಿ ಪ್ರಯಾಣಿಸಲು ಬಿಡದೇ ಹೋದಾಗ ದೇಶಾದ್ಯಂತ ಭಾರೀ ವಿವಾದ ಉಂಟಾಗಿತ್ತು. ಈ ಹಿನ್ನೆಲೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ವಿಕಲಚೇತನರಿಗಾಗಿ ಬೋರ್ಡಿಂಗ್ ಹಾಗೂ ಪ್ರಯಾಣದ ಪ್ರವೇಶವನ್ನು ಸುಧಾರಿಸಲು ನಿಯಮಗಳನ್ನು ತಿದ್ದುಪಡಿ ಮಾಡಿದೆ.
ಅಂಗವೈಕಲ್ಯತೆ ಅಥವಾ ಅನಾರೋಗ್ಯದ ಆಧಾರದ ಮೇಲೆ ಜನರ ಪ್ರಯಾಣವನ್ನು ನಿರಾಕರಿಸುವಂತಿಲ್ಲ. ಒಂದು ವೇಳೆ ಅವರ ಆರೋಗ್ಯ ಹದಗೆಡಬಹುದು ಎಂದು ವಿಮಾನಯಾನ ಸಂಸ್ಥೆ ಅಭಿಪ್ರಾಯಪಟ್ಟರೆ, ಅವರನ್ನು ವೈದ್ಯರು ಖುದ್ದಾಗಿ ಪರೀಕ್ಷಿಸಬೇಕಾಗುತ್ತದೆ. ಬಳಿಕ ವೈದ್ಯರು ವ್ಯಕ್ತಿ ಪ್ರಯಾಣಿಸಲು ಯೋಗ್ಯನೇ ಅಥವಾ ಇಲ್ಲವೇ ಎಂಬುದನ್ನು ಖಾತ್ರಿಪಡಿಸಿದ ಬಳಿಕ ವಿಮಾನಯಾನ ಸಂಸ್ಥೆ ನಿರ್ಧಾರ ಕೈಗೊಳ್ಳಬೇಕು ಎಂದು ಡಿಜಿಸಿಎ ಹೇಳಿದೆ. ಇದನ್ನೂ ಓದಿ: ಆ.7ರಿಂದ ಹಾರಲಿದೆ ಆಕಾಶ್ ಏರ್ – ಬೆಂಗಳೂರು ಟು ಕೊಚ್ಚಿಗೆ ಹೋಗಬಹುದು
ವಿಮಾನಯಾನ ಸಂಸ್ಥೆ ವೈದ್ಯಕೀಯ ಅಭಿಪ್ರಾಯ ಪಡೆದ ಬಳಿಕ ವ್ಯಕ್ತಿಯ ಪ್ರಯಾಣದ ಬಗೆಗಿನ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಆದರೂ ನಿರ್ಧಾರ ಪ್ರಯಾಣದ ನಿರಾಕರಣೆಯಾದಲ್ಲಿ ತಕ್ಷಣವೇ ಪ್ರಯಾಣಿಕರಿಗೆ ಈ ಬಗ್ಗೆ ಲಿಖಿತವಾಗಿ ತಿಳಿಸಬೇಕು ಹಾಗೂ ಪ್ರಯಾಣದ ನಿರಾಕರಣೆಗೆ ಕಾರಣ ಏನೆಂಬುದನ್ನೂ ಉಲ್ಲೇಖಿಸಬೇಕು ಎಂದಿದೆ.
ಈ ವರ್ಷದ ಮೇ ತಿಂಗಳಿನಲ್ಲಿ ರಾಂಚಿ ವಿಮಾನ ನಿಲ್ದಾಣದಲ್ಲಿ ವಿಕಲಚೇತನ ಬಾಲಕನನ್ನು ವಿಮಾನ ಹತ್ತದಂತೆ ಇಂಡಿಗೋ ಸಂಸ್ಥೆ ತಡೆದಿತ್ತು. ಈ ವೇಳೆ ಪ್ರತ್ಯಕ್ಷದರ್ಶಿಗಳು ಇದರ ವೀಡಿಯೋ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಟ್ಟಿದ್ದರು. ವೀಡಿಯೋ ವೈರಲ್ ಆಗುತ್ತಿದ್ದಂತೆ ವಿಮಾನಯಾನ ಸಂಸ್ಥೆಯ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಇದನ್ನೂ ಓದಿ: ಬ್ಯಾಗ್‍ನಲ್ಲಿ ಬಾಂಬ್ ಇದೆ ವಿಮಾನದಲ್ಲಿ ರಂಪಾಟ – ಬೆಚ್ಚಿಬಿದ್ದ ಸಹಪ್ರಯಾಣಿಕರು
ಕೆಲವೇ ದಿನಗಳಲ್ಲಿ ಘಟನೆ ಬಗ್ಗೆ ತನಿಖೆ ನಡೆಸಿ, ಪ್ರಯಾಣಿಕರನ್ನು ಸಮರ್ಪಕವಾಗಿ ನಿರ್ವಹಿಸಲು ವಿಫಲವಾದ ಇಂಡಿಗೋ ವಿಮಾನಯಾನ ಸಂಸ್ಥೆಗೆ ಡಿಜಿಸಿಎ 5 ಲಕ್ಷ ರೂ. ದಂಡವನ್ನು ವಿಧಿಸಿತ್ತು.
Live Tv
[brid partner=56869869 player=32851 video=960834 autoplay=true]