Tag: ಇಂಧನ ಬೆಲೆ

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವಿದ್ಯುತ್‌ ದರ ಏರಿಕೆ, ಶೀಘ್ರವೇ ಸಿಎಂ ಜೊತೆ ಸುನಿಲ್‌ ಕುಮಾರ್ ಸಭೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವಿದ್ಯುತ್‌ ದರ ಏರಿಕೆ, ಶೀಘ್ರವೇ ಸಿಎಂ ಜೊತೆ ಸುನಿಲ್‌ ಕುಮಾರ್ ಸಭೆ

    ಉಡುಪಿ: ಕಲ್ಲಿದ್ದಲಿನ(Coal) ಬೆಲೆಯ ಹೊಂದಾಣಿಕೆ ಮಾಡಲು ಕಾಂಗ್ರೆಸ್(Congress) ಸರ್ಕಾರ 2014ರಲ್ಲಿ ರೂಪಿಸಿದ್ದ ನಿಯಮಾವಳಿಗಳನ್ನು ತೆಗೆದುಹಾಕುತ್ತೇವೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್(Sunil Kumar) ಹೇಳಿದ್ದಾರೆ.

    ಬಿಗ್ ಬುಲೆಟಿನ್ ನಲ್ಲಿ ರಾಜ್ಯದ ವಿದ್ಯುತ್ ದರ(Power Tariff) ಏರಿಕೆ, ಜನಸಾಮಾನ್ಯರ ಮೇಲಿನ ಕರೆಂಟ್ ಬಿಲ್ ಬರೆ, ವಿದ್ಯುತ್ ಸೋರಿಕೆ, ಕಳ್ಳತನ ಬಗ್ಗೆ ಕ್ರಮ ಕೈಗೊಳ್ಳದವರ ವಿರುದ್ಧ ಚಾಟಿ ಬೀಸಲಾಗಿತ್ತು. ಮೂರು ತಿಂಗಳಿಗೆ ವಿದ್ಯುತ್ ದರ ಏರಿಕೆ, ಕಲ್ಲಿದ್ದಲು ಬೆಲೆಯಾಧಾರಿತ ವಿದ್ಯುತ್ ಬೆಲೆ ಪರಿಷ್ಕರಣೆ ಕುರಿತು ಪಬ್ಲಿಕ್ ಟಿವಿ ನಿರಂತರ ಸುದ್ದಿ ಮಾಡಿತ್ತು. ಇದರ ಫಲಶ್ರುತಿ ಎಂಬಂತೆ, ಈ ಬಗ್ಗೆ ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಭೆ ಮಾಡುವುದಾಗಿ ಸಚಿವ ಸುನಿಲ್ ಕುಮಾರ್ ಉಡುಪಿಯಲ್ಲಿ ಭರವಸೆ ನೀಡಿದರು. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಇಂದಿನಿಂದ ವಿದ್ಯುತ್‌ ದರ ಏರಿಕೆ

    ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ ಬಾಧಕ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅಗತ್ಯ ಬಿದ್ದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ. ಹಿಂದಿನ ನಿಯಮಾವಳಿಯೇ ಮುಂದುವರಿಯುತ್ತಿದೆ. ನಮ್ಮ ಸರ್ಕಾರ ಯಾವುದೇ ಹೊಸ ನಿಯಮಾವಳಿ ಮಾಡಿಲ್ಲ. ಈ ನಿಯಮಾವಳಿ ಬಗ್ಗೆ ಮರುಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದರು.

    ಮೂರು ತಿಂಗಳಿಗೊಮ್ಮೆ ದರ ಹೊಂದಾಣಿಕೆ ಮಾಡುವ ನಿಯಮದ ಬಗ್ಗೆ ಮರು ಚಿಂತನೆ ಮಾಡುತ್ತೇವೆ. ಗ್ರಾಹಕರಿಗೆ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ನನಗೂ ಅನ್ನಿಸಿದೆ ಎಂದು ಸಚಿವರು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಲ್ಲಿ ಶತಕದಂಚಿಗೆ ತಲುಪಿದ ಪೆಟ್ರೋಲ್ ಬೆಲೆ

    ಬೆಂಗಳೂರಿನಲ್ಲಿ ಶತಕದಂಚಿಗೆ ತಲುಪಿದ ಪೆಟ್ರೋಲ್ ಬೆಲೆ

    ಬೆಂಗಳೂರು: ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ ಶತಕದಂಚಿಗೆ ತಲುಪಿದೆ. ಬೆಂಗಳೂರಲ್ಲಿ ಲೀಟರ್ ಪೆಟ್ರೋಲ್ ಬರೋಬ್ಬರಿ 98 ರೂಪಾಯಿ 19 ಪೈಸೆಯಾಗಿದೆ. ಹಾಗೆಯೇ ಲೀಟರ್ ಡಿಸೇಲ್ ಗೆ 90 ರೂಪಾಯಿ 84 ಪೈಸೆಯಾಗಿದೆ. ಕಳೆದ ಒಂದು ವಾರದಿಂದ ಪೈಸೆ ಪೈಸೆ ಲೆಕ್ಕದಲ್ಲಿ ಪೆಟ್ರೋಲ್ ಮತು ಡೀಸೆಲ್ ಬೆಲೆ ಹೆಚ್ಚಾಗುತ್ತಿದೆ.

    ಕೊರೊನಾ ಲಾಕ್‍ಡೌನ್ ನಿಂದಾಗಿ ಜನಸಾಮಾನ್ಯರು ಬದುಕೋದು ಕಷ್ಟವಾಗಿದೆ. ಸಾಕಷ್ಟು ಜನಕ್ಕೆ ಆರ್ಥಿಕ ಹೊಡೆತ ಬಿದ್ದಿದೆ. ಇದರ ನಡುವೆ ಪೆಟ್ರೋಲ್, ಡಿಸೇಲ್ ಬೆಲೆಗಳು ಗಗನಕ್ಕೇರುತ್ತಿವೆ. ಅದ್ರಲ್ಲೂ ಪೆಟ್ರೋಲ್ ಬೆಲೆಯಂತೂ ಶತಕದ ಸನಿಹದಲ್ಲಿದೆ. ಈಗಾಗಲೇ ದೇಶದ ಕೆಲ ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ.

    ದೇಶದಲ್ಲಿ ಕೊರೊನಾ ಎರಡನೇ ಅಲೆ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯಗಳು ಲಾಕ್‍ಡೌನ್ ಆಗಿದ್ದರಿಂದ ಇಂಧನ ಮಾರಾಟದಲ್ಲಿ ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿಗೆ ಹೋಲಿಕೆ ಮಾಡಿದ್ರೆ ಶೇ.17ರಷ್ಟು ಇಂಧನ ಮಾರಾಟದಲ್ಲಿ ಇಳಿಕೆಯಾಗಿದೆ. ಮೇ ತಿಂಗಳಿನಲ್ಲಿ ಪೆಟ್ರೋಲ್ ಬರೋಬ್ಬರಿ 17.9 ಲಕ್ಷ ಟನ್ ನಷ್ಟು ಇಳಿಕೆ ಕಂಡಿದೆ.

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರಿಕೆಯಾಗ್ತಿದೆ. ಜನವರಿಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್ ಗೆ 54.79 ಡಾಲರ್ ನಷ್ಟಿತ್ತು. ಇದೀಗ ಶೇ.22ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್ 66.98 ಡಾಲರ್ ಗೆ ತಲುಪಿದೆ.

  • ಬೆಲೆ ಏರಿಕೆ ಖಂಡಿಸಿ ಭಾರತ ಬಂದ್‍ಗೆ ಕರೆ

    ಬೆಲೆ ಏರಿಕೆ ಖಂಡಿಸಿ ಭಾರತ ಬಂದ್‍ಗೆ ಕರೆ

    ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆ, ಸರಕು ಮತ್ತು ಸೇವಾ ತೆರಿಗೆ, ಇ-ಬಿಲ್ ಇತ್ಯಾದಿಗಳನ್ನು ವಿರೋಧಿಸಿ ಶುಕ್ರವಾರ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಭಾರತ್ ಬಂದ್‍ಗೆ ಕರೆ ನೀಡಿದೆ. ಭಾರತ ಬಂದ್‍ಗೆ ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘ(ಎಐಟಿಡಬ್ಲೂಎ) ಕೂಡ ಬೆಂಬಲ ನೀಡುತ್ತಿದ್ದು, ಫೆಬ್ರವರಿ 26ರಂದು ಚಕ್ಕಾ ಜಾಮ್ ನಡೆಸಲಿದ್ದಾರೆ.

    ಹೇಗಿರಲಿದೆ ಬಂದ್?:
    * ಸುಮಾರು 40,000ಕ್ಕೂ ಹೆಚ್ಚು ವ್ಯಾಪಾರಿಗಳ ಸಂಘ ಬಂದ್‍ನಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ದೇಶಾದ್ಯಂತ ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಮುಚ್ಚಲಾಗುತ್ತದೆ.
    * ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿರುವುದರಿಂದ ಬೆಳಗ್ಗೆ 6ರಿಂದ ರಾತ್ರಿ 8ರವರೆಗೂ ಸಾರಿಗೆ ಸಂಸ್ಥೆಗಳ ಸಂಘ(ಎಐಟಿಡಬ್ಲೂಎ) ಹಾಗೂ ಎಲ್ಲಾ ಸಾರಿಗೆ ಸಂಸ್ಥೆಗಳಿಗೆ ಸಂಚಾರ ಸ್ಥಗಿತಗೊಳಿಸುವುದಾಗಿ ಸೂಚಿಸಲಾಗಿದೆ.
    * ಬುಕಿಂಗ್ ಹಾಗೂ ಬಿಲ್ ಆಧಾರಿತ ಸರಕುಗಳ ಸಾಗಣೆಗೆ ತಡೆ.
    * ರಾಷ್ಟ್ರವ್ಯಾಪ್ತಿ 1,500 ಸ್ಥಳಗಳಲ್ಲಿ ಧರಣಿ ನಡೆಸಲಾಗುತ್ತದೆ.
    * 40 ಲಕ್ಷ ರಸ್ತೆಗಳು ಶುಕ್ರವಾರ ಬಂದ್
    * ಆಲ್ ಇಂಡಿಯಾ ಮೋಟರ್ ಟ್ರಾನ್ಸ್‍ಪೋರ್ಟ್ ಕಾಂಗ್ರೆಸ್(ಎಐಎಂಟಿಸಿ) ಮತ್ತು ಭೈಚರಾ ಆಲ್ ಇಂಡಿಯಾ ಟ್ರಕ್ ಆಪರೇಟರ್ ವೆಲ್‍ಫೆರ್ ಅಸೋಸಿಯೆಟ್(ಬಿಎಐಟಿಓಡಬ್ಲೂಎ) ಬಂದ್‍ನಲ್ಲಿ ಭಾಗವಹಿಸುತ್ತಿಲ್ಲ.

    ಜಿಎಸ್‍ಟಿ ವ್ಯವಸ್ಥೆಯಲ್ಲಿನ ತೆರಿಗೆಗಳನ್ನು ಕಡಿತಗೊಳಿಸಲು ಮತ್ತು ಅನೇಕ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇ-ವೇ ಬಿಲ್ ಕಾನೂನುಗಳನ್ನು ರದ್ದುಗೊಳಿಸುವಂತೆ ಮತ್ತು ಇಂಧನ ಬೆಲೆಯನ್ನು ಖಂಡಿಸಿ ಸಾರಿಗೆ ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆ ಜಿಎಸ್‍ಟಿ ಕಾನೂನಿಂದ 100 ಕಿ.ಮೀನಿಂದ 200ಕಿ.ಮೀ ವರೆಗೂ ಅಂತರವನ್ನು ಹೆಚ್ಚಿಸಿರುವ ಇ-ಬಿಲ್‍ನನ್ನು ಕಡಿತಗೊಳಿಸುವಂತೆ ಪ್ರತಿಭಟನೆ ನಡೆಸಲಾಗುತ್ತದೆ.

  • ತೈಲ ಬೆಲೆ ಕಡಿತಗೊಳಿಸಲು ಶೀಘ್ರವೇ ಕೇಂದ್ರದಿಂದ ಕ್ರಮ – ಅಮಿತ್ ಶಾ

    ತೈಲ ಬೆಲೆ ಕಡಿತಗೊಳಿಸಲು ಶೀಘ್ರವೇ ಕೇಂದ್ರದಿಂದ ಕ್ರಮ – ಅಮಿತ್ ಶಾ

    ಹೈದರಾಬಾದ್: ದೇಶ್ಯಾದಂತ ತೀವ್ರಗತಿಯಲ್ಲಿ ಹೆಚ್ಚಾಳವಾಗುತ್ತಿರುವ ತೈಲಬೆಲೆ ಕಡಿಮೆಗೊಳಿಸಲು ಕೇಂದ್ರದ ಕ್ರಿಯಾ ಯೋಜನೆ ಶೀಘ್ರವೇ ಜಾರಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಶನಿವಾರ ದೆಹಲಿಯಲ್ಲಿ ಹೇಳಿದ್ದಾರೆ.

    ತೆಲಂಗಾಣ ವಿಧಾನಸಭೆ ವಿಸರ್ಜನೆ ಮಾಡುತ್ತಲೇ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು. ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹೈದರಾಬಾದ್‍ಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿ ಇಂಧನ ಬೆಲೆ ಏರಿಕೆ ಕುರಿತು ಪ್ರಸ್ತಾಪಿಸಿದರು. ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಯುತ್ತಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಜನರ ಆಂತಕವನ್ನು ನಾವು ತಿಳಿದಿದ್ದೇವೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಕ್ರಿಯಾ ಯೋಜನೆ ಹೊರತಂದು ಬೆಲೆ ಏರಿಕೆಗೆ ಕಡಿವಾಣ ಹಾಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಅವಧಿ ಮುನ್ನ ವಿಧಾನಸಭೆ ಮಾಡಿದ ಕುರಿತು ಸಿಎಂ ಕೆಸಿಆರ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಅವಧಿ ಮೊದಲೇ ವಿಧಾನಸಭೆಯನ್ನು ಏಕೆ ವಿಸರ್ಜನೆ ಮಾಡಿದ್ದಾರೆ ಎಂಬುವುದನ್ನು ಕೆಸಿಆರ್ ಜನರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸಿದರು.

    ಮೊದಲು `ಒಂದೇ ದೇಶ.. ಒಂದೇ ಚುನಾವಣೆ’ಗೆ ಓಕೆ ಎಂದಿದ್ದ ಕೆಸಿಆರ್ ನಂತರ ಮಾತು ಬದಲಿಸದ್ದೇಕೆ? ಪದೇ ಪದೇ ಚುನಾವಣೆ ನಡೆದರೆ ಸಣ್ಣ ರಾಜ್ಯಗಳಿಗೆ ಆರ್ಥಿಕ ಹೊರೆ ಆಗಲ್ವಾ ಎಂದು ಪ್ರಶ್ನಿಸಿದರು. ಅಲ್ಲದೇ ನಿಮಗೆ ರಜಾಕಾರರ ಆಡಳಿತ ಬೇಕೋ, ಬಿಜೆಪಿ ಆಡಳಿತ ಬೇಕೋ? ಎಂದು ಜನರು ಚಿಂತನೆ ನಡೆಸಲಿ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್‍ಗೆ ಕಾಂಗ್ರೆಸ್ ಕರೆ

    ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್‍ಗೆ ಕಾಂಗ್ರೆಸ್ ಕರೆ

    ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆಗಳು ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ 10 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಬಂದ್ ಗೆ ಕರೆ ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆಗಳಿಂದಾಗಿ ಜನಸಾಮಾನ್ಯ ಸುಟ್ಟು ಹೋಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ ದೇಶವ್ಯಾಪಿ ಪ್ರತಿಭಟನೆ ನಡೆಸಿ ಭಾರತ್ ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಕೇಂದ್ರ ಸರ್ಕಾರ ತೈಲ ದರ ಏರಿಕೆ ಮಾಡುವ ಮೂಲಕ 11 ಲಕ್ಷ ಕೋಟಿ ರೂಪಾಯಿಯನ್ನು ಕೊಳ್ಳೆಹೊಡೆದಿದೆ. ಶೀಘ್ರವೇ ಕೇಂದ್ರ ತೆರಿಗೆ ಹಾಗೂ ಅಬಕಾರಿ ಸುಂಕವನ್ನು ರಾಜ್ಯಗಳಲ್ಲಿ ಕಡಿತಗೊಳಿಸಬೇಕು. ಹಾಗೆಯೇ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಸಹ ಜಿಎಸ್‍ಟಿ ವ್ಯಾಪ್ತಿಗೆ ಒಳಪಡಿಸಬೇಕೆಂದು ಆಗ್ರಹಿಸುತ್ತೇವೆ. ಇದರಿಂದಾಗಿ ಜನಸಾಮಾನ್ಯರ ಮೇಲಿನ ಭಾರ ಸ್ವಲ್ಪವಾದರೂ ಕಡಿಮೆಯಾಗುತ್ತದೆ. ಹೀಗಾಗಿ ಭಾರತ್ ಬಂದ್‍ಗೆ ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ನೀಡಬೇಕು. ಅಲ್ಲದೇ ಎಲ್ಲಾ ಎನ್‍ಜಿಓ ಹಾಗೂ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿಕೊಂಡರು.

    ಈ ವೇಳೆ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಆಶೋಕ್ ಗೆಹ್ಲೋಟ್ ಮಾತನಾಡಿ, ನಾವು ಭಾರತ್ ಬಂದ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್ಚರಿಸಬೇಕಾಗಿದೆ. ಇಂಧನ ಬೆಲೆಗಳು ಗಗನಕ್ಕೇರಿದ್ದರೂ ಅವರನ್ನು ಸುಮ್ಮನೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

    ಭಾರತ್ ಬಂದ್ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಗಗನಕ್ಕೆ ಏರಿಕೆಯಾಗುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಹೃದಯ ಇಲ್ಲದಂತೆ, ಕರುಣೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆರೆ ಏರಿಕೆ ಖಂಡಿಸಿ ಇದೇ ಸೆಪ್ಟೆಂಬರ್ 10ಕ್ಕೆ ಕಾಂಗ್ರೆಸ್ ವತಿಯಿಂದ ರಾಷ್ಟ್ರವ್ಯಾಪಿ ಭಾರತ್ ಬಂದ್ ನಡೆಸಲು ತೀರ್ಮಾಸಿದ್ದೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಂಧನ ಬೆಲೆ ಏರಿಕೆ ಸ್ಕೂಟರ್ ಗೆ  ಬೆಂಕಿ ಹಚ್ಚಿ ಪ್ರತಿಭಟನೆ

    ಇಂಧನ ಬೆಲೆ ಏರಿಕೆ ಸ್ಕೂಟರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ

    ಹೈದರಾಬಾದ್: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆಗೆ ಮುಂದಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿಯೂ ತೆಲಗು ದೇಶಂ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

    ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ನಂದಿಗಾಮ ಗ್ರಾಮದಲ್ಲಿ ಟಿಡಿಪಿ ಕಾರ್ಯಕರ್ತರು ತಮ್ಮ ಸ್ಕೂಟರ್ ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರಹಾಕಿದ್ರು. ಕಾರ್ಯಕರ್ತರು ಸ್ಕೂಟರ್‍ಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಈಗಾಗಲೇ ಪೆಟ್ರೋಲ್, ಡೀಸೆಲ್ ರೇಟ್ ಜಾಸ್ತಿ ಆಗಿದೆ. ಈ ಮಧ್ಯೆ ಮತ್ತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚುತ್ತಲೇ ಇದ್ದು, ಕೆಲದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್‍ಗೆ 3ರಿಂದ 4 ರೂಪಾಯಿಯಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

    ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 24ರಿಂದ ಮೇ 14ರವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಣೆ ಆಗಿರಲಿಲ್ಲ. ಈಗ ಪ್ರತಿ ದಿನ ಹೆಚ್ಚಾಗುತ್ತಿದ್ದು, ಮಂಗಳವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 78.12 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ 69.25 ರೂ. ಇದೆ.

    2 ವರ್ಷದ ಹಿಂದೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ 40 ಡಾಲರ್(ಅಂದಾಜು 2,700 ರೂ.) ಇತ್ತು. ಆದರೆ ಈಗ ದುಪ್ಪಟ್ಟು ಆಗಿದ್ದು 79 ಡಾಲರ್(ಅಂದಾಜು 5,300 ರೂ.) ಆಗಿದೆ.

    ಬೆಲೆ ಏರಿಕೆ ಆಗುತ್ತಿರೋದು ಯಾಕೆ?
    ಈ ಹಿಂದೆ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ(ಒಪೆಕ್) ನಡುವೆ ಶೀತಲ ಸಮರವಿತ್ತು. ಹೀಗಾಗಿ ಈ ರಾಷ್ಟ್ರಗಳು ತೈಲ ಉತ್ಪಾದನೆಗೆ ಯಾವುದೇ ಮಿತಿ ಹಾಕಿರಲಿಲ್ಲ. ಆದರೆ ಈಗ ಈ ರಾಷ್ಟ್ರಗಳ ಮಿತಿ ಹಾಕಿದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ದಿನವೂ ಏರಿಕೆಯಾಗುತ್ತಿದೆ. ಎಸ್‍ಆಂಡ್‍ಪಿ ಗ್ಲೋಬಲ್ ಪ್ಯಾಂಟ್ ಅಧ್ಯಯನದ ಪ್ರಕಾರ ತೈಲ ಉತ್ಪಾದಿಸುವ 14 ದೇಶಗಳಲ್ಲಿ ಉತ್ಪಾದನೆ ಕಡಿಮೆಯಾಗಿದೆ. ಈ ಹಿಂದೆ ಪ್ರತಿದಿನ 32 ದಶಲಕ್ಷ ಬ್ಯಾರೆಲ್ ಉತ್ಪಾದಿಸುತ್ತಿದ್ದರೆ ಏಪ್ರಿಲ್ ನಲ್ಲಿ 1.40 ದಶಲಕ್ಷ ಕಡಿಮೆಯಾಗಿದೆ. ವಿಶ್ವದೆಲ್ಲೆಡೆ ಭಾರೀ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಒಪೆಕ್ ರಾಷ್ಟ್ರಗಳು ಜೂನ್ 22 ರಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ವೇಳೆ ತೈಲ ಉತ್ಪಾನೆಯ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.