Tag: ಇಂಧೋರ್

  • ಕಾಲೇಜು ಪ್ರಿನ್ಸಿಪಾಲ್‍ಗೇ ಬೆಂಕಿ ಇಟ್ಟ ವಿದ್ಯಾರ್ಥಿ – ಚಿಕಿತ್ಸೆ ಫಲಿಸದೇ ಸಾವು

    ಕಾಲೇಜು ಪ್ರಿನ್ಸಿಪಾಲ್‍ಗೇ ಬೆಂಕಿ ಇಟ್ಟ ವಿದ್ಯಾರ್ಥಿ – ಚಿಕಿತ್ಸೆ ಫಲಿಸದೇ ಸಾವು

    ಭೂಪಾಲ್: ತನ್ನ ಮಾಜಿ ವಿದ್ಯಾರ್ಥಿಯಿಂದ ದಾಳಿಗೊಳಗಾಗಿ ಕಳೆದ ಐದು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಮಧ್ಯಪ್ರದೇಶದ ಇಂಧೋರ್‌ನ (Indore) ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಡಾ.ವಿಮುಕ್ತ ಶರ್ಮಾ (54) ಮೃತ ದುದೈವಿ. ಮಾರ್ಕ್ಸ್‌ಕಾರ್ಡ್ ವಿಷಯವಾಗಿ ಗಲಾಟೆ ಮಾಡಿಕೊಂಡಿದ್ದ ಕಾಲೇಜಿನ ಹಳೇ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ ನಂತರ ಪ್ರಾಂಶುಪಾಲರ ಮೇಲೆ ಪೆಟ್ರೋಲ್ (Petrol) ಸುರಿದು ಬೆಂಕಿ ಹಚ್ಚಿದ್ದಾನೆ. ಪ್ರಾಂಶುಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಹವು ಶೇ.80 ರಷ್ಟು ಸುಟ್ಟುಹೋಗಿದ್ದರಿಂದ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಭಗವತ್ ಸಿಂಗ್ ವಿರ್ಡೆ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಾಲ ನೀಡಿದ ಚೀನಾ – ಅಮೆರಿಕ ಕಳವಳ

    ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿತ್ತು. ಪ್ರಾಂಶುಪಾಲರ ಸಾವಿನ ನಂತರ ಕೊಲೆ ಎಂದು ಎಫ್‍ಐಆರ್‌ನಲ್ಲಿ (FIR) ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

     ವಿಚಾರಣೆ ವೇಳೆ ಆರೋಪಿ, ತಾನು ಕಳೆದ ವರ್ಷ ಜುಲೈನಲ್ಲಿ ತೇರ್ಗಡೆಯಾಗಿದ್ದ ಅಂಕಪಟ್ಟಿಯನ್ನು (Marks card) ಕಾಲೇಜಿನ ಅಧಿಕಾರಿಗಳು ನೀಡುತ್ತಿರಲಿಲ್ಲ ಎಂದು ಆರೋಪಿಸಿದ್ದಾನೆ.

    ಆರೋಪಿ ನೀಡಿದ ಹೇಳಿಕೆಯನ್ನು ತಳ್ಳಿಹಾಕಿರುವ ಕಾಲೇಜು ಆಡಳಿತ ಮಂಡಳಿ, ಆತ ಕ್ರಿಮಿನಲ್ ಹಿನ್ನೆಲೆ ಉಳ್ಳವನಾಗಿದ್ದಾನೆ. ಆತನ ಮಾರ್ಕ್ಸ್‌ಕಾರ್ಡ್ ಪಡೆದುಕೊಳ್ಳುವಂತೆ ತಿಳಿಸಲಾಗಿತ್ತು. ಆದರೆ ಆತ ತೆಗೆದುಕೊಂಡು ಹೋಗಿರಲಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿ ಬಂದ್ಮೇಲೆ ದೇಶ ಅಭಿವೃದ್ಧಿಯಾಗಿಲ್ಲ, ನಾವು ಹುಟ್ಟುವ ಮುಂಚೆಯೇ ಆಗಿದೆ: ಹೆಚ್‌ಡಿಕೆ

  • 100 ಅಡಿಯಿಂದ ನರ್ಮದಾ ನದಿಗೆ ಬಿತ್ತು ಬಸ್ – 12 ಸಾವು, ಹಲವರು ಗಂಭೀರ

    100 ಅಡಿಯಿಂದ ನರ್ಮದಾ ನದಿಗೆ ಬಿತ್ತು ಬಸ್ – 12 ಸಾವು, ಹಲವರು ಗಂಭೀರ

    ಭೋಪಾಲ್: ಇಂಧೋರ್‌ನಿಂದ ಮಹಾರಾಷ್ಟ್ರದ ಪುಣೆಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಖಾಲ್‌ಘಾಟ್ ಸೇತುವೆ ತಡೆಗೋಡೆ ಮುರಿದು ಸುಮಾರು 100 ಅಡಿ ಎತ್ತರದಿಂದ ನರ್ಮದಾ ನದಿಗೆ ಉರುಳಿ ಬಿದ್ದಿದೆ.

    ಇದರಿಂದ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಧಮ್ನೋಡ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜ್‌ಕುಮಾರ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ನರ್ಮದಾ ನದಿಯಲ್ಲಿ ಸಂಪೂರ್ಣವಾಗಿ ಮುಳುಗಿರುವ ಬಸ್‌ನಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ನಮಗಿನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ಈಗಾಗಲೇ 12 ಮಂದಿ ಮೃತಪಟ್ಟಿದ್ದು, ಉಳಿದವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಬದುಕುಳಿಯುವ ಸಾಧ್ಯತೆಗಳೂ ಇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬ್ರೇಕಪ್ ನಂತರ ಸ್ಟಾರ್ ನಟಿ ಸಹೋದರನ ಜೊತೆ ಇಲಿಯಾನಾ ಡೇಟಿಂಗ್

    ಇಂಧೋರ್‌ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಬಸ್ ತಡೆಗೋಡೆ ಮುರಿದು ನದಿಗೆ ಬಿದ್ದಿದೆ. ಬಸ್ ಅನ್ನು ನದಿಯಿಂದ ಮೇಲೆತ್ತಲು ಭಾರೀ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು (SDRF) ಸ್ಥಳದಲ್ಲಿದ್ದು, ಸ್ಥಳೀಯ ಮೀನುಗಾರರೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

    ಇಂಧೋರ್ ಮತ್ತು ಧಾರ್‌ನ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯ ಪರಿಶೀಲಿಸಲು ಸ್ಥಳಕ್ಕೆ ಧಾವಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇದ್ದಕ್ಕಿದ್ದಂತೆ ರಸ್ತೆ ಮೇಲೆ ನೋಟುಗಳ ಮಳೆ

    ಇದ್ದಕ್ಕಿದ್ದಂತೆ ರಸ್ತೆ ಮೇಲೆ ನೋಟುಗಳ ಮಳೆ

    – ಕೊರೊನಾ ಭೀತಿಗೆ ದುಡ್ಡು ಮುಟ್ಟದ ಜನ
    – ಕೋಲಿನಿಂದ ಹಣ ಆರಿಸಿದ ಪೊಲೀಸರು
    – ಈಗ ಲ್ಯಾಬ್ ಪರೀಕ್ಷೆಗೆ ನೋಟುಗಳು

    ಇಂಧೋರ್: ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ರಸ್ತೆಯಲ್ಲಿ ನೋಟುಗಳ ಸುರಿಮಳೆಗೈದಿರುವ ಘಟನೆ ಮಧ್ಯಪ್ರದೇಶದ ಇಂಧೋರ್‍ನ ಖಾತಿರ್‍ಪುರ ಪ್ರದೇಶದ ಧರ್ಮಶಾಲಾದಲ್ಲಿ ನಡೆದಿದೆ.

    ಮೊದಲೇ ಕೊರೊನಾ ವೈರಸ್ ಭೀತಿಯಿಂದ ತತ್ತರಿಸಿರುವ ಇಂಧೋರ್ ನಲ್ಲಿ ಈ ರೀತಿ ಘಟನೆ ನಡೆದಿರುವುದು ಆತಂಕವನ್ನು ಸೃಷ್ಟಿಸಿದೆ. ಅಪರಿಚಿತ ವ್ಯಕ್ತಿಯೋರ್ವ ರಸ್ತೆ ಮೇಲೆ 500, 200, 100, 50 ಹಾಗೂ 10 ರೂ. ಮುಖಬೆಲೆಯ ನೋಟುಗಳನ್ನು ಎಸೆದು ಹೋಗಿದ್ದಾನೆ. ಸಾವಿರಾರು ರೂ. ಹಣ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೂ ಕೊರೊನಾ ಭೀತಿಯಿಂದ ಯಾರೊಬ್ಬರು ಅದನ್ನು ತೆಗೆದುಕೊಳ್ಳುವ ಸಹಾಸಕ್ಕೆ ಮುಂದಾಗಲಿಲ್ಲ.

    https://twitter.com/brajeshabpnews/status/1250732218391031810

    ಇಷ್ಟೆಲ್ಲಾ ಹಣವನ್ನು ಯಾರೂ ರಸ್ತೆ ಮೇಲೆ ಎಸೆಯುವುದಿಲ್ಲ. ಬಹುಶಃ ನೋಟುಗಳಲ್ಲಿ ಕೊರೊನಾ ವೈರಸ್ ರೋಗಾಣುಗಳನ್ನು ಲೇಪಿಸಿ ಎಸೆದಿರಬಹುದು ಎಂದು ಸಾರ್ವಜನಿಕರಲ್ಲಿ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಜನರು ನೋಟುಗಳನ್ನು ಮುಟ್ಟದೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಮಾಸ್ಕ್, ಗ್ಲೌಸ್ ಹಾಕಿಕೊಂಡು ನೋಟುಗಳನ್ನು ಕೋಲಿನಿಂದ ಆಯ್ದುಕೊಂಡು ಬ್ಯಾಗ್‍ಗೆ ತುಂಬಿಸಿಕೊಂಡಿದ್ದು, ಇದನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಿದ್ದಾರೆ.

    ರಸ್ತೆಯಲ್ಲಿ ಹೀಗೆ ಹಣ ಎಸೆದು ಹೋಗಿದ್ದು ಯಾಕೆ? ಯಾರು ಹೀಗೆ ಮಾಡಿದ್ದಾರೆ ಎನ್ನುವ ಹತ್ತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿದೆ. ನೋಟುಗಳ ಮೂಲಕವೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ರಸ್ತೆ ಮೇಲೆ ಬಿದ್ದಿದ್ದ ನೋಟುಗಳನ್ನು ಮುಟ್ಟಲು ಇಂಧೋರ್ ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡ ಹಿಂದೇಟು ಹಾಕಿದ್ದರು.

    ಸದ್ಯ ಕೊರೊನಾ ವೈರಸ್ ಹಾಟ್‍ಸ್ಪಾಟ್ ಎನಿಸಿಕೊಂಡಿರುವ ಮಧ್ಯಪ್ರದೇಶದ ಇಂಧೋರ್ ನಲ್ಲಿ ಈ ಘಟನೆ ನಡೆದಿರೋದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ರಸ್ತೆಯಲ್ಲಿ ಬಿದ್ದಿದ್ದ ಹಣವನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಲು ಪೊಲೀಸರು ಅದನ್ನು ಆರಿಸುತ್ತಿರುವ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಈವರೆಗೆ ಮಧ್ಯಪ್ರದೇಶ ರಾಜ್ಯಾದ್ಯಂತ 1,164 ಮಂದಿಗೆ ಸೋಂಕು ತಗುಲಿದ್ದು, ಇಂಧೋರ್ ಒಂದರಲ್ಲೇ 707 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈವರೆಗೆ 55 ಮಂದಿ ಸಾವನ್ನಪ್ಪಿದ್ದು, 70 ಮಂದಿ ಗುಣಮುಖರಾಗಿದ್ದಾರೆ.