Tag: ಇಂಪಾಲ

  • ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

    ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

    ಇಂಪಾಲ: ಮಣಿಪುರದ (Manipur) ಸೆರೌ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಕುಕಿ ದಂಗೆಕೋರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಗಡಿ ಭದ್ರತಾ ಪಡೆ (BSF) ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

    ಕಾಕ್ಚಿಂಗ್ (Kakching) ಜಿಲ್ಲೆಯ ಸುಗ್ನುವಿನ ಸೆರೌ (Serou) ಪ್ರದೇಶದ ಶಾಲೆಯೊಂದರಲ್ಲಿ ದಂಗೆಕೋರರು ಮತ್ತು ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಾನ್‌ಸ್ಟೇಬಲ್ ರಂಜಿತ್ ಯಾದವ್ ಎಂಬ ಯೋಧನಿಗೆ ಗುಂಡು ತಗುಲಿತ್ತು. ತಕ್ಷಣ ಅವರನ್ನು ಕಾಕ್ಚಿಂಗ್ ಜೀವನ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದರು. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಭಯೋತ್ಪಾದಕರ ಭೀತಿ- ಭದ್ರತಾ ಪಡೆಗಳೇ ಟಾರ್ಗೆಟ್

    ಮಂಗಳವಾರ ಮುಂಜಾನೆ 4:15ರ ಸುಮಾರಿಗೆ ಸೆರೌ ಪ್ರಾಕ್ಟಿಕಲ್ ಹೈಸ್ಕೂಲ್‌ನಲ್ಲಿ ನಿಯೋಜಿಸಲಾಗಿದ್ದ ಬಿಎಸ್‌ಎಫ್ ಪಡೆಗಳನ್ನು ಗುರಿಯಾಗಿಸಿಕೊಂಡು ಕುಕಿ ದಂಗೆಕೋರರು (Kuki Miscreants) ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಲ್ಲದೇ ಗಾಯಗೊಂಡಿರುವ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ಮಂತ್ರಿಪುಖ್ರಿಗೆ ವಾಯು ಸ್ಥಳಾಂತರಿಸಲಾಗಿದೆ. ಶೋಧ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ದಿಮಾಪುರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಸೇನೆಯ ಸ್ಪಿಯರ್‌ಕಾರ್ಪ್ಸ್ ಟ್ವಿಟ್ಟರ್‌ನಲ್ಲಿ ಹೇಳಿದೆ. ಇದನ್ನೂ ಓದಿ: ಬಾಲಸೋರ್ ರೈಲು ಅಪಘಾತ – ತನಿಖೆ ಆರಂಭಿಸಿದ ಸಿಬಿಐ

    ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (UKLF) ದಂಗೆಕೋರರು ಮಣಿಪುರದ ಕಕ್ಚಿಂಗ್ ಜಿಲ್ಲೆಯ ಸುಗ್ನು ಎಂಬಲ್ಲಿ ತಂಗಿದ್ದರು. ಶನಿವಾರ ಮಧ್ಯರಾತ್ರಿ ಸೆರೌನಲ್ಲಿ ಕಾಂಗ್ರೆಸ್ ಶಾಸಕ ರಂಜಿತ್ ಮನೆ ಸೇರಿದಂತೆ 100ಕ್ಕೂ ಹೆಚ್ಚು ಮನೆಗಳನ್ನು ದಂಗೆಕೋರರು ಸುಟ್ಟುಹಾಕಿದ್ದರು. ಈ ಘಟನೆಯ ಬಳಿಕ ದಂಗೆಕೋರರು ತಂಗಿದ್ದ ಶಿಬಿರಕ್ಕೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇದನ್ನೂ ಓದಿ: ಸತ್ತಿದ್ದಾನೆಂದು ಹೆಣಗಳ ರಾಶಿಯಲ್ಲಿ ಇಟ್ಟಿದ್ದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ!

    ಮಣಿಪುರ ರಾಜಧಾನಿ ಇಂಪಾಲ್‌ನಲ್ಲಿ ಭಾರತೀಯ ಸಂವಿಧಾನದಡಿಯಲ್ಲಿ ಮೀಟಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳಲ್ಲಿ ಸೇರಿಸುವ ಕುರಿತು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಮೇ 3ರಂದು ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದಿದ್ದವು. ಇದನ್ನೂ ಓದಿ: ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

  • ಮತ್ತೆ ಮಣಿಪುರದಲ್ಲಿ ಘರ್ಷಣೆ ಕರ್ಫ್ಯೂ ಜಾರಿ – ಇಂಟರ್‌ನೆಟ್ ಬಂದ್

    ಮತ್ತೆ ಮಣಿಪುರದಲ್ಲಿ ಘರ್ಷಣೆ ಕರ್ಫ್ಯೂ ಜಾರಿ – ಇಂಟರ್‌ನೆಟ್ ಬಂದ್

    ಇಂಫಾಲ: ಮೈಟೀಸ್ (Meiteis) ಮತ್ತು ಕುಕಿ ಜನಾಂಗದ ನಡುವೆ ಸೋಮವಾರ ನಡೆದ ಘರ್ಷಣೆಯಿಂದಾಗಿ ಮಣಿಪುರದ (Manipur) ರಾಜಧಾನಿ ಇಂಫಾಲನಲ್ಲಿ (Imphal) ಮತ್ತೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಘರ್ಷಣೆ ವ್ಯಾಪಕವಾಗಿ ಹಬ್ಬುವುದನ್ನು ತಡೆಯಲು ಮೇ 26 ರ ವರೆಗೆ ರಾಜ್ಯದಲ್ಲಿ ಇಂಟರ್ನೆಟ್ ಸ್ಥಗಿತ ಗೊಳಿಸಲಾಗಿದೆ. ಅಲ್ಲದೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕರ್ಫ್ಯೂ ಬಿಗಿಗೊಳಿಸಲಾಗಿದೆ. 2 ರಿಂದ 6 ರ ವರೆಗೆ ಕರ್ಫ್ಯೂ ಸಡಿಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: `ಗ್ಯಾರಂಟಿ’ ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ, 40% ಕಮಿಷನ್ ಆರೋಪ ತನಿಖೆಯಾಗಲಿ – ಬೊಮ್ಮಾಯಿ

    ಈ ಬಗ್ಗೆ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಪ್ರತಿಕ್ರಿಯಿಸಿ, ಎರಡು ಸಮುದಾಯಗಳ ನಡುವಿನ ಉದ್ವಿಗ್ನತೆಯ ಬಗ್ಗೆ ವರದಿಗಳು ಬರುತ್ತಲೇ ಇದೆ. ಮೈಟೈಸ್ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (Manipur High Court) ಸೂಚಿಸಿತ್ತು. ಇದಾದ ಬಳಿಕ ಪ್ರತಿಭಟನೆ ವ್ಯಾಪಾಕವಾಗಿ ಹಬ್ಬಿತ್ತು. ಈಗ ಪ್ರಸ್ತುತ ಆ ವಿಚಾರವಾಗಿ ಘರ್ಷಣೆ ನಡೆಯುತ್ತಿಲ್ಲ. ಅಲ್ಲದೆ ಇಂದಿನ ಪ್ರತಿಭಟನೆಯ ಎರಡು ಗುಂಪಿನ ನಡುವೆ ಯಾವುದೇ ದ್ವೇಷವಿಲ್ಲ. ಅರಣ್ಯ ಸಂರಕ್ಷಣೆ ಮತ್ತು ಗಸಗಸೆ ತೆರವುಗೊಳಿಸುವ ಸರ್ಕಾರದ ನೀತಿಗೆ ಪ್ರತಿರೋಧವಾಗಿ ಪ್ರತಿಭಟನೆ ನಡೆದಿದೆ ಎಂದಿದ್ದಾರೆ.

    ಮಣಿಪುರದಲ್ಲಿ ಹಿಂಸಾಚಾರ ಮೇ 3 ರಿಂದ ಪ್ರಾರಂಭವಾಗಿ ಇಂದಿಗೂ ಜೀವಂತವಾಗಿದೆ. ಹಿಂಸಾಚಾರ ಆರಂಭಗೊಂಡ ದಿನವೇ ಸರ್ಕಾರ ಮೊದಲ ಬಾರಿಗೆ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಿತ್ತು. ಹಿಂಸಾಚಾರದಲ್ಲಿ 70ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು. ಅಲ್ಲದೆ 26,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿತ್ತು. ಇದನ್ನೂ ಓದಿ: ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ

  • ಮಣಿಪುರದಲ್ಲಿ ಉಗ್ರರ ದಾಳಿ – ಓರ್ವ ಪೊಲೀಸ್ ಹುತಾತ್ಮ, ನಾಲ್ವರು ಗಂಭೀರ

    ಮಣಿಪುರದಲ್ಲಿ ಉಗ್ರರ ದಾಳಿ – ಓರ್ವ ಪೊಲೀಸ್ ಹುತಾತ್ಮ, ನಾಲ್ವರು ಗಂಭೀರ

    ಇಂಪಾಲ: ಉಗ್ರರು (Militants) ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪುರದಲ್ಲಿ (Manipur) ನಡೆದಿದೆ.

    ಟೊರ್ಬಂಗ್ ಪ್ರದೇಶದಲ್ಲಿ ಇಬ್ಬರು ನಾಗರಿಕರನ್ನು ಉಗ್ರರು ಇತ್ತೀಚೆಗೆ ಅಪಹರಿಸಿದ್ದರು. ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದ ವೇಳೆ ಸಮೀಪದ ಪ್ರದೇಶ ಒಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಬಂದಿತ್ತು. ಇದರಿಂದಾಗಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಫೋನ್ ನಂಬರ್‌ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ: ಕುಸ್ತಿಪಟು ಬಜರಂಗ್ ಪೂನಿಯಾ ಆರೋಪ

    ಇತ್ತೀಚೆಗೆ ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಹಿಂಸಾಚಾರ ಬುಗಿಲೆದ್ದಿತ್ತು. ಕೆಲವು ಜಿಲ್ಲೆಗಳಲ್ಲಿ ಇನ್ನೂ ಕರ್ಫ್ಯೂ (Curfew) ಜಾರಿಯಲ್ಲಿದೆ. ಇದರ ನಡುವೆಯೇ ಉಗ್ರರು, ಪೊಲೀಸರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಚಟುವಟಿಕೆ ಆರಂಭಿಸಿದ್ದಾರೆ. ಉಗ್ರರನ್ನು ಹತ್ತಿಕ್ಕಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇನ್ನೊಂದು ಘಟನೆಯಲ್ಲಿ ದಿಮಾಪುರ್‌ನಿಂದ (Dimapur) ಇಂಫಾಲಗೆ (Imphal) ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದ 100 ಟ್ರಕ್‍ಗಳನ್ನು ಉತ್ತರ ಕಾಂಗ್‍ಫೋಕ್ಪಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಅಪರಿಚಿತರು ತಡೆದ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲೆಯ ಗುಮಾಸ್ತನಿಂದ 4ರ ಬಾಲಕಿಗೆ ಕಿರುಕುಳ