Tag: ಇಗ್ಗಲೂರು

  • Bengaluru| ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಕೊಲೆ

    Bengaluru| ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಕೊಲೆ

    ಬೆಂಗಳೂರು: ವರ್ಷದ ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರು (Bengaluru) ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಇಗ್ಗಲೂರುನಲ್ಲಿ ನಡೆದಿದೆ.

    ಮನು ಮತ್ತು ಹರ್ಷಿತಾ ದಂಪತಿಗೆ ಆರೂವರೆ ತಿಂಗಳಿಗೆ ಸಿಜೇರಿಯನ್ ಮೂಲಕ ಮಗು ಜನಿಸಿತ್ತು. ಮಗುವಿಗೆ ಉಸಿರಾಟದ ತೊಂದರೆಯಿಂದಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಗು ಸಂಪೂರ್ಣ ಚೇತರಿಕೆ ಕಂಡ ಹಿನ್ನೆಲೆ ವಾರದ ಹಿಂದೆ ಮನೆಗೆ ಕರೆತರಲಾಗಿತ್ತು. ಆದರೆ ತಾಯಿ ಶೌಚಾಲಯಕ್ಕೆ ಹೋದಾಗ ಮಗು ಇದ್ದಕ್ಕಿದ್ದಂತೆ ಕಾಣೆಯಾಗಿದೆ. ಸೋಮವಾರ ಮಧ್ಯಾಹ್ನ 12:45ರ ಸುಮಾರಿಗೆ ಮಗು ನಾಪತ್ತೆಯಾಗಿದೆ. ಸುತ್ತಮುತ್ತ ಎಷ್ಟೇ ಹುಡುಕಾಡಿದರು ಮಗು ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾನ್ಸ್‌ಟೇಬಲ್ ಬರ್ಬರ ಹತ್ಯೆ

    ಈ ಬಗ್ಗೆ ಸೂರ್ಯನಗರ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರ ಪರಿಶೀಲನೆ ವೇಳೆ ಮನೆಯ ಸಿಂಟೆಕ್ಸ್ ನೀರಿನ ಟ್ಯಾಂಕ್‌ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಪೋಷಕರು ಅಂತರ್ಜಾತಿ ವಿವಾಹವಾಗಿದ್ದರು. ಅಂತರ್ಜಾತಿ ವಿವಾಹದ ವೈಷಮ್ಯಕ್ಕೆ ಮಗುವನ್ನು ಕೊಂದಿರುವ ಆರೋಪ ಮಾಡಲಾಗಿದೆ. ಈ ಬಗ್ಗೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿಗೆ ಪ್ರಧಾನಿ ಮೋದಿ ಖಂಡನೆ

  • ಪತ್ನಿ ಮೇಲೆ ರೇಪ್ ಆಗಿದ್ದಕ್ಕೆ ಮನನೊಂದ ಪತಿ ಆತ್ಮಹತ್ಯೆ!

    ಪತ್ನಿ ಮೇಲೆ ರೇಪ್ ಆಗಿದ್ದಕ್ಕೆ ಮನನೊಂದ ಪತಿ ಆತ್ಮಹತ್ಯೆ!

    ರಾಮನಗರ: ಪತ್ನಿ ಮೇಲೆ ನಡೆದಿದ್ದ ಅತ್ಯಾಚಾರದಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

    ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಇಗ್ಗಲೂರು ಗ್ರಾಮದ ನಿವಾಸಿ ಸಿದ್ದೇಶ್ (28) ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಕಳೆದ ಎರಡು ದಿನಗಳ ಹಿಂದೆ ಸಿದ್ದೇಶ್ ಪತ್ನಿಯ ಮೇಲೆ ಅತ್ಯಾಚಾರ ನಡೆದಿತ್ತು. ನೆರೆಮನೆಯ ಗಿರೀಶ್ ಎಂಬಾತ ಸಿದ್ದೇಶ್ ಪತ್ನಿ ಮೇಲೆ ಅತ್ಯಾಚಾರ ಎಸಗಿದ್ದ. ಪ್ರಕರಣದ ಸಂಬಂಧ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಅಕ್ಕೂರು ಪೊಲೀಸರು ಬಂಧಿಸಿದ್ದಾರೆ.

    ಇನ್ನು ಪತ್ನಿ ಮೇಲಿನ ಅತ್ಯಾಚಾರದಿಂದ ಮನನೊಂದಿದ್ದ ಸಿದ್ದೇಶ್ ತೋಟದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರ ತನಿಖೆ ಮುಂದುವರೆದಿದೆ.

    ಇದನ್ನೂ ಓದಿ: ಪ್ಲೀಸ್ ಅಳ್ಬೇಡಿ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಪತ್ನಿ ಕೊನೆಗೂ ಪ್ರತ್ಯಕ್ಷ!