Tag: ಇಟಲಿ

  • ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವು

    ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವು

    ರೋಮ್: ಇಟಲಿಯ (Italy) ಇಶಿಯಾ ದ್ವೀಪದಲ್ಲಿರುವ (Ischia Island) ಜನನಿಬಿಡ ಬಂದರು ನಗರದಲ್ಲಿ ಭಾನುವಾರ ಭೂಕುಸಿತ (Landslide) ಉಂಟಾಗಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಇಶಿಯಾ ದ್ವೀಪದ ಉತ್ತರ ಭಾಗದಲ್ಲಿರುವ ಕ್ಯಾಂಪನಿಯಾದ ಮೆಟ್ರೋಪಾಲಿಟನ್ ಸಿಟಿ ಆಫ್ ನೇಪಲ್ಸ್‌ನಲ್ಲಿರುವ ಕಮ್ಯೂನ್ ಕ್ಯಾಸಮಿಸಿಯೋಲಾದಲ್ಲಿ ಭೂಕುಸಿತ ಉಂಟಾಗಿದ್ದು, ಹಲವರು ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ಶಂಕಿಸಲಾಗಿದೆ. ಈಗಾಗಲೇ 3 ವಾರದ ಮಗು, ಒಂದು ಜೋಡಿ ಒಡಹುಟ್ಟಿದ ಮಕ್ಕಳು ಸೇರಿದಂತೆ 7 ಜನರ ಶವಗಳನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ – ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್

    ಭಾರೀ ಭೂಕುಸಿತದಿಂದಾಗಿ ಅನೇಕ ಕಟ್ಟಡಗಳು ಕುಸಿದಿದ್ದು, ಹಲವು ವಾಹನಗಳು ಸಮುದ್ರ ಪಾಲಾಗಿದೆ ಎಂದು ವರದಿಗಳು ತಿಳಿಸಿವೆ. ಇಟಲಿಯ ಅಗ್ನಿಶಾಮಕದಳ ಸ್ಥಳ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಮಾರೊಕ್ಕೂ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ

    ವರದಿಗಳ ಪ್ರಕಾರ, ಇಶಿಯಾ ದ್ವೀಪದಲ್ಲಿ 6 ಗಂಟೆಗೆ 126 ಮಿ.ಮೀ (ಸುಮಾರು 5 ಇಂಚು) ಮಳೆ ಸುರಿದಿದೆ. ಇದು ಕಳೆದ 20 ವರ್ಷಗಳಲ್ಲೇ ಸುರಿದ ಅತ್ಯಂತ ಹೆಚ್ಚಿನ ಪ್ರಮಾಣದ್ದಾಗಿದೆ. ಈ ಹಿನ್ನೆಲೆ ಭಾರೀ ಭೂಕುಸಿತ ಉಂಟಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪುರುಷರೊಂದಿಗೆ ಸೆಕ್ಸ್ – ವ್ಯಕ್ತಿಗೆ ಒಂದೇ ಬಾರಿಗೆ ಕೊರೊನಾ, ಮಂಕಿಪಾಕ್ಸ್, HIV ಪಾಸಿಟಿವ್‌

    ಪುರುಷರೊಂದಿಗೆ ಸೆಕ್ಸ್ – ವ್ಯಕ್ತಿಗೆ ಒಂದೇ ಬಾರಿಗೆ ಕೊರೊನಾ, ಮಂಕಿಪಾಕ್ಸ್, HIV ಪಾಸಿಟಿವ್‌

    ರೋಮ್: ಇಟಲಿಯ ವ್ಯಕ್ತಿಯೋರ್ವನಿಗೆ ಒಂದೇ ಬಾರಿಗೆ ಮಂಕಿಪಾಕ್ಸ್, ಕೊರೊನಾ, ಎಚ್‍ಐವಿ ಸೋಂಕು ತಗುಲಿದೆ. ಅನೇಕ ಪುರುಷರೊಂದಿಗೆ ಅಸುರಕ್ಷಿತ ಲೈಂಗಿಕ ಸಂಬಂಧ ಹೊಂದಿದ್ದರಿಂದ ವ್ಯಕ್ತಿ ಸೋಂಕು ತಗುಲಿರುವುದು ದೃಢವಾಗಿದೆ.

    ಸ್ಪೇನ್ ಪ್ರವಾಸಕ್ಕೆ ಹೋಗಿದ್ದ ವ್ಯಕ್ತಿ ನಂತರ ಹಿಂದಿರುಗಿದ ನಂತರ ಜ್ವರ, ಆಯಾಸ ಮತ್ತು ನೋಯುತ್ತಿರುವ ಗಂಟಲು ಸೇರಿದಂತೆ ಹಲವಾರು ರೋಗಲಕ್ಷಣಗಳು ಕಾಣಿಸಿಕೊಂಡಿದೆ. ಬಳಿಕ ಪರೀಕ್ಷೆಗೆ ಒಳಪಡಿಸಿದಾಗ ವ್ಯಕ್ತಿಗೆ ಮಂಕಿಪಾಕ್ಸ್, ಕೋವಿಡ್-19 ಮತ್ತು ಎಚ್‍ಐವಿ ರೋಗ ಪಾಸಿಟಿವ್ ಬಂದಿದೆ. ಇದನ್ನೂ ಓದಿ: ಉತ್ತರ ಪ್ರದೇಶ, ತ್ರಿಪುರ ಬಳಿಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

    36 ವರ್ಷದ ಈ ವ್ಯಕ್ತಿ ಜೂನ್ 16 ರಿಂದ ಜೂನ್ 20ರವರೆಗೆ ಐದು ದಿನಗಳ ಕಾಲ ಸ್ಪೇನ್‍ನಲ್ಲಿ ತಂಗಿದ್ದನು. ಈ ವೇಳೆ ಅನೇಕ ಪುರುಷರೊಂದಿಗೆ ಅಸುರಕ್ಷಿತವಾದ ಲೈಂಗಿಕ ಸಂಬಂಧವನ್ನು ಹೊಂದಿದ್ದನು. ಮನೆಗೆ ಹಿಂತಿರುಗಿದ ಕೆಲವೇ ದಿನಗಳಲ್ಲಿ ಅಂದರೆ ಜುಲೈ 2 ರಂದು ಕೋವಿಡ್ ಪರೀಕ್ಷೆಗೆ ಒಳಗಾದನು. ಅಂದೇ ಮಧ್ಯಾಹ್ನ ಆತನ ಎಡಗೈಯಲ್ಲಿ ರ‌್ಯಾಶಸ್ ಕಂಡುಬಂದಿದೆ. ಮರುದಿನ ವ್ಯಕ್ತಿಯ ತಲೆ, ಕೈ ಕಾಲುಗಳು, ಮುಖ ಮತ್ತು ಹಿಂಭಾಗದಲ್ಲಿ ಸಣ್ಣ ಸಣ್ಣ ನೋವಿನ ಗುಳ್ಳೆಗಳು ಕಾಣಿಸಿಕೊಂಡಿದೆ. ನಂತರ ಗುಳ್ಳೆಗಳಲ್ಲಿ ಕೀವು ತುಂಬಿಕೊಂಡು ಅದು ದೇಹದ ತುಂಬೆಲ್ಲ ಹರಡಲಾರಂಭಿಸಿದೆ. ಕೂಡಲೇ ವ್ಯಕ್ತಿಯನ್ನು ಇಟಲಿಯ ಕ್ಯಾಟಾನಿಯಾದ ಸ್ಯಾನ್ ಮಾರ್ಕೊ ವಿಶ್ವವಿದ್ಯಾಲಯದ ಆಸ್ಪತ್ರೆಗೆ ಕರೆದೊಯ್ದು ಸಾಂಕ್ರಾಮಿಕ ರೋಗಗಳ ಘಟಕಕ್ಕೆ ವರ್ಗಾಯಿಸಲಾಯಿತು.

    ನಂತರ ವ್ಯಕ್ತಿಗೆ ಅನೇಕ ಪರೀಕ್ಷೆಗಳನ್ನು ನಡೆಸಿದಾಗ ಮಂಕಿಪಾಕ್ಸ್ ಪಾಸಿಟಿವ್ ಬಂದಿದೆ. ಈ ವೇಳೆ ತಾನು ಸ್ಪೇನ್ ಪ್ರವಾಸದಲ್ಲಿದ್ದಾಗ ಪುರುಷರೊಂದಿಗೆ ಅಸುರಕ್ಷಿತ ಸಂಭೋಗ ನಡೆಸಿದ್ದಾಗಿ ಆತ ಬಹಿರಂಗಪಡಿಸಿದ್ದಾನೆ. ಕೂಡಲೇ ಮಂಕಿಪಾಕ್ಸ್ ಟೆಸ್ಟ್ ಮಾಡಲಾಗಿತ್ತು. ಅದರಲ್ಲಿಯೂ ಪಾಸಿಟಿವ್ ಬಂದಿತ್ತು. 20 ದಿನಗಳ ನಂತರವೂ ಮಂಕಿಪಾಕ್ಸ್ ಟೆಸ್ಟ್ ಪಾಸಿಟಿವ್ ಬರುತ್ತಲೇ ಇತ್ತು. ಚಿಕಿತ್ಸೆಯ ಬಳಿಕ ಹಲವು ದಿನಗಳವರೆಗೂ ಸೋಂಕು ಹಾಗೇ ಇರಬಹುದು ಎಂದು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ವ್ಯಕ್ತಿ 2019ರಲ್ಲಿ ಸಿಫಿಲಿಸ್‍ಗೆ ಚಿಕಿತ್ಸೆ ಪಡೆದಿದ್ದ. ಬೈಪೋಲಾರ್ ಡಿಸಾರ್ಡರ್‌ನಿಂದ ಬಳಲುತ್ತಿದ್ದ. 2011ರಲ್ಲಿ ಕೋವಿಡ್-19 ಲಸಿಕೆಯ ಎರಡು ಡೋಸ್ ಪಡೆದಿದ್ದ. ಆದರೆ ಜನವರಿ 2022ರಲ್ಲಿ ಆತನಿಗೆ ಕೊರೊನಾ ಸೋಂಕು ತಗುಲಿತ್ತು. ಆಸ್ಪತ್ರೆಗೆ ದಾಖಲಾದ ನಂತರ ವೈರಲ್ ಹೆಪಟೈಟಿಸ್, ಹರ್ಷಿಸ್ ಸಿಂಪ್ಲೆಕ್ಸ್, ಗೊನೊರಿಯಾ, ಕ್ಲಮೈಡಿಯ ಮತ್ತು ಲಿಂಫೋಗ್ರಾನುಲೋಮಾ ವೆನೆರಿಯಮ್(ಎಲ್‍ಜಿವಿ)ಗಾಗಿ ನಡೆಸಲಾದ ಸೆರಾಲಜಿ ಪರೀಕ್ಷೆಗಳು ನೆಗೆಟಿವ್ ಬಂದಿದೆ. ಹೆಚ್‍ಐವಿ ಪರೀಕ್ಷೆ ಮಾತ್ರ ಪಾಸಿಟಿವ್ ಬಂದಿದೆ. ಒಂದೇ ಬಾರಿಗೆ ಮೂರು ಸೋಂಕುಗಳು ವ್ಯಕ್ತಿಯಲ್ಲಿ ಕಾಣಿಸಿಕೊಂಡಿರುವುದರಿಂದ ಇದೀಗ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ.  ಇದನ್ನೂ ಓದಿ: ಶಿವಮೊಗ್ಗ SDPI ಕಚೇರಿ ಮೇಲೆ ಪೊಲೀಸರ ದಾಳಿ – ಮಹತ್ವದ ದಾಖಲೆ ವಶಕ್ಕೆ

    ಇತ್ತೀಚೆಗೆ ಅತೀ ಬೇಗ ಹರಡುತ್ತಿರುವ ಸೋಂಕು ಮಂಕಿಪಾಕ್ಸ್ ಆಗಿದೆ. ಚರ್ಮದ ಗಾಯ, ವೈರಸ್‍ನಿಂದ ಕಲುಷಿತಗೊಂಡ ವಸ್ತುಗಳು, ಸೆಮಿನಲ್ ದ್ರವಗಳು ಮತ್ತು ಗಂಟಲಿನ ಸ್ರವಿಸುವಿಕೆ, ಸಾಂಗ್ರಾಮಿಕ ವಸ್ತುಗಳೊಂದಿಗೆ ನಿಕಟ ಸಂಪರ್ಕದಿಂದ ಮಂಕಿಪಾಕ್ಸ್ ಹರಡುತ್ತದೆ. ಅದರಲ್ಲಿಯೂ ಸಂಭೋಗ ನಡೆಸುವುದರಿಂದ ಮಂಕಿಪಾಕ್ಸ್ ಅತೀ ವೇಗವಾಗಿ ಹರಡುವ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]

  • ಸುಷ್ಮಿತಾ ಸೇನ್ ಈಜುಡುಗೆ ಕಂಡು ‘ಲುಕ್ಕಿಂಗ್ ಹಾಟ್’ ಎಂದ ಲಲಿತ್ ಮೋದಿ

    ಸುಷ್ಮಿತಾ ಸೇನ್ ಈಜುಡುಗೆ ಕಂಡು ‘ಲುಕ್ಕಿಂಗ್ ಹಾಟ್’ ಎಂದ ಲಲಿತ್ ಮೋದಿ

    ಲಿತ್ ಮೋದಿ ಮತ್ತು ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಡೇಟಿಂಗ್ ಮಾಡುತ್ತಿರುವ ವಿಚಾರವನ್ನು ಸ್ವತಃ ಲಲಿತ್ ಮೋದಿ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಾಗ ಎಲ್ಲರೂ ಅಚ್ಚರಿ ಆಗಿದ್ದಂತೂ ನಿಜ. ಅದರಲ್ಲೂ ಮಾಜಿ ವಿಶ್ವಸುಂದರಿಯ ಜೊತೆ ಇರುವ ಫೋಟೋಗಳನ್ನು ಶೇರ್ ಮಾಡಿದಾಗಲಂತೂ ಅದೇ ನ್ಯಾಷನಲ್ ನ್ಯೂಸ್ ಆಯಿತು. ಆನಂತರ ಏನೆಲ್ಲ ಬೆಳವಣಿಗೆಗಳು ನಡೆದವು.

    ತಾವಿಬ್ಬರೂ ಡೇಟಿಂಗ್ ಮಾಡುತ್ತಿಲ್ಲ ಎನ್ನುವಂತೆ ಸುಷ್ಮಿತಾ ಸೇನ್ ಬರೆದುಕೊಂಡರು. ತಾವಿಬ್ಬರೂ ಸ್ನೇಹಿತರು ಎನ್ನುವ ಅರ್ಥದಲ್ಲೂ ಬಿಂಬಿಸಲು ಹೊರಟರು. ಆದರೆ, ಲಲಿತ್ ಮೋದಿ ಮಾತ್ರ, ತಮ್ಮಿಬ್ಬರ ಮಧ್ಯೆ ಪ್ರೀತಿ ಇದೆ ಎನ್ನುವುದನ್ನು ಪದೇ ಪದೇ ಸಾಬೀತು ಮಾಡಲು ಹೊರಟರು. ಹಾಗಾಗಿ ಸುಷ್ಮಿತಾ ಸೇನ್ ಬಗ್ಗೆ ಸಲ್ಲದ ಆರೋಪಗಳನ್ನೂ ಕೆಲವರು ಮಾಡಿದರು. ದುಡ್ಡಿನ ಹಿಂದೆ ಬಿದ್ದವಳು ಎಂದು ಸ್ವತಃ ಮಾಜಿ ಬಾಯ್ ಫ್ರೆಂಡ್ ಹೇಳಿಕೆ ಕೊಟ್ಟ.

    ನಿತ್ಯ ಟ್ರೋಲ್ ಆಗುವುದನ್ನು ತಪ್ಪಿಸಲು ಸುಷ್ಮಿತಾ ಸೇನ್ ಇಟಲಿ ಪ್ರವಾಸ ಕೈಗೊಂಡರು. ಈ ಪ್ರವಾಸದ ಕೆಲವು ಫೊಟೋ ಮತ್ತು ವಿಡಿಯೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡರು. ಅದರಲ್ಲೂ ಈಜುಡುಗೆಯಲ್ಲಿ ಸಮುದ್ರಕ್ಕೆ ಹಾರುವಂತಹ ವಿಡಿಯೋ ಹಂಚಿಕೊಂಡಿದ್ದಾರೆ. ಇದು ಸಖಯ್ ವೈರಲ್ ಕೂಡ ಆಗಿದೆ. ಸಖತ್ ಸೆಕ್ಸಿಯಾಗಿಯೂ ಸುಷ್ಮಿತಾ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಈ ವಿಡಿಯೋವನ್ನು ಸುಷ್ಮಿತಾ ಸೇನ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಂತೆಯೆ ಲಲಿತ್ ಮೋದಿ ಅದಕ್ಕೆ ಕಾಮೆಂಟ್ ಮಾಡಿದ್ದಾರೆ. ಲುಕ್ಕಿಂಗ್ ಹಾಟ್ ಎಂದು ಬರೆದಿದ್ದಾರೆ. ಈ ಬರಹ ಕೂಡ ಇದೀಗ ಚರ್ಚೆಗೆ ಕಾರಣವಾಗಿದೆ. ಸುಷ್ಮಿತಾ ಸೇನ್ ಜೊತೆ ಇವರಿಗಿದ್ದ ಪ್ರೇಮವನ್ನು ಈ ರೀತಿಯಲ್ಲಿ ಸಾರಲಾಗಿದೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಟಲಿ ಪ್ರಧಾನಿ ದ್ರಾಘಿ ರಾಜೀನಾಮೆ

    ಇಟಲಿ ಪ್ರಧಾನಿ ದ್ರಾಘಿ ರಾಜೀನಾಮೆ

    ರೋಮ್: ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷಗಳು ವಿಶ್ವಾಸ ಮತವನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಇಟಲಿಯ ಪ್ರಧಾನಿ ಮಾರಿಯೋ ದ್ರಾಘಿ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

    ಕ್ವಿರಿನಾಲೆ ಅರಮನೆಯಲ್ಲಿ ನಡೆದ ಸಭೆಯಲ್ಲಿ ದ್ರಾಘಿ ಅವರು ಅಧ್ಯಕ್ಷ ಸೆರ್ಗಿಯೋ ಮಟ್ಟರೆಲ್ಲಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜೀನಾಮೆ ಪತ್ರವನ್ನು ಸ್ವೀಕರಿಸಿರುವ ಇಟಲಿ ಅಧ್ಯಕ್ಷ, ಸದ್ಯದ ಪರಿಸ್ಥಿತಿಯಲ್ಲಿ ಹಂಗಾಮಿ ಪ್ರಧಾನಿ ಆಗಿ ಮುಂದುವರಿಯಲು ಮನವಿ ಮಾಡಿಕೊಂಡಿದ್ದಾರೆ.

    ಯುರೋಪಿಯನ್ ಒಕ್ಕೂಟ ಸಹಾಯದ ಕೋವಿಡ್ ಸಾಂಕ್ರಾಮಿಕ ಚೇತರಿಕೆ ಯೋಜನೆ ಅನುಷ್ಠಾನಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂಬ ದ್ರಾಘಿ ಕರೆಯನ್ನು ಎಡ, ಬಲ ಮತ್ತು ಪ್ಯಾಪುಲಿಸ್ಟ್ ಪಕ್ಷಗಳನ್ನೊಳಗೊಂಡಿರುವ ಸಮ್ಮಿಶ್ರ ಸರ್ಕಾರದ ಸದಸ್ಯರು ನಿರಾಕರಿಸಿದ ಬೆನ್ನಲ್ಲೇ ಪ್ರಧಾನಿ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನನ್ನನ್ನು ಕಾಂಗ್ರೆಸ್‍ಗೆ ಕರೆದಿಲ್ಲ, ಬಿಜೆಪಿಗೆ ಹೋಗಬೇಡ ಅಂದಿದ್ದಾರೆ: ಜಿಟಿಡಿ

    ಅಧ್ಯಕ್ಷ ಮಟ್ಟರೆಲ್ಲಾ ಸಂಸತ್ತನ್ನು ವಿಸರ್ಜಿಸುತ್ತಾರೋ ಅಥವಾ ಅವಧಿಪೂರ್ವ ಚುನಾವಣೆಗಳನ್ನು ನಡೆಸುತ್ತಾರೋ ಎನ್ನುವುದು ಈವರೆಗೆ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಬಿಲ್‌ಗೇಟ್ಸ್ ಹಿಂದಿಕ್ಕಿ ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ

    Live Tv
    [brid partner=56869869 player=32851 video=960834 autoplay=true]

  • ಒಕ್ಕೂಟದ ಪತನದ ನಂತರ ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ

    ಒಕ್ಕೂಟದ ಪತನದ ನಂತರ ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ

    ರೋಮ್: ಒಕ್ಕೂಟದ ಪತನದ ಹಿನ್ನೆಲೆ ಇಟಲಿ ಪಿಎಂ ಮಾರಿಯೋ ದ್ರಾಘಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

    ಸಂಸತ್ತಿನಲ್ಲಿ ಪ್ರಮುಖ ಮಸೂದೆಗೆ ಮತ ಚಲಾಯಿಸಲು ಜನಪ್ರಿಯ ಒಕ್ಕೂಟದ ಪಾಲುದಾರರು ನಿರಾಕರಿಸಿದ ನಂತರ ಮಾರಿಯೋ ದ್ರಾಘಿ ಅವರು ಗುರುವಾರ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅಧ್ಯಕ್ಷರು ರಾಜೀನಾಮೆ ನೀಡದಂತೆ ಒತ್ತಾಯಿಸಿದ್ದಾರೆ.

    ರಾಜೀನಾಮೆಯ ನಿರಾಕರಣೆಯು ದ್ರಾಘಿ ಅವರ 17-ತಿಂಗಳ ಸರ್ಕಾರದ ಭವಿಷ್ಯವನ್ನು ಅಸ್ತವ್ಯಸ್ತಗೊಳಿಸಿತು. ಒಕ್ಕೂಟದೊಳಗೆ ಹೆಚ್ಚುತ್ತಿರುವ ತೀಕ್ಷ್ಣವಾದ ಭಿನ್ನಾಭಿಪ್ರಾಯಗಳಿಂದ ಸರ್ಕಾರದ ಉಳಿವಿನ ಬಗ್ಗೆ ತೀವ್ರವಾಗಿ ಚರ್ಚೆಯಾಗುತ್ತಿದೆ. ಇದನ್ನೂ ಓದಿ:  ಜೇಮ್ಸ್ ವೆಬ್ ಟೆಲಿಸ್ಕೋಪ್‍ನಲ್ಲಿ ಸೆರೆ ಸಿಕ್ಕ ಗುರು-ಚಂದ್ರನ ಬೆರಗುಗೊಳಿಸುವ ಫೋಟೋ 

    ಕಾರಣವೇನು?
    ದ್ರಾಘಿ ಅವರ ವಿಶಾಲ ಸಮ್ಮಿಶ್ರ ಸರ್ಕಾರವು ಕೇಂದ್ರ ಮತ್ತು ಜನಪ್ರಿಯ 5-ಸ್ಟಾರ್ ಮೂವ್‍ಮೆಂಟ್‍ನ ಪಕ್ಷಗಳನ್ನು ಒಳಗೊಂಡಿದೆ. ಈ ರೀತಿ ಸರ್ಕಾರವನ್ನು ಇಟಲಿಯ ಜನರು ಕೊರೊನಾ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಳ್ಳಲು ಸಹಾಯವಾಗಬೇಕು ಎಂದು ವಿನ್ಯಾಸಗೊಳಿಸಲಾಗಿತ್ತು.

    ಇಟಲಿ ನೂತನ ಪ್ರಧಾನಿ ಮಾರಿಯೋ ದ್ರಾಘಿ- Kannada Prabha

    ಗುರುವಾರ ದ್ರಾಘಿ ಅವರ ಸರ್ಕಾರವು ಸೆನೆಟ್‍ನಲ್ಲಿ ವಿಶ್ವಾಸ ಮತವನ್ನು ಗೆದ್ದುಕೊಂಡಿತು. 5-ಸ್ಟಾರ್ ಮೂವ್‍ಮೆಂಟ್ ಮಸೂದೆಯನ್ನು ಬೆಂಬಲಿಸಲು ನಿರಾಕರಿಸಿ 26 ಬಿಲಿಯನ್ ಯುರೋಗಳನ್ನು(20,84,89,73,56,620) ಬೇಡಿಕೆ ಇಟ್ಟಿತ್ತು. ಈ ಹಿನ್ನೆಲೆ ಡ್ರಾಘಿ ರಾಜೀನಾಮೆಯ ನಿರ್ಧಾರಕ್ಕೆ ಬಂದಿದ್ದಾರೆ.

    ರಾಜೀನಾಮೆಯನ್ನು ಸಲ್ಲಿಸಲು ಕ್ವಿರಿನಾಲ್ ಅಧ್ಯಕ್ಷೀಯ ಅರಮನೆಗೆ ತೆರಳುವ ಸ್ವಲ್ಪ ಸಮಯದ ಮೊದಲು ದ್ರಾಘಿ ಅವರು, ಈ ಸರ್ಕಾರದ ರಚನೆಯನ್ನು ಉಳಿಸಿಕೊಳ್ಳಲು ರಾಷ್ಟ್ರೀಯ ಏಕತೆಯ ಬಹುಪಾಲು ಸ್ಥಾನಗಳು ಅಸ್ತಿತ್ವದಲ್ಲಿಲ್ಲ ಎಂದು ಘೋಷಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಇಟಲಿಯಲ್ಲಿ ಹೆಲಿಕಾಪ್ಟರ್ ಪತನ – 7 ಮೃತದೇಹ ಪತ್ತೆ

    ಇಟಲಿಯಲ್ಲಿ ಹೆಲಿಕಾಪ್ಟರ್ ಪತನ – 7 ಮೃತದೇಹ ಪತ್ತೆ

    ರೋಮ್: ಇಟಲಿಯಲ್ಲಿ ಹೆಲಿಕಾಪ್ಟರ್ ಒಂದು 2 ದಿನಗಳ ಹಿಂದೆ ರಾಡಾರ್‌ನಿಂದ ಕಣ್ಮರೆಯಾಗಿತ್ತು. ಪತನವಾಗಿದ್ದ ಹೆಲಿಕಾಪ್ಟರ್‌ನಿಂದ ಇದೀಗ 7 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೆಲಿಕಾಪ್ಟರ್ ಗುರುವಾರ ಟಸ್ಕನಿಯ ಲುಕ್ಕಾದಿಂದ ಟೇಕ್ ಆಫ್ ಆಗಿದ್ದು, ಟ್ರೆವಿಸೊ ನಗರದ ಕಡೆಗೆ ಹೋಗುತ್ತಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ ಪತನವಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಎನ್‍ಕೌಂಟರ್ – ಮೂವರು ಲಷ್ಕರ್ ಉಗ್ರರ ಹತ್ಯೆ

    ಹೆಲಿಕಾಪ್ಟರ್‌ನಲ್ಲಿದ್ದ 7 ಪ್ರಯಾಣಿಕರು ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ವರು ಟರ್ಕಿ ಮೂಲದವರು ಹಾಗೂ ಇಬ್ಬರು ಲೆಬನಾನಿಯವರು ಇದ್ದು, ಒಬ್ಬ ಇಟಲಿ ಮೂಲದ ಪೈಲಟ್ ಸೇರಿದಂತೆ ಎಲ್ಲರೂ ಮೃತಪಟ್ಟಿದ್ದಾರೆ. ಪ್ರಯಾಣಿಕರು ಇಟಲಿಗೆ ವ್ಯಾಪಾರದ ಹಿನ್ನೆಲೆ ಪ್ರಯಾಣಿಸುತ್ತಿದ್ದರು ಎಂದು ಮೊಡೆನಾ ನಗರದ ಪ್ರಿಫೆಕ್ಟ್ ಕಚೇರಿ ತಿಳಿಸಿದೆ. ಇದನ್ನೂ ಓದಿ: ಬೂದಿಮುಚ್ಚಿದ ಕೆಂಡದಂತೆ ಭಾರತ – ಯುಪಿಯಲ್ಲಿ 250ಕ್ಕೂ ಗಲಭೆಕೋರರು ಅರೆಸ್ಟ್

    ಟಸ್ಕನಿ ಹಾಗೂ ಎಮಿಲಿಯಾ ರೋಮ್ಯಾಗ್ನಾ ಪ್ರದೇಶದ ಗಡಿಯಲ್ಲಿರುವ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತ್ತೆಯಾಗಿದೆ. ಹೆಲಿಕಾಪ್ಟರ್ ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಎಲ್ಲರೂ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ಧಿಗೆ ಸಂಪೂರ್ಣ ಸಹಕಾರ: ಬೊಮ್ಮಾಯಿ

    ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ಧಿಗೆ ಸಂಪೂರ್ಣ ಸಹಕಾರ: ಬೊಮ್ಮಾಯಿ

    ಬೆಂಗಳೂರು: ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಭಾರತ ಮತ್ತು ಇಟಲಿಯ ಸಾಂಸ್ಕೃತಿಕ ಮತ್ತು ವ್ಯವಹಾರಿಕ ಸಂಬಂಧ ಬಹಳ ಹಿಂದಿನಿಂದಲೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮನ್ನು ಭೇಟಿಯಾದ ಇಟಲಿಯ ವಿದೇಶಾಂಗ ವ್ಯವಹಾರಗಳ ಸಚಿವ ಲುಯ್ಗಿ ಡಿ ಮಾಯಿಒ ನೇತೃತ್ವದ ನಿಯೋಗಕ್ಕೆ ಮನವರಿಕೆ ಮಾಡಿಕೊಟ್ಟರು.

    ಈ ಸಂದರ್ಭದಲ್ಲಿ ಮಾತನಾಡಿದ ಇಟಲಿಯ ವಿದೇಶಾಂಗ ವ್ಯವಹಾರಗಳ ಸಚಿವ ಲುಯ್ಗಿ ಡಿ ಮಾಯಿಒ, ಕರ್ನಾಟಕದೊಂದಿಗೆ ಇಟಲಿ ಅತ್ಯುತ್ತಮ ಬಾಂಧವ್ಯವನ್ನು ಹೊಂದಲು ಇಚ್ಚಿಸಿದ್ದು, ಇಟಲಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು. ತಮ್ಮ ಭೇಟಿಯ ಕುರಿತಂತೆ ಸ್ಪಷ್ಟ ಕಲ್ಪನೆಯನ್ನು ಹೊಂದಿರುವ ನಿಯೋಗವು ದೇಶದಲ್ಲಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಹಾಗೂ ಬೆಂಗಳೂರಿನ ಮಹತ್ವವನ್ನು ಅರಿತುಕೊಂಡಿದೆ. ಬೆಂಗಳೂರು ಮತ್ತು ಇಟಲಿಯ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಆಸಕ್ತಿ ವ್ಯಕ್ತಪಡಿಸಿರುವುದು ಶ್ಲಾಘನೀಯ ಎಂದರು. ಇದನ್ನೂ ಓದಿ: ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಪುರಾತನ ಸಂಬಂಧ:
    ಮಾರ್ಬಲ್, ಗ್ರ್ಯಾನೈಟ್, ಟಯರ್ ಉತ್ಪಾದನಾ ಘಟಕಗಳು ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿವೆ. ಬೆಂಗಳೂರಿನ ಸುತ್ತಮುತ್ತ ಆಧುನಿಕ ಟೈಲ್ಸ್ ಉತ್ಪಾದಕ ಘಟಕಗಳಿವೆ. ಇವುಗಳಲ್ಲಿ ಶೇ. 99 ರಷ್ಟು ಘಟಕಗಳಲ್ಲಿ ಇಟಲಿಯ ಯಂತ್ರಗಳು ಬಳಕೆಯಾಗುತ್ತವೆ ಎಂದು ಮಾಹಿತಿ ಹಂಚಿಕೊಂಡರು.

    ವಿಜ್ಞಾನ ಇಲ್ಲಿನ ಜೀವನ ವಿಧಾನ:
    ಕರ್ನಾಟಕದಲ್ಲಿ ಜನಸಾಮಾನ್ಯರೂ ತಮ್ಮ ದಿನನಿತ್ಯದ ಬದುಕಿನಲ್ಲಿ ವಿಜ್ಞಾನವನ್ನು ಬಳಸುತ್ತಾರೆ. ವಿಜ್ಞಾನ ಇಲ್ಲಿನ ಜೀವನ ವಿಧಾನ. ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕದಲ್ಲಿ ಜನಸಾಮಾನ್ಯರೂ ತಮ್ಮ ದಿನನಿತ್ಯದ ಬದುಕಿನಲ್ಲಿ ವಿಜ್ಞಾನವನ್ನು ಬಳಸುತ್ತಾರೆ. ಬೆಂಗಳೂರು ವಿಜ್ಞಾನ ನಗರ. ಇಲ್ಲಿನ ಶಿಕ್ಷಣ ಹಾಗೂ ಆಲೋಚನೆಗಳು ವೈಜ್ಞಾನಿಕವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಗೌರವ್‌ ಗುಪ್ತ ಎತ್ತಂಗಡಿ – ತುಷಾರ್ ಗಿರಿನಾಥ್ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ವರ್ಗ

    ಬೆಂಗಳೂರು ವಿಜ್ಞಾನ ನಗರಿ:
    ಕರ್ನಾಟಕ ರಾಜ್ಯ ವಿಜ್ಞಾನ, ಸಂಶೋಧನೆ, ತಂತ್ರಜ್ಞಾನ, ಸ್ಟಾರ್ಟ್ ಅಪ್ ಹಾಗೂ ಯೂನಿಕಾರ್ನ್, ಐಟಿ ಬಿಟಿ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಇವೆಲ್ಲವುಗಳ ಬೆಳವಣಿಗೆಗೆ 150 ವರ್ಷಗಳ ಹಿಂದೆಯೇ ಮೈಸೂರು ಮಹಾರಾಜರು ಬುನಾದಿಯನ್ನು ಹಾಕಿದ್ದರು. ಹೆಚ್‍ಎಂಟಿ, ಬಿಹೆಚ್‍ಇಎಲ್ ಮುಂತಾದ ಉತ್ಪಾದನಾ ಕೇಂದ್ರಿತ ಕಾರ್ಖಾನೆಗಳು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಿತು. ಸ್ಟಾರ್ಟ್ ಅಪ್‍ಗಳು ಹಾಗೂ ಯೂನಿಕಾರ್ನ್‍ಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಬೆಂಗಳೂರು ದೇಶದ ವಿಜ್ಞಾನ ಹಾಗೂ ಆರ್ಥಿಕ ರಾಜಧಾನಿ ಹಾಗೂ ದೇಶದ ಭವಿಷ್ಯ ಎಂದರು.

  • 20 ವರ್ಷದಿಂದ ಮಕ್ಕಳ ಅಶ್ಲೀಲ ಫೋಟೋ, ವೀಡಿಯೋ ಚಿತ್ರಿಸುತ್ತಿದ್ದ ಸಂಗೀತಗಾರ

    20 ವರ್ಷದಿಂದ ಮಕ್ಕಳ ಅಶ್ಲೀಲ ಫೋಟೋ, ವೀಡಿಯೋ ಚಿತ್ರಿಸುತ್ತಿದ್ದ ಸಂಗೀತಗಾರ

    ರೋಮ್: 20 ವರ್ಷಗಳಿಂದ ಮಕ್ಕಳ ಅಶ್ಲೀಲ ಫೋಟೋ ಮತ್ತು ವೀಡಿಯೋಗಳನ್ನು ಚಿತ್ರಿಸುತ್ತಿದ್ದ 49 ವರ್ಷದ ಸಂಗೀತಗಾರ ಇಂದು ಪೋಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

    ವಯಸ್ಕರೊಂದಿಗೆ ಮಕ್ಕಳು ಲೈಂಗಿಕ ಕ್ರಿಯೆಗಳಲ್ಲಿ ತೊಡಗಿಕೊಳ್ಳುವ ಲಕ್ಷಗಳಷ್ಟು ಫೋಟೋ ಮತ್ತು ವೀಡಿಯೋಗಳನ್ನು 49 ವರ್ಷದ ಸಂಗೀತಗಾರ ಹೊಂದಿದ್ದು, ಆತನನ್ನು ಇಟಾಲಿಯನ್ ಪೊಲೀಸರು ಇಂದು ಬಂಧಿಸಿದ್ದಾರೆ. ಇದನ್ನೂ ಓದಿ: 6 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ ಇಬ್ಬರು ಮಹಿಳಾ ನಕ್ಸಲರ ಹತ್ಯೆ

    ಇಟಲಿಯ ಮಾರ್ಚೆ ಪ್ರದೇಶದ ಕರಾವಳಿ ನಗರವಾದ ಅಂಕೋನಾದಲ್ಲಿ ಸಂಗೀತಗಾರನಾಗಿದ್ದ ವ್ಯಕ್ತಿ ಸುಮಾರು 20 ವರ್ಷಗಳಿಂದ ಮಕ್ಕಳನ್ನು ಬಳಸಿಕೊಂಡು ಅಶ್ಲೀಲ ವೀಡಿಯೋ ಮತ್ತು ಫೋಟೋಗಳ್ನು ಚಿತ್ರಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಅವನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ವಿವಿಧ ಹಾರ್ಡ್ ಡಿಸ್ಕ್‍ಗಳು, ಆಪ್ಟಿಕಲ್ ಮೀಡಿಯಾ ಮತ್ತು ಸ್ಮಾರ್ಟ್‍ಫೋನ್‍ನಲ್ಲಿ ಫೈಲ್‍ಗಳನ್ನು ಆತ ಇಟ್ಟುಕೊಂಡಿದ್ದನು. ಅದನ್ನು ಪೊಲೀಸರು ಪರಿಶೀಲಿಸಿದಾಗ ಮಕ್ಕಳ ಅಶ್ಲೀಲ ಫೋಟೋ ಮತ್ತು ವೀಡಿಯೋ ಇರುವುದು ಪತ್ತೆಯಾಗಿದೆ.

    ಅದು ಅಲ್ಲದೇ ಈ ಫೈಲ್ ಗಳಿಗೆ ಮಕ್ಕಳ ವಯಸ್ಸಿನ ಪ್ರಕಾರ ಹೆಸರನ್ನು ಕೊಟ್ಟು ವಿಂಗಡಿಸಲಾಗಿದ್ದು, ವಿಭಿನ್ನ ಫೋಲ್ಡರ್ ಗಳನ್ನು ಮಾಡಲಾಗಿದೆ. ಇದರಲ್ಲಿ ಅಪ್ರಾಪ್ತ ಮಕ್ಕಳ ಫೋಟೋ ಮತ್ತು ವೀಡಿಯೋಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದರು. ಇದನ್ನೂ ಓದಿ: ಎಂಜಿನಿಯರ್ ಮನೆಯಲ್ಲಿ 4 ಗಂಟೆ ದಾಳಿ ನಂತರ 60 ಲಕ್ಷ ರೂ. ಪತ್ತೆ

    ಈತ ಅಪ್ರಾಪ್ತ ಮಕ್ಕಳಿಗೆ ಸಂಗೀತವನ್ನು ಹೇಳಿಕೊಂಡುತ್ತಿದ್ದು, ಮಕ್ಕಳನ್ನು ಬಳಸಿಕೊಂಡು ಈ ರೀತಿಯ ಕೃತ್ಯವನ್ನು ಮಾಡುತ್ತಿದ್ದಾನೆ. ಆದರೆ ಈ ಕುರಿತು ಈತನ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ಪೊಲೀಸರು ಹೇಳಿದರು.

  • ಲೈವ್ ವೇಳೆ ವರದಿಗಾರ್ತಿಗೆ ಕಿರುಕುಳ, ಕಪಾಳಮೋಕ್ಷ

    ಲೈವ್ ವೇಳೆ ವರದಿಗಾರ್ತಿಗೆ ಕಿರುಕುಳ, ಕಪಾಳಮೋಕ್ಷ

    ರೋಮ್: ಟಿವಿ ವರದಿಗಾರ್ತಿಯೊಬ್ಬರಿಗೆ ಲೈವ್ ವರದಿಯನ್ನು ನೀಡುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಆಕೆಯ ಮೇಲೆ ಹಲ್ಲೆ ನಡೆಸಿ ಕಿರುಕುಳ ಘಟನೆ ಇಟಲಿಯಲ್ಲಿ ನಡೆದಿದೆ.

    ಎಂಪೋಲಿಯಾದ ಕಾರ್ಲೋ ಕ್ಯಾಸ್ಟೆಲ್ಲಾನಿ ಕ್ರೀಡಾಂಗಣದ ಹೊರಗಿನಿಂದ ಟೋಸ್ಕಾನಾ ಟಿವಿಯ ಪತ್ರಕರ್ತೆ ಬೆಕಾಗ್ಲಿಯಾ ನೇರ ವರದಿ ಮಾಡುತ್ತಿದ್ದ ಸಂದರ್ಭದಲ್ಲಿ ಹಲ್ಲೆಗೆ ಒಳಗಾಗಿದ್ದಾರೆ.

    ಬೆಕಾಗ್ಲಿಯಾ ಫುಟ್‍ಬಾಲ್ ಆಟ ಮುಗಿದ ಬಳಿಕ ಕ್ರೀಡಾಂಗಣದ ಹೊರಭಾಗದಲ್ಲಿ ಅಭಿಮಾನಿಗಳೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಹಿಂದುಗಡೆಯಿಂದ ಬಂದ ವ್ಯಕ್ತಿ ಕೈಗೆ ಉಗುಳಿ, ನೇರ ಪ್ರಸಾರದಲ್ಲೇ ಬೆಕಾಗ್ಲಿಯಾಳ ಕಪಾಳಕ್ಕೆ ಹೊಡೆದಿದ್ದಾನೆ. ಇದನ್ನೂ ಓದಿ: ಇನ್ನೂ ಕಾಯಲು ಸಿದ್ಧವಿಲ್ಲ: ಮಲ್ಯಗೆ ಶಿಕ್ಷೆ ವಿಧಿಸಲು ಸಿದ್ಧ ಎಂದು ಸುಪ್ರೀಂ

    ಈ ಘಟನೆ ವರದಿಗಾರ್ತಿಗೆ ಅಸಹ್ಯವನ್ನು ಉಂಟುಮಾಡಿದ್ದು, ಕೋಪಗೊಂಡು ಹಲ್ಲೆ ಮಾಡಿದಾತನಿಗೆ ಬೈದಿದ್ದಾಳೆ. ಲೈವ್‍ನಲ್ಲಿದ್ದ ಟಿವಿ ನಿರೂಪಕರು ಆಕೆಯನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದ್ದಾರೆ.

    ಬೆಕಾಗ್ಲಿಯಾ ತನಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಆ ವ್ಯಕ್ತಿಯನ್ನು ಗುರುತಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಟೋಸ್ಕಾನಾ ಟೀವಿ ಇದಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ವೆಚ್ಚಗಳನ್ನು ಭರಿಸುವುದಾಗಿ ಒಪ್ಪಿಕೊಂಡಿದೆ.

    ನನಗೆ ಏನಾಯಿತು ಎಂಬುವುದು ಮುಖ್ಯವಲ್ಲ. ನಾನು ನನ್ನ ಕೆಲಸದಲ್ಲಿದ್ದ ಕಾರಣ ಕ್ಯಾಮೆರಾ ಅದನ್ನು ಚಿತ್ರೀಕರಿಸಿದೆ. ಹೀಗಾಗಿ ಘಟನೆ ಬೆಳಕಿಗೆ ಬಂದಿದೆ. ಆದರೆ ಇತರ ಮಹಿಳೆಯರ ವಿಚಾರಕ್ಕೆ ಬಂದಾಗ ಅದನ್ನು ಚಿತ್ರೀಕರಿಸಲು ಯಾವುದೇ ಕ್ಯಾಮೆರಾಗಳು ಇರುವುದಿಲ್ಲ. ಇದರಿಂದ ನಡೆದ ಅನ್ಯಾಯ ಗೋಚರಿಸದೇ ಹೋಗುವ ಸಾಧ್ಯತೆ ಇರುತ್ತದೆ. ಈ ರೀತಿಯಾಗಿ ಯಾವ ಮಹಿಳೆಯರಿಗೂ ಆಗಬಾರದು ಎಂದು ಘಟನೆಯ ಕುರಿತು ಬೆಕಾಗ್ಲಿಯಾ ಹೇಳಿದ್ದಾಳೆ. ಇದನ್ನೂ ಓದಿ: ತೋಡಿನಲ್ಲಿ ಮರಿಗೆ ಜನ್ಮವಿತ್ತ ಕಾಡಾನೆ

  • ಪ್ರಧಾನಿ ಮೋದಿಗೆ ನನ್ನ ಮೇಲೆ ಅಸೂಯೆ: ಮಮತಾ ಬ್ಯಾನರ್ಜಿ

    ಪ್ರಧಾನಿ ಮೋದಿಗೆ ನನ್ನ ಮೇಲೆ ಅಸೂಯೆ: ಮಮತಾ ಬ್ಯಾನರ್ಜಿ

    – ನನ್ನನ್ನು ತಡೆಯಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ

    ಕೋಲ್ಕತ್ತಾ: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಭಾಗವಹಿಸಲು ಕೊಡದ ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನನ್ನ ಮೇಲೆ ಕೇಂದ್ರ ಸರ್ಕಾರಕ್ಕೆ ಅಸೂಯೆ ಇದೆ. ಇಟಲಿಯಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಸ್ಯಾಂಟ್ ಎಜಿಡಿಯೋ ಸಮುದಾಯದ, ರೋಮ್ ಮೂಲದ ಕ್ಯಾಥೋಲಿಕ್ ಫೌಂಡೇಶನ್ ಆಯೋಜಿಸಿದೆ. ಅದರಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಮಮತಾ ಬ್ಯಾನರ್ಜಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಆದರೆ ನಿನ್ನೆ ಕೇಂದ್ರ ಸಚಿವಾಲಯ ಅವಕಾಶ ಇಲ್ಲ ಎಂದು ಹೇಳಿದೆ. ಹಾಗೇ, ಯಾವುದೇ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವಂತ ಕಾರ್ಯಕ್ರಮ ಇದಲ್ಲ ಎಂದಿದೆ. ಇದನ್ನೂ ಓದಿ:  ಗುಲಾಬ್ ಚಂಡಮಾರುತ ಎಫೆಕ್ಟ್ – ಬೀದರ್‌ನಲ್ಲಿ ಧಾರಾಕಾರ ಮಳೆ

    ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಜಾಗತಿಕ ಶಾಂತಿ ಸಂಬಂಧಪಟ್ಟು ರೋಮ್‍ನಲ್ಲಿ ಒಂದು ಸಮ್ಮೇಳನ ಇತ್ತು. ನನಗೂ ಆಮಂತ್ರಣವಿತ್ತು. ಆ ಸಭೆಯಲ್ಲಿ ಜರ್ಮನ್ ಚಾನ್ಸಲರ್, ಪೋಪ್ ಫ್ರಾನ್ಸಿಸ್ ಕೂಡ ಭಾಗವಹಿಸುತ್ತಾರೆ. ನಾನು ಆ ಕಾರ್ಯಕ್ರಮಕ್ಕೆ ಹೋಗಲು ಇಟಲಿ ಕೂಡ ವಿಶೇಷ ಅನುಮತಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ನಿರಾಕರಿಸಿದೆ. ನನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಕೇಳಿದ್ದಕ್ಕೆ ಮುಖ್ಯಮಂತ್ರಿಗಳು ಭಾಗವಹಿಸುವ ಸಮಾರಂಭವಲ್ಲ ಎಂಬ ಉತ್ತರ ಕೊಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಸೈಕಲ್‍ನಲ್ಲಿ ಬಟ್ಟೆ ಮಾರುವ ವ್ಯಾಪಾರಿ ಪುತ್ರ UPSC ಪರೀಕ್ಷೆಯಲ್ಲಿ 45ನೇ ರ್‍ಯಾಂಕ್

    ನನ್ನನ್ನು ತಡೆಯಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಹಾಗಂತ ನಾನೇನೂ ವಿದೇಶಗಳಿಗೆ ಭೇಟಿ ನೀಡಲು ತುಂಬ ಆಸಕ್ತಳಾಗಿಯೂ ಇಲ್ಲ. ಆದರೆ ಇದು ದೇಶದ ಗೌರವದ ಪ್ರಶ್ನೆ. ಪ್ರಧಾನಿ ಮೋದಿ ಯಾವಾಗಲೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಾನೂ ಕೂಡ ಒಬ್ಬ ಹಿಂದು ಮಹಿಳೆ. ಆದರೂ ನನಗೆ ಅನುಮತಿ ನೀಡಿಲ್ಲ. ಅವರಿಗೆಲ್ಲ ನನ್ನ ಕಂಡರೆ ತುಂಬ ಅಸೂಯೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    ಇಟಲಿಯಲ್ಲಿ ನಡೆಯಲಿರುವ ಶಾಂತಿ ಸಮ್ಮೇಳನಕ್ಕೆ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಮತ್ತು ಪೋಪ್ ಫ್ರಾನ್ಸಿಸ್ ಸೇರಿ ಸುಮಾರು 500 ಧಾರ್ಮಿಕ ಹಾಗೂ ರಾಜಕೀಯ ನಾಯಕರಿಗೆ ಆಹ್ವಾನ ನೀಡಲಾಗಿದೆ.