Tag: ಇಟಲಿ

  • ಇಟಲಿಯಿಂದ ಬಂದು ಕೊರೊನಾ ಹಬ್ಬಿಸಲಾರೆ: ವಿದೇಶದಲ್ಲೇ ಉಳಿದ ಉತ್ತರ ಕನ್ನಡದ ಯುವತಿ

    ಇಟಲಿಯಿಂದ ಬಂದು ಕೊರೊನಾ ಹಬ್ಬಿಸಲಾರೆ: ವಿದೇಶದಲ್ಲೇ ಉಳಿದ ಉತ್ತರ ಕನ್ನಡದ ಯುವತಿ

    ಕಾರವಾರ: ವಿದೇಶದಿಂದ ಭಾರತಕ್ಕೆ ಬರುತ್ತಿರುವ ಹಲವರಿಂದ ಕೊರೊನಾ ವೈರಸ್ ಹರಡುತ್ತಿದ್ದರೂ ವಿಧಿಯಿಲ್ಲದೇ ಹಲವು ಭಾರತೀಯರು ಸ್ವದೇಶಕ್ಕೆ ಆಗಮಿಸುತ್ತಿದ್ದಾರೆ. ಆದರೆ ಇದಕ್ಕೆ ತದ್ವಿರುದ್ಧ ಎನ್ನುವಂತೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯುವತಿಯೊರ್ವಳು ತನ್ನಿಂದ ವೈರಸ್ ಹರಡಬಾರದು ಎಂದು ಇಟಲಿಯಲ್ಲಿಯೇ ಉಳಿದುಕೊಂಡಿದ್ದಾರೆ.

    ಉತ್ತರ ಕನ್ನಡದ ಶಿರಸಿಯ ಪ್ರತಿಭಾ ಹೆಗಡೆ ಇಟಲಿಯ ನೇಪೆಲ್ಸ್ ನಗರದ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‍ಡಿ ವ್ಯಾಸಂಗ ಮಾಡುತ್ತಿದ್ದು, ಕೊರೊನಾ ವೈರಸ್ ಭೀತಿಯಿದ್ದರೂ ಸಹ ಅಲ್ಲಿಯೇ ಉಳಿಯುವ ನಿರ್ಧಾರ ಮಾಡಿದ್ದಾರೆ.

    ತಮ್ಮ ನಿರ್ಧಾರದ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರತಿಭಾ, “ನಾನು ಇಟಲಿಯ ನೇಪಲ್ಸ್ ನಗರದಲ್ಲಿ ಪಿಎಚ್‍ಡಿ ವ್ಯಾಸಂಗ ಮಾಡುತ್ತಿದ್ದೇನೆ. ಒಂದೆರಡು ವಾರಗಳಿಂದ ಭಾರತದಲ್ಲಿರುವ ನನ್ನ ಸ್ನೇಹಿತರು ಮತ್ತು ಕುಟುಂಬದವರು ಮನೆಗೆ ವಾಪಸ್ ಬಂದು ಬಿಡು ಎಂದು ಸಲಹೆ ನೀಡುತ್ತಿದ್ದಾರೆ. ಆದರೆ ನಾನು ಇಲ್ಲೇ ಇರಲು ಡಿಸೈಡ್ ಮಾಡಿದೆ. ಕಾರಣ ಸಿಂಪಲ್, ನನ್ನ ನಗರದಲ್ಲಿ ಎಷ್ಟೇ ಜನರಿಗೆ ಕೊರೊನಾ ಬಂದಿರಲಿ, ನಾನು ಮನೆಯಲ್ಲೇ ಇದ್ದರೆ ಏನೂ ಸಹ ಆಗುವುದಿಲ್ಲ. ಬದಲಾಗಿ ನಾನು ಭಾರತಕ್ಕೆ ಬರುವ ಹಾದಿಯಲ್ಲಿ ಎಷ್ಟೋ ಜನರ ನಡುವೆ ಇದ್ದು ಸುಮಾರು 15 ಗಂಟೆಗಳ ಪ್ರಯಾಣ ಮಾಡಬೇಕು. ಭಾರತಕ್ಕೆ ಕೊರೊನಾ ಹೊತ್ತೊಯ್ಯುವುದು ಬಿಟ್ಟರೆ ಬೇರೆ ಯಾವ ಉಪಯೋಗವು ಅದರಲ್ಲಿ ಇಲ್ಲ” ಎಂದಿದ್ದಾರೆ. ಇದನ್ನು ಓದಿ:ಚೀನಾದಿಂದ ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ- ಕಾಳಜಿ ಮೆರೆದ ಕನ್ನಡಿಗ

    “ಈಗ ಪ್ರಸ್ತುತ ಭಾರತದ ನಗರಗಳಲ್ಲಿ ಕೆಲಸ ಮಾಡುತ್ತಿರುವ ಜನರೂ ನನ್ನ ಪರಿಸ್ಥಿತಿಯಲ್ಲಿಯೇ ಇದ್ದೀರಿ. ಇದ್ದಲ್ಲೇ ಇರುವುದು ಬಿಟ್ಟು ಬಸ್, ರೈಲು ಹತ್ತಿ ಮನೆಗೆ ಹೋಗೋದರಿಂದ ನಿಮಗೆ ಕೊರೊನಾ ತಾಕುವ, ಅಥವಾ ಮೊದಲೇ ಇದ್ದರೆ ಸಹಪ್ರಯಾಣಿಕರಿಗೂ ಕುಟುಂಬದವರಿಗೂ ತಗುಲಿಸುವ ಸಾಧ್ಯತೆಗಳೇ ಹೆಚ್ಚು. ಸರ್ಕಾರ ಬಸ್ಸುಗಳನ್ನು ಬಂದ್ ಮಾಡಿದರೂ ಕಷ್ಟ ಪಟ್ಟು ಇನ್ನಾವುದೋ ರೀತಿಯಲ್ಲಿ ಮನೆ ಸೇರುವ ಅವಿವೇಕತನ ತೋರಬೇಡಿ. ದಯವಿಟ್ಟು ಇದ್ದಲ್ಲಿಯೇ ಇರಿ. ಮನೆ ಒಳಗೇ ಇರಿ” ಎಂದು ಪ್ರತಿಭಾ ಮನವಿ ಮಾಡಿದ್ದಾರೆ.

    ಇಟಲಿಯಲ್ಲಿ ಕೊರೊನಾ ವೈರಸ್ ತೀವ್ರ ಪ್ರಮಾಣದಲ್ಲಿ ಆತಂಕ ಸೃಷ್ಟಿಸಿದ್ದರೂ, ಪ್ರತಿಭಾ ಮನೆಗೆ ಬರದೇ ವೈರಸ್ ನಿಂದ ದೇಶ ಕಾಪಾಡಲು ತಗೆದುಕೊಂಡ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

  • ಒಂದು ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ: ದರ್ಶನ್ ವಿನಂತಿ

    ಒಂದು ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ: ದರ್ಶನ್ ವಿನಂತಿ

    ಬೆಂಗಳೂರು: ಕೊರೊನಾ ಹರಡುವುದನ್ನು ತಡೆಗಟ್ಟಲು ದೇಶವೇ ಲಾಕ್‍ಡೌನ್ ಗಿರುವ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಸರ್ಕಾರ, ವೈದ್ಯರು, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ ಎಂದು ವಿನಂತಿಸಿಕೊಂಡಿದ್ದಾರೆ.

    ಫೇಸ್‍ಬುಕ್ ಪೋಸ್ಟ್ ನಲ್ಲಿ ಏನಿದೆ?
    ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ ನಿಂದ ಪಾರಾಗುವುದು ನಮ್ಮ ಮೊದಲ ಆದ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ.

    ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ. ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ. ‘Common sense is not common’ ಎನ್ನುವ ಹಾಗೆ ಮಾಡಬೇಡಿ. ದಯವಿಟ್ಟು ದೇಶದ ಪ್ರಜ್ಞಾವಂತ ನಾಗರಿಕರಾಗಿ ವರ್ತಿಸಿ.

  • ಇಟಲಿಯಲ್ಲಿ ಕೊರೊನಾ ಅಟ್ಟಹಾಸ – ಒಂದೇ ದಿನ 651 ಸಾವು

    ಇಟಲಿಯಲ್ಲಿ ಕೊರೊನಾ ಅಟ್ಟಹಾಸ – ಒಂದೇ ದಿನ 651 ಸಾವು

    – ಒಂದೇ ದಿನದಲ್ಲಿ 5,560 ಹೊಸ ಪ್ರಕರಣ ಪತ್ತೆ

    ರೋಮ್: ಜಗತ್ತಿನಲ್ಲಿ ಮಹಾಮಾರಿ ಕೊರೊನಾ ತನ್ನ ಪಟ್ಟನ್ನು ಬಿಗಿಗೊಳಿಸುತ್ತಿದೆ. ಒಟ್ಟು 188 ದೇಶಗಳಿಗೆ ವಿಸ್ತರಿಸಿರುವ ಕೊರೊನಾ, 13 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ. 3 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ವ್ಯಾಪಿಸಿದೆ. ಇದೀಗ ಇಟಲಿಯಲ್ಲಿ ಒಂದೇ ದಿನ 651 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

    ಇಟಲಿಯೊಂದರಲ್ಲೇ ನಿನ್ನೆ ಒಂದೇ ದಿನ 800ಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿ ಆಗಿದ್ದರು. ಇಂದು 651 ಮಂದಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ. ಅಲ್ಲದೇ ಇಂದು 5560 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ.

    ಇದೀಗ ಇಟಲಿಯೊಂದರಲ್ಲೇ ಮೃತರ ಸಂಖ್ಯೆ 5,500ಕ್ಕೆ ಏರಿಕೆ ಆಗಿದೆ. ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 59,138 ಮಂದಿ ತುತ್ತಾಗಿದ್ದು, ಅವರಲ್ಲಿ 6,072 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 42,681 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ.

    ಇರಾನ್‍ನಲ್ಲಿ 1556, ಸ್ಪೇನ್‍ನಲ್ಲಿ 1381, ಫ್ರಾನ್ಸ್‌ನಲ್ಲಿ 562, ಬ್ರಿಟನ್‍ನಲ್ಲಿ ಇನ್ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅನೇಕ ದೇಶಗಳನ್ನು ನಿರ್ಬಂಧದಲ್ಲಿ ಇಟ್ಟಿದೆ. ಜನರನ್ನು ಮನೆಗೆ ಸೀಮಿತ ಮಾಡಿದೆ. ಆಫ್ರಿಕಾ ಖಂಡಕ್ಕೂ ಕೊರೊನಾ ವಿಸ್ತರಿಸುತ್ತಿದೆ. ಆಫ್ರಿಕಾದ 41 ದೇಶಗಳಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.

    ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಮರಣ ಮೃದಂಗ ಭಾರಿಸುತ್ತಿತ್ತು. ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯ ಸತತ ಪರಿಶ್ರಮ, ಸರ್ಕಾರದ ಕ್ರಮಗಳಿಂದ ಚೀನಾದಲ್ಲಿ ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಇಟಲಿಯಲ್ಲಿ ವ್ಯಾಪಕವಾಗಿ ಕೊರೊನಾ ಹರಡುತ್ತಿದ್ದು, ಶನಿವಾರ ಒಂದೇ ದಿನಕ್ಕೆ 793 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

  • ವಿಶ್ವಾದ್ಯಂತ 3.07 ಲಕ್ಷಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ – 13 ಸಾವಿರಕ್ಕೂ ಹೆಚ್ಚು ಮಂದಿ ಬಲಿ

    ವಿಶ್ವಾದ್ಯಂತ 3.07 ಲಕ್ಷಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ – 13 ಸಾವಿರಕ್ಕೂ ಹೆಚ್ಚು ಮಂದಿ ಬಲಿ

    – ಭಾರತದಲ್ಲಿ 332 ಕೊರೊನಾ ಪ್ರಕರಣ ವರದಿ
    – ಇಟಲಿಯಲ್ಲಿ ಕಳೆದ 24 ಗಂಟೆಯಲ್ಲಿ 793 ಮಂದಿ ಸಾವು

    ನವದೆಹಲಿ: ವಿಶ್ವದಾದ್ಯಂತ ರಣಕೇಕೆ ಹಾಕುತ್ತಿರುವ ಡೆಡ್ಲಿ ಕೊರೊನಾ ವೈರಸ್‍ಗೆ 188 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಈವರೆಗೆ ಸೋಂಕಿಗೆ 13,051 ಮಂದಿ ಬಲಿಯಾಗಿದ್ದಾರೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 332ಕ್ಕೆ ಏರಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ 21 ಮಂದಿಗೆ ಕೊರೊನಾ ತಗುಲಿರುವುದು ವರದಿಯಾಗಿದೆ.

    ಒಟ್ಟು 188 ರಾಷ್ಟ್ರ ಹಾಗೂ ಪ್ರಾಂತ್ಯಗಳ ಮೇಲೆ ತನ್ನ ಕರಿನೆರಳು ಬೀರುತ್ತಿರುವ ಕೊರೊನಾ ವೈರಸ್ ಸೋಂಕು ಈವರೆಗೆ ಸುಮಾರು 3,07,652 ಮಂದಿಗೆ ತಗುಲಿದೆ. ಅಲ್ಲದೇ ವಿಶ್ವದೆಲ್ಲೆಡೆ ಒಟ್ಟು 13,051 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 95,797 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,89,804 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    ಡೆಡ್ಲಿ ಕೊರೊನಾಗೆ ಭಾರತದಲ್ಲಿ ಈವರೆಗೆ 332 ಮಂದಿ ತುತ್ತಾಗಿದ್ದು, 23 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 304 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈಗಾಗಲೇ ಕೊರೊನಾಗೆ 5 ಮಂದಿ ಸಾವನ್ನಪ್ಪಿದ್ದಾರೆ.

    24 ಗಂಟೆಗಳಲ್ಲಿ ಪತ್ತೆಯಾದ ಹೊಸ ಪ್ರಕರಣಗಳು:
    ಭಾರತದಲ್ಲಿ 83 ಹೊಸ ಪ್ರಕರಣ ದಾಖಲಾಗಿದೆ. ಇತ್ತ ಇಟಲಿಯಲ್ಲಿ 6,557, ಸ್ಪೇನ್‍ನಲ್ಲಿ 3,925, ಜರ್ಮನಿಯಲ್ಲಿ 2,516, ಅಮೆರಿಕದಕಲ್ಲಿ 7,328, ಇರಾನ್‍ನಲ್ಲಿ 966, ಫ್ರಾನ್ಸ್ ನಲ್ಲಿ 1,847 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ವರದಿಯಾಗಿದೆ.

    ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಮರಣ ಮೃದಂಗ ಭಾರಿಸುತ್ತಿತ್ತು. ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯ ಸತತ ಪರಿಶ್ರಮ, ಸರ್ಕಾರದ ಕ್ರಮಗಳಿಂದ ಚೀನಾದಲ್ಲಿ ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಇಟಲಿಯಲ್ಲಿ ವ್ಯಾಪಕವಾಗಿ ಕೊರೊನಾ ಹರಡುತ್ತಿದ್ದು, ಶನಿವಾರ ಒಂದೇ ದಿನಕ್ಕೆ 793 ಮಂದಿ ಕೋರೊನಾಗೆ ಬಲಿಯಾಗಿದ್ದಾರೆ.

    1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 81,054 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 72,440 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,261 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 5,353 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ.

    2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 53,578 ಮಂದಿ ತುತ್ತಾಗಿದ್ದು, ಅವರಲ್ಲಿ 6,072 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 42,681 ಮಂದಿ ಕೊರೊನಾದಿಂದ ಬಳಲುತ್ತಿದ್ದು, 4,825 ಮಂದಿ ಮೃತಪಟ್ಟಿದ್ದಾರೆ.

    3. ಇರಾನ್ – 20,610 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 7,635 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 11,419 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 1,556 ಸೋಂಕಿತರು ಸಾವನ್ನಪ್ಪಿದ್ದಾರೆ.

    4. ಸ್ಪೇನ್ – 25,496 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 2,125 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 21,993 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 1,378 ಮಂದಿ ಬಲಿಯಾಗಿದ್ದಾರೆ.

    5. ದಕ್ಷಿಣ ಕೊರಿಯಾ – 8,897 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 2,909 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 104 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 5,884 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    6. ಜರ್ಮನಿ – 22,364 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 209 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 84 ಮಂದಿ ಬಲಿಯಾಗಿದ್ದು, ಪ್ರಸ್ತುತ 22,071 ರೋಗಿಗಳು ಕೊರೊನಾದಿಂದ ನರಳುತ್ತಿದ್ದಾರೆ.

    7. ಫ್ರಾನ್ಸ್ – 14,459 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 1,587 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 12,310 ಮಂದಿ ಸೋಂಕಿನಿಂದ ಬಳಲುತ್ತಿದ್ದು, 562 ಮಂದಿ ಜೀವ ಕಳೆದುಕೊಂಡಿದ್ದಾರೆ.

    8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 341 ಮಂದಿ ಬಲಿಯಾಗಿದ್ದಾರೆ. 26,711 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 176 ಮಂದಿ ಗುಣಮುಖರಾಗಿದ್ದಾರೆ. ಸದ್ಯ 26,194 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.

    9. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲೂ ಹರಡಿರುವ ಕೊರೊನಾ ವೈರಸ್‍ಗೆ ಈವರೆಗೆ 645 ಮಂದಿ ತುತ್ತಾಗಿದ್ದು, 13 ಮಂದಿ ಚೇತರಿಸಿಕೊಂಡಿದ್ದಾರೆ. ಮೂವರು ಸೋಂಕಿತರು ಸಾವನ್ನಪ್ಪಿದ್ದು, ಪ್ರಸ್ತುತ 629 ಮಂದಿ ಸೋಂಕಿನಿಂದ ನರಳುತ್ತಿದ್ದಾರೆ.

  • ಕಫ, ಕೆಮ್ಮು ಆಯ್ತು ಈಗ ಕೊರೊನಾ ಸೋಂಕಿತರಿಗೆ ವಾಸನೆ, ರುಚಿ ಗ್ರಹಿಸುವ ಶಕ್ತಿ ಇರಲ್ಲ

    ಕಫ, ಕೆಮ್ಮು ಆಯ್ತು ಈಗ ಕೊರೊನಾ ಸೋಂಕಿತರಿಗೆ ವಾಸನೆ, ರುಚಿ ಗ್ರಹಿಸುವ ಶಕ್ತಿ ಇರಲ್ಲ

    ರೋಮ್: ವಿಶ್ವವನ್ನೇ ಕಾಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿದ ಕೆಲವರಿಗೆ ವಾಸನೆ ಗ್ರಹಿಸುವ ಹಾಗೂ ರುಚಿ ತಿಳಿಯುವ ಶಕ್ತಿ ಇರುವುದಿಲ್ಲ ಎನ್ನುವ ವಿಚಾರ ಸಂಶೋಧನೆಯಿಂದ ತಿಳಿದು ಬಂದಿದೆ.

    ಇಟಲಿಯಲ್ಲಿ ಸೋಂಕಿಗೆ ತುತ್ತಾದ ರೋಗಿಯೊಬ್ಬರು ಈ ಬಗ್ಗೆ ತಿಳಿಸಿದ್ದಾರೆ. ನಾನು 2-3 ವಾರದ ಹಿಂದೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದೆ. ಆದರೆ ಈಗ ನಾನು ಸಂಪೂರ್ಣ ಗುಣವಾಗಿದ್ದೇನೆ. ನನಗೆ ಸೋಂಕು ತಗುಲಿದ್ದಾಗ ಯಾವುದೇ ವಾಸನೆ ಹಾಗೂ ರುಚಿಯನ್ನು ಗ್ರಹಿಸುವ ಶಕ್ತಿ ನನಗಿರಲಿಲ್ಲ. ನಗರದಲ್ಲಿ ಕೊರೊನಾ ವೈರಸ್ ಹರಡುತ್ತಿದೆ ಎಂದು ತಿಳಿದಾಗ ನಾನು ಮನೆಯನ್ನು ಫಿನಾಯಿಲ್ ಹಾಕಿ ಸ್ವಚ್ಛಗೊಳಿಸಿದ್ದೆ. ಆಗ ನನಗೆ ಫಿನಾಯಿಲ್ ವಾಸನೆ ಗ್ರಹಿಸುವ ಸಾಧ್ಯವಾಗಿರಲಿಲ್ಲ. ಅಡುಗೆ ಮನೆಯಲ್ಲಿ ಬೆಳ್ಳುಳ್ಳಿ ಬಳಸುವಾಗಲೂ ಅದರ ವಾಸನೆ ನನಗೆ ಬರುತ್ತಿರಲಿಲ್ಲ. ಯಾವುದೇ ಅಡುಗೆಯ ರುಚಿ ಕೂಡ ತಿಳಿಯುತ್ತಿರಲಿಲ್ಲ. ಬಳಿಕ ನಾನು ಪರೀಕ್ಷೆ ಮಾಡಿಸಿದಾಗ ಕೊರೊನಾ ತಗುಲಿರುವುದು ದೃಢಪಟ್ಟಿತ್ತು ಎಂದು ಸೋಂಕಿನಿಂದ ಗುಣಪಟ್ಟ ಮಹಿಳೆ ತಿಳಿಸಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ.

    ಇಟಲಿಯಲ್ಲಿ ಕೊರೊನಾ ಸೋಂಕು ಮೊದಲು ಕಾಣಿಸಿಕೊಂಡಾಗ ನಿರ್ಲಕ್ಷಿಸಲಾಯ್ತು. ಈ ಸೋಂಕಿನ ಲಕ್ಷಣಗಳೇನು? ರೋಗಿಗಳಿಗೆ ಸೋಂಕು ತಗುಲಿದಾಗ ಅವರ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು ಎಂದು ವೈಜ್ಞಾನಿಕವಾಗಿ ತಿಳಿದುಕೊಳ್ಳಲು ಹೆಚ್ಚು ಆಸಕ್ತಿ ತೋರಲಿಲ್ಲ. ಹೀಗಾಗಿ ಇಟಲಿಯಲ್ಲಿ ಕೊರೊನಾ ವ್ಯಾಪಾಕವಾಗಿ ಹರಡುತ್ತಿದೆ.

    ಇತ್ತ ಜರ್ಮನಿ ಮೂಲದ ವೈರಾಲಸ್ಟಿಲ್ ಹೆಂಡ್ರಿಕ್ ಸ್ಟ್ರೀಕ್ ಕೊರೊನಾ ಬಗ್ಗೆ ಸಂಶೋಧನೆ ಮಾಡುತ್ತಿದ್ದು, ಕೊರೊನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುವ ರೋಗ ಲಕ್ಷಣಗಳ ಬಗ್ಗೆ ಅಧ್ಯಯನ ಮಾಡಲು ಆರಂಭಿಸಿದರು. ಜರ್ಮನಿಯಲ್ಲಿ ಸೋಂಕು ಹರಡಿದಾಗ ಆಸ್ಪತ್ರೆಯಲ್ಲಿ ಪ್ರತ್ಯೇಕಿಸಲಾಗಿದ್ದ ಸೋಂಕಿತ ರೋಗಿಗಳು ರಕ್ತದ ಸ್ಯಾಂಪಲ್‍ಗಳನ್ನು ಪ್ರತಿ ದಿನ ಸಂಗ್ರಹಿಸಿ, ಸಂಶೋಧನಗೆ ಬಳಸಿಕೊಳ್ಳುವ ಅವಕಾಶ ಸ್ಟ್ರೀಕ್ ತಂಡಕ್ಕೆ ಸಿಕ್ಕಿತು.

    ಈ ಬಗ್ಗೆ ಸ್ಟ್ರೀಕ್ ಸಂದರ್ಶನವೊಂದರಲ್ಲಿ ತಿಳಿಸಿದ್ದು, ಹಾನ್ಸ್‌ಬರ್ಗ್ ನಲ್ಲಿ ಸೋಂಕು ತಗುಲಿದ್ದ ಪ್ರತಿಯೊಬ್ಬ ರೋಗಿಯ ಮನೆಗೆ ನಮ್ಮ ತಂಡವರು ಭೇಟಿ ಕೊಟ್ಟು ಮಾಹಿತಿ ಕಲೆಹಾಕಿದರು. ಸೋಂಕನಿಂದ ಬಳಲಿ ಗುಣಮುಖರಾದವರ ಬಳಿ ಕೂಡ ಸೋಂಕಿನ ರೋಗ ಲಕ್ಷಣಗಳೇನು? ಎನ್ನುವ ಬಗ್ಗೆ ಮಾಹಿತಿ ಪಡೆದುಕೊಂಡೆವು. ನಾವು ಮಾಹಿತಿ ಕಲೆಹಾಕಿದ ಶೇ. 75ರಷ್ಟು ಪ್ರಕರಣಗಳಲ್ಲಿ ರೋಗಿಗಳು ವಾಸನೆ ಗ್ರಹಿಸುವ ಹಾಗೂ ರುಚಿ ಗುರುತಿಸುವ ಶಕ್ತಿಯನ್ನು ಕಳೆದುಕೊಂಡಿದ್ದರು ಎಂಬುದು ತಿಳಿದು ಬಂದಿದೆ. ಆದರೆ ಈ ರೋಗ ಲಕ್ಷಣ ಯಾವಾಗ ಕಾಣಿಸಿಕೊಳ್ಳುತ್ತದೆ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಸೋಂಕು ತಗುಲಿದ ಕೆಲ ಸಮಯದ ಬಳಿಕ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

    ಮಿಲನ್ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಪಕ ಮಿಸ್ಸಿಮೊ ಗಲ್ಲಿ ಅವರು ಕೂಡ ಕೊರೊನಾ ರೋಗ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ. ಕೊರೊನಾ ಸೋಂಕಿತ ಬಹುತೇಕ ರೋಗಿಗಳಲ್ಲಿ ವಾಸನೆಯನ್ನು ಹಾಗೂ ರುಚಿಯನ್ನು ಗುರುತಿಸುವ ಶಕ್ತಿ ಇರುವುದಿಲ್ಲ. ಸೋಂಕು ತಗುಲಿದ ಆರಂಭಿಕ ಹಂತದಲ್ಲಿ ಈ ಲಕ್ಷಣದ ಬಗ್ಗೆ ನಿಖರವಾಗಿ ತಿಳಿಯುವುದಿಲ್ಲ. ಇದೊಂದು ಕೊರೊನಾ ಸೊಂಕಿನ ಅಸಾಮಾನ್ಯ ಲಕ್ಷಣ ಎಂದು ತಿಳಿಸಿದ್ದಾರೆ.

    ಸದ್ಯ ಈ ಲಕ್ಷಣಗಳು ಕೊರೊನಾ ಸೋಂಕಿನ ಲಕ್ಷಣವೇ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಕೆಲ ವೈರಸ್‍ಗಳು ದೇಹಕ್ಕೆ ಸೇರಿದರೆ ಸೋಂಕಿತ ವ್ಯಕ್ತಿಯ ಮೂಗಿನಲ್ಲಿರುವ ಕೋಶಗಳು ಹಾಗೂ ಕೋಶ ಗ್ರಾಹಕಗಳನ್ನು ನಾಶಮಾಡುತ್ತದೆ. ಕೆಲ ವೈರಸ್‍ಗಳು ಸಂವೇದನಾ ನರಗಳ ಮೂಲಕ ಮೆದುಳನ್ನು ಪ್ರವೇಶಿಸಿ ಹಾನಿ ಮಾಡುತ್ತದೆ. ಇನ್ನೂ ಕೆಲ ವೈರಸ್‍ಗಳು ಶ್ವಾಸಕೋಶಕ್ಕೆ ಹಾನಿ ಮಾಡುತ್ತದೆ. ಇರಾನ್‍ನಲ್ಲಿ ವರದಿಯಾದ ಒಂದು ಕೊರೊನಾ ಸೋಂಕಿತ ಪ್ರಕರಣದಲ್ಲಿ ರೋಗಿ ವಾಸನೆ ಗೃಹಿಸುವ ಶಕ್ತಿ ಜೊತೆಗೆ ದೃಷ್ಟಿ ಕಳೆದುಕೊಂಡಿದ್ದಾರೆ ಎಂಬುದು ವರದಿಯಾಗಿದೆ.

  • ವಿಶ್ವಾದ್ಯಂತ 2.75 ಲಕ್ಷ ಮಂದಿಗೆ ತಗುಲಿದ ಕೊರೊನಾ – ಭಾರತದಲ್ಲಿ ಸೋಂಕಿತರ ಸಂಖ್ಯೆ 249ಕ್ಕೆ ಏರಿಕೆ

    ವಿಶ್ವಾದ್ಯಂತ 2.75 ಲಕ್ಷ ಮಂದಿಗೆ ತಗುಲಿದ ಕೊರೊನಾ – ಭಾರತದಲ್ಲಿ ಸೋಂಕಿತರ ಸಂಖ್ಯೆ 249ಕ್ಕೆ ಏರಿಕೆ

    – ಇಟಲಿಯಲ್ಲಿ ಕಳೆದ 24 ಗಂಟೆಯಲ್ಲಿ 627 ಮಂದಿ ಬಲಿ

    ನವದೆಹಲಿ: ವಿಶ್ವದಾದ್ಯಂತ ರಣಕೇಕೆ ಹಾಕುತ್ತಿರುವ ಡೆಡ್ಲಿ ಕೊರೊನಾ ವೈರಸ್‍ಗೆ 185 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಈವರೆಗೆ ಸೋಂಕಿಗೆ 11,399 ಮಂದಿ ಬಲಿಯಾಗಿದ್ದಾರೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 249ಕ್ಕೆ ಏರಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ 15 ಮಂದಿಗೆ ಕೊರೊನಾ ತಗುಲಿರುವುದು ವರದಿಯಾಗಿದೆ. ಇತ್ತ ಕೇರಳದ ಕಾಸರಗೋಡಿನಲ್ಲಿ 5 ಹೊಸ ಸೋಂಕು ಶಂಕಿತ ಪ್ರಕರಣ ವರದಿಯಾಗಿದ್ದರೆ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಸೋಂಕಿತರ ಸಂಖ್ಯೆ 5 ಪಟ್ಟು ಹೆಚ್ಚಳವಾಗಿದೆ.

    ಒಟ್ಟು 185 ರಾಷ್ಟ್ರ ಹಾಗೂ ಪ್ರಾಂತ್ಯಗಳ ಮೇಲೆ ತನ್ನ ಕರಿನೆರಳು ಬೀರುತ್ತಿರುವ ಕೊರೊನಾ ವೈರಸ್‍ಗೆ ಈವರೆಗೆ ಸುಮಾರು 2,75,953 ಮಂದಿಗೆ ಸೋಂಕು ತಗುಲಿದೆ. ಅಲ್ಲದೇ ವಿಶ್ವದೆಲ್ಲೆಡೆ ಒಟ್ಟು 11,399 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 91,912 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,72,642 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    ಡೆಡ್ಲಿ ಕೊರೊನಾಗೆ ಭಾರತದಲ್ಲಿ ಈವರೆಗೆ 249 ಮಂದಿ ತುತ್ತಾಗಿದ್ದು, 23 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 221 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈಗಾಗಲೇ ಕೊರೊನಾಗೆ 5 ಮಂದಿ ಸಾವನ್ನಪ್ಪಿದ್ದಾರೆ.

    ಭಾರತದಲ್ಲಿ ಕೊರೊನಾ ಹಬ್ಬಿದ್ದು ಹೇಗೆ?
    ಭಾರತದಲ್ಲಿ ಇದುವರೆಗೆ ಸೋಂಕಿತ ಪ್ರಕರಣ 246 (ಅಧಿಕೃತ ಪಟ್ಟಿ, ನಿನ್ನೆ ರಾತ್ರಿ 12 ಗಂಟೆಯವರೆಗೆ) ವರದಿಯಾಗಿದೆ. ಇದರಲ್ಲಿ ವಿದೇಶದಿಂದ ಬಂದ 136 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ವಿದೇಶದಿಂದ ಬಂದವರ ಜೊತೆ ಸಂಪರ್ಕದಿಂದ 105 ಮಂದಿಗೆ ಸೋಂಕು ತಗುಲಿದೆ.

    ಜನವರಿ 30ರಂದು ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತ ಮೊದಲ ಕೇಸ್ ವರದಿಯಾಗಿತ್ತು. ಆದರೆ ಮಾರ್ಚ್ 10ರಂದು ದೇಶದಲ್ಲಿ ಸೋಂಕಿತರ ಸಂಖ್ಯೆ 50ಕ್ಕೆ ಮುಟ್ಟಿತ್ತು. ಸದ್ಯ ಮಾರ್ಚ್ 20ರವರೆಗೆ ಸೋಂಕಿತರ ಸಂಖ್ಯೆ 249ಕ್ಕೆ ತಲುಪಿದೆ.

    24 ಗಂಟೆಗಳಲ್ಲಿ ಪತ್ತೆಯಾದ ಹೊಸ ಪ್ರಕರಣಗಳು:
    ಭಾರತದಲ್ಲಿ 55 ಹೊಸ ಪ್ರಕರಣ ದಾಖಲಾಗಿದೆ. ಇತ್ತ ಇಟಲಿಯಲ್ಲಿ 5,986, ಸ್ಪೇನ್‍ನಲ್ಲಿ 3,494, ಜರ್ಮನಿಯಲ್ಲಿ 4,528, ಅಮೆರಿಕದಕಲ್ಲಿ 5,861, ಇರಾನ್‍ನಲ್ಲಿ 1,237, ಫ್ರಾನ್ಸ್ ನಲ್ಲಿ 1,617 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ.

    ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಮರಣ ಮೃದಂಗ ಭಾರಿಸುತ್ತಿತ್ತು. ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯ ಸತತ ಪರಿಶ್ರಮ, ಸರ್ಕಾರದ ಕ್ರಮಗಳಿಂದ ಚೀನಾದಲ್ಲಿ ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಇಟಲಿಯಲ್ಲಿ ವ್ಯಾಪಕವಾಗಿ ಕೊರೊನಾ ಹರಡುತ್ತಿದ್ದು, ಶುಕ್ರವಾರ ಒಂದೇ ದಿನಕ್ಕೆ 627 ಮಂದಿ ಕೋರೊನಾಗೆ ಬಲಿಯಾಗಿದ್ದಾರೆ.

    1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 81,008 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 71,740 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,255 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 6,013 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ.

    2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 47,021 ಮಂದಿ ತುತ್ತಾಗಿದ್ದು, ಅವರಲ್ಲಿ 5,129 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 37,860 ಮಂದಿ ಕೊರೊನಾದಿಂದ ಬಳಲುತ್ತಿದ್ದು, 4,032 ಮಂದಿ ಮೃತಪಟ್ಟಿದ್ದಾರೆ.

    3. ಇರಾನ್ – 19,644 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 6,745 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 11,466 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 1,433 ಸೋಂಕಿತರು ಸಾವನ್ನಪ್ಪಿದ್ದಾರೆ.

    4. ಸ್ಪೇನ್ – 21,571 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 1,588 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 18,890 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 1,093 ಮಂದಿ ಬಲಿಯಾಗಿದ್ದಾರೆ.

    5. ದಕ್ಷಿಣ ಕೊರಿಯಾ – 8,799 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 2,612 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 102 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 6,085 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    6. ಜರ್ಮನಿ – 19,648 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 180 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 68 ಮಂದಿ ಬಲಿಯಾಗಿದ್ದು, ಪ್ರಸ್ತುತ 19,600 ರೋಗಿಗಳು ಕೊರೊನಾದಿಂದ ನರಳುತ್ತಿದ್ದಾರೆ.

    7. ಫ್ರಾನ್ಸ್ – 12,612 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 1,587 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 10,575 ಮಂದಿ ಸೋಂಕಿನಿಂದ ಬಳಲುತ್ತಿದ್ದು, 450 ಮಂದಿ ಜೀವ ಕಳೆದುಕೊಂಡಿದ್ದಾರೆ.

    8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 263 ಮಂದಿ ಬಲಿಯಾಗಿದ್ದಾರೆ. 19,650 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 147 ಮಂದಿ ಗುಣಮುಖರಾಗಿದ್ದಾರೆ. ಸದ್ಯ 19,240 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.

    9. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲೂ ಹರಡಿರುವ ಕೊರೊನಾ ವೈರಸ್‍ಗೆ ಈವರೆಗೆ 501 ಮಂದಿ ತುತ್ತಾಗಿದ್ದು, 13 ಮಂದಿ ಚೇತರಿಸಿಕೊಂಡಿದ್ದಾರೆ. ಮೂವರು ಸೋಂಕಿತರು ಸಾವನ್ನಪ್ಪಿದ್ದು, ಪ್ರಸ್ತುತ 485 ಮಂದಿ ಸೋಂಕಿನಿಂದ ನರಳುತ್ತಿದ್ದಾರೆ.

  • ಡೆಡ್ಲಿ ಕೊರೊನಾಗೆ ವಿಶ್ವಾದ್ಯಂತ 10,048 ಮಂದಿ ಬಲಿ- ಭಾರತದಲ್ಲಿ ಸೋಂಕಿತರ ಸಂಖ್ಯೆ 194ಕ್ಕೆ ಏರಿಕೆ

    ಡೆಡ್ಲಿ ಕೊರೊನಾಗೆ ವಿಶ್ವಾದ್ಯಂತ 10,048 ಮಂದಿ ಬಲಿ- ಭಾರತದಲ್ಲಿ ಸೋಂಕಿತರ ಸಂಖ್ಯೆ 194ಕ್ಕೆ ಏರಿಕೆ

    ನವದೆಹಲಿ: ವಿಶ್ವದಾದ್ಯಂತ ರಣಕೇಕೆ ಹಾಕುತ್ತಿರುವ ಡೆಡ್ಲಿ ಕೊರೊನಾ ವೈರಸ್‍ಗೆ 179 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಈವರೆಗೆ ಸೋಂಕಿಗೆ 10, 048 ಮಂದಿ ಬಲಿಯಾಗಿದ್ದಾರೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 194ಕ್ಕೆ ಏರಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ 15 ಮಂದಿಗೆ ಕೊರೊನಾ ತಗುಲಿರುವುದು ವರದಿಯಾಗಿದೆ.

    ಒಟ್ಟು 179 ರಾಷ್ಟ್ರ ಹಾಗೂ ಪ್ರಾಂತ್ಯಗಳ ಮೇಲೆ ತನ್ನ ಕರಿನೆರಳು ಬೀರುತ್ತಿರುವ ಕೊರೊನಾ ವೈರಸ್‍ಗೆ ಈವರೆಗೆ ಸುಮಾರು 2,45,629 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ವಿಶ್ವದೆಲ್ಲೆಡೆ ಒಟ್ಟು 10,048 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 88,437 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,47,144 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    ಡೆಡ್ಲಿ ಕೊರೊನಾಗೆ ಭಾರತದಲ್ಲಿ ಈವರೆಗೆ 194 ಮಂದಿ ತುತ್ತಾಗಿದ್ದು, 20 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 170 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈಗಾಗಲೇ ಕೊರೊನಾಗೆ 4 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟದಲ್ಲಿ ಒಟ್ಟು 15 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

    ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಮರಣ ಮೃದಂಗ ಭಾರಿಸುತ್ತಿತ್ತು. ಆದರೆ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯ ಸತತ ಪರಿಶ್ರಮ, ಸರ್ಕಾರದ ಕ್ರಮಗಳಿಂದ ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ.

    1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 80,967 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 71,150 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,248 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 6,569 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ.

    2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 41,035 ಮಂದಿ ತುತ್ತಾಗಿದ್ದು, ಅವರಲ್ಲಿ 5,979 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 11,144 ಮಂದಿ ಕೊರೊನಾದಿಂದ ಬಳಲುತ್ತಿದ್ದು, 3,405 ಮಂದಿ ಮೃತಪಟ್ಟಿದ್ದಾರೆ.

    3. ಇರಾನ್ – 18,407 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 5,710 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 10,516 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 1,284 ಸೋಂಕಿತರು ಸಾವನ್ನಪ್ಪಿದ್ದಾರೆ.

    4. ಸ್ಪೇನ್ – 18,077 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 1,107 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 16,139 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 831 ಮಂದಿ ಬಲಿಯಾಗಿದ್ದಾರೆ.

    5. ದಕ್ಷಿಣ ಕೊರಿಯಾ – 8,652 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 2,233 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 94 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 6,325 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    6. ಜರ್ಮನಿ – 15,320 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 115 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 44 ಮಂದಿ ಬಲಿಯಾಗಿದ್ದು, ಪ್ರಸ್ತುತ 15,161 ರೋಗಿಗಳು ಕೊರೊನಾದಿಂದ ನರಳುತ್ತಿದ್ದಾರೆ.

    7. ಫ್ರಾನ್ಸ್ – 10,995 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 1,295 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 9,328 ಮಂದಿ ಸೋಂಕಿನಿಂದ ಬಳಲುತ್ತಿದ್ದು, 372 ಮಂದಿ ಜೀವ ಕಳೆದುಕೊಂಡಿದ್ದಾರೆ.

    8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 218 ಮಂದಿ ಬಲಿಯಾಗಿದ್ದಾರೆ. 14,315 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 121 ಮಂದಿ ಗುಣಮುಖರಾಗಿದ್ದಾರೆ. ಸದ್ಯ 13,976 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ. 218 ಮಂದಿ ಮೃತಪಟ್ಟಿದ್ದಾರೆ.

    9. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲೂ ಹರಡಿರುವ ಕೊರೊನಾ ವೈರಸ್‍ಗೆ ಈವರೆಗೆ 454 ಮಂದಿ ತುತ್ತಾಗಿದ್ದು, 13 ಮಂದಿ ಚೇತರಿಸಿಕೊಂಡಿದ್ದಾರೆ. ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, 439 ಮಂದಿಗೆ ಸೋಂಕು ತಗುಲಿದೆ.

  • ಮಾ.8ಕ್ಕೆ ಇಟಲಿಯಲ್ಲಿ ಒಟ್ಟು ಸಾವು 463, ಮಾ.18ರ ಒಂದೇ ದಿನ 475 ಬಲಿ

    ಮಾ.8ಕ್ಕೆ ಇಟಲಿಯಲ್ಲಿ ಒಟ್ಟು ಸಾವು 463, ಮಾ.18ರ ಒಂದೇ ದಿನ 475 ಬಲಿ

    ರೋಮ್: ಇಟಲಿಯಲ್ಲಿ ಕೊರೊನಾಗೆ ಒಂದೇ ದಿನ 475 ಮಂದಿ ಸಾವನ್ನಪ್ಪಿದ್ದು ಇಲ್ಲಿಯವರೆಗೆ 2,978 ಮೃತಪಟ್ಟಿದ್ದಾರೆ.

    ಹೌದು. 10 ದಿನದ ಹಿಂದೆ ಮಾರ್ಚ್ 8 ರಂದು ಇಟಲಿಯಲ್ಲಿ ಒಟ್ಟು 463 ಮಂದಿ ಸಾವನ್ನಪ್ಪಿದ್ದರು. ಆದರೆ ಬುಧವಾರ ಒಂದೇ ದಿನ 475 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಇಂದು ಮೂರು ಸಾವಿರದ ಗಡಿ ದಾಟುವ ಸಾಧ್ಯತೆಯಿದೆ.

    https://twitter.com/Kyruer/status/1239205516544487430

    ಇಟಲಿಯಲ್ಲಿ ಎಲ್ಲ ಆಸ್ಪತ್ರೆಗಳು ಭರ್ತಿಯಾಗಿವೆ. ಎಲ್ಲಿ ನೋಡಿದ್ದರಲ್ಲಿ ರೋಗಿಗಳೇ ಕಾಣುತ್ತಿದ್ದಾರೆ. ಬುಧವಾರದವರೆಗೆ ಒಟ್ಟು 35,713 ಮಂದಿಗೆ ಕೊರೊನಾ ಬಂದಿದ್ದು, 4,025 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

    ಇಟಲಿಯ ಲೊಂಬಾರ್ಡಿ ಪ್ರಾಂತ್ಯದಲ್ಲಿ ಒಟ್ಟು 12 ಲಕ್ಷ ಜನ ಸಂಖ್ಯೆಯಿದ್ದು ಇಲ್ಲಿನ ಬರ್ಗಾಮೊ ಪ್ರದೇಶದಲ್ಲಿ ಅತಿಹೆಚ್ಚು ಸಾವು ಸಂಭವಿಸಿದೆ. ಒಟ್ಟು 1,640 ಮಂದಿ ಈ ಪ್ರದೇಶದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಯಾವ ರಕ್ತದ ಗುಂಪಿನವರಿಗೆ ಕೊರೊನಾ ಬೇಗ ಬರುತ್ತದೆ? – ಚೀನಾ ಅಧ್ಯಯನ ವರದಿ ಬಹಿರಂಗ

    https://twitter.com/WarsontheBrink/status/1240528511514873862

    ದಿನೇ ದಿನೇ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಟಲಿಯಲ್ಲಿ ಶವವನ್ನು ಸಾಗಿಸಲು ಜನರೇ ಬರುತ್ತಿಲ್ಲ. ಯಾಕೆಂದರೆ ಮೃತಪಟ್ಟ ವ್ಯಕ್ತಿಗಳ ಸಂಬಂಧಿಕರು ಸಹ ಕೊರೊನಾ ಪೀಡಿತರಾಗಿದ್ದಾರೆ. ಹೀಗಾಗಿ ಮಿಲಿಟರಿ ವಾಹನದಲ್ಲಿ ಶವಗಳನ್ನು ಸಾಗಿಸಲಾಗುತ್ತಿದೆ.

    ಆಸ್ಪತ್ರೆಗಳು ದಾಖಲಾಗದ ರೋಗಿಗಳು ಮನೆಯಲ್ಲೇ ಸಾವನ್ನಪ್ಪುತ್ತಿದ್ದಾರೆ. ಆದರೆ ಈ ವ್ಯಕ್ತಿಗಳ ಅಂತ್ಯಸಂಸ್ಕಾರವನ್ನು ಕೂಡಲೇ ನೆರವೇರಿಸುವಂತಿಲ್ಲ. ಇಬ್ಬರು ವೈದ್ಯರು ಶವಗಳನ್ನು ಪರೀಕ್ಷಿಸಿದ ನಂತರವಷ್ಟೇ ಅಂತ್ಯಸಂಸ್ಕಾರ ನಡೆಸಬೇಕೆಂದು ಇಟಲಿ ಸರ್ಕಾರ ಸೂಚಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪತ್ರಿಕೆಗಳಲ್ಲಿ 10 ಪುಟ ಶ್ರದ್ಧಾಂಜಲಿಗೆ ಮೀಸಲಾಗಿವೆ.

    ಒಟ್ಟು ವಿಶ್ವದಲ್ಲಿ 2,18,585 ಮಂದಿಗೆ ಕೊರೊನಾ ಪೀಡಿತರಾಗಿದ್ದು, ಈ ಪೈಕಿ 8,943 ಮಂದಿ ಮೃತಪಟ್ಟಿದ್ದರೆ 85,714 ಮಂದಿ ಗುಣಮುಖರಾಗಿದ್ದಾರೆ. ಚೀನಾದಲ್ಲಿ 80,928 ಮಂದಿ ವೈರಸ್ ಬಂದಿದೆ. ಈ ಪೈಕಿ 3,245 ಮಂದಿ ಮೃತಪಟ್ಟರೆ 70,420 ಮಂದಿ ಗುಣಮುಖರಾಗಿದ್ದಾರೆ.

    ಸ್ಪೇನ್ ದೇಶದಲ್ಲಿ 14,769 ಮಂದಿಗೆ ಕೊರೊನಾ ಬಂದಿದ್ದರೆ 1,081 ಮಂದಿ ಗುಣಮುಖರಾಗಿದ್ದು, 638 ಮಂದಿ ಮೃತಪಟ್ಟಿದ್ದಾರೆ.

    https://twitter.com/FarhangNamdar/status/1240574161870819328

  • ಲಾಕ್‍ಡೌನ್ ಆಗಿದ್ರು ನಿಯಮ ಉಲ್ಲಂಘಿಸಿ ಕಾರಿನಲ್ಲೇ ಜೋಡಿಯಿಂದ ಸೆಕ್ಸ್

    ಲಾಕ್‍ಡೌನ್ ಆಗಿದ್ರು ನಿಯಮ ಉಲ್ಲಂಘಿಸಿ ಕಾರಿನಲ್ಲೇ ಜೋಡಿಯಿಂದ ಸೆಕ್ಸ್

    – ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಜೋಡಿ ಅರೆಸ್ಟ್
    – 40ರ ಮಹಿಳೆ ಜೊತೆ 23ರ ಯುವಕ ದೈಹಿಕ ಸಂಪರ್ಕ

    ರೋಮ್: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಟಲಿಯನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿದೆ. ಹೀಗಿರುವಾಗ ಜೋಡಿ ನಿಯಮ ಉಲ್ಲಂಘಿಸಿ ಕಾರಿನಲ್ಲಿಯೇ ಸೆಕ್ಸ್ ಮಾಡಿ ಅರೆಸ್ಟ್ ಆಗಿದ್ದಾರೆ.

    ಸೋಮವಾರ ಇಟಲಿಯ ಮಿಲನ್‍ನ ಹೊರವಲಯದಲ್ಲಿರುವ ಮೆಕೆನೇಟ್‍ನಲ್ಲಿ 23 ವರ್ಷದ ಯುವಕ 40 ವರ್ಷದ ಮಹಿಳೆ ಜೊತೆ ಕಾರಿನಲ್ಲಿಯೇ ದೈಹಿಕ ಸಂಬಂಧ ಬೆಳೆಸುತ್ತಿದ್ದನು. ಇದನ್ನು ನೋಡಿದ ಪೊಲೀಸರು ಯುವಕ ಹಾಗೂ ಮಹಿಳೆಯನ್ನು ಬಂಧಿಸಿದ್ದಾರೆ.

    ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದಕ್ಕೆ ಇಟಲಿಯಲ್ಲಿ ಒಂದೇ ಕಾರಿನಲ್ಲಿ ಅದು ಪಕ್ಕಪಕ್ಕ ಸೀಟಿನಲ್ಲಿ ಕುಳಿತು ಪ್ರಯಾಣಿಸಬಾರದು ಎಂದು ನಿಯಮ ಜಾರಿ ಮಾಡಿದೆ. ವರದಿಯ ಪ್ರಕಾರ, ಜೋಡಿ ಈ ನಿಯಮವನ್ನು ಉಲ್ಲಂಘಿಸಿ ದೈಹಿಕ ಸಂಪರ್ಕ ಬೆಳೆಸಿದೆ ಎಂದು ಹೇಳಲಾಗಿದೆ.

    ಇಟಲಿ ಸರ್ಕಾರ ಜನರಿಗೆ ಕೇವಲ ಊಟ ಹಾಗೂ ಔಷಧಿಗಳನ್ನು ಖರೀದಿಸಲು ಹಾಗೂ ಅದನ್ನು ಕೊಡಲು ಮಾತ್ರ ಮನೆಯಿಂದ ಹೊರ ಬರಲು ಅನುಮತಿ ನೀಡಿದೆ. ಅಲ್ಲದೆ ತುಂಬಾ ಅವಶ್ಯಕತೆ ಇದ್ದರೆ ಮಾತ್ರ ಕೆಲಸಕ್ಕೆ ಪ್ರಯಾಣ ಬೆಳೆಸಬೇಕು ಎಂದು ಆದೇಶ ನೀಡಲಾಗಿದೆ.

    ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 35,713 ಮಂದಿ ತುತ್ತಾಗಿದ್ದು, ಅವರಲ್ಲಿ 4,025 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 28,710 ಮಂದಿ ಕೊರೊನಾದಿಂದ ಬಳಲುತ್ತಿದ್ದು, 2,978 ಮಂದಿ ಮೃತಪಟ್ಟಿದ್ದಾರೆ.

  • ಕರುಣೆ ತೋರದ ಕೊರೊನಾಗೆ 173 ರಾಷ್ಟ್ರ, ಪ್ರಾಂತ್ಯಗಳು ತುತ್ತು – ಭಾರತದಲ್ಲಿ ಸೋಂಕಿತರ ಸಂಖ್ಯೆ 152ಕ್ಕೆ ಏರಿಕೆ

    ಕರುಣೆ ತೋರದ ಕೊರೊನಾಗೆ 173 ರಾಷ್ಟ್ರ, ಪ್ರಾಂತ್ಯಗಳು ತುತ್ತು – ಭಾರತದಲ್ಲಿ ಸೋಂಕಿತರ ಸಂಖ್ಯೆ 152ಕ್ಕೆ ಏರಿಕೆ

    ನವದೆಹಲಿ: ವಿಶ್ವದಾದ್ಯಂತ ರಣಕೇಕೆ ಹಾಕುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ 173 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಈವರೆಗೆ ಸೋಂಕಿಗೆ 8,938 ಮಂದಿ ಬಲಿಯಾಗಿದ್ದಾರೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 151ಕ್ಕೆ ಏರಿದ್ದು, ಕರ್ನಾಟಕದಲ್ಲಿ 14 ಮಂದಿಗೆ ಕೊರೊನಾ ತಗುಲಿದೆ ಎಂದು ವರದಿಯಾಗಿದೆ.

    ಒಟ್ಟು 173 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಈವರೆಗೆ ಸುಮಾರು 2,18,455 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ಚೀನಾದಲ್ಲಿ 3,245 ಮಂದಿ ಸೇರಿದಂತೆ ವಿಶ್ವದೆಲ್ಲೆಡೆ ಒಟ್ಟು 8,938 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 85,664 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,23,853 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್‍ಗೆ ಈವರೆಗೆ 169 ಮಂದಿ ತುತ್ತಾಗಿದ್ದು, 14 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 152 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈಗಾಗಲೇ ಕೊರೊನಾಗೆ ಕರ್ನಾಟಕದ ಕಲಬುರ್ಗಿಯ ವೃದ್ಧರೊಬ್ಬರು ಹಾಗೂ ದೆಹಲಿಯ ವೃದ್ಧೆಯೊಬ್ಬರು ಹಾಗೂ ಮಹಾರಾಷ್ಟ್ರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಒಟ್ಟು 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನೆರೆಯ ಮಹಾರಾಷ್ಟ್ರದಲ್ಲಿ ಬುಧವಾರದವರೆಗೆ 44 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ.

    ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಈ ರಾಷ್ಟ್ರಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ.

    1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 80,928 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 70,420 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,245 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 7,263 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ.

    2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 35,713 ಮಂದಿ ತುತ್ತಾಗಿದ್ದು, ಅವರಲ್ಲಿ 4,025 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 28,710 ಮಂದಿ ಕೊರೊನಾದಿಂದ ಬಳಲುತ್ತಿದ್ದು, 2,978 ಮಂದಿ ಮೃತಪಟ್ಟಿದ್ದಾರೆ.

    3. ಇರಾನ್ – 17,361 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 5,710 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 10,516 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 1,135 ಸೋಂಕಿತರು ಸಾವನ್ನಪ್ಪಿದ್ದಾರೆ.

    4. ಸ್ಪೇನ್ – 14,769 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 1,081 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 13,050 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 638 ಮಂದಿ ಬಲಿಯಾಗಿದ್ದಾರೆ.

    5. ದಕ್ಷಿಣ ಕೊರಿಯಾ – 8,565 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 1,947 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 91 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 6,527 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    6. ಜರ್ಮನಿ – 12,327 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 105 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 28 ಮಂದಿ ಬಲಿಯಾಗಿದ್ದು, ಪ್ರಸ್ತುತ 12,195 ರೋಗಿಗಳು ಕೊರೊನಾದಿಂದ ನರಳುತ್ತಿದ್ದಾರೆ.

    7. ಫ್ರಾನ್ಸ್ – 9,134 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 602 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 8,268 ಮಂದಿ ಸೋಂಕಿನಿಂದ ಬಳಲುತ್ತಿದ್ದು, 264 ಮಂದಿ ಜೀವ ಕಳೆದುಕೊಂಡಿದ್ದಾರೆ.

    8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 154 ಮಂದಿ ಬಲಿಯಾಗಿದ್ದಾರೆ. 9,413 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 108 ಮಂದಿ ಗುಣಮುಖರಾಗಿದ್ದಾರೆ. ಸದ್ಯ 9,151 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.

    9. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲೂ ಹರಡಿರುವ ಕೊರೊನಾ ವೈರಸ್‍ಗೆ ಈವರೆಗೆ 307 ಮಂದಿ ತುತ್ತಾಗಿದ್ದು, 13 ಮಂದಿ ಚೇತರಿಸಿಕೊಂಡಿದ್ದಾರೆ. ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, 292 ಮಂದಿಗೆ ಸೋಂಕು ತಗುಲಿದೆ.