Tag: ಇಡಿ ಅಧಿಕಾರಿಗಳು

  • ಐಶ್ವರ್ಯ ಗೌಡ ಮನೆ ಮೇಲೆ ಇಡಿ ದಾಳಿ – 2.25 ಕೋಟಿ ನಗದು ಪತ್ತೆ

    ಐಶ್ವರ್ಯ ಗೌಡ ಮನೆ ಮೇಲೆ ಇಡಿ ದಾಳಿ – 2.25 ಕೋಟಿ ನಗದು ಪತ್ತೆ

    ಬೆಂಗಳೂರು/ಮಂಡ್ಯ: ಚಿನ್ನ ಸೇರಿದಂತೆ ಹಲವು ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವ ಐಶ್ವರ್ಯ ಗೌಡ ಮನೆ ಮೇಲೆ ಎರಡು ದಿನಗಳ ಹಿಂದೆ ಇಡಿ ದಾಳಿ ನಡೆಸಿತ್ತು. ದಾಳಿ ವೇಳೆ 2.25 ಕೋಟಿ ರೂ. ನಗದು ಪತ್ತೆಯಾಗಿರುವುದಾಗಿ ಇಡಿ ಪ್ರಕಟಣೆ ಮೂಲಕ ತಿಳಿಸಿದೆ.

    ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ಸಹೋದರಿ ಎಂದು ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಐಶ್ವರ್ಯಗೌಡ ವಿರುದ್ಧ ಕೇಸ್ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು. ತನಿಖೆಯ ಮುಂದುವರೆದ ಭಾಗವಾಗಿ ಇಡಿ ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಮನೆ, ಕಚೇರಿ, ಶಾಸಕ ವಿನಯ್ ಕುಲಕರ್ಣಿ ಮನೆ ಸೇರಿ ಒಟ್ಟು 14 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.ಇದನ್ನೂ ಓದಿ: ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

    ಗುರುವಾರ ಬೆಳಗ್ಗೆ ಮಂಡ್ಯ (Mandya) ಜಿಲ್ಲೆ ಮಳವಳ್ಳಿ (Malavalli) ತಾಲೂಕಿನ ಕಿರುಗಾವಲಿನಲ್ಲಿರುವ ಐಶ್ವರ್ಯಗೌಡ ನಿವಾಸಕ್ಕೆ ಐವರು ಇಡಿ ಅಧಿಕಾರಿಗಳ ತಂಡ ಎರಡು ಕಾರಿನಲ್ಲಿ ಬಂದು ದಾಳಿ ನಡೆಸಿತ್ತು. ಜೊತೆಗೆ ಭದ್ರತೆಗೆ ಸಿಆರ್‌ಪಿಎಫ್ (CRPF) ಯೋಧರನ್ನ ಕರೆತಂದು ಇಡೀ ಮನೆ ತಲಾಶ್ ಮಾಡಿದ್ದರು. ಇಡಿ ದಾಳಿಯ ವೇಳೆ 2.25 ಕೋಟಿ ರೂ. ನಗದು ಪತ್ತೆಯಾಗಿದ್ದು, ಅಕ್ರಮ ಹಣ ವರ್ಗಾವಣೆ ಸಂಬಂಧ ಒಂದಷ್ಟು ಮಹತ್ವದ ದಾಖಲೆಗಳು ಪತ್ತೆಯಾಗಿರುವ ಬಗ್ಗೆ ಇಡಿ ಸ್ಪಷ್ಟಪಡಿಸಿದೆ.

    ದಾಳಿ ಬಳಿಕ ಇಡಿ ಅಧಿಕಾರಿಗಳು ಆರೋಪಿ ಐಶ್ವರ್ಯಗೌಡಳನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿದ್ದರು. 14 ದಿನ ಕಸ್ಟಡಿಗೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.ಇದನ್ನೂ ಓದಿ: ಪಾಕಿಸ್ತಾನದ ಲಾಹೋರ್‌ ಏರ್‌ಪೋರ್ಟ್‌ನಲ್ಲಿ ಭಾರೀ ಅಗ್ನಿ ದುರಂತ – ರನ್‌ವೇ ಬಂದ್‌, ವಿಮಾನಗಳ ಹಾರಾಟ ಸ್ಥಗಿತ

  • ಮುಡಾ ಹಗರಣ: ವಿಚಾರಣೆ ತೀವ್ರಗೊಳಿಸಿದ ಇ.ಡಿ – ಸಿಎಂ ಸಿದ್ದರಾಮಯ್ಯ ಆಪ್ತನಿಗೆ ಡ್ರಿಲ್

    ಮುಡಾ ಹಗರಣ: ವಿಚಾರಣೆ ತೀವ್ರಗೊಳಿಸಿದ ಇ.ಡಿ – ಸಿಎಂ ಸಿದ್ದರಾಮಯ್ಯ ಆಪ್ತನಿಗೆ ಡ್ರಿಲ್

    ಮೈಸೂರು: ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ನಿ ಪಾರ್ವತಿಗೆ 50-50 ಅನುಪಾತದಲ್ಲಿ 14 ಸೈಟ್ ನೀಡಿದ್ದ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಇದೀಗ ವಿಚಾರಣೆಯನ್ನು ತೀವ್ರಗೊಳಿಸಿದ್ದು, ಸಿಎಂ ಖಾಸಗಿ ಆಪ್ತ ಸಹಾಯಕ ಸಿ.ಟಿ.ಕುಮಾರ್ ಅವರ ವಿಚಾರಣೆ ನಡೆಸಿದ್ದಾರೆ.ಇದನ್ನೂ ಓದಿ: ಶಿಗ್ಗಾಂವಿ| ಒಳ್ಳೆಯ ಅಭ್ಯರ್ಥಿ ಆಯ್ಕೆ ಆಗಿ ಬರಲಿ – ಕುರುಬ ಸಮಾಜದ ವಯೋವೃದ್ಧನಿಂದ ಪೂಜೆ

    ಮೈಸೂರಿನಲ್ಲಿ ಸಿಎಂಗೆ ಸೇರಿದ ಎಲ್ಲಾ ವ್ಯವಹಾರಗಳನ್ನ ಸಿ.ಟಿ ಕುಮಾರ್ ಅಲಿಯಾಸ್ ಎಸ್.ಜಿ.ದಿನೇಶ್ ಕುಮಾರ್ ನೋಡಿಕೊಳ್ಳುತ್ತಿದ್ದರು. ಇದೀಗ ಇಡಿ ಅಧಿಕಾರಿಗಳು ದಿನೇಶ್‌ಕುಮಾರ್ ಅವರ ವಿಚಾರಣೆ ನಡೆಸಿದ್ದು, 14 ಸೈಟ್ ವಿಚಾರದಲ್ಲಿ ಪ್ರಶ್ನೆಗಳನ್ನು ಕೇಳಿ ಬೆವರಿಳಿಸಿದ್ದಾರೆ.

    ಮುಡಾದಲ್ಲಿ ನಕಲಿ ಸಹಿ ಬಗ್ಗೆ, ಪಾರ್ವತಿ ಅವರ ಪತ್ರಕ್ಕೆ ದಿನೇಶ್ ಕುಮಾರ್ ಸಹಿ ಹಾಕಿದ ಬಗ್ಗೆ ತೀವ್ರ ವಿಚಾರಣೆ ಮಾಡುವ ಮೂಲಕ ಫುಲ್ ಡ್ರಿಲ್ ಮಾಡಿದ್ದಾರೆ.ಇದನ್ನೂ ಓದಿ: ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 11 ಕಾಡಾನೆಗಳ ಸಾವಿಗೆ ರಾಗಿ ಕಾರಣವೇ?

  • ಡಿಕೆಶಿ ವಿರುದ್ಧ ಇಡಿ ಕೇಸ್‌ – ವಿಚಾರಣೆ ಮೇ 31ಕ್ಕೆ ಮುಂದೂಡಿಕೆ

    ಡಿಕೆಶಿ ವಿರುದ್ಧ ಇಡಿ ಕೇಸ್‌ – ವಿಚಾರಣೆ ಮೇ 31ಕ್ಕೆ ಮುಂದೂಡಿಕೆ

    ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಅಕ್ರಮ ಹಣ ವರ್ಗಾವಣೆ ತಡೆ (PMLA)ನಲ್ಲಿ IPC 120B (ವ್ಯವಸ್ಥಿತ ಪಿತೂರಿ) ಸೇರ್ಪಡೆ ಬಗ್ಗೆ ಕೋರ್ಟ್ ಸ್ಪಷ್ಟನೆ ಪಡೆಯಿತು.

    court order law

    ಅಕ್ರಮ ಹಣ ವರ್ಗಾವಣೆ ಮತ್ತು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಜಾರ್ಜ್‍ಶೀಟ್ ಸಲ್ಲಿಸಿದ್ದರು. ಜಾರ್ಜ್‍ಶೀಟ್‍ನಲ್ಲಿ 120B ಉಲ್ಲೇಖಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ಮುಂದೆ ಹಾಜರಾಗಿ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ – ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಆತ್ಮಹತ್ಯೆ

    DK SHIVAKUMAR

    ಇಡಿ ಪರ ವಾದ ಮಂಡಿಸಿದ ವಕೀಲರು, PMLA ಜೊತೆಗೆ IPC 120B ಜೊತೆಗೂಡಿಸಿ ತನಿಖೆ ನಡೆಸಬಹುದು ಮತ್ತು ಅದನ್ನು ವಿಚಾರಣೆ ನಡೆಸುವ ಅಧಿಕಾರವೂ ವಿಶೇಷ ನ್ಯಾಯಾಲಯಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣದ ಮತ್ತೋರ್ವ ಆರೋಪಿ ಸಚಿನ್ ನಾರಯಣ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಇದಲ್ಲದೇ ಇನ್ನು ಎರಡು ಹೈಕೋರ್ಟ್‍ಗಳು ಈ ಬಗ್ಗೆ ಆದೇಶ ನೀಡವೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಟಿಕೆಟ್ ನನಗೆ ಕೊಡಬೇಡಿ- ನಡ್ಡಾಗೆ ಸುರಾನಾ ಪತ್ರ

    ಈ ಸಂದರ್ಭದಲ್ಲಿ ವಕೀಲರನ್ನು ನ್ಯಾಯಾಂಗ ವ್ಯಾಪ್ತಿಯ ಬಗ್ಗೆ ನ್ಯಾಯಾಧೀಶ ವಿಕಾಸ್ ದುಲ್ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವಕೀಲರು, ದೆಹಲಿಯ ಸಬ್ದರಜಂಗ್ ಎನ್ಕ್ಲೇವ್‍ನಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದಲ್ಲಿ ಐಟಿ ದಾಳಿ ವೇಳೆ 8.5 ಕೋಟಿ ಹಣ ದೊರಕಿತ್ತು, ಈ ಹಿನ್ನಲೆ ದೆಹಲಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಸ್ಪಷ್ಟನೆ ನೀಡಿದರು. ವಾದವನ್ನು ಆಲಿಸಿದ ನ್ಯಾಯಾಧೀಶರು ಪಿಎಂಎಲ್‍ಎ ನ್ಯಾಯಾಲಯ IPC 120B ವಿಚಾರಣೆ ನಡೆಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ ವಿಚಾರಣೆಯನ್ನು ಮೇ 31 ಕ್ಕೆ ವಿಚಾರಣೆ ಮುಂದೂಡಿದರು.

  • ಅಕ್ರಮ ಹಣ ವರ್ಗಾವಣೆ ಆರೋಪ – ಡಿಕೆಶಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

    ಅಕ್ರಮ ಹಣ ವರ್ಗಾವಣೆ ಆರೋಪ – ಡಿಕೆಶಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

    ನವದೆಹಲಿ: ಕೇವಲ 16 ದಿನಗಳ ಹಿಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ತಮ್ಮ ವಿರುದ್ಧ ಷಡ್ಯಂತ್ರ್ಯ ನಡೆದಿದೆ. ಮತ್ತೆ ಐಟಿ, ಇಡಿ, ಸಿಬಿಐ ರೇಡ್ ಮಾಡಲಿದ್ದು, ಆಗಸ್ಟ್‍ನಲ್ಲಿ ಬಂಧಿಸಲು ಪ್ಲಾನ್ ಮಾಡಲಾಗಿದೆ ಎಂಬ ಬಾಂಬ್ ಸಿಡಿಸಿದ್ರು. ಕಾಕತಾಳೀಯ ಎಂಬಂತೆ ಎಲೆಕ್ಷನ್ ಸನಿಹದಲ್ಲಿಯೇ ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್‍ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

    ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ತನಿಖೆ ಆರಂಭವಾದ 2 ವರ್ಷಗಳ ಬಳಿಕ ಇಡಿ ಚಾರ್ಜ್‍ಶೀಟ್ ಹಾಕಿರೋದು ಗಮನಾರ್ಹ. ಸದ್ಯದಲ್ಲೇ ಕೋರ್ಟ್ ಡಿಕೆಶಿಗೆ ಸಮನ್ಸ್ ಜಾರಿ ಮಾಡಲಿದ್ದು, ವಿಚಾರಣೆ ಕೂಡ ನಡೆಸುವ ಸಂಭವವಿದೆ.

    ಈ ಬೆಳವಣಿಗೆಗೆ ಎಂದಿನಂತೆ ಡಿಕೆ ಶಿವಕುಮಾರ್ ಪೊಲಿಟಿಕಲ್ ಟಚ್ ನೀಡಿದ್ದಾರೆ. ಯಾರಿಂದ ಬಿಜೆಪಿಗೆ ತೊಂದರೆ ಇದೆಯೋ ಅಂತವರನ್ನು ಈ ಮೂಲಕ ದಮನ ಮಾಡೋ ಯತ್ನ ನಡೆದಿದೆ..ಒಂದು ಅವರ ಜೊತೆ ಹೋಗ್ಬೇಕು. ಇಲ್ಲ ಅಂದ್ರೆ ಅವರಿಗೆ ಶರಣಾಗಬೇಕು. ಆದ್ರೆ ನಾನು ಆ ಗುಂಪಿಗೆ ಸೇರಿಲ್ಲ. ಎಲ್ಲವನ್ನು ಎದುರಿಸ್ತೇನೆ. ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ.

    ಡಿಕೆ ಸುರೇಶ್ ಮಾತಾಡಿ, ಇಂದು ಕೋರ್ಟ್‍ಗಳು ಕೂಡ ಒತ್ತಡ ಎದುರಿಸುತ್ತಿವೆ. ನ್ಯಾಯ ನಿರೀಕ್ಷೆ ಸಾಧ್ಯವಿಲ್ಲ ಎಂದಿದ್ದಾರೆ. ಇದೇ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ತಿಹಾರ್ ಜೈಲಿನಲ್ಲಿದ್ದರು.

    ಡಿಕೆಶಿ ವಿರುದ್ಧದ `ಚಾರ್ಜ್‍ಶೀಟ್’ ಏನು?
    1. 800 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ
    2. ಕುಟುಂಬಸ್ಥರ ಹೆಸರಿನಲ್ಲಿ 200 ಕೋಟಿ ರೂ. ಠೇವಣಿ
    3. 20 ಬ್ಯಾಂಕ್, 317 ಖಾತೆ ಮೂಲಕ ಹಣ ವರ್ಗಾವಣೆ
    4. ವಿದೇಶಿ ಬ್ಯಾಂಕ್ ಖಾತೆ ಮೂಲಕ ಹಣಕಾಸು ವ್ಯವಹಾರ
    5. ಪುತ್ರಿ ಹೆಸರಿನಲ್ಲಿ 108 ಕೋಟಿ ರೂ. ಅಕ್ರಮ ವ್ಯವಹಾರ
    6. ಪುತ್ರಿಯ 48 ಕೋಟಿ ರೂ. ಸಾಲಕ್ಕೆ ಮೂಲ ಇಲ್ಲ
    7. ದೆಹಲಿ ನಿವಾಸದಲ್ಲಿ ಸಿಕ್ಕ 8.59 ಕೋಟಿ ರೂ.ಗೆ ಲೆಕ್ಕ ಕೊಟ್ಟಿಲ್ಲ
    8. ಡಿ.ಕೆ ಕುಟುಂಬ ಹೆಸರಲ್ಲಿ 300 ಆಸ್ತಿ (ಡಿಕೆಶಿ-24, ಸುರೇಶ್-27, ತಾಯಿ ಹೆಸರಲ್ಲಿ 38 ಆಸ್ತಿ)
    9. 7 ವರ್ಷದಲ್ಲಿ ಕೃಷಿಯಿಂದ 120 ಕೋಟಿ ರೂ. ಆದಾಯ

  • ಚರಣ್‍ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್

    ಚರಣ್‍ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್

    ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸಾಮಾನ್ಯ ವ್ಯಕ್ತಿಯಲ್ಲ. ಒಬ್ಬ ಅಪ್ರಾಮಾಣಿಕ ವ್ಯಕ್ತಿ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಅಕ್ರಮ ಮರಳು ದಂಧೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇತ್ತೀಚೆಗಷ್ಟೇ ಚರಣ್‍ಜಿತ್ ಸಿಂಗ್ ಚನ್ನಿ ಅವರ ಸೋದರಳಿಯನ ಮನೆ ಸೇರಿದಂತೆ 10 ರಿಂದ 12 ಕಡೆ ದಾಳಿ ನಡೆಸಿದ್ದರು. ಇದನ್ನೂ ಓದಿ: ಲಡಾಖ್‌ನಲ್ಲಿ ಚೀನಾದಿಂದ ಪ್ಯಾಂಗ್ಯಾಂಗ್‌ ಸೇತುವೆ ನಿರ್ಮಾಣ – ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

    ಈ ಕುರಿತಂತೆ ಫಿರೋಜ್‍ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ದಾಳಿ ನಡೆಸಲಾಗಿದೆ. ಕಳೆದ ವರ್ಷ ಮುಖ್ಯಮಂತ್ರಿಯಾಗಿ ಬೆಳೆಯುತ್ತಿದ್ದ ಸಾಮಾನ್ಯ ವ್ಯಕ್ತಿಯ ಹೆಸರಿಗೆ ಕಳಂಕ ತರಲು ಪ್ರಯತ್ನಿಸಿದ್ದಾರೆ ಎಂದರು. ಇದನ್ನೂ ಓದಿ: ಬಾಲಕಿಯನ್ನು ಎಳೆದೊಯ್ದು ಮನೆ ಮುಂದೆಯೇ ಅತ್ಯಾಚಾರ ಮಾಡ್ದ

    ಬುಧವಾರ ಚನ್ನಿ ಸಾಮಾನ್ಯ ವ್ಯಕ್ತಿಯಲ್ಲ. ಒಬ್ಬ ಅಪ್ರಾಮಾಣಿಕ ವ್ಯಕ್ತಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಮರಳು ಗಣಿಗಾರಿಕೆ ವಿಚಾರವಾಗಿ ಮುಖ್ಯಮಂತ್ರಿ ಸಂಬಂಧಿಯೊಬ್ಬರ ಮನೆಯ ಮೇಲೆ ದಾಳಿ ನಡೆಸಿರುವುದು ದುಃಖಕರ ವಿಚಾರವಾಗಿದೆ. ಚನ್ನಿಯ ವಿಧಾನಸಭಾ ಕ್ಷೇತ್ರ ಚಮಕೌರ್ ಸಾಹಿಬ್‍ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೇಗೆ ನಡೆಯುತ್ತಿದೆ ಎಂಬುದನ್ನು ತಮ್ಮ ಪಕ್ಷದ ನಾಯಕರು ಈ ಹಿಂದೆಯೇ ಬಹಿರಂಗಪಡಿಸಿದ್ದರು.

    ಈ ವಿಚಾರ ಬಹಿರಂಗಗೊಂಡಾಗ ಚನ್ನಿ ಅವರು, ಯಾವುದೇ ಕ್ರಮ ಕೈಗೊಳ್ಳಲಿಲ್ಲ ಮತ್ತು ಅದನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಆಗಲೇ ಸಿಎಂ ಮತ್ತು ಅವರ ಕುಟುಂಬದವರು ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವುದು ಸ್ಪಷ್ಟವಾಗಿತ್ತು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಕುಟುಂಬದಿಂದ ಪಂಜಾಬ್ ಭವಿಷ್ಯದಲ್ಲಿ ಏನನ್ನು ನಿರೀಕ್ಷಿಸಲಾಗುತ್ತದೆ? ಎಂದು ಪ್ರಶ್ನಿಸಿದರು.

    ಫೆಬ್ರವರಿ 20 ರಂದು ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಇದ್ದು, ಈ ಚುನಾವಣೆಗೂ ಮುನ್ನವೇ ಇಡಿ ದಾಳಿಗಳು ಚನ್ನಿ ಅವರ ಸೋದರಳಿಯನಿಗೆ ಸಂಬಂಧಿಸಿದ ಮನೆಯ ಮೇಲೆ ದಾಳಿ ನಡೆಸಿ 8 ಕೋಟಿ ರೂಪಾಯಿ ಸೇರಿದಂತೆ ಸುಮಾರು 10 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

  • ಜಮೀರ್ ಮನೆ ಬಗ್ಗೆ ನಾನಂತೂ ದೂರು ಕೊಟ್ಟಿಲ್ಲ: ಹೆಚ್‍ಡಿಕೆ

    ಜಮೀರ್ ಮನೆ ಬಗ್ಗೆ ನಾನಂತೂ ದೂರು ಕೊಟ್ಟಿಲ್ಲ: ಹೆಚ್‍ಡಿಕೆ

    ರಾಮನಗರ: ಶಾಸಕ ಜಮೀರ್ ಅಹ್ಮದ್ ಖಾನ್‍ರವರು ನನ್ನ ರಾಜಕೀಯ ವಿರೋಧಿಗಳು ನನ್ನ ಬಗ್ಗೆ 3-4 ಕಂಪ್ಲೇಂಟ್ ನೀಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಜಮೀರ್ ಬಗ್ಗೆ ಯಾರು ದೂರು ನೀಡಿದ್ದಾರೆಂದು ಇಡಿ ಅವರೇ ಹೇಳಬೇಕು. ನಾನಂತೂ ಯಾರ ಬಗ್ಗೆ ಕೂಡ ದೂರು ನೀಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

    Zameer Ahmed ED Raid

    ಬಿಡದಿಯಲ್ಲಿ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಖಾನ್ ಮನೆ ಬಗ್ಗೆ ಯಾರು ದೂರು ನೀಡಿದ್ದಾರೆಂದು ನನಗೆ ಗೊತ್ತಿಲ್ಲ. ನಾನಂತೂ ಯಾರ ಬಗ್ಗೆ ಕೂಡ ದೂರು ನೀಡಿಲ್ಲ. ಯಾರು ದೂರು ಕೊಟ್ಟಿದ್ದಾರೋ ಅವರೇ ಸಮರ್ಥವಾಗಿ ಉತ್ತರ ಕೊಟ್ಟುಕೊಳ್ಳುತ್ತಾರೆ ಎಂದಿದ್ದಾರೆ.

    KDK reaction on Zameer Ahmed ED raid

    ಕೇಂದ್ರ ಸರ್ಕಾರಲ್ಲಿರುವಂತಹ ಕೆಲವು ಸಂಸ್ಥೆಗಳು, ಮೂಗರ್ಜಿಗಳನ್ನು ಬರೆದು, ಈ ರೀತಿಯ ಸಂದರ್ಭದಲ್ಲಿ ತನಿಖೆ ಮಾಡಿಕೊಂಡು ಬಂದಿರುವಂತದ್ದು, ಆಗಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಮೇಲೂ ಹಲವಾರು ಬಾರಿ ತನಿಖೆಯಾಗಿಲ್ವಾ, ಇದೇ ಜಮೀನಿನ ಮೇಲೆ 25 ವರ್ಷ, 30 ವರ್ಷ ನಮಗೆಷ್ಟು ಕಾಟ ನೀಡಿದ್ದಾರೆಂಬುದು ನಮಗೆ ಮಾತ್ರ ಗೊತ್ತು ಎಂದು ಕಿಡಿಕಾರಿದ್ದಾರೆ.

    ರಾಜಕೀಯದಲ್ಲಿ ಇರುವಾಗ ಹಲವಾರು ರೀತಿಯ ರಾಜಕೀಯ ತೊಂದರೆಗಳನ್ನು ನಾವು ಅನುಭವಿಸಲೇ ಬೇಕು. ಆದರೆ ನಾವು ಸರಿಯಾಗಿದ್ದರೆ ಯಾರು ಏನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:ಜಮೀರ್, ಬೇಗ್ ಮನೆಗೆ ಇಡಿ ದಾಳಿ- ಸಿದ್ದರಾಮಯ್ಯನವ್ರೇ ಇದರ ಪಲಾನುಭವಿಯಂತೆ!

  • ಜಮೀರ್ ಮನೆ ಮೇಲೆ ಇಡಿ ದಾಳಿ ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ: ಧ್ರುವನಾರಾಯಣ

    ಜಮೀರ್ ಮನೆ ಮೇಲೆ ಇಡಿ ದಾಳಿ ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ: ಧ್ರುವನಾರಾಯಣ

    ಚಾಮರಾಜನಗರ: ಜಮೀರ್ ಮನೆ ಮೇಲೆ ನಡೆದಿರುವ ಇಡಿ ದಾಳಿಯನ್ನು ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ ದಾಳಿಯೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಟೀಕಿಸಿದ್ದಾರೆ.

    ಚಾಮರಾಜನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜಮೀರ್ ಮನೆ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿರೋಧ ಪಕ್ಷದ ನಾಯಕರು, ಮುಖಂಡರನ್ನು ಸದೆಬಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಇಡಿ, ಐಟಿ ದಾಳಿ ಮಾಡಬೇಡಿ ಅಂತಾ ಹೇಳಲ್ಲ. ಆದರೆ ವಿರೋಧ ಪಕ್ಷದ ಮುಖಂಡರನ್ನು ಗುರಿಯಾಗಿಸಿ ದಾಳಿ ನಡೀತಿದೆ. ಚುನಾವಣೆ ವೇಳೆ ತಮಿಳುನಾಡಿನಲ್ಲಿ ಸ್ಟಾಲಿನ್ ಸೇರಿದಂತೆ ಹಲವು ಮುಖಂಡರ ಮೇಲೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೇಲೂ ದಾಳಿ ನಡೆದಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೇಲೂ ಕೂಡ ಇಡಿ, ಸಿಬಿಐ, ಐಟಿ ಸೇರಿದಂತೆ ದಾಳಿ ನಡೆದಿದೆ. ಆದರೆ ಬಿಜೆಪಿ ನಾಯಕರ ಮನೆ ಮೇಲೆ ಯಾವುದೇ ದಾಳಿ ನಡೆದಿಲ್ಲ. ಇದು ನೂರಕ್ಕೆ ನೂರರಷ್ಟು ಇದು ರಾಜಕೀಯ ಪ್ರೇರಿತ ದಾಳಿ. ಯತ್ನಾಳ್, ವಿಶ್ವನಾಥ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರನ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದರು. ಓರಿಸಿಯಸ್ ಬ್ಯಾಂಕ್ ನಲ್ಲಿ ಹಣವಿಟ್ಟಿದ್ದಾರೆ ಅಂತಾ ಆರೋಪ ಮಾಡಿದ್ದರು. ಆ ವೇಳೆ ಯಾಕೆ ಅವರ ಮೇಲೆ ಐಟಿ, ಇಡಿ ದಾಳಿ ಮಾಡಿಲ್ಲ ಅಂತಾ ಕಿಡಿಕಾರಿದ್ದಾರೆ. ಇದನ್ನೂ ಓದಿ:ಬಂಧನದ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್, ರೋಷನ್ ಬೇಗ್!

  • ಮಾಜಿ ಸಚಿವ ಶಾಮನೂರು ಮೆಡಿಕಲ್ ಕಾಲೇಜ್ ಮೇಲೆ ಐಟಿ ದಾಳಿ

    ಮಾಜಿ ಸಚಿವ ಶಾಮನೂರು ಮೆಡಿಕಲ್ ಕಾಲೇಜ್ ಮೇಲೆ ಐಟಿ ದಾಳಿ

    ದಾವಣಗೆರೆ: ಕಾಂಗ್ರೆಸ್ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಇಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಗೋವಾ ಹಾಗೂ ಬೆಳಗಾವಿಯಿಂದ ಬಂದ ಆರು ಜನ ಐಟಿ ಅಧಿಕಾರಿಗಳ ತಂಡ ಶಾಮನೂರು ಶಿವಶಂಕರಪ್ಪ ಒಡೆತನದಲ್ಲಿರುವ ದಾವಣಗೆರೆಯ ಜೆಜೆಎಂ, ಎಸ್‍ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್‍ಗಳಲ್ಲಿ ಕಡತ ಪರಿಶೀಲನೆ ನಡೆಸುತ್ತಿದ್ದಾರೆ.

    ಈ ವೇಳೆ ವಿದ್ಯಾರ್ಥಿಗಳ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕೆಲ ವಿದ್ಯಾರ್ಥಿನ್ನು ಅನಿರೀಕ್ಷಿತವಾಗಿ ಭೇಟಿ ಮಾಡಿ ಶುಲ್ಕ ತುಂಬದ ವಿವರ ಪಡೆದಿದ್ದಾರೆ.

  • ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿದ್ರು ಡಿಕೆಶಿ

    ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿದ್ರು ಡಿಕೆಶಿ

    – ಹೈಕಮಾಂಡ್, ಇಡಿ ಅಧಿಕಾರಿಗಳ ಭೇಟಿ

    ನವದೆಹಲಿ: ಅಕ್ರಮ ಆಸ್ತಿಗಳಿಕೆ ಹಾಗೂ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಹೆಚ್ಚುವರಿ ದಾಖಲೆಗಳನ್ನು ನೀಡಲಿದ್ದಾರೆ.

    ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ದೆಹಲಿಗೆ ಆಗಮಿಸಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಕೇಳಿದ್ದಾರೆ. ಇದೇ ಸಂದರ್ಭದಲ್ಲಿ ಇಡಿ ಅಧಿಕಾರಿಗಳನ್ನು ಭೇಟಿ ಸಂಬಂಧಿಸಿದ ದಾಖಲೆಗಳನ್ನು ನೀಡಲಿದ್ದಾರೆ.

    ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಡಿ.ಕೆ ಶಿವಕುಮಾರ್ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಭೇಟಿಗೆ ಸಮಯ ಕೇಳಿದ್ದಾರೆ. ಆದರೆ ಸೋನಿಯಗಾಂಧಿ ಆರೋಗ್ಯ ಸಮಸ್ಯೆ ಹಾಗೂ ಕೊರೊನಾ ವೈರಸ್ ಹಿನ್ನೆಲೆ ಭೇಟಿ ಅನುಮಾನ ಎನ್ನಲಾಗಿದೆ. ಹೀಗಾಗಿ ಝೋಮ್ ಮೀಟಿಂಗ್ ಆ್ಯಪ್ ಮೂಲಕ ಮಾತುಕತೆ ನಡೆಸುವ ಸಾಧ್ಯತೆ ಇದೆ.

    ಈ ಸಂಬಂಧ ದೆಹಲಿಯಲ್ಲಿ ಮಾತನಾಡಿರುವ ಶಿವಕುಮಾರ್, ಎಐಸಿಸಿ ನಾಯಕರ ಭೇಟಿಗಾಗಿ ದೆಹಲಿಗೆ ಬಂದಿದ್ದೇನೆ. ರಾಜ್ಯದಲ್ಲಿ ಕೆಪಿಸಿಸಿ ಕೈಗೊಂಡಿರುವ ನಾಲ್ಕೈದು ತಿಂಗಳ ವರದಿಯನ್ನು ಹೈಕಮಾಂಡಿಗೆ ಸಲ್ಲಿಸಲಿದ್ದೇನೆ. ಇದರ ಜೊತೆಗೆ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಯನ್ನು ಅಧಿಕಾರಿಗಳು ಕೇಳಿದ್ದು, ಅವುಗಳಿಗೆ ಸ್ಪಷ್ಟನೆ ನೀಡಲಿದ್ದೇವೆ ಎಂದರು.

  • ಇಡಿ ಅಧಿಕಾರಿಗಳಿಗೂ ಕೊರೊನಾ ಸೋಂಕು

    ಇಡಿ ಅಧಿಕಾರಿಗಳಿಗೂ ಕೊರೊನಾ ಸೋಂಕು

    – 6 ಅಧಿಕಾರಿಗಳಿಗೆ ಪಾಸಿಟಿವ್
    – 10 ಅಧಿಕಾರಿಗಳು ಕ್ವಾರಂಟೈನ್

    ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ)ದ ಆರು ಜನ ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಎರಡು ದಿನಗಳ ಕಾಲ ಇಡಿ ಕೇಂದ್ರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ ಎಂದು ವರದಿಯಾಗಿದೆ.

    ಒಟ್ಟು 6 ಜನ ಅಧಿಕಾರಿಗಳಿಗೆ ಸೋಂಕು ತಗುಲಿದ್ದು, ಕೊರೊನಾ ಪಾಸಿಟಿವ್ ಕಾಣಿಸಿಕೊಂಡ 6 ಜನ ಅಧಿಕಾರಿಗಳ ಸಂಪರ್ಕದಲ್ಲಿದ್ದ 10 ಅಧಿಕಾರಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಇತ್ತೀಚೆಗೆ ಇಡಿ ಕೇಂದ್ರ ಕಚೇರಿಯ ಸ್ಥಾಪನ ಶಾಖೆಯ ಕಿರಿಯ ದರ್ಜೆಯ ಅಧಿಕಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಇವರು ಕೇಂದ್ರ ಅರೆ ಸೈನ್ಯ ಪಡೆಯಿಂದ ಇಡಿ ನಿಯೋಗದಲ್ಲಿದ್ದರು ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಅಕ್ರಮ ಹಣ ವರ್ಗಾವಣೆ ಮತ್ತು ಹವಾಲಾ ದಂಧೆ ಕುರಿತ ಅಪರಾಧಗಳ ಕುರಿತು ತನಿಖೆ ನಡೆಸುವ ಕೇಂದ್ರ ಸಂಸ್ಥೆ ಇಡಿ, ಕೊರೊನಾ ಕುರಿತು ಕಟ್ಟೆಚ್ಚರ ವಹಿಸಿತ್ತು. ಕೇಂದ್ರ ಕಚೇರಿಯನ್ನು ವಾರದಲ್ಲಿ ಎರಡು ಬಾರಿ ಸ್ಯಾನಿಟೈಸ್ ಮಾಡುತ್ತಿತ್ತು. ಅಲ್ಲದೆ ನಿರ್ದಿಷ್ಟ ದಿನದ ಕೆಲಸಕ್ಕೆ ಅಗತ್ಯವಿರುವ ನೌಕರರನ್ನು ಮಾತ್ರ ಕಚೇರಿಗೆ ಬರುವಂತೆ ಸೂಚಿಸಲಾಗಿತ್ತು. ಇಷ್ಟೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೂ ಇದೀಗ 6 ಜನ ಅಧಿಕಾರಿಗಳಿಗೆ ಸೋಂಕು ತಗುಲಿದೆ.

    ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ದಿನ 9,887 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ವರಗೆ ಒಂದು ದಿನದಲ್ಲಿ ಪತ್ತೆಯಾದ ಪ್ರಕರಣಗಳ ಪೈಕಿ ಇದು ಅತೀ ಹೆಚ್ಚು ಎನ್ನಲಾಗಿದೆ. ಅಲ್ಲದೆ ಒಂದೇ ದಿನ 294 ಜನ ಸಾವನ್ನಪ್ಪಿದ್ದು, ಈ ವರೆಗೆ 6,642 ಜನ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ. ದೇಶಲ್ಲಿ ಒಟ್ಟು 2.3 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 1.14 ಲಕ್ಷ ಜನ ಗುಣಮುಖರಾಗಿದ್ದಾರೆ. ಕೊರೊನಾ ಪ್ರಕರಣಗಳ ಪೈಕಿ ಭಾರತ ಇಟಲಿಯನ್ನು ಹಿಂದಿಕ್ಕಿದ್ದು, ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣ ಹೊಂದಿದ ದೇಶಗಳ ಪೈಕಿ 6ನೇ ಸ್ಥಾನಕ್ಕೇರಿದೆ.