Tag: ಇಡಿ ದಾಳಿ

  • ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!

    ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ (Valmiki Corporation Corruption Case) ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ (BN Nagendra) ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಬುಧವಾರ (ಇಂದು) ಬೆಳ್ಳಂಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದ ಅಧಿಕಾರಿಗಳು ಮಾಜಿ ಸಚಿವರನ್ನ ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಅವರ ಮೊಬೈಲ್‌ ಫೋನ್‌ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 2 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ ಎಂದು ಇಡಿ ಮೂಲಗಳು ತಿಳಿಸಿವೆ.

    ಬಹುಕೋಟಿ ಹಗರಣ ಕೇಸ್‌ಗೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದ ಮರುದಿನವೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಶಾಸಕ ಬಸನಗೌಡ ದದ್ದಲ್‌, ಯ್ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ಸುಚಿ ಸ್ಮಿತಾ, ಕ್ರೆಡಿಟ್‌ ಆಫೀಸರ್ ಕೃಷ್ಣಮೂರ್ತಿ, ಬ್ರಾಂಚ್ ಹೆಡ್ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯ ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

    ಬುಧವಾರ ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.

    18 ಕಡೆ ಇಡಿ ದಾಳಿ:
    ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಬುಧವಾರವೂ ಸಹ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು.

  • ವಾಲ್ಮೀಕಿ ನಿಗಮ ಹಗರಣ ಕೇಸ್; ಮಾಜಿ ಸಚಿವ ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ

    ವಾಲ್ಮೀಕಿ ನಿಗಮ ಹಗರಣ ಕೇಸ್; ಮಾಜಿ ಸಚಿವ ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation Scam) ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಹಾಗೂ ಶಾಸಕ ಬಸನಗೌಡ ದದ್ದಲ್ (Basanagouda Daddal) ಮನೆ ಮೇಲೆ ಇಡಿ ದಾಳಿ ನಡೆಸಿದೆ.

    ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಗೋಲ್ಮಾಲ್‌ಗೆ ಸ್ಪೋಟಕಆಡಿಯೋ ಸಾಕ್ಷ್ಯ – ನಾಗೇಂದ್ರ ಕಡೆಯವರಿಂದಲೇ ಅಕ್ರಮ ಆರೋಪ

    ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.

    ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಉದಾಸೀನದಿಂದ ಜನರ ಪ್ರಾಣ ಹೋದರೆ ಸಹಿಸಲ್ಲ: ಸಿಎಂ

    ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಇಂದು ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿದೆ.

  • Jharkhand: 35 ಕೋಟಿಗೂ ಅಧಿಕ ಹಣ ಜಪ್ತಿ – ಇಡಿಯಿಂದ ಕಾಂಗ್ರೆಸ್‌ ಸಚಿವರ ಆಪ್ತ ಕಾರ್ಯದರ್ಶಿ, ಮನೆಕೆಲಸದವನ ಬಂಧನ!

    Jharkhand: 35 ಕೋಟಿಗೂ ಅಧಿಕ ಹಣ ಜಪ್ತಿ – ಇಡಿಯಿಂದ ಕಾಂಗ್ರೆಸ್‌ ಸಚಿವರ ಆಪ್ತ ಕಾರ್ಯದರ್ಶಿ, ಮನೆಕೆಲಸದವನ ಬಂಧನ!

    ರಾಂಚಿ: ಜಾರಿ ನಿರ್ದೇಶನಾಲಯವು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಅವರನ್ನ ಸೋಮವಾರ ತಡರಾತ್ರಿ ಬಂಧಿಸಿದೆ (ED Arrests). ಇದರೊಂದಿಗೆ ದಾಳಿ ವೇಳೆ ಸಿಕ್ಕ 35 ಕೋಟಿ ರೂ.ಗಳಷ್ಟು ನಗದನ್ನು ವಶಪಡಿಸಿಕೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಸಂಜೀವ್ ಲಾಲ್ (Sanjeev Lal) ಮತ್ತು ಜಹಾಂಗೀರ್ ಆಲಂ ಇಬ್ಬರನ್ನೂ ರಾತ್ರಿಯಿಡೀ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ದೇಶದಲ್ಲಿ ಮೂರನೇ ಹಂತದ ಚುನಾವಣೆ – 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ

    ಏನಿದು ಪ್ರಕರಣ?
    ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸೋಮವಾರ ಇಡಿ ಅಧಿಕಾರಿಗಳ ತಂಡ ರಾಂಚಿಯ ವಿವಿಧೆಡೆ ದಾಳಿ ನಡೆಸಿತ್ತು. ಈ ವೇಳೆ ಗ್ರಾಮೀಣಾಭಿವೃದ್ಧಿ ಮಂತ್ರಿಯೂ ಆಗಿರುವ ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಸಹಾಯಕನ ಮನೆಯಲ್ಲಿ ಈ ದುಡ್ಡಿನ ರಾಶಿ ಕಂಡುಬಂದಿತ್ತು. ಇದನ್ನೂ ಓದಿ: ಜಾರ್ಖಂಡ್ ಸಚಿವನ ಆಪ್ತನ ಮನೆಯಲ್ಲಿ 12 ಗಂಟೆ, 6 ಮೆಷಿನ್, 30 ಕೋಟಿ ಹಣ ಎಣಿಕೆ!

    ಯಾವುದೇ ದಾಖಲೆಗಳನ್ನು ಒಳಗೊಂಡಿರದ ಈ ಹಣವನ್ನು 12 ಗಂಟೆಗಳ ಕಾಲ 6 ಮಷಿನ್‍ಗಳ ಮೂಲಕ ಅಧಿಕಾರಿಗಳು ಎಣಿಕೆ ಮಾಡಿದ್ದರು. ಸತತ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 32 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಇದೇ ವೇಳೆ ಕೇಂದ್ರಿಯ ತನಿಖಾ ದಳ ನಡೆಸಿದ್ದ ದಾಳಿಯಲ್ಲೂ 3 ಕೋಟಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಪ್ರಜ್ವಲ್‌ ವಿದೇಶಕ್ಕೆ ಹಾರಲು ರಾಜ್ಯ ಸರ್ಕಾರವೇ ಹೊಣೆ : ಮೌನ ಮುರಿದ ಮೋದಿ

    ಮೋದಿ ಹೇಳಿದ್ದೇನು?
    ಜಾರ್ಖಂಡ್‍ನಲ್ಲಿ ದುಡ್ಡಿನ ಪರ್ವತವೇ ಪತ್ತೆಯಾಗಿದೆ. ಇದು ಜನರಿಂದ ಲೂಟಿ ಹೊಡೆದ ಹಣ. ಭ್ರಷ್ಟಾಚಾರದ ವಿರುದ್ಧ ಮೋದಿ ಕ್ರಮ ತಗೋತಾರೆ ಅನ್ನೊದಕ್ಕೇ ಇದೆ ಸಾಕ್ಷಿ. ಆದರೆ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂದು ಆಲಂಗೀರ್ ಸ್ಪಷ್ಟಪಡಿಸಿದ್ದಾರೆ. ಸಂಜೀವ್ ಲಾಲ್ ಸರ್ಕಾರ ಒದಗಿಸಿದ್ದ ಆಪ್ತ ಕಾರ್ಯದರ್ಶಿ ಅಷ್ಟೇ. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ ಎಂದು ಖಡಕ್ಕಾಗಿ ಪ್ರತಿಕ್ರಿಯಿಸಿದ್ದಾರೆ.

  • ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಣೆ

    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಣೆ

    ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳ್ಳಪಟ್ಟಿರುವ ಬಿಆರ್‌ಎಸ್ ನಾಯಕಿ, ತೆಲಂಗಾಲ ಪರಿಷತ್ ಸದಸ್ಯೆ ಕೆ.ಕವಿತಾಗೆ (K Kavitha) ಜಾಮೀನು ನೀಡಲು ದೆಹಲಿ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಏಪ್ರಿಲ್‌ 4 ರಂದು ಆದೇಶ ಕಾಯ್ದಿರಿಸಿದ ನ್ಯಾ.ಕಾವೇರಿ ಬವೇಜಾ ಅವರಿಂದು ತೀರ್ಪು ಪ್ರಕಟಿಸಿದ್ದಾರೆ.

    ಕಳೆದ ಮಾರ್ಚ್ 15 ರಂದು ಹೈದರಾಬಾದ್‌ನಲ್ಲಿ ಶೋಧ ನಡೆಸಿದ ಬಳಿಕ ಜಾರಿ ನಿರ್ದೇಶನಾಲಯ (ED) ಕೆ.ಕವಿತಾ ಅವರನ್ನ ಬಂಧಿಸಿತ್ತು. ವಿಚಾರಣೆ ಬಳಿಕ ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಕವಿತಾ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಬಂಧನಕ್ಕೊಳ್ಳಪಟ್ಟಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮಾಜಿ ಡಿಸಿಎಂ ಮನೀಶ್ ಸಿಸೋಡಿಯ ಇದೇ ಜೈಲಿ‌ನಲ್ಲಿದ್ದಾರೆ. ಇದನ್ನೂ ಓದಿ: ಸಾಕ್ಷಿಗೆ ಸಂಗ್ರಹಿಸಿದ್ದ 10 ಕೆಜಿ ಗಾಂಜಾ, 9 ಕೆಜಿ ಭಾಂಗ್‌ ಇಲಿಗಳೇ ತಿಂದಿವೆ – ಕೋರ್ಟ್‌ಗೆ ವರದಿ ಸಲ್ಲಿಕೆ!

    ದೆಹಲಿಯಲ್ಲಿ ಜಾರಿ ಮಾಡಲು ಹೊರಟಿದ್ದ ಹೊಸ ಮಧ್ಯ ನೀತಿಯಲ್ಲಿ ಕೆಲವು ಮದ್ಯ ಲಾಬಿ ಗುಂಪುಗಳಿಗೆ ಲಾಭದಾಯಕವಾಗುವ ರೀತಿಯಲ್ಲಿ ಯೋಜನೆ ರೂಪಿಸುವ ಪಿತೂರಿಯ ಭಾಗವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮದ್ಯದ ವ್ಯಾಪಾರಿಗಳ ʻದಿ ಸೌತ್ ಗ್ರೂಪ್ʼ ಲಾಬಿಗೆ ಕವಿತಾ ಸಂಪರ್ಕ ಹೊಂದಿದ್ದಾರೆ ಎಂದು ಇಡಿ ಕೋರ್ಟ್ ವಿಚಾರಣೆ ವೇಳೆ ಹೇಳಿದೆ. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾ

    ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ವಿಜಯ್ ನಾಯರ್ ಶರತ್ ರೆಡ್ಡಿ, ಕೆ ಕವಿತಾ ಮತ್ತು ಮಾಗುಂಟ ಶ್ರೀನಿವಾಸುಲು ಅವರ ನಿಯಂತ್ರಣದಲ್ಲಿರುವ ʻದಿ ಸೌತ್ ಗ್ರೂಪ್ʼನಿಂದ ಎಎಪಿ ನಾಯಕರ ಪರವಾಗಿ ಕನಿಷ್ಠ 100 ಕೋಟಿ ರೂ.ಗಳಷ್ಟು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೆ. ಕವಿತಾ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದು, ತೆಲಂಗಾಣದಲ್ಲಿ ನೆಲೆ ಸಾಧಿಸಲು ಕೇಂದ್ರ ಸರ್ಕಾರ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನವ್ರೂ ಬೇಕಾದ್ರೆ ಮೋದಿ ಫೋಟೊ ಬಳಸಿ ಪ್ರಚಾರ ಮಾಡ್ಲಿ: ರಾಧಾ ಮೋಹನ್ ದಾಸ್ ಅಗರ್ವಾಲ್

    ಕೆ.ಕವಿತಾ ಅವರ ಮೇಲಿನ ಆರೋಪಗಳೇನು?
    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ AAP ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ.

  • ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್‌ – ಆದೇಶದಲ್ಲಿ ಏನಿದೆ?

    ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್‌ – ಆದೇಶದಲ್ಲಿ ಏನಿದೆ?

    – ಜೈಲಿನಲ್ಲಿದ್ದರೂ ದೆಹಲಿ ಜನರದ್ದೇ ಚಿಂತೆ – ಸಚಿವೆ ಅತಿಶಿ ಭಾವುಕ

    ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (Delhi Liquor Policy Case) ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ್ದಾರೆ ಎಂದು ಎಎಪಿ ಪಕ್ಷದ ಮೂಲಗಳು ತಿಳಿಸಿವೆ.

    ಈ ಮೂಲಕ ಅರವಿಂದ್‌ ಕೇಜ್ರಿವಾಲ್‌ ಇ.ಡಿ ಬಂಧನದಲ್ಲಿದ್ದುಕೊಂಡೇ ಆಡಳಿತ ನಡೆಸುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಿದೆ. ಇದು ರಾಷ್ಟ್ರ ರಾಜಧಾನಿಯ ನೀರು ಸರಬರಾಜಿಗೆ ಸಂಬಂಧಿಸಿದ ಆದೇಶವಾಗಿದೆ. ಜಲ ಸಂಪನ್ಮೂಲ ಸಚಿವೆಯೂ ಆಗಿರುವ ಅತಿಶಿ ಅವರಿಗೆ ಟಿಪ್ಪಣಿ ಮೂಲಕ ತಿಳಿಸಿದ್ದಾರೆ. ಅತಿಶಿ (Atishi) ಅವರಿಂದು ಆದೇಶವನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

    ನನ್ನ ಕಣ್ಣಲ್ಲಿ ನೀರು ತರಿಸಿದೆ:
    ಇಡಿ ಬಂಧನದಲ್ಲಿರುವ ಸಿಎಂ ಜೈಲಿನಲ್ಲಿದ್ದುಕೊಂಡೇ ಸರ್ಕಾರಿ ಆದೇಶ ಹೊರಡಿಸುವ ಬಗ್ಗೆ ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ. ಇದು ನನ್ನ ಕಣ್ಣಲ್ಲಿ ನೀರು ತರಿಸಿದೆ. ಬಂಧನಕ್ಕೊಳಗಾದ ವ್ಯಕ್ತಿ ಈ ಕಷ್ಟದ ಸಮಯದಲ್ಲೂ ತಮ್ಮ ಕುರಿತು ಆಲೋಚಿಸದೇ, ದೆಹಲಿ ಜನರು ಮತ್ತು ಅವರ ಸಮಸ್ಯೆಗಳ ಬಗ್ಗೆ ಮಾತ್ರ ಯೋಚಿಸುತ್ತಿದ್ದಾರೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ – ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ರಿಲೀಸ್ 

    ದೆಹಲಿಯ ಕೆಲವು ಭಾಗಗಳಲ್ಲಿ ಜನರು ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ನಾನು ಚಿಂತಿತನಾಗಿದ್ದೇನೆ. ನಾನು ಜೈಲಿನಲ್ಲಿದ್ದೇನೆ ಎಂಬ ಕಾರಣಕ್ಕೆ ಜನರಿಗೆ ತೊಂದರೆ ಆಗಬಾರದು. ನೀರಿನ ಕೊರತೆ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅಗತ್ಯವಿದ್ದರೆ ರಾಜ್ಯಪಾಲರಾದ ವಿ.ಕೆ ಸಕ್ಷೇನಾ ಅವರ ಸಹಾಯ ಪಡೆಯುವಂತೆ ತಮ್ಮ ನಿರ್ದೇಶನದಲ್ಲಿ ತಿಳಿಸಿರುವುದಾಗಿ ಅತಿಶಿ ಹೇಳಿದ್ದಾರೆ.

    ದೆಹಲಿ ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮಾರ್ಚ್‌ 21 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್‌ 22 ರಂದು ನ್ಯಾಯಾಲಯವು ಕೇಜ್ರಿವಾಲ್‌ ಅವರಿಗೆ ಮಾ.28ರ ವರೆಗೆ ಇ.ಡಿ ವಶಕ್ಕೆ ನೀಡಿದೆ.

    ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಅವರು ಶನಿವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೋಳಿ ರಜೆಯ ಕಾರಣ ನ್ಯಾಯಾಲಯವು 27ಕ್ಕೂ ಈ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ

  • ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ಹಣ ನೀಡಿದ ವ್ಯಕ್ತಿಯ ಹೇಳಿಕೆ ಆಧರಿಸಿ ಕೇಜ್ರಿವಾಲ್ ಬಂಧನ – ಇಡಿ ವಿರುದ್ಧ ಆಪ್ ಆರೋಪ

    ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ಹಣ ನೀಡಿದ ವ್ಯಕ್ತಿಯ ಹೇಳಿಕೆ ಆಧರಿಸಿ ಕೇಜ್ರಿವಾಲ್ ಬಂಧನ – ಇಡಿ ವಿರುದ್ಧ ಆಪ್ ಆರೋಪ

    ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಚಾರದ ಕಿಂಗ್ ಪಿನ್ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಎಂದು ಜಾರಿ ನಿರ್ದೇಶನಾಲಯ (ED) ಆರೋಪಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯಕ್ಕೆ ಆಪ್‌ ನಾಯಕರು ತಿರುಗೇಟು ನೀಡಿದ್ದಾರೆ. ಚುನಾವಣಾ ಬಾಂಡ್ (Electoral Bonds) ಮೂಲಕ ಬಿಜೆಪಿಗೆ ಹಣ ನೀಡಿದ ವ್ಯಕ್ತಿಯಿಂದ ಪಡೆದ ಮಾಹಿತಿ ಮೇರೆಗೆ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

    ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವೆ ಅತಿಶಿ (Atishi), ಅಬಕಾರಿ ನೀತಿ ಹಗರಣದಲ್ಲಿ, ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ ತನಿಖೆಗಳು ಕಳೆದ ಎರಡು ವರ್ಷಗಳಿಂದ ನಡೆಯುತ್ತಿದೆ. ಈ 2 ವರ್ಷಗಳ ತನಿಖೆಯಲ್ಲಿ ಒಂದು ಪ್ರಶ್ನೆ ಮತ್ತೆ-ಮತ್ತೆ ಉದ್ಭವಿಸುತ್ತಿದೆ. ಹಣದ ಜಾಡು ಎಲ್ಲಿದೆ? ಹಣ ಎಲ್ಲಿಗೆ ಹೋಯಿತು? ಆಪ್‌ ಪಕ್ಷದ ಯಾವುದೇ ನಾಯಕ, ಮಂತ್ರಿ ಅಥವಾ ಕಾರ್ಯಕರ್ತರಿಂದ ಅಪರಾಧದ ಆದಾಯವನ್ನು ವಸೂಲಿ ಮಾಡಲಾಗಿಲ್ಲ, ಹಾಗಿದ್ದಾಗ ಹಣ ಎಲ್ಲಿ ಹೋಯಿತು? ಎಂದು ಪ್ರಶ್ನೆ ಮಾಡಿದ್ದಾರೆ.

    ಶರತ್ ಚಂದ್ರ ರೆಡ್ಡಿ ಎಂಬ ವ್ಯಕ್ತಿಯ ಹೇಳಿಕೆ ಆಧರಿಸಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಶರತ್ ಚಂದ್ರ ರೆಡ್ಡಿ ಅರಬಿಂದೋ ಫಾರ್ಮಾದ ಮಾಲೀಕರು ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಹಣ ಪಾವತಿಸಿದವರು ಎಂದು ಅತಿಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಶ್ನೆಗಾಗಿ ಹಣ ಪಡೆದ ಆರೋಪ – ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ

    ನವೆಂಬರ್ 9, 2022 ರಂದು ರೆಡ್ಡಿ ಅವರನ್ನು ವಿಚಾರಣೆಗಾಗಿ ಕರೆಸಲಾಗಿತ್ತು. ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲಿಲ್ಲ ಅಥವಾ ಮಾತನಾಡಲಿಲ್ಲ ಮತ್ತು ಆಪ್‌ನೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು. ಹೇಳಿಕೆ ಬೆನ್ನಲೆ ಅವರನ್ನು ಇಡಿ ಬಂಧಿಸಿ ಹಲವು ತಿಂಗಳು ಜೈಲಿನಲ್ಲಿದ್ದ ನಂತರ ಹೇಳಿಕೆ ಬದಲಿಸಿದ ಅವರು, ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಅಬಕಾರಿ ನೀತಿ ವಿಚಾರವಾಗಿ ಮಾತನಾಡಿದ್ದೇನೆ ಎಂದು ಹೇಳಿದರು. ಅವರು ಹೇಳಿದ ತಕ್ಷಣ ಜಾಮೀನು ಸಿಕ್ಕಿದೆ ಎಂದು ದೂರಿದ್ದಾರೆ.

    ಸಚಿವ ಸೌರಭ್ ಭಾರದ್ವಾಜ್ ಮಾತನಾಡಿ, ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಚರ್ಚೆ ಪ್ರಾರಂಭವಾದಾಗಿನಿಂದ, ಬಿಜೆಪಿ, ಎಸ್‌ಬಿಐ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವು ವಿವರಗಳನ್ನು ಬಹಿರಂಗಪಡಿಸದಿರಲು ಪ್ರಯತ್ನಿಸುತ್ತಿದೆ. ಆದರೀಗ ಈಗ ಅದನ್ನ ಬಹಿರಂಗಪಡಿಸಲಾಗಿದೆ, ಇದು ವಿವಿಧ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2047ಕ್ಕೆ ಎಕ್ಸ್‌ಪ್ರೆಸ್‌ವೇಗಳ ಅಭಿವೃದ್ಧಿಗೆ ಸರ್ಕಾರ ಮಾಸ್ಟರ್‌ಪ್ಲಾನ್‌

  • ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾ

    ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾ

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi Liquor Scam) ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

    ಕಳೆದ ಶುಕ್ರವಾರ ಹೈದರಾಬಾದ್‌ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಬಳಿಕ ಅವರನ್ನು ಬಂಧಿಸಿತ್ತು. ಕವಿತಾ (K Kavitha) ಬಂಧನದ ಬಳಿಕ ಅವರನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಂದೆ ಹಾಜರುಪಡಿಸಿ ವಿಚಾರಣೆಗೆ ಹತ್ತು ದಿನಗಳ ಕಸ್ಟಡಿಗೆ ನೀಡುವಂತೆ ಮನವಿ ಮಾಡಿಲಾಗಿತ್ತು. ಇಡಿ ವಾದ ಪುರಷ್ಕರಿಸಿದ ನ್ಯಾಯಲಯ ಮಾರ್ಚ್ 23ರವರೆಗೆ ಕವಿತಾ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ನೀಡಿತು. ಅಲ್ಲದೇ ಸಹೋದರ ಕೆಟಿಆರ್ ಮತ್ತು ಪತಿ ಅನಿಲ್ ಡಿ ಅವರನ್ನು ರಿಮಾಂಡ್ ಅವಧಿಯಲ್ಲಿ ಪ್ರತಿದಿನ ಸಂಜೆ 6-7ರ ನಡುವೆ ಅರ್ಧ ಗಂಟೆಗಳ ಕಾಲ ಭೇಟಿಯಾಗಲು ಅವಕಾಶ ನೀಡಿದೆ.

    ಈ ಮಧ್ಯೆ ವಿಚಾರಣೆ ವೇಳೆ ಕೆ.ಕವಿತಾ ಅವರು ನ್ಯಾಯಾಲಯದಲ್ಲಿ ತನ್ನ ಬಂಧನವನ್ನು ಅಕ್ರಮ ಎಂದು ಹೇಳಿದ್ದಾರೆ. ಇದು ಕಪೋಲಕಲ್ಪಿತ ಪ್ರಕರಣ, ನನ್ನನ್ನು ಅಕ್ರಮವಾಗಿ ಬಂಧಿಸಲಾಗಿದೆ. ಇದರ ವಿರುದ್ಧ ಹೋರಾಡುತ್ತೇನೆ ಎಂದಿದ್ದಾರೆ. ಈ ಬೆನ್ನಲ್ಲೇ ಅವರು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದು ಈ ಮಾಹಿತಿಯನ್ನು ಅವರ ವಕೀಲರ ತಂಡ ಖಚಿತಪಡಿಸಿದೆ. ಇದನ್ನೂ ಓದಿ: ಚುನಾವಣಾ ಬಾಂಡ್ ಪ್ರಕರಣ – ಅಸಮರ್ಪಕ ಮಾಹಿತಿ ನೀಡಿದ ಎಸ್‌ಬಿಐಗೆ ಮತ್ತೆ ಸುಪ್ರೀಂ ತರಾಟೆ

    ಕೆ.ಕವಿತಾ ಅವರ ಮೇಲಿನ ಆರೋಪಗಳೇನು?
    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ AAP ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ. ಇದನ್ನೂ ಓದಿ: ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

    ಅಲ್ಲದೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಮಿತ್ ಅರೋರಾ 10ಕ್ಕೂ ಹೆಚ್ಚು ಬಾರಿ ಕವಿತಾಗೆ ದೂರವಾಣಿ ಕರೆ ಮಾಡಿದ್ದು, ಒಟ್ಟು 35 ಜನರನ್ನು ಸಂಪರ್ಕಿಸಲು ಅವರು ಪ್ರಯತ್ನಿಸಿದ್ದಾರೆ ಎಂದು ಇಡಿ ಹೇಳಿತ್ತು. ಕವಿತಾ, ಅಮಿತ್ ಅರೋರಾ ಅವರೊಂದಿಗೆ ಸಂವಹನ ನಡೆಸಲು ಫ್ಯಾನ್ಸಿ ನಂಬರ್‌ಗಳನ್ನು ಬಳಸಿದ್ದಾರೆ. ಪೈಕಿ ಎರಡು ಸಿಮ್‌ಗಳನ್ನು ಹೆಚ್ಚು ಬಳಸಿದ್ದು, ಈ ಬಗ್ಗೆ ಸಂಭಾಷಣೆ ನಡೆಸಲು ಅವರು ಹತ್ತಕ್ಕೂ ಹೆಚ್ಚು ಬಾರಿ IMEI ಅನ್ನು ಬದಲಾಯಿಸಿದ್ದಾರೆ. ತನಿಖೆ ವೇಳೆ ಫೋನ್‌ಗಳನ್ನು ಪರಿಶೀಲಿಸಿದಾಗ ಫೋನ್‌ಗಳಲ್ಲಿ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇಡಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಕೆ ಕವಿತಾ ಅವರ ಹೆಸರಿಸಿದೆ. ಅವರು ಮದ್ಯದ ಕಂಪನಿಯಾದ ಇಂಡೋಸ್ಪಿರಿಟ್ಸ್‌ನಲ್ಲಿ ಶೇ.65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಸಹ ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರಿಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

    ಏನಿದು ಮದ್ಯ ಹಗರಣ?
    ಪ್ರಕರಣದ ಆರೋಪಿಯಾಗಿರುವ ಮನೀಶ್ ಸಿಸೋಡಿಯಾ ಹಾಗೂ ಇತರರು 2021-22ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಪ್ರಾಧಿಕಾರದ ಅನುಮೋದನೆಯಿಲ್ಲದೇ ಪರವಾನಗಿದಾರರಿಗೆ ಅನುಕೂಲವಾಗುವಂತಹ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಸಿಸೋಡಿಯಾ ಆಪ್ತ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ ಎಂಬ ಆರೋಪ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರ ಕೆ.ಕವಿತಾ ಅವರ ನಿವಾಸ ಮೇಲೆ ಇಡಿ ದಾಳಿ ನಡೆಸಿ, ಬಂಧಿಸಿದೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

  • ಜೈಲು ಸೇರಿರುವ ಸಂಜಯ್ ಸಿಂಗ್‍ಗೆ ಎಂಪಿಯಾಗಿ ಮುಂದುವರಿಸಲು ಆಪ್ ನಿರ್ಧಾರ

    ಜೈಲು ಸೇರಿರುವ ಸಂಜಯ್ ಸಿಂಗ್‍ಗೆ ಎಂಪಿಯಾಗಿ ಮುಂದುವರಿಸಲು ಆಪ್ ನಿರ್ಧಾರ

    – ದಾಖಲೆಗಳಿಗೆ ಸಹಿ ಹಾಕಲು ಕೋರ್ಟ್ ಅನುಮತಿ

    ನವದೆಹಲಿ: ಹೊಸ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿ, ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆಪ್ (AAP) ಸಂಸದ ಸಂಜಯ್ ಸಿಂಗ್ (Sanjay Singh) ಅವರಿಗೆ ರಾಜ್ಯಸಭಾ ಮರು ನಾಮನಿರ್ದೇಶನ ಪತ್ರಕ್ಕೆ ಜೈಲಿನಿಂದಲೇ ಸಹಿ ಹಾಕಲು ದೆಹಲಿ ಕೋರ್ಟ್ (Delhi Court) ಅನುಮತಿ ನೀಡಿದೆ.

    ಸಂಜಯ್ ಸಿಂಗ್ ರಾಜ್ಯಸಭೆ ಸದಸ್ಯತ್ವ ಅವಧಿ ಜ.27ಕ್ಕೆ ಕೊನೆಗೊಳ್ಳಲಿದ್ದು ಅವರ ಸದಸ್ಯತ್ವವನ್ನು ಮುಂದುವರಿಸಲು ಆಪ್ ನಿರ್ಧರಿಸಿದೆ. ಈ ಹಿನ್ನಲೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಲು, ಮೇಲ್ಮನೆಯ ಚುನಾವಣಾಧಿಕಾರಿಯ ಮುಂದೆ ಈ ಪತ್ರಗಳನ್ನು ಸಲ್ಲಿಸಲು ನ್ಯಾಯಾಲಯ ಅನುಮತಿ ನೀಡಬೇಕು ಎಂದು ಸಂಜಯ್ ಸಿಂಗ್ ಪರ ವಕೀಲರು ರೋಸ್ ಅವೆನ್ಯೂ ಕೋರ್ಟ್‍ಗೆ ಮನವಿ ಮಾಡಿದ್ದರು. ಇದೀಗ ನ್ಯಾಯಾಲಯ ಮನವಿಗೆ ಅವಕಾಶ ನೀಡಿದೆ. ಇದನ್ನೂ ಓದಿ: ಆಪ್‌ ಸರ್ಕಾರದ ಬಹುನಿರೀಕ್ಷಿತ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಕ್ರಮ – ಸಿಬಿಐ ತನಿಖೆಗೆ ಆದೇಶ

    ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮರು ನಾಮನಿರ್ದೇಶನ ದಾಖಲೆಗಳಿಗೆ ಸಹಿ ಹಾಕುವುದನ್ನು ವಿರೋಧಿಸದೇ ಸಂಜಯ್ ಸಿಂಗ್ ಅವರ ದಾಖಲೆಗಳಿಗೆ ಸಹಿ ಹಾಕಲು ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದೆ. ಕೋರ್ಟ್ ಆದೇಶದಿಂದಾಗಿ ಸಂಜಯ್ ಸಿಂಗ್ ಮತ್ತೊಮ್ಮೆ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಲಿದ್ದಾರೆ.

    ಕಳೆದ ವರ್ಷ ಅ.4 ರಂದು ಸಂಜಯ್ ಸಿಂಗ್ ಅವರನ್ನು ನೂತನ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿತ್ತು. ಬಳಿಕ ಅವರನ್ನು ಬಂಧಿಸಲಾಗಿತ್ತು. ಇಡಿ ಬಂಧನವನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಅರ್ಜಿ ಸಲ್ಲಿಸಿದ್ದರು, ಆದರೆ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನೂ ಓದಿ: ಹರಿಯಾಣ, ಪಂಜಾಬ್‍ನಲ್ಲಿ ಇಡಿ ದಾಳಿ – ಭಾರೀ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ಪತ್ತೆ

  • ಹರಿಯಾಣ, ಪಂಜಾಬ್‍ನಲ್ಲಿ ಇಡಿ ದಾಳಿ – ಭಾರೀ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ಪತ್ತೆ

    ಹರಿಯಾಣ, ಪಂಜಾಬ್‍ನಲ್ಲಿ ಇಡಿ ದಾಳಿ – ಭಾರೀ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ಪತ್ತೆ

    ನವದೆಹಲಿ: ಹರಿಯಾಣ (Haryana) ಮತ್ತು ಪಂಜಾಬ್‍ನಲ್ಲಿ (Punjab) ಮಾಜಿ ಶಾಸಕ ಹಾಗೂ ಹಾಲಿ ಶಾಸಕರ ಮನೆ ಮೇಲೆ ಇಡಿ (Enforcement Directorate) ಅಧಿಕಾರಿಗಳು ನಡೆಸಿದ ದಾಳಿಯ ವೇಳೆ 5 ಕೋಟಿ ರೂ. ಹಣ, ವಿದೇಶಿ ನಿರ್ಮಿತ ಅಕ್ರಮ ಶಸ್ತ್ರಾಸ್ತ್ರ, 300 ಕಾಟ್ರಿಡ್ಜ್‌ಗಳನ್ನು, 100 ಮದ್ಯದ ಬಾಟಲಿಗಳು ಸೇರಿದಂತೆ 4 ರಿಂದ 5 ಕೆಜಿ ತೂಕದ ಮೂರು ಚಿನ್ನದ ಬಿಸ್ಕೆಟ್‍ಗಳು ಪತ್ತೆಯಾಗಿವೆ.

    ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ (ಐಎನ್‍ಎಲ್‍ಡಿ) ಮಾಜಿ ಶಾಸಕ ದಿಲ್‍ಬಾಗ್ ಸಿಂಗ್, ಕಾಂಗ್ರೆಸ್ ಶಾಸಕ (Congress MLA) ಸುರೇಂದರ್ ಪನ್ವಾರ್ (Surender Panwar) ಮತ್ತು ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ. ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

    ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‍ಜಿಟಿ) ಗಣಿಗಾರಿಕೆಯನ್ನು ನಿಷೇಧಿಸಿದ ನಂತರ ಯಮುನಾನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬಂಡೆಗಳು, ಜಲ್ಲಿ ಮತ್ತು ಮರಳು ಅಕ್ರಮ ಗಣಿಗಾರಿಕೆಯ ಕುರಿತು ತನಿಖೆ ನಡೆಸಲು ಹರಿಯಾಣ ಪೊಲೀಸರು ಅನೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಬಳಿಕ ತನಿಖಾ ಸಂಸ್ಥೆಯು ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಇದಾದ ಬಳಿಕ ಈ ಇಬ್ಬರ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು ಅಪಾರ ಪ್ರಮಾಣದ ನಗದು ಹಾಗೂ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗಣಿಗಾರಿಕೆ ಸಂಬಂಧಿತ ತೆರಿಗೆ ವಂಚನೆ ತಡೆಯಲು ಸರ್ಕಾರ ಆನ್‍ಲೈನ್ ಪೋರ್ಟಲ್‍ನ್ನು ಜಾರಿಗೆ ತಂದಿದೆ. ಕೆಲವು ಶಾಸಕರು ಈ ನಕಲಿ ಪೋರ್ಟಲ್ ಸೃಷ್ಟಿಸಿ ವಂಚಿಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಇದನ್ನೂ ಓದಿ: 15 ಭಾರತೀಯರಿದ್ದ ಸರಕು ಸಾಗಣೆ ಹಡಗು ಅಪಹರಣ

  • ಸೈಲೆಂಟಾಗಿ ಇರದಿದ್ರೆ ನಿಮ್ಮ ಮನೆ ಮೇಲೆ ಇಡಿ ರೇಡ್- ಕೇಂದ್ರ ಸಚಿವೆ ಬೆದರಿಕೆ

    ಸೈಲೆಂಟಾಗಿ ಇರದಿದ್ರೆ ನಿಮ್ಮ ಮನೆ ಮೇಲೆ ಇಡಿ ರೇಡ್- ಕೇಂದ್ರ ಸಚಿವೆ ಬೆದರಿಕೆ

    ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಗುರುವಾರ ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ (Meenakshi Lekhi) ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ.

    ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದ ಸಂದರ್ಭದಲ್ಲಿ ಸಿಟ್ಟಿಗೆದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ವಿಪಕ್ಷ ನಾಯಕರು ಸೈಲೆಂಟಾಗಿ ಇರದಿದ್ರೆ ಅವರ ಮನೆಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬರುತ್ತಾರೆ ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

    ಮೀನಾಕ್ಷಿ ಲೇಖಿಯ ಮಾತುಗಳು ರಾಷ್ಟ್ರ ರಾಜಕೀಯದಲ್ಲೀಗ ಸಂಚಲನ ಮೂಡಿಸಿವೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ತಿದೆ ಎಂಬ ನಮ್ಮ ಮಾತು ನಿಜ ಎಂದು ಕೇಂದ್ರ ಸಚಿವರೇ ಈಗ ಒಪ್ಕೊಂಡಿದ್ದಾರೆ. ಆವೇಶದಲ್ಲಿ ಮೀನಾಕ್ಷಿ ಲೇಖಿ ವಿಪಕ್ಷಗಳನ್ನು ಬೆದರಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಎನ್‍ಸಿಪಿ ಹೇಳಿದೆ. ಇದನ್ನೂ ಓದಿ: ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ

    ಈ ಸಂಬಂಧ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಟ್ವೀಟ್ ಮಾಡಿ, ಇದು ಎಚ್ಚರಿಕೆನಾ? ಬೆದರಿಕೆನಾ ಎಂದು ಕೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ಸೇರಿ ಹಲವು ಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]