ಕೋಲಾರ: ಇನ್ನೋವಾ ಕಾರ್‌ಗೆ ಬೈಕ್ ಡಿಕ್ಕಿಯಾಗಿ 5 ಜನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಗರ್ಭಿಣಿ ಮಂಗಳವಾರ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತುಂಬು ಗರ್ಭಿಣಿ ಸುಷ್ಮಿತಾರನ್ನು (32) ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸುಷ್ಮಿತಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ಕೆಜಿಎಫ್ (KGF) ತಾಲೂಕಿನ ಕಮ್ಮಸಂದ್ರದಲ್ಲಿ (Kammasandra) ಸುಷ್ಮಿತಾ ಅಂತ್ಯ ಸಂಸ್ಕಾರ ನೆರವೇರಿದೆ.
ಕೋಲಾರದ ನೂತನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್‌ವೇನಲ್ಲಿ (Bengaluru-Chennai Expressway) ಸೋಮವಾರ ಮಧ್ಯರಾತ್ರಿ ಘಟನೆ ನಡೆದಿದೆ. ಘಟನೆಯಲ್ಲಿ ಸುಷ್ಮಿತಾ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಸೇರಿ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಸುಷ್ಮಿತಾ ಹೊರತುಪಡಿಸಿ ಇನ್ನೂ ಮೂರು ಜನ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತಪಟ್ಟವರು ಕೆಜಿಎಫ್ ತಾಲ್ಲೂಕು ಕಮ್ಮಸಂದ್ರ ಗ್ರಾಮದವರಾಗಿದ್ದು, ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನಡೆದಿದೆ. ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು: ಎಲ್ಲಾ ಸಚಿವರಿಗೆ ಸರ್ಕಾರ ಹೊಸ ಕಾರಿನ ಭಾಗ್ಯ (Car gift) ನೀಡಿದೆ. 33 ಸಚಿವರಿಗೆ ಹೊಸ ಇನ್ನೋವಾ ಹೈಕ್ರಾಸ್-ಹೈಬ್ರಿಡ್ (Innova Hycross Hybrid) ಎಂಪಿವಿ ಕಾರು ಖರೀದಿಗೆ ಸರ್ಕಾರದ ಹಣ ಬಿಡುಗಡೆ ಮಾಡಿದೆ.
ಒಂದು ಕಾರಿಗೆ 30 ಲಕ್ಷ ರೂ.(ಜಿಎಸ್‌ಟಿ ಒಳಗೊಂಡಂತೆ ಎಕ್ಸ್ ಶೋ ರೂಮ್ ಬೆಲೆ) ನಂತೆ 33 ಕಾರು ಖರೀದಿಗೆ ಒಟ್ಟು 9.90 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಸರ್ಕಾರ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ (Toyota Kirloskar Motor PVT Ltd) ಕಂಪನಿಯಿಂದ ನೇರವಾಗಿ ಕಾರು ಖರೀದಿಸಲಿದೆ. ಇದನ್ನೂ ಓದಿ: ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಬೆಲೆ 158 ರೂ. ಇಳಿಕೆ
2022ರ ಡಿಸೆಂಬರ್‌ನಲ್ಲಿ ಈ ಕಾರು ದೇಶದ ಮಾರುಕಟ್ಟೆಗೆ 8 ವಿವಿಧ ಮಾದರಿಯಲ್ಲಿ ಬಿಡುಗಡೆಯಾಗಿದೆ. 18.30 ಲಕ್ಷ ರೂ.ನಿಂದ ಆರಂಭಗೊಂಡು ಟಾಪ್ ಮಾಡೆಲ್ ಕಾರಿಗೆ 30.26 ಲಕ್ಷ ದರ ಇದೆ. ಇದು ಎಕ್ಸ್ ಶೋ ರೂಮ್ ಬೆಲೆಯಾಗಿದ್ದು ಜೆಎಸ್‌ಟಿ, ರಸ್ತೆ ತೆರಿಗೆ ಸೇರಿದಾಗ ಜಾಸ್ತಿಯಾಗುತ್ತದೆ.
ಇನ್ನೋವಾ ಹೈಕ್ರಾಸ್ ಹೈಬ್ರಿಡ್ ಕಾರು 4,755 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,795 ಎಂಎಂ ಎತ್ತರವನ್ನು ಹೊಂದಿದೆ.
ಮೈಸೂರು: ಜಿಲ್ಲೆಯ ಕುರುಬೂರು (Kuruburu Accident) ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಉಳಿದಂತೆ ಇಬ್ಬರು ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಗಾಯಾಳು ಶಶಿಕುಮಾರ್ ಹಾಗೂ ಜನಾರ್ಧನ್‍ಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಶಶಿಕುಮಾರ್ ಸ್ಥಿತಿ ಗಂಭೀರವಾಗಿದೆ. ಇನ್ನು ಕಾರಿನಲ್ಲಿದ್ದ ಮಗು ಪುನೀತ್ ಹಾಗೂ ಬಸ್‍ನಲ್ಲಿದ್ದ ಮಗುವಿಗೆ ಕೂಡ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದ 10 ಮಂದಿಯ ಮೃತದೇಹಗಳನ್ನು ಆಸ್ಪತ್ರೆ ಸಿಬ್ಬಂದಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಬಳ್ಳಾರಿಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಮಂಜುನಾಥ್ (35), ಪೂರ್ಣಿಮಾ (30), ಪವನ್ (10), ಕಾರ್ತಿಕ್ (8), ಸಂದೀಪ್ (24), ಸುಜಾತ (40), ಕೊಟ್ರೇಶ್ (45), ಗಾಯಿತ್ರಿ (35), ಶ್ರೇಯಾ (3) ಮೃತದೇಹ ಕುಟುಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ನಡೆದಿದ್ದೇನು..?: ಮೈಸೂರಿಗೆ ರೈಲಿನಲ್ಲಿ ಬಂದಿದ್ದ ಸಂಗನಕಲ್ಲು ಗ್ರಾಮದ ಮೂರು ಕುಟುಂಬಗಳ ಮಂದಿ ಬೆಳಗ್ಗೆ ಇನ್ನೋವಾ ಕಾರು (Innova Car) ಬಾಡಿಗೆ ಮಾಡಿಕೊಂಡು ಚಾಮುಂಡಿ ಬೆಟ್ಟ, ಬಿಆರ್ ಹಿಲ್ಸ್‍ಗೆ ತೆರಳಿದ್ರು. ಅಲ್ಲಿಂದ 5 ಗಂಟೆಯ ರೈಲು ಹತ್ತಲು ಮೈಸೂರಿಗೆ ವಾಪಸ್ ಆಗುವಾಗ ಪಿಂಜಾರಪೋಲ್ ಸಮೀಪದ ತಿರುವಿನಲ್ಲಿ ಈ ದುರಂತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಇಡೀ ಇನ್ನೋವಾ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪ್ಪಚ್ಚಿಯಾದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹರಸಾಹಸ ಮಾಡಿ ಹೊರತೆಗೆಯಬೇಕಾಯಿತು. ಇದನ್ನೂ ಓದಿ: ಮೈಸೂರು ಬಳಿ ರಸ್ತೆ ಅಪಘಾತಕ್ಕೆ 10 ಬಲಿ – ಪರಿಹಾರ ಘೋಷಿಸಿದ ಸಿಎಂ
ಅಪಘಾತದ ದೃಶ್ಯ ಬಸ್‍ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದುರಂತಕ್ಕೆ ಟೋಲ್ ಮತ್ತು ಲೋಕೋಪಯೋಗಿ ಇಲಾಖೆಯೇ ನೇರ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಟೋಲ್ ವಸೂಲಿ ಮಾಡ್ತಾರೆ. ಆದರೆ ತಿರುವಿನಲ್ಲಿ ಒಂದು ಸೂಚನಾ ಫಲಕವನ್ನು ಅಳವಡಿಸಿಲ್ಲ. ಗಿಡಗಂಟೆಗಳನ್ನು ತೆರವು ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಂಗನಕಲ್ಲಿನಲ್ಲಿ ಮೃತರ ಬಂಧುಗಳ ಆಕ್ರಂದನ ಮುಗಿಲುಮುಟ್ಟಿದೆ. ಈ ಮಧ್ಯೆ, ದುರಂತಕ್ಕೆ ಪ್ರಧಾನಿ ಮೋದಿ (Narendra Modi) ಸಿಎಂ ಸಿದ್ದರಾಮಯ್ಯ (Siddaramaiah) ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ರಾಷ್ಟ್ರಪತಿ ಮುರ್ಮು (Droupadi Murmu) ಅವರು ಸಂತಾಪ ಸೂಚಿಸಿದ್ದಾರೆ.
ತುಮಕೂರು: ಇನ್ನೋವಾ ಕಾರು (Innova Car) ಹಾಗೂ ಆಟೋ (Auto Rikshaw) ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಬಾಲಕ ಸಾವನ್ನಪ್ಪಿ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೃತ ದುರ್ದೈವಿ ಬಾಲಕನನ್ನು ವರ್ಷಿತ್ ರೆಡ್ಡಿ(14) ಎಂದು ಗುರುತಿಸಲಾಗಿದೆ. ಪಾವಗಡ ತಾಲೂಕಿನ ಟಿ.ಎನ್.ಪೇಟೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪೆನಗೊಂಡದಿಂದ ಚಿತ್ರದುರ್ಗ ಕಡಗೆ ಹೋಗುತ್ತಿದ್ದ ಕಾರು, ರೊದ್ದಂ ಗ್ರಾಮದಿಂದ ಪಾವಗಡ ಕಡೆಗೆ ಬರುತ್ತಿದ್ದ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಮಡಿಕೇರಿ: ಜಿಟಿಜಿಟಿ ಮಳೆಯೊಂದಿಗೆ ಮಂಜು ಕವಿದ ವಾತಾವರಣದ ಹಿನ್ನೆಲೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಂಟಿಕೊಪ್ಪ ಪನ್ಯದ ಆನಂದ ಬಸಪ್ಪ ತೋಟದ ವ್ಯವಸ್ಥಾಪಕ ಜಾವಮನೆ ಮುಸ್ತಾಫ (47) ಎಂಬವರೇ ಮೃತಪಟ್ಟವರು. ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ಇನ್ನೋವಾ ಕಾರು ಹಾಗೂ ಕುಶಾಲನಗರದಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಎಕ್ಸ್-ಯುವಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ
ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿವೆ. ಇನ್ನೋವಾ ಕಾರಿನಲ್ಲಿದ್ದ ಜಾವಮನೆ ಮುಸ್ತಫಾ ಅವರ ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆಯಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದನ್ನೂ ಓದಿ: ಟ್ರ್ಯಾಕ್ಟರ್ ಸ್ಪೀಕರ್ ಸೌಂಡ್ ಕಡಿಮೆ ಮಾಡಿ ಎಂದಿದ್ದಕ್ಕೆ ಸ್ವಾಮೀಜಿ ಮೇಲೆಯೇ ಹಲ್ಲೆ
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರೀ ಮಳೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರಿಂದ ವೈದ್ಯ ಡಾ. ರಮೇಶ್ ಪ್ರಾಣಬಿಟ್ಟಿದ್ದಾರೆ. ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಈ ವೇಳೆ ಶಾಸಕ ಡಿ ಎಸ್ ಸುರೇಶ್ ಅವರು ಅದೇ ದಾರಿಯಲ್ಲಿ ಲಕ್ಕವಳ್ಳಿಯಿಂದ ತರೀಕೆರೆಗೆ ಬರ್ತಿದ್ದರು. ಅಪಘಾತ ಕಂಡ ಶಾಸಕರು, ಇನ್ನೋವಾ ಕಾರಿನಲ್ಲೇ ಕೂತು ನೋಡಿದ್ದಾರೆ. ಬಳಿಕ ಶಾಸಕರ ಗನ್‍ಮ್ಯಾನ್ ಅಂಬುಲೆನ್ಸ್ ಕರೆ ಮಾಡಿದ್ದಾರೆ. ಅಂಬುಲೆನ್ಸ್ ಬರೋವರೆಗೂ ಶಾಸಕರು ಮಾತ್ರ ಕಾರಿನಲ್ಲೇ ಕುಳಿತಿದ್ದು, ವೈದ್ಯರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದೇ ಉಡಾಫೆ ತೋರಿದ್ದಾರೆ.
ಘಟನೆ ನಡೆದು 20 ನಿಮಿಷದ ಬಳಿಕ ಗಾಯಾಳು ವೈದ್ಯರನ್ನು ಅಂಬುಲೆನ್ಸ್ ನಲ್ಲಿ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೀಗಾಗಿ ತಡವಾಗಿದ್ದರಿಂದ ರಸ್ತೆ ಮಧ್ಯೆಯೇ ಡಾ. ರಮೇಶ್ ಪ್ರಾಣ ಬಿಟ್ಟಿದ್ದಾರೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದ ಶಾಸಕರು ಕಾರಲ್ಲಿ ಕರೆದುಕೊಂಡು ಹೋಗಿದ್ದರೆ ವೈದ್ಯರ ಪ್ರಾಣ ಉಳಿಯುತ್ತಿತ್ತು. ಯಾಕಂದರೆ ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಕಾರಲ್ಲಿ ಮೂರ್ನಾಲ್ಕು ನಿಮಿಷದ ದಾರಿ ಅಷ್ಟೆ ಇತ್ತು.
ಒಟ್ಟಿನಲ್ಲಿ ಅಮಾನವೀಯತೆ ತೋರಿದ್ದರಿಂದ ಶಾಸಕರು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಇನ್ನೋವಾ ಕಾರು ನುಗ್ಗಿದ ಘಟನೆ ವಿಜಯಪುರ ಜಿ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಇನ್ನೋವಾ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಇಂದು ನಸುಕಿನ ಜಾವ ಘಟನೆ ನಡೆದಿದ್ದು, ಮಾರುತಿ ಹೊಸೂರ(30) ಸಾವಿಗೀಡಾದ ಯುವಕ ಎಂದು ತಿಳಿದು ಬಂದಿದೆ.
ಮಾರುತಿ ಮುದ್ದೇಬಿಹಾಳ ಪಟ್ಟಣ ನಿವಾಸಿ ಎನ್ನಲಾಗಿದ್ದು, ಗಾಯಾಳುಗಳನ್ನ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೈಕಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸುಮಾರು 40 ಅಡಿ ಎತ್ತರದ ಫ್ಲೈಓವರ್ ರಸ್ತೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ತುಮಕೂರು ಕಡೆ ಬರುವ ವೇಳೆ ವೇಗವಾಗಿ ಬಂದ ಇನ್ನೋವಾ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕಿನಲ್ಲಿದ್ದ ಆಂಧ್ರ ಮೂಲದ 25 ವರ್ಷದ ಸಂಜಯ್ ಕುಮಾರ್ ಫ್ಲೈಓವರ್ ರಸ್ತೆಯಿಂದ 40 ಅಡಿ ಕೆಳಗೆ ಬಿದ್ದ ವೇಳೆ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ನರಳಾಡಿ ಸಾವನ್ನಪ್ಪಿದ್ದಾನೆ.
ಬೈಕಿನಲ್ಲಿ ಹಿಂಬದಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದು, ಬೈಕ್ ಸವಾರ ಸಂಜಯ್ ಕುಮಾರ್ ಕೆಳಗೆ ಬೀಳುವ ವೇಳೆ ಆತನ ಹೆಲ್ಮೆಟ್ ಕೆಳಗೆ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಪಘಾತದ ವೇಳೆ ಜನರು ಧಾವಿಸುವ ದೃಶ್ಯ ಕೂಡ ಸೆರೆಯಾಗಿದೆ. ಸದ್ಯ ಇನ್ನೋವಾ ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ: ಇನ್ನೋವಾಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಾಯಗೊಂಡಿರುವ ಘಟನೆ ನಡೆದಿದೆ.
ಶೈಲಜಾ ಅಪಘಾತದಲ್ಲಿ ಗಾಯಗೊಂಡ ಯುವತಿ. ಶೈಲಜಾ ಕುಶಾಲನಗರ ಸಮೀಪದ ಕೂಡುಮಂಗಳೂರು ನವಗ್ರಾಮದ ಅಕ್ಕಿಮಂಟಿ ಎಂಬಲ್ಲಿನ ಚಂದ್ರ ಎಂಬವರ ಪುತ್ರಿಯಾಗಿದ್ದು, ಕೊಪ್ಪದ ಹಾರ್ಡ್ ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಶೈಲಜಾ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಮನೆಯಲ್ಲಿ ತುರ್ತು ಕೆಲಸವಿದೆ ಎಂದು ಹೇಳಿ ಎಂದಿಗಿಂತ ಬೇಗ ಮನೆ ಕಡೆಗೆ ಕೆ.ಎ. 12 ಕ್ಯೂ 2358 ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾರೆ. ಮಧ್ಯಾಹ್ನ 3.20ಕ್ಕೆ ಮಾರ್ಗಮಧ್ಯದಲ್ಲಿ ಕುಶಾಲನಗರ ನಕ್ಷತ್ರ ಹೊಟೇಲ್ ಮುಂಭಾಗದಲ್ಲಿ ಇನ್ನೋವಾ ಕಾರೊಂದು ಎದುರಾಗಿದೆ.
ತನಗಿಂತ ಮುಂದಿದ್ದ ವಾಹನವೊಂದನ್ನು ಹಿಂದಿಕ್ಕುವ ಭರಾಟೆಯಲ್ಲಿ ಶೈಲಜಾ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಇನ್ನೋವಾದ ಮುಂಭಾಗಕ್ಕೆ ಅಪ್ಪಳಿಸಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಶೈಲಜಾರವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈ: ಇನ್ನು ನಿರ್ಮಾಣವಾಗದ ಫ್ಲೈಓವರ್ ನಿಂದ ಟೊಯೋಟಾ ಇನ್ನೋವಾ ಕಾರು ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಗುರುವಾರ ರಾತ್ರಿ ಇಲ್ಲಿನ ರೆಡ್ ಹಿಲ್ಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ನಿಂದ ಕಾರು 30 ಅಡಿ ಗಾಳಿಯಲ್ಲಿ ಹಾರಿ ಕೆಳಗಿದ್ದ ಮಳೆ ನೀರು ತುಂಬಿದ್ದ ಹಳಕ್ಕೆ ಬಿದ್ದಿತ್ತು.
ವರದಿಯ ಪ್ರಕಾರ ಕುಟುಂಬವೊಂದು ಶ್ರೀಪೆರಂಬುದುರ್‍ನಿಂದ ಕಾರ್ ಬಾಡಿಗೆಗೆ ಪಡೆದಿದ್ದು, ನಿಶ್ಚಿತಾರ್ಥ ಸಮಾರಂಭಕ್ಕಾಗಿ ಮುಂಜೂರ್‍ಗೆ ಪ್ರಯಾಣಿಸುತ್ತಿದ್ದರು. ರಾತ್ರಿ 9.30ರ ಸುಮರಿಗೆ ಚಾಲಕ ಫ್ಲೈಓವರ್ ನಿರ್ಮಾಣ ಪೂರ್ಣವಾಗಿಲ್ಲ ಎಂಬುದನ್ನ ಅರಿಯದೇ ಅದರ ಮೇಲೆ ಬಂದಿದ್ದು, ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲೆ ಬ್ಯಾರಿಕೇಡ್ ಕೂಡ ಹಾಕಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಉಳಿದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಪಳನಿ(65), ಪತ್ನಿ ನವನೀತಂ(55) ಹಾಗೂ ಮಗಳು ಪವಿತ್ರಾ(26) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಅಳಿಯ ಕೂಡ ಇದ್ದು, ಅವರೂ ಚಾಲಕನಂತೆ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.