Tag: ಇನ್ವೆಸ್ಟ್ ಕರ್ನಾಟಕ 2025

  • ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ

    ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ

    ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ (Karnataka) ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ (Investment) ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು. ಇದನ್ನೂ ಓದಿ : ರಕ್ಷಣಾ ಒಪ್ಪಂದ – ಭಾರತಕ್ಕೆ ಅಮೆರಿಕದ F-35 ಯುದ್ಧ ವಿಮಾನ

    ಅರಮನೆ ಮೈದಾನದಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ 2025 (Invest Karnataka 2025) ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, ಚರ್ಚೆಗಳು ನಡೆದಿವೆ. ನೀವೆಲ್ಲರೂ ಕರ್ನಾಟಕ ರಾಜ್ಯದಲ್ಲಿ ಸೋಲುವ ಮಾತಿಲ್ಲ. ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ. ಈ ಸಮಾವೇಶದಲ್ಲಿ ಭಾಗವಹಿಸಿದ ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವ ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ ಎಂದರು.

    ನಿಮ್ಮ ಕರ್ನಾಟಕ ರಾಜ್ಯ ಹಾಗೂ ದೇಶದ ಭವಿಷ್ಯಕ್ಕಾಗಿ ನೀವು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಇದು ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಮಾತ್ರವಲ್ಲ ಬೆಂಗಳೂರಿನ ಹೊರತಾಗಿ ಪ್ರಗತಿ ಸಾಧಿಸಲು ನಾವು ಗುರಿ ಹೊಂದಿದ್ದೇವೆ. ನಮ್ಮ ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದಲ್ಲಿ ನಮ್ಮ ಎಂಎಸ್‌ಎಂಇಗಳು ದೊಡ್ಡ ಶಕ್ತಿ ತುಂಬುತ್ತಿವೆ. ಬಾಹ್ಯಾಕಾಶ ಕ್ಷೇತ್ರದ ಸಾಧನೆಗೆ ರಾಕೆಟ್‌ಗಳನ್ನು ನಮ್ಮ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ ತಯಾರು ಮಾಡಿದ್ದೆವು ಎಂದು ಹೇಳಿದರು.

    ನೆಹರೂ ಅವರ ಕಾಲದಿಂದ ದೊಡ್ಡ ಕೈಗಾರಿಕೆಗಳು ಆರಂಭವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿವೆ. ದೇಶದ ದೊಡ್ಡ ಕಂಪನಿಗಳು ನಮ್ಮ ರಾಜ್ಯದ ನೀತಿಗಳು, ಸ್ನೇಹ ಸಂಬಂಧವನ್ನು ಮೆಚ್ಚಿ ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ನಾವೆಲ್ಲರೂ ಒಟ್ಟಾಗಿ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ. ಈ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷ ಕೋಟಿ ರೂ. ಗುರಿ ಹೊಂದಿದೆ. ನಮ್ಮ ನೂತನ ಕೈಗಾರಿಕಾ ನೀತಿಯು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಅಂತ ಭರವಸೆ ನೀಡಿದರು.

    ಸಚಿವ ಹೆಚ್.ಕೆ.ಪಾಟೀಲ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಪ್ರವಾಸೋದ್ಯಮ ನೀತಿ ಪ್ರಕಟಿಸಿದೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ 300 ಕಿ.ಮೀ ಕರಾವಳಿ ಪ್ರದೇಶವಿದ್ದು, ಈ ಭಾಗದಲ್ಲಿ ನಮ್ಮ ಐತಿಹಾಸಿಕ ಸ್ಥಳಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ಸಮಾವೇಶ ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ವ್ಯಾಪಾರ ವ್ಯವಹಾರ ಮಾಡುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಾವು ದೇಶದ ಇತರೆ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಇದು ನಮ್ಮ ಸಾಮರ್ಥ್ಯ ಎಂದು ತಿಳಿಸಿದರು. ಇದನ್ನೂ ಓದಿ :ಬೆಂಗಳೂರು | 5 ಕೋಟಿ ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್‌ಗೆ ಬಿಬಿಎಂಪಿ ಪ್ಲ್ಯಾನ್‌!

    ಈ ದೇಶದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಿಸಿದ್ದೆ ಎಸ್.ಎಂ ಕೃಷ್ಣ ಅವರ ಸರ್ಕಾರ ಕರ್ನಾಟಕದಲ್ಲಿ. ಈ ಸಮಾವೇಶ ಕೇವಲ ಆರಂಭವಷ್ಟೇ, ಇಲ್ಲಿಂದ ನಿಮಗೆ ಅವಕಾಶಗಳು ತೆರೆದುಕೊಳ್ಳಲು ಆರಂಭವಾಗುತ್ತವೆ. ವರ್ಷದ 365 ದಿನಗಳು ಕೂಡ ನಿಮಗಾಗಿ ನಾವು ಬಾಗಿಲು ತೆರೆದಿರುತ್ತೇವೆ. ನೀವು ಯಾವಾಗ ಬಂದರೂ ನಾವು ನಿಮಗೆ ಅಗತ್ಯ ನೆರವು ನೀಡಿ ನಿಮ್ಮ ಪ್ರಗತಿ, ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಈ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ನಾನು ಅಭಿನಂದನೆ ಎಂದು ಕೃತಜ್ಞತೆ ಸಲ್ಲಿಸಿದರು.

  • ಇನ್ವೆಸ್ಟ್‌ ಕರ್ನಾಟಕಕ್ಕೆ 2ನೇ ದಿನವೂ ಭರ್ಜರಿ ರೆಸ್ಪಾನ್ಸ್‌ – ವಿಜಯಪುರದಲ್ಲಿ 3,000 ಮೆಗಾವಾಟ್ ವಿದ್ಯುತ್ ಉತ್ಪಾದನಾ ಘಟಕಕ್ಕೆ ಒಪ್ಪಂದ

    ಇನ್ವೆಸ್ಟ್‌ ಕರ್ನಾಟಕಕ್ಕೆ 2ನೇ ದಿನವೂ ಭರ್ಜರಿ ರೆಸ್ಪಾನ್ಸ್‌ – ವಿಜಯಪುರದಲ್ಲಿ 3,000 ಮೆಗಾವಾಟ್ ವಿದ್ಯುತ್ ಉತ್ಪಾದನಾ ಘಟಕಕ್ಕೆ ಒಪ್ಪಂದ

    – ಕರ್ನಾಟಕವನ್ನ ಸುಸ್ಥಿರ ರಾಜ್ಯ ಮಾಡುವ ಉದ್ದೇಶವಿದೆ
    – 20 ಲಕ್ಷ ಉದ್ಯೋಗ ಸೃಷ್ಟಿ ಭರವಸೆ ನೀಡಿದ ಡಿಸಿಎಂ

    ಬೆಂಗಳೂರು: ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜೊತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ತಿಳಿಸಿದರು.

    ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಇನ್ವೆಸ್ಟ್ ಕರ್ನಾಟಕ 2025 ಕೇವಲ ಹೂಡಿಕೆ ಸಮಾವೇಶ ಮಾತ್ರವಲ್ಲ. ಇದು ಭವಿಷ್ಯವನ್ನು ರೂಪಿಸುವ ನಮ್ಮ ಸಹಯೋಗದ ಹಾಗೂ ಕೈಗಾರಿಕಾ ಪ್ರಗತಿ ಸಾಧಿಸುವ ವೇದಿಕೆ. ಇದು ಎಲ್ಲರನ್ನು ಒಳಗೊಂಡು ಪ್ರಗತಿಯನ್ನು ಖಾತರಿಪಡಿಸುವ ಕಾರ್ಯಕ್ರಮ ಎಂದರು.ಇದನ್ನೂ ಓದಿ: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ – ಜಮೀರ್

    ಇದು ತಕ್ಷಣದ ಲಾಭಕ್ಕಿಂತ ಹೆಚ್ಚಾಗಿ ದೀರ್ಘಾವಧಿಯ ಯೋಜನೆಗೆ ತಳಹದಿಯಾಗಿದೆ. ಇಂದು ಇಲ್ಲಿರುವ ಪ್ರತಿಯೊಂದು ನೀತಿ, ಸುಧಾರಣೆ ಕಾರ್ಯರೂಪಕ್ಕೆ ಬರಲಿದೆ. ನಾವು ಸುಲಭ ವ್ಯಾಪಾರ ವಾತಾವರಣ ಸೃಷ್ಟಿಸುವ ಬಗ್ಗೆ ಕೇವಲ ಮಾತನಾಡುವುದಿಲ್ಲ. ಅದನ್ನು ಮಾಡಿ ತೋರಿಸುತ್ತೇವೆ. ಏಕಗವಾಕ್ಷಿ ಮೂಲಕ ಅನುಮತಿ ಪ್ರಕ್ರಿಯೆ ಡಿಜಿಟಲೀಕರಣಗೊಳಿಸಲಾಗಿದ್ದು, ಕಾಲಮಿತಿಯಲ್ಲಿ ಪಾರದರ್ಶಕವಾಗಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು.

    ನೂತನ ನೀತಿ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ:
    ಮೂಲ ಸೌಕರ್ಯ ಒದಗಿಸಲು ವ್ಯವಸ್ಥೆ ರೂಪಿಸಲಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ ಎಂದು ರಾಜ್ಯ ಸರ್ಕಾರದ ಪರವಾಗಿ ಭರವಸೆ ನೀಡುತ್ತೇನೆ. ನಮ್ಮ ಸರ್ಕಾರ ಪ್ರಗತಿಪರ ಆಲೋಚನೆಗೆ ಬದ್ಧವಾಗಿದ್ದು, ಅತ್ಯುತ್ತಮ ಮೌಲ್ಯದ ಉದ್ಯೋಗ ಸೃಷ್ಟಿ, ಸರಬರಾಜು ಸರಪಳಿ ಸುಭದ್ರಗೊಳಿಸಿ, ತಂತ್ರಜ್ಞಾನ ಆಧಾರಿತ ಸಂಸ್ಥೆಗಳನ್ನು ರೂಪಿಸುವುದು ನಮ್ಮ ಕಾರ್ಯತಂತ್ರವಾಗಿದೆ. ಮಂಗಳವಾರ ಪ್ರಕಟಿಸಲಾದ ಕರ್ನಾಟಕ ಕೈಗಾರಿಕಾ ನೀತಿ 2025-30 ಎಲ್ಲರನ್ನು ಒಳಗೊಂಡು ಪ್ರಗತಿ ಸಾಧಿಸುವ ದೂರದೃಷ್ಟಿ ಹೊಂದಿದೆ. ಇದರಿಂದ ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಗುರಿ ಇದೆ ಎಂದರು.

    ನಾವು ಈಗಾಗಲೇ ಬಂಡವಾಳ ಹೂಡಿಕೆಯಲ್ಲಿ ಸಬ್ಸಿಡಿ ಸೇರಿದಂತೆ ಅನೇಕ ಆಕರ್ಷಕ ಅವಕಾಶಗಳನ್ನು ನೀಡಿದ್ದು, ಉದ್ಯೋಗ ಸೃಷ್ಟಿ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿರುದ್ಯೋಗ ಸಮಸ್ಯೆ, ಪರಿಸರ ಮಾಲಿನ್ಯ ಸೇರಿದಂತೆ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ನೀಡುವ ಉದ್ದೇಶವಿದೆ ಎಂದು ತಿಳಿಸಿದರು.ಇದನ್ನೂ ಓದಿ: ಘಜ್ನಿಯಿಂದ ಧ್ವಂಸ – ಈಗ ಮತ್ತೆ ಸೋಮನಾಥದಲ್ಲಿ ಪುನರ್ ಪ್ರತಿಷ್ಠೆಯಾಗಲಿದೆ ಜ್ಯೋತಿರ್ಲಿಂಗ!

    ಬೆಂಗಳೂರಿನ ಹೊರಗೆ ಉದ್ಯಮ ಸ್ಥಾಪಿಸಿ:
    ನೀವೆಲ್ಲರೂ ಬೆಂಗಳೂರಿನ ಹೊರತಾಗಿ ರಾಜ್ಯದ ಇತರೆ ಭಾಗಗಳಲ್ಲಿ ಉದ್ಯಮ ಸ್ಥಾಪಿಸಲು ಮುಂದಾಗಬೇಕು. ನಾನು 20 ವರ್ಷಗಳ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1.10 ಕೋಟಿ ವಾಹನಗಳ ಸಂಖ್ಯೆ ಇದೆ. ಬೆಂಗಳೂರಿನಲ್ಲಿ ಸಂಚಾರ ಸಮಸ್ಯೆ ಬಗೆಹರಿಸಲು 1 ಲಕ್ಷ ಕೋಟಿಯಷ್ಟು ಹಣ ವೆಚ್ಚಮಾಡಲು ಮುಂದಾಗಿದ್ದೇವೆ. ಬೆಂಗಳೂರು ಬಿಸಿನೆಸ್ ಕಾರಿಡಾರ್ ಯಶಸ್ಸು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಹಕಾರದ ಭರವಸೆ ಕೊಡಬೇಕು:
    ರಾಜ್ಯದಲ್ಲಿ ನಿರ್ಮಿಸಲಾಗಿರುವ ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಅವರು ಅತ್ಯುತ್ತಮ ಸಹಕಾರ ನೀಡಿದ್ದರು. ನಾನು ರೂಪಿಸಿದ ಪರಿಕಲ್ಪನೆಯಲ್ಲಿ ರೈತರಿಂದ ಒಂದೇ ಒಂದು ಎಕರೆ ಜಮೀನನ್ನು ಖರೀದಿ ಮಾಡದೇ 15 ಸಾವಿರ ಎಕರೆಯಲ್ಲಿ ಈ ಸೋಲಾರ್ ಪಾರ್ಕ್ ನಿರ್ಮಿಸಲಾಗಿದೆ. ಈ ಯೋಜನೆಯನ್ನು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ವಿದ್ಯುತ್ ಉತ್ಪಾದಕರು ಹಾಗೂ ರೈತರ ಸಹಯೋಗದಲ್ಲಿ ರೂಪಿಸಲಾಗಿದೆ. ಆಗಿನ ಕಾಲದಲ್ಲಿ ರೈತರ ಭೂಮಿಯ ಬೆಲೆ ಕೇವಲ 15 ಸಾವಿರ ರೂ. ಇತ್ತು ಆದರೆ ಈ ಯೋಜನೆಯಿಂದ ರೈತರು ಪ್ರತಿ ವರ್ಷ ಬಾಡಿಗೆ ರೂಪದಲ್ಲಿ 25 ಸಾವಿರ ರೂ. ಹಣವನ್ನು ಪಡೆಯುತ್ತಿದ್ದಾರೆ. 28 ವರ್ಷಗಳ ಕಾಲ ಈ ಹಣ ಪಡೆಯಲಿದ್ದಾರೆ. ನಮ್ಮ ಯೋಜನೆ ಯಶಸ್ಸಿನ ನಂತರ ಕೇಂದ್ರ ಸರ್ಕಾರ ಕರ್ನಾಟಕ ಮಾಡೆಲ್ ಅನುಸರಿಸುವಂತೆ ಇಡೀ ದೇಶಕ್ಕೆ ಕರೆ ನೀಡಿತು. ಈ ಯೋಜನೆಯಿಂದ ವಿದ್ಯುತ್ ಟ್ರಾನ್ಸ್ಮಿಷನ್‌ನಲ್ಲಿ ಆಗುತ್ತಿದ್ದ ನಷ್ಟ ತಪ್ಪಿಸಲಾಗಿದೆ.

    `ಭಾರತ ಮಂಟಪ’ ಅಂತಾರಾಷ್ಟ್ರೀಯ ಕೇಂದ್ರ ಸ್ಥಾಪನೆಯ ಕನಸು:
    ಕೇಂದ್ರ ಸಚಿವರು ನಮ್ಮ ರಾಜ್ಯಕ್ಕೆ ಈ ಹಿಂದೆ ನೀಡುತ್ತಿದ್ದಂತೆ ಹೆಚ್ಚಿನ ಸಹಕಾರ ನೀಡುವ ಭರವಸೆ ಕೊಟ್ಟು ಹೋಗಬೇಕು. ಸಚಿವರು ಬೆಂಗಳೂರಿನಲ್ಲಿ ಭಾರತ ಮಂಟಪ ಎಂಬ ಅತ್ಯುತ್ತಮ ಅಂತಾರಾಷ್ಟ್ರೀಯ ಕೇಂದ್ರ ಸ್ಥಾಪಿಸೋಣ, ಅದಕ್ಕಾಗಿ ಒಳ್ಳೆಯ ಜಾಗ ನೋಡಿ ಎಂದು ನನ್ನ ಕಿವಿಯಲ್ಲಿ ಹೇಳುತ್ತಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

    ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ 2ನೇ ದಿನವೂ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ವಿಜಯಪುರದಲ್ಲಿ 3,000 ಮೆಗಾವಾಟ್ ವಿದ್ಯುತ್ ಉತ್ಪಾದನಾ ಘಟಕ ಮತ್ತು ವಿಂಡ್ ಟರ್ಬೈನ್ ಬ್ಲೇಡ್ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್ ಕಂಪನಿ ಒಪ್ಪಂದ ಮಾಡಿಕೊಂಡಿದೆ.

    ವಿಜಯಪುರ ಅಥವಾ ಕಲಬುರಗಿಯಲ್ಲಿ ಪ್ರತಿ ದಿನ 800 ಟನ್ ಸಾಮರ್ಥ್ಯದ ಬಹುಬಗೆಯ ಬೇಳೆಕಾಳು ಸಂಸ್ಕರಣಾ ಘಟಕ ಸ್ಥಾಪಿಸಲು ವಿಂಗ್ಸ್- ವಿಟೆರಾ ಕಂಪನಿ ಬಂಡವಾಳ ತೊಡಗಿಸಲಿದೆ. ಇಂದು ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಎಂ ಬಿ ಪಾಟೀಲ್ ಚಾಲನೆ ನೀಡಿದ್ರು. ಹೂಡಿಕೆ ಸಮಾವೇಶದಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ.

    ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಈ ಬಾರಿ ಹೆಲಿಕಾಪ್ಟರ್ ಹೋಲುವ ಏರ್ ಟ್ಯಾಕ್ಸಿ ಎಲ್ಲರ ಗಮನ ಸೆಳೀತಿದೆ. ಇನ್ನು, ಇದೇ ಮೊದಲ ಬಾರಿಗೆ ಮೊದಲ ಬಾರಿಗೆ ರಾಜ್ಯದ ಬೆಳವಣಿಗೆ ಕೊಡುಗೆ ನೀಡಿದ 14 ಕಂಪನಿ, ವ್ಯಕ್ತಿಗಳನ್ನ ಸರ್ಕಾರ ಗೌರವಿಸಿದೆ. ಈ ಕ್ಷಣಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಸಾಕ್ಷಿಯಾದ್ರು. ಈ ಮಧ್ಯೆ, ಬೆಂಗಳೂರಲ್ಲಿ 2ನೇ ಏರ್‌ಪೋರ್ಟ್ ಮೆರಿಟ್ ಆಧಾರ್ ಮೇಲೆ ನಿರ್ಮಾಣ ಆಗಲಿದೆ.. ಡಿಕೆ ಶಿವಕುಮಾರ್, ಪರಮೇಶ್ವರ್ ಸೇರಿ ಯಾರ ಒತ್ತಡಕ್ಕೂ ಮಣಿಯಲ್ಲ ಎಂದು ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದ್ರು.ಇದನ್ನೂ ಓದಿ: ನಿಮ್ಮ ʻಪಬ್ಲಿಕ್‌ ಟಿವಿʼ 13ನೇ ವಾರ್ಷಿಕೋತ್ಸವ ಸಂಪನ್ನ

  • ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಎಂ.ಬಿ ಪಾಟೀಲ್

    ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಎಂ.ಬಿ ಪಾಟೀಲ್

    ಬೆಂಗಳೂರು: ಫೆ.11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Invest Karnataka 2025) 19 ದೇಶಗಳು ಭಾಗವಹಿಸಲಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (M.B Patil) ತಿಳಿಸಿದ್ದಾರೆ.

    ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್, ನಾರ್ವೆ, ಸ್ವಿಟ್ಜರ್‌ಲ್ಯಾಂಡ್, ತೈವಾನ್, ಜರ್ಮನಿ, ಆಸ್ಟ್ರೇಲಿಯಾ, ಡೆನ್ಮಾರ್ಕ್, ಪೋಲಂಡ್, ಇಟಲಿ, ಬ್ರಿಟನ್‌, ಸ್ಲೊವೆನಿಯಾ, ಬಹ್ರೇನ್ ಮತ್ತು ಸಿಂಗಪುರ ಭಾಗವಿಸಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಏರೊಸ್ಪೇಸ್‌, ನವೀಕರಿಸಬಹುದಾದ ಇಂಧನ, ಎಲೆಕ್ಟ್ರಾನಿಕ್ಸ್‌, ಸೆಮಿಕಂಡಕ್ಟರ್‌ ಮತ್ತು ಅತ್ಯಾಧುನಿಕ ತಯಾರಿಕೆ ವಲಯಗಳಲ್ಲಿ ಕರ್ನಾಟಕವು ಬಂಡವಾಳ ಹೂಡಿಕೆಗೆ ಮುಂಚೂಣಿಯಲ್ಲಿ ಇರುವುದನ್ನು ಜಾಗತಿಕ ಉದ್ಯಮ ಜಗತ್ತಿಗೆ ಸಮಾವೇಶದ ಮೂಲಕ ಪರಿಚಯಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪರಿಸರ ಸ್ನೇಹಿ ವಿದ್ಯುತ್‌ ಚಾಲಿತ ವಾಹನಗಳು, ಡಿಫೆನ್ಸ್‌, ಜೈವಿಕ ತಂತ್ರಜ್ಞಾನ, ಸಂಶೋಧನೆ ಹಾಗೂ ಅಭಿವೃದ್ಧಿ ಮತ್ತು ಗರಿಷ್ಠ ನಿಖರತೆಯ ಬಿಡಿಭಾಗ ತಯಾರಿಕಾ ವಲಯಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಮೇಲೆ ಫ್ಯೂಚರ್‌ ಆಫ್‌ ಇನ್ನೊವೇಷನ್‌ ಎಕ್ಸ್‌ಪೊ ಬೆಳಕು ಚೆಲ್ಲಲಿದೆ ಎಂದಿದ್ದಾರೆ.

    ರಾಜ್ಯದಲ್ಲಿನ ಎಸ್‌ಎಂಇ ಹಾಗೂ ನವೋದ್ಯಮಗಳ ಬೆಳವಣಿಗೆಗೆ ಸಮಾವೇಶವು ವೇಗ ನೀಡಲಿದೆ. ಡಿಜಿಟಲೀಕರಣ ಅಳವಡಿಸಿಕೊಳ್ಳಲು 2,000ಕ್ಕೂ ಹೆಚ್ಚು ಎಸ್‌ಎಂಇಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ. ಡಿಜಿಟಲ್‌ ಪರಿವರ್ತನೆಗೆ 100 ಎಸ್‌ಎಂಇಗಳಿಗೆ ಅಗತ್ಯ ನೆರವು ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ತಯಾರಿಕೆ ಹಾಗೂ ಪರಿಸರ ಸ್ನೇಹಿ ನವೋದ್ಯಮಗಳಿಗೆ ಉತ್ತೇಜನ ನೀಡಲು, ಜಾಗತಿಕ ನವೋದ್ಯಮ ಸವಾಲಿನ ವೆಂಚುರೈಸ್‌ನ 2ನೇ ಆವೃತ್ತಿಯು ಸಮಾವೇಶದ ಇನ್ನೊಂದು ಆಕರ್ಷಣೆ ಆಗಿರಲಿದೆ. ಮೂಲ ಸಲಕರಣೆ ತಯಾರಿಸುವ (ಒಇಎಂ) ದೊಡ್ಡ ಕಂಪನಿಗಳ ಜೊತೆಗೆ ವಹಿವಾಟು ಕುದುರಿಸಿಕೊಳ್ಳುವುದಕ್ಕೆ ಎಸ್‌ಎಂಇ-ಗಳಿಗೆ ನೆರವಾಗಲು ಕೃತಕ ಬುದ್ಧಿಮತ್ತೆ ಆಧಾರಿತ ಎಸ್‌ಎಂಇ ಕನೆಕ್ಟ್‌ ಅಂತರ್ಜಾಲ ತಾಣ ಅಭಿವೃದ್ಧಿಪಡಿಸಲಾಗಿದೆ. ರಾಜ್ಯದ ಕೈಗಾರಿಕಾ ಮುನ್ನೋಟ ಕಾರ್ಯಗತಗೊಳಿಸಲು ಹೊಸ ಕೈಗಾರಿಕಾ ನೀತಿ (2024-29) ಜಾರಿಗೊಳಿಸಲಾಗುತ್ತಿದೆ. ಅಲ್ಲದೇ ಹಣಕಾಸು ಹಾಗೂ ಹಣಕಾಸೇತರ ಉತ್ತೇಜನಾ ಕ್ರಮಗಳ ಮೂಲಕ ರಾಜ್ಯಕ್ಕೆ ಕಂಪನಿಗಳನ್ನು ಆಹ್ವಾನಿಸಲು ಇದು ನೆರವಾಗಲಿದೆ ಎಂದು ತಿಳಿಸಿದ್ದಾರೆ.

    ಬಂಡವಾಳ ಹೂಡಿಕೆ ಸುಲಲಿತಗೊಳಿಸಲು ಕೃತಕ ಬುದ್ಧಿಮತ್ತೆ ನೆರವಿನ ಏಕಗವಾಕ್ಷಿ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ. ಇದು ಭೂಮಿ ಹಂಚಿಕೆ, ಹೂಡಿಕೆದಾರರ ಕುಂದುಕೊರತೆ ನಿವಾರಣೆಗೆ ನೆರವಾಗಲಿದ್ದು, ಬಹುಭಾಷಾ ಚಾಟ್‌ಬೋಟ್‌ ಸೌಲಭ್ಯ ಒಳಗೊಂಡಿರಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಆನಂದ ಮಹೀಂದ್ರಾ, ಕುಮಾರ್‌ ಮಂಗಳಂ ಬಿರ್ಲಾ, ಕಿರಣ್‌ ಮಜುಂದಾರ್‌ ಶಾ, ಮಾರ್ಟಿನ್‌ ಲುಂಡ್‌ಸ್ಟೆಡ್ಟ್‌, ಜಾರ್ಜ್‌ ಪಪಂಡ್ರೆವು, ಆನ್‌ ಡಂಕಿನ್‌ ಮತ್ತು ಒಡೆ ಅಬೊಷ್‌ ಅವರು ಉದ್ದಿಮೆ, ತಂತ್ರಜ್ಞಾನ ಮತ್ತು ಕೈಗಾರಿಕಾ ಪರಿವರ್ತನೆ ಬಗ್ಗೆ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ.

    ಜಾಗತಿಕ ಪ್ರಮುಖ ಉದ್ದಿಮೆಗಳು ಮತ್ತು ವಿದೇಶಿ ಸರ್ಕಾರಗಳ ಪಾಲ್ಗೊಳ್ಳುವಿಕೆಯ ಫಲವಾಗಿ ರಾಜ್ಯದಲ್ಲಿ ವಿಪುಲ ಉದ್ಯೋಗ ಅವಕಾಶಗಳಿಗೆ ಉತ್ತೇಜನ ದೊರೆಯಲಿದೆ. ದುಡಿಯುವ ವರ್ಗದ ಕೌಶಲ ಅಭಿವೃದ್ಧಿಯಾಗಲಿದೆ. ತಂತ್ರಜ್ಞಾನವು ಸುಲಭವಾಗಿ ವರ್ಗಾವಣೆಯಾಗಲಿದೆ. ಇವೆಲ್ಲವುಗಳ ಫಲವಾಗಿ ಜಾಗತಿಕ ನಾವೀನ್ಯತಾ ಕ್ಷೇತ್ರದ ಜೊತೆಗಿನ ಕರ್ನಾಟಕದ ಬಾಂಧವ್ಯ ಗಮನಾರ್ಹವಾಗಿ ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

    ಸಮಾವೇಶದ ಬಗ್ಗೆ ಮಾಹಿತಿ ಹಾಗೂ ಹೆಸರು ನೋಂದಾಯಿಸಲು https://investkarnataka.co.in/gim2025/ ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

  • Invest Karnataka 2025 ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಕೆಶಿ

    Invest Karnataka 2025 ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಕೆಶಿ

    ಬೆಂಗಳೂರು: ಇನ್ವೆಸ್ಟ್ ಕರ್ನಾಟಕ 2025 (Invest Karnataka 2025) ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯದಲ್ಲಿ ಸುಮಾರು 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ ಸುಮಾರು 7 ಲಕ್ಷ ಕೋಟಿ ಬಂಡವಾಳದ ಹರಿವನ್ನು ದೃಢೀಕರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ತಿಳಿಸಿದರು.

    ಇನ್ವೆಸ್ಟ್ ಕರ್ನಾಟಕ 2025ರ ಕುರಿತು ವಿಧಾನಸೌಧದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತಾ ಪರಿಶೀಲನೆ ಸಭೆ ನಂತರ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಕಾರಿಗೆ ಬೆಂಕಿ – ಪಕ್ಕದಲ್ಲಿದ್ದ ಬೈಕ್ ಸುಟ್ಟು ಭಸ್ಮ

    60ಕ್ಕೂ ಹೆಚ್ಚು ಗಣ್ಯ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇವರು ನಾನಾ ವಿಚಾರಗಳನ್ನು ಹಂಚಿಕೊಳ್ಳಲಿದ್ದು, 2 ಸಾವಿರದಷ್ಟು ಹೂಡಿಕೆದಾರರು ಸಮಾವೇಶದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ. 18 ರಾಷ್ಟ್ರಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು, 9 ದೇಶಗಳು ತಮ್ಮ ಪೆವಿಲಿಯನ್ ಗಳನ್ನು ತೆರಯಲು ಮುಂದೆ ಬಂದಿದ್ದಾರೆ. 10 ದೇಶಗಳ ಉನ್ನತ ಮಟ್ಟದ ಕೈಗಾರಿಕಾ ವಲಯದ ನಾಯಕರು ತಾಂತ್ರಿಕ ವಲಯದ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ – ಹೆಚ್‌ಡಿಡಿ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ

    ಕರ್ನಾಟಕ ರಾಜ್ಯ ನೂತನ ಕೈಗಾರಿಕಾ ನೀತಿ 2025-30 ಅನ್ನು ಈ ಸಮಾವೇಶದಲ್ಲಿ ಘೋಷಣೆ ಮಾಡಲಾಗುವುದು. ದೇಶದ ಅನೇಕ ರಾಜ್ಯಗಳ ನೀತಿಗಳನ್ನು ಅಧ್ಯಯನ ಮಾಡಲಾಗಿದ್ದು, ಎಲ್ಲದಕ್ಕಿಂತ ಉತ್ತಮವಾದ, ಆಕರ್ಷಣೀಯವಾದ ನೀತಿಯನ್ನು ಪರಿಚಯಿಸಲಾಗುವುದು. ಜೊತೆಗೆ ಕ್ಲೀನ್ ಮೊಬಿಲಿಟಿ ನೀತಿ 2025-30 ಅನ್ನು ಅನಾವರಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಏಕಗವಾಕ್ಷಿ ಅನುಕೂಲತೆಯನ್ನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೂಡಿಕೆದಾರರು ಮತ್ತು ಖರೀದಿದಾರರ ನಡುವೆ ಹೊಂದಾಣಿಕೆ ಏರ್ಪಡಿಸುವ ಕೆಲಸ ಮಾಡಲಾಗುವುದು. 4 ಸಾವಿರ ಎಸ್‌ಎಂಇಗಳಿಗೆ ಇಲಾಖೆ ವತಿಯಿಂದ ತರಬೇತಿ ನೀಡಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ತಾಯಿ ಮಾಡಿದ ಕೃಷಿ ಸಾಲಕ್ಕೆ ಮನನೊಂದು ಮಗ ಆತ್ಮಹತ್ಯೆ

    ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ವಿತರಣೆ:
    ಅನೇಕ ಹೂಡಿಕೆದಾರರು ಬೆಂಗಳೂರು ಸೇರಿದಂತೆ ಹೊರಗಿನ ಜಿಲ್ಲೆಗಳಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಗೆ ಒತ್ತನ್ನು ನೀಡಿದ್ದಾರೆ. ಇವರಿಗೆ ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ನೀಡಲಾಗುವುದು. ನವೋದ್ಯಮಗಳ ಪ್ರತಿ ವಿಭಾಗಕ್ಕೆ ಒಟ್ಟು 1 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕೊಡುಗೆ ಏನು – ಪರಮೇಶ್ವರ್ ಪ್ರಶ್ನೆ

     

    ಸುಮಾರು 30ಕ್ಕೂ ಹೆಚ್ಚು ನವ ನವೀನ ರೀತಿಯ ಆಲೋಚನೆ ಹೊಂದಿರುವ ನವೋದ್ಯಮಗಳು ಕರ್ನಾಟಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿವೆ. ಸುಮಾರು 1 ಸಾವಿರಕ್ಕೂ ಹೆಚ್ಚು ನವೋದ್ಯಮಗಳಿಂದ ಪ್ರದರ್ಶನಕ್ಕೆ ಅರ್ಜಿಗಳು ಬಂದಿದ್ದವು. ಇವರಲ್ಲಿ ವಿನೂತನ ಚಿಂತನೆಗಳನ್ನು ಹೊಂದಿರುವ 45 ನವೋದ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ಇದನ್ನೂ ಓದಿ: ಮಹಾ ಕುಂಭಮೇಳ ಕಾಲ್ತುಳಿತದಲ್ಲಿ 1,000 ಜನ ಸಾವು – ಮಲ್ಲಿಕಾರ್ಜುನ ಖರ್ಗೆ ಬಾಂಬ್‌

    ಒಟ್ಟು 85 ಮಳಿಗೆಗಳು ಇರಲಿದ್ದು, ಇಲ್ಲಿ ವಸ್ತುಪ್ರದರ್ಶನಕ್ಕೆ, ಮಾಹಿತಿ ಸಂವಹನಕ್ಕೆ ಅವಕಾಶ ಕಲ್ಪಿಸಲಾಗುವುದು. ತಾಂತ್ರಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಸರ್ಕಾರ ಬೆಂಗಳೂರಿಗಿಂತ ಇತರೇ ಜಿಲ್ಲೆಗಳಲ್ಲಿ ಹೆಚ್ಚು ಬಂಡವಾಳ ಹೂಡಿಕೆಗೆ ಪ್ರೋತ್ಸಾಹ ನೀಡುತ್ತಿದೆ. ಬೆಂಗಳೂರಿಗಿಂತ ಹೊರಗಿನ ಜಿಲ್ಲೆಗಳಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಎಲ್ಲಾ ಹೂಡಿಕೆದಾರರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕರಡು ಬಿಲ್ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿ: ಪರಮೇಶ್ವರ್

    ಇದೇ ಫೆ.11 ರಿಂದ 14ರವರೆಗೆ ನಡೆಯುವ ಸಮಾವೇಶದ ಯಶಸ್ಸಿಗೆ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರ ನೇತೃತ್ವದ ತಂಡ ಸುಮಾರು 16 ದೇಶಗಳಿಗೆ ಭೇಟಿ ಮಾಡಿ ಅನೇಕರಿಗೆ ಆಹ್ವಾನ ನೀಡಿ ನಮ್ಮ ಕರ್ನಾಟಕದಲ್ಲಿರುವ ಮಾನವ ಸಂಪನ್ಮೂಲ, ಸಂಪತ್ತು ಸರ್ಕಾರದ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.11 ರಂದು ಉದ್ಘಾಟನೆಯಾದ ನಂತರ ಒಂದಷ್ಟು ಒಡಂಬಡಿಕೆಗಳಿಗೆ ಸಹಿ ಹಾಕುವ ಕಾರ್ಯಕ್ರಮವಿರಲಿದೆ ಎಂದರು. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು – ಆಸ್ಪತ್ರೆಗೆ ದಾಖಲು

    ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಮುನ್ನುಡಿ ಬರೆದಿದ್ದೇ ಕರ್ನಾಟಕ. ಮೊದಲನೇ ಬಾರಿ ವಿಧಾನಸೌಧದ ಬಾಂಕ್ವೆಂಟ್ ಹಾಲ್‌ನಲ್ಲಿ ಇದನ್ನು ನಡೆಸಲಾಗಿತ್ತು. ಇದನ್ನು ಗಮನಿಸಿದ ಅನೇಕ ರಾಜ್ಯಗಳು ಇದನ್ನು ಅನುಕರಣೆ ಮಾಡಿದ್ದವು. ಕರ್ನಾಟಕ ಸರ್ಕಾರದ ಮೇಲೆ ನಂಬಿಕೆಯನ್ನಿಟ್ಟು ಬರುತ್ತಿರುವ ಎಲ್ಲಾ ಹೂಡಿಕೆದಾರರಿಗೆ ಅಭಿನಂದನೆಗಳು. ಎಲ್ಲಾ ರೀತಿಯಲ್ಲಿಯೂ ಕರ್ನಾಟಕ ಪ್ರಜ್ವಲಿಸಲಿದೆ. ಉದ್ಯೋಗ ಸೃಷ್ಟಿ ಸೇರಿದಂತೆ ಉತ್ಪಾದನೆಗೆ ಅನುಕೂಲಕರ ವಾತಾವರಣ ಉಂಟಾಗಲಿದೆ ಎಂಬುದು ನಮ್ಮ ನಂಬಿಕೆ ಎಂದು ಹೇಳಿದರು. ಇದನ್ನೂ ಓದಿ: ʻಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು.. ಗೋವಿಂದ ಗೋವಿಂದ..ʼ – ಎಂ. ಲಕ್ಷ್ಮಣ್‌ ಲೇವಡಿ