Tag: ಇಫ್ತಾರ್ ಕೂಟ

  • ರಂಜಾನ್‌ ಪ್ರಯುಕ್ತ ಶ್ವೇತಭವನದಲ್ಲಿ ಇಫ್ತಾರ್ ಕೂಟ – ಟ್ರಂಪ್ ವಿರುದ್ಧ ಅಮೆರಿಕನ್‌ ಮುಸ್ಲಿಮರ ಆಕ್ರೋಶ

    ರಂಜಾನ್‌ ಪ್ರಯುಕ್ತ ಶ್ವೇತಭವನದಲ್ಲಿ ಇಫ್ತಾರ್ ಕೂಟ – ಟ್ರಂಪ್ ವಿರುದ್ಧ ಅಮೆರಿಕನ್‌ ಮುಸ್ಲಿಮರ ಆಕ್ರೋಶ

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರಾದ ಬಳಿಕ ಡೊನಾಲ್ಡ್‌ ಟ್ರಂಪ್‌ (Donald Trump) ಮೊದಲ ಬಾರಿಗೆ ರಂಜಾನ್‌ ಹಬ್ಬದ ಪ್ರಯುಕ್ತ ಇಫ್ತಾರ್‌ ಕೂಟ ಆಯೋಜಿಸಿದ್ದರು. ಆದ್ರೆ ಇಫ್ತಾರ್‌ ಕೂಟಗಳಲ್ಲಿ ಅಮೆರಿಕನ್‌ ಮುಸ್ಲಿಂ ಸಂಸದರು ಹಾಗೂ ಸಮುದಾಯದ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂದು ಟ್ರಂಪ್‌ ವಿರುದ್ಧ ಅಮೆರಿಕದ ಮುಸ್ಲಿಮರು (US Muslims) ಆಕ್ರೋಶ ಹೊರಹಾಕಿದ್ದಾರೆ.

    ಶ್ವೇತಭವನದಲ್ಲಿ ಇಫ್ತಾರ್‌ ಕೂಟ ಆಯೋಜಿಸಿದ್ದ ಟ್ರಂಪ್‌, ಇಸ್ಲಾಂ ಧರ್ಮದ ಪವಿತ್ರ ತಿಂಗಳು ರಂಜಾನ್ ಅನ್ನು ಆಚರಿಸುತ್ತಾ ಬಂದಿದ್ದೇವೆ. ಇದು ವಿಶ್ವದಾದ್ಯಂತ ಮುಸ್ಲಿಂ ಬಾಂಧವರಿಗೆ ಪುಣ್ಯ ಸಂಪಾದಿಸುವ ಮಾಸವಾಗಿದೆ. ಅದಕ್ಕಾಗಿ ವಿಶ್ವದ ಅತ್ಯುತ್ತಮ ಧರ್ಮಗಳಲ್ಲಿ ಒಂದಾಗಿರುವ ಮುಸ್ಲಿಂ ಧರ್ಮವನ್ನು ಗೌರವಿಸುತ್ತೇವೆ ಎಂದರಲ್ಲದೇ ಮುಸ್ಲಿಮರಿಗೆ ರಂಜಾನ್‌ ಪ್ರಯುಕ್ತ ಶುಭ ಕೋರಿದ್ದಾರೆ. ಇದನ್ನೂ ಓದಿ: ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಶ್ವೇತಭವನದಲ್ಲಿ ಇಫ್ತಾರ್ ಕೂಟ ಆಯೋಜಿಸುವುದಕ್ಕೆ ಎರಡು ದಶಕಗಳ ಹಿಂದಿನ ಸಂಪ್ರದಾಯವಿದೆ. ಈ ಬಾರಿ ಆಯೋಜಿಸಿದ್ದ ಇಫ್ತಾರ್‌ ಕೂಟ ವಿವಾದಕ್ಕೆ ಕಾರಣವಾಗಿದೆ. ಕೂಟದಲ್ಲಿ ಅಮೆರಿಕನ್‌ ಮುಸ್ಲಿಂ ಸಂಸದರು, ಸಮುದಾಯಕ್ಕೆ ಸಂಬಂಧಿಸಿದ ಮುಖಂಡರನ್ನು ಆಹ್ವಾನಿಸಿಲ್ಲ. ಬದಲಾಗಿ ಮುಸ್ಲಿಂ ರಾಷ್ಟ್ರಗಳ ವಿದೇಶಿ ರಾಯಭಾರಿಗಳನ್ನು ಇಫ್ತಾರ್‌ ಕೂಟಕ್ಕೆ ಆಹ್ವಾನಿಸಲಾಗಿತ್ತು ಎಂದು ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

    ಇಲ್ಲಿನ ಮುಸ್ಲಿಂ ನಾಗರಿಕ ಹಕ್ಕುಗಳ ಗುಂಪುಗಳು ಶ್ವೇತಭವನದ ಎದುರು ಪ್ರತಿಭಟನೆ ನಡೆಸಿದ್ದು ತೀವ್ರ ಅಸಮಾಧಾನ ಹೊರಹಾಕಿವೆ. ಇದು ಟ್ರಂಪ್‌ ಅವರ ಬೂಟಾಟಿಕೆ. ಒಂದೆಡೆ ಮಸ್ಲಿಂ ದೇಶಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮತ್ತೊಂದೆಡೆ ಇಫ್ತಾರ್‌ ಕೂಟ ಆಯೋಜಿಸುತ್ತಾರೆ ಎಂದು ಕಿಡಿ ಕಾರಿವೆ. ಇದನ್ನೂ ಓದಿ: ಭಾರತಕ್ಕಿಂತಲೂ ನಾವು ಹಿಂದಿದ್ದೇವೆ – ಚುನಾವಣಾ ವ್ಯವಸ್ಥೆಯನ್ನೇ ಬದಲಿಸಲು ಮುಂದಾದ ಟ್ರಂಪ್‌

    1996 ರಲ್ಲಿ ಅಂದಿನ ಯುಎಸ್ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ಅಧಿಕಾರಾವಧಿಯಲ್ಲಿ, ಶ್ವೇತಭವನದಲ್ಲಿ ಇಫ್ತಾರ್ ಕೂಟ ಪ್ರಾರಂಭಿಸಲಾಯಿತು, ಇದನ್ನು ನಂತರದ ಅಧ್ಯಕ್ಷರಾದ ಜಾರ್ಜ್ ಬುಷ್ ಮತ್ತು ಬರಾಕ್ ಒಬಾಮಾ ಕೂಡ ಮುಂದುವರಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಮುಸ್ಲಿಂ ಸಮುದಾಯದ ಗಣ್ಯರು ಹಾಗೂ ಮುಸ್ಲಿಂ ರಾಷ್ಟ್ರಗಳ ರಾಜತಾಂತ್ರಿಕರು ಮತ್ತು ಸೆನೆಟರ್‌ಗಳು ಭಾಗವಹಿಸುವುದು ಪದ್ಧತಿ. ಆದ್ರೆ ಟ್ರಂಪ್‌ ತಮ್ಮ ಮೊದಲ ಅಧ್ಯಕ್ಷೀಯ ಅವಧಿಯಲ್ಲಿ 2017ರಲ್ಲಿ ಶ್ವೇತಭವನದ ಇಫ್ತಾರ್‌ ಕೂಟವನ್ನು ರದ್ದುಗೊಳಿಸಿದ್ದರು. ಇದೀಗ ಮತ್ತೆ ಆಯೋಜಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಾಂಗ್ಲಾ ವಿಮೋಚನಾ ದಿನ – 1971ರ ಯುದ್ಧ ನೆನಪಿಸಿ ಯೂನುಸ್‌ಗೆ ಪತ್ರ ಬರೆದ ಪ್ರಧಾನಿ ಮೋದಿ

  • ಟೋಪಿ ತೊಟ್ಟು, ನಮಾಜ್‌ ಮಾಡಿ ಇಫ್ತಾರ್‌ ಕೂಟದಲ್ಲಿ ನಟ ವಿಜಯ್‌ ಭಾಗಿ – ‘ಕುಂಭಮೇಳಕ್ಕೆ ಹೋಗಿದ್ರಾ’ ಅಂತ ನೆಟ್ಟಿಗರು ಪ್ರಶ್ನೆ

    ಟೋಪಿ ತೊಟ್ಟು, ನಮಾಜ್‌ ಮಾಡಿ ಇಫ್ತಾರ್‌ ಕೂಟದಲ್ಲಿ ನಟ ವಿಜಯ್‌ ಭಾಗಿ – ‘ಕುಂಭಮೇಳಕ್ಕೆ ಹೋಗಿದ್ರಾ’ ಅಂತ ನೆಟ್ಟಿಗರು ಪ್ರಶ್ನೆ

    ಚೆನ್ನೈ: ತಮಿಳು ಸೂಪರ್‌ಸ್ಟಾರ್‌ ದಳಪತಿ ವಿಜಯ್‌ (Thalapathy Vijay) ಅವರು ರಂಜಾನ್‌ ಸಮಯದಲ್ಲಿ ‘ಇಫ್ತಾರ್‌’ (Iftar) ಕೂಟ ಆಯೋಜಿಸಿದ್ದರು. ಈ ವೇಳೆ, ಅವರು ಸ್ಕಲ್‌ ಕ್ಯಾಪ್‌ (ಮುಸ್ಲಿಮರ ಟೋಪಿ) ಧರಿಸಿರುವ ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

    ಚೆನ್ನೈನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್‌ ಅವರು ಚೆನ್ನೈನಲ್ಲಿ ಇಫ್ತಾರ್‌ ಕೂಟ ಆಯೋಜಿಸಿದ್ದರು. ಟೋಪಿ ತೊಟ್ಟು, ಮುಸ್ಲಿಂ ಬಾಂಧವರೊಂದಿಗೆ ನಮಾಜ್‌ ಮಾಡಿರುವ ಫೋಟೋಗಳು ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ಸ್‌ ಮಾಡಿದ್ದಾರೆ. ಇದನ್ನೂ ಓದಿ: ಯೂರೋಪ್‌, ಅಮೆರಿಕ, ದುಬೈಗೆ ನಿರಂತರ ಸುತ್ತಾಟ – ನಟಿ ರನ್ಯಾ ಟ್ರಾವೆಲ್‌ ಹಿಸ್ಟರಿ ಬಯಲು

    ‘ಅವರು ಕುಂಭಮೇಳಕ್ಕೆ ಭೇಟಿ ನೀಡಿದ್ದಾರಾ? ಇದು ಜಾತ್ಯತೀತತೆ ಅಥವಾ ಈ ಗೂಂಡಾಗಳಿಗೆ ಎಲ್ಲಾ ಧರ್ಮಗಳನ್ನು ಗೌರವಿಸುವ ಬಗ್ಗೆ ಕೇಳುತ್ತಿಲ್ಲ. ಇದು ಕೇವಲ ಸಮಾಧಾನಕ್ಕಾಗಿ. ನಾಚಿಕೆಗೇಡಿನ ಸಂಗತಿ’ ಎಂದು ನೆಟ್ಟಿಗರೊಬ್ಬರು ಕಾಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು, ‘ಅವರಿಗೆ ಈ ಆಟ ಚೆನ್ನಾಗಿ ತಿಳಿದಿದೆ’ ಎಂದು ಕಾಲೆಳೆದಿದ್ದಾರೆ.

    ‘ತಮಿಳುನಾಡಿನಲ್ಲಿ ಕೇವಲ ಶೇ.5 ರಷ್ಟು ಮುಸ್ಲಿಂ ಜನಸಂಖ್ಯೆ ಇದೆ. ಆದ್ದರಿಂದ ಯಾವುದೇ ಪಕ್ಷಕ್ಕೆ ಚುನಾವಣೆ ಗೆಲ್ಲಲು ಅವರ ಬೆಂಬಲ ಅಗತ್ಯವಿಲ್ಲ’ ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಮಾಸ್ಟರ್ ಆನಂದ್ ಪತ್ನಿಯ 2 ಕಾಲಿಗೆ ಬ್ಯಾಂಡೇಜ್- ಪೋಸ್ಟ್ ನೋಡಿ ಫ್ಯಾನ್ಸ್ ಶಾಕ್

    ‘ಇದು ತುಷ್ಟೀಕರಣ ರಾಜಕೀಯ. ಇದನ್ನು ಒಂದು ದಿನಕ್ಕಷ್ಟೇ ಯಾಕೆ ಸೀಮಿತಿಗೊಳಿಸಿಕೊಳ್ಳಬೇಕು? ಅವರು ಮುಸ್ಲಿಮರ ಭಾಗವಹಿಸುವಿಕೆಯ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ಯಾವಾಗಲೂ ಮತಗಳನ್ನು ಕೇಳುವತ್ತ ಗಮನಹರಿಸುತ್ತಾರೆ’ ಎಂದು ಮತ್ತೊಬ್ಬರು ಕಾಮೆಂಟ್‌ ಮಾಡಿದ್ದಾರೆ.

    ದಳಪತಿ ವಿಜಯ್‌ ಅವರು ಸಿನಿಮಾ ರಂಗವನ್ನು ಬಿಟ್ಟು ರಾಜಕೀಯದತ್ತ ಗಮನ ಹರಿಸಿದ್ದಾರೆ. ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಕಟ್ಟಿರುವ ಅವರು ರಾಜಕೀಯ ಜೀವನದಲ್ಲಿ ಸಕ್ರಿಯರಾಗಿದ್ದಾರೆ.

  • ಹೆಂಡ ಕುಡಿದ ಕೋತಿ ರೀತಿ ಪಾಕ್ ಆಡ್ತಿದೆ: ಶಿವಸೇನೆ

    ಹೆಂಡ ಕುಡಿದ ಕೋತಿ ರೀತಿ ಪಾಕ್ ಆಡ್ತಿದೆ: ಶಿವಸೇನೆ

    ಮುಂಬೈ: ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟಕ್ಕೆ ಅಡ್ಡಿಪಡಿಸಿ, ಪಾಕ್ ಹೆಂಡ ಕುಡಿದ ಕೋತಿಯಂತೆ ಆಡುತ್ತಿದೆ ಎಂದು ಶಿವಸೇನೆ ವಾಗ್ದಾಳಿ ನಡೆಸಿದೆ.

    ರಂಜಾನ್ ಹಬ್ಬದ ಪ್ರಯುಕ್ತ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‍ನಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಆದರೆ ಇದಕ್ಕೆ ಪಾಕ್ ಸೇನಾ ಸಿಬ್ಬಂದಿ ತಡೆಯುಂಟು ಮಾಡಿದ್ದು, ಪಾಕ್ ಹೆಂಡ ಕುಡಿದ ಕೋತಿಯಂತೆ ಆಡುತ್ತಿದೆ ಎಂದು ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ.

    ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ, ಪಾಕಿಸ್ತಾನದ ಸೇನಾ ಸಿಬ್ಬಂದಿ ಇಫ್ತಾರ್ ಕೂಟಕ್ಕೆ ಅಡ್ಡಿ ಪಡಿಸಿದ್ದಕ್ಕೆ ತೀವ್ರವಾಗಿ ಖಂಡಿಸಿ, ಪಾಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಪಾಕ್ ಸೇನೆಯನ್ನು ಮದ್ಯಪಾನ ಮಾಡಿದ ಕೋತಿಗಳಿಗೆ ಹೋಲಿಸಿದ್ದಾರೆ. ಹಾಗೆಯೇ ಪಾಕ್ ಕೋತಿಗಳು ಮಾಡಿದ ಈ ಅವಮಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಕಿಡಿಕಾರಿದ್ದಾರೆ.

    ಅಷ್ಟೇ ಅಲ್ಲದೆ, ಉಗ್ರ ಮಸೂದ್ ವಿಚಾರದಲ್ಲಿ ಪಾಕಿಸ್ತಾನ ದ್ವಂದ್ವ ನೀತಿ ಪಾಲಿಸುತ್ತಿದೆ. ನಮ್ಮ ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಭಿನಂದನೆ ತಿಳಿಸಿ, ಶಾಂತಿ ಸ್ಥಾಪನೆ ಮತ್ತು ಅಭಿವೃದ್ಧಿಗಾಗಿ ಜೊತೆಯಾಗಿ ಕೆಲಸ ಮಾಡೋಣ ಎಂದಿದ್ದಾರೆ. ಆದರೆ, ಪಾಕ್ ಸೇನಾ ಸಿಬ್ಬಂದಿ ಮಾತ್ರ ಇಂತಹ ಹೀನ ವರ್ತನೆ ತೋರಿಸಿದ್ದಾರೆ. ಇಫ್ತಾರ್ ಊಟಕ್ಕೆ ಬಂದ ಗಣ್ಯರಿಗೆ ಅಗೌರವ ತೋರಿದ್ದಾರೆ. ಇದು ಯಾವ ರೀತಿಯ ಶಾಂತಿ ಪಾಲನೆ ಎಂದು ಉದ್ಧವ್ ಠಾಕ್ರೆ ಪ್ರಶ್ನಿಸಿದ್ದಾರೆ.

    ಭಾರತದ ರಾಯಭಾರಿ ಕಚೇರಿ ವತಿಯಿಂದ ಇಫ್ತಾರ್ ಊಟಕ್ಕೆ ಪಾಕಿಸ್ತಾನದ ಗೌರವಾನ್ವಿತ ಪ್ರಜೆಗಳಿಗೆ ಆಹ್ವಾನ ನೀಡಲಾಗಿತ್ತೆ ಹೊರತು ಜೈಷ್-ಇ-ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಆಜಾದ್‍ಗೆ ಆಹ್ವಾನಿಸಿರಲಿಲ್ಲ ಎಂದು ಟಾಂಗ್ ಕೊಟ್ಟರು.

    ಭಾರತ ಪಠಾಣ್‍ಕೋಟ್, ಉರಿ, ಪುಲ್ವಾಮಾ ದಾಳಿಗಳ ಬಗ್ಗೆ ಪಾಕಿಸ್ತಾನಕ್ಕೆ ಸಾಕ್ಷ್ಯಗಳನ್ನು ನೀಡಿದ್ದರೂ ಪಾಕ್ ಮಾತ್ರ ಉಗ್ರರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪಾಕ್ ಉಗ್ರರನ್ನು ಉತ್ಪಾದಿಸುವ ಕಾರ್ಖನೆಯಾಗಿ ಮಾರ್ಪಟ್ಟಿದೆ ಎಂದು ಉದ್ಧವ್ ಠಾಕ್ರೆ ಕಿಡಿಕಾರಿದರು.

  • ಇಫ್ತಾರ್ ಕೂಟದ ಬದಲಿ ಸ್ನೇಹ ಕೂಟ ಆಯೋಜನೆ – ಪೇಜಾವರ ಶ್ರೀ

    ಇಫ್ತಾರ್ ಕೂಟದ ಬದಲಿ ಸ್ನೇಹ ಕೂಟ ಆಯೋಜನೆ – ಪೇಜಾವರ ಶ್ರೀ

    ಉಡುಪಿ: ಈ ಬಾರಿ ಬೇರೆ ಕಾರ್ಯಕ್ರಮಗಳು ನಿಗಧಿಯಾಗಿದ್ದರಿಂದ ಇಫ್ತಾರ್ ಕೂಟ ಏರ್ಪಡಿಸಲು ಸಾಧ್ಯವಾಗಿಲ್ಲ, ಬದಲಾಗಿ ಸ್ನೇಹ ಕೂಟವನ್ನು ಏರ್ಪಡಿಸಬಹುದು ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ.

    ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದರು. ಈ ವೇಳೆ ಶ್ರೀಗಳು ಹಬ್ಬದ ಶುಭಾಶಯವನ್ನು ಸಲ್ಲಿಸಿ ಫಲ, ಖರ್ಜೂರವನ್ನು ನೀಡಿದರು.

    ಈ ವೇಳೇ ಮಾಧ್ಯಮಗಳೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ ಇಫ್ತಾರ್ ಕೂಟವೇ ಆಗಬೇಕಿಲ್ಲ, ಸ್ನೇಹ ಕೂಟ ಯಾವಾಗ ಬೇಕಾದರೂ ಮಾಡಬಹುದು. ಉತ್ತರ ಭಾರತ ಪ್ರವಾಸದಲ್ಲಿದ್ದರಿಂದ ಈ ಭಾರೀ ಅವಕಾಶ ಸಿಕ್ಕಿಲ್ಲ. ಬೇರೆ ಕಾರ್ಯಕ್ರಮಗಳೆಲ್ಲಾ ಫಿಕ್ಸ್ ಆಗಿತ್ತು, ಹೀಗಾಗಿ ರಂಜಾನ್ ಸಮಯದಲ್ಲಿ ಇಫ್ತಾರ್ ಕೂಟ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಸ್ನೇಹ ಕೂಟ ಮಾಡುತ್ತೇವೆ. ಕ್ರೈಸ್ತರು, ಮುಸಲ್ಮಾನರನ್ನು ಈ ಸ್ನೇಹ ಕೂಟಕ್ಕೆ ಕರೆಯುತ್ತೇವೆ. ಯೋಗ್ಯ ಸಂದರ್ಭ ನೋಡಿ ಸ್ನೇಹ ಕೂಟ ಮಾಡುತ್ತೇವೆ ಎಂದು ತಿಳಿಸಿದರು.

    ಇದೇ ವೇಳೆ ಈ ಬಾರಿಯ ಸ್ನೇಹ ಕೂಟಕ್ಕೆ ಯಾರ ವಿರೋಧವು ಇರಲಿಲ್ಲ. ಸಂಘದ ಪ್ರಮುಖರೇ ನಮ್ಮ ವಿರೋಧವಿಲ್ಲ ಎಂದು ಹೇಳಿದ್ದರು. ಆದರೆ ಕಳೆದ ಬಾರಿ ಹಿಂದೂಗಳಲ್ಲೇ ಕೆಲವರು ನೀವು ಮಾಡಿದ್ದು ತಪ್ಪು ಎಂದು ಹೇಳಿದ್ದರು. ಆ ವೇಳೆ ನಮ್ಮ ಪರಮಗುರುಗಳು ಪರ್ಯಾಯ ಪೂರ್ವದಲ್ಲಿ ಹಾಜೀ ಅಬ್ದುಲ್ಲಾ ಅವರಿಂದ ಪಾದ ಪೂಜೆ ಸ್ವೀಕಾರ ಮಾಡಿದ್ದಾರೆ. ನಾವು ಅವರನ್ನು ಕರೆಸಿ ಊಟ ಹಾಕಿದರೆ ಏನು ತಪ್ಪಾಗುತ್ತದೆ ಎಂದು ಹೇಳಿದ್ದೆ ಎಂದು ತಿಳಿಸಿದರು.

    ಹಿಂದೂಗಳು ಕೆಲ ಬೇಡಿಕೆ ನಡೆಸಬೇಕು, ಮುಸಲ್ಮಾನರು ನಮ್ಮ ಕೆಲ ಬೇಡಿಕೆ ನಡೆಸಬೇಕು ಹೀಗಾಗಿ ಸ್ನೇಹಕೂಟ, ಮಾತುಕತೆ ನಡೆಯುತ್ತಿದ್ದರೆ ಮತ್ತಷ್ಟು ಸಮನ್ವಯ ಬೆಳೆಯಲು ಅನುಕೂಲ, ನಮ್ಮಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ರಾಜಕಾರಣಿಗಳು ಮಾಡುವುದೆಲ್ಲಾ ಮುಸ್ಲಿಂ ತುಷ್ಟೀಕರಣಕ್ಕೆ, ಓಟಿಗಾಗಿ ಆದರೆ ನಮ್ಮದು ಹಾಗೆ ಅಲ್ಲ ಬರೀ ತುಷ್ಟೀಕರಣ ಅಲ್ಲ. ಎಲ್ಲರ ಜೊತೆ ಸೌಹಾರ್ದ ಇರಬೇಕು ಎಂದು ಹೇಳಿದರು. ಇದೇ ಸಂದರ್ಭ ಮಾತನಾಡಿದ ಮುಸ್ಲಿಂ ಮುಖಂಡ ಅನ್ಸಾರ್ ಅಹಮ್ಮದ್ ಪ್ರತಿವರ್ಷದಂತೆ ಈ ಬಾರಿಯು ರಂಜಾನ್ ದಿನದಂದು ಸ್ವಾಮೀಜಿಗೆ ಫಲ ಸಲ್ಲಿಸಿ ಆಶೀರ್ವಾದ ಪಡೆದಿದ್ದೇವೆ ಎಂದು ಹೇಳಿದರು.

  • ರಾಹುಲ್ ಗಾಂಧಿ ಆಯೋಜನೆಯ ಇಫ್ತಾರ ಕೂಟದಲ್ಲಿ ಭಾಗಿಯಾದ ಪ್ರಣಬ್ ಮುಖರ್ಜಿ

    ರಾಹುಲ್ ಗಾಂಧಿ ಆಯೋಜನೆಯ ಇಫ್ತಾರ ಕೂಟದಲ್ಲಿ ಭಾಗಿಯಾದ ಪ್ರಣಬ್ ಮುಖರ್ಜಿ

    ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಡದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

    ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಪ್ರಣಬ್ ಮುಖರ್ಜಿ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷ ವಕ್ತಾರರಾದ ರಣ್‍ದೀಪ್ ಸಿಂಗ್ ಸೂರಜ್‍ವಾಲಾ ಅವರು, ಪ್ರಣಬ್ ಅವರಿಗೆ ವಿಶೇಷ ಆಹ್ವಾನ ನೀಡಲಾಗಿತ್ತು. ತಮ್ಮ ಆಹ್ವಾನವನ್ನು ಮನ್ನಿಸಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಈ ಹಿಂದೆ ಕಾಂಗ್ರೆಸ್ 2015 ರಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಇಫ್ತಾರ್ ಕೂಟವನ್ನು ಏರ್ಪಡಿಸಿತ್ತು. ಆದರೆ ಇದಾದ ಬಳಿಕ ಎರಡು ವರ್ಷ ಕಾರ್ಯಕ್ರಮವನ್ನು ಏರ್ಪಡಿಸಿರಲಿಲ್ಲ. ರಾಹುಲ್ ಗಾಂಧಿ ಅವರು ಎಐಸಿಸಿ ಅಧಕ್ಷರಾದ ಬಳಿಕ ಮೊದಲ ಬಾರಿಗೆ ಇಫ್ತಾರ ಕೂಟವನ್ನು ಏರ್ಪಡಿಸಲಾಗಿದೆ.

    ಈ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಹಾಗೂ ನಾಯಕರು ಭಾಗವಹಿಸಿದ್ದರು.

    ಕಳೆದ ಕೆಲ ದಿನಗಳ ಹಿಂದೆ ನಾಗ್ಪುರದಲ್ಲಿ ನಡೆದ ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅವರು ಭಾಗವಹಿಸುವ ಕುರಿತು ಹಲವು ಕಾಂಗ್ರೆಸ್ ನಾಯಕರು ಅಸಮಾಧಾನವನ್ನು ಹೊರಹಾಕಿದ್ದರು. ಸ್ವತಃ ಪ್ರಣಬ್ ಅವರ ಪುತ್ರಿ ಸಹ ಈ ಕುರಿತು ಟ್ವೀಟ್ ಮಾಡಿ ಆರ್ ಎಸ್‍ಎಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದರು.

  • ಬುಧವಾರ ಜೆಡಿಎಸ್ ವತಿಯಿಂದ ಬೆಂಗ್ಳೂರಿನಲ್ಲಿ ಇಫ್ತಾರ್ ಕೂಟ

    ಬುಧವಾರ ಜೆಡಿಎಸ್ ವತಿಯಿಂದ ಬೆಂಗ್ಳೂರಿನಲ್ಲಿ ಇಫ್ತಾರ್ ಕೂಟ

    ಬೆಂಗಳೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ರಂಜಾನ್ ಹಬ್ಬದ ಪ್ರಯುಕ್ತ ಇಫ್ತಿಯಾರ್ ಭೋಜನ ಕೂಟವನ್ನು ಆಯೋಜಿಸಿದ್ದಾರೆ.

    ಬುಧವಾರ ಸಂಜೆ ಅರಮನೆ ಮೈದಾನದ ಶೇಷ ಮಹಲ್ ನಲ್ಲಿ ಇಫ್ತಿಯಾರ್ ಭೋಜನ ಕೂಟ ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಕೂಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳು ಭಾಗವಹಿಸಲಿದ್ದಾರೆ.

    ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ದೇವೇಗೌಡ, ಸ್ವತಃ ರಾಹುಲ್ ಗಾಂಧಿ ಯವರೇ ಫೋನ್ ಮಾಡಿ ಕುಮಾರಸ್ವಾಮಿ ಮತ್ತು ನನಗೂ ಬರುವಂತೆ ಆಹ್ವಾನ ನೀಡಿದ್ದಾರೆ. ಆದರೆ ನಾವು ಕೂಡ ಇಫ್ತಾರ್ ಕೂಟ ಆಯೋಜಿಸಿದ್ದೇವೆ. ಈ ಕೂಟದಲ್ಲಿ ಸುಮಾರು ಐದು ಸಾವಿರ ಜನರು ಭಾಗಿಯಾಗುತ್ತಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಏರ್ಪಡಿಸಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದರು.

  • ಎಲೆಕ್ಷನ್ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಮಾಜಿ ಸಿಎಂ – ಸಂಜೆ ಇಫ್ತಾರ್ ಕೂಟ

    ಎಲೆಕ್ಷನ್ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಮಾಜಿ ಸಿಎಂ – ಸಂಜೆ ಇಫ್ತಾರ್ ಕೂಟ

    ಮೈಸೂರು: ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂಸ್ಕøತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

    ಸದ್ಯ ತಮ್ಮ ನಿವಾಸದಲ್ಲಿ ಬೀಡುಬಿಟ್ಟಿರುವ ಸಿದ್ದರಾಮಯ್ಯ, ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದರೆ ಸಿದ್ದರಾಮಯ್ಯರನ್ನು ನೋಡಲು ಕೇವಲ ಬೆರಳಣಿಕೆಯಷ್ಟು ಮಂದಿ ಬಂದಿದ್ದಾರೆ. ಈ ಹಿಂದೆ ಸಿಎಂ ಆಗಿದ್ದಾಗ ಅವರ ಮನೆ ಬಳಿ ನೂರಾರು ಜನ ಜಮಾಯಿಸುತ್ತಿದ್ದರು. ಆದರೆ ಇದೀಗ ಆ ಪರಿಸ್ಥಿತಿ ಇಲ್ಲ.

    ಇನ್ನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ಕೊಡೋದು ಅನುಮಾನ ಎನ್ನಲಾಗಿದೆ. ವಿಧಾನಸಭೆ ಚುನಾವಣೆಯ ಫಲಿತಾಂಶದ ಹಿಂದಿನ ದಿನ ಮೈಸೂರಿಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸೋಲಿನ ಬಳಿಕ ಇತ್ತ ಮುಖ ಮಾಡಿರಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 36 ಸಾವಿರ ಮತಗಳ ಅಂತರದಿಂದ ಸೋತು ಮುಜುಗರಕ್ಕೆ ಒಳಗಾಗಿದ್ದ ಸಿದ್ದರಾಮಯ್ಯ ಮೈಸೂರಿಗೆ ಬರಲು ಮುಂದಾಗಿರಲಿಲ್ಲ.

    ಇಂದು ಮುಸ್ಲಿಂ ಭಾಂದವರಿಗಾಗಿ ರಂಜಾನ್ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರಿಂದ ಇಫ್ತಾರ್ ಕೂಟ ಆಯೋಜಿಸಲಾಗಿದೆ. ಮೈಸೂರಿನ ಬನ್ನಿಮಂಟಪದ ಮಿಲನ್ ಫಂಕ್ಷನ್ ಹಾಲ್ ನಲ್ಲಿ ಇಂದು ಸಂಜೆ 6:30ಕ್ಕೆ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿದೆ. ಸಿದ್ದರಾಮಯ್ಯ ಪ್ರತಿ ವರ್ಷ ಮೈಸೂರಿನಲ್ಲಿ ಇಫ್ತಾರ್ ಕೂಟ ಆಯೋಜಿಸುತ್ತಾರೆ. ಕರ್ನಾಟಕ ಸರ್ಕಾರದ ಲೆಟರ್ ಹೆಡ್ ನಲ್ಲೇ ಆಹ್ವಾನ ಪತ್ರಿಕೆ ಸಿದ್ಧಪಡಿಸಲಾಗಿದೆ. ಆಂಗ್ಲ ಭಾಷೆಯಲ್ಲಿ ಆಹ್ವಾನ ಪತ್ರಿಕೆ ಇದ್ದು, ಆಹ್ವಾನ ಪತ್ರಿಕೆ ಮೂಲಕ ಇಫ್ತಾರ್ ಕೂಟಕ್ಕೆ ಮುಸ್ಲಿಂ ಭಾಂದವರನ್ನು ಆಹ್ವಾನಿಸಲಾಗಿದೆ.

    ಇಂದು ಮೈಸೂರಿನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ತಂಗಲಿದ್ದು, ನಾಳೆ ಬೆಳಗ್ಗೆ ಸುಮಾರು 9.30 ಕ್ಕೆ ಖಾಸಗಿ ಹೋಟೆಲ್ ನಲ್ಲಿ ಮೈಸೂರು – ಚಾಮರಾಜನಗರ ಜಿಲ್ಲೆಯ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಜೊತೆ ಸಭೆ ನಡೆಸಲಿದ್ದಾರೆ. ಗೆದ್ದವರು ಮತ್ತು ಸೋತವರು ಜೊತೆ ಆತ್ಮವಲೋಕನ ಮಾಡಲಿದ್ದು, ಚಾಮುಂಡೇಶ್ವರಿ ಕ್ಷೇತ್ರದ ತಮ್ಮ ಸೋಲಿನ ಬಗ್ಗೆಯೂ ನಾಳೆಯೇ ಚರ್ಚೆ ನಡೆಯಲಿದೆ.

  • ಮಂಗಳವಾರ ತಾಜ್ ಹೋಟೆಲ್ ನಲ್ಲಿ ಕಾಂಗ್ರೆಸ್ಸಿನಿಂದ ಇಫ್ತಾರ್ ಕೂಟ

    ಮಂಗಳವಾರ ತಾಜ್ ಹೋಟೆಲ್ ನಲ್ಲಿ ಕಾಂಗ್ರೆಸ್ಸಿನಿಂದ ಇಫ್ತಾರ್ ಕೂಟ

    ನವದೆಹಲಿ: ಎರಡು ವರ್ಷಗಳ ನಂತರ ಜೂನ್ 13 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

    ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಗೊಂಡ ನಂತರದ ಮೊದಲ ಇಫ್ತಾರ್ ಕೂಟ ಇದಾಗಿದ್ದು, ಜೂನ್ 13 ರಂದು ದೆಹಲಿಯ ತಾಜ್ ಪ್ಯಾಲೆಸ್ ಹೋಟೆಲ್ ನಲ್ಲಿ ಏರ್ಪಾಡು ಮಾಡಲಾಗಿದೆ ಎಂದು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನದೀಮ್ ಜಾವೆದ್ ಹೇಳಿದ್ದಾರೆ.

    ಕಾಂಗ್ರೆಸ್ ನ ಎಲ್ಲಾ ನಾಯಕರುಗಳನ್ನು ಹಾಗೂ ಕೆಲವು ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. ಸೋನಿಯಾ ಗಾಂಧಿ ಅವರು 2015 ರಲ್ಲಿ ಇಫ್ತಾರ್ ಕೂಟವನ್ನು ಏರ್ಪಾಡು ಮಾಡಿದ್ದರು.

    2016ಕ್ಕಿಂತ ಮುಂಚೆ ಕಾಂಗ್ರೆಸ್ ಇಫ್ತಾರ್ ಕೂಟವನ್ನು ಏರ್ಪಾಡು ಮಾಡುತ್ತಿತ್ತು. ಅಧಿಕಾರದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಏರ್ಪಾಡು ಮಾಡುತ್ತಿದ್ದರು. ವಿರೋಧ ಪಕ್ಷದಲ್ಲಿದ್ದಾಗ ಸೋನಿಯಾ ಗಾಂಧಿಯವರು ಏರ್ಪಾಡು ಮಾಡಿದ್ದರು.

     

    2016ರಲ್ಲಿ ಈ ಬಾರಿ ಇಫ್ತಾರ್ ಕೂಟವನ್ನು ಆಯೋಜನೆ ಮಾಡುವುದಿಲ್ಲ ಅದರ ಬದಲು ಬಡವರಿಗೆ ರೇಷನ್ ಕೊಡುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಈ ಹಿಂದೆಯೂ ಕೆಲವು ಬಾರಿ ದೇಶದಲ್ಲಿ ಬರ ಅಥವಾ ನೈಸರ್ಗಿಕ ವಿಕೋಪ ಸಂಭವಿಸಿದಾಗ ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜನೆ ಮಾಡಿರಲಿಲ್ಲ.

  • ಮುಸ್ಲಿಮರು ಒಪ್ಪಿದ್ರೆ ಈ ಬಾರಿಯೂ ಇಫ್ತಾರ್ ಕೂಟ- ವಿಶ್ವೇಶತೀರ್ಥ ಸ್ವಾಮೀಜಿ

    ಮುಸ್ಲಿಮರು ಒಪ್ಪಿದ್ರೆ ಈ ಬಾರಿಯೂ ಇಫ್ತಾರ್ ಕೂಟ- ವಿಶ್ವೇಶತೀರ್ಥ ಸ್ವಾಮೀಜಿ

    ಉಡುಪಿ: ಕಳೆದ ಬಾರಿಯಂತೆ ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದೆ. ಮುಸಲ್ಮಾನ ನಾಯಕರು, ಪ್ರಮುಖರು ಒಪ್ಪಿದರೆ ಸತ್ಕಾರ ಕೂಟ ಮಾಡುತ್ತೇನೆ ಅಂತ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ, ಈ ಬಾರಿ ಮುಸ್ಲೀಮರು ಇಫ್ತಾರ್ ಕೂಟಕ್ಕೆ ಬಹಳ ಉತ್ಸಾಹ ತೋರಿಸುತ್ತಿಲ್ಲ. ಕಳೆದ ಬಾರಿಯ ಇಫ್ತಾರ್ ಕೂಟ ಬಹಳ ಚರ್ಚೆಯಾಗಿತ್ತು. ಮೂರ್ತಿ ಇರುವಲ್ಲಿ ಕಾರ್ಯಕ್ರಮ ಆಯೋಜಿಸಲು ಮುಸಲ್ಮಾನರು ಒಪ್ಪುತ್ತಿಲ್ಲ. ಒಪ್ಪಿದರೆ ಎಲ್ಲವೂ ಅಂದುಕೊಂಡಂತೆ ಆದರೆ ಗೋವಿಂದ ಕಲ್ಯಾಣ ಮಂಟಪದಲ್ಲಿ ಸತ್ಕಾರ ಕೂಟ ಆಯೋಜಿಸುವ ಆಲೋಚನೆಯಿದೆ ಅಂತ ಹೇಳಿದರು.

    ಅಲ್ಪಸಂಖ್ಯಾತರನ್ನು ಮತ್ತು ಬಹು ಸಂಖ್ಯಾತರನ್ನು ಸಮಾನವಾಗಿ ಕಾಣಬೇಕು. ಸಂವಿಧಾನ ಬದಲಿಸಿ ಅಂತ ನಾನು ಯಾವತ್ತೂ ಹೇಳಿಲ್ಲ. ದೇಶದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಎಲ್ಲರಿಗೂ ಒಂದೇ ನ್ಯಾಯ ಇರಬೇಕು. ಶಿಕ್ಷಣ, ಆಹಾರ, ಸರ್ಕಾರದ ಯೋಜನೆ ಎಲ್ಲಾ ಧರ್ಮದ ಬಡವರಿಗೆ ಸಿಗಬೇಕು ಎಂದು ಮೊದಲಿನಿಂದಲೂ ಹೇಳಿಕೊಂಡು ಬರುತ್ತಿದ್ದೇನೆ. ಈಗಲೂ ಅದೇ ಹೇಳುತ್ತೇನೆ. ನಾನು ಅಂಬೇಡ್ಕರ್ ವಿರೋಧಿಯಲ್ಲ. ಎಲ್ಲಾ ಧರ್ಮ, ಜಾತಿಯವರೊಂದಿಗೆ ನಾನು ಚೆನ್ನಾಗಿದ್ದೇನೆ ಎಂದು ಪೇಜಾವರ ಶ್ರೀ ಹೇಳಿದರು.

  • ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ಧಿಕ್ಕಾರ, ಮೋದಿ ದೊಡ್ಡ ಜಾದೂಗಾರ: ಅಮೀನ್ ಮಟ್ಟು

    ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ಧಿಕ್ಕಾರ, ಮೋದಿ ದೊಡ್ಡ ಜಾದೂಗಾರ: ಅಮೀನ್ ಮಟ್ಟು

    ಉಡುಪಿ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

    ಉಡುಪಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ 75ನೇ ಸ್ಮರಣಾ ಕಾರ್ಯಕ್ರಮದಲ್ಲಿ ಸ್ವಾಮೀ ವಿವೇಕಾನಂದರ ಹಿಂದೂ ಧರ್ಮದ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ನನ್ನ ಧಿಕ್ಕಾರವಿದೆ ಎಂದು ವಾಗ್ದಾಳಿ ನಡೆಸಿದರು.

    ಕರಾವಳಿಗರು ಬುದ್ಧಿವಂತರೆಂಬ ಪ್ರತೀತಿ ಇತ್ತು. ಆದರೆ ಇಂದು ಕೋಮುವಾದಿ- ತಾಲಿಬಾನಿಗಳೆಂಬ ಕುಖ್ಯಾತಿಗೆ ಪಾತ್ರವಾಗಿದೆ. ಧರ್ಮಗುರುಗಳು ಮತ್ತು ಧರ್ಮಪೀಠಗಳು ಕೋಮುವಾದಿಗಳ ರಿಕ್ರೂಟ್‍ಮೆಂಟ್ ಸೆಂಟರ್ ಆಗುತ್ತಿವೆ. ಧರ್ಮಗುರುಗಳು ರಾಜಕೀಯ ಪಕ್ಷ ಸೇರಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಪೇಜಾವರಶ್ರೀಗಳು ಉಡುಪಿ ಕೃಷ್ಣಮಠದಲ್ಲಿ ನಡೆಸಿದ ಇಫ್ತಾರ್ ಕೂಟಕ್ಕೆ ಪರೋಕ್ಷ ಟಾಂಗ್ ನೀಡಿದರು.

    ಇಫ್ತರ್ ಕೂಟ ಮಾಡಿದಾಗ ನಮಗೆ ರೋಮಾಂಚನ ಆಯ್ತು. ಆದ್ರೆ ಮರುದಿನ ಉಮಾಭಾರತಿ ಬಂದು ಆಶೀರ್ವಾದ ಪಡೆಯುತ್ತಾರೆ. ರಾಮಮಂದಿರ ನಿರ್ಮಾಣದ ಬಗ್ಗೆಯೂ ಅಲ್ಲೇ ಮಾತುಕತೆಯಾಯ್ತು. ಮಾದಿಗರ ಸ್ವಾಮೀಜಿಗೆ ಪೇಜಾವರಶ್ರೀಗಳ ಸಂಪರ್ಕವಾದ ಮೇಲೆ ಅವರೂ ಬಿಜೆಪಿ ಸ್ವಾಮೀಜಿಯಾದರು ಎಂದರು.

    ನಾನು ಕಾಂಗ್ರೆಸ್ ಪಕ್ಷ ಸೇರಿಲ್ಲ. ಮುಂದೆ ಗೊತ್ತಿಲ್ಲ. ಆದ್ರೆ ಕಾಂಗ್ರೆಸ್ ಸಿದ್ಧಾಂತ ನನಗೆ ಒಪ್ಪಿಗೆ ಇದೆ. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಂಘ ಪರಿವಾರದ ಯಾವ ನರಪಿಳ್ಳೆಯೂ ಇರಲಿಲ್ಲ. ವಾಜಪೇಯಿ ಈ ಬಗ್ಗೆ ಕ್ಷಮಾಪಣಾ ಪತ್ರ ಬರೆದಿದ್ದಾರೆ. ಸಾವರ್ಕರ್ ಅಂಡಮಾನ್ ಜೈಲಿನಲ್ಲಿ ಬ್ರಿಟೀಷರ ಜೊತೆ ಸೇರಿಕೊಳ್ಳಲು ತಯಾರಾಗಿದ್ದರು. ಮುಖವಾಡದ ದೇಶದ್ರೋಹಿಗಳನ್ನು ಬೆತ್ತಲು ಮಾಡಬೇಕು ಎಂದು ಅಮೀನ್ ಮಟ್ಟು ಕರೆ ನೀಡಿದರು.

    ಬಿಜೆಪಿ ಅಧಿಕಾರಕ್ಕೆ ಬರಲು ರಾಜೀವ್ ಗಾಂಧಿ ಕಾರಣ. 18ನೇ ವಯಸ್ಸಿಗೆ ಮತ ಚಲಾಯಿಸುವ ಹಕ್ಕು ನೀಡಿದರು. 21 ವಯಸ್ಸಿನ ಮಿತಿ ಇದ್ದಿದ್ದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ. ಪ್ರಧಾನಿ ಮೋದಿ ದೊಡ್ಡ ಜಾದೂಗಾರ. ಮೋಸ ಮಾಡುತ್ತಾರೆಂದು ಗೊತ್ತಿದ್ದರೂ ನಮಗೆ ಏನೂ ಮಾಡಲಾಗುತ್ತಿಲ್ಲ ಎಂದು ಹರಿಹಾಯ್ದರು.