Tag: ಇಮ್ರಾನ್ ಪಾಷಾ

  • ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಚೆಕ್ ನೀಡಿದ ಇಮ್ರಾನ್ ಪಾಷಾ

    ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಚೆಕ್ ನೀಡಿದ ಇಮ್ರಾನ್ ಪಾಷಾ

    ಮಂಡ್ಯ: ಕಾಲೇಜು ಹುಡುಗರ ಮುಂದೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಮನೆಗೆ ಜೆಡಿಎಸ್ ಮುಖಂಡ ಇಮ್ರಾನ್ ಪಾಷಾ ಭೇಟಿ ನೀಡಿ ಅವರಿಗೆ ಧೈರ್ಯ ಹೇಳಿ 1 ಲಕ್ಷ ರೂ. ಚೆಕ್ ನೀಡಿದ್ದಾರೆ.

    ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಹಿಂದು ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದರು. ಇಂದು ಇಮ್ರಾನ್ ಪಾಷಾ ಆಕೆಯ ಮನೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: Hijab Row – ಮಂಡ್ಯ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್‌

    ನಿನ್ನೆ ನಡೆದ ಘಟನೆ ಬಗ್ಗೆ ಬೇಸರವಾಗಿದೆ. ಹೀಗಾಗಿ ಇಂದು ಮುಸ್ಕಾನ್ ಮನೆಗೆ ಭೇಟಿ ನೀಡಿ ಮಾತನಾಡಿದ್ದೇನೆ. ಅವರಿಗೆ ಧೈರ್ಯ ಹೇಳಿ 1 ಲಕ್ಷ ರೂ. ಚೆಕ್ ನೀಡಿದ್ದೇನೆ. ಘಟನೆ ಬಗ್ಗೆ ಅವರು ಕಾನೂನಾತ್ಮಕವಾಗಿ ಯಾವುದೇ ಕ್ರಮ ತೆಗೆದುಕೊಂಡರೂ ಅವರೊಂದಿಗೆ ನಾನು ಇರುತ್ತೇನೆ ಎಂದು ಇಮ್ರಾನ್ ಪಾಷಾ ತಿಳಿಸಿದ್ದಾರೆ.

    ಮುಸ್ಕಾನ್ ಕುಟುಂಬಕ್ಕೆ ಯಾರಾದರೂ ಹಲ್ಲೆ ಅಥವಾ ತೊಂದರೆ ಕೊಡಲು ಬಂದರೆ ಪೊಲೀಸ್ ಠಾಣೆಗೆ ದೂರು ಕೊಡಲು ಹೇಳಿದ್ದೇನೆ. ಸರ್ಕಾರದ ಜೊತೆ ಮಾತನಾಡಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾನು ಇರುತ್ತೇನೆ. ಜೈ ಶ್ರೀರಾಮ್ ಎಂದು ಕೂಗುವುದರಲ್ಲಿ ತಪ್ಪೇನಿಲ್ಲ. ಆದರೆ ಆ ವಿದ್ಯಾರ್ಥಿಗಳನ್ನು ಯಾರೋ ಪ್ರಚೋದನೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ‘ಜೈ ಶ್ರೀರಾಮ್’ ಎಂದ ಹುಡುಗರು – ‘ಅಲ್ಲಾಹು ಅಕ್ಬರ್’ ಎಂದ ವಿದ್ಯಾರ್ಥಿನಿ

    ಇದೇ ವೇಳೆ ಮುಸ್ಕಾನ್‍ಗೆ ಯೂತ್ ಐಕಾನ್ ಬಿರುದು ಹಾಗೂ ಕ್ಯಾಶ್ ಪ್ರೈಸ್ ಘೋಷಣೆ ವಿಚಾರವಾಗಿ ಮಾತನಾಡಿದ ಪಾಷಾ, ಒಳ್ಳೆಯ ಭಾವನೆ ಇಟ್ಟುಕೊಂಡು ಕೊಟ್ಟರೆ ಸರಿ. ಕೆಟ್ಟ ಉದ್ದೇಶದಿಂದ ಆ ರೀತಿ ಹಣ ನೀಡುವುದು ತಪ್ಪು. ಯಾರೂ ಮುಸ್ಕಾನ್‍ಗೆ ಹಣ ನೀಡಿಲ್ಲ. ಯಾರೋ ಬಂದು ಏನೋ ಕೊಟ್ಟರೆ ಅದನ್ನು ನೆಗೆಟಿವ್ ಆಗಿ ತೆಗೆದುಕೊಳ್ಳಬಾರದು. ಬಂದ ದುಡ್ಡನ್ನು ಬಡವರಿಗೆ ಕೊಡುತ್ತೇವೆ ಎಂದು ಮುಸ್ಕಾನ್ ಕುಟುಂಬ ಹೇಳಿದೆ ಎಂದು ಇಮ್ರಾನ್ ಪಾಷಾ ತಿಳಿಸಿದ್ದಾರೆ.

  • ಬೆಂಗ್ಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ 2 ಲಕ್ಷ ಪರಿಹಾರ ಘೋಷಿಸಿದ ಇಮ್ರಾನ್ ಪಾಷಾ

    ಬೆಂಗ್ಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ 2 ಲಕ್ಷ ಪರಿಹಾರ ಘೋಷಿಸಿದ ಇಮ್ರಾನ್ ಪಾಷಾ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.

    ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್‍ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪಾಲಿಕೆ ಸದಸ್ಯ ಎರಡು ಲಕ್ಷ ಘೋಷಣೆ ಮಾಡಿದ್ದಾರೆ.

    ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದರು. ಆದರೆ ಅನಗತ್ಯ ಗಲಭೆ ಮಾಡಿದವರ ಕುಟುಂಬಕ್ಕೆ ಪರಿಹಾರ ಕೊಟ್ಟರೆ ಬೇರೆಯದ್ದೇ ಸಂದೇಶ ರವಾನೆ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬುದ್ಧಿ ಹೇಳಿದ್ದಾರೆ ಎನ್ನಲಾಗಿತ್ತು. ಇದನ್ನೂ ಓದಿ: ಜಮೀರ್ ಇನ್ ಟ್ರಬಲ್ – ಪಕ್ಷದ ನಾಯಕರಿಂದ ಎಚ್ಚರಿಕೆ

    ಮೃತರ ಕುಟುಂಬಕ್ಕೆ ಪರಿಹಾರ ಕೊಡುವುದಾದರೆ ಕೊಡಿ. ಆದರೆ ಈ ವಿಷಯ ಮಾತ್ರ ಬಹಿರಂಗ ಆಗಬಾರದು ಎಂದು ಕಾಂಗ್ರೆಸ್ ನಾಯಕರು ಎಂದಿದ್ದಾರೆ. ಎಲ್ಲಿಯೂ ಸಹ ಪರಿಹಾರ ಕೊಟ್ಟೆ ಅಂತ ಹೇಳಬಾರದು ಎಂದು ಬಹಿರಂಗವಾಗಿ ಹೇಳುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿತ್ತು.

  • ಬಿಬಿಎಂಪಿ ಸದಸ್ಯ, ಬಿಲ್ಡಪ್‌ ಪಾಷಾಗೆ 5 ಸಾವಿರ ದಂಡ ವಿಧಿಸಿದ ಹೈಕೋರ್ಟ್‌

    ಬಿಬಿಎಂಪಿ ಸದಸ್ಯ, ಬಿಲ್ಡಪ್‌ ಪಾಷಾಗೆ 5 ಸಾವಿರ ದಂಡ ವಿಧಿಸಿದ ಹೈಕೋರ್ಟ್‌

    ಬೆಂಗಳೂರು: ಬಿಬಿಎಂಪಿಯ ಪಾದರಾಯನಪುರದ ವಾರ್ಡ್‌ನ ಜೆಡಿಎಸ್‌ ಸದಸ್ಯ ಇಮ್ರಾನ್‌ ಪಾಷಾಗೆ ಹೈಕೋರ್ಟ್‌ 5 ಸಾವಿರ ರೂ. ದಂಡವನ್ನು ವಿಧಿಸಿದೆ.

    ಜೂನ್‌ 7 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ರೋಡ್‌ ಶೋ ನಡೆಸಿ ಕೋವಿಡ್‌ 19 ಮಾರ್ಗಸೂಚಿಯನ್ನು ಉಲ್ಲಂಘಿಸಿದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ 7 ದಿನಗಳ ಒಳಗೆ ಸಿಎಂ ಕೋವಿಡ್‌ 19 ಪರಿಹಾರ ನಿಧಿಗೆ ದಂಡವನ್ನು ಪಾವತಿಸುವಂತೆ ಸೂಚಿಸಿದೆ.

    ಈ ವೇಳೆ ಅಧೀನ ನ್ಯಾಯಾಲಯದಿಂದ ಜಾಮೀನು ಪಡೆದ ವಿಚಾರವನ್ನು ಹೈಕೋರ್ಟ್‌ಗೆ ತಿಳಿಸದ್ದಕ್ಕೆ ಏಕಸದಸ್ಯ ಪೀಠ ಅಸಮಾಧಾನವನ್ನು ವ್ಯಕ್ತಪಡಿಸಿತು. ಇಮ್ರಾನ್ ಪಾಷಾ ಜೊತೆಗೆ ಉಳಿದ 21 ಕಾರ್ಯಕರ್ತರಿಗೆ ತಲಾ 5 ಸಾವಿರ ರೂ. ದಂಡವನ್ನು ಕೋರ್ಟ್‌ ವಿಧಿಸಿದೆ.

    ಏನಿದು ಪ್ರಕರಣ?
    ಕೋವಿಡ್‌ 19 ನಿಂದಾಗಿ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದ ಇಮ್ರಾನ್‌ ಪಾಷಾ ಜೂನ್‌ 7ರಂದು ಬಿಡುಗಡೆಯಾಗಿದ್ದರು. ಬಿಡುಗಡೆಯಾದ ಪಾಷಾರನ್ನು ಕಾರ್ಯಕರ್ತರು ವಿಕ್ಟೋರಿಯಾ ಆಸ್ಪತ್ರೆಯಿಂದ ಹೂ ಮಳೆಯನ್ನು ಸುರಿಸಿ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಪಾದರಾಯನಪುರದಲ್ಲಿರುವ ನಿವಾಸಕ್ಕೆ ಕರೆ ತಂದಿದ್ದರು.

     

    ಈ ವೇಳೆ ಬೈಕ್‌ಗಳಲ್ಲಿ ಕುಳಿತವರು ಹಲ್ಮೆಟ್ ಇಲ್ಲದೇ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದಿದ್ದರೂ ಗುಂಪಾಗಿ ಮೆರವಣಿಗೆ ಮಾಡಿ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ರಾಜಕೀಯ ಮೆರವಣಿಗೆ ನಡೆಸಬಾರದು ಎಂದು ಸೂಚಿಸಿದ್ದರೂ ಭಾರೀ ಸಂಖ್ಯೆಯಲ್ಲಿ ಮೆರವಣಿಗೆ ನಡೆಸಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಜೆಜೆ ನಗರ ಪೊಲೀಸರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ಇಮ್ರಾನ್ ಪಾಷಾ ಜೊತೆ 21 ಕಾರ್ಯಕರ್ತರನ್ನು ಬಂಧಿಸಿದ್ದರು.

     

    ಹಾಟ್ ಸ್ಪಾಟ್ ಆಗಿದ್ದ ಪ್ರದೇಶದಲ್ಲಿ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಯಾವುದೇ ಕ್ರಮಕೈಗೊಳ್ಳದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆಗಮಿಸಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ಇದೊಂದು ಬೇಜವಾಬ್ದಾರಿ ನಡೆಯಾಗಿದೆ. ಕ್ರಿಮಿನಲ್ ಅಪರಾಧವಾಗಿದ್ದು ಇದಕ್ಕಾಗಿ ಸ್ಥಳಕ್ಕೆ ನಾನೇ ಬಂದಿದ್ದೇನೆ. ಸೂಕ್ಷ್ಮ ವಲಯವಾಗಿರುವ ಈ ಸ್ಥಳದಲ್ಲಿ ಬೇಜವಾಬ್ದಾರಿ ವರ್ತನೆ ತೋರಿದ್ದಕ್ಕೆ ಬಂಧಿಸಲಾಗಿದೆ ಎಂದು ತಿಳಿಸಿದ್ದರು.

  • ಪರಪ್ಪನ ಅಗ್ರಹಾರ ಜೈಲಿಗೆ ಇಮ್ರಾನ್ ಪಾಷಾ ಶಿಫ್ಟ್

    ಪರಪ್ಪನ ಅಗ್ರಹಾರ ಜೈಲಿಗೆ ಇಮ್ರಾನ್ ಪಾಷಾ ಶಿಫ್ಟ್

    ಬೆಂಗಳೂರು: ಕೊರೊನಾ ಲಾಕ್‍ಡೌನ್ ಉಲ್ಲಂಘಿಸಿ ಮೆರವಣಿಗೆ ನಡೆಸಿ ಬಂಧನವಾಗಿದ್ದ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    ಕೋವಿಡ್-19 ಹಿನ್ನೆಲೆ ಸರ್ಕಾರ ವಿಧಿಸಿದ್ದ ನಿಮಯ ಉಲ್ಲಂಘಿಸಿದ ಪ್ರಕರಣವನ್ನು 3ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ವಾದ, ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು, ಇಮ್ರಾನ್ ಪಾಷಾ ಸೇರಿದಂತೆ 24 ಜನ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

    ಕೋರ್ಟ್ ಆದೇಶದ ಬಳಿಕ ಪೊಲೀಸರು ಇಮ್ರಾನ್ ಪಾಷಾ ಸೇರಿದಂತೆ 24 ಜನ ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 28 ಆರೋಪಿಗಳನ್ನ ಬಂಧಿಸಲಾಗಿತ್ತು. ಆದರೆ ಒಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ ಮೂವರ ರಿಪೋರ್ಟ್ ಬರಬೇಕಿದೆ. ಹೀಗಾಗಿ 24 ಆರೋಪಿಗಳನ್ನ ಮಾತ್ರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

    ಆರೋಪಿಗಳನ್ನು ಅರೆಸ್ಟ್ ಮಾಡಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇಂದು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸಿದರು. ಬಳಿಕ ಇಮ್ರಾನ್ ಪಾಷಾ ಮತ್ತು ಬಂಟರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಕೋರ್ಟ್ ಆದೇಶದಂತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    ಏನಿದು ಪ್ರಕರಣ?:
    ಕೋವಿಡ್-19 ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಮ್ರಾನ್ ಪಾಷಾ ಜೂನ್ 7ರಂದು ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಬಿಡುಗಡೆಯಾದ ಪಾಷಾರನ್ನು ಕಾರ್ಯಕರ್ತರು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಪಾದರಾಯನಪುರದಲ್ಲಿರುವ ನಿವಾಸಕ್ಕೆ ಕರೆ ತಂದಿದ್ದರು.

    ಈ ವೇಳೆ ಬೈಕ್‍ಗಳಲ್ಲಿ ಕುಳಿತವರು ಹಲ್ಮೆಟ್ ಇಲ್ಲದೇ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದಿದ್ದರೂ ಗುಂಪಾಗಿ ಮೆರವಣಿಗೆ ಮಾಡಿ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ರಾಜಕೀಯ ಮೆರವಣಿಗೆ ನಡೆಸಬಾರದು ಎಂದು ಸೂಚಿಸಿದ್ದರೂ ಭಾರೀ ಸಂಖ್ಯೆಯಲ್ಲಿ ಮೆರವಣಿಗೆ ನಡೆಸಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಪೊಲೀಸರು ಇಮ್ರಾನ್ ಪಾಷಾರನ್ನು ಬಂಧಿಸಿದ್ದರು.

    ಹಾಟ್ ಸ್ಪಾಟ್ ಆಗಿದ್ದ ಪ್ರದೇಶದಲ್ಲಿ ಮೆರವಣಿಗೆ ನಡೆಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಳ್ಳದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ತೆರೆದ ಕಾರಿನಲ್ಲಿ ಹೂ ಮಳೆಯೊಂದಿಗೆ ಕ್ಷೇತ್ರಕ್ಕೆ ಬರುತ್ತಿದ್ದ ಇಮ್ರಾನ್ ಪಾಷಾರನ್ನು ನಡೆಸಿಕೊಂಡೇ ಠಾಣೆಗೆ ಕರೆಸಿಕೊಂಡು ಹೋಗಿ ಬಂಧಿಸಿದ್ದರು. ಈ ವೇಳೆ ಲಘು ಲಾಠಿ ಚಾರ್ಜ್ ಮಾಡಿ ಪೊಲೀಸರು ಗುಂಪನ್ನು ಚದುರಿಸಿದ್ದರು.

  • ಇಮ್ರಾನ್ ಪಾಷಾ ಬೆಂಬಲಿಗನಿಗೆ ಕೊರೊನಾ ಪಾಸಿಟಿವ್

    ಇಮ್ರಾನ್ ಪಾಷಾ ಬೆಂಬಲಿಗನಿಗೆ ಕೊರೊನಾ ಪಾಸಿಟಿವ್

    ಬೆಂಗಳೂರು: ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಬೆಂಬಲಿಗನೊಬ್ಬನಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

    ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಇಮ್ರಾನ್ ಪಾಷಾ ಹೈಡ್ರಾಮಾ ಸೃಷ್ಟಿಸಿ ಆಸ್ಪತ್ರೆ ಸೇರಿದ್ದರು. ಚಿಕಿತ್ಸೆ ಫಲಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅವರನ್ನು ಅದ್ದೂರಿಯಾಗಿ ಬೆಂಬಲಿಗರು ಸ್ವಾಗತ ಮಾಡಿಕೊಂಡಿದ್ದರು. ಈ ಸಂಬಂಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಲಾಕ್‌ಡೌನ್‌ ನಿಮಯ ಉಲ್ಲಂಘಿಸಿದ ಇಮ್ರಾನ್ ಪಾಷಾ ಸೇರಿ 22 ಜನರನ್ನು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡು ಬಂಧಿಸಿದ್ದರು.

    ಬಂಧಿತ 22 ಮಂದಿಯ ಪೈಕಿ ಒಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ತಕ್ಷಣವೇ ಆತನನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್-19 ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಆರೋಪಿಗಳನ್ನ ಕೊರೊನಾ ವೈರಸ್ ಪರೀಕ್ಷೆಗೆ ಕರೆದೊಯ್ದಿದ್ದ ಜೆಜೆಆರ್ ನಗರದ ಪೊಲೀಸರಲ್ಲಿ ಆತಂಕ ಶುರುವಾಗಿದೆ. ಒಟ್ಟು 12 ಜನ ಪೊಲೀಸರು ಆರೋಪಿಗಳನ್ನು ಕೊರೊನಾ ಟೆಸ್ಟ್ ಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಹೀಗಾಗಿ ಎಲ್ಲ 12 ಪೊಲೀಸ್ ಸಿಬ್ಬಂದಿಗೂ ಮತ್ತೊಮ್ಮೆ ಟೆಸ್ಟ್ ಮಾಡಿಸಲು ಇಲಾಖೆಯು ನಿರ್ಧಾರ ಕೈಗೊಂಡಿದೆ.

  • ಯುದ್ಧ ಗೆದ್ದು ಬಂದಂತೆ ಮೆರವಣಿಗೆ – ಪಾಷಾ ವಿರುದ್ಧ ಕ್ರಮಕ್ಕೆ ಜಮೀರ್ ಆಗ್ರಹ

    ಯುದ್ಧ ಗೆದ್ದು ಬಂದಂತೆ ಮೆರವಣಿಗೆ – ಪಾಷಾ ವಿರುದ್ಧ ಕ್ರಮಕ್ಕೆ ಜಮೀರ್ ಆಗ್ರಹ

    ಬೆಂಗಳೂರು: ಯುದ್ಧ ಗೆದ್ದು, ಬಂದಂತೆ ಮೆರವಣಿಗೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ ಎಂದು ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ಅವರು ಕಿಡಿಕಾರಿದ್ದಾರೆ.

    ಕೊರೊನಾ ಸೋಂಕಿಗೆ ತುತ್ತಾಗಿದ್ದ ಪಾಷಾ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವೇಳೆ ಆಸ್ಪತ್ರೆಯಿಂದ ಹೊರೆ ಬಂದ ಅವರನ್ನು ಅವರ ಬೆಂಬಲಿಗರು ತೆರೆದ ಕಾರಿನಲ್ಲಿ ಮೆರವಣಿಗೆ ಮಾಡಿಕೊಂಡು ಹೂಮಾಲೆ ಹಾಕಿ ಸ್ವಾಗತ ಕೋರಿದ್ದರು. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ರೂಲ್ಸ್ ಬ್ರೇಕ್ ಮಾಡಿದ್ದರು.

    ಈಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಜಮೀರ್ ಅಹಮ್ಮದ್, ರಾಜ್ಯಕ್ಕೆ ರಾಜ್ಯವೇ ಕೊರೊನಾ ಇಂದ ಕಂಗಾಲಾಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಜನರನ್ನು ಗುಂಪುಗೂಡಿಸಿ ಮೆರವಣಿಗೆ ಮಾಡುವುದು ಬೇಜವಾಬ್ದಾರಿಯ ನಡವಳಿಕೆಯಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ತಿಳಿಹೇಳಬೇಕಾದವರೆ ಈ ರೀತಿ ವರ್ತಿಸಿದರೆ ಹೇಗೆ ಎಂದು ಪ್ರಶ್ನೆ ಮಾಡಿ ಇಮ್ರಾನ್ ಪಾಷಾ ವಿರುದ್ಧ ಟ್ವೀಟ್ ಮಾಡಿದ್ದಾರೆ.

    ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಜಮೀರ್, ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಕೊರೊನಾ ಇಂದ ಗುಣಮುಖರಾಗಿ ಬಂದಿದ್ದು ನನಗೂ ಸಂತೋಷವಾಗಿತ್ತು, ಆದರೆ ಈ ರೀತಿ ಯುದ್ಧ ಗೆದ್ದು ಬಂದವರಂತೆ ಮೆರವಣಿಗೆ ಮೂಲಕ ಬಂದಿದ್ದನ್ನು ನಾನು ಖಂಡಿಸುತ್ತೇನೆ. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.

    ಈ ಸಂಬಂಧ ಈಗಾಗಲೇ ಇಮ್ರಾನ್ ಪಾಷಾ ಅವರನ್ನು ಬಂಧಿಸಲಾಗಿದೆ. ಪೊಲೀಸರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ಪಾಷಾನನ್ನು ಬಂಧಿಸಿದ್ದಾರೆ. ಕೊರೊನಾ ಸಮಯದಲ್ಲಿ ರಾಜಕೀಯ ಮೆರವಣಿಗೆ ನಡೆಸಬಾರದು ಎಂದು ಸೂಚಿಸಿದ್ದರೂ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಮೆರವಣಿಗೆ ನಡೆಸಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಪಾಷಾ ವಿರುದ್ಧ ಪ್ರಕರಣ ದಾಖಲಾಗಿದೆ.

  • ತೆರೆದ ಕಾರಿನಲ್ಲಿ ಮೆರವಣಿಗೆ – ಬಿಲ್ಡಪ್ ಪಾಷಾ ಈಗ ಲಾಕ್ ಅಪ್

    ತೆರೆದ ಕಾರಿನಲ್ಲಿ ಮೆರವಣಿಗೆ – ಬಿಲ್ಡಪ್ ಪಾಷಾ ಈಗ ಲಾಕ್ ಅಪ್

    – 144 ಸೆಕ್ಷನ್ ಜಾರಿ, ಲಘು ಲಾಠಿ ಚಾರ್ಜ್
    – ಸ್ಥಳಕ್ಕೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ

    ಬೆಂಗಳೂರು: ಕೋವಿಡ್ 19 ಹಾಟ್‍ಸ್ಪಾಟ್ ಆಗಿದ್ದ ಪಾದರಾಯನಪುರದ ಪಾಲಿಕೆ ಸದಸ್ಯ ಇಮ್ರಾನ್ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ.

    ಕೋವಿಡ್ 19 ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಮ್ರಾನ್ ಪಾಷಾ ಇಂದು ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಿಡುಗಡೆಯಾದ ಪಾಷಾರನ್ನು ಕಾರ್ಯಕರ್ತರು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಪಾದರಾಯನಪುರದಲ್ಲಿರುವ ನಿವಾಸಕ್ಕೆ ಕರೆ ತಂದಿದ್ದಾರೆ.

    ಈ ವೇಳೆ ಬೈಕ್ ಗಳಲ್ಲಿ ಕುಳಿತವರಯ ಹಲ್ಮೆಟ್ ಇಲ್ಲದೇ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದಿದ್ದರೂ ಗುಂಪಾಗಿ ಮೆರವಣಿಗೆ ಮಾಡಿ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಲಾಗಿದೆ. ಈ ಸಂದರ್ಭದಲ್ಲಿ ರಾಜಕೀಯ ಮೆರವಣಿಗೆ ನಡೆಸಬಾರದು ಎಂದು ಸೂಚಿಸಿದ್ದರೂ ಭಾರೀ ಸಂಖ್ಯೆಯಲ್ಲಿ ಮೆರವಣಿಗೆ ನಡೆಸಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಪೊಲೀಸರು ಇಮ್ರಾನ್ ಪಾಷಾರನ್ನು ಬಂಧಿಸಿದ್ದಾರೆ.

    ಪೊಲೀಸರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಹಾಟ್ ಸ್ಪಾಟ್ ಆಗಿದ್ದ ಪ್ರದೇಶದಲ್ಲಿ ಮೆರವಣಿಗೆ ನಡೆಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಳ್ಳದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

    ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆಗಮಿಸಿರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೊಂದು ಬೇಜವಾಬ್ದಾರಿ ನಡೆಯಾಗಿದೆ. ಕ್ರಿಮಿನಲ್ ಅಪರಾಧವಾಗಿದ್ದು ಇದಕ್ಕಾಗಿ ಸ್ಥಳಕ್ಕೆ ನಾನೇ ಬಂದಿದ್ದೇನೆ. ಸೂಕ್ಷ್ಮ ವಲಯವಾಗಿರುವ ಈ ಸ್ಥಳದಲ್ಲಿ ಬೇಜವಾಬ್ದಾರಿ ವರ್ತನೆ ತೋರಿದ್ದಕ್ಕೆ ಬಂಧಿಸಲಾಗಿದೆ ಎಂದು ತಿಳಿಸಿದರು.

    ತೆರೆದ ಕಾರಿನಲ್ಲಿ ಹೂ ಮಳೆಯೊಂದಿಗೆ ಕ್ಷೇತ್ರಕ್ಕೆ ಬರುತ್ತಿದ್ದ ಇಮ್ರಾನ್ ಪಾಷಾರನ್ನು ನಡೆಸಿಕೊಂಡೇ ಠಾಣೆಗೆ ಕರೆಸಿಕೊಂಡು ಹೋಗಿ ಬಂಧಿಸಿದ್ದಾರೆ. ಈಗ ಪಾದಾರಾಯನಪುರದಲ್ಲಿ 144 ಸೆಕ್ಷನ್ ವಿಧಿಸಲಾಗಿದ್ದು ಎಲ್ಲ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ. ಬಂಧನ ಮಾಡಿದ ಬಳಿಕ ಪಾಷಾರನ್ನು ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಲಘು ಲಾಠಿ ಚಾರ್ಜ್ ಮಾಡಿ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

  • ಕೊರೊನಾದಿಂದ ಗುಣಮುಖನಾದ ಪಾಷಾಗೆ ಅದ್ಧೂರಿ ಸ್ವಾಗತ – ಪಟಾಕಿ ಸಿಡಿಸಿ, ತೆರೆದ ಕಾರಿನಲ್ಲಿ ಸಂಭ್ರಮ

    ಕೊರೊನಾದಿಂದ ಗುಣಮುಖನಾದ ಪಾಷಾಗೆ ಅದ್ಧೂರಿ ಸ್ವಾಗತ – ಪಟಾಕಿ ಸಿಡಿಸಿ, ತೆರೆದ ಕಾರಿನಲ್ಲಿ ಸಂಭ್ರಮ

    – ಸಾಮಾಜಿಕ ಅಂತರವಿಲ್ಲ, ರೂಲ್ಸ್ ಬ್ರೇಕ್ ಮಾಡಿದ ಪಾಷಾ ಬೆಂಬಲಿಗರು

    ಬೆಂಗಳೂರು: ಕೊರೊನಾದಿಂದ ಗುಣಮುಖನಾಗಿ ಬಂದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಜೊತೆಗೆ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿ ನಿಯಮ ಉಲ್ಲಂಘನೆ ಮಾಡಿದ್ದಾರೆ.

    ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಇಮ್ರಾನ್ ಪಾಷಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಇಮ್ರಾನ್ ಪಾಷಾ ಅವರನ್ನು 7 ದಿನಕ್ಕೊಮ್ಮೆ ಕೋವಿಡ್-19 ಟೆಸ್ಟ್ ಮಾಡಲಾಗಿತ್ತು. ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಮಾಡಲಾಗಿದೆ.

    ಇಂದು ಆಸ್ಪತ್ರೆಯಿಂದ ಬಿಡುಗಡೆಯಾದ ಇಮ್ರಾನ್ ಪಾಷಾರನ್ನು ಸ್ವಾಗತ ಮಾಡಲು ಅವರ ಬೆಂಬಲಿಗರು ಆಸ್ಪತ್ರೆಯಿಂದ ಪಾದಾರಾಯನಪುರವರೆಗೂ ಸೇರಿದ್ದಾರೆ. ಮಾಸ್ಕ್ ಧರಿಸದೇ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ನಿಯಮಗಳನ್ನು ಬ್ರೇಕ್ ಮಾಡಿದ್ದಾರೆ. ಜೊತೆಗೆ ಇಮ್ರಾನ್ ಅವರನ್ನು ತೆರೆದ ಕಾರಿನಲ್ಲಿ ಮೆರವಣಿಗೆ ಮಾಡುತ್ತಿದ್ದು, ರಸ್ತೆಯುದ್ದಕ್ಕೂ ಹೂ ಹಾಕಿ ಸ್ವಾಗತ ಮಾಡಲಾಗುತ್ತಿದೆ. ಈ ಕಾರದಿಂದ ಮೈಸೂರ್ ರೋಡ್ ಫುಲ್ ಜಾಮ್ ಆಗಿದ್ದು, ಜನ ಸಮಾನ್ಯರಿಗೆ ತೊಂದರೆಯಾಗಿದೆ.

    ಇಮ್ರಾನ್ ಪಾಷಾ ಆಸ್ಪತ್ರೆಯಿಂದ ಹೊರಗೆ ಬಂದ ತಕ್ಷಣ ಅವರಿಗೆ ಶಾಲು ಹಾಕಿ ಹೂಮಾಲೆಯಾಕಿ ಅವರ ಅಭಿಮಾನಿಗಳು ಬರಮಾಡಿಕೊಂಡಿದ್ದಾರೆ. ಜೊತೆಗೆ ಡಿಸ್ಚಾರ್ಜ್ ಮಾಡಿದ ತಕ್ಷಣ ಮನಸೋ ಇಚ್ಛೆ ಓಡಾಡುವಂತಿಲ್ಲ. 14 ದಿನಗಳ ಕಾಲ ಹೋಮ್ ಕ್ವಾರಂಟೈನ್‍ನಲ್ಲಿರಬೇಕು ಎಂದು ವೈದ್ಯರು ಸೂಚಿದ್ದರು, ಅವರ ಮಾತಿಗೆ ಬೆಲೆ ಕೊಡದ ಪಾಷಾ ಕೊರೋನಾ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದಂತೆ ಆಸ್ಪತ್ರೆಯಿಂದ ಬಂದ ತಕ್ಷಣ ತನ್ನ ಹಳೇ ಚಾಳಿಯನ್ನು ಮುಂದುವರೆಸಿದ್ದಾರೆ.

    ಇಷ್ಟೇಲ್ಲ ನಿಯಮಗಳನ್ನು ಪಾಲಿಸದೇ ರಸ್ತೆಯಲ್ಲಿ ಮೆರೆವಣಿಗೆ ಮಾಡುತ್ತಿದ್ದರೂ ಅದನ್ನು ಕೇಳಲು ಸ್ಥಳದಲ್ಲಿ ಒಬ್ಬ ಪೊಲೀಸ್ ಕೂಡ ಇಲ್ಲ ಎಂದು ಸಾರ್ವಜನಿಕರು ಆಕ್ರೋಶ ಕೊಂಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ಬೈಕ್ ರ‌್ಯಾಲಿಯನ್ನು ತಡೆದಿದ್ದಾರೆ. ಜೊತೆಗೆ ಪಾಷಾ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿರಬಹುದು ಎಂದು ಜನರು ಹೇಳುತ್ತಿದ್ದಾರೆ.

  • ಆಸ್ಪತ್ರೆಗೆ ಹೋಗಲು ರಾದ್ಧಾಂತ ಮಾಡಿದ್ದ ಕಾರ್ಪೊರೇಟರ್ ಇಮ್ರಾನ್ ಪಾಷಾ ಗುಣಮುಖ

    ಆಸ್ಪತ್ರೆಗೆ ಹೋಗಲು ರಾದ್ಧಾಂತ ಮಾಡಿದ್ದ ಕಾರ್ಪೊರೇಟರ್ ಇಮ್ರಾನ್ ಪಾಷಾ ಗುಣಮುಖ

    – ಇಂದು ಡಿಸ್ಚಾರ್ಜ್, 14 ದಿನ ಹೋಮ್ ಕ್ವಾರಂಟೈನ್‍ನಲ್ಲಿರಲು ಸೂಚನೆ

    ಬೆಂಗಳೂರು: ಕೊರೊನಾ ಸೋಂಕು ತಗುಲಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿ, ಮನೆ ಮುಂದೆ ಹೈ ಡ್ರಾಮಾ ಮಾಡಿದ್ದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಲಿದ್ದಾರೆ.

    ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಇಮ್ರಾನ್ ಪಾಷಾ ಅವರನ್ನು 7 ದಿನಕ್ಕೊಮ್ಮೆ ಕೋವಿಡ್-19 ಟೆಸ್ಟ್ ಮಾಡಲಾಗಿತ್ತು. ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಮಾಡಲು ನಿರ್ಧರಿಸಲಾಗಿದೆ.

    ಡಿಸ್ಚಾರ್ಜ್ ಮಾಡಿದ ತಕ್ಷಣ ಮನಸೋ ಇಚ್ಛೆ ಓಡಾಡುವಂತಿಲ್ಲ, 14 ದಿನಗಳ ಕಾಲ ಹೋಮ್ ಕ್ವಾರಂಟೈನ್‍ನಲ್ಲಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಸೀಲ್ ಹಾಕಿ ಕ್ವಾರಂಟೈನ್‍ನಲ್ಲಿರುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಕೊರೊನಾ ಸೋಂಕು ತಗುಲಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿ, ಮನೆ ಮುಂದೆ ಹೈ ಡ್ರಾಮಾ ಮಾಡಿದ್ದರು. ಈ ಮೂಲಕ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದ್ದರು. ಇದೀಗ ಚಿಕಿತ್ಸೆ ಪಡೆದು ಗುಣಮುಖವಾಗಿದ್ದಾರೆ.

    ಇಮ್ರಾನ್ ಪಾಷಾ ಡಿಸ್ಚಾರ್ಜ್ ಹಿನ್ನೆಲೆಯಲ್ಲಿ ಬೆಳಗ್ಗೆ 11.45ಕ್ಕೆ ಇಮ್ರಾನ್ ಆಸ್ಪತ್ರೆಯಿಂದ ಹೊರ ಬರಲಿದ್ದು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್‍ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಮ್ರಾನ್ ನೇರವಾಗಿ ಪಾದರಾಯನಪುರ ಮನೆಗೆ ಬರಲಿದ್ದಾರೆ.

    ಕಾರ್ಪೊರೇಟರ್ ಹೈಡ್ರಾಮಾ:
    ಪಾದರಾಯನಪುರ ವಾರ್ಡ್ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ಮೇ 29ರಂದು ಕೊರೊನಾ ಸೋಂಕು ದೃಢಪಟ್ಟಿದ್ದರೂ ಆಸ್ಪತ್ರೆ ಸೇರಿದ್ದು ಮೇ 30 ಮಧ್ಯಾಹ್ನದ ಹೊತ್ತಿಗೆ. ಇಮ್ರಾನ್ ಪಾಷಾ ಆಸ್ಪತ್ರೆಗೆ ದಾಖಲಗಲು ನಿರಾಕರಿಸಿ ಮೊಂಡಾಟ ಪ್ರದರ್ಶಿಸಿದ್ದರು. ಮನೆ ಬಳಿಗೆ ಪೊಲೀಸರು, ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಬಂದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬಂದಿರಲಿಲ್ಲ.

    ಕಾರ್ಪೊರೇಟರ್ ಇಮ್ರಾನ್ ತಂದೆ ಆರೀಫ್, ಶಾಸಕ ಜಮೀರ್ ಅಹ್ಮದ್ ಮಾತನ್ನೂ ಕೇಳಲಿಲ್ಲ. ಕೊನೆಗೆ ಪೊಲೀಸರು, ನೀವು ಆಸ್ಪತ್ರೆಗೆ ಬರಲಿಲ್ಲ ಅಂದ್ರೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡ್ತೀವಿ ಎಂದು ವಾರ್ನಿಂಗ್ ಕೊಟ್ಟರು. ಸತತ ಮೂರು ಗಂಟೆಗಳ ಹೈಡ್ರಾಮಾ ಬಳಿಕ ಇಮ್ರಾನ್ ಪಾಷಾ ಪಿಪಿಇ ಕಿಟ್ ಸಮೇತ ಮನೆಯಿಂದ ಹೊರಬಂದು, ಜನರತ್ತ ಕೈಬೀಸಿ ಅಂಬುಲೆನ್ಸ್ ಹತ್ತಿ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದರು.

    ಇಮ್ರಾನ್ ಬೆಂಬಲಿಗರನ್ನು ನಿಯಂತ್ರಿಸುವುದು ಪೊಲೀಸರಿಗೆ ಕಷ್ಟವಾಗಿಬಿಟ್ಟಿತ್ತು. ಇಮ್ರಾನ್ ಪಾಷಾ 200ಕ್ಕೂ ಹೆಚ್ಚು ಮಂದಿ ಜೊತೆ ಸಂಪರ್ಕದಲ್ಲಿದ್ದು, ಎಲ್ಲರನ್ನೂ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ಕಾರ್ಪೊರೇಟರ್ ನಡುವಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂಥಾದ್ದೆಲ್ಲಾ ಸಹಿಸೋಕೆ ಆಗಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಶನಿವಾರ ಗರಂ ಆಗಿದ್ದರು. ಅಷ್ಟೇ ಅಲ್ಲದೆ ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ಧ ಕ್ರಮಕ್ಕೆ ಕಂದಾಯ ಸಚಿವ ಅಶೋಕ್ ಆಗ್ರಹಿಸಿದ್ದರು. ಅಲ್ಲದೆ ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ), 270 (ವೈರಸ್ ಹಬ್ಬಿಸಲು ಯತ್ನ), 271 (ರೋಗ ನಿರೋಧಕ ನಿರ್ಬಂಧ ನಿಯಮವನ್ನು ಉಲ್ಲಂಘಿಸುವುದು) ಹಾಗೂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.

  • ಅಂಬುಲೆನ್ಸ್‌ನಲ್ಲಿ ಬಂದ್ಬುಟ್ಟೆ, ನಾನೇನು ಹಠ ಮಾಡಲಿಲ್ಲ: ಇಮ್ರಾನ್ ಪಾಷಾ

    ಅಂಬುಲೆನ್ಸ್‌ನಲ್ಲಿ ಬಂದ್ಬುಟ್ಟೆ, ನಾನೇನು ಹಠ ಮಾಡಲಿಲ್ಲ: ಇಮ್ರಾನ್ ಪಾಷಾ

    – ಸುಖಾಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸಬೇಡಿ
    – ಆಸ್ಪತ್ರೆಯಿಂದ ವಿಡಿಯೋ ಮೂಲಕ ಸ್ಪಷ್ಟನೆ

    ಬೆಂಗಳೂರು: ಕೊರೊನಾ ಸೋಂಕಿದ್ದರೂ ಆಸ್ಪತ್ರೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದ ಕಾಪೋರೇಟರ್ ಇಮ್ರಾನ್ ಪಾಷಾ, ತಮ್ಮ ಮನೆ ಬಳಿ ದೊಡ್ಡ ಹೈಡ್ರಾಮಾ ಮಾಡಿದ್ದರು. ಇದೀಗ ಆಸ್ಪತ್ರೆಯಿಂದಲೇ ವಿಡಿಯೋ ಬಿಡುಗಡೆ ಮಾಡಿದ್ದು, ನಾಲ್ಕು ಜನಕ್ಕೆ ಬುದ್ಧಿ ಹೇಳುವವನು ನಾನು. ಹಾಗೆ ಮಾಡಲು ಸಾಧ್ಯವೇ, ಇದೆಲ್ಲ ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದಾರೆ.

    ಆಸ್ಪತ್ರೆಯಿಂದಲೇ ವಿಡಿಯೋ ಮಾಡಿರುವ ಇಮ್ರಾನ್ ಪಾಷಾ, ಮಾಧ್ಯಮಗಳೇ ಸೃಷ್ಟಿಸಿಕೊಂಡು ಏನೇನೋ ಸುದ್ದಿ ಬಿತ್ತರಿಸಿವೆ. ಕೊರೊನಾ ಪಾಸಿಟಿವ್ ಇದ್ದೂ ಆಸ್ಪತ್ರೆಗೆ ಹೋಗಿಲ್ಲ ಎಂದು ಸುದ್ದಿ ಮಾಡಿವೆ. ಇದು ಸುಳ್ಳು ಸುದ್ದಿ. ನಾನೊಬ್ಬ ಜನಪ್ರತಿನಿಧಿಯಾಗಿ, ಇತತರಿಗೆ ಬುದ್ಧಿ ಹೇಳುವವನಾಗಿ ಈ ರೀತಿ ಮಾಡಲು ಸಾಧ್ಯವೇ, ಇದು ಸುಳ್ಳು. ನಾನು ಆ ರೀತಿ ಮಾಡಿಲ್ಲ ಎಂದು ಹೇಳಿದ್ದಾರೆ.

    ಘಟನೆ ನಡೆದ ಹಿಂದಿನ ದಿನ ರಾತ್ರಿ ನನಗೆ ಕೊರೊನಾ ವೈರಸ್ ಇದೆ ಎಂದು ಶಂಕಿಸಲಾಯಿತು. ಕನ್ಫರ್ಮ್ ಇಲ್ಲ ಬೆಳಗ್ಗೆ ಖಚಿತಪಡಿಸುತ್ತೇವೆ ಎಂದು ಹೇಳಿದರು. ಸರಿ ರಾತ್ರಿ ಏನು ಮಾಡಲಿಕ್ಕಾಗುತ್ತೆ. ಅಷ್ಟೊತ್ತಿಗೆ ಎಲ್ಲಿ ಹೋಗುವುದು ಎಂದು ಯೋಚಿಸಿ, ಬೆಳಗ್ಗೆ ಎದ್ದು ಹೋಗೋಣ ಎಂದು ಮನೆಗೆ ಹೋದೆ. ಕುಟುಂಬಸ್ಥರನ್ನೆಲ್ಲ ಬೇರೆ ಮಾಡಿ. ಸೆಲ್ಫ್ ಕ್ವಾರಂಟೈನ್ ಮಾಡಿಕೊಂಡು ರೂಮಲ್ಲಿ ಮಲಗಿದ್ದೆ ಎಂದು ತಿಳಿಸಿದ್ದಾರೆ.

    ಬೆಳಗ್ಗೆ ಅಂಬುಲೆನ್ಸ್ ಬಂತು, ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಬಂದೆ ಅಷ್ಟೇ, ಅದು ಬಿಟ್ಟರೆ ಬೇರೆನೂ ಇಲ್ಲ. ಆದರೆ ಮಾಧ್ಯಮಗಳಲ್ಲಿ ಇಮ್ರಾನ್ ಪಾಷಾ ಬರಲಿಲ್ಲ. ನಿರ್ಲಕ್ಷ್ಯ ಮಾಡಿದ್ದಾರೆ, ಬೇಜವಾಬ್ದಾರಿ ವರ್ತನೆ ಎಂದು ಹೇಳಿದರು. ಈ ರೀತಿ ವೈದ್ಯರು, ಪೊಲೀಸರು ಹೇಳಿದ್ದರಾ, ನೀವೇ ಸುದ್ದಿ ಮಾಡಿಕೊಂಡು ಏನೇನೋ ತೋರಿಸುತ್ತಿದ್ದೀರಿ. ನಾನು ಆ ತರ ಮಾಡಿಲ್ಲ. ಸುಖಾ ಸುಮ್ಮನೇ ಏನೇನೋ ಸುದ್ದಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಸುಮಾರು ಜನ ನಾನು ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ನಾನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದೆ. ಅವರೆಲ್ಲರಿಗೂ ಧನ್ಯವಾದ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.