Tag: ಇರಾನಿ ಡ್ರೋನ್

  • ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

    ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

    – ದಾಳಿ ಹಿಮ್ಮೆಟ್ಟಿಸುವಾಗ ಉಕ್ರೇನ್‌ನ F-16 ಫೈಟರ್‌ ಪೈಲಟ್ ಸಾವು

    ಮಾಸ್ಕೋ/ಕೈವ್‌: ಅತ್ತ ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಕದನ ವಿರಾಮ ಬಿದ್ದ ಬೆನ್ನಲ್ಲೇ ಇತ್ತ ರಷ್ಯಾ-ಉಕ್ರೇನ್‌ ನಡುವಿನ ಯುದ್ಧ (Russia Ukraine War) ಮತ್ತಷ್ಟು ತೀವ್ರಗೊಂಡಿದೆ. ರಾತ್ರೋರಾತ್ರಿ ಉಕ್ರೇನ್‌ ಮೇಲೆ ರಷ್ಯಾ ಅತಿದೊಡ್ಡ ವಾಯುದಾಳಿ ನಡೆಸಿದೆ ಎಂದು ಉಕ್ರೇನ್‌ ಹೇಳಿಕೊಂಡಿದೆ. ಬರೋಬ್ಬರಿ 477 ಡ್ರೋನ್‌ಗಳು ಹಾಗೂ 60 ಮಿಸೈಲ್‌ಗಳಿಂದ ರಷ್ಯಾ ದಾಳಿ (Russia Biggest Attack) ನಡೆಸಿರುವುದಾಗಿ ವರದಿಗಳು ತಿಳಿಸಿವೆ.

    ಹೌದು. ಯುದ್ಧ ಆರಂಭವಾದ ಬಳಿಕ ರಷ್ಯಾ ರಾತ್ರೋರಾತ್ರಿ ನಡೆಸಿದ ಅತಿದೊಡ್ಡ ವೈಮಾನಿಕ ದಾಳಿ (Air Strike) ಇದಾಗಿದೆ. ಉಕ್ರೇನ್ ಮೇಲೆ ರಷ್ಯಾ 537 ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಿದ್ದು, ಇವುಗಳಲ್ಲಿ 477 ಡೋನ್ (Drone) ಹಾಗೂ 60 ಕ್ಷಿಪಣಿಗಳು ಸೇರಿವೆ. ಆದ್ರೆ ಕ್ಷಿಪಣಿ, ಡ್ರೋನ್‌ ಸೇರಿದಂತೆ 249 ಶಸ್ತ್ರಾಸ್ತ್ರಗಳನ್ನು ಹೊಡೆದುರುಳಿಸಲಾಗಿದೆ. ಇನ್ನು ಕೆಲವನ್ನು ಎಲೆಕ್ಟ್ರಾನಿಕ್ ಜಾಮರ್ ಮೂಲಕ ತಡೆಹಿಡಿಯಲಾಯಿತು ಎಂದು ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ (Volodymyr Zelensky) ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ | ಪ್ರವಾಹದಲ್ಲಿ ಕೊಚ್ಚಿ ಹೋದ 9 ಜನ – 18 ಸದ್ಯಸರ ಕುಟುಂಬದ ದುರಂತ ಪ್ರವಾಸ

    ಎಫ್‌-16 ಪೈಲಟ್‌ ಸಾವು
    ರಷ್ಯಾದ ದಾಳಿಯನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ತನ್ನ ದೇಶದ F-16 ಯುದ್ಧ ವಿಮಾನದ ಪೈಲಟ್ ಮ್ಯಾಕ್ಸಿಮ್ ಉಸ್ಟೆಂಕೊ ಸಾವನ್ನಪ್ಪಿರುವುದಾಗಿ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಆದ್ರೆ ಪೈಲಟ್‌ ಸಾಯುವುದಕ್ಕೂ ಮುನ್ನ 7 ವಾಯುಗುರಿಗಳನ್ನ ನಾಶಪಡಿಸಿದ್ದಾರೆ ಎಂದು‌ ತಿಳಿಸಿದ್ದಾರೆ. ಇದನ್ನೂ ಓದಿ: `ಆಪರೇಷನ್ ಸಿಂಧೂರ’ದಲ್ಲಿ ನಿರ್ನಾಮವಾದ ಉಗ್ರರ ಲಾಂಚ್ ಪ್ಯಾಡ್ ಮರುನಿರ್ಮಾಣ ಮಾಡುತ್ತಿದೆ ಪಾಕ್‌

    ಇರಾನಿ ಡ್ರೋನ್‌ ಬಳಕೆ
    ರಷ್ಯಾವು ಉಕ್ರೇನ್‌ ಮೇಲೆ ಪ್ರಯೋಗಿಸಿದ 477 ಡ್ರೋನ್‌ಗಳ ಪೈಕಿ ಹೆಚ್ಚಿನವುಗಳು ಇರಾನ್‌ ನಿರ್ಮಿತ ʻಶಹೇದ್‌ʼ ಡ್ರೋನ್‌ಗಳಾಗಿವೆ. ದಾಳಿಯಿಂದ ಸ್ಮಿಲಾದಲ್ಲಿನ ವಸತಿ ಕಟ್ಟಡಕ್ಕೆ ಹಾನಿಯಾಗಿದ್ದು, ಪಂದು ಮಗು ಗಾಯಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇರಾನ್‌ನ ಪರಮಾಣು ಯೋಜನೆಗೆ 30 ಶತಕೋಟಿ ಡಾಲರ್‌ ನೆರವು ಪ್ರಸ್ತಾಪಿಸಿದ ಅಮೆರಿಕ

    ಈ ವಾರದಲ್ಲಿ ರಷ್ಯಾ 114ಕ್ಕೂ ಹೆಚ್ಚು ಮಿಸೈಲ್‌ಗಳು, 1,270ಕ್ಕೂ ಹೆಚ್ಚು ಡ್ರೋನ್‌, 1,100 ಗ್ಲೈಡ್‌ ಬಾಂಬ್‌ಗಳನ್ನು ಉಕ್ರೇನ್‌ ಮೇಲೆ ಪ್ರಯೋಗಿಸಿದೆ ಎಂದು ತಿಳಿದುಬಂದಿದೆ. 2022ರಲ್ಲಿ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿಯನ್ನು ರಷ್ಯಾ ಪ್ರಾರಂಭಿಸಿತ್ತು. ಆ ಬಳಿಕ ನಡೆದ ಅತಿದೊಡ್ಡ ದಾಳಿ ಇದೆನ್ನಲಾಗಿದೆ. ಶಾಂತಿ ಮಾತುಕತೆಗೆ ಸಿದ್ಧವಾಗಿದ್ದೇವೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೆಯ ಬೆನ್ನಲ್ಲೇ ಈ ದಾಳಿ ನಡೆದಿದೆ ಎನ್ನಲಾಗಿದೆ. ಮತ್ತೊಂದೆಡೆ ಉಕ್ರೇನಿನ ಮೂರು ಡೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

  • ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ

    ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ

    ಕೈವ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin)  ಕನಸಿನ ಕ್ರಿಮಿಯಾ ಸಂಪರ್ಕಿಸುವ ಕ್ರಚ್ ಸೇತುವೆಯನ್ನು ಉಕ್ರೇನ್ (Ukraine) ಧ್ವಂಸಗೊಳಿಸಿದ ಬಳಿಕ ಆಕ್ರೋಶಗೊಂಡ ರಷ್ಯಾ (Russia), ಉಕ್ರೇನ್ ವಿರುದ್ಧ ಸಮರ ಸಾರಿದೆ.

    ಸೋಮವಾರದಿಂದ ಸತತವಾಗಿ ಉಕ್ರೇನ್ ಮೇಲೆ ಭೀಕರ ದಾಳಿ ನಡೆಸಿದೆ. ಸೋಮವಾರ 75 ಮಿಸೆಲ್ (Cruise Missiles) ಹಾಗೂ 5 ಡೆಡ್ಲಿ ರಾಕೆಟ್‌ಗಳಿಂದ ಅಗ್ನಿಮಳೆಗರೆದಿದ್ದ ರಷ್ಯಾ ಇಂದೂ ತನ್ನ ದಾಳಿಯನ್ನೂ ಮುಂದುವರಿಸಿದೆ. ಇದನ್ನೂ ಓದಿ: ಸೇಡಿಗೆ ಸೇಡು – ಇರಾನ್‌ ಡ್ರೋನ್ ಬಳಸಿ ರಷ್ಯಾ, ಉಕ್ರೇನ್ ಮೇಲೆ ದಾಳಿ

    ಬೆಳ್ಳಂಬೆಳಗ್ಗೆ ಉಕ್ರೇನ್ ರಾಜಧಾನಿ ಕೀವ್ (Kyiv) ಮೇಲೆ ನಡೆಸಿದ ದಾಳಿಯಲ್ಲಿ 14 ಮಂದಿ ದುರ್ಮರಣಕ್ಕೀಡಾಗಿದ್ದು, ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಆದರೆ ಉಕ್ರೇನ್ ತನ್ನ ಮೇಲೆ ರಷ್ಯಾ 84 ಕ್ರೂಸ್ ಮಿಸೆಲ್‌ಗಳಿಂದ (Cruise Missiles) ದಾಳಿ ನಡೆಸಿದೆ ಎಂದು ಹೇಳಿದೆ. ಜೂನ್ ತಿಂಗಳ ಅಂತ್ಯದ ಬಳಿಕ ನಡೆದ ಮೊದಲ ಭೀಕರ ದಾಳಿ ಇದಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ- ಸೇತುವೆ ಉಡೀಸ್ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ರಷ್ಯಾ

    ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಗಲ್ ಪ್ರಕಾರ, ಕೀವ್ ಮತ್ತು ಇತರ 8 ಪ್ರದೇಶಗಳಲ್ಲಿ 11 ಪ್ರಮುಖ ಮೂಲಸೌಕರ್ಯಗಳು ಹಾನಿಗೊಳಗಾಗಿವೆ. ಇದರಿಂದ ವಿದ್ಯುತ್, ನೀರು ಸಂಪರ್ಕ ತಾತ್ಕಾಲಿಕವಾಗಿ ಕಡಿತಗೊಳ್ಳಲಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಪುಟಿನ್, ಮಿಸೆಲ್ ದಾಳಿಗಳು, ಉಕ್ರೇನ್‌ನ ಇಂಧನ ಮೂಲಸೌಕರ್ಯಗಳನ್ನು ಹೊಡೆದುರುಳಿಸಿವೆ. ಉಕ್ರೇನ್‌ನ ಮಿಲಿಟರಿ ಶಕ್ತಿ ಹಾಗೂ ವಾಹನ ಸೌಲಭ್ಯಗಳ ಮೇಲೆ ಹೆಚ್ಚಿನ ದಾಳಿ ನಡೆದಿದೆ ಎಂದಿದ್ದಾರೆ.

    ಸೇತುವೆ ಉಡೀಸ್ ಮಾಡಿದ್ದ ಉಕ್ರೇನ್:
    ಕಳೆದ ಮೂರು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕನಸಿನ ಕ್ರಿಮಿಯಾ – ರಷ್ಯಾ ಸಂಪರ್ಕಿಸುವ ಕ್ರಚ್ ಸೇತುವೆಯನ್ನು (Crimean Bridge) ಉಕ್ರೇನ್ ಉಡೀಸ್ ಮಾಡಿತ್ತು. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ ಮೂಲಕ ಉಕ್ರೇನ್‌ನ ಖೇರ್ಸನ್, ರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ಮಾಡುವ ರಷ್ಯಾದ ರೈಲನ್ನು (Railway) ಉಕ್ರೇನ್ ಉಡಾಯಿಸಿತ್ತು. ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

    ಇದಕ್ಕೆ ಪ್ರತಿಕಾರವಾಗಿ ರಷ್ಯಾ ಭೀಕರ ದಾಳಿ ನಡೆಸುತ್ತಿದೆ. ನಿನ್ನೆ ಇರಾನಿನ `ಶಾಹೆಡ್-136 VAV ಡ್ರೋನ್‌ಗಳನ್ನು (ಮಾನವರಹಿತ ವೈಮಾನಿಕ ವಾಹನಗಳು) (Iranian Drones) ಬಳಸಿ ದಾಳಿ ನಡೆಸಿತ್ತು. 75 ಮಿಸೆಲ್‌ಗಳಿಂದ ದಾಳಿ ನಡೆಸಿ ಹಲವು ಕಟ್ಟಡಗಳನ್ನು ಧ್ವಂಸಗೊಳಿಸಿತ್ತು.

    Live Tv
    [brid partner=56869869 player=32851 video=960834 autoplay=true]