Tag: ಇರಾನ್ ಸರ್ಕಾರ

  • ಇರಾನ್‌ನಲ್ಲಿ ಹಿಜಬ್‌ ವಿವಾದ ಮತ್ತೆ ಮುನ್ನೆಲೆಗೆ – ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಯುವತಿ ಅರೆಸ್ಟ್‌

    ಇರಾನ್‌ನಲ್ಲಿ ಹಿಜಬ್‌ ವಿವಾದ ಮತ್ತೆ ಮುನ್ನೆಲೆಗೆ – ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಯುವತಿ ಅರೆಸ್ಟ್‌

    ಟೆಹ್ರಾನ್‌: ಕಡ್ಡಾಯವಾಗಿ ಹಿಜಬ್‌ ಧರಿಸಬೇಕೆಂಬ ವಸ್ತ್ರ ಸಂಹಿತೆ ವಿರುದ್ಧ ಇರಾನ್ ವಿಶ್ವವಿದ್ಯಾನಿಲಯದ‌ (Islamic Azad University) ಆವರಣದಲ್ಲಿ ಒಳ ಉಡುಪು ಧರಿಸಿ ಪ್ರತಿಭಟನೆ (Iranian Woman Protest) ನಡೆಸಿದ್ದ ಇರಾನ್‌ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಟೆಹ್ರಾನ್‌ನ ಇಸ್ಲಾಮಿಕ್‌ ಆಜಾಜ್‌ ವಿವಿಯಲ್ಲಿ ಒಳಉಡುಪು ಧರಿಸಿಕೊಂಡು ಸುತ್ತಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದ್ದ ಯುವತಿಯ ವೀಡಿಯೋ ಒಂದು ದಿನದ ಹಿಂದೆಯಷ್ಟೇ ವೈರಲ್‌ ಆಗಿತ್ತು. ಈ ಬೆನ್ನಲ್ಲೇ ಯುವತಿಯ ಪರ – ವಿರೋಧ ಚರ್ಚೆಗಳೂ ಹುಟ್ಟಿಕೊಂಡಿವೆ. ಇದನ್ನೂ ಓದಿ: US Election 2024 | 7 ಕೋಟಿಗೂ ಹೆಚ್ಚು ಜನರಿಂದ ಮೊದಲೇ ಮತದಾನ – Swing ರಾಜ್ಯಗಳಲ್ಲಿ ಟ್ರಂಪ್‌ ಮುನ್ನಡೆ

    ಇರಾನ್‌ನಲ್ಲಿ ಮುಸ್ಲಿಂ ಸಮುದಾಯದ (Muslim Community) ಮೂಲಭೂತವಾದಿಗಳು ಆಚರಣೆಯಲ್ಲಿಟ್ಟಿರುವ ಕಟ್ಟುನಿಟ್ಟಾದ ವಸ್ತ್ರಸಂಹಿತೆ ಹಾಗೂ ನೈತಿಕ ಪೊಲೀಸ್‌ಗಿರಿ ವಿರುದ್ಧ ಪ್ರತಿಭಟಿಸಲೆಂದೇ ಯುವತಿ ಒಳ ಉಡುಪಿನಲ್ಲಿ ಸಾರ್ವಜನಿಕವಾಗಿ ತಿರುಗಾಡಿದ್ದಾರೆ ಎಂದು ವರದಿಯಾಗಿತ್ತು. ಆದ್ರೆ ಇಸ್ಲಾಮಿಕ್‌ ವಿಶ್ವವಿದ್ಯಾಲಯದ ವಕ್ತಾರ ಅಮೀರ್‌ ಮಹಜೋಬ್, ಕ್ಯಾಂಪಸ್‌ನಲ್ಲಿ ಒಳ ಉಡುಪಿನಲ್ಲಿ ತಿರುಗಾಡಿರುವ ಯುವತಿ ಮಾನಸಿಕ ಅಸ್ವಸ್ಥಳಾಗಿದ್ದಾಳೆ ಎಂದು ಹೇಳಿದ್ದರು. ಇದನ್ನೂ ಓದಿ: Canada | ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಗುಂಪು ಅಟ್ಯಾಕ್‌ – ಜಸ್ಟಿನ್‌ ಟ್ರುಡೋ ಖಂಡನೆ

    ಯುವತಿಯೊಬ್ಬಳು ಸಾರ್ವಜನಿಕವಾಗಿ ಒಳ ಉಡುಪಿನಲ್ಲಿ ಕಾಣಿಸಿಕೊಳ್ಳುವುದು ಇರಾನ್‌ ಮಹಿಳೆಯರಿಗೆ ಊಹಿಕೊಳ್ಳಲು ಅಸಾಧ್ಯವಾದ ಕೆಲಸ. ಆದರೆ, ಹಿಜಬ್‌ ಕಡ್ಡಾಯ ಎಂಬ ಮೂರ್ಖತನಕ್ಕೆ ಇದು ಸರಿಯಾದ ಪ್ರತಿಕ್ರಿಯೆಯಾಗಿದೆ ಎಂದು ಲೈಲಾ ಎನ್ನುವ ಇರಾನ್‌ ನಿವಾಸಿಯ ʻಎಕ್ಸ್‌ʼ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದರು. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್‌ ವಿರೋಧಿಸಿ ಪ್ರತಿಭಟನೆ – 6 ವಾರಗಳಲ್ಲಿ 14,000 ಮಂದಿ ಬಂಧನ

    2 ವರ್ಷಗಳ ಹಿಂದಿನ ಹಿಂಸಾಚಾರ ನೆನಪಿದೆಯೆ?
    2022ರಲ್ಲಿ ಇರಾನ್‌ ಪೊಲೀಸರ ವಶದಲ್ಲಿದ್ದ ಮಹ್ಸಾ ಅಮಿನಿಯಾ ಎಂಬ ಇರಾನ್‌ ಮೂಲದ ಯುವತಿಯು (ಹಿಜಬ್‌ ಧರಿಸದ ಅಪರಾಧ ಹಿನ್ನೆಲೆಯಲ್ಲಿ ಬಂಧಿತೆ) ಮೃತಪಟ್ಟ ಘಟನೆಯ ನಂತರ ಹಿಜಬ್‌ ವಿರುದ್ಧದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಪ್ರತಿಭಟನಾಕಾರರ ಮೇಲೆ ಗುಂಡಿಕ್ಕುವಂತಹ ನಿರ್ದಾಕ್ಷಿಣ್ಯ ಕ್ರಮಗಳ ಮೂಲಕ ಕ್ರಮೇಣ ಜನರ ಆಕ್ರೋಶವನ್ನು ತಣ್ಣಗಾಗಿಸಲಾಗಿತ್ತು. ಸಾವಿರಾರು ಮಂದಿಯನ್ನು ಬಂಧಿಸಿ ಇರಾನ್‌ ಸರ್ಕಾರ ಜೈಲಿಗಟ್ಟಿತ್ತು. ಆ ಬಳಿಕ ಇರಾನ್‌ನಲ್ಲಿ ಪ್ರತಿಭಟನೆ ಕಾವು ತಣ್ಣಗಾಗಿತ್ತು. ಇದೀಗ ಯುವತಿ ಒಳುಡುಪು ಧರಿಸಿ ತಿರುಗಾಡಿದ ಹಿನ್ನೆಲೆ ಮತ್ತೆ ಹಿಜಬ್‌ ವಿವಾದ ಮುನ್ನೆಲೆಗೆ ಬಂದಿದೆ.

  • Iran Blasts: ಅವಳಿ ಬಾಂಬ್‌ ಸ್ಫೋಟದಲ್ಲಿ 103 ಸಾವು, 141ಕ್ಕೂ ಹೆಚ್ಚು ಮಂದಿಗೆ ಗಾಯ

    Iran Blasts: ಅವಳಿ ಬಾಂಬ್‌ ಸ್ಫೋಟದಲ್ಲಿ 103 ಸಾವು, 141ಕ್ಕೂ ಹೆಚ್ಚು ಮಂದಿಗೆ ಗಾಯ

    ಟೆಹ್ರಾನ್‌: ಇರಾನ್‌ನಲ್ಲಿ ಅವಳಿ ಬಾಂಬ್‌ ಸ್ಫೋಟಗೊಂಡು 103 ಮಂದಿ ಸಾವನ್ನಪ್ಪಿ, 141 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

    ಇರಾನ್‌ನ ದಕ್ಷಿಣ ನಗರಿ ಕೆರ್ಮಾನ್‌ನಲ್ಲಿ ಕಮಾಂಡರ್‌ ಕಾಸ್ಸೇಮ್‌ ಸೋಲೈಮನಿ (Iranian general Qasem Soleimani) ಅವರ ಸ್ಮರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ದುರ್ಘಟನೆ ನಡೆದಿದ್ದು, ಭಾರೀ ಆತಂಕವನ್ನೂ ಸೃಷ್ಟಿ ಮಾಡಿದೆ.

    2020ರಲ್ಲಿ ಅಮೆರಿಕಾವು ಬಾಗ್ದಾದ್‌ದ ವಿಮಾನ ನಿಲ್ದಾಣದ ಮೇಲೆ ಡ್ರೋಣ್‌ ದಾಳಿ (US drone strike in Iraq) ನಡೆಸಿತ್ತು. ಈ ದಾಳಿಯಲ್ಲಿ ಕಮಾಂಡರ್‌ ಕಾಸ್ಸೇಮ್‌ ಸೋಲೈಮನಿ ಹತರಾಗಿದ್ದರು. ಇವರ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರತಿ ವರ್ಷ ಇರಾನ್‌ನಲ್ಲಿ ಆಯೋಜಿಸಲಾಗುತ್ತಿದೆ. ಕೆರ್ಮಾನ್‌ನಲ್ಲಿರುವ ಕಾಸ್ಸೇಮ್‌ ಸೋಲೈಮನಿ ಅವರ ಸ್ಮಾರಕದ ಬಳಿಯೇ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ.

    ಈ ವರ್ಷದ ಕಾರ್ಯಕ್ರಮವನ್ನು ಇಂದು ಆಯೋಜನೆ ಮಾಡಲಾಗಿದ್ದು, ಇದೇ ಸಂದರ್ಭ ಅವಳಿ ಬಾಂಬ್‌ ಸ್ಫೋಟ (Bomb Blast) ನಡೆದಿದೆ. ಘಟನೆಯ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದರು. ಈ ವೇಳೆ ಮೊದಲು ಅನಿಲ ತುಂಬಿದ ಡಬ್ಬಿಯನ್ನು ಎಸೆಯಲಾಯಿತು. ಇದು ಸಿಡಿಯುತಲೇ ಇನ್ನಷ್ಟು ಡಬ್ಬಗಳನ್ನು ನಿರಂತರವಾಗಿ ಎಸೆಯಲಾಯಿತು. ಆಗ ಭಯಾನಕ ಸ್ಪೋಟಗಳು ಸಂಭವಿಸಿದವು ಎಂದು ಇರಾನ್‌ನ ಮಾಧ್ಯಮಗಳು ವರದಿ ಮಾಡಿವೆ.

    ಈ ದಾಳಿಯಿಂದ ಮೊದಲು 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಸಂಜೆಯ ವೇಳೆಗೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, 103 ದಾಟಿತ್ತು. 141ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಬಾಂಬ್‌ ಸ್ಟೋಟಗಳಿಂದ ಗಾಯಗೊಂಡ ಹಲವರ ಆಕ್ರಂದನ, ಅಲ್ಲಿನ ರಕ್ತಸಿಕ್ತ ಪರಿಸ್ಥಿತಿಯನ್ನು ಕಂಡು ಹಲವರು ನಿಂತಲ್ಲೇ ಕುಸಿದು ಬಿದ್ದ ಪ್ರಸಂಗವೂ ನಡೆದಿದೆ. ಇದನ್ನೂ ಓದಿ: ಜಪಾನ್‌ ಭೂಕಂಪ; ಮೃತರ ಸಂಖ್ಯೆ 62 ಕ್ಕೇರಿಕೆ – ಮತ್ತೆ ಭೂಕುಸಿತ, ಭಾರೀ ಮಳೆಯ ಎಚ್ಚರಿಕೆ

    ಘಟನೆ ನಡೆಯುತ್ತಿದ್ದಂತೆಯೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಿದರು. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಸದ್ಯ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಕೆರ್ಮಾನ್‌ ಪ್ರದೇಶದ ರೆಡ್‌ ಕ್ಸೆಸೆಂಟ್‌ನ ಮುಖ್ಯಸ್ಥ ರೇಝಾ ಫಲ್ಹಾಹ್‌ ತಿಳಿಸಿದ್ದಾರೆ.

    ಈ ಸಂಬಂಧ ಇರಾನ್‌ ಸರ್ಕಾರ ಪ್ರತಿಕ್ರಿಯಿಸಿ, ಉಗ್ರರ ಕೈವಾಡ ಈ ದಾಳಿಗಳ ಹಿಂದೆ ಇರಬಹುದು ಎಂದು ಶಂಕಿಸಿದೆ. ರಕ್ಷಣಾ ಕಾರ್ಯದ ನಂತರ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ.

  • ಇರಾನ್‌ನಲ್ಲಿ ಹಿಜಬ್ ಹೋರಾಟ – 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್

    ಇರಾನ್‌ನಲ್ಲಿ ಹಿಜಬ್ ಹೋರಾಟ – 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್

    ಟೆಹರಾನ್: ಹಿಜಬ್ (Hijab) ಧರಿಸಿಲ್ಲ ಎಂದು ಬಂಧನಕ್ಕೊಳಗಾಗಿದ್ದ ಇರಾನಿ ಯುವತಿ (Iranian Women) ಬಲಿಯಾದ ಪ್ರಕರಣ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಕಳೆದ ಒಂದು ವಾರದಿಂದಲೂ ಹಿಂಸಾತ್ಮಕ ಪ್ರತಿಭಟನೆ (Protest)  ನಡೆಯುತ್ತಿದ್ದು, 700ಕ್ಕೂ ಹೆಚ್ಚು ಮದಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಒಟ್ಟು 739 ಮಂದಿಯನ್ನು ಬಂಧಿಸಿದ್ದು, ಅವರಲ್ಲಿ 60 ಮಂದಿ ಮಹಿಳೆಯರೂ ಇದ್ದಾರೆ ಎಂದು ಇರಾನ್ (Iran) ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಟಿಎಂಸಿಯ 21 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಬಿಜೆಪಿಯಲ್ಲಿ ಆಕ್ಷೇಪವಿದೆ: ಮಿಥುನ್ ಚಕ್ರವರ್ತಿ

    ಈಗಾಗಲೇ ಪ್ರತಿಭಟನೆ ಹತ್ತಿಕ್ಕಲು ಇಂಟರ್‌ನೆಟ್ (Internet) ಸ್ಥಗಿತಗೊಳಿಸಲಾಗಿದೆ. ವಾಟ್ಸಪ್, ಇನ್‌ಸ್ಟಾಗ್ರಾಮ್ (Instagram) ಬಳಕೆಯನ್ನೂ ನಿಷೇಧಿಸಲಾಗಿದೆ.

    ಸತತ 9ನೇ ದಿನ ಇರಾನ್‌ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರಾರು ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್‌ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ. ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಳ್ಳುವ ಅಭಿಯಾನವನ್ನು ಮುಂದುವರಿಸಿದ್ದಾರೆ. ಹಿಜಬ್ ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಕಂಟೆಸ್ಟೆಂಟ್ ನಂಬರ್ 1 ಆಗಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ನಟ ಅರುಣ್ ಸಾಗರ್

    ಪ್ರತಿಭಟನೆ ದಮನಿಸಲು ರೈಸಿ ಸರ್ಕಾರ (Ebrahim Raisi Government) ಬಲಪ್ರಯೋಗ ಮಾಡುತ್ತಿದೆ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದೆ. ಈವರೆಗೆ ದೇಶದ ವಿವಿಧೆಡೆ 50ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಆದರೂ ಪ್ರತಿಭಟನಾಕಾರರು ಹಿಂದೆ ಸರಿಯಲು ಸಿದ್ಧರಿಲ್ಲ. ಇದು ಇರಾನ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

    ಮೃತರ ಸಂಖ್ಯೆ 50ಕ್ಕೆ ಏರಿಕೆಯಾದ ಬೆನ್ನಲ್ಲೇ ಅನಗತ್ಯ ಬಲಪ್ರಯೋಗ ಮಾಡದಂತೆ ವಿಶ್ವಸಂಸ್ಥೆ (UN) ಒತ್ತಾಯಿಸಿದೆ.

    Live Tv
    [brid partner=56869869 player=32851 video=960834 autoplay=true]