Tag: ಇರುಳ್ಳಿ

  • ಈರುಳ್ಳಿ ತಿಂದು 650 ಮಂದಿ ಅಸ್ವಸ್ಥ

    ಈರುಳ್ಳಿ ತಿಂದು 650 ಮಂದಿ ಅಸ್ವಸ್ಥ

    ವಾಷಿಂಗ್ಟನ್: ಕೊರೊನಾದಿಂದ ಜನರು ಇದೀಗ ಸಹಜ ಸ್ಥಿತಿಗೆ ಜನರು ಮರಳುತ್ತಿದ್ದಾರೆ. ಆದರೆ ಇದೀಗ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಅಮೆರಿಕದಲ್ಲಿ ಸಾಲ್ಮೊನೆಲ್ಲಾ(Salmonella)  ಬ್ಯಾಕ್ಟಿರಿಯಾ ಸೋಂಕು ಹರಡಿರುವ ಈರುಳ್ಳಿಯನ್ನು ಸೇವಿಸಿ 650 ಮಂದಿ ಅಸ್ವಸ್ಥರಾಗಿರುವ ಘಟನೆ ಅಮೆರಿಕಾರಿದಲ್ಲಿ ಆತಂಕವನ್ನು ಸೃಷ್ಟಿಮಾಡಿದೆ.

    ಮೆಕ್ಸಿಕೋದ(Mexico) ಚಿವಾವಾ ದಿಂದ ಆಮದು ಮಾಡಿಕೊಂಡ ಈರುಳ್ಳಿಯನ್ನು ಹಸಿಯಾಗಿ ಸೇವಿಸಿದ ಜನರಿಗೆ ಈ ಸೋಂಕು ಹರಡಿದೆ. ಪ್ರೋಸೋರ್ಸ್‌ ಎಂಬ ಕಂಪನಿ ಈ ಈರುಳ್ಳಿ ಆಮದು ಮಾಡಿಕೊಂಡು ಮಾರಾಟ ಮಾಡಿದೆ. ಆಗಸ್ಟ್ ಹಾಗೂ ಸೆಪ್ಟೆಂಬರ್‍ನಿಂದಲೇ ದೇಶದಲ್ಲಿ ರೋಗ ಹರಡುತ್ತಿದ್ದು, ಟೆಕ್ಸಾಸ್(Texas) ಮತ್ತು ಓಕ್ಲಹಾಮಾದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅಸ್ವಸ್ಥರಾಗಿದ್ದಾರೆ. 129 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಕನ್ನೇರಿ ಚಿತ್ರದ ಮನಮುಟ್ಟುವ ಹಾಡು ಬಿಡುಗಡೆ ಮಾಡಿದ ಖ್ಯಾತ ನಟಿ ಶ್ರುತಿ

    ಅನಾರೋಗ್ಯಪೀಡಿತರಲ್ಲಿ ಶೇ.75ರಷ್ಟು ಜನರು ತಾವು ಹಸಿ ಈರುಳ್ಳಿ ಸೇವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈರುಳ್ಳಿಯನ್ನು ತಿಂಗಳುಗಟ್ಟಲೆ ಇಡುವುದರಿಂದ ಜನರ ಬಳಿ ಈಗಲೂ ಸೋಂಕಿತ ಈರುಳ್ಳಿ ಇರಬಹುದು. ಕೆಂಪು, ಹಳದಿ ಮತ್ತು ಬಿಳಿ ಈರುಳ್ಳಿಗಳು ಮನೆಯಲ್ಲಿದ್ದರೆ ಎಸೆದುಬಿಡಿ ಎಂದು ಆರೋಗ್ಯ ಅಧಿಕಾರಿಗಳು ಸೂಚಿಸಿದ್ದಾರೆ. ಅಲ್ಲಿನ ಜನರು ಭಯಗೊಂಡು ಮನೆಯಲ್ಲಿರುವ ಈರುಳ್ಳಿಯನ್ನು ಎಸೆಯುತ್ತಿದ್ದಾರೆ. ಇದನ್ನೂ ಓದಿ: ಕಾಡಿನ ಥೀಮ್ ನಡುವೆ ರಾಯನ್ ಬರ್ತ್‍ಡೇ ಸೆಲೆಬ್ರೆಶನ್ – ಫೋಟೋ, ವೀಡಿಯೋ ವೈರಲ್

    ಹೊಸ ಸೋಂಕು ಅಮೆರಿಕದಲ್ಲಿ ಈಗ ಆತಂಕ ಸೃಷ್ಟಿಸಿದೆ.  ಆಮದು ಮಾಡಲಾಗಿದ್ದ ಈರುಳ್ಳಿಯನ್ನು ಹಿಂಪಡೆಯುವುದಾಗಿ  ಹೇಳಿದೆ. ಜುಲೈ 1 ರಿಂದ ಆಗಸ್ಟ್ 27ರವರೆಗೆ ಆಮದು ಮಾಡಿದ ಎಲ್ಲಾ ಈರುಳ್ಳಿಯನ್ನು ಸ್ವಯಂಪ್ರೇರಣೆಯಿಂದ ವಾಪಸ್ ಪಡೆಯಲು  ಪ್ರೋಸೋರ್ಸ್‌ ಕಂಪನಿ ಒಪ್ಪಿಕೊಂಡಿದೆ ಎಂದು ಆಹಾರ ನೀತಿ ಮತ್ತು ಔಷಧ ಆಡಳಿತದ ಉಪ ಆಯುಕ್ತ ಫ್ರಾಂಕ್ ಯಿಯಾನಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

  • ಒಂದೂವರೆ ಎಕ್ರೆಯಲ್ಲಿದ್ದ ಈರುಳ್ಳಿಯನ್ನು ರಾತ್ರೋರಾತ್ರಿ ಕದ್ದರು

    ಒಂದೂವರೆ ಎಕ್ರೆಯಲ್ಲಿದ್ದ ಈರುಳ್ಳಿಯನ್ನು ರಾತ್ರೋರಾತ್ರಿ ಕದ್ದರು

    ಬಳ್ಳಾರಿ: ಲಾಕ್‍ಡೌನ್ ಆಗಿದ್ದನ್ನೇ ಬಂಡವಾಳ ಮಡಿಕೊಂಡು ಗಣಿನಾಡು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಯರ್ರಂಗಳಿಯ ಹೊರವಲಯದ ಒಂದೂವರೆ ಎಕ್ರೆಯಲ್ಲಿ ಬೆಳೆದ ಈರುಳ್ಳಿಯನ್ನೇ ರಾತ್ರೋರಾತ್ರಿ ಕಟಾವು ಮಾಡಿಕೊಂಡು ಕದ್ದೊಯ್ದ ಘಟನೆಯೊಂದು ಬೆಳಕಿಗೆ ಬಂದಿದೆ.

    ಯರ್ರಂಗಳಿ ಗ್ರಾಮದ ರೈತ ಸುನೀಲ್ ಕುಮಾರ್ ಅವರಿಗೆ ಈ ಹೊಲ ಸೇರಿದ್ದು, ಶನಿವಾರ ಹೊಲಕ್ಕೆ ಹೋಗಿ ಈರುಳ್ಳಿ ಬೆಳೆಯನ್ನು ವೀಕ್ಷಣೆ ಮಾಡಿದ್ದರು. ಭಾನುವಾರ ರಾತ್ರಿಯೊಳಗೆ ಈ ಬೆಳೆಯನ್ನು ಯಾರೋ ದುಷ್ಕರ್ಮಿಗಳು ಬಂದು ಕಟಾವು ಮಾಡಿಕೊಂಡು ಹೋಗಿದ್ದಾರೆ.

    ಈ ಮೊದಲು ಹೊಲದಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯಲಾಗಿತ್ತು. ಆದರೆ ವಿಪರೀತ ಮಳೆ ಸುರಿದ ಕಾರಣ ಮೆಣಸಿನಕಾಯಿ ಬೆಳೆ ಸಂಪೂರ್ಣ ಹಾಳಾಗಿ ಹೋಗಿತ್ತು. ಹೀಗಾಗಿ ಅದನ್ನು ನಾಶಪಡಿಸಿ ಈರುಳ್ಳಿ ಬೆಳೆಯನ್ನು ಬೆಳೆದಿದ್ದೆ. ಆದರೆ ಕಟಾವು ಹಂತಕ್ಕೆ ಬಂದಿದ್ದ ಈರುಳ್ಳಿ ಬೆಳೆಯನ್ನು ಇನ್ನೇನು ಸೋಮವಾರ ಕಟಾವು ಮಾಡಬೇಕಿತ್ತು. ಈ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರು ಸಿಗದ ಕಾರಣ ಕಟಾವಿಗೆ ವಿಳಂಬವಾಗಿತ್ತು. ಆದರೆ ರಾತ್ರೋ ರಾತ್ರಿ ಈರುಳ್ಳಿ ಬೆಳೆಯನ್ನೇ ಕದ್ದಿದ್ದಾರೆ ಎಂದು ರೈತ ಸುನೀಲ್ ಕುಮಾರ್ ದೂರಿದ್ದಾರೆ.

    ಹೊಲದಲ್ಲಿ ಬೆಳೆದ ಬೆಳೆಯನ್ನೇ ಕದಿಯುವ ಖದೀಮರು ಹುಟ್ಟಿಕೊಂಡರೇ ಮುಂದೆ ನಾವು ಭೂಮಿ ತಾಯಿಯನ್ನು ನೆಚ್ಚಿಕೊಂಡು ಕೆಲಸ ಮಾಡುವುದು ಹೇಗೆ. ಸಾಲಸೂಲ ಮಾಡಿ ಈ ಬೆಳೆಯನ್ನ ಬೆಳೆಯಲಾಗಿತ್ತು. ಉತ್ತಮ ಇಳುವರಿಯೂ ಬಂದಿತ್ತು. ಆದರೆ ಈ ಬೆಳೆ ನಮ್ಮ ಕೈಗೆ ಸಿಗದೆ ಕಳ್ಳರ ಪಾಲಾಗಿದೆ. ಅತ್ತ ಸಾಲ ಮಾಡಿದ ಹಣ ತೀರಿಸದೇ ಇತ್ತ ಬೆಳೆಯೂ ಸಿಗದೆ ಕಂಗಾಲಾಗಿದ್ದೇನೆ ಎಂದು ರೈತ ಅಳಲನ್ನು ತೋಡಿಕೊಂಡಿದ್ದಾರೆ.