Tag: ಇಸಿಐ

  • ರಾಜ್ಯದಲ್ಲೂ ಬಿಹಾರ ಮಾಡೆಲ್‌ – ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ

    ರಾಜ್ಯದಲ್ಲೂ ಬಿಹಾರ ಮಾಡೆಲ್‌ – ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ

    ಬೆಂಗಳೂರು: ಬಿಹಾರದ (Bihar) ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಯಲಿದೆ. ಅದರಂತೆ ರಾಜ್ಯದ ಎಲ್ಲ ಮತದಾರರು ಎಸ್‌ಐಆರ್‌ಗೆ ಒಳಪಡಲಿದ್ದಾರೆ ಎಂದು ತಿಳಿಸಲಾಗಿದೆ. ಈಗಾಗಲೇ ರಾಜ್ಯ ಚುನಾವಣಾ ಆಯೋಗ (Karnataka Election Commission) ಮಾಹಿತಿ ನೀಡಿದ್ದು, ಕೇಂದ್ರ ಚುನಾವಣಾ ಆಯೋಗದಿಂದ ನೋಟಿಫಿಕೇಷನ್ ಜಾರಿಯಾದ ತಕ್ಷಣ ರಾಜ್ಯದ ಎಲ್ಲಾ ಮತದಾರರು ʻಸರ್‌ʼ ಅಭಿಯಾನಕ್ಕೆ ಒಳಪಡಲಿದ್ದಾರೆ.

    ಮತದಾರರ ಗುರುತಿನ ಚೀಟಿ, ಮತದಾರರ ಪಟ್ಟಿ (Voter List), ಮತಗಟ್ಟೆಗಳು ಬದಲಾಗಲಿವೆ ಕೇಂದ್ರ ಚುನಾವಣಾ ಆಯೋಗದ ನಿರ್ದೇಶ‌ನದಂತೆ ರಾಜ್ಯದಲ್ಲಿ ಎಸ್ ಐಆರ್‌ಗೆ ಸಿದ್ಧತೆ ಮಾಡಿಕೊಳ್ತಿರೋ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ಪೂರ್ಣಗೊಂಡಿದೆ. ಅಧೀನ ಅಧಿಕಾರಿ ಮತ್ತು ಸಿಬ್ಬಂದಿಗೆ ಸೆಪ್ಟೆಂಬರ್ 25ರ ಒಳಗಡೆ ಪೂರ್ಣ ಆಗಲಿದೆ. 2025ರಲ್ಲಿ 5.40 ಕೋಟಿ ಮತದಾರರು ಮತದಾರರ ಪಟ್ಟಿಯಲ್ಲಿ ಇದ್ದಾರೆ. 2002 ರಲ್ಲಿ 3.40 ಕೋಟಿ ಮತದಾರರ ಪಟ್ಟಿಯಲ್ಲಿ ಇದ್ದವರು. 2002ರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆಗಿದ್ರೆ ಡಿಜಿಟಲ್ ಸ್ವರೂಪಕ್ಕೆ ತಂದಿಲ್ಲ. ಪ್ರಸ್ತುತ ʻಸರ್‌ʼ ಅಡಿ ಆದ್ರೆ ಡಿಜಿಟಲ್ ಸ್ವರೂಪಕ್ಕೆ ತರಲಿದ್ದೇವೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಮಾಹಿತಿ ನೀಡಿದ್ದಾರೆ.‌

    ನೋಟಿಫಿಕೇಷನ್ ಆದ ತಕ್ಷಣವೇ ʻಸರ್‌ʼ
    ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಬಂದ ಬಳಿಕ ಎಸ್‌ಐಆರ್ ಪ್ರಕ್ರಿಯೆ ಶುರುವಾಗಲಿದೆ. ಇದನ್ನೂ ಓದಿ: ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್‌ ಗಾಂಧಿ ಬಾಂಬ್‌

    ಎಸ್‌ಐಆರ್ ಪ್ರಕ್ರಿಯೆ ಯಾಕೆ ?
    ನಕಲಿ ಮತದಾನ ತಡೆಗಟ್ಟುವುದಕ್ಕೆ ಹಾಗೂ ಯಾರೊಬ್ಬರೂ ಮತದಾನ ಹಕ್ಕಿನಿಂದ ವಂಚಿತರಾಗಬಾರದು ಅನ್ನೋ ಉದ್ದೇಶದಿಂದ ಸರ್‌ ಅಭಿಯಾನ ನಡೆಸಲಾಗುತ್ತಿದೆ. ಬೂತ್ ಮಟ್ಟದಲ್ಲಿ, ಶಿಬಿರಗಳನ್ನ ಆಯೋಜನೆ ಮಾಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ನಡೆಯಲಿದೆ. ಇದನ್ನೂ ಓದಿ: ರಾಹುಲ್‌ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ: ಚುನಾವಣಾ ಆಯೋಗ

    ಎಸ್‌ಐಆರ್ ಪ್ರಕ್ರಿಯೆ ಹೇಗಿರಲಿದೆ?
    1. ಬಿಎಲ್‌ಓಗಳು ಮನೆ ಮನೆಗೆ ಭೇಟಿ ಕೊಡ್ತಾರೆ.
    2. ಕ್ಯೂಆರ್‌ ಕೋಡ್ ಮಾದರಿಯ ಆಧಾರಿತ ಅರ್ಜಿ 2 ಪ್ರತಿಯಲ್ಲಿ ಮಾಹಿತಿ ಸಂಗ್ರಹ.
    3. ಅಧಿಕಾರಿ ಸಹಿ ಮಾಡಿದ ಒಂದು ಪ್ರತಿ ಮತದಾರರಿಗೆ ಸಲ್ಲಿಕೆ.
    4. ಮನೆಯಲ್ಲಿ ಯಾರೂ ಇಲ್ಲದಿದ್ದರೆ ಮೂರು ಭಾರಿ ಮನೆಗೆ ಭೇಟಿ ನೀಡಲಿದ್ದಾರೆ.
    5. ಸಂಪರ್ಕಕ್ಕಾಗಿ ‌ಪಕ್ಕದ ಮನೆಯವರ ಸಹಾಯ ಪಡೆಯಲಿದ್ದಾರೆ.

    ಮತದಾರರು ಏನು ಮಾಡಬೇಕು ?
    1. ಗುರುತಿನ ಚೀಟಿಯಲ್ಲಿ ಪೋಟೋ ಸರಿ ಇಲ್ಲದಿದ್ದರೆ ಸ್ಪಷ್ಟವಾದ ಫೋಟೋ ನೀಡಬೇಕು
    2. ಚುನಾವಣಾ ಆಯೋಗ ಕೇಳುವ ದಾಖಲೆಗಳನ್ನ ನೀಡಬೇಕು
    3. ಮನೆಯಲ್ಲಿ ಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು

    ʻಸರ್‌ʼ ಅಭಿಯಾನ ವೇಳೆ ಚುನಾವಣಾ ಆಯೋಗ ಕೈಗೊಳ್ಳುವ ಕ್ರಮಗಳೇನು?
    1. ಎರಡು ಕಡೆ ಹೆಸರು ಇದ್ದರೆ ಫೋಟೊ ಸ್ಕ್ಯಾನಿಂಗ್‌ ಸಿಸ್ಟಮ್‌ ಮೂಲಕ ಪತ್ತೆ ಹಚ್ಚಿ ಕ್ರಮ
    2. ಒಂದೇ ವ್ಯಕ್ತಿ ಎರಡು ಕಡೆ ಅರ್ಜಿ ಹಾಕಿದರೆ ಪ್ರಕರಣ ದಾಖಲು
    3. ಪರಿಷ್ಕರಣೆ ನಂತರವೂ ಹೆಸರು ಸೇರದಿದ್ದರೆ ಬಿಎಲ್‌ಒಗಳು ಸಹಿ ಮಾಡಿ ನೀಡಿರುವ ನಮೂನೆ ಮೂಲಕ ಪ್ರಶ್ನಿಸಬಹುದು

    ಪಕ್ಷಗಳ ಸಂಬಂಧ
    1. ವಿಶೇಷ ಪರಿಷ್ಕರಣೆ ಕುರಿತು ಈಗಾಗಲೇ ರಾಜಕೀಯ ಪಕ್ಷಗಳ ಸಭೆ ನಡೆಸಿ, ವಿವರ ನೀಡಿಕೆ
    2. ಪ್ರತಿ ಬೂತ್‌ಗೆ ಏಜೆಂಟ್‌ಗಳನ್ನು ನೇಮಕ ಮಾಡುವಂತೆ ಪಕ್ಷಗಳ ಮುಖಂಡರಿಗೆ ಸೂಚನೆ. ಇದನ್ನೂ ಓದಿ: EC ಮೊಬೈಲ್‌ ಸಂಖ್ಯೆ, ಐಪಿ ವಿಳಾಸ ನೀಡಿದ್ರೂ ಕರ್ನಾಟಕದ ಸಿಐಡಿ ಏನು ಮಾಡುತ್ತಿದೆ: ಅನುರಾಗ್‌ ಠಾಕೂರ್‌ ಪ್ರಶ್ನೆ

  • ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

    ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

    ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ (Randeep Surjewala) ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ (Election Campaign) ನಿರ್ಬಂಧಿಸಲಾಗಿದೆ.

    ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ (Hema Malini) ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಈ ಕ್ರಮ ಕೈಗೊಂಡಿದೆ.

    ಇಸಿಐ ಆದೇಶದ ಪ್ರಕಾರ, ಸುರ್ಜೇವಾಲಾ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಚುನಾವಣಾ ರ್ಯಾಲಿಗಳು ಅಥವಾ ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ. ಇದನ್ನೂ ಓದಿ: ಮಾತೃಶಕ್ತಿಗೆ ಮಾಡಿದ ಅವಮಾನ- ಸುರ್ಜೇವಾಲಾ ವಿರುದ್ಧ ಯೋಗಿ ಕಿಡಿ

    ಭಾರತದ ಸಂವಿಧಾನದ 324 ನೇ ವಿಧಿಯ ಅಡಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್‌ ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನಡೆಸದಂತೆ ರಣದೀಪ್ ಸುರ್ಜೆವಾಲಾ ಅವರನ್ನು ನಿರ್ಬಂಧಿಸುತ್ತದೆ ಎಂದು ಚುನಾವಣಾ ಸಮಿತಿಯು ತನ್ನ ನೋಟಿಸ್‌ನಲ್ಲಿ ತಿಳಿಸಿದೆ.

    ಸುರ್ಜೇವಾಲಾ ಹೇಳಿದ್ದೇನು..?: ಕೈತಾಲ್‌ನ ಫರಾಲ್ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸುರ್ಜೇವಾಲಾ ಅವರು, ಮಥುರಾದ ಬಿಜೆಪಿ ಸಂಸದೆ ಹಾಗೂ ಹಿರಿಯ ನಟಿ ಹೇಮಾ ಮಾಲಿನಿ ಕುರಿತಾಗಿ ಕೆಟ್ಟ ಹಾಗೂ ಅಶ್ಲೀಲ ಹೇಳಿಕೆ ನೀಡಿದ್ದರು. ನಾವು ಶಾಸಕರು/ಸಂಸದರನ್ನು ಯಾಕೆ ಆಯ್ಕೆ ಮಾಡುತ್ತೇವೆ? ಅವರು ನಮ್ಮ ದನಿಯನ್ನು ಅಲ್ಲಿ ಕೇಳಬೇಕು ಎನ್ನುವುದು ಇದರ ಹಿಂದಿನ ಉದ್ದೇಶ. ನಮ್ಮ ಮನವಿಗಳು ಅಲ್ಲಿ ಸಲ್ಲಿಕೆಯಾಗಬೇಕು. ಆದರೆ ಹೇಮಾ ಮಾಲಿನಿ ಅವರನ್ನು ನೆಕ್ಕೋಕೆ ಸಂಸದರನ್ನಾಗಿ ಮಾಡಿದ್ದಾರೆ ಎಂದಿದ್ದರು.

    ಸುರ್ಜೇವಾಲಾ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಯಿತು. ಈ ಬೆನ್ನಲ್ಲೇ ಸುರ್ಜೆವಾಲಾ ಅವರ ಸ್ತ್ರೀ ದ್ವೇಷಿ ಹೇಳಿಕೆಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಬಳಿಕ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಸುರ್ಜೇವಾಲಾ ಅವರು ಬಿಜೆಪಿ (BJP) ಮೇಲೆ ದೊಡ್ಡ ಆರೋಪ ಮಾಡಿದ್ದರು.

  • ಇವಿಎಂ ಜೊತೆಗೆ ವಿವಿಪ್ಯಾಟ್ ಮತ ಎಣಿಕೆಗೆ ಆಗ್ರಹ – ವಿಚಾರಣೆಗೆ ಒಪ್ಪಿದ ಸುಪ್ರೀಂ

    ಇವಿಎಂ ಜೊತೆಗೆ ವಿವಿಪ್ಯಾಟ್ ಮತ ಎಣಿಕೆಗೆ ಆಗ್ರಹ – ವಿಚಾರಣೆಗೆ ಒಪ್ಪಿದ ಸುಪ್ರೀಂ

    ನವದೆಹಲಿ: ಇವಿಎಂಗಳೊಂದಿಗೆ ವಿವಿಪ್ಯಾಟ್ ಯಂತ್ರದ ಸ್ಲಿಪ್‌ಗಳನ್ನು ಹೊಂದಾಣಿಕೆ ಮಾಡುವ ಅರ್ಜಿಯನ್ನು ಮುಂದಿನವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಎಡಿಆರ್ (Association for Democratic Reforms) ಸಲ್ಲಿಸಿರುವ ಅರ್ಜಿಯನ್ನು ಮುಂದಿನ ಮಂಗಳವಾರ ಅಥವಾ ಬುಧವಾರಕ್ಕೆ ಪಟ್ಟಿ ಮಾಡಲಾಗುವುದು ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಹೇಳಿದೆ.

    ಅರ್ಜಿದಾರರ ಸಂಘಟನೆ ಎಡಿಆರ್ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ವಿವಿಪ್ಯಾಟ್ ವಿಚಾರವಾಗಿ ಸಲ್ಲಿಸಲಾಗಿರುವ ಮತ್ತೊಂದು ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಕಳುಹಿಸಿದೆ. ಇದನ್ನೂ ಓದಿ: ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಹಿರಿಯ ವಕೀಲ ಗೋಪಾಲ್ ಶಂಕರ್ ನಾರಾಯಣನ್ ಕೋರ್ಟ್ ಮುಂದೆ ಹಾಜರಾಗಿ, ಚುನಾವಣೆ ಹತ್ತಿರವಿದ್ದು, ಈ ಬಗ್ಗೆ ವಿಚಾರಣೆ ನಡೆಸದಿದ್ದರೆ ಈ ಅರ್ಜಿ ನಿಷ್ಫಲವಾಗಲಿದೆ ಎಂದು ವಾದಿಸಿದರು. ಅರ್ಜಿಯ ಪರಿಸ್ಥಿತಿ ಅರಿತ ಪೀಠವು ಮುಂದಿನ ವಾರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿತು. ವಾದ-ಪ್ರತಿವಾದ ಆಲಿಸಿದ ಬಳಿಕ ಪೀಠ ವಿಚಾರಣೆಗೆ ಸಮ್ಮತಿ ಸೂಚಿಸಿತು. ಇದನ್ನೂ ಓದಿ: ದೇವೇಗೌಡರು ನಾಯಕರನ್ನು ಬೆಳೆಸಿದ್ದಾರೆಯೇ ಹೊರತು ತುಳಿದು ಗೊತ್ತಿಲ್ಲ: ವೆಂಕಟೇಶ್‌ಗೆ ಪ್ರತಾಪ್‌ ಸಿಂಹ ತಿರುಗೇಟು

    ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸುಪ್ರೀಂ ಕೋರ್ಟ್‌ನಲ್ಲಿ ವಿವಿಪ್ಯಾಟ್ (ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ -ವಿವಿಪಿಎಟಿ) ಸ್ಲಿಪ್‌ಗಳನ್ನು ಇವಿಎಂ ಯಂತ್ರಗಳೊಂದಿಗೆ ಹೊಂದಾಣಿಕೆ ಮಾಡುವಂತೆ ಒತ್ತಾಯಿಸಿ ಅರ್ಜಿ ಸಲ್ಲಿಸಿದೆ. VVPAT ಸ್ವತಂತ್ರ ಮತ ಪರಿಶೀಲನಾ ಯಂತ್ರವಾಗಿದ್ದು, ಮತದಾರರು ಚಲಾಯಿಸಿದ ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತೋರಿಸುತ್ತದೆ. ಪ್ರಸ್ತುತ VVPAT ಸ್ಲಿಪ್‌ಗಳ ಮೂಲಕ ಕೇವಲ ಐದು ಆಯ್ದ EVM ಗಳನ್ನು ಪರಿಶೀಲಿಸುವ ಅಭ್ಯಾಸವಿದೆ.

    ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರ್ವಾಲ್ ವಿವಿಪ್ಯಾಟ್ ಸ್ಲಿಪ್‌ಗಳನ್ನು ಸಂಪೂರ್ಣ ಎಣಿಕೆ ಮತ್ತು ಇವಿಎಂಗಳೊಂದಿಗೆ ಹೊಂದಿಸುವಂತೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದಾರೆ.