Tag: ಇಸ್ತಾಂಬುಲ್

  • ಟರ್ಕಿ ಸ್ಫೋಟ – ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಶಂಕಿತ ಅರೆಸ್ಟ್

    ಟರ್ಕಿ ಸ್ಫೋಟ – ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಶಂಕಿತ ಅರೆಸ್ಟ್

    ಅಂಕಾರಾ: ಟರ್ಕಿಯ (Turkey) ಇಸ್ತಾಂಬುಲ್‌ನಲ್ಲಿ (Istanbul) ಭಾನುವಾರ ನಡೆದ ಭೀಕರ ಸ್ಫೋಟದಲ್ಲಿ (Blast) 6 ಜನರು ಸಾವನ್ನಪ್ಪಿದ್ದಾರೆ. 81 ಜನರು ಗಾಯಗೊಂಡಿದ್ದಾರೆ. ಇದೀಗ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಟರ್ಕಿಯ ಆಂತರಿಕ ಸಚಿವ ಸುಲೇಮಾನ್ ಸೊಯ್ಲು ಹೇಳಿದ್ದಾರೆ.

    ಭಾನುವಾರ ಮಧ್ಯಾಹ್ನದ ವೇಳೆ ಇಸ್ತಾಂಬುಲ್‌ನ ಇಸ್ತಿಕ್‌ಲಾಲ್‌ನಲ್ಲಿರುವ (Istiklal) ಮಾರುಕಟ್ಟೆ ಪ್ರದೇಶದಲ್ಲಿ ಸ್ಫೋಟ ಸಂಭವಿಸಿತ್ತು. ಜನನಿಬಿಡ ಪ್ರದೇಶವಾದ್ದರಿಂದ ಹೆಚ್ಚಿನ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ. 6 ಜನರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ.

    ಇದೀಗ ಶಂಕಿತನನ್ನು ಪೊಲೀಸರು ಬಂಧಿಸಿದ್ದು, ದಾಳಿಯ ಹಿಂದಿನ ಉದ್ದೇಶ ಹಾಗೂ ಕೃತ್ಯದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಭಯೋತ್ಪಾದನೆಯ ಶಂಕೆ ವ್ಯಕ್ತವಾಗಿದೆ. ಘಟನಾ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ- ಮೊದಲ ಮರಣದಂಡನೆ ಶಿಕ್ಷೆ

    ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟ ಸಂಭವಿಸಿದ ಸನ್ನಿವೇಶದ ವೀಡಿಯೋಗಳು ಹರಿದಾಡುತ್ತಿವೆ. ಜನನಿಬಿಡ ಪಾದಾಚಾರಿ ರಸ್ತೆಯಲ್ಲಿ ಸ್ಫೋಟ ಸಂಭವಿಸಿದ್ದು, ಜನರು ಭಾರೀ ಸದ್ದಿಗೆ ವಿಚಲಿತರಾಗಿ ಚೆಲ್ಲಾಪಿಲ್ಲಿಯಾಗಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಪಾಕಿಸ್ತಾನಿ ಮಹಿಳೆಯ ಹೆಸರು!

    Live Tv
    [brid partner=56869869 player=32851 video=960834 autoplay=true]

  • ಟರ್ಕಿಯ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ – 4 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

    ಟರ್ಕಿಯ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ – 4 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

    ಅಂಕಾರಾ: ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಭಾರೀ ಸ್ಫೋಟ (Blast) ಉಂಟಾಗಿ 4 ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಭಾನುವಾರ ಟರ್ಕಿಯ (Turkey) ಇಸ್ತಾಂಬುಲ್‌ನಲ್ಲಿ (Istanbul) ನಡೆದಿದೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.

    ಇಸ್ತಾಂಬುಲ್‌ನ ಇಸ್ತಿಕ್‌ಲಾಲ್‌ನಲ್ಲಿರುವ (Istiklal) ಮಾರುಕಟ್ಟೆ ಪ್ರದೇಶದಲ್ಲಿ ಇಂದು ಮಧ್ಯಾಹ್ನದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಿಲ್ಲ.

    ಪ್ರಾಥಮಿಕ ಮಾಹಿತಿಯ ಪ್ರಕಾರ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ತಾಂಬುಲ್ ಗವರ್ನರ್ ಅಲಿ ಯರ್ಲಿಕಾಯಾ ಟ್ವೀಟ್ ಮಾಡಿದ್ದಾರೆ. ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಜನರು ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದ್ದು, ಭದ್ರತಾ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: 2019 ಏಕದಿನ ವಿಶ್ವಕಪ್ ನೆನೆಪಿಸಿದ ಬೆನ್‍ಸ್ಟೋಕ್ಸ್ – ನಿಜವಾದ ಮ್ಯಾಚ್ ವಿನ್ನರ್ ಎಂದ ಫ್ಯಾನ್ಸ್

    2015-16ರ ಸಮಯದಲ್ಲಿ ಇಸ್ತಾಂಬುಲ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿತ್ತು. ಆ ವೇಳೆ ಇಸ್ತಿಕ್‌ಲಾಲ್ ಸ್ಟ್ರೀಟ್ ಕೂಡಾ ದಾಳಿಯನ್ನು ಎದುರಿಸಿತ್ತು. ಸುಮಾರು 500 ಜನರು ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದರೆ, 2,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದನ್ನೂ ಓದಿ: ರೈಲ್ವೇ ಹಳಿಯಲ್ಲಿ ಬಿರುಕು, ಭಾರೀ ಸ್ಫೋಟಕ ಪತ್ತೆ – ಉಗ್ರ ಕೃತ್ಯ ಶಂಕೆ

    Live Tv
    [brid partner=56869869 player=32851 video=960834 autoplay=true]

  • ಜೈಲಿನಲ್ಲಿ ಅಗ್ನಿ ಅವಘಡ – 20 ಕೈದಿಗಳು ಆಸ್ಪತ್ರೆಗೆ ದಾಖಲು

    ಜೈಲಿನಲ್ಲಿ ಅಗ್ನಿ ಅವಘಡ – 20 ಕೈದಿಗಳು ಆಸ್ಪತ್ರೆಗೆ ದಾಖಲು

    ಅಂಕಾರ: ಇಸ್ತಾಂಬುಲ್‌ನ ಜೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 20 ಕೈದಿಗಳು ಸೇರಿ ಒಬ್ಬ ಜೈಲಿನ ವಾರ್ಡನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಸ್ತಾಂಬುಲ್‌ನ ಉಮ್ರಾನಿಯೇ ಜೈಲಿನಲ್ಲಿ ಶುಕ್ರವಾರ ಬೆಂಕಿ ಹೊತ್ತಿಕೊಂಡು ಉರಿದಿದೆ. ಬೆಂಕಿ ತಗುಲಿ ಗಾಯಗಳಾಗಿರುವ ಕೈದಿಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಟರ್ಕಿಯ ನ್ಯಾಯ ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ

    ಟರ್ಕಿಯ ಜೈಲಿನಲ್ಲಿದ್ದ ಕೈದಿಗಳು ಬಂಧನದ ಪರಿಸ್ಥಿತಿಗಳನ್ನು ಪ್ರತಿಭಟಿಸಿ ಹಾಸಿಗೆಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮ ಬೆಂಕಿ ಜೈಲಿನ ಎಲ್ಲೆಡೆ ಹಬ್ಬಿದೆ. ಬೆಂಕಿ ನಂದಿಸಲು ನೆರೆಯ ಜಿಲ್ಲೆಗಳಿಂದ ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ಸದ್ಯ ಯಾರೊಬ್ಬರ ಸ್ಥಿತಿಯೂ ಗಂಭೀರವಾಗಿಲ್ಲ. ಎಲ್ಲವನ್ನೂ ನಿಯಂತ್ರಣಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಸಾವು

    ಬೆಂಕಿ ಒಂದು ವಾರ್ಡ್ನಲ್ಲಿ ಮೊದಲಿಗೆ ಉದ್ಭವವಾಗಿತ್ತು. ಅದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗದಾಗ ಅಗ್ನಿಶಾಮಕ ದಳವನ್ನು ಕರೆಸಲಾಯಿತು. ಬೆಂಕಿಯಿಂದಾಗಿ ಜೈಲಿನ ಪರಿಸ್ಥಿತಿ ಹದಗೆಟ್ಟಿದ್ದು, ಕೈದಿಗಳನ್ನು ಬಂಧನಕ್ಕೆ ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ಚಿಕ್ಕ ಗಿಣಿ ಮೂಗಿಗಾಗಿ ಕಾಲು ಕಳೆದುಕೊಂಡ 25ರ ಯುವತಿ

    ಚಿಕ್ಕ ಗಿಣಿ ಮೂಗಿಗಾಗಿ ಕಾಲು ಕಳೆದುಕೊಂಡ 25ರ ಯುವತಿ

    – ಶಸ್ತ್ರ ಚಿಕಿತ್ಸೆಯ ಬಳಿಕ ಕಪ್ಪು ಬಣ್ಣಕ್ಕೆ ತಿರುಗಿದ ಕಾಲುಗಳು
    – 1 ಕೋಟಿ ಪರಿಹಾರ ಕೇಳಿದ ಯುವತಿ

    ಇಸ್ತಾಂಬುಲ್: ತಾನು ಎಲ್ಲರಿಗೂ ಸೌಂದರ್ಯವಾಗಿ ಕಾಣಬೇಕು ಅನ್ನೋದು ಪ್ರತಿ ಮಹಿಳೆಯ ಬಯಕೆ. ಸೌಂದರ್ಯ ಹೆಚ್ಚಿಸಿಕೊಳ್ಳಲು ಮೂಗಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 25 ವರ್ಷದ ಯುವತಿ ತನ್ನ ಎರಡೂ ಕಾಲುಗಳನ್ನ ಕಳೆದುಕೊಂಡಿದ್ದಾಳೆ.

    ಸೇವಿಂಕ್ ಸ್ಕೆಕ್ಲಿಕ್ ಕಾಲು ಕಳೆದುಕೊಂಡ ಯುವತಿ. ಸೇವಿಂಕ್ ತನ್ನ ಮೂಗನ್ನ ಚಿಕ್ಕದಾಗಿ ಮಾಡಿಕೊಳ್ಳಲು ನಿರ್ಧರಿಸಿ ಇಸ್ತಾಂಬುಲ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಮೇ 2, 2014ರಂದು ವೈದ್ಯರು ಎರಡು ಗಂಟೆ ನೋಸ್ ಡಿಡ್ಕಷನ್ ಸರ್ಜರಿ ಮಾಡಿದ್ದರು. ಸೇವಿಂಕ್ ಆಸೆಯಂತೆ ಆಕೆಯ ಮೂಗು ಚಿಕ್ಕದಾಗಿತ್ತು. ಸರ್ಜರಿವಾದ ವಾರದ ಬಳಿಕ ಸೇವಿಂಗ್ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದಳು.

    ಮನೆ ಸೇರಿದ ಬಳಿಕ ಸೇವಿಂಗ್ ಆರೋಗ್ಯ ಸುಧಾರಣೆ ಆಗಲಿಲ್ಲ. ಕೆಲ ದಿನಗಳ ಬಳಿಕ ವೈದ್ಯರನ್ನ ಸಂಪರ್ಕಿಸಿದಾಗ ಸರ್ಜರಿ ನಂತರ ಈ ರೀತಿಯ ಸಣ್ಣ ತೊಂದರೆಗಳು ಕಾಣಿಸಿಕೊಳ್ಳುವುದು ಸಹಜ ಅಂತ ಹೇಳಿದ್ದರು. ಮತ್ತೆ ಆರೋಗ್ಯದಲ್ಲಿ ಸುಧಾರಣೆ ಕಾಣದಿದ್ದಾಗ ಸೇವಿಂಕ್ ಆಸ್ಪತ್ರೆಗೆ ಹೋದಾಗ ಅಲ್ಲಿಯ ಎಲ್ಲ ಸಿಬ್ಬಂದಿಯನ್ನ ತೆಗೆದುಹಾಕಿ ಹೊಸಬರನ್ನ ನೇಮಕ ಮಾಡಲಾಗಿತ್ತು. ಸೇವಿಂಕ್ ಗೆ ಚಿಕಿತ್ಸೆ ನೀಡಿದ್ದ ಸಿಬ್ಬಂದಿಯನ್ನ ವಜಾ ಮಾಡಲಾಗಿತ್ತು.

    ಕಪ್ಪು ಬಣ್ಣಕ್ಕೆ ತಿರುಗಿದ ಮೊಣಕಾಲು: ದಿನದಿಂದ ದಿನಕ್ಕೆ ಸೇವಿಂಕ್ ಆರೋಗ್ಯ ಕ್ಷೀಣಿಸುತ್ತಾ ಹೋಗುತ್ತಿದ್ದರೂ ವೈದ್ಯರು ಮಾತ್ರ ಸಾಮಾನ್ಯ ಜ್ವರ ಅಂತನೇ ಹೇಳುತ್ತಿದ್ದರು. ಮುಂದೆ ಸೇವಿಂಕ್ ಮೊಣಕಾಲುಗಳು ಕಪ್ಪು ಬಣ್ಣಕ್ಕೆ ಬದಲಾಗಿದ್ದರಿಂದ ಭಯಗೊಂಡ ಆಕೆಯ ಅಣ್ಣ ಮತ್ತೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಬ್ಲಸ್ ಪಾಯಿಸಿನಿಂಗ್ ಸಮಸ್ಯೆಯಿಂದಾಗಿ ವೈದ್ಯರು ಸೇವಿಂಕ್ ಎರಡು ಕಾಲುಗಳನ್ನ ಕತ್ತರಿಸಿದ್ದಾರೆ. ಆಕೆಯನ್ನ ಉಳಿಸಿಕೊಳ್ಳಲು ಬೇರೆ ಯಾವ ಮಾರ್ಗವೂ ಇರಲಿಲ್ಲ. ಹಾಗಾಗಿ ಆಕೆಯ ಕಾಲು ಕತ್ತರಿಸಲು ಅನುಮತಿ ನೀಡಲಾಯ್ತು ಎಂದು ಸೇವಿಂಕ್ ಸೋದರ ಹೇಳಿದ್ದಾನೆ.

    ಇದೀಗ ಸೇವಿಂಕ್ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದ ಆಸ್ಪತ್ರೆ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಿ ಒಂದು ಕೋಟಿ ರೂಪಾಯಿ ಪರಿಹಾರ ಕೇಳಿದ್ದಾಳೆ. ಆದ್ರೆ ಆಸ್ಪತ್ರೆ ಸಿಬ್ಬಂದಿ ತಾವು ನಡೆಸಿದ ಶಸ್ತ್ರಚಿಕಿತ್ಸೆಗೂ ಮತ್ತು ಬ್ಲಡ್ ಪಾಯಿಸಿನಿಂಗ್ ಸಮಸ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಸದ್ಯ ನ್ಯಾಯಾಲಯ ವೈದ್ಯಕೀಯ ತಜ್ಞರ ಅಭಿಪ್ರಾಯ ಕೇಳಿದೆ.

  • ಇಂಗ್ಲೆಂಡ್‍ನಿಂದ ನೇಪಾಳಕ್ಕೆ ಓಡುತ್ತಿರುವ 73 ವರ್ಷದ ವೃದ್ಧೆ

    ಇಂಗ್ಲೆಂಡ್‍ನಿಂದ ನೇಪಾಳಕ್ಕೆ ಓಡುತ್ತಿರುವ 73 ವರ್ಷದ ವೃದ್ಧೆ

    – ಭೂಕಂಪ ಸಂತ್ರಸ್ತರ ಕುಟುಂಬಗಳಿಗೆ ನೆರವು ಸಂಗ್ರಹ

    ಇಸ್ತಾಂಬುಲ್: ಭೂಕಂಪ ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡಲು ಬ್ರಿಟನ್‍ನ 73 ವರ್ಷದ ರೋಸಿ ಸ್ವೆಲ್ ಪೋಪ್ ಅವರು ಇಂಗ್ಲೆಂಡ್‍ನಿಂದ ನೇಪಾಳಕ್ಕೆ ಓಡುತ್ತಿದ್ದಾರೆ.

    ‘ರನ್ ರೋಸಿ ರನ್’ ಅಭಿಯಾನದ ಅಡಿ 2018ರಲ್ಲಿ ವಿಶ್ವದಾದ್ಯಂತ ಓಡಲು ಪ್ರಾರಂಭಿಸಿದೆ. ರಾತ್ರಿ ವೇಳೆ ನಾನು ಎಲ್ಲಿ ಮಲಗುತ್ತೇನೆ ಎನ್ನುವುದು ನನಗೆ ಗೊತ್ತಿಲ್ಲ. ಕೆಲವೊಮ್ಮೆ ಹೊಲದಲ್ಲಿ, ಬೀದಿಗಳಲ್ಲಿ ಮಲಗುತ್ತೇನೆ. ಮತ್ತೆ ಬೆಳಿಗ್ಗೆ ಎದ್ದು ಓಡಲು ಪ್ರಾರಂಭಿಸಿ, ಮಾರ್ಗ ಮಧ್ಯೆ ಭೇಟಿಯಾಗುವ ಜನರನ್ನು ಮಾತನಾಡಿ ಮುಂದೆ ಸಾಗುತ್ತೇನೆ ಎಂದು ರೋಸಿ ಹೇಳಿದ್ದಾರೆ.

    ರೋಸಿ ತಮಗೆ ಬೇಕಾದ ವಸ್ತುಗಳನ್ನು ಟ್ರಾಲಿಯಲ್ಲಿ ಇಟ್ಟುಕೊಂಡಿದ್ದಾರೆ. ಅದನ್ನು ತಮ್ಮ ಸೊಂಟಕ್ಕೆ ಕಟ್ಟಿಕೊಂಡು ಓಡುತ್ತಾರೆ. ಈವರೆಗೆ ರೋಸಿ 12 ದೇಶಗಳನ್ನು ದಾಟಿದ್ದು, ಭಾನುವಾರ ಇಸ್ತಾಂಬುಲ್ ತಲುಪಿದ್ದಾರೆ. ಪ್ರತಿದಿನ ಸುಮಾರು 20 ಕಿ.ಮೀ ಓಡುವ ಅವರು, ಭೂಕಂಪ ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡುವಂತೆ ಮಾರ್ಗ ಮಧ್ಯೆ ಸಿಗುವ ಜನರಿಗೆ ಕೇಳಿಕೊಳ್ಳುತ್ತಾರೆ.

    ರೋಸಿ ತಮ್ಮ ಪ್ರಯಾಣದ ಉದ್ದಕ್ಕೂ ಸಿಗುವ ಜನರೊಂದಿಗೆ ಪರಿಚಯ ಮಾಡಿಕೊಳ್ಳುತ್ತಾರೆ. ಹೀಗಾಗಿ ಪ್ರಪಂಚದಾದ್ಯಂತ ಸಂಬಂಧಗಳನ್ನು ಬೆಳೆಸಿಕೊಂಡಿದ್ದಾರೆ. ರೋಸಿ ತಮ್ಮ ಪ್ರಯಾಣ ಹಾಗೂ ಮಾರ್ಗ ಮಧ್ಯೆ ಸಿಗುವ ವ್ಯಕ್ತಿಗಳ ಜೊತೆಗಿರುವ ವಿಡಿಯೋ, ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ರೋಸಿ ಅವರನ್ನು ವಿಶ್ವದ ಅತಿ ದೂರದ ಏಕವ್ಯಕ್ತಿ ಓಟಗಾರರಲ್ಲಿ ಒಬ್ಬರೆಂದು ಗುರುತಿಸಲಾಗಿದೆ. ಅವರು ಚಾರಿಟಿಗಾಗಿ ಹಣವನ್ನು ಸಂಗ್ರಹಿಸಲು 2004ರಲ್ಲಿ ಪ್ರಪಂಚದಾದ್ಯಂತ ಓಡಲು ಆರಂಭಿಸಿದರು. ರೋಸಿ 2015ರಲ್ಲಿ ಅಮೆರಿಕಾದಾದ್ಯಂತ ಓಡಿದ್ದಾರೆ. ರೋಸಿ ಅವರ ಪತಿ ಕ್ಲೈವ್ ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ನಿಧನರಾದರು. ಹೀಗಾಗಿ ಪತಿಯ ಗೌರವಾರ್ಥವಾಗಿ ರೋಸಿ ನ್ಯೂಯಾರ್ಕ್ ನಿಂದ ಸ್ಯಾನ್ ಫ್ರಾನ್ಸಿಸ್ಕೋ ವರೆಗೂ ಓಡಿದ್ದರು.